ಲೇಖಕ: admin

ಮಡಿಕೇರಿ ಜೂ.4 NEWS DESK :  ಮಾನವೀಯ ಸ್ನೇಹಿತರ ಒಕ್ಕೂಟದ ಸದಸ್ಯರ ಸಮ್ಮಿಲನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ನಗರದ ಕ್ರೆಸೆಂಟ್ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ನಿವೃತ್ತ ಸುಬೇದಾರ್ ಮೇಜರ್ ಡೇವಿಡ್ ವೇಗಸ್ ಉದ್ಘಾಟಿಸಿದರು. ಒಕ್ಕೂಟದ ಅಡ್ಮಿನ್ ಶಶಿಕುಮಾರ್ ಪ್ರಸ್ತಾವಿಕ ಮಾತನಾಡಿ,  ನಮ್ಮ ಒಕ್ಕೂಟವೂ ಜಿಲ್ಲೆಯ ಕಡು ಬಡವರ ಸಂಕಷ್ಟಗಳಿಗೆ ಕೈಲಾದ ಸಹಾಯವನ್ನು ಮಾಡುತ್ತಾ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಾಗುವುದೆಂದರು.ಎಂದು ಹೇಳಿದರು. ಸಮಾಜ ಸೇವಕ ಮೈಕಲ್ ವೇಗಸ್  ಮಾತನಾಡಿ, ಒಕ್ಕೂಟದ ಕಾರ್ಯ ಚಟುವಟಿಕೆಗಳ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. ಒಕ್ಕೂಟದ ಅಡ್ಮಿನ್ ಎಂ.ಇ.ಮಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಶಿಕ್ಷಕ ಮೆಹಬೂಬ್ ಸಾಬ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ ಸುಕುಮಾರ್, ಸಮಾಜ ಸೇವಕಿ ಗಾಯತ್ರಿ ನರಸಿಂಹ , ಸುಂಟಿಕೊಪ್ಪದ ಹಿರಿಯ ಸಾಫ್ಟ್ವೇರ್ ಇಂಜಿನಿಯರ್ ನಿಯಾಝ್ ಮುಂತಾದವರು ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತ ಎಂ.ಇ.ಮಹಮ್ಮದ್ ರಚಿಸಿದ ಒಕ್ಕೂಟದ ಧ್ಯೇಯ ಗೀತೆಯನ್ನು ಮಡಿಕೇರಿ ತಾಲೂಕು ಕನ್ನಡ…

Read More

ಗುಜರಾತ್  ಜೂ.4 NEWS DESK :  ಗುಜರಾತ್‍ ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಗೃಹ ಸಚಿವ ಅಮಿತ್ ಶಾ ಜಯ ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್ ವಿರುದ್ಧ 5.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. 1989ರಿಂದಲೂ ಸತತವಾಗಿ ಬಿಜೆಪಿ ಈ ಕ್ಷೇತ್ರವನ್ನು ತನ್ನ ತೆಕ್ಕೆಯಲ್ಲಿ ಇರಿಸಿಕೊಂಡಿದೆ.

Read More

ಕಡಂಗ ಜೂ.4 NEWS DESK : ಎಸ್ ಎಸ್ ಎಫ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಅಧೀನದಲ್ಲಿರುವ ಡಿವಿಷನ್ ಹಾಗೂ ಸೆಕ್ಟರ್ ಸಮಿತಿಗಳ ನಾಯಕರ ಕ್ಯಾಂಪ್ ಹಾಗೂ ಜಿಲ್ಲಾ ಸಮಿತಿಯ ಕೌನ್ಸಿಲ್ ಸಭೆಯು ಕೊಂಡಂಗೇರಿಯ ಶಾದಿ ಮಹಲ್ ನಲ್ಲಿ ನಡೆಯಿತು. ರಾಜ್ಯ ಸಮಿತಿ ಸದಸ್ಯರಾದ ಆರಿಫ್ ಸಖಾಫಿ ನೇತೃತ್ವದಲ್ಲಿ ಜಿಲ್ಲಾ ಕೌನ್ಸಿಲ್ ನಡೆಯಿತು. ಸಯ್ಯಿದುನಾ ಅಬ್ದುಲ್ಲಾಹಿ ಸಖಾಫ್ ಹಳ್ರಮಿ ಅವರ ಝಿಯಾರತ್ ನೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಎಸ್.ಎಸ್.ಎಫ್ ಮಾಜಿ ರಾಜ್ಯ ಕಾರ್ಯದರ್ಶಿ ಮುಬಶ್ಶಿರ್ ಅಹ್ಸನಿ ಉಸ್ತಾದ್ ಉದ್ಘಾಟಿಸಿದರು. ನಂತರ ಜಿಲ್ಲೆಯ ವಿವಿಧ ಕಡೆಗಳಿಂದ ಬಂದ ನಾಯಕರಿಗೆ ಎಸ್.ವೈ.ಎಸ್ ಕೇರಳ ರಾಜ್ಯ ಕಾರ್ಯದರ್ಶಿ ಅಬ್ದುಲ್ ಕಲಾಂ ಮಾಸ್ಟರ್  ತರಗತಿ ನಡೆಸಿದರು. ಈಗಿನ ಕಾಲದಲ್ಲಿ ಸಾಂಘಿಕ ಕಾರ್ಯಾಚರಣೆಯ ಕುರಿತು ಆಳವಾಗಿ ವಿವರಿಸಿದರು. ಎಸ್ ಎಸ್ ಎಫ್ ಜಿಲ್ಲಾದ್ಯಕ್ಷ ಝುಬೈರ್ ಸಅದಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.  ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಮುಜೀಬ್, ರಾಜ್ಯ ಸಮಿತಿ ಸದಸ್ಯರಾದ ಇಬ್ರಾಹಿಂ ಮಾಸ್ಟರ್ ಜಿಲ್ಲಾ ಕೋಶಾಧಿಕಾರಿ ಸಯ್ಯದ್ ಶಿಹಾಬ್…

Read More

ಕುಶಾಲನಗರ ಜೂ.4 NEWS DESK : ಕೊಡಗು ಅಂಚೆ ಇಲಾಖೆಯ ನೌಕರರ ಆಶ್ರಯದಲ್ಲಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಪ್ರಶಸ್ತಿಯನ್ನು ಸೋಮವಾರಪೇಟೆ ಉಪ ವಿಭಾಗ ತಂಡ ತನ್ನದಾಗಿಸಿಕೊಂಡಿದ್ದು, ಮಡಿಕೇರಿ ಉಪ ವಿಭಾಗ ತಂಡ ದ್ವಿತೀಯ ಸ್ಥಾನ ಪಡೆಯಿತು. ಸ್ಥಳೀಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯ ಅಂಚೆ ವಿಭಾಗದ ಮೂರು ಉಪವಿಭಾಗ ಮತ್ತು ಪ್ರಧಾನ ಅಂಚೆ ಕಚೇರಿ ಸೇರಿದಂತೆ ಒಟ್ಟು ನಾಲ್ಕು ತಂಡಗಳು ಪಾಲ್ಗೊಂಡಿದವು. ಹಾಸನ ಅಂಚೆ ವಿಭಾಗದ ಉಪ ಅಧೀಕ್ಷಕರಾದ ಹೆಚ್.ಸೋಮಯ್ಯ ಪಂದ್ಯಾವಳಿಗೆ ಚಾಲನೆ ನೀಡಿದರು. ಮಡಿಕೇರಿ ಅಂಚೆ ನಿರೀಕ್ಷಕರಾದ ಬಿ.ಡಿ.ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಪಂದ್ಯ ಪುರುಷೋತ್ತಮರಾಗಿ ಶಿವಕುಮಾರ್, ಉತ್ತಮ ತಂಡವಾಗಿ ಮಡಿಕೇರಿ ಉಪ ವಿಭಾಗ ಪ್ರಶಸ್ತಿ ಪಡೆದುಕೊಂಡಿತು. ಪಂದ್ಯಾವಳಿಯಲ್ಲಿ ಮಡಿಕೇರಿ ಪ್ರಧಾನ ಕಚೇರಿಯ ಪ್ರಮುಖರಾದ ಬೇಬಿ ಜೋಸೆಫ್, ಸಿಎಲ್ ಮಹೇಶ್, ಸಂದೀಪ್, ಸೋಮಪ್ಪ, ವಿರಾಜಪೇಟೆ ಉಪವಿಭಾಗದ ಮಂಜು, ಶಫೀರ್, ಸತ್ಯ ಪ್ರಸನ್ನ, ಸೋಮವಾರಪೇಟೆ ಉಪವಿಭಾಗದ ಉಪ ಅಧೀಕ್ಷಕ ಶಿವಕುಮಾರ್, ಅಶೋಕ್, ಎಂ.ಎಸ್.ಮಂಜುನಾಥ್ , ಭಾಸ್ಕರ್…

Read More

ಕುಶಾಲನಗರ ಜೂ.4 NEWS DESK : ಪೋಷಕರು ತಮ್ಮ ಮಕ್ಕಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಎಚ್ಚರ ವಹಿಸಬೇಕಾಗಿದೆ ಎಂದು ಕುಶಾಲನಗರ ಸಂಚಾರಿ ಠಾಣೆಯ ಪೋಲೀಸ್ ಹೆಡ್ ಕಾನ್‌ಸ್ಟೇಬಲ್‌ ಆಶಾ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿಣ ಅಭಿವೃದ್ಧಿ ಯೋಜನೆಯ ಕುಶಾಲನಗರ ವಲಯದ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸಹಯೋಗದೊಂದಿಗೆ ಒಕ್ಕೂಟ ಸಭೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದಾರೆ. ಶಾಲಾ ಕಾಲೇಜು ಮಕ್ಕಳು ಇದರಿಂದ ಹೊರತಾಗಿಲ್ಲ. ಮೊಬೈಲ್ ದುರುಪಯೋಗ ಮಾಡದಂತೆ ಗಮನಹರಿಸಬೇಕು ವಾಹನಗಳನ್ನು ಚಲಾಯಿಸಲು ಅಪ್ರಾಪ್ತರಿಗೆ ನೀಡಬಾರದು. ಮಕ್ಕಳ ಬಗ್ಗೆ ಸಂಪೂರ್ಣ ಜಾಗೃತಿ ವಹಿಸುವುದು ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದರು. ಜನಜಾಗೃತಿ ವೇದಿಕೆ ಸದಸ್ಯರಾದ ವಿ.ಡಿ. ಪುಂಡರೀಕಾಕ್ಷ ಅವರು ಮಾತನಾಡಿ, ಮಕ್ಕಳಿಗೆ ತಮ್ಮ ಜವಾಬ್ದಾರಿಯನ್ನು ತಿಳಿಸಿಕೊಡುವ ಕೆಲಸವಾಗಬೇಕಾಗಿದೆ. ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಪಣತೊಡಬೇಕಾಗಿದೆ ಎಂದು…

Read More

ಸುಂಟಿಕೊಪ್ಪ, ಜೂ.3 NEWS DESK : ಗರಗಂದೂರು ಬಿ ತೋಟದ ಸಮೀಪದ (ಹೊಸತೋಟ) ಬಸ್ ಸ್ಟ್ಯಾಂಡ್ ನಲ್ಲಿ ವ್ಯಕ್ತಿಯೋರ್ವರ ಮೃತ ದೇಹ ಪತ್ತೆಯಾಗಿದೆ. ಸೋಮವಾರ ಸಂಜೆ ಹೊಸತೋಟ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು,  ಮೃತ ವ್ಯಕ್ತಿ ಮೈಸೂರು ಜಿಲ್ಲೆಯ ಇಲವಾಲ ಸಮೀಪದ ಹೊಸಕೋಟೆ ಚಂದ್ರು (42) ಎಂದು ಗುರುತಿಸಲಾಗಿದೆ. ಊಟದ ಬ್ಯಾಗ್ ಇರಿಸಿಕೊಂಡಿದ್ದ ಚಂದ್ರು, ಬಸ್ ನಿಲ್ದಾಣದಲ್ಲಿ ಕುಳಿತಲ್ಲೇ ಅಸುನಿಗಿದ್ದಾರೆ. ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಮಾಹಿತಿ ಬಂದಮೇರೆಗೆ  ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಜೂ.3 NEWS DESK : ಆದಿವಾಸಿಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಒದಗಿಸಲು ಎಸ್‌ಟಿ ಜನಾಂಗಕ್ಕೆ ಒಳ ಮೀಸಲಾತಿ ನೀಡಬೇಕೆಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಇದ್ದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರ ಒಳಮೀಸಲಾತಿಯನ್ನು ತಂದು ಕೆಲವು ಸಮುದಾಯಗಳಿಗೆ ನೆರವಾಗಿದೆ. ಇದೀಗ ರಾಜ್ಯದಲ್ಲಿ ಅಧಿಕಾರದಲ್ಲಿರುವ ಅಹಿಂದ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರಕಾರ ಎಸ್‌ಟಿ ಜನಾಂಗಕ್ಕೆ ಒಳ ಮೀಸಲಾತಿ ನೀಡುವ ಮೂಲಕ 49 ಸಮುದಾಯಗಳಿಗೆ ನ್ಯಾಯ ಒದಗಿಸಲಿ ಎಂದರು. ಎಸ್‌ಟಿ ಜನಾಂಗಕ್ಕೆ ಒಳ ಮೀಸಲಾತಿ ನೀಡಲು ಸರಕಾರ ಸಮಿತಿಯೊಂದನ್ನು ರಚಿಸಬೇಕು. ಈ ಬೇಡಿಕೆಯ ಕುರಿತು ಆದಿವಾಸಿಗಳಿರುವ ಪ್ರದೇಶಗಳಲ್ಲಿ ಜನಜಾಗೃತಿ ಮೂಡಿಸಲಾಗುವುದು ಮತ್ತು ಸರಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು. ಜಾತಿ ಜನ ಗಣತಿ ವರದಿಯನ್ನು ಬಿಡುಗಡೆ ಮಾಡಿದರೆ ನಿಖರವಾದ ಅಂಕಿ ಅಂಶಗಳು ಲಭಿಸಲಿದ್ದು, ಜನಸಂಖ್ಯಾ ಆಧಾರದಲ್ಲಿ ಮೀಸಲಾತಿ ನೀಡಿ ಆದಿವಾಸಿಗಳಿಗೆ ನ್ಯಾಯ…

Read More