ಲೇಖಕ: admin

ಮಡಿಕೇರಿ ಏ.27 NEWS DESK : ಮೈಸೂರು-ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ, ವಿವಿ ಪ್ಯಾಟ್‍ಗಳನ್ನ ಸೀಲ್ ಮಾಡಿ ಸ್ಟ್ರಾಂಗ್ ರೂಂಗಳಿಗೆ ರವಾನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮತಯಂತ್ರಗಳಿಗೆ ಮೂರು ಹಂತದ ಭದ್ರತೆನೀಡಲಾಗುತ್ತಿದ್ದು, ಇವಿಎಂ, ವಿವಿ ಪ್ಯಾಟ್ ಇರುವ ರೂಂ ಗಳಿಗೆ ಮೊದಲ ಹಂತದಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ತುಕಡಿ, 2ನೇ ಹಂತದಲ್ಲಿ ಕರ್ನಾಟಕ ಸಶಸ್ತ್ರ ಮೀಸಲು ಪಡೆ ಹಾಗೂ 3ನೇ ಹಂತದಲ್ಲಿ ಸ್ಥಳೀಯ ಸಿವಿಲ್ ಪೊಲೀಸ್ ಸಿಬ್ಬಂದಿ ಯನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ. ಕಟ್ಟಡದ ಎಲ್ಲಾ ಸ್ಟ್ರಾಂಗ್ ರೂಂಗಳು, ಮತ ಎಣಿಕಾ ಕೇಂದ್ರಗಳಿಗೆ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ಕಟ್ಟೆಚ್ಚರ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ…

Read More

ಮಡಿಕೇರಿ ಏ.27  NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 17ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಕೇರಳದ ಪಯ್ಯನೂರ್ ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಿತು. ಏ.26 ರಂದು ಸಂಜೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಜರುಗಿತು. ನಂತರ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಬೆಳಗ್ಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾ ಪೂಜೆ ನಡೆಯಿತು. ಮಧ್ಯಾಹ್ನ ಅನ್ನದಾನ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More

 ಏ.27 NEWS DESK : ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರ ಪರಿಹಾರ ರೂ.3455 ಕೋಟಿ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಬರ ಕುರಿತು ಪರಿಶೀಲನೆ ನಡೆಸಿ ರೂ.18,174 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಸದ್ಯ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ರೂ.3455 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಹಣ ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಬಳಿಕ ಅಲ್ಲಿ ಹಣ ಬಿಡುಗಡೆಯ ಭರವಸೆ ನೀಡಿತ್ತು. ಅದಾದ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಿದೆ.

Read More

ಮಡಿಕೇರಿ ಏ.27 NEWS DESK : ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ಅನೇಕ ಸಿಬ್ಬಂದಿ ವರ್ಗದವರು ಭಾಗವಹಿಸಿ ಕರ್ತವ್ಯ ನಿರ್ವಹಿಸುವುದು ಸಾಮಾನ್ಯ. ಆದರೆ ಕಾಲೇಜಿನ ವಿದ್ಯಾರ್ಥಿಗಳು ಪಾಠ ಜೊತೆಗೆ ಪಠ್ಯೇತರ ಚಟುವಟಿಕೆಯಾಗಿ ಚುನಾವಣಾ ಕರ್ತವ್ಯ ನಿರ್ವಹಣೆ ಮಾಡುವ ಮೂಲಕ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕ ಸ್ವಯಂ ಸೇವಕರು ವಿವಿಧ ಚುನಾವಣಾ ಬೂತ್ ಗಳಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ್ದು,  ಬೂತ್ ಗೆ ಬರುವ ಜನರನ್ನು ಕರೆದುಕೊಂಡು ಬರುವುದು, ನಡೆಯಲು ಸಾಧ್ಯವಾಗದ ಜನರಿಗೆ ವಿಲ್ ಛೇರ್ ಮೂಲಕ ಬೂತ್ ಗೆ ಬರಲು ಸಹಾಯ ಮಾಡುವುದು, ಸರದಿ ಸಾಲಿನಲ್ಲಿ ನಿಂತ ಜನರಿಗೆ ನೀರನ್ನು ನೀಡುವುದು, ಜನದಟ್ಟಣೆಯ ಕಡಿಮೆ ಮಾಡಲು ಸಾಲಿನಲ್ಲಿ ಬರುವಂತೆ ಸೂಚನೆ ನೀಡುವುದು, ಅಂಗವಿಕಲರಿಗೆ ಸಹಾಯ ಮಾಡುವುದು ಹಾಗೂ ಅಧಿಕಾರಿ ತಿಳಿಸುವ ಇತರೆ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಸೇವಾ ಕಾರ್ಯದಲ್ಲಿ ತೊಡಗಿಕೊಂಡರು. ಗೋಣಿಕೊಪ್ಪಲು ಮತ್ತು ಸುತ್ತಮುತ್ತಲಿನ ಚುನಾವಣಾ ಬೂತ್ ಗಳಲ್ಲಿ ಸ್ವಯಂ ಸೇವಕರಾಗಿ ಸೇವೆ…

Read More

ಮಡಿಕೇರಿ ಏ.27 NEWS DESK : ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು, ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 3 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರು ಉತ್ತರ ಕನ್ನಡದ ಹೊನ್ನಾವರದ ಬಿ.ಎಸ್.ಜಗದೀಶ್ ರಾವ್ ಮತ್ತು ವಿನುತಾ ಭಟ್ ದಂಪತಿಗಳ ಪುತ್ರಿ. ವಾಣಿಜ್ಯ ವಿಭಾಗದ ಭಕ್ತಿ ಕಾಮತ್ 594 ಅಂಕಗಳೊಂದಿಗೆ ರಾಜ್ಯಕ್ಕೆ ಐದನೇ ರ‍್ಯಾಂಕ್, ವಿಜ್ಞಾನ ವಿಭಾಗದ ಎಸ್.ಟಿ.ಸಾಗರ್  591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್ ಹಾಗೆಯೇ ವಾಣಿಜ್ಯ ವಿಭಾಗದ ವಿನಯ್ ಪ್ರಶಾಂತ್ 589 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 10ನೇ ರ‍್ಯಾಂಕ್ ಗಳಿಸಿರುತ್ತಾರೆ. ಕ್ರಿಯೇಟಿವ್ ಶಿಕ್ಷಣ…

Read More

ಕುಶಾಲನಗರ ಏ.27 NEWS DESK : ಮುಕ್ತ ಮನಸು, ಮಹತ್ವಾಕಾಂಕ್ಷೆ, ನಮ್ರತೆ ಮತ್ತು ಸಾಮಿಪ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡು, ದೇಶದ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು, ಸ್ಥಳೀಯ ಕಲಾ ಪ್ರಕಾರಗಳನ್ನು ಅನ್ವೇಷಿಸಲು ಸೈನಿಕ ಶಾಲಾ ಸೊಸೈಟಿ ತಪಾಸಣಾ ಅಧಿಕಾರಿ ಕಮಡೋರ್ ರಾಜೇಶ್ ಕೆ.ಶರ್ಮಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನವದೆಹಲಿಯಿಂದ ಕೊಡಗು ಸೈನಿಕ ಶಾಲೆಗೆ ಆಗಮಿಸಿ, ಶಾಲೆಯ ಕುವೆಂಪು ವಿವಿದೊದ್ಧೇಶ ಸಭಾಂಗಣದಲ್ಲಿ ನಡೆದ 2024-25ನೇ ಸಾಲಿನ ನೂತನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಶಾಲೆಯಲ್ಲಿನ `ಯುದ್ಧ ವೀರರ ಸ್ಮಾರಕಕ್ಕೆ’ ಪುಷ್ಟಾರ್ಚನೆ ಸಲ್ಲಿಸುವುದರ ಮೂಲಕ ಯುದ್ಧ ವೀರರಿಗೆ ಗೌರವ ವಂದನೆ ಸಲ್ಲಿಸಿದರು. ನಂತರ ಸರ್ಕಾರದ ಅನುದಾನದ ಬಳಕೆ ಮತ್ತು ಶಾಲೆಯಲ್ಲಿನ ಮೂಲಭೂತ ಸೌಕರ್ಯಗಳು ಮತ್ತು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ಕ್ರೀಡಾ ಚಟುವಟಿಕೆಗಳು ಮತ್ತು ಸೌಲಭ್ಯಗಳು, ಕುದುರೆ ಸವಾರಿ ಅಖಾಡ ಮತ್ತು ಸ್ಕೇಟಿಂಗ್ ರಿಂಕ್ ಸೇರಿದಂತೆ ವಿವಿಧ ಶೈಕ್ಷಣಿಕ ಮತ್ತು ತರಬೇತಿ ಚಟುವಟಿಕೆಗಳನ್ನು ಪರಿಶೀಲಿಸಿದರು. ಎನ್.ಡಿ.ಎ ಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಯು.ಪಿ.ಎಸ್.ಸಿ -…

Read More

ಮಡಿಕೇರಿ ಏ.26 NEWS DESK  : ಮಡಿಕೇರಿ ನಗರದ ವಿದ್ಯಾ ನಗರ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಶಕ್ತಿ ಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನಡೆಯಿತು. ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ, ವಾಚನ ಪ್ರಸಾದ ಸಂಗ್ರಹ ಸ್ಥಳ ಶುದ್ಧಿ ಸುದರ್ಶನ ಹೋಮ, ವಾಸ್ತು ಬಲಿ, ಪ್ರಸಾದ ಬಲಿ, ಪೂಜಾ ಪ್ರಸಾದ ವಿತರಣೆ, ಗಣಪತಿ ಹೋಮ, ಪ್ರಾಯಶ್ಚಿತ ಹೋಮ, ಹೋಮ ಕಲಶಾಭಿಷೇಕ, ಅನುಜ್ಞಾ ಕಲಶ ಪೂಜೆ, ಬಿಂಬಶುದ್ಧಿ, ಕಲಶಪೂಜೆ-ಕಲಶಾಭಿಷೇಕ, ಶಯ್ಯಪೂಜೆ, ಬಿಂಬ ಶಯ್ಯಾಗಮನ ಪೂಜೆ, ಕಳಶ ಮಂಡಲ ರಚನೆ ವಿಧಿ ವಿಧಾನಗಳು ಎರಡು ದಿನಗಳ ಕಾಲ ಜರುಗಿತು. ಮೂರನೇಯ ದಿನವಾದ ಏ.26 ರಂದು ನೂತನ ದೇವಾಲಯದಲ್ಲಿ ಶ್ರೀ ಶಕ್ತಿ ಗಣಪತಿ ದೇವರ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ ಪೇರಾಜೆ ಅವರ ನೇತೃತ್ವದಲ್ಲಿ ಸಂಪನ್ನಗೊAಡಿತು. ಬೆಳಗ್ಗೆ ಗಣಪತಿ ಹೋಮ, ಬ್ರಹ್ಮ ಕಳಶ ಪೂಜೆ, ಮಿಥುನ ಲಗ್ನದಲ್ಲಿ ಪ್ರತಿಷ್ಠೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಾರ್ಥನೆ,…

Read More

ಮಡಿಕೇರಿ ಏ.26 NEWS DESK : ಸ್ನಾನಕ್ಕೆಂದು ನದಿಗಿಳಿದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಾಲ್ನೂರಿನಲ್ಲಿ ನಡೆದಿದೆ. ಸುಂಟಿಕೊಪ್ಪ ಮತ್ತಿಕಾಡು ಯುವಕ ನಿಶಾಂತ್ (24) ಮೃತ ದುರ್ದೈವಿ. ಸ್ನೇಹಿತರೊಂದಿಗೆ ಸ್ನಾನಕ್ಕೆಂದು ನದಿಗಿಳಿದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತದೇಹದ ಶೋಧ ಕಾರ್ಯ ಸಂಜೆಯವರೆಗೆ ಮುಂದುವರೆದಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಏ.26 NEWS DESK  : ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೊಡಗು ಜಿಲ್ಲೆಯಲ್ಲಿ ಮತದಾನ ಪ್ರಕ್ರಿಯೆ ಶಾಂತಿ ಹಾಗೂ ಸುವ್ಯವಸ್ಥಿತವಾಗಿ ನಡೆದಿದ್ದು, ಸಂಜೆ 5ರ ವೇಳೆಗೆ ಅಂದಾಜು ಶೇ.74.29ರಷ್ಟು ಮತದಾನವಾಗಿದೆ. ಸುಮಾರು 349743 ಮಂದಿ ಮತದಾನ ಮಾಡಿದ್ದಾರೆ. ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಶಾಂತಿಯುತ ಹಾಗೂ ಸುಗಮವಾಗಿ ಆರಂಭವಾಗುತ್ತಿದ್ದಂತೆ, ಮಹಿಳೆಯರು, ಪುರುಷರು, ಹಿರಿಯ ನಾಗರಿಕರು, ವಿಶೇಷ ಚೇತನರು ಹಾಗೂ ಇದೇ ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ಉತ್ಸಾಹದಿಂದ ಬೆಳಗಿನ ತಂಪಾದ ವಾತಾವರಣದಲ್ಲಿ ಮತಗಟ್ಟೆಗೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದು ವಿಶೇಷ ಎನ್ನಿಸಿತು. ಮತಗಟ್ಟೆಯಲ್ಲಿ ಬಿಸಿಲಿನಿಂದ ರಕ್ಷಣೆಗಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿದ್ದು, ಬಿರು ಬಿಸಿಲಿನಿಂದ ರಕ್ಷಣೆಗಾಗಿ ಶಾಮಿಯಾನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ವ್ಹೀಲ್ ಚೇರ್ ಹಾಗೂ ರ್ಯಾಂಪ್ ಸೌಲಭ್ಯ ಕಲ್ಪಿಸಲಾಗಿತ್ತು. ಮತಗಟ್ಟೆ ಕೇಂದ್ರಗಳಲ್ಲಿ ಮೊಬೈಲ್…

Read More

ಮಡಿಕೇರಿ ಏ.26 NEWS DESK : ಮತದಾನ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ಪೊನ್ನಂಪೇಟೆ ತಾಲ್ಲೂಕಿನ ಕೊಂಗಣ ಗ್ರಾಮದ ಪದಾರ್ಥಿ ಮನೋಹರ್(58) ಎಂಬುವವರೇ ಮೃತಪಟ್ಟವರು. ಜಿಲ್ಲೆಯ ಖ್ಯಾತ ಚೆಂಡೆ ವಾದಕರಲ್ಲಿ ಒಬ್ಬರಾಗಿದ್ದ ಮನೋಹರ್, ಮಧ್ಯಾಹ್ನ 11.45ರ ವೇಳೆಗೆ ಬಿ.ಶೆಟ್ಟಿಗೇರಿ ಗ್ರಾಮದ ಮತಗಟ್ಟೆ ಸಂಖ್ಯೆ 179ರಲ್ಲಿ ಮತ ಚಲಾಯಿಸಿ ಹೊರ ಬಂದಿದರು. 11.55ರ ಸುಮಾರಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ವಾಹನದಲ್ಲಿ ಗೋಣಿಕೊಪ್ಪದ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

Read More