ಲೇಖಕ: admin

ವಿರಾಜಪೇಟೆ ಮೇ 1 NEWS DESK : ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಐಕ್ಯೂಎ ಸಿ ಘಟಕ ಮತ್ತು ಮಹಿಳಾ ಘಟಕದ ಸಹಯೋಗದಲ್ಲಿ ಕಾಲೇಜಿನಲ್ಲಿ ಪಿಸಿಓಡಿ ಮತ್ತು ಸರ್ವಿಕಲ್ ಕ್ಯಾನ್ಸರ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಕ್ರೆಡೋ ಮೆಡಿಕಲ್ ಸೆಂಟರ್ ನ ವೈದ್ಯರಾದ ಡಾ. ಮೇಜರ್ ಅಲ್ಲಂ ಪ್ರಭು ವಿದ್ಯಾರ್ಥಿನಿಯರಿಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಪ್ರಸ್ತುತ ಯುಗದಲ್ಲಿ ಆಹಾರ ಕ್ರಮಗಳು ಬದಲಾಗಿದ್ದು, ನಿಯಮಿತ ಆಹಾರ ಸೇವನೆ, ಯೋಗದಿಂದ ಮತ್ತು ಶುಚಿತ್ವದಿಂದ ಮಾತ್ರ ಆರೋಗ್ಯ ರಕ್ಷಣೆ ಸಾಧ್ಯ ಎಂದರು. ಸರ್ವಿಕಲ್ ಕ್ಯಾನ್ಸರ್ ಬಗ್ಗೆ, ಅದರ ನಿಯಂತ್ರಣ ಕ್ರಮಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಆರೋಗ್ಯವೇ ಭಾಗ್ಯ ಎಂಬ ಮಾತಿನಂತೆ ಆರೋಗ್ಯದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು. ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ನಾವು ಶುಚಿಯಾಗಿಡಬೇಕು ಎಂದು ಕಿವಿಮಾತು ಹೇಳಿದರು.…

Read More

ಮಡಿಕೇರಿ ಮೇ 1 NEWS DESK  : ಮುಂಬೈ ಯ ಸೋಮಯ್ಯ ವಿದ್ಯಾ ವಿಹಾರ್ ವಿಶ್ವವಿದ್ಯಾನಿಲಯದಲ್ಲಿ ನಡೆದ 43ನೇ ಇಂಡಿಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2024 ರಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿದ್ದಾರೆ. ಮೂಲತಃ ಕೊಡಗು ಜಿಲ್ಲೆಯವರಾದ ಮುಲ್ಲೆರ ಪೂನ್ನಮ್ಮ ಪೂವಣ್ಣ 100 ಮೀ ಮತ್ತು 200 ಮೀ ಓಟದಲ್ಲಿ ಪ್ರಥಮ, ಶೋಟ್ ಪುಟ್ ನಲ್ಲಿ ಪ್ರಥಮ, ಜಾವಲಿನ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಜಿಲ್ಲೆಯವರೇ ಆದ ಮತ್ತೋರ್ವ ಕ್ರೀಡಾಪಟು ಪಾಸುರ ಇಂದಿರಾ ಮುತ್ತಣ್ಣ ಶಾಟ್‍ಪುಟ್ ರಿಲೇ ನಲ್ಲಿ ಪ್ರಥಮ, ಜಾವಲಿನ್ ಮತ್ತು ಡಿಸ್ಕಸ್ ಥ್ರೋ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

Read More

ಮೂರ್ನಾಡು ಮೇ 1 NEWS DESK : ಮೂರ್ನಾಡು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಡಾ. ಚೌರೀರ ಜಗತ್ ತಿಮ್ಮಯ್ಯ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಸಭೆಯಲ್ಲಿ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಚೌರೀರ ಜಗತ್ ತಿಮ್ಮಯ್ಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳವರೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ನಂದೇಟ್ಟಿರ ಪಿ.ರಾಜ್ ಮಾದಪ್ಪ, ಕಾರ್ಯದರ್ಶಿಯಾಗಿ ಪೆಮ್ಮಡಿಯಂಡ ಎಂ. ವೇಣುಅಪ್ಪಣ್ಣ, ಖಜಾಂಚಿಯಾಗಿ ವಿ.ಎ.ಯತೀಶ್, ನಿರ್ದೇಶಕರುಗಳಾಗಿ ಈರಮಂಡಯು ಸೋಮಣ್ಣ, ಮುಂಡಂಡ ಕೆ. ನಂದಚೆಂಗಪ್ಪ, ಪುದಿಯೊಕ್ಕಡ ಎ. ಹರೀಶ್‍ದೇವಯ್ಯ, ಕೆರೆಮನೆ ಜಿ. ರಾಮಮೂರ್ತಿ ಮತ್ತು ಪಾಣತಲೆ ಟಿ.ಹರೀಶ್ ಆಯ್ಕೆಯಾಗಿದ್ದಾರೆ. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು    

Read More

ಸೋಮವಾರಪೇಟೆ NEWS DESK : ಸುಳ್ಳು ಮೊಕದ್ದಮೆಗಳ ಮೂಲಕ ಬಿಜೆಪಿ ಕಾರ್ಯಕರ್ತರ ಮೇಲಿನ ಕಾಂಗ್ರೆಸ್ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ, ಜಿಲ್ಲಾ ವ್ಯಾಪಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿಜೆಪಿ ಸೋಮವಾರಪೇಟೆ ಮಂಡಲದ ಪದಾಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಸೋಮವಾರಪೇಟೆಯ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಡಲ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರು ಕಾಂಗ್ರೆಸ್ ಧಮನಕಾರಿ ನೀತಿಗೆ ಮುಂದಾಗಿದೆ, ಇದಕ್ಕೆ ಬಿಜೆಪಿ ಕಾರ್ಯಕರ್ತರು ಮಣಿಯುವುದಿಲ್ಲ ಎಂದರು. ಲೋಕಸಭಾ ಚುನಾವಣೆಯ ಮತದಾನದ ದಿನದಂದು ಶನಿವಾರಸಂತೆ ಬೈಪಾಸ್ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಂಗಾಧರ್ ಹಾಗೂ ಬಿಜೆಪಿ ಬೆಂಬಲಿಗರಾದ ಪಾರ್ವತಿ ಎಂಬುವವರ ನಡುವೆ ಜಗಳ ನಡೆಯುತ್ತಿದ್ದಾಗ ವರದಿಗಾರ ಹರೀಶ್ ಕುಮಾರ್ ಅವರು ಗಲಾಟೆ ದೃಶ್ಯವನ್ನು ಸೆರೆ ಹಿಡಿಯುತ್ತಿದ್ದರು. ಈ ಸಂದರ್ಭ ಅಲ್ಲಿಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರಾದ ಅಕ್ಮಲ್ ಪಾಶ ಹಾಗೂ ಗಂಗಾಧರ್ ಕ್ಯಾಮೆರಾ ಕಸಿದುಕೊಂಡು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಹರೀಶ್ ಕುಮಾರ್ ಅವರು ನೀಡಿದ ದೂರನ್ನು ವಿಳಂಬವಾಗಿ ಸ್ವೀಕರಿಸಿ ಮೊಕದ್ದಮೆ ದಾಖಲಿಸಲಾಗಿದೆ. ಆದರೆ ಕಾಂಗ್ರೆಸ್ ಶಾಸಕರ ಒತ್ತಡದಿಂದ ಹರೀಶ್…

Read More

ಸುಂಟಿಕೊಪ್ಪ ಏ.30 NEWS DESK : ಸುಂಟಿಕೊಪ್ಪ ಸಮೀಪ 7ನೇ ಹೊಸಕೋಟೆಯಲ್ಲಿ ಸಂತ ಸಬಾಸ್ಟಿನ್ ಚರ್ಚ್ ನೂತನವಾಗಿ ನಿರ್ಮಾಣಗೊಂಡಿದೆ. ಚರ್ಚ್ ಗಳ ಬೆಳ್ತಂಗಡಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಮಾರ್ ಲಾರೆನ್ಸ್ ಮುಕ್ಕಾಜಿ ಅವರು ಮಂಗಳವಾರ ನೂತನ ಚರ್ಚ್ ಗೆ ಧಾರ್ಮಿಕ ವಿಧಿ ವಿಧಾನಗಳನ್ನು ನೇರವೇರಿಸಿ ಆಶೀರ್ವಚನ ನೀಡಿದರು. ಎಲ್ಲಾ ಧರ್ಮಗುರುಗಳ, ಕನ್ಯಾಸ್ತ್ರೀಯರ ಹಾಗೂ ಭಕ್ತರ ಸತತ ಪರಿಶ್ರಮ ಮತ್ತು ಸೇವಾ ಮನೋಭಾವದಿಂದ ಚರ್ಚ್ ಅತ್ಯಂತ ಆಕರ್ಷಕವಾಗಿ ಮೂಡಿ ಬಂದಿದೆ. ಸತತ ಪ್ರಾರ್ಥನೆ ಮತ್ತು ಆರಾಧನೆಯಿಂದ ಈ ದೇವಾಲಯವನ್ನು ಒಂದು ಶಕ್ತಿಯ ಶೃದ್ಧೆಯ ಕೇಂದ್ರವನ್ನಾಗಿ ಮಾಡಿ ಎಂದು ಕರೆ ನೀಡಿದರು. ಬೆಳ್ತಂಗಡಿ ಧರ್ಮಕ್ಷೇತ್ರದ ಅಧೀನದಲ್ಲಿ ಬರುವ ಸಿದ್ಧಾಪುರ ಕರಡಿಗೋಡುವಿನ ಸಂತ ಮೇರಿ ದೇವಾಲಯದ ನೇತೃತ್ವದಲ್ಲಿ ಸಂತ ಸಬಾಸ್ಟಿನ್ ಅವರ ರೋಮನ್ ಕ್ಯಾಥೋಲಿಕ್ ದೇವಾಲಯ 1982 ರಲ್ಲಿ ಸ್ಥಾಪನೆಗೊಂಡಿತು. ಇದೀಗ ನೂತನ ಚರ್ಚ್ ಅತ್ಯುತ್ತಮ ರೀತಿಯಲ್ಲಿ ಪುನರ್ ನಿರ್ಮಾಣಗೊಂಡಿದೆ ಎಂದು ಅವರು ಶ್ಲಾಘಿಸಿದರು. ಬೆಳ್ತಂಗಡಿ ಧರ್ಮಕ್ಷೇತ್ರದ ಜೋಸೆಫ್ ವಲಿಯಪರಂಬಿಲ್, ಸಿದ್ದಾಪುರ ಸಂತ ಮೇರಿ ಚರ್ಚಿನ ವಲಯ…

Read More

ಮಡಿಕೇರಿ ಏ.30 NEWS DESK : ಕೊಡಗು ಜಿಲ್ಲೆಯ ಅತಿ ಎತ್ತರದ ಬೆಟ್ಟ ಶ್ರೇಣಿಗಳಲ್ಲಿ ಮೂರನೇಯ ಸ್ಥಾನದಲ್ಲಿರುವ ಕೋಟೆಬೆಟ್ಟ ಪ್ರಕೃತಿ ಪ್ರಿಯರ ಅಚ್ಚುಮೆಚ್ಚಿನ ತಾಣವಾಗಿದೆ. ಬಿಸಿಲ ಬೇಗೆಗೆ ಅಂಜದೆ ಕೋಟೆಬೆಟ್ಟವನ್ನೇರಿದ ಪುಟಾಣಿ ಮಕ್ಕಳು ಪ್ರಕೃತಿಯ ಸೊಬಗನ್ನುಂಡು ಸಂಭ್ರಮಿಸಿದರು. ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಗ್ರಾಮ ವ್ಯಾಪ್ತಿಯ ಕೋಟೆಬೆಟ್ಟ ಇತಿಹಾಸ ಪ್ರಸಿದ್ಧ ಶ್ರೀಈಶ್ವರ ದೇವಾಲಯವಿರುವ ಪವಿತ್ರ ಕ್ಷೇತ್ರವಾಗಿದೆ. ಹಸಿರ ಸಾಲಿನ ಈ ಬೆಟ್ಟ ಚಾರಣಕ್ಕೂ ಹೆಸರುವಾಸಿಯಾಗಿದೆ. ಮಡಿಕೇರಿಯ ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉಚಿತ ಬೇಸಿಗೆ ಶಿಬಿರದ ಅಂಗವಾಗಿ ಕೋಟೆಬೆಟ್ಟಕ್ಕೆ ಚಾರಣವನ್ನು ಆಯೋಜಿಸಲಾಗಿತ್ತು. ಶಿಬಿರಾರ್ಥಿ ಪುಟಾಣಿಗಳು, ಪೋಷಕರು, ಶಿಕ್ಷಕರು, ಕ್ರೀಡಾಭಿಮಾನಿಗಳು ಹಾಗೂ ಆಯೋಜಕರು ಸೇರಿದಂತೆ ಸುಮಾರು 130ಕ್ಕೂ ಅಧಿಕ ಮಂದಿ ಚಾರಣದಲ್ಲಿ ಪಾಲ್ಗೊಂಡಿದ್ದರು. ಬಿಸಿಲನ್ನೂ ಲೆಕ್ಕಿಸದೆ ಮಕ್ಕಳು ಬೆಟ್ಟವನ್ನೇರಿ ಸಂಭ್ರಮಿಸಿದರು. ಕಾಡಿನಲ್ಲಿ ದೊರಕುವ ಗೊಟ್ಟೆ ಹಣ್ಣು, ಈಚಲು ಹಣ್ಣು, ರ‍್ಗುಳಿ, ಚೂರಿ ಹಣ್ಣು ಮುಂತಾದ ಹಣ್ಣುಗಳ ಸವಿಯುಂಡರಲ್ಲದೆ ವಿವಿಧ ಗಿಡ, ಮರಗಳ…

Read More

ಮಡಿಕೇರಿ ಏ.30 NEWS DESK : ಮತ್ತಿಕಾಡು ಅತ್ತೂರು ನಲ್ಲೂರು ಗ್ರಾಮದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಪುಣ್ಯಾಹ ಕಲಶ ಪೂಜೆ, ಗಣಪತಿ ಹೋಮ, ದುರ್ಗಾಹೋಮ, ಮಹಾ ಕಲಶಾಭಿಷೇಕ ಜರುಗಿತು. ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿಯ ನಂತರ ಅಪಾರ ಸಂಖ್ಯೆಯ ಭಕ್ತರಿಗೆ ಅನ್ನಸಂತರ್ಪಣೆಯಾಯಿತು. ಸಂಜೆ ಮಹಾರಂಗ ಪೂಜೆಯ ಮೂಲಕ ದೇವಾಲಯದ ವಾರ್ಷಿಕೋತ್ಸವ ಸಂಪನ್ನಗೊಂಡಿತು.

Read More

ಸೋಮವಾರಪೇಟೆ ಏ.30 NEWS DESK : ಆಕಸ್ಮಿಕವಾಗಿ ಕಾಫಿತೋಟಕ್ಕೆ ಬೆಂಕಿ ತಗುಲು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕಲ್ಕಂದೂರು ಗ್ರಾಮದಲ್ಲಿ ನಡೆದಿದೆ. ಕಲ್ಕಂದೂರು ಗ್ರಾಮದ ಧನಂಜಯ ಎಂಬುವವರ ಕಾಫಿ ತೋಟಕ್ಕೆ ಬೆಂಕಿ ತಗುಲಿದ್ದು, ಸುಮಾರು ಎರಡು ಏಕರೆ ತೋಟ ಸುಟ್ಟು ಕರಕಲಾಗಿದೆ. ಕಾಫಿ, ಮೆಣಸು ಮತ್ತು ಬಾಳೆ ಗಿಡಗಳು ಸುಟ್ಟುಹೋಗುತ್ತಿರುವುದನ್ನು ಗಮನಿಸಿದ ಪಕ್ಕದ ತೋಟದ ಕಾರ್ಮಿಕರು ತಕ್ಷಣ ಅಗ್ನಿಶಾಮಕ ಠಾಣೆಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಯಶಸ್ವಿಯಾದರು. ತೋಟದ ಮಾಲೀಕರು ನಷ್ಟವಾಗಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

Read More

ಸೋಮವಾರಪೇಟೆ ಏ.30 NEWS DESK : ಪಿಕ್‍ಅಪ್ ವಾಹನ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ, ಸ್ಕೂಟರ್ ನಜ್ಜುಗುಜ್ಜಾಗಿದ್ದು, ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಅಲೇಕಟ್ಟೆ ರಸ್ತೆಯಲ್ಲಿ ನಡೆದಿದೆ. ಕಡಬ ಸತ್ತಾರ್ ಎಂಬವರು ಚಾಲಿಸುತ್ತಿದ್ದ ಪಿಕ್‍ಅಪ್ ವಾಹನ ಬಲಭಾಗಕ್ಕೆ ತಿರುವು ತೆಗೆದುಕೊಳ್ಳುತ್ತಿದ್ದ ಸಂದರ್ಭ, ಹಿಂಬದಿಯಿಂದ ಆಗಮಿಸಿದ ಸ್ಕೂಟರ್ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನ ಚಾಲಕ ಹಾನಗಲ್ಲು ಬಾಣೆ ಗ್ರಾಮದ ದಿವಾಕರ ಎಂಬುವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

Read More

ಮಡಿಕೇರಿ ಏ.30 NEWS DESK : ಕನಸು ಕಾಣುವಾಗ ದೊಡ್ಡ ಕನಸನ್ನು ಕಾಣುವ ಮೂಲಕ ಅತ್ಯತ್ತಮ ಹುದ್ದೆಗಳನ್ನು ಅಲಂಕರಿಸುವ ಪ್ರಯತ್ನ ಮಾಡಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ಬಿ.ರಾಘವ ಅಭಿಪ್ರಾಯಪಟ್ಟರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ಪ್ಲೇಸ್ ಮೆಂಟ್ ಮತ್ತು ಸ್ಕಿಲ್ ಡೆವಲಪ್ಮೆಂಟ್ ಕೋಶಗಳ ಸಹ ಯೋಜನೆಯಲ್ಲಿ ವೆರ್ವ್ವೆ ಮ್ಯಾಂಕ್ವೆ ಏವಿಯೇಷನ್ ಅಕಾಡೆಮಿ (Vervve Manque Aviation Academy) ಯು ಆಯೋಜಿಸಿದ ಕೆರಿಯರ್ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಮಾಜದ ಪ್ರತಿಯೊಬ್ಬನ ಆರ್ಥಿಕತೆಯನ್ನು ಸದೃಢಗೊಳಿಸಲು ಉದ್ಯೋಗದ ಅಗತ್ಯವಿದೆ. ಉದ್ಯೋಗವಕಾಶದ ನೆಲೆಯನ್ನು ಪ್ರತಿಯೊಬ್ಬ ವ್ಯಕ್ತಿಯೂ ಶೋಧಿಸಬೇಕಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉದ್ಯೋಗವಕಾಶ, ಉತ್ತಮ ಜೀವನ ನಿರ್ವಹಣೆಯ ಬಗೆಗೆ ಕನಸು ಕಾಣಬೇಕಾಗಿದೆ. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವದ ಜೊತೆಯಲ್ಲಿ ಅತ್ಯುತ್ತಮ ಔದ್ಯೋಗಿಕ ಆಯಾಮದ ಕಡೆಗೆ ಚಲಿಸುವ ಅಗತ್ಯವಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವೆರ್ವ್ವೆ ಮ್ಯಾಂಕ್ವೆ ಏವಿಯೇಷನ್ ಅಕಾಡೆಮಿ (Vervve Manque Aviation Academy) ಯ ಎಕ್ಸಿಕ್ಯುಟಿವ್ ನಿರ್ದೇಶಕರಾದ…

Read More