ಲೇಖಕ: admin

ಮಡಿಕೇರಿ ಏ.30 NEWS DESK : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಭಾಗಮಂಡಲ, ಸಂಪಾಜೆ ಮತ್ತು ಮೇಕೇರಿ ಫೀಡರ್‌ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ (ಮಳೆಗಾಲದ ಪೂರ್ವ ನಿರ್ವಹಣೆ) ಕಾಮಗಾರಿ ನಡೆಸಬೇಕಾಗಿರುವುದರಿಂದ ದಿನಾಂಕ 02.05.2024 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಮೇಕೇರಿ, ತಾಳತ್ತಮನೆ, ಸಂಪಾಜೆ, ಚೆಂಬು, ಬೆಟ್ಟಗೇರಿ, ಚೇರಂಬಾಣೆ, ಭಾಗಮಂಡಲ, ಕಡಗದಾಳು, ಹಾಕತ್ತೂರು ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಏ.30 NEWS DESK : ಮೇ 1 ರಂದು ಕುಟ್ಟ ಠಾಣಾ ಸರಹದ್ದಿನ ಕುಟ್ಟ ನಾಥಂಗಾಲದಲ್ಲಿ ಶ್ರೀ ಕಾಳಿ ದೇವರ ಜಾತ್ರೆ ನಡೆಯಲಿದ್ದು, ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಏ.29 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 1 ರ ಸಂಜೆ 6 ಗಂಟೆಯವರೆಗೆ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

Read More

ಮಡಿಕೇರಿ ಏ.30 NEWS DESK : ಜಿಲ್ಲೆಯಲ್ಲಿರುವ ಎಲ್ಲಾ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ಮದುವೆ ಸಮಾರಂಭಗಳು, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಯಲ್ಲಿದ್ದು, ಬೇಸಿಗೆ ಕಾಲವಾಗಿರುವುದರಿಂದ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲಾರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಈ ಸಾಂಕ್ರಾಮಿಕ ರೋಗಗಳು ಉಲ್ಭಣಗೊಳ್ಳದಂತೆ ಅಗತ್ಯ ಕ್ರಮವಹಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಎಲ್ಲಾ ಇಲಾಖೆಗಳಿಗೆ ಸೂಚಿಸಿದ್ದಾರೆ. ಮದುವೆ ಸಮಾರಂಭಗಳು, ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್‍ಗಳಲ್ಲಿ ಸಾರ್ವಜನಿಕರಿಗೆ ಶುದ್ಧವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಮತ್ತು ಹೋಟೆಲ್‍ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು. ಸಂಬಂಧಪಟ್ಟ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಮೂಲಗಳ…

Read More

ಮಡಿಕೇರಿ ಏ.30 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಮೇ 1 ರಂದು ಬೆಳಿಗ್ಗೆ 11 ಗಂಟೆಗೆ ದುಆಃ ಮಜ್ಲಿಸ್ ನಡೆಯಲಿದೆ. ಕಾರ್ಯಕ್ರಮದ ನೇತೃತ್ವವನ್ನು ಸಯ್ಯಿದ್ ಫಝಲ್ ಕೊಯಮ್ಮ ತಂಙಳ್ (ಕೂರ ತಂಙಳ್) ವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಮತಪ್ರವಚನ ಕಾರ್ಯಕ್ರಮ ನಡೆಯಲಿದ್ದು, ನೌಫಲ್ ಸಖಾಫಿ ಕಳಸ ಮುಖ್ಯ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಯ್ಯಿದ್ ಸೈಫುದ್ದೀನ್ ಸಖಾಫಿ ಅಲ್ ಹೈದರೂಸಿ, ಹಾಫಿಳ್ ಫಝಲುರ್ರಹ್ಮಾನ್ ಸಖಾಫಿ, ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಸದಸ್ಯ ಅಬ್ದುಲ್ಲಾ ಪೊಟ್ಟಂಡ, ಕೊಪ್ಪತ್ತಾಣೆ ಮಸೀದಿ ಇಮಾಂ ಅಶ್ರಫ್ ಸಖಾಫಿ ಕನ್ನಡಿಯಂಡ, ಅಯ್ಯಂಗೇರಿ ಖತೀಬರಾದ ಯೂನುಸ್ ಮರ್ಝೂಖಿ ಸಖಾಫಿ, ಎಮ್ಮೆಮಾಡು ರೇಂಜ್ ಅಧ್ಯಕ್ಷ ಅಬ್ದುಲ್ ರಝಾಖ್ ಸಅದಿ ಪಾಲ್ಗೊಳ್ಳಲಿದ್ದಾರೆ.

Read More

ಕಡಂಗ ಏ.30 NEWS DESK : ಕಡಂಗ ಬದ್ರಿಯ ಮಸೀದಿಯಲ್ಲಿ ಮೇ 1 ರಂದು ಬದರ್ ಮೌಲಿದ್ ಮಜ್ಲಿಸ್ ವಾರ್ಷಿಕ ಹಾಗೂ ದರ್ಸ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮದ್ಯಾಹ್ನ 2 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಯ್ಯದ್ ಫಝಲ್ ಕೋಯಮ್ಮ ಕೂರತ್ ತಂಙಳ್, ಮುಖ ರಾದ ಇಬ್ರಾಹಿಂ ಫೈಝಿ ಕೇರಳ, ಅಶ್ರಫ್ ಅಹ್ಸನಿ ವಿರಾಜಪೇಟೆ, ಅಬ್ದುಲ್ ಸತ್ತಾರ್ ಅಹ್ಸನಿ ಅಲ್-ಕಾಮಿಲ್ ಸಖಾಫಿ ಮುದರ್ರಿಸ್ ಬದ್ರಿಯ ಕಡ0ಗ ಭಾಗವಹಿಸಲಿದ್ದಾರೆ  ಎಂದು ಜಮಹತ್ ಕಾರ್ಯದರ್ಶಿ ರಾಶಿದ್ ತಿಳಿಸಿದ್ದಾರೆ. ವರದಿ : ನೌಫಲ್ ಕಡಂಗ  

Read More

ಮಡಿಕೇರಿ ಏ.30 NEWS DESK : ರಾಮನಾಥಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಇಂದು ಶ್ರೀ ಸುಬ್ರಹ್ಮಣ್ಯಸ್ವಾಮಿ ಉತ್ಸವಮೂರ್ತಿ ಬೆಳ್ಳಿ ರಥೋತ್ಸವ, ಸರ್ವಸೇವಾ ಉತ್ಸವ, ವೈಮಾಳಿಗೆ ಉತ್ಸವ ವನ್ನು ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ಅಧ್ಯಕ್ಷರು ಎಂ.ಎನ್. ಕುಟುಂಬಸ್ಥರು ನೇರವೇರಿಸಿದರು. ಈ ಸಂದರ್ಭದಲ್ಲಿ ಶರಣ ದೊಡ್ಡಕಾಡನೂರು ಚಂದ್ರಶೇಖರ್, ಹೆಬ್ಬಾಲೆ ಶಿವಪ್ಪ, ಬಸವಪಟ್ಟಣ ಹೇಮಂತ್ ಕುಮಾರ್, ಆರ್.ಕೆ. ಚೇತನಕುಮಾರಸ್ವಾಮಿ, ಕಿರನಲ್ಲಿ ನಿಕೀತ್ ಮುಂತಾದವರು ಸೇವೆಯನ್ನು ಸಲ್ಲಿಸಿದರು.

Read More

ಸೋಮವಾರಪೇಟೆ ಏ.30 NEWS DESK : ಶಾಂತಳ್ಳಿ ಹೋಬಳಿಯ ನಗರಳ್ಳಿ ಗ್ರಾಮದ ಐತಿಹಾಸಿಕ ಕೂತಿನಾಡು ಸುಗ್ಗಿ ಉತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಸುಗ್ಗಿ ಉತ್ಸವದ ಕೊನೆ ದಿನವಾದ ಸೋಮವಾರ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ತೆರೆ ಬಿದ್ದಿತು. ಸುಗ್ಗಿ ಕುಣಿತ, ಸುಗ್ಗಿಹಾಡುವುದು, ಬಿಲ್ಲು ತೂಗುವುದು ಸೇರಿದಂತೆ ವಿವಿಧ ಜಾನಪದ ನೃತ್ಯಗಳು ನಡೆದವು. 18 ಗ್ರಾಮಗಳ ನವ ದಂಪತಿಗಳು ಮದುವೆ ಕಾಣಿಕೆಯನ್ನು ಸಲ್ಲಿಸಿದರು. ಹರಕೆ ತಿರಿಸುವುದು ಮತ್ತು ಹರಕೆ ಮಾಡಿಕೊಳ್ಳುವ ಕಾರ್ಯಗಳು ನಡೆದವು. ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ,…

Read More

ಮಡಿಕೇರಿ ಏ.30 NEWS DESK : ಪರಸ್ಪರ ಸೌಹಾರ್ದತೆ, ಸಹಬಾಳ್ವೆ, ಸಹನೆಯಿಂದ ನಾವೆಲ್ಲರೂ ಒಂದೇ ಎಂಬ ಮನೋಭಾವನೆ ಬೆಳೆಸಿಕೊಂಡರೆ ಸಮಾಜದ ಹಾಗೂ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಹೇಳಿದರು. ಎಮ್ಮೆಮಾಡು ಉರೂಸ್ ಪ್ರಯುಕ್ತ ನಡೆದ ಸಾರ್ವಜನಿಕ ಸಮ್ಮೇಳನದಲ್ಲಿ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ತಿಳುವಳಿಕೆಯ ಕೊರತೆಯಿಂದ ಧರ್ಮ- ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಹಿಂದೂ ಮುಸಲ್ಮಾನರ ಸೌಹಾರ್ದತೆಗೆ ಧಕ್ಕೆ ಆಗಬಾರದು.ಮುಸಲ್ಮಾನರು ಉದಾತ್ತವಾದ, ಆಧ್ಯಾತ್ಮಿಕ ಚಿಂತನೆಯಿಂದ ಬೆಳೆದು ಬಂದಿದ್ದಾರೆ. ಧರ್ಮದ ಬಗ್ಗೆಗಿನ ಅಜ್ಞಾನದಿಂದ ಸಂಘರ್ಷ ಸೃಷ್ಟಿಯಾಗುತ್ತಿದೆ. ಸಮಾಜಕ್ಕೆ ಆತಂಕ ತಂದೊಡ್ಡುವ ಕೆಲಸವನ್ನು ಯಾವ ಯುವಕರು ಮಾಡಬಾರದು ಎಂದರು. ಇಂದು ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಇದರಿಂದ ನಾಡಿಗೆ, ರಾಜ್ಯಕ್ಕೆ ತೊಂದರೆಯಾಗಲಿದೆ. ಆದ್ದರಿಂದ ನಿರಂತರ ಜಾಗೃತಿ ಕೆಲಸ ಮೂಡಿಸುವ ಕೆಲಸವನ್ನು ಮಾಡಬೇಕಿದೆ. ಮನುಷ್ಯತ್ವವನ್ನು ಕಳೆದುಕೊಳ್ಳುವಂತಾಗಬಾರದು. ಪ್ರತಿ ಗ್ರಾಮ, ರಾಜ್ಯವನ್ನು ಗಾಂಜಾ ಮುಕ್ತವನ್ನಾಗಿ ಮಾಡಲು ಎಲ್ಲರೂ ಪಣ ತೊಡಬೇಕು ಎಂದರು.…

Read More

ಮಡಿಕೇರಿ ಏ.30 NEWS DESK : ಕೊಡಗಿನ ಇತಿಹಾಸ ಪ್ರಸಿದ್ಧ ಬೇತು ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬವು ಮೇ 2 ರಿಂದ 4ರ ವರೆಗೆ ನಡೆಯಲಿದೆ. ಮೇ 2 ರಂದು ರಾತ್ರಿ 9 ಗಂಟೆಗೆ ಶ್ರೀ ದೇವರನ್ನು ಕೊಟ್ಟಿ ಹಾಡುವುದು, ಮೇ 3 ರಂದು ಬೆಳಿಗ್ಗೆ 11.30 ಗಂಟೆಗೆ ಎತ್ತು ಪೋರಾಟ, ರಾತ್ರಿ 9.30 ಗಂಟೆಗೆ ಶ್ರೀ ಶಾಸ್ತಾವು ದೇವರ  ದೀಪಾರಾಧನೆ [ ಅಂದಿ ಬೊಳಕು] ನಡೆಯಲಿದೆ. ಮೇ 4 ರಂದು ಬೆಳಿಗ್ಗೆ 9.30 ಗಟೆಗೆ ಶ್ರೀ ಕಲ್ಯಾಟ ಅಜ್ಜಪ್ಪ ದೇವರ ಕೋಲ ನಡೆಯಲಿದ್ದು, ಅಪರಾಹ್ನ 12.30 ಗಂಟೆಗೆ ಅನ್ನದಾನ ನಡೆಯಲಿದೆ. ಮಧ್ಯಾಹ್ನ1 ಗಂಟೆಗೆ ಶ್ರೀ ವಿಷ್ಣ ಮೂರ್ತಿದೇವರ ಕೋಲ ನಡೆಯಲಿದ್ದು, ನಾಡಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ತಕ್ಕ ಮುಖುಸ್ಥರು ಹಾಗೂ ಆಡಳಿತ ಮಂಡಳಿ ಕೋರಿದೆ.

Read More

ಮಡಿಕೇರಿ ಏ.30 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಮೇ 1 ರಂದು ಮಡಿಕೇರಿಯಲ್ಲಿ ಲೆದರ್‍ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿ ನಡೆಯಲಿದೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹಿರಿಯ ವಕೀಲ ಮುಕ್ಕಾಟಿರ ಟಿ.ನಾಣಯ್ಯ, ಕೊಡವ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಪಾಲ್ಗೊಳ್ಳಲಿದ್ದಾರೆ. 10 ಫ್ರಾಂಚೈಸಿಗಳನ್ನು ಒಳಗೊಂಡಂತೆ ಇದೇ ಪ್ರಥಮ ಬಾರಿಗೆ ಲೆದರ್ ಬಾಲ್ ಕ್ರೆಕೆಟ್ ಪಂದ್ಯಾವಳಿ ನಡೆಯಲಿದ್ದು, ಮೊದಲ ವರ್ಷದ ಫ್ರಾಂಚೈಸಿಗಳಾಗಿ ದಿ ಕೊಡವ ಬ್ರೈಟ್, ಕೊಡವ ವಾರಿಯರ್ಸ್, ವೈಲ್ಡ್ ಫ್ಲವರ್ ಹಾತೂರು, ಪ್ರಗತಿ ಕ್ರಿಕೆಟರ್ಸ್, ಕೂರ್ಗ್ ಬ್ಲಾಸ್ಟರ್ಸ್, ರಾಯಲ್ ಟೈಗರ್ಸ್, ಅಂಜಿಗೇರಿ ನಾಡ್, ಕೂರ್ಗ್ ಯುನೈಟೆಡ್, ಎಂ.ಟಿ.ಬಿ. ರಾಯಲ್ಸ್, ಟೀಮ್ ಲೀವರೇಜ್ ಭಾಗವಹಿಸಲಿದೆ. ನೂತನವಾಗಿ ನೋಂದಾಯಿತವಾದ ಸಂಸ್ಥೆಯಲ್ಲಿ ಪೊರ್ಕೊಂಡ ಸುನಿಲ್, ಪಾಲಚಂಡ ಜಗನ್ ಉತ್ತಪ್ಪ, ಚಂಡೀರ ರಚನ್…

Read More