ಸುಂಟಿಕೊಪ್ಪ ಜೂ.8 NEWS DESK : ಕಾನ್‍ಬೈಲ್ ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಲೆಯ ಹಳೆಯ ವಿದ್ಯಾರ್ಥಿಗಳು ಉಚಿತ ನೋಟ್ ಪುಸ್ತಕ ಹಾಗೂ ಲೇಖನಿ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭ ನಾಕೂರು-ಶಿರಂಗಾಲ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಕೆ.ಪಿ.ವಸಂತ್ ಕುಮಾರ್ ಮಾತನಾಡಿ, ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಎಸ್.ಮಂಜು, ಕೆ.ಕೆ.ಉದಯಕುಮಾರ್, ಪ್ರಕಾಶ, ರವಿ ಕಳೆದ 12 ವರ್ಷಗಳಿಂದ ಶಾಲೆ ಮೇಲಿನ ಅಭಿಮಾನದಿಂದಾಗಿ ಈ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಉಚಿತ ನೋಟ್ ಪುಸ್ತಕದೊಂದಿಗೆ ಲೇಖನಿ ಸಾಮಾಗ್ರಿಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ ಎಂದರು. ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಪಡೆದು ಇಂದು ಉನ್ನತ ಹುದ್ದೆಗಳಲ್ಲಿ ತೊಡಗಿಸಿಕೊಂಡಿರುವ ಗ್ರಾಮದ ಬಡಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಆಶಾದಾಯಕ ವಿಚಾರ. ಈ ಮೂಲಕ ಇತರರಿಗೆ ಪ್ರೇರಣೆಯಾಗುತ್ತಿದ್ದಾರೆ ಎಂದರು. ಶಾಲೆಯ ಮುಖ್ಯಶಿಕ್ಷಕಿ ವಾಣಿ, ಸಹಶಿಕ್ಷಕಿ ಶಾಂತಿ, ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ಯಶೋಧ ಬಸವರಾಜು, ಗ್ರಾಮಸ್ಥರಾದ ಬಾಬು ರೈ ವಿದ್ಯಾರ್ಥಿಗಳು ಇದ್ದರು.
ಲೇಖಕ: admin
ಮಡಿಕೇರಿ ಜೂ.8 NEWS DESK : ದಕ್ಷಿಣ ಭಾರತದ ಆರು ರಾಜ್ಯಗಳನ್ನು ಒಳಗೊಂಡಂತೆ, ‘ಪ್ರವಾಸೋದ್ಯಮ’ವನ್ನು ಕೇಂದ್ರವಾಗಿರಿಸಿಕೊಂಡ ವಿವಿಧ ಉದ್ಯಮಗಳಲ್ಲಿ ಬಂಡವಾಳ ಹೂಡಿಕೆಯನ್ನು ಉತ್ತೇಜಿಸುವ ಪ್ರಮುಖ ಚಿಂತನೆಯಡಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೂ.15 ಮತ್ತು 16 ರಂದು ‘ದಕ್ಷಿಣ ಭಾರತ ಉತ್ಸವ’ ನಡೆಯಲಿದೆಯೆಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್. ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಫೆಡರೇಷನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್(ಎಫ್‍ಕೆಸಿಸಿಐ), ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಕೇರಳ ಪುದುಚೇರಿ, ತಮಿಳುನಾಡು ಮತ್ತು ಲಕ್ಷ ದ್ವೀಪಗಳಿಗೆ ಸಂಬಂಧಿಸಿದಂತೆ ದಕ್ಷಿಣ ಭಾರತ ಉತ್ಸವವನ್ನು ಆಯೋಜಿಸಲಾಗಿದೆ. ಈ ಉತ್ಸವದ ಮೂಲಕ ಕರ್ನಾಟಕಕ್ಕೆ ಸೀಮಿತವಾಗಿ 1 ಸಾವಿರ ಕೋಟಿ ಬಂಡವಾಳ ಹೂಡಿಕೆಯನ್ನು ನಿರೀಕ್ಷಿಸಲಾಗಿದೆಯೆಂದು ಮಾಹಿತಿಯನ್ನಿತ್ತರು. ದಕ್ಷಿಣ ಭಾರತ ಉತ್ಸವಕ್ಕೆ ಆರಂಭಿಕ ದಿನದಂದು ಬೆಳಗ್ಗೆ 10.30 ಗಂಟೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಪ್ರವಾಸೋದ್ಯಮ ಇಲಾಖಾ ಸಚಿವರಾದ ಹೆಚ್.ಕೆ.ಪಾಟೀಲ್…
ಮಡಿಕೇರಿ ಜೂ.8 NEWS DESK : ಮಂಗಳೂರು ವಿಶ್ವವಿದ್ಯಾನಿಲಯ, ಕೊಡಗು ವಿಶ್ವವಿದ್ಯಾನಿಲಯ ಹಾಗೂ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ 2023-24ನೇ ಸಾಲಿನ ಪ್ರತಿಭೋತ್ಸವ ಮತ್ತು ಕಾಲೇಜು ವಾರ್ಷಿಕೋತ್ಸವವು ಜೂ.11 ರಂದು ನಡೆಯಲಿದೆ. ಪೂರ್ವಾಹ್ನ 10.30 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಪಿ.ಎಲ್.ಧರ್ಮ ವಹಿಸಲಿದ್ದಾರೆ. ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರು ಗೌರವ ಉಪಸ್ಥಿತರಿರಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮೈಸೂರು ಮಹಾರಾಜ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸಿ.ಬಿ.ರಾಮಚಂದ್ರ, ಚಲನಚಿತ್ರ ನಿರ್ದೇಶಕರು ಹಾಗೂ ನಿರ್ಮಾಪಕರಾದ ಕೊಟ್ಟುಕತ್ತಿರ ಯಶೋಧ ಪ್ರಕಾಶ್, ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ.ಸೀನಪ್ಪ ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜೂ.8 NEWS DESK : ಸಿದ್ದಾಪುರದ ಕಾಫಿ ತೋಟದ ಬೃಹತ್ ಭೂಪರಿವರ್ತನೆ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಭೂಪರಿವರ್ತನೆಗಳ ವಿರುದ್ಧ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜೂ.10 ರಂದು ಬಾಳೆಲೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಬಾಳೆಲೆ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭೂಪರಿವರ್ತನೆ ವಿರುದ್ಧ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಾಫಿ ತೋಟಗಳ ಭೂಪರಿವರ್ತನೆಯಿಂದ ಕೊಡಗಿನ ಎಲ್ಲಾ ಗ್ರಾಮಗಳು ನಾಶವಾಗುತ್ತಿವೆ. ಮಣ್ಣು ಅಗೆಯುವ ಕೆಲಸದಿಂದ ಬಹುವಾರ್ಷಿಕ ಜಲಮೂಲಗಳ ನರ ಕೇಂದ್ರಗಳು ಈಗಾಗಲೇ ಮುಚ್ಚಿವೆ. ಈ ಬಗ್ಗೆ ಜಿಲ್ಲೆಯ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಇದರೊಂದಿಗೆ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಎಸ್.ಟಿ ಟ್ಯಾಗ್, ಕೊಡವರ ಆಂತರಿಕ ರಾಜಕೀಯ ಸ್ವಯಂ ನಿರ್ಣಯದ ಹಕ್ಕುಗಳನ್ನು ಮಾನ್ಯ ಮಾಡಬೇಕು ಸೇರಿದಂತೆ ಇಡೀ ಕೊಡವ ಜನಾಂಗದ ಪರವಾಗಿ ಪ್ರತಿಜ್ಞಾ ವಿಧಿ…
ಮಡಿಕೇರಿ ಜೂ.8 NEWS DESK : ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೆಸಿಐ ಸೋಮವಾರಪೇಟೆ ಪುಷ್ಪಗಿರಿ, ಕೊಡಗು ಜಿಲ್ಲಾ ರಕ್ತ ನಿಧಿ ಘಟಕ, ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಭಾಗಿತ್ವದಲ್ಲಿ ಜೂ.11 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಕಾರ್ಯಕ್ರಮವನ್ನು ಸೋಮವಾರಪೇಟೆಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ಗೋಪಾಲಕೃಷ್ಣ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ನವೀನ್ ಕುಮಾರ್, ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಧನಲಕ್ಷ್ಮಿ, ಸೋಮವಾರಪೇಟೆ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಇಂದು ಕುಮಾರ್ ಭಾಗವಹಿಸಲಿದ್ದಾರೆ ಎಂದು ಜೆಸೆಐ ಸೋಮವಾರಪೇಟೆ ಪುಷ್ಪಗಿರಿ ಘಟಕದ ಅಧ್ಯಕ್ಷ ಜೆಸಿ ವಸಂತ್ ಎಸ್. ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9448585586, 9972832956, 7337770613 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜೂ.8 NEWS DESK : ಬೆಳ್ತಂಗಡಿ ತಾಲ್ಲೂಕಿನ ಬಿಜೆಪಿ ಮುಖಂಡ ಹಾಗೂ ಎಸ್‍ಟಿ ಯುವ ಮೋರ್ಚಾದ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಅವರ ಮೇಲೆ ನಡೆದಿರುವ ಹಲ್ಲೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ ರಾಜೇಶ್ ಮೇಲೆ ಮರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ಹಲ್ಲೆಗಳು ನಡೆಯುತ್ತಿದ್ದು, ಇದಕ್ಕೆ ರಾಜ್ಯ ಸರಕಾರವೇ ನೇರ ಹೊಣೆಯಾಗಿದೆ ಎಂದು ಆರೋಪಿಸಿದ್ದಾರೆ. ರಾಜೇಶ್ ಮೇಲೆ ಹಲ್ಲೆ ಮಾಡಿದ ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕಾನೂನು ಸುವ್ಯವಸ್ಥೆಯನ್ನು ಬಿಗಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ::: ಸರಕಾರವೇ ವಜಾಗೊಳ್ಳಲಿ ::: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಕೋಟ್ಯಾಂತರ ರೂ. ಅವ್ಯವಹಾರಕ್ಕೆ ಸಂಬಂಧಿಸಿದಂತೆ…
ಮಡಿಕೇರಿ ಜೂ.8 NEWS DESK : ದೇಶದ ಹೆಮ್ಮೆಯ ಸಮರ್ಥ ನಾಯಕ ನರೇಂದ್ರ ಮೋದಿ ಅವರು ಜೂ.9 ರಂದು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿದ್ದಾಪುರ ಅಯ್ಯಪ್ಪ ದೇವಾಲಯದಲ್ಲಿ ಮತ್ತು ಶ್ರೀ ರಾಮಮಂದಿರದಲ್ಲಿ ವಿಶೇಷ ಪೂಜೆ ನಡೆಯಲಿದೆ. ಕೇಸರಿ ಯೂತ್ ಮೂವ್ ಮೆಂಟ್ ನೇತೃತ್ವದಲ್ಲಿ ಸಿದ್ಧಾಪುರದ ಶ್ರೀ ನರೇಂದ್ರಮೋದಿ ಅಭಿಮಾನಿ ಬಳಗ ಮತ್ತು ಮಹಾರಾಜ ಯದುವೀರ್ ಯುವ ಬ್ರಿಗೇಡ್ ವತಿಯಿಂದ ಪ್ರಧಾನಿಯವರ ಆರೋಗ್ಯ, ದೇಶದ ಅಭಿವೃದ್ಧಿಗೆ ಕೈಗೊಳ್ಳುವ ಕೆಲಸಕಾರ್ಯಗಳಿಗೆ, ದೇವರ ಅನುಗ್ರಹ ಇರಲಿ ಎಂದು ಪ್ರಾರ್ಥನೆಯೊಂದಿಗೆ ಸಂಜೆ 5.30 ಕ್ಕೆ ಸಿದ್ಧಾಪುರ ಅಯ್ಯಪ್ಪ ದೇವಾಲಯ ಮತ್ತು 6.30 ಕ್ಕೆ ಸಿದ್ಧಾಪುರ ಶ್ರೀರಾಮಮಂದಿರದಲ್ಲಿ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿದ್ದು, ನಂತರ ಸಿದ್ಧಾಪುರ ನಗರದಲ್ಲಿ ಪಟಾಕಿ ಸಿಡಿಸಿ ಬೃಹತ್ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಅಭಿಮಾನಿ ಬಳಗ ತಿಳಿಸಿದೆ.
ಮಡಿಕೇರಿ ಜೂ.8 NEWS DESK : ಇಂದು ರಾತ್ರಿ ದುಲ್ ಹಜ್ಜ್ ತಿಂಗಳ ಪ್ರಥಮ ಚಂದ್ರ ದರ್ಶನವಾಗಿರುವುದರಿಂದ ಜೂ.17 ರಂದು ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕೊಡಗು ಜಿಲ್ಲಾ ಸಂಯುಕ್ತ ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.8 NEWS DESK : ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಹಾಲಿ ಅಧ್ಯಕ್ಷ ಭೋಜಣ್ಣ ಸೋಮಯ್ಯ ಅವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನೀ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.7 NEWS DESK : ಕಾರು ಮತ್ತು ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಪೋಕ್ಲು-ಕೊಳಕೇರಿ ಮುಖ್ಯ ರಸ್ತೆಯ ಹಳೇ ತಾಲೂಕಿನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ನಾಪೋಕ್ಲು ಕಡೆಯಿಂದ ಹಳೇ ತಾಲೂಕು ಮಾರ್ಗವಾಗಿ ತೆರಳುತ್ತಿದ್ದ ಆಕಾಶ್ ಎಂಬುವರಿಗೆ ಸೇರಿದ ಕಾರು ಹಾಗೂ ಕೊಳಕೇರಿ ಕಡೆಯಿಂದ ನಾಪೋಕ್ಲುವಿಗೆ ಪ್ರಯಾಣಿಕರನ್ನು ಕರೆ ತರುತ್ತಿದ್ದ ಸಮದ್ ಎಂಬುವರ ಆಟೋರಿಕ್ಷಾ ನಡುವೆ ಕೊಳಕೇರಿ ಹಳೇ ತಾಲೂಕು ಮುಖ್ಯ ರಸ್ತೆಯ ನೂರಂಬಡ ಎಂಬಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಆಟೋರಿಕ್ಷಾ ರಸ್ತೆಯಲ್ಲಿ ಪಲ್ಟಿಯಾಗಿದೆ. ಆಟೋಚಾಲಕ ಹಾಗೂ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.






