ಮಡಿಕೇರಿ ಜೂ.8 NEWS DESK : ದೇಶದ ಹೆಮ್ಮೆಯ ಸಮರ್ಥ ನಾಯಕ ನರೇಂದ್ರ ಮೋದಿ ಅವರು ಜೂ.9ರಂದು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಕೊಡಗು ಜಿಲ್ಲೆಯಾದ್ಯಂತ ಸ್ವಚ್ಛತಾ ಕಾರ್ಯ ಮತ್ತು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ತಿಳಿಸಿದ್ದಾರೆ. ಭಾನುವಾರ ಸಂಜೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮೊದಲು ಜಿಲ್ಲೆಯ ನಗರ, ಗ್ರಾಮಾಂತರ ಮಂಡಲ ಸೇರಿದಂತೆ ಎಲ್ಲಾ ಮಂಡಲ ಮತ್ತು ಎಲ್ಲಾ ಶಕ್ತಿ ಕೇಂದ್ರಗಳಲ್ಲಿ, ಶಕ್ತಿ ಕೇಂದ್ರದ ಹಾಗೂ ಮಂಡಲದÀ ಪ್ರಮುಖರು, ಸಹ ಪ್ರಮುಖರು, ಚುನಾಯಿತ ಜನಪ್ರತಿನಿದಿನಗಳು, ಎಲ್ಲಾ ಮೋರ್ಚಾಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು, ಸಮಿತಿ ಸದಸ್ಯರು, ಪಕ್ಷದ ಹಿರಿಯ, ಕಿರಿಯ ಕಾರ್ಯಕರ್ತರು, ಹಿತೈಷಿಗಳು ಸ್ವಚ್ಛತಾ ಕಾರ್ಯ ಮತ್ತು ಗಿಡ ನೆಡುವ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆ ಮೂಲಕ ವಿಶ್ವಗುರು ನರೇಂದ್ರ ಮೋದಿ ಅವರಿಗೆ ಬೆಂಬಲ ಸೂಚಿಸಿ ಅಭಿನಂದನೆಯನ್ನು…
ಲೇಖಕ: admin
ಮಡಿಕೇರಿ ಜೂ.8 NEWS DESK : ಕೊಡಗು ಜಿಲ್ಲಾ ಆಮ್ ಆದ್ಮಿ ಪಾರ್ಟಿಯ ನೂತನ ಅಧ್ಯಕ್ಷರಾಗಿ ಅಪ್ಪಯ್ಯ ಎಂ.ಕೆ ಆಯ್ಕೆಯಾಗಿದ್ದಾರೆ. ಹಾಲಿ ಅಧ್ಯಕ್ಷ ಭೋಜಣ್ಣ ಸೋಮಯ್ಯ ಅವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನೀ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಪೋಕ್ಲು ಜೂ.8 NEWS DESK : ಒಂದೇ ಗಿಡದಲ್ಲಿ 30ಕ್ಕೂ ಹೆಚ್ಚು ಬ್ರಹ್ಮಕಮಲದ ಹೂವು ಏಕಕಾಲದಲ್ಲಿ ಅರಳಿ ಅಚ್ಚರಿ ಮೂಡಿಸಿದೆ. ನಾಪೋಕ್ಲು ಗ್ರಾಮ ಪಂಚಾಯಿತಿಯ ಹಳೆ ತಾಲೂಕು ನಿವಾಸಿ ಶಿವಚಳಿಯ0ಡ ಮಂದಪ್ಪ ಎಂಬವರ ಮನೆಯ ಆವರಣದಲ್ಲಿ ಗುರುವಾರ ರಾತ್ರಿ ಸುಮಾರು 30ಕ್ಕೂ ಅಧಿಕ ಬ್ರಹ್ಮಕಮಲದ ಹೂಗಳು ಅರಳಿ ಸುಗಂಧ ಬೀರಿ ಕಣ್ಣಿಗೆ ಮುದ ನೀಡಿದವು. ನಾಪೋಕ್ಲು ಪಟ್ಟಣದ ನಿವಾಸಿ ಕಾಶಿ ಸುಶೀಲ ಎಂಬವರ ಮನೆಯಂಗಳದಲ್ಲಿ ರಾತ್ರಿ ಬ್ರಹ್ಮಕಮಲದ ಹೂಗಳು ಅರಳಿದ್ದು ಕಂಪು ಬೀರಿದವು.
ಬೆಂಗಳೂರು ಜೂ.8 NEWS DESK : ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ಚೆರುಕುರಿ ರಾಮೋಜಿ ರಾವ್ ಅವರು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂಧಿಸನೆ, ಸಾವನ್ನಪ್ಪಿದ್ದಾರೆ. ರಾಮೋಜಿ ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದಿಂದಲೂ ರಕ್ತದೊತ್ತಡ ಹಾಗೂ ಉಸಿರಾಟ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಜೂ.5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರಾಮೋಜಿ ರಾವ್ ಅವರು ಈನಾಡು ಗ್ರೂಪ್ ಆಫ್ ಕಂಪನೀಸ್, ಇಖಿಗಿ ನೆಟ್‌ವರ್ಕ್, ಮಾರ್ಗದರ್ಶಿ ಚಿಟ್ ಫಂಡ್ ಮತ್ತು ರಾಮೋಜಿ ಫಿಲ್ಮ್ ಸಿಟಿ (RFC)ಗೆ ಮುಖ್ಯಸ್ಥರಾಗಿದ್ದರು. ಪತ್ರಿಕೋದ್ಯಮ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರ ಸಾಧನೆಗಳಿಗಾಗಿ 2016ರಲ್ಲಿ ಭಾರತದ ಎರಡನೇ ಅತ್ಯುನ್ನತ ಪ್ರಶಸ್ತಿ ಪದ್ಮವಿಭೂಷಣ ನೀಡಿ ಗೌರವಿಸಲಾಗಿತ್ತು. ರಾಮೋಜಿ ರಾವ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, “ಇದು ಅತ್ಯಂತ ದುಃಖಕರ. ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿ ಮಾಡಿದ್ದವರು. ಅವರ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ”…
ಮಡಿಕೇರಿ ಜೂ.8 NEWS DESK : ಕಂಡಕರೆ ಗಾಂಧಿ ಯುವಕ ಸಂಘ ಹಾಗೂ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಜೂ.9 ರಂದು ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕಂಡಕರೆಯ ಹಯಾತುಲ್ ಇಸ್ಲಾಮ್ ಮದರಸ ಮೈದಾನದಲ್ಲಿ ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಂಟಿಕೊಪ್ಪ ಜೂ.7 NEWS DESK : ಶಾಲಾ-ಕಾಲೇಜು ಮಕ್ಕಳಿಗೆ ರಸ್ತೆ ನಿಯಮಗಳ ಕುರಿತು ಅರಿವು ಮೂಡಿಸುವುದು ಅಗತ್ಯ ಎಂದು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ತಿಳಿಸಿದರು. ಸುಂಟಿಕೊಪ್ಪದಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ನಂತರ ಮಾತನಾಡಿದ ಅವರು, ಮಾದಾಪುರ ರಸ್ತೆಯ ಶಾಲಾ-ಕಾಲೇಜು ಬಿಡುವ ಸಂದರ್ಭ ಶಾಲಾ ಮಕ್ಕಳಿಗೆ ದ್ವಿಚಕ್ರ ಸವಾರರಿಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸೂಚಿಸಿದರು. ವಾಹನ ಸವಾರರು ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಪರವಾನಗಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಆಟೋ ಚಾಲಕರು ಮಿತಿಗಿಂತ ಅಧಿಕ ಸಂಖ್ಯೆಯಲ್ಲಿ ಮಕ್ಕಳನ್ನು ಕರೆದೊಯ್ಯುವುದು ಕಂಡು ಬಂದಲ್ಲ್ಲಿ ಆಟೋಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ದ್ವಿಚಕ್ರ ಸವಾರರು ತಾವು ಹೆಲ್ಮೆಟ್ ಹಾಕುವುದರೊಂದಿಗೆ ಹಿಂಬದಿ ಸವಾರರಿಗೂ ಹೆಲ್ಮೆಟ್ ಧರಿಸುವಂತೆ ಸೂಚಿಸುವುದು ಒಳಿತು. ಹಾಗೆಯೇ ಕಾರು ಚಾಲಕರು ಸೀಟು ಬೆಲ್ಟ್ ಹಾಕುವುದರೊಂದಿಗೆ ರಸ್ತೆ ನಿಯಮವನ್ನು ಪಾಲಿಸಿ ಇತರ ಚಾಲಕರಿಗೆ ಮಾದರಿಯಾಗಬೇಕು ಎಂದರು. ಈ ಸಂದರ್ಭ ಅಪರಾಧ ವಿಭಾಗದ ಎಸ್.ಐ.ನಾಗರಾಜು, ಪೊಲೀಸ್ ಸಿಬ್ಬಂದಿಗಳಾದ ಕೆ.ಆರ್.ಜಗದೀಶ್.…
ಸೋಮವಾರಪೇಟೆ ಜೂ.8 NEWS DESK : ಸೋಮವಾರಪೇಟೆ ತಾಲ್ಲೂಕು ಜಾನಪದ ಪರಿಷತ್ ಮತ್ತು ಒಕ್ಕಲಿಗರ ಯುವ ವೇದಿಕೆ ಸಹಯೋಗದಲ್ಲಿ ವಿಶ್ವ ರಕ್ತದಾನದ ದಿನಾಚರಣೆಯ ಪ್ರಯುಕ್ತ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಜೂ.10 ರಂದು ರಕ್ತದಾನ ಶಿಬಿರ ನಡೆಯಲಿದೆ ಎಂದು ಪರಿಷತ್ ತಾಲ್ಲೂಕು ಅಧ್ಯಕ್ಷ ಕೆ.ಎ.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.7 NEWS DESK : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಕಳೆದ ಏಳು ದಿನಗಳಿಂದ ನಡೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ(ಎನ್‍ಎಸ್‍ಎಸ್)ದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಓ.ಎಂ.ಪಂಕಜಾಕ್ಷನ್, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮಾತ್ರವಲ್ಲದೆ ಜೀವನದ ಸಾರವನ್ನು ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿ ಎಲ್ಲರೂ ಒಂದೇ, ನಾನು ನೀನು ಎನ್ನುವ ಭೇದಭಾವಕ್ಕೆ ಅವಕಾಶವಿಲ್ಲ. ಪರಸ್ಪರ ಸಹಕಾರಿ ಮನೋಭಾವ ರೂಪಿಸಿಕೊಳ್ಳಲು ಬಹಳ ಮುಖ್ಯವಾಗಿದೆ ಎಂದು ಹೇಳಿದರು. ಗಾಳಿಬೀಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಿರಣ್ ಮಾತನಾಡಿ, ನಮ್ಮ ಗ್ರಾಮದಲ್ಲಿ ಹೀಗೊಂದು ಶಿಬಿರ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಚಾರ. ರಾ.ಸೇ.ಯೋಜನೆಯ ವಿಚಾರಧಾರೆಗಳು ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಅಗತ್ಯ. ವಿದ್ಯಾರ್ಥಿ ದಿಸೆಯಲ್ಲೇ ಎನ್.ಎಸ್.ಎಸ್ ವಿಚಾರಗಳು ಮನದಲ್ಲಿ ಬೇರೂರಿದರೆ, ಮಾನಸಿಕ ದೃಢತೆಗೆ ಸಹಕಾರಿಯಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀಲ್ಡ್…
ಮಡಿಕೇರಿ ಜೂ.7 NEWS DESK : ಆರೋಗ್ಯಕರ ಪರಿಸರ ಮತ್ತು ಸಾಂಸ್ಕೃತಿಕ ಚಟುವಟಿಕೆ ಮಕ್ಕಳ ಮನೋವೃದ್ಧಿಗೆ ಸಹಕಾರಿಯಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಂಜುಳಾ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಶುಕ್ರವಾರ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ “ಜಿಲ್ಲಾ ಮಟ್ಟದ ಮಕ್ಕಳ ಹಬ್ಬ” ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆ, ಆಟೋಟಗಳು, ಮನರಂಜನೆ ಮತ್ತು ಉತ್ತಮ ಪರಿಸರದ ಅಗತ್ಯವಿದೆ. ಬಾಲ್ಯದಲ್ಲಿ ಗುಣಮಟ್ಟದ ಆಹಾರವನ್ನು ನೀಡಿ ಆರೋಗ್ಯವನ್ನು ವೃದ್ಧಿಸಬೇಕು. ಶಿಕ್ಷಣದೊಂದಿಗೆ ಜ್ಞಾನಾರ್ಜನೆಗೆ ಪೂರಕವಾದ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಬೇಕೆಂದು ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಶಾಲಾ ಶಿಕ್ಷಣದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಮೂಡಿಸಬೇಕು. ಆ ಮೂಲಕ…
ಮಡಿಕೇರಿ ಜೂ.7 NEWS DESK : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಅವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ‘ಯುವ ಸ್ಪಂದನ’ ಯೋಜನೆ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಯೊಂದಿಗೆ ಜೂ.19 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,…






