ಮಡಿಕೇರಿ NEWS DESK ಜೂ.19 : ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ದೇವನೆಲೆಯಾದ ಮಲ್ಮ ಬೆಟ್ಟದಲ್ಲಿ ಖಾಸಗಿ ವ್ಯಕ್ತಿಗಳು ನಡೆಸುತ್ತಿರುವ ಕಾಮಗಾರಿಯ ವಿರುದ್ಧ ಸ್ಥಳೀಯರು ನಡೆಸುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ನಾಪೋಕ್ಲು ಕೊಡವ ಸಮಾಜ ತಿಳಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಮಲ್ಮ ಬೆಟ್ಟ ವ್ಯಾಪ್ತಿಯಲ್ಲಿ ಜಾಗವನ್ನು ಖರೀದಿಸಿರುವ ಖಾಸಗಿ ವ್ಯಕ್ತಿಗಳು ಪರಿಸರಕ್ಕೆ ವಿರುದ್ಧವಾದ ಮತ್ತು ಶ್ರೀ ಇಗ್ಗುತ್ತಪ್ಪ ದೇವರ ದೇವನೆಲೆಯ ಪಾವಿತ್ರ್ಯತೆಗೆ ದಕ್ಕೆ ಬರುವಂತೆ ಯಾವುದೇ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳುವುದನ್ನು ಜೂ.19 ರಂದು ನಡೆಸಿದ ಸಮಾಜದ ಆಡಳಿತ ಮಂಡಳಿಯ ಸಭೆಯಲ್ಲಿ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ವಿಚಾರವಾಗಿ ಸಮಾಜವು ಊರಿನವರ ಹಾಗೂ ನಾಡಿನವರ ಬೆಂಬಲಕ್ಕೆ ಸದಾ ನಿಲ್ಲುತ್ತದೆ. ಅಲ್ಲದೆ ಹೋರಾಟಕ್ಕೂ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಜೂ.19 : ಶ್ರೀ ಪಾಡಿ ಇಗ್ಗುತ್ತಪ್ಪ ಕ್ಷೇತ್ರದ ಮಲ್ಮ ಕುಂದ್ (ಬೆಟ್ಟ)ನ ರಕ್ಷಣೆಗೆ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಬದ್ಧವಾಗಿದೆ. ಅಲ್ಲದೆ ಜನ ಬೆಂಬಲದೊoದಿಗೆ ಯಾವುದೇ ಹೋರಾಟಕ್ಕೂ ಸಿದ್ಧವಾಗಿದೆ ಎಂದು ಟ್ರಸ್ಟ್ ನ ಸಂಚಾಲಕ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ. ಮಲ್ಮ ಕುಂದ್ ನಲ್ಲಿ ನಡೆಯುತ್ತಿರುವ ಕಾಮಗಾರಿಗೆ ಪತ್ರಿಕಾ ಪ್ರಕಟಣೆಯ ಮೂಲಕ ತೀವ್ರ ವಿರೋಧ ವ್ಯಕ್ತಪಡಿಸಿರುವ ಅವರು ಶ್ರೀ ಪಾಡಿ ಇಗ್ಗುತ್ತಪ್ಪ ಕ್ಷೇತ್ರಕ್ಕೆ ಧಕ್ಕೆ ಬಂದರೆ ಇಡೀ ಕೊಡವ ಹಾಗೂ ಕೊಡವ ಭಾಷಿಕ ಜನಾಂಗಕ್ಕೆ ಧಕ್ಕೆ ಬಂದ ಹಾಗೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೊರ ಜಿಲ್ಲೆಯಿಂದ ಆಗಮಿಸಿ ಭೂಮಿಯನ್ನು ಖರೀದಿಸಿ ಶ್ರೀಪಾಡಿ ಕ್ಷೇತ್ರದ ಮಲ್ಮ ಕುಂದ್ (ಬೆಟ್ಟ) ನಲ್ಲಿ ಜಾಗವನ್ನು ಸಮತಟ್ಟು ಮಾಡಿ ಅಭಿವೃದ್ಧಿ ಪಡಿಸುತ್ತಿದ್ದಾರೆ. ಸಾರ್ವಜನಿಕವಾಗಿ ಈ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತವಾಗ್ತಿದ್ದು, ಶ್ರೀ ಪಾಡಿಗ್ಗುತ್ತಪ್ಪ ದೇವಸ್ಥಾನ ಸಮಿತಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ತೆಗೆದುಕೊಳ್ಳುವ ನಿರ್ಣಯಕ್ಕೆ ಮತ್ತು ಹೋರಾಟದ ನಿರ್ಧಾರಕ್ಕೆ ಜಬ್ಬೂಮಿ ಚಾರಿಟೇಬಲ್…
ಮಡಿಕೇರಿ NEWS DESK ಜೂ.19 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಪ್ರತಿನಿಧಿ ಸಭೆ ಮಡಿಕೇರಿಯಲ್ಲಿ ನಡೆಯಿತು. ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಪ್ರಮುಖ ನಿರ್ಣಯಗಳನ್ನು ಮಂಡಿಸಿದ ಸಭೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರಕಾರವನ್ನು ಒತ್ತಾಯಿಸಿತು. ನಗರದ ಕೂರ್ಗ್ ಕಮ್ಯುನಿಟಿ ಹಾಲ್ ನಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರ ಅಧ್ಯಕ್ಷತೆಯಲ್ಲಿ, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ ಹಾಗೂ ಜಿಲ್ಲಾ ಉಸ್ತುವಾರಿ ಅಥಾವುಲ್ಲಾ ಜೋಕಟ್ಟೆ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಮುಂದಿನ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಚುನಾವಣೆಗಳಲ್ಲಿ ಎಸ್‌ಡಿಪಿಐ ಸ್ಪರ್ಧಿಸಲು ನಿರ್ಧರಿಸಲಾಯಿತು ಮತ್ತು ಹಲವು ರಾಜಕೀಯ ಪ್ರಗತಿಯ ಕುರಿತು ಚರ್ಚಿಸಲಾಯಿತು. ಸಿ ಮತ್ತು ಡಿ ಜಮೀನುಗಳನ್ನು ಅರಣ್ಯ ಇಲಾಖೆ ಸೆಕ್ಷನ್-4ರ ಅಡಿಯಲ್ಲಿ ತಂದು ರೈತರಿಗೆ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ರಾಜ್ಯ ಸರಕಾರ ನಿಯೋಜನೆ ಮಾಡಿರುವ ಸಮಿತಿಯು ನಿಗಧಿತ ಅವಧಿಯೊಳಗೆ ವರದಿಯನ್ನು ಸರಕಾರಕ್ಕೆ ಸಲ್ಲಿಸದೆ…
ಮಡಿಕೇರಿ ಜೂ.18 NEWS DESK : ನಗರದ ಸಂತ ಜೊಸೆಫರ ಶಾಲೆಯಲ್ಲಿ ಡಿಡಿಎಂಎ ಮತ್ತು ಎನ್‍ಡಿಆರ್‍ಎಫ್ ತಂಡದಿಂದ ಶಾಲಾ ಸುರಕ್ಷತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯಕೀಯ ಪ್ರಥಮ ಪ್ರತಿಕ್ರಿಯೆ, ಅಗ್ನಿ ಸುರಕ್ಷತೆ, ಭೂಕಂಪ, ಭೂಕುಸಿತ ಮತ್ತು ಪ್ರವಾಹದಿಂದ ಜೀವ ಉಳಿಸುವ ಕೌಶಲ್ಯಗಳನ್ನು ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.
ಮಡಿಕೇರಿ ಜೂ.18 NEWS DESK : ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ (ಎನ್‍ಎಂಎಂಎಸ್) ಪರೀಕ್ಷೆಯಲ್ಲಿ ಕೊಡ್ಲಿಪೇಟೆಯ ಜಿ.ಹಂಸ ಉತ್ತೀರ್ಣಳಾಗಿ ಸಾಧನೆ ತೋರುವ ಮೂಲಕ ಕೇಂದ್ರ ಸರ್ಕಾರ ನೀಡುವ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾಳೆ. ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿಯಾದ ಜಿ.ಹಂಸಳನ್ನು ಶಾಲೆಯ ಮುಖ್ಯೋಪದ್ಯಾಯರು ಹಾಗೂ ಶಿಕ್ಷಕರು ಸ್ಮರಣಿಕೆ ನೀಡಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಅಡ್ಮನಿ ಅವರು, 8ನೇ ತರಗತಿ ವಿದ್ಯಾರ್ಥಿಗಳು ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತರಬೇಕು. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜಿ.ಹಂಸ ಕೊಡ್ಲಿಪೇಟೆಯ ನೀರುಗುಂದ ಗ್ರಾಮದ ಎನ್.ವಿ.ಗಿರೀಶ್ ಹಾಗೂ ಪುಷ್ಪಾವತಿ ದಂಪತಿಯ ಪುತ್ರಿ.
ಮಡಿಕೇರಿ ಜೂ.18 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2026-27ನೇ ಸಾಲಿಗೆ ಇಲಾಖೆಯ ಯೋಜನೆಗಳಾದ ಶುಲ್ಕ ಮರುಪಾವತಿ ಯೋಜನೆ, ವಿವಾಹ ಪ್ರೋತ್ಸಾಹ ಧನ, ಆರೈಕೆದಾರರ ಭತ್ಯೆ ಮತ್ತು ನಿರಾಮಯ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಅಫ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆಯಾ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ದಾಖಲಾತಿಗಳೊಂದಿಗೆ ಆಗಸ್ಟ್ 31 ರೊಳಗೆ ಈ ಕಚೇರಿಗೆ ಅಥವಾ ಆಯಾಯ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‍ಡಬ್ಲ್ಯು ಹಾಗೂ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ. 8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ.9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ.8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂ.ಸಂ.08272-295829ನ್ನು ಕಚೇರಿ…
ನಾಪೋಕ್ಲು ಜೂ.18 NEWS DESK : ಮೂರ್ನಾಡು ಶೌರ್ಯ ತಂಡದ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿಗಳು ಒಟ್ಟಾಗಿ ಬಲಮುರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ತಂಡದ ಸಂಯೋಜಕಿ ದಿವ್ಯ ಹಾಗೂ ಸೇವಾ ಪ್ರತಿನಿಧಿ ಕಾವೇರಿ ಅವರ ನೇತೃತ್ವದಲ್ಲಿ ಶಾಲಾ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದು, ಕಸ-ಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ಹಳೆಯ ವಿದ್ಯಾರ್ಥಿಗಳಾದ ಪ್ರಶಾಂತ್ ಮುತ್ತಣ್ಣ ಕೋಳಿಮಾಡು, ಮಂಜು, ದಯಾನಂದ ಪೊನ್ನಚ್ಚನ, ಮಮತ ಬಾಕೀಲನ ಹಾಗೂ ಶೌರ್ಯ ತಂಡದ ಸದಸ್ಯರಾದ ದಿವ್ಯ , ಪುಷ್ಪ , ನಿರ್ಮಲ , ಅರುಣ್ ಕುಮಾರ್ ಮತ್ತು ಮುಖ್ಯ ಶಿಕ್ಷಕಿ ದಮಯಂತಿ, ಶಿಕ್ಷಕಿ ಸುನಿತಾ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜೂ.18 NEWS DESK : ನಾಪೋಕ್ಲುವಿನ ಮಾರುಕಟ್ಟೆಯ ಅಂಗಡಿಯವೊಂದಕ್ಕೆ ನುಗ್ಗಿದ ಕಾಡು ಕುರಿಯನ್ನು ಅರಣ್ಯ ಇಲಾಖೆಯಿಂದ ರಕ್ಷಣೆ ಮಾಡಿದ್ದಾರೆ. ಕಾಡು ಕುರಿ ಒಂದು ಬೀದಿ ನಾಯಿಗಳಿಂದ ತಪ್ಪಿಸಿಕೊಂಡು ಮಾರುಕಟ್ಟೆಯ ಅಂಗಡಿಗೆ ನುಗ್ಗಿದೆ ಈ ಸಂದರ್ಭ ಸುಲೇಮಾನ್ ಎಂಬವರು ಕಾಡು ಕುರಿಯನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ನಂತರ ಠಾಣಾಧಿಕಾರಿ ರಾಘವೇಂದ್ರ ಅವರಿಂದ ಸುಮಾರು ಎರಡು ವರ್ಷ ಪ್ರಾಯದ ಹೆಣ್ಣು ಕಾಡು ಕುರಿ ಯನ್ನು ಪಡೆದುಕೊಂಡ ಉಪ ಅರಣ್ಯ ಅಧಿಕಾರಿ ಕಾಳೇಗೌಡ, ಗಸ್ತು ಅರಣ್ಯಪಾಲಕ ಶರತ್ ಕೆ.ಎ., ಅರಣ್ಯ ವೀಕ್ಷಕ ಮುತ್ತಪ್ಪ ಮತ್ತು ಹರ್ಷಿತ್ ಸುರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾಡುಕುರಿ ಯನ್ನು ಬಿಡಲಾಯಿತು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.18 NEWS DESK : ಕರ್ನಾಟಕ ವಿಧಾನಸಭೆಯಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಸದಸ್ಯರ ಆಯ್ಕೆಗಾಗಿ ನಡೆಯುತ್ತಿರುವ ಚುನಾವಣೆಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾಗವಹಿಸಿ ತಮ್ಮ ಮತವನ್ನು ಚಲಾಯಿಸಿದರು. ನಂತರ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾದದು ಎಂದು ಶಾಸಕರು ಹೇಳಿದರು.
ಮಡಿಕೇರಿ ಜೂ.18 NEWS DESK : ಸ್ಟಾಫ್ ಸೆಲೆಕ್ಷನ್ ಕಮಿಷನ್ ಭಾರತ ಸರ್ಕಾರ ಇವರು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಗ್ರೂಪ್ `ಬಿ` ನಾನ್ ಗೆಜೆಟೆಡ್ ಮತ್ತು ಗ್ರೂಪ್ `ಸಿ’ ಹುದ್ದೆಗಳನ್ನು ಭರ್ತಿ ಮಾಡಲು Combined Graduate Level Examination- 2026 ರ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 22 ಕೊನೆಯ ದಿನವಾಗಿದೆ. ವಿದ್ಯಾರ್ಹತೆ: ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ: 18 ರಿಂದ 32 ವರ್ಷಗಳು. ಅರ್ಜಿ ಸಲ್ಲಿಸಲು ಜೂನ್, 22 ಕೊನೆಯ ದಿನವಾಗಿದೆ. ಖಾಲಿ ಹುದ್ದೆಗಳು 12,256, ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ -2ಎ, 2ಬಿ, 3ಎ, 3ಬಿ, ಗೆ ಸೇರಿದ ಪುರುಷ ಅಭ್ಯರ್ಥಿಗಳಿಗೆ ರೂ.100. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿ.ಡಬ್ಯ್ಲೂ.ಡಿ, ಇ.ಎಸ್.ಎಮ್, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್: https://ssc.gov.in…






