ವಿರಾಜಪೇಟೆ ಜೂ.6 NEWS DESK : ದೇವಣಗೇರಿ ಬಿ.ಸಿ.ಪ್ರೌಢಶಾಲೆಯ ಸಸ್ಯಕಾಶಿ ಇಕೋಕ್ಲಬ್ ವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ವಿವಿಧ ಸಸಿಗಳನ್ನು ನೆಟ್ಟರು. ನಂತರ ಜಾಗೃತಿ ಜಾಥಾ ಮೂಲಕ ಪರಿಸರ ಸಂರಕ್ಷಣೆಗೆ ಕರೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯೋಪದ್ಯಾಯರಾದ ಲೋಕೇಶ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಲೇಖಕ: admin
ಮಡಿಕೇರಿ ಜೂ.6 NEWS DESK : ಸುಭದ್ರ ದೇಶಕ್ಕಾಗಿ ಕೊಡಗಿನ ಸ್ವಾಭಿಮಾನಿ ಮತದಾರರು ಕಾಂಗ್ರೆಸ್ ನ ಬಿಟ್ಟಿಭಾಗ್ಯಗಳನ್ನು ತಿರಸ್ಕರಿಸಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರನ್ನು ಗೆಲ್ಲಿಸಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆ ಎಂದೆಂದಿಗೂ ಬಿಜೆಪಿಯ ಭದ್ರಕೋಟೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಯದುವೀರ್ ಅವರಿಗೆ 73 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆಯನ್ನು ನೀಡಿದ್ದಾರೆ. ಸ್ವಾಭಿಮಾನಿ ಮತದಾರರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಜನರ ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸದೆ ಜನರಿಗೆ ಬೇಡವಾದ ಬಿಟ್ಟಿಭಾಗ್ಯಗಳಿಗೆ ಮೀಸಲಿಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮತದಾರರು ಸರಿಯಾದ ಪಾಠವನ್ನೇ ಕಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೀನಾಯವಾಗಿ ಸೋಲು ಕಂಡಿದ್ದಾರೆ. ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರುಗಳು ಮತ ಗಳಿಸಿಕೊಡುವಲ್ಲಿ ವಿಫಲರಾಗಿದ್ದಾರೆ. ಇಂಡಿಯಾ…
ಕಡಂಗ ಜೂ.6 NEWS DESK : ರಾತ್ರಿ ಸುರಿದ ಮಳೆಯಿಂದಾಗಿ ವಿರಾಜಪೇಟೆ ಮುಖ್ಯರಸ್ತೆಯಲ್ಲಿರುವ ಕಲ್ಲುಮೊಟ್ಟೆಯಲ್ಲಿ ಬೃಹತ್ ಮರ ಹಾಗೂ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರ ಸ್ಥಗಿತಗೊಂಡಿದ್ದು, ಜೌಕಿ ,ಕಾಕೋಟುಪರಂಬು ಮಾರ್ಗವಾಗಿ ವಾಹನಗಳ ಸಂಚರಿಸಿದವು. ಇಂದು ಗ್ರಾಮಸ್ಥರ ಸಹಕಾರದೊಂದಿಗೆ ವಾಹನಗಳ ಸಂಚಾರಕ್ಕೆ ಅನುವುಮಾಡಿ ಕೊಡಲಾಯಿತು. ವರದಿ : ನೌಫಲ್ ಕಡಂಗ
ವಿರಾಜಪೇಟೆ ಜೂ.6 NEWS DESK : ವಿರಾಜಪೇಟೆ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಆಸ್ಪತ್ರೆಯ ಆವರಣದಲ್ಲಿ ಅರಣ್ಯ ಇಲಾಖೆಯಿಂದ ವಿವಿಧ ಗಿಡಗಳನ್ನು ನೆಡುವ ಮೂಲಕ ಸಾರ್ವಜನಿಕರಿಗೆ ಪರಿಸರದ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಿದರು. ಈ ಸಂದರ್ಭ ವಿರಾಜಪೇಟೆ ಡಿ.ಸಿ.ಎಫ್. ಜಗನಾಥ್, ಎಸಿಎಫ್ ನೆಹರು, ಪ್ರೊಬೇಷನರಿ ಎಸಿಎಫ್ ಕುಮಾರಿ ಮಹಾಲಕ್ಷ್ಮಿ, ಆರ್.ಎಫ್.ಓ ಕೆ.ಎಂ.ದೇವಯ, ಉಪ ವಲಯ ಅರಣ್ಯಾಧಿಕಾರಿ ಕೆ.ಆರ್.ಆನಂದ, ಮೋನಿಷಾ, ಸಚಿನ್ ನಿಂಬಾಳ್ಕರ್, ಜನಾರ್ಧನ, ಸಂಜಿತ್, ಗಸ್ತು ಅರಣ್ಯಾ ಪಾಲಕರಾದ ಚಂದ್ರಶೇಕರ ಅಮರಗೋಳ, ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಪ್ರಜ್ವಲ್, ಸೂಪರಿಂಟೆಂಡೆಂಟ್ ಲೀನಾ, ವಿರಾಜಪೇಟೆ ಅರಣ್ಯ ಇಲಾಖೆ ಸಿಬ್ಬಂದಿಗಳು, ಆಸ್ಪತ್ರೆ ಸಿಬ್ಬಂದಿ ವರ್ಗದವರು ಇದ್ದರು.
ವಿರಾಜಪೇಟೆ ಜೂ.6 NEWS DESK : ಕಲ್ತೋಡು ಹಾಗೂ ನಾಂಗಾಲ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ ವಲಯ ಹಾಗೂ ಬಿಟ್ಟಂಗಾಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಯೋಜನಾಧಿಕಾರಿ ದಿನೇಶ್ ಶಾಲೆಯ ಆವರಣದಲ್ಲಿ ಗಿಡನೆಟ್ಟು, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡುವಂತೆ ಸಲಹೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯನಿ ಸಾವಿತ್ರಿ, ವಲಯದ ಮೇಲ್ವಿಚಾರಕ ಶಿವಕುಮಾರ್, ಸಂಯೋಜಕರಾದ ಸಬಿತ, ಘಟಕ ಪ್ರತಿನಿಧಿ ಕ್ಯಾಪ್ಟನ್ ರೇಖಾ ಗಣೇಶ್, ಸ್ವಯಂಸೇವಕರಾದ ರಂಜನ್, ಅರುಣ್, ಗಣೇಶ್ ಗೌಡ, ಮೋಹನ್, ಅಕ್ಷತ್ ಚಂಗಪ್ಪ ಹಾಗೂ ಗ್ರಾಮಸ್ಥರಾದ ಲಿಖಿತ, ಮಂಜುನಾಥ, ಪುಟ್ಟ ಹಾಗೂ ಮಂಜು ಹಾಜರಿದ್ದರು.
ವಿರಾಜಪೇಟೆ ಜೂ.6 NEWS DESK : ಕೆದಮುಳ್ಳೂರು ಗ್ರಾಮದ ಚೋರಿಯಾಲುವಿನಲ್ಲಿರುವ ಭದ್ರಕಾಳಿ ದೇವಸ್ಥಾನದ 9ನೇ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಕೇರಳದ ಉಳಿಕಲ್‍ನಲ್ಲಿರುವ ಬೈತೂರಿನ ಕುಬೇರನ್ ನಂಬೂದಿರಿಪಾಡ್ ಅವರಿಂದ ದೇವಸ್ಥಾನದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಿತು. ಮಹಾಪೂಜೆಯ ಬಳಿಕ ನೆರೆದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಿತು.
ಮಡಿಕೇರಿ ಜೂ.6 NEWS DESK : ಸಾಹಿತ್ಯದ ಬೆಳವಣಿಗೆಗೆ ದಾನಿಗಳ ಸಹಕಾರದ ಅಗತ್ಯವಿದೆ. ಬರಹಗಾರರನ್ನು ಪ್ರೋತ್ಸಾಹಿಸಲು ದಾನಿಗಳು ಸ್ವಯಂ ಪ್ರೇರಿತರಾಗಿ ಮುಂದೆ ಬರಬೇಕು ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಲೇಖಕಿ ಅಮ್ಮಾಟಂಡ ವಿಂದ್ಯಾ ದೇವಯ್ಯ ಅವರು ಬರೆದಿರುವ ಕೊಡವ ಮಕ್ಕಡ ಕೂಟದ 92ನೇ ಪುಸ್ತಕ “ಕೊಯ್ತ ಮುತ್ತ್” ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಉತ್ಸಾಹಿ ಬರಹಗಾರರಿದ್ದಾರೆ, ಇವರುಗಳ ಪುಸ್ತಕಗಳನ್ನು ಹೊರ ತರುವ ಮೂಲಕ ಪ್ರೋತ್ಸಾಹ ನೀಡುವ ಅಗತ್ಯವಿದೆ. ಈ ಕೆಲಸವನ್ನು ಕೊಡವ ಮಕ್ಕಡ ಕೂಟ ಮಾಡಿಕೊಂಡು ಬರುತ್ತಿದ್ದು, ಕೊಡವ ಸೇರಿದಂತೆ ವಿವಿಧ ಭಾಷೆಗಳ 92 ಪುಸ್ತಕಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ತೃಪ್ತಿ ಇದೆ. ಕೂಟದ ನೂರನೇ ಪುಸ್ತಕವನ್ನು ಆ.17 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದರು. ಹಲವು ದಾಖಲೀಕರಣ ಪುಸ್ತಕ, ಸಾಧಕರ ವಿವರದ ಪುಸ್ತಕ, ಕೊಡಗಿನ ಹಾಗೂ ಕೊಡವ ಆಚಾರ, ವಿಚಾರ ಸಂಬಂಧಪಟ್ಟಂತ…
ಮಡಿಕೇರಿ ಜೂ.6 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ 42ನೇ ವಿಶ್ವ ಪರಿಸರ ದಿನಾಚರಣೆಯನ್ನು ಪ್ರೇರಣಾದಾಯಕ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಅತಿಥಿಗಳಾದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ, ಆಡಳಿತ ವ್ಯವಸ್ಥಾಪಕ ರವಿ ಉದ್ಘಾಟಿಸಿದರು. ಡಿಸಿಎಫ್ ಭಾಸ್ಕರ್ ಮಾತನಾಡಿ ಪರಿಸರವನ್ನು ರಕ್ಷಿಸುವ ಅಗತ್ಯ ಮತ್ತು ಸರಿಯಾದ ತ್ಯಾಜ್ಯ ವಿನ್ಯಾಸದ ಅಗತ್ಯತೆಯನ್ನು ತಿಳಿಸಿದರು. ಜೈವಿಕದ್ರವ್ಯ ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸಲು ಅವರು ಸೂಚಿಸಿದರು. ಈ ವರ್ಷದ ವಿಶ್ವ ಪರಿಸರ ದಿನದ ಮುಖ್ಯ ವಿಷಯ “ಭೂಮಿ ಪುನಃಸ್ಥಾಪನೆ, ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ ಆಗಿದೆ ಎಂದೂ ಅವರು ಮಾಹಿತಿ ನೀಡಿದರು’. ಎಸಿಎಫ್ ಮೊಹ್ಸಿನ್ ಭಾಷಾ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜನ್ಮದಿನದಂದು ಒಂದು ಸಸಿಯನ್ನು ನೆಡುವಂತೆ ಪ್ರೋತ್ಸಾಹಿಸಿದರು. ಹೆಚ್ಚು ಸಸಿಗಳನ್ನು ನೆಡುವ ಅಗತ್ಯವನ್ನು ಅತಿಥಿಗಳು ಪ್ರಮುಖವಾಗಿ ಉಲ್ಲೇಖಿಸಿದರು. ವಿದ್ಯಾರ್ಥಿಗಳು ಅತಿಥಿಗಳೊಂದಿಗೆ ಸೇರಿ ಶಾಲೆಯ ಸುತ್ತಮುತ್ತ ಸಸಿಗಳನ್ನು ನೆಟ್ಟರು. ನಂತರ ಎನ್‌ಸಿಸಿ ಕಡೆಟ್ ಮತ್ತು ಒಂಭತ್ತನೇ ತರಗತಿ ಮಕ್ಕಳು ರಾಜ ಗದ್ದುಗೆಯಲ್ಲಿ ಹೆಚ್ಚಿನ ಸಸಿಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.…
ಮಡಿಕೇರಿ ಜೂ.6 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಅಭೂತಪೂರ್ವ ವಿಜಯವನ್ನು ಸಾಧಿಸಿದ್ದು, ವಿರಾಜಪೇಟೆ ಮತದಾರರು ಬಿಜೆಪಿ ಪರವಾಗಿದ್ದಾರೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದೆ ಎನ್ನುವ ಕಾರಣಕ್ಕೆ ಕೊಡಗು ಜಿಲ್ಲೆಯಲ್ಲೂ ಕಾಂಗ್ರೆಸ್ ಬಹುಮತ ಪಡೆಯಬಹುದೆನ್ನುವ ಹಗಲುಗನಸು ಕಾಣುತ್ತಿದ್ದ ಆ ಪಕ್ಷದ ಮುಖಂಡರಿಗೆ ಮತದಾರರು ಸರಿಯಾದ ಉತ್ತರ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಣ್ಣಪುಟ್ಟ ತಪ್ಪುಗಳಿಂದ ಕಾಂಗ್ರೆಸ್ ಗೆಲುವು ಸಾಧಿಸಿರಬಹುದು. ಆದರೆ ಕಾರ್ಯಕರ್ತರ ಶ್ರಮದ ಫಲವಾಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲುವು ದಾಖಲಿಸಿದೆ. ದೇಶದ ಸುರಕ್ಷತೆ ಮತ್ತು ಅಭಿವೃದ್ಧಿಗಾಗಿ ವಿರಾಜಪೇಟೆ ಮತದಾರರು ಕಾಂಗ್ರೆಸ್ ಸರಕಾರದ ಗ್ಯಾರಂಟಿ ಇಲ್ಲದ ಗ್ಯಾರಂಟಿ ಭಾಗ್ಯಗಳಿಗೆ ಮನ್ನಣೆ ನೀಡದೆ ಬಿಜೆಪಿ ಅಭ್ಯರ್ಥಿ…
ನಾಪೋಕ್ಲು ಜೂ.6 NEWS DESK : ಯಾವುದೇ ಸಂಘ ಸಂಸ್ಥೆಗಳು ಬಲವರ್ಧನೆ ಆಗಬೇಕಾದರೆ ಸಂಘದಲ್ಲಿರುವ ಎಲ್ಲಾ ಸದಸ್ಯರ ಸಹಕಾರ ಅಗತ್ಯ ಎಂದು ಹಿಂದೂ ಮಳಿಯಾಳಿ ಸಂಘದ ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷ ಕೆ.ಎಸ್. ರಮೇಶ್ ಹೇಳಿದರು. ನಾಪೋಕ್ಲು ಹಿಂದೂ ಮಲಯಾಳಿ ಸಂಘದ ವತಿಯಿಂದ ಹಳೆ ತಾಲೂಕು ಭಗವತಿ ಸಮುದಾಯ ಭವನದಲ್ಲಿ ಆಯೋಜಿಸಲಾದ ವಿಷು ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ 15 ಹಿಂದೂ ಮಲಯಾಳಿ ಸಂಘವನ್ನು ಸ್ಥಾಪಿಸಲಾಗಿದೆ. ಪ್ರಥಮ ಬಾರಿ ನಾಪೋಕ್ಲುವಿನಲ್ಲಿ ವಿಷು ಸಂಭ್ರಮಾಚರಣೆ ಮಾಡುತ್ತಿರುವುದು ಸಂತಸದ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್.ಎನ್.ಡಿ.ಪಿ ಸಂಘಟನೆ ಅಧ್ಯಕ್ಷ ಟಿ.ಆರ್.ವಾಸುದೇವ್, ನಾಪೋಕ್ಲುವಿನಲ್ಲಿ ವಿಷು ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಿದ ಸಂಘದ ಸ್ಥಾಪಕ ಅಧ್ಯಕ್ಷರ ಕಾರ್ಯ ಶ್ಲಾಘನೀಯ. ಸಂಘದ ಚಟುವಟಿಕೆಗಳಿಗೆ ನಮ್ಮ ಸಂಘಟನೆ ಕೂಡ ಇದಕ್ಕೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡಲಿದೆ ಎಂದರು. ಹಿಂದೂ ಮಲಯಾಳಿ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಸುಮಿತ್ರ ವಿನೋದ್ ಮಾತನಾಡಿ, ಸದಸ್ಯರು…






