ಮಡಿಕೇರಿ ಏ.25 NEWS DESK : ಕೊಡವ ಕುಟುಂಬಗಳ ನಡುವಿನ 24ನೇ ಹಾಕಿ ಹಬ್ಬ ಪ್ರತಿಷ್ಠಿತ “ಕುಂಡ್ಯೋಳಂಡ ಹಾಕಿ ಕಾರ್ನಿವಲ್ 2024” ರ ಅಂತಿಮ ಪಂದ್ಯಾಟ ಮತ್ತು ಸಮಾರೋಪ ಸಮಾರಂಭ ಏ.28 ರಂದು ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎ ಕ್ರೀಡಾಕೂಟದ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಕಿ ಹಬ್ಬದ ಕೊನೆಯ ಎರಡು ದಿನಗಳ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕುಂಡ್ಯೋಳಂಡ ಹಾಕಿ ಕಾರ್ನಿವಲ್ ಕೊಡವ ಕೌಟುಂಬಿಕ ಹಾಕಿ ಹಬ್ಬದ ಸೆಮಿಫೈನಲ್ ಪಂದ್ಯಾವಳಿ ಏ.27 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚೆಪ್ಪುಡಿರ ಮೊಣ್ಣಪ್ಪ ಪೂಣಚ್ಚ ಹಾಗೂ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಪಾಲ್ಗೊಳ್ಳಲಿದ್ದಾರೆ. ಏ.27 ರ ಶನಿವಾರ ಬೆಳಗ್ಗೆ 7 ಗಂಟೆಗೆ ಕಕ್ಕಬ್ಬೆಯಿಂದ ನಾಪೋಕ್ಲುವರೆಗೆ ಕೊಡವ ಕುಟುಂಬಗಳ ನಡುವೆ 2.50 * 4 ಕಿ.ಮೀ…
ಲೇಖಕ: admin
ಮಡಿಕೇರಿ ಏ.25 NEWS DESK : ಲೋಕಸಭಾ ಚುನಾವಣೆ-2024 ನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಏ.24 ರ ಸಂಜೆ 5 ಗಂಟೆಯಿಂದ ಏ.26 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಜೂ.3 ರ ಮಧ್ಯರಾತ್ರಿ 12 ಗಂಟೆಯಿಂದ ಜೂ.4 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ಏ.25 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ `ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5118 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5103 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2023-24ನೇ ಆರ್ಥಿಕ ಸಾಲಿನಲ್ಲಿ 314 ಪ್ರಕರಣಗಳು ದಾಖಲಾಗಿ 299 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 15 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ. 35 ಲಕ್ಷ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2023-24ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ…
ಮಡಿಕೇರಿ ಏ.25 NEWS DESK : ಮಡಿಕೇರಿ ನಗರಸಭಾ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಕೇಂದ್ರಗಳಿಗೆ ಜಿಲ್ಲಾ ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರೊಂದಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಪಿಆರ್‍ಓ ಗಳಿಂದ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದು, ಸ್ವಚ್ಛತೆ ಕುಡಿಯುವ ನೀರು ಹಾಗೂ ಮೇಜು ಕುರ್ಚಿಗಳನ್ನು ಒದಗಿಸಲಾಯಿತು. ಅಲ್ಲದೆ ಸಖಿ ಬೂತ್ ಗಳು ಮತ್ತು ಮಾದರಿ ಬೂತ್ ಗಳನ್ನು ಪರಿಶೀಲನೆ ಮಾಡಿದರು.
ಮಡಿಕೇರಿ ಏ.25 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಏ.26 ರಂದು ಮತದಾನ ನಡೆಯಲಿದ್ದು, ನಗರದ ಸಂತ ಜೋಸೆಫರ ಶಾಲೆ, ವಿರಾಜಪೇಟೆ ಸಂತ ಅನ್ನಮ್ಮ ಶಾಲಾ ಆವರಣದಲ್ಲಿ ಮಸ್ಟರಿಂಗ್ ಕಾರ್ಯ ಸುಸೂತ್ರವಾಗಿ ನಡೆಯಿತು. ಚುನಾವಣೆ ಮತಗಟ್ಟೆಗಳಿಗೆ ನಿಯೋಜಿಸಿರುವ ಅಧಿಕಾರಿ, ಸಿಬ್ಬಂದಿಗಳು ಮತಯಂತ್ರ ಹಾಗೂ ಇತರೆ ಸಲಕರಣೆಗಳನ್ನು ಪಡೆದು ಮತಗಟ್ಟೆ ಕಡೆದ ಸಾಗಿದರು. ಚುನಾವಣಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಯಾ ತಾಲೂಕು ಮಾಸ್ಟರಿಂಗ್ ಕೇಂದ್ರಗಳಲ್ಲಿ ಮತಯಂತ್ರ ಬಳಕೆ ಕುರಿತು ಕೊನೆಯ ಸುತ್ತಿನ ಮಾಹಿತಿ ಪಡೆದರು ಪಡೆದುಕೊಂಡರು.
ಮಡಿಕೇರಿ ಏ.25 NEWS DESK : ಕೂರ್ಗ್ ಕಾಫಿವುಡ್ ಮೂವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಕೊಡವ ಚಲನಚಿತ್ರ “ಕಾಂಗತ ಮೂಡ್” (The Shadow) ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಮೂರ್ನಾಡಿನ ಬಿದ್ದಂಡ ಪೊನ್ನಪ್ಪ ಅವರ ನಿವಾಸದಲ್ಲಿ ಆರಂಭಗೊಂಡ ಚಿತ್ರೀಕರಣವು ಕಳೆದ 11 ದಿನಗಳಲ್ಲಿ ಕೊಡಗಿನ ವಿವಿಧೆಡೆ ಚಿತ್ರೀಕರಿಸಿ ಇದೀಗ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಚಿತ್ರೀಕರಣಕ್ಕೆ ಸಹಕರಿಸಿದ ಮೂರ್ನಾಡು ಕಾಂತೂರು ಗ್ರಾಮದ ಕಾಫಿ ಬೆಳೆಗಾರರಾದ ಬಿದ್ದಂಡ ಲೀಲಾ ಪೊನ್ನಪ್ಪ ಚಿತ್ರೀಕರಣ ಪೂರ್ಣಗೊಂಡ ಹಿನ್ನಲೆ ಕುಂಬಳಕಾಯಿ ಒಡೆದು, ಮಾತನಾಡಿ “ಕಾಂಗತ ಮೂಡ್” ಚಿತ್ರ ಕೊಡಗು ಸೇರಿದಂತೆ ಎಲ್ಲೆಡೆ ಉತ್ತಮ ಪ್ರದರ್ಶನ ಕಂಡು ಯಶಸ್ವಿಯಾಗಲಿ ಎಂದು ಚಿತ್ರತಂಡಕ್ಕೆ ಶುಭಹಾರೈಸಿದರು. ಚಿತ್ರದ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಮಾತನಾಡಿ, ಕೊಡವ ಭಾಷೆಯ ಉಳಿವು, ಜನರಿಗೆ ಹಾಗೂ ಸಮಾಜಕ್ಕೆ ಕೊಡವ ಸಂಸ್ಕೃತಿ, ಆಚಾರ, ವಿಚಾರಗಳನ್ನು ತಲುಪಿಸುವ ನಿಟ್ಟಿನಲ್ಲಿ ವರ್ಷಂಪ್ರತಿ ಕೊಡವ ಸಿನಿಮಾವನ್ನು ನಮ್ಮ ತಂಡದೊಂದಿಗೆ ನಿರ್ಮಿಸಲಾಗುತ್ತಿದ್ದು, ಕೊಡಗಿನಾದ್ಯಂತ ಜನರು…
ಮಡಿಕೇರಿ ಏ.25 NEWS DESK : ಕೊಡಗು ಜಿಲ್ಲಾ ಎನ್.ಎಸ್.ಯು.ಐ (ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ)ದ ವತಿಯಿಂದ ಜಿಲ್ಲಾ ಮಟ್ಟದ ಯುವ ನ್ಯಾಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಎನ್‍ಎಸ್‍ಯುಐ ಪ್ರಥಮ ಜಿಲ್ಲಾ ಮಟ್ಟದ ಸಭೆಯಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಯುವ ನ್ಯಾಯ ಯೋಜನೆಯ ಪ್ರತಿಯನ್ನು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ಜಗತ್ತಿನಲ್ಲಿ ಅತ್ಯಂತ ಹೆಚ್ಚು ಯುವಕರನ್ನು ಹೊಂದಿರುವ ದೇಶ ಎಂಬ ಹೆಗ್ಗಳಿಕೆ ಭಾರತ ದೇಶದ್ದಾಗಿದೆ. ಯುವಕರಿಗೆ ಸೂಕ್ತ ನ್ಯಾಯ ದೊರೆಯದೆ ಇರುವುದು ವಿಷಾದನೀಯ ಎಂದರು. ದೂರದೃಷ್ಟಿಯುಳ್ಳ ನ್ಯಾಯಕರಾದ ರಾಹುಲ್ ಗಾಂಧಿ ಅವರು ದೇಶದ ಯುವ ಸಮೂಹದ ಏಳಿಗೆಗೆ ಹಲವು ಸುಧಾರಣೆಗಳನ್ನು ರೂಪಿಸಿ ಗ್ಯಾರಂಟಿ ಯೋಜನೆಗಳನ್ನು ಬಿಡುಗಡೆ ಮಾಡಿದ್ದಾರೆ. ಅವರಿಗೆ ದೇಶದ ಮೇಲೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಪಿ.ಎಂ.ಅಬ್ದುಲ್ ರಾಶಿದ್, ಕೊಡಗು ಜಿಲ್ಲಾದ್ಯಂತ ಎನ್.ಎಸ್.ಯು.ಐ ಸಂಘಟನೆಯನ್ನು ಬಲಿಷ್ಟ ಪಡಿಸುವುದಾಗಿ…
ಚೆಟ್ಟಳ್ಳಿ ಏ.25 NEWS DESK : ವಿರಾಜಪೇಟೆಯ ಚೆಂಬೆಬೆಳ್ಳೂರಿನ ವಾರ್ಷಿಕ ಬೋಡ್‍ನಮ್ಮೆಯು ಶ್ರದ್ಧಾಭಕ್ತಿಯಿಂದ ನೆರವೇರಿತು. ಹುಲಿವೇಷದಾರಿಗಳು, ದೋಳ್ ಪಾಟ್, ಬಂಡ್ ಕಳಿ( ಕೆಸರು ವೇಷ), ಪಿಲ್ಲ್ ಭೂತ, ಕಾಪಳ ವೇಷದಾರಿಗಳ ಕುಣಿತ ಗಮನ ಸೆಳೆಯಿತು. ಪಟ್ಟಣಿ ಹಬ್ಬದೊಂದಿಗೆ ಆರಂಭವಾದ ಬೋಡ್‍ನಮ್ಮೆಯು ಪಣಿಕರಡೋಲಿನಕೊಟ್ಟು ಹಾಗೂ ಕೊಂಬಿನ ಊದಿದ ನಂತರ ಊರಿನವರು ಸಂಪ್ರದಾಯದಂತೆ ಪಟ್ಟಣಿ ಮುರಿಯಲಾಯಿತು. ಹಿರಿಯರು, ಕಿರಿಯರೆಲ್ಲ ದೇವರ ನೆಲೆಯ ಸುತ್ತಲೂ ಕುಣಿಯುತಾ ಪ್ರದಕದಕ್ಷಿಣೆ ಬಂದು ಹರಕೆ ಕಾಣಿಕೆಯನ್ನು ದೇವರಿಗೆ ಅರ್ಪಿಸಿದರು. ವಿವಿಧ ಬಗೆಯ ಹೆಣ್ಣಿನ ವೇಷ, ಗಗನ ಸಖಿಯರ ತಂಡ, ಲಂಬಾಣಿ ವೇಷ, ರಾಮಲಕ್ಷ್ಮಣರು, ರಾಜಸ್ತಾನಿ ನೃತ್ಯ ಇತ್ಯಾದಿ ವೈಭವ ಕಣ್ಮನ ಸೆಳೆಯಿತು. ಹಬ್ಬದ ಅಂಗವಾಗಿ ಭದ್ರಕಾಳಿ ದೇವಾಲಯವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಪೊದಕೇರಿ, ಪೊದಕೋಟೆ ಹಾಗೂ ನಡಿಕೇರಿ ಊರಿನ ಮೂರು ಕೇರಿಯಿಂದ ಬೆತ್ತದಿಂದ ಮಾಡಿ ಶೃಗಂರಿಸಿದ ಕೃತಕ ಮೂರು ಕುದುರೆಯೊಂದಿಗೆ ಊರಿನವರು ಅಂಬಲಕ್ಕೆ ಬಂದು ದೇವಾಲಯದಲ್ಲಿ ಸೇರುವ ಮೂಲಕ ಪೂಜಾ ಕೈಂಕರ್ಯವನ್ನು ನೆರವೇರಿಸಿದರು. ರಾತ್ರಿ ಊರಿನವರು, ಹರಕ್ಕೆ ಹೊತ್ತವರು ಮೈ ಯಲ್ಲೆಲ್ಲ…
ಸೋಮವಾರಪೇಟೆ ಏ.25 NEWS DESK : ಕೂತಿನಾಡು ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಎಂದೇ ಖ್ಯಾತಿಯಾಗಿರುವ ನಗರಳ್ಳಿ ಸುಗ್ಗಿ ಉತ್ಸವವು ಏ.29 ರಂದು ನಗರಳ್ಳಿಯ ಸುಗ್ಗಿ ಬನದಲ್ಲಿ ನಡೆಯಲಿದೆ. ಸಂಪ್ರಾದಾಯಿಕ ಸುಗ್ಗಿ ಆಚರಣೆಯಂತೆ ಸಬ್ಬಮ್ಮ ದೇವಿಯ ತವರೂರು ಎಂದೆ ಕರೆಯಲ್ಪಡುವ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ವಿಶೇಷ ಆಯುದ ಪೂಜೆ ನಡೆಯಿತು. ಅನಾದಿಕಾಲದಿಂದಲೂ ನಡೆದು ಕೊಂಡು ಬಂದಂತೆ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಗ್ರಾಮದ ಮನೆಗಳಲ್ಲಿರುವ ಬಂದೂಕುಗಳನ್ನು ತಂದಿಟ್ಟು ನಂತರ ಸಾಮೂಹಿಕವಾಗಿ ಪೂಜೆ ಸಲ್ಲಿಸಲಾಯಿತು. ನಂತರ ದೇವರ ಕಟ್ಟೆಗೆ ಗ್ರಾಮಸ್ಥರು ಬಂದೂಕು ಹಿಡಿದು ಪ್ರದಕ್ಷಿಣೆ ಹಾಕಿ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಸುಗ್ಗಿ ಉತ್ಸವಕ್ಕೆ ಚಾಲನೆ ನೀಡಿದರು. ಕೂತಿನಾಡು ವ್ಯಾಪ್ತಿಗೆ ಒಳಪಡುವ ಕೂತಿ ಗ್ರಾಮ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೇಕನಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟಡಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಳ್ಳಿ, ಬಿಕಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ ಹಾಗೂ ಸಕಲೇಶಪುರ ತಾಲೂಕಿನ ಒಡಳ್ಳಿ ಗ್ರಾಮಸ್ಥರು ಸುಗ್ಗಿ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.…
ಚೆಟ್ಟಳ್ಳಿ ಏ.25 NEWS DESK : ಚೆಟ್ಟಳ್ಳಿಯ ಪುರಾತನ ಇತಿಹಾಸ ನೆಲೆಯಾದ ಬೇಟೆಗಾರ ಅಯ್ಯಪ್ಪ ನೆಲೆಯಲ್ಲಿ ವಾರ್ಷಿಕ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಬೆಳಿಗ್ಗೆ ಗಣಪತಿ ಪೂಜೆ ಸಲ್ಲಿಸಿ, ನಂತರ ಭನದಲ್ಲಿರುವ ಬೇಟೆಗಾರ ಅಯ್ಯಪ್ಪ ನೆಲೆಯಲ್ಲಿ ಚಪ್ಪರ ಹಾಕಿ ಹಾಲು, ಹಣ್ಣು, ಕಜ್ಜಾಯ, ಬಿಲ್ಲುಬಾಣವನ್ನೆಲ್ಲ ಅರ್ಪಿಸಿ ಮಹಾಪೂಜೆಯನ್ನು ನೆರವೇರಿಸಲಾಯಿತು. ನೆರೆದಿದ್ದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿತರಣೆ ಬಳಿಕ ನೆರವೇರಿತು.






