ಕಡಂಗ ಜೂ.10 NEWS DESK : ಸರಕಾರಿ ಪ್ರಾಥಮಿಕ ಹಿರಿಯ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು. ಪೊದ್ದಮಾನಿ ಗ್ರಾಮಸ್ಥರಾದ ಅನ್ನಂಭೀರ ಗಿರೀಶ್ ಮತ್ತು ಕುಟುಂಬದವರು ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಇನ್ನಿತರ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭ ಶಾಲೆಯ ಅಧ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ನೌಫಲ್
ಲೇಖಕ: admin
ಸೋಮವಾರಪೇಟೆ ಜೂ.10 NEWS DESK : ಸೋಮವಾರಪೇಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿರುವ ವೈದ್ಯರ ಕೊರತೆಯನ್ನು ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿತು. ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ನೇಮಕಕ್ಕೆ ಒತ್ತಾಯಿಸಿ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮೆರವಣಿಗೆಯಲ್ಲಿ ತೆರಳಿ ತಹಶೀಲ್ದಾರ್ ನವೀನ್ ಕುಮಾರ್ ಅವರಿಗೆ ಮನವಿ ಸಲ್ಲಿಸಲು ಮುಂದಾದರು. ತಡವಾಗಿ ಹೊರಬಂದ ತಹಶೀಲ್ದಾರ್ ವಿರುದ್ಧ ಅಸಮಾಧಾನ ಹೊರಹಾಕಿದ ಪ್ರತಿಭಟನಾಕಾರರು ವೈದ್ಯರ ನೇಮಕಕ್ಕೆ ಒಂದು ವಾರದ ಗಡುವು ನೀಡಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಎಸ್.ಜಿ.ಮೆದಪ್ಪ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಹಲವು ಸಮಯಗಳಿಂದ ವೈದ್ಯರುಗಳಿಲ್ಲದೆ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ.ಇರುವ ವೈದ್ಯರು ಆಸ್ಪತ್ರೆಗೆ ಬರುವ ರೋಗಿಗಳನ್ನು ಮಡಿಕೇರಿ, ಮೈಸೂರು ಹಾಗೂ ಮಂಗಳೂರಿಗೆ ಕಳುಹಿಸುತ್ತಿದ್ದಾರೆ. ಇದರಿಂದ ಬಡ ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಇದೆಲ್ಲಾ ಅರಿವಿದ್ದರೂ ಸ್ವತಃ ವೈದ್ಯರಾಗಿರುವ ಶಾಸಕರು ನಿರ್ಲಕ್ಷ್ಯ ಭಾವನೆ ತೋರುತಿದ್ದಾರೆ ಎಂದು ಆರೋಪಿಸಿದರು. ಸುತ್ತಮುತ್ತಲೂ ಗುಡ್ಡಗಾಡು ಪ್ರದೇಶ ಆಸ್ಪತ್ರೆಗೆ ದಿನನಿತ್ಯ ನೂರಾರು ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಾರೆ…
ನಾಪೋಕ್ಲು ಜೂ.10 NEWS DESK : ಭಾರತೀಯ ಜನತಾ ಪಕ್ಷದ ಮಡಿಕೇರಿ ಗ್ರಾಮಾಂತರ ಮಂಡಲ ಓ ಬಿ ಸಿ ವತಿಯಿಂದ ನಾಪೋಕ್ಲು ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಡಿಕೇರಿ ಗ್ರಾಮಾಂತರ ಮಂಡಲ ಓ ಬಿ ಸಿ ಅಧ್ಯಕ್ಷ ಬಿ ಎಂ ಪ್ರತೀಪ ನೇತೃತ್ವದಲ್ಲಿ ಗಿಡಗಳನ್ನು ನೆಟ್ಟು ಚೋನಕೆರೆ ಸಮೀಪದ ಹಿಂದುಳಿದ ವರ್ಗದ ಕುಟುಂಬಗಳ ಜಮೀನಿನಲ್ಲಿ ವಿವಿಧ ಜಾತಿಯ ನೂರಾರು ಗಿಡಗಳನ್ನು ನೀಡಲಾಯಿತು. ಈ ಸಂದರ್ಭ ಚನಿಯ, ಸುಬ್ಬಯ್ಯ, ಸುನಿತಾ, ತಿಮ್ಮಯ್ಯ, ಕಲ್ಲೆಂಗಡ ಮೀರು ಸೇರಿದಂತೆ ಇನ್ನಿತರ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.10 NEWS DESK : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 22.62 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.23 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 425.79 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 181.65 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 33.35 ಮಿ.ಮೀ. ಕಳೆದ ವರ್ಷ ಇದೇ ದಿನ 1.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 606.56 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 268.58 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 23.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 369.75 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 122.51 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 15.91 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…
ವಿರಾಜಪೇಟೆ ಜೂ.10 NEWS DESK : ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆಯ ಅಮ್ಮತ್ತಿ ಕಾರ್ಮಾಡು ಗ್ರಾಮದಲ್ಲಿ ನಡೆದಿದೆ. ಟಿ.ಎನ್.ರವಿ (41) ಎಂಬುವವರೇ ಮೃತ ವ್ಯಕ್ತಿ. ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮಡಿಕೇರಿ ಜೂ.10 NEWS DESK : ಬಾಲ್ಯದಿಂದಲೇ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸುವುದರಿಂದ ಮಕ್ಕಳಲ್ಲಿ ಸೂಕ್ತ ಸಂಸ್ಕಾರ ಬೆಳೆಸುವಲ್ಲಿ ಶಿಕ್ಷಕ ವಗ೯ ಮತ್ತು ಪೋಷಕರು ಗಮನ ನೀಡುವಂತೆ ಚಿಕ್ಕಅಳುವಾರದಲ್ಲಿನ ಕನ್ನಡ ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ ಜಮೀರ್ ಅಹಮ್ಮದ್ ಕರೆ ನೀಡಿದ್ದಾರೆ. ನಗರದ ರೆಡ್ ಬ್ರಿಕ್ಸ್ ನ ಸತ್ಕಾರ್ ಸಬಾಂಗಣದಲ್ಲಿ ಆಯೋಜಿತ, ವಿರಾಜಪೇಟೆ ಸಂತ ಅನ್ನಮ್ಮ ಕಾಲೇಜಿನ ಉಪನ್ಯಾಸಕಿ ಪ್ರತಿಮಾ ಹರೀಶ್ ರೈ ವಿರಚಿತ ಅಂತರಗಂಗೆ ಕೃತಿ ಲೋಕಾಪ೯ಣೆ ಸಮಾರಂಭದಲ್ಲಿ ಕೃತಿಯ ಬಗ್ಗೆ ಮಾತನಾಡಿದ ಜಮೀರ್ ಅಹಮ್ಮದ್, ಸಾಮಾಜಿಕ ಹೊಣೆಗಾರಿಕೆ ಹೆಚ್ಚಿಸುವಲ್ಲಿ ಪುಸ್ತಕಗಳ ಪಾತ್ರ ಮಹತ್ವದ್ದಾಗಿದ್ದು, ಬಾಲ್ಯದಿಂದಲೇ ಮಕ್ಕಳಲ್ಲಿ ಉತ್ತಮ ಸಂಸ್ಕಾರ ರೂಪಿಸುವ ನಿಟ್ಟಿನಲ್ಲಿ ಒ ಳ್ಳೆಯ ಮಾಹಿತಿಯುಳ್ಳ ಕೃತಿಗಳು ತಮ್ಮದೇ ಕೊಡುಗೆ ನೀಡುತ್ತವೆ ಎಂದರು, ಬದುಕಿನ ನೈಜ ಸೌಂದಯ೯ ಅನುಭವಿಸುಲ್ಲಿ ಕೖತಿಗಳು ಸಹಕಾರಿ ಎಂದು ಅನಿಸಿಕೆ ವ್ಯಕ್ತಪಡಿಸಿದ ಡಾ, ಜಮೀರ್ ಅಹಮ್ಮದ್, ಪುಸ್ತಕಗಳ ಓದಿನಿಂದ ಯುವಪೀಳಿಗೆಯ ಮನದಲ್ಲಿ ಸದ್ವಿಚಾರಗಳು ಮೂಡುತ್ತವೆ ಇಂಥ ಯುವಪೀಳಿಗೆಯ ಸದ್ವಳಕೆಯಿಂದ ಸದೃಢ ಭಾರತ ನಿಮಾ೯ಣವಾಗುತ್ತದೆ ಎಂದು…
ಮಡಿಕೇರಿ ಜೂ.10 NEWS DESK : ನಿರೀಕ್ಷೆಯಂತೆ ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ವಿದ್ಯಾರ್ಥಿಗಳಿಗೆ ಆತಂಕ ಎದುರಾಗಿದೆ. ಮಡಿಕೇರಿ ತಾಲ್ಲೂಕಿನ ಅರೆಕಾಡು ಶಾಲೆಯ ಸಮೀಪ ಶನಿವಾರ ಕಾಡಾನೆಗಳು ಪ್ರತ್ಯಕ್ಷಗೊಂಡು ಅಪಾಯದ ಮುನ್ಸೂಚನೆ ಕಂಡು ಬಂದಿತ್ತು. ತಕ್ಷಣ ಎಚ್ಚೆತ್ತುಕೊಂಡ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿಗಳು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿದರು. ನಂತರ ಮುಂಜಾಗೃತಾ ಕ್ರಮವಾಗಿ ಅರಣ್ಯ ಇಲಾಖೆ ವಾಹನದಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಮನೆ ಮನೆಗಳಿಗೆ ತಲುಪಿಸಿದರು. ಸಕಾಲದಲ್ಲಿ ಕಾರ್ಯೋನ್ಮುಖರಾಗಿ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ತೋರಿದ ಅರಣ್ಯ ಇಲಾಖೆಯ ಸಿಬ್ಬಂದಿಗಳ ಕಾರ್ಯವನ್ನು ಸ್ಥಳೀಯ ಗ್ರಾಮಸ್ಥರು ಶ್ಲಾಘಿಸಿದ್ದಾರೆ.
ಮಡಿಕೇರಿ ಜೂ.10 NEWS DESK : ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಮೂವರು ವಿದ್ಯಾರ್ಥಿನಿಯರು ವಿವಿಧ ವಿಭಾಗಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ರ‍್ಯಾಂಕ್ ಗಳಿಸಿದ್ದು, ಓರ್ವ ವಿದ್ಯಾರ್ಥಿನಿ ನಗದು ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಕೊಡವ ಎಂ.ಎ ಸ್ನಾತಕೋತ್ತರ ಪದವಿಯಲ್ಲಿ ಲೇಖಕಿ ಹಾಗೂ ಕವಯಿತ್ರಿ ಹೇಮಾವತಿ ಬಿ.ಎನ್ ಅವರು ಪ್ರಥಮ ರ‍್ಯಾಂಕ್ ಪಡೆದು ಕೊಡವ ಭಾಷೆ, ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಹಿರಿಮೆ ತಂದಿದ್ದಾರೆ. ಪಿಜಿ ಡಿಪ್ಲೊಮಾ ಯೋಗ ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಶಶಿ ಕಿರಣ ವೈ.ಆರ್ ಅವರು ತಮ್ಮ 63ನೇ ವಯಸ್ಸಿನಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಎಂಎ ಅರ್ಥಶಾಸ್ತ್ರ ವಿಭಾಗದಲ್ಲಿ ವಿದ್ಯಾರ್ಥಿನಿ ಗ್ರೀಷ್ಮ ಕೆ.ಎ ಪ್ರಥಮ ರ್ಯಾಂಕ್ ಪಡೆದುಕೊಂಡಿದ್ದು, ಇವರು ಈ ಹಿಂದೆ ಪಿಯು ಕಲಾ ವಿಭಾಗದಲ್ಲಿ ಕೊಡಗು ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದರು. ::: ನಗದು ಪುರಸ್ಕಾರ ::: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಹಂತದಲ್ಲಿ ಸೂಕ್ಷ್ಮ ಜೀವವಿಜ್ಞಾನ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿನಿ ಹಿಬಾತುಲ್…
ಮಡಿಕೇರಿ ಜೂ.10 NEWS DESK : ಕಾಡಾನೆ ದಾಳಿಗೆ ಕಾರೊಂದು ಜಖಂಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ ಏಳನೇ ಹೊಸಕೋಟೆಯ ಹೆದ್ದಾರಿಯಲ್ಲಿ ನಡೆದಿದೆ. ಕಾಫಿ ತೋಟದೊಳಗಿನಿಂದ ಹೆದ್ದಾರಿಗೆ ದಿಢೀರ್ ಆಗಿ ಬಂದ ಕಾಡಾನೆ ಏಕಾಏಕಿ ಕಾರಿನ ಮೇಲೆ ದಾಳಿ ಮಾಡಿ ಕಾಲ್ಕಿತ್ತಿದೆ. ಈ ಆನೆ ಮರಳಿದಂತೆ ಮತ್ತೊಂದು ಕಾಡಾನೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿತು. ಕಾರು ಸವಾರರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದರು. ನಿರಂತರವಾಗಿ ಸುಂಟಿಕೊಪ್ಪ- ಕುಶಾಲನಗರ ಭಾಗದ ಹೆದ್ದಾರಿಯಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ವಾಹನ ಸವಾರರು ನಿತ್ಯ ಆತಂಕ ಎದುರಿಸುತ್ತಿದ್ದಾರೆ. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸುಂಟಿಕೊಪ್ಪ ಜೂ.8 NEWS DESK : ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮತ್ತಿಕಾಡುವಿನಲ್ಲಿ ನಡೆದಿದೆ. ಸುನಿತಾ (32) ಗಾಯಗೊಂಡಿರುವ ಮಹಿಳೆ. ಮತ್ತಿಕಾಡುವಿನ ತೋಟವೊಂದರಲ್ಲಿ ಎಂದಿನಂತೆ ಐವರು ಮಹಿಳೆಯರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಸುನಿತಾ ಅವರ ಕೈ ಗಾಯಗೊಂಡಿದ್ದು, ಗಾಯಾಳುವಿಗೆ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆತರಲಾಯಿತು. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಆರ್‌ಆರ್‌ಟಿ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಡಾನೆಯನ್ನು ಕಾಡಿಗೆ ಅಟ್ಟುವ ಕಾರ್ಯಚರಣೆ ನಡೆಸಿದರು.






