ಕಡಂಗ ಜೂ.11 NEWS DESK : ಕಳೆದ ಒಂದು ತಿಂಗಳಿನಿಂದ ಕೊಟ್ಟಮುಡಿ ಮತ್ತು ಹೊದವಾಡ ಗ್ರಾಮವನ್ನು ವಿದ್ಯುತ್ ಸಮಸ್ಯೆ ಕಾಡುತ್ತಿದೆ. ಸುದೀರ್ಘ ಕಾಲ ವಿದ್ಯುತ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು, ವರ್ತಕರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಚೆಸ್ಕಾಂ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಅಸಮಾಧಾನಗೊಂಡ ಗ್ರಾಮಸ್ಥರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿ ಸಮಸ್ಯೆಯನ್ನು ವಿವರಿಸಿದರು. ತಕ್ಷಣ ಸ್ಪಂದಿಸಿದ ಶಾಸಕರು ಚೆಸ್ಕಾಂ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ವಿದ್ಯುತ್ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ, ಸಮಾಜ ಸೇವಕ ಅಹಮ್ಮದ್ ಪಿ.ಯು, ಕಾಂಗ್ರೆಸ್ ಕಾರ್ಯಕರ್ತರಾದ ಜಕರಿಯ ಅಲಿ ಬಷೀರ್ ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು. (ವರದಿ : ನೌಫಲ್ ಕಡಂಗ)
ಲೇಖಕ: admin
ಮಡಿಕೇರಿ ಜೂ.11 NEWS DESK : ರಾಷ್ಟ್ರ ಮಟ್ಟದಲ್ಲಿ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ನಡೆಯುವ ‘ನೀಟ್’ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ದ ಜಿಲ್ಲಾಧ್ಯಕ್ಷ ಪಿ.ಎಂ.ಅಬ್ದುಲ್ ರಶೀದ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆಯನ್ನು ದೇಶವ್ಯಾಪಿ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಸುಮಾರು 30 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ಉನ್ನತ ವ್ಯಾಸಂಗದ ಹಂಬಲ ಹೊಂದಿದ್ದ ಹಲವು ವಿದ್ಯಾರ್ಥಿಗಳ ಕನಸು ನುಚ್ಚು ನೂರಾಗಿದೆ. ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಕೂಡ ನಡೆದಿದೆ ಎಂದು ಆರೋಪಿಸಿದರು. ‘ನೀಟ್’ ಪರೀಕ್ಷಾ ಅಕ್ರಮಗಳ ಬಗ್ಗೆ ಸೂಕ್ತ ತನಿಖೆೆಗೆ ಕೇಂದ್ರ ಮುಂದಾಗದಿದ್ದಲ್ಲಿ ವಿದ್ಯಾರ್ಥಿಗಳು ಒಗ್ಗೂಡಿ ಜಿಲ್ಲಾ ಮಟ್ಟದಲ್ಲಿ ಶೀಘ್ರದಲ್ಲೆ ಪ್ರತಿಭಟನೆ ನಡೆಸಿ, ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಿರುವುದಾಗಿ ತಿಳಿಸಿದರು. ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು…
ಸೋಮವಾರಪೇಟೆ ಜೂ.11 NEWS DESK : ರಕ್ತದಾನದಿಂದ ಮೂರು ಜೀವಗಳನ್ನು ಉಳಿಸುವುದರೊಂದಿಗೆ, ದಾನಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸೋಮವಾರಪೇಟೆ ಜೆಎಂಎಫ್‌ಸಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಗೋಪಾಲಕೃಷ್ಣ ಹೇಳಿದರು. ಜೆಸಿಐ ಸೋಮವಾರಪೇಟೆ ಪುಷ್ಪಗಿರಿ, ಕೊಡಗು ಜಿಲ್ಲಾ ರಕ್ತನಿಧಿ ಘಟಕ ಮತ್ತು ಯಡೂರು ಬಿಟಿಸಿಜಿ ಸರ್ಕಾರಿ ಪಥಮ ದರ್ಜೆ ಕಾಲೇಜಿನ ಆಶಯದಲ್ಲಿ ವಿಶ್ವರಕ್ತದಾನಿಗಳ ದಿನದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನದಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ದೇಹವು ಪುನರುಜೀವಗೊಳ್ಳುತ್ತದೆ ಮತ್ತು ಹೊಸಕೋಶಗಳನ್ನು ಉತ್ಪಾದಿಸುತ್ತದೆ. ಅದನ್ನು ತಾಜಾಗೊಳಿಸುತ್ತದೆ. ರಕ್ತದಾನ ಮಾಡುವುದಕ್ಕೆ ಅವಕಾಶ ಸಿಕ್ಕಾಗ ಆರೋಗ್ಯವಂತರು ರಕ್ತದಾನ ಮಾಡಬೇಕು ಎಂದು ಹೇಳಿದರು. ಶರೀರದಲ್ಲಿ ರಕ್ತದ ಚಲನೆಯಿಲ್ಲದೆ ಬುದಕಲು ಸಾಧ್ಯವಿಲ್ಲ. ಅಪಘಾತ, ಶಸ್ತ್ರಚಿಕಿತ್ಸೆ, ರಕ್ತಹೀನತೆ, ಸಾಂಕ್ರಾಮಿಕ ರೋಗಗಳು ತುತ್ತಾದ ಸಂದರ್ಭ ರಕ್ತದ ಅವಶ್ಯಕತೆ ಇರುತ್ತದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದಿದ್ದರೆ ಜೀವಕ್ಕೆ ಆಪಾಯವಿರುತ್ತದೆ. ರಕ್ತದಾನಿಗಳೇ ಅವರ ಜೀವವನ್ನು ಉಳಿಸಬೇಕು. ರಕ್ತದಾನದ ಬಗ್ಗೆ ಜಾಗೃತಿ ಮೂಡಬೇಕು ಎಂದು ಹೇಳಿದರು.…
ಮಡಿಕೇರಿ ಜೂ.11 NEWS DESK : ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನದ ಪೂರ್ವ ಭಾಗದ ತಡೆಗೋಡೆ ಎತ್ತರಿಸುವುದು ಹಾಗೂ ಸ್ಮಾರಕ ಭವನದ ಉತ್ತರ ಭಾಗದಲ್ಲಿ ತಡೆಗೋಡೆ ಮುಂದುವರಿದ ಕಾಮಗಾರಿ ಕೈಗೊಳ್ಳುವ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕ ಭವನದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಪಶ್ಚಿಮ ಭಾಗದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಕಟ್ಟಡ ಕಾಮಗಾರಿಯಿಂದ ತಡೆಗೋಡೆಯ ಎತ್ತರ ಕಡಿಮೆಯಾಗಿದ್ದು, ಈ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ಸೂಚಿಸಿದರು. ಹಾಗೆಯೇ ಸ್ಮಾರಕ ಭವನದ ಉತ್ತರ ಭಾಗದಲ್ಲಿ ತಡೆಗೋಡೆ ನಿರ್ಮಾಣವಾಗಿದ್ದು, ಉಳಿದ ಕಾಮಗಾರಿ ಕೈಗೊಳ್ಳಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆಯುವ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರು…
ಸುಂಟಿಕೊಪ್ಪ ಜೂ.11 NEWS DESK : ಬೆಂಗಳೂರಿನ ಚಿಕ್ಕಬಳ್ಳಾಪುರದಲ್ಲಿ ನಡೆದ ದಕ್ಷಿಣ ಏಷ್ಯ ಸೆಸ್ಟೊಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡ ಚಿನ್ನಪದಕಗಳಿಸಿದೆ. 20 ರಿಂದ 24 ವಯೋಮಾನದ ವಿಭಾಗದ ಪಂದ್ಯಾವಳಿಯಲ್ಲಿ ಕೊಡಗಿನ ಸುಂಟಿಕೊಪ್ಪದ ಇರ್ಷಾದ್ ಮುಸ್ತಫಾ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಫೈನಲ್ ಪಂದ್ಯಾವಳಿಯು ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ನಡೆದು ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ ಭಾರತದ ಮುಡಿಗೆ ಚಿನ್ನದ ಪದಕವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇರ್ಷಾದ್ ಮುಸ್ತಫಾ ಸುಂಟಿಕೊಪ್ಪ ನಿವಾಸಿ ದಿವಂಗತ ಜಾವಮನೆ ಮುಸ್ತಾಫ ಮತ್ತು ರಹಿಮತ್ ದಂಪತಿಗಳ ಪುತ್ರ.
ಮಡಿಕೇರಿ ಜೂ.11 NEWS DESK : ಕಳೆದ ಅನೇಕ ವರ್ಷಗಳಿಂದ ಲೈನ್ ಮನೆಗಳು ಮತ್ತು ಬಾಡಿಗೆ ಮನೆಗಳಲ್ಲಿ ಸಂಕಷ್ಟದ ಜೀವನ ನಡೆಸುತ್ತಿರುವ ಬಡ ಕೂಲಿ ಕಾರ್ಮಿಕ ವರ್ಗಕ್ಕೆ ಸರಕಾರ ಶೀಘ್ರ ನಿವೇಶನ ಅಥವಾ ವಸತಿ ಸೌಲಭ್ಯ ಕಲ್ಪಿಸಬೇಕು. ವನ್ಯಜೀವಿ ದಾಳಿ ತಡೆಗೆ ಶಾಶ್ವತ ಯೋಜನೆ ರೂಪಿಸಬೇಕು ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಎಐಟಿಯುಸಿ ಸಂಘಟನೆ ಒತ್ತಾಯಿಸಿದೆ. ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು ಕೃಷಿ ಕಾರ್ಮಿಕರು ಸ್ವಂತ ನಿವೇಶನ ಮತ್ತು ಮನೆ ಇಲ್ಲದೆ ಲೈನ್ ಮನೆಗಳು ಮತ್ತಿತರೆಡೆ ಬಾಡಿಗೆ ಮನೆ, ಗುಡಿಸಲುಗಳಲ್ಲಿ ಸಂಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಸ್ವಂತ ಮನೆಯನ್ನು ಒದಗಿಸಿಕೊಡಿ ಎಂದು ಕಳೆದ ಅನೇಕ ವರ್ಷಗಳಿಂದ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದರೂ ಇಲ್ಲಿಯವರೆಗೆ ಯಾವುದೇ ಸರಕಾರಗಳು ಬಡವರ ಕೂಗಿಗೆ ಸ್ಪಂದಿಸಿಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಸರಕಾರಿ ಪೈಸಾರಿ ಭೂಮಿ ಇದ್ದರೂ ಇದು ಉಳ್ಳವರ ಪಾಲಾಗುತ್ತಿದೆಯೇ ಹೊರತು ಬಡ ಕೂಲಿ ಕಾರ್ಮಿಕರಿಗೆ ಹಂಚಿಕೆ ಮಾಡುವ ಕಾಳಜಿಯನ್ನು ಜನಪ್ರತಿನಿಧಿಗಳು ತೋರುತ್ತಿಲ್ಲ ಎಂದು ಆರೋಪಿಸಿದರು.…
ಮಡಿಕೇರಿ ಜೂ.11 NEWS DESK : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ರಾಜ್ಯ ಸಮಿತಿಯಿಂದ ಆಯ್ಕೆಯಾದ ಸದಸ್ಯರಿಂದ ಮಡಿಕೇರಿಯ ಮಧುಕೃಪದಲ್ಲಿ ಔಪಚಾರಿಕ ಸಭೆ ನಡೆಯಿತು. ಸದಸ್ಯರ ಆಯ್ಕೆ ಪ್ರಕ್ರಿಯೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಅಧ್ಯಕ್ಷರಾಗಿ ಸಿ.ಎಸ್.ಸುರೇಶ್, ಗೌರವ ಅಧ್ಯಕ್ಷರಾಗಿ ಕಸ್ತೂರಿ ಗೋವಿಂದಮ್ಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಬಬ್ಬಿರ ಸರಸ್ವತಿ, ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಚಂದನ್ ನಂದರಬೆಟ್ಟು, ಮಕ್ಕಳ ಪ್ರಕಾರ ಪ್ರಮುಖರಾಗಿ ಹೇಮಂತ್ ಪಾರೇರ, ಖಜಾಂಚಿಯಾಗಿ ಸಿ.ತಮ್ಮಯ್ಯ, ಮಾಧ್ಯಮ ಪ್ರಮುಖರಾಗಿ ವಿನೋದ್ ಮುಡಗದ್ದೆ, ಜಿಲ್ಲಾ ಸಮಿತಿ ಸದಸ್ಯರಾಗಿ ಮಾಚಿಮಡ ಜಾನಕಿ ಮಾಚಯ್ಯ ಹಾಗೂ ಸುಶೀಲ ಕುಶಾಲಪ್ಪ ಆಯ್ಕೆಯಾಗಿದ್ದಾರೆ.
ವಿರಾಜಪೇಟೆ ಜೂ.11 NEWS DESK : ವಿರಾಜಪೇಟೆ ಕಾವೇರಿ ವಿದ್ಯಾ ಸಂಸ್ಥೆಯ ಗೇಣಿ ಮತ್ತು ಪಹಣಿ ಪತ್ರವನ್ನು ಶಾಸಕ ಎ.ಎಸ್.ಪೊನ್ನಣ್ಣ ಲೇಜಿನ ಪ್ರಾಂಶುಪಾಲರಿಗೆ ಹಸ್ತಾಂತರಿಸಿದರು. ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಪರವಾಗಿ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಆರ್.ಸಾಲ್ಡಾನ ಹಾಗೂ ಉಪನ್ಯಾಸಕ ವರ್ಗದವರು ಪತ್ರವನ್ನು ಸ್ವೀಕರಿಸಿದರು. ಪತ್ರವನ್ನು ಹಸ್ತಾಂತರಿಸಿ ಮಾತನಾಡಿದ ಶಾಸಕರು ಕಾವೇರಿ ವಿದ್ಯಾ ಸಂಸ್ಥೆ 40 ದಶಕಗಳಿಂದ ಉತ್ತಮ ರೀತಿಯ ವಿದ್ಯಾಭ್ಯಾಸವನ್ನು ನೀಡುತ್ತಿದ್ದು, ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುವಂತಹ ವಿದ್ಯಾರ್ಥಿಗಳನ್ನು ಸೃಷ್ಟಿ ಮಾಡುತ್ತಿದ್ದಾರೆ. ಇದೇ ರೀತಿ ಸಮಾಜಕ್ಕೆ ಅವರ ಸೇವೆ ಮುಂದುವರೆಯಲಿ ಎಂದರು. ಗೇಣಿ ಹಾಗೂ ಪಹಣಿ ಪತ್ರಿಕೆಯನ್ನು ಸ್ವೀಕರಿಸಿ ಮಾತನಾಡಿದ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಆರ್ ಸಾಲ್ಡಾನ, 1980ರಲ್ಲಿ ಪಾಂಡಂಡ ನಂಜಪ್ಪ, ಇವರು ತಮ್ಮ ಪತ್ನಿ ಪಾಂಡಂಡ ಸುಬ್ಬಮ್ಮ ನಂಜಪ್ಪನವರ ಜ್ಞಾಪಕಾರ್ಥವಾಗಿ ವಿದ್ಯಾ ಸಂಸ್ಥೆಗೆ ಮೂರು ಲಕ್ಷ ರೂಪಾಯಿ ನೀಡಿದ್ದರು. ಈ ಹಣದಿಂದ ಕೀತಿಯಂಡ ಅಪ್ಪಾಜಿಯವರ ಸ್ವಾಧೀನದಲ್ಲಿದ್ದ ಈ ಸ್ಥಳವನ್ನು ಖರೀದಿ ಮಾಡಲಾಗಿತ್ತು. ಖರೀದಿ…
ವಿರಾಜಪೇಟೆ ಜೂ.11 NEWS DESK : ಮಳೆ ಬಂದಾಗ ಕದನೂರು ರಸ್ತೆಯ ಮೋರಿಗಳು ತುಂಬಿ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಇದರಿಂದ ಪಾದಚಾರಿಗಳಿಗೆ ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಸಮಸ್ಯೆಯನ್ನು ಪರಿಹರಿಸಲು ಸೂಚನೆ ನೀಡಿದರು.
ಮಡಿಕೇರಿ ಜೂ.11 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಹಾಗೂ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ ಸಲಕರಣೆ ಕಿಟ್ಟುಗಳ ಉಚಿತವಾಗಿ ವಿತರಿಸಲು ಮತ್ತು ವಿವಿಧ ಯೋಜನಾ ಕಾರ್ಯಕ್ರಮಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಹ ಮೀನುಗಾರರಿಗೆ/ ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.29 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಸಚಿನ್ ತಿಳಿಸಿದ್ದಾರೆ.






