ಮಡಿಕೇರಿ ಏ.22 NEWS DESK : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ `ಪುಸ್ತಕ ಮನೆ’ಯಲ್ಲಿ ಏ.23 ರಿಂದ ಏ.29 ರವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ `ಪುಸ್ತಕ ಸಂತೆ’ ಕಾರ್ಯಕ್ರಮ ನಡೆಯಲಿದೆ. ಏ.23ರ ಬೆಳಿಗ್ಗೆ 11 ಗಂಟೆಗೆ ಖ್ಯಾತ ವಾಗ್ಮಿ, ಸಾಹಿತಿ ಪ್ರಭಾಕರ ಕೊಂಡಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭ ಎಲ್ಲಾ ಪುಸ್ತಕಗಳಿಗೂ ಶೇ.10 ರಿಂದ 50 ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಜೊತೆಗೆ ಪ್ರತೀ ಖರೀದಿಯೊಂದಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ. ಪುಸ್ತಕ ಪ್ರೇಮಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಲೇಖಕ: admin
ಮಡಿಕೇರಿ ಏ.22 NEWS DESK : ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿಯೂ ನೀರಿನ ಅಭಾವ ಉಂಟಾಗಿದೆ. ಅಲ್ಲದೆ ಕಾಲರಾ ಮತ್ತು ವಾಂತಿ, ಬೇದಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ರಸ್ತೆಬದಿ ವ್ಯಾಪಾರಿಗಳು, ಡಾಬಾ, ಸ್ವೀಟ್ ಸ್ಟಾಲ್, ಬೇಕರಿ, ಚಾಟ್ಸ್, ಮೆಸ್, ಕ್ಯಾಂಟೀನ್, ಕ್ಯಾಟರಿಂಗ್, ಸಮುದಾಯ ಭವನ, ಕಲ್ಯಾಣ ಮಂಟಪದವರು, ಪೇಯಿಂಗ್‍ಗೆಸ್ಟ್, ಹೋಮ್-ಸ್ಟೇ, ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾರ್ಟ್, ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ, ಸರ್ಕಾರಿ ಮತ್ತು ಸರ್ಕಾರೇತರ ವಸತಿನಿಲಯ ಮತ್ತು ಎಲ್ಲಾ ಆಹಾರ ತಯಾರಿಕಾದಾರರು ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಕಡ್ಡಾಯವಾಗಿ ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರನ್ನು ನೀಡುವಂತೆ ಸೂಚಿಸಿದೆ. ಆಹಾರ ತಯಾರಿಕಾ ಮತ್ತು ಸಂಗ್ರಹಣಾ ಸ್ಥಳಗಳಲ್ಲಿ ನೊಣಗಳು, ಸೊಳ್ಳೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ, ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದು ಮತ್ತು ತಯಾರಿಸಿರುವ ಎಲ್ಲಾ ಆಹಾರ ಪದಾರ್ಥಗಳನ್ನು ಸೂಕ್ತ ರಿತಿಯಲ್ಲಿ ಮುಚ್ಚಿಟ್ಟು ಸ್ವಚ್ಚವಾದ ವಿಧಾನದ ಮೂಲಕ ತಯಾರಿಕೆ ಮತ್ತು ವಿತರಣೆಯನ್ನು ಮಾಡುವಂತೆ ತಿಳಿಸಿದೆ. ಎಲ್ಲಾ ಆಹಾರ ಉದ್ದಿಮೆದಾರರು…
ಮಡಿಕೇರಿ ಏ.22 NEWS DESK : ಸೋಮವಾರಪೇಟೆಯ ಕಿರಗಂದೂರು ಗ್ರಾಮದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಿರಂಗದೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ವಿ.ಎಸ್.ಉಗ್ರಪ್ಪ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಎಂ.ಚಂಗಪ್ಪ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕೆ.ಎಂ.ರಿತಿನ್, ಕೆ.ಟಿ.ರವಿಚಂದ್ರ, ಬಿ.ಎನ್.ರವಿ, ಎ.ಕೆ.ಬೊಪಯ್ಯ, ಎ.ಎಸ್.ಬೋಪಯ್ಯ, ಕೆ.ಪಿ.ಬೊಪಯ್ಯ ಹಾಗೂ ಕೆ.ಈ.ಸುರೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ, ನಟೇಶ್ ಗೌಡ, ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್, ಬ್ಲಾಕ್ ಅಧ್ಯಕ್ಷ ಸತೀಶ್ ಮತ್ತಿತರ ಪ್ರಮುಖರು ಹಾಜರಿದ್ದರು.
ಮಡಿಕೇರಿ ಏ.22 NEWS DESK ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪಾಲೆಮಾಡುವಿನಲ್ಲಿ ನಡೆದ ಪ್ರಚಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಲಕ್ಷಾಂತರ ಮಂದಿಗೆ ಸಹಾಯವಾಗಿದೆ ಎಂದರು. ಜನಪರ ಕಾಳಜಿಯ ಕಾಂಗ್ರೆಸ್ ಸರಕಾರ ಮತ್ತು ಪ್ರತಿಯೊಬ್ಬರ ಸಂಕಷ್ಟಕ್ಕೆ ಸ್ಪಂದಿಸುವ ಗುಣ ಹೊಂದಿರುವ ಎಂ.ಲಕ್ಷ್ಮಣ್ ಅವರ ಪರ ಜಿಲ್ಲೆಯ ಮತದಾರರು ಒಲವು ತೋರುತ್ತಿದ್ದಾರೆ ಎಂದು ತಿಳಿಸಿದರು. ಪ್ರಚಾರದ ಸಂದರ್ಭ ಹಂಸ ಅವರು ಐದು ಗ್ಯಾರಂಟಿ ಯೋಜನೆಗಳು ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದರೆ ಜಾರಿಗೆ ಬರಲಿರುವ 25 ಭರವಸೆಗಳ ಪ್ರಣಾಳಿಕೆಯಲ್ಲಿನ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟರು. ಸಭೆಯಲ್ಲಿ ಕಾನ್ಶಿರಾಂ ನಗರದ ಅಧ್ಯಕ್ಷ ಹಾಗೂ ಗ್ರಾ.ಪಂ…
ಮಡಿಕೇರಿ ಏ.22 NEWS DESK : ಪ್ರವಾಸಿತಾಣವಾಗಿರುವ ಕೊಡಗು ಜಿಲ್ಲೆಗೆ ಹೊರ ಜಿಲ್ಲೆ, ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಹಾಗೂ ಜಿಲ್ಲೆಯಲ್ಲಿನ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಗಳು ನಡೆಯುತ್ತಿದೆ. ಜಿಲ್ಲೆಯಲ್ಲಿ ತಾಪಮಾನ ಹೆಚ್ಚಿರುವುದರಿಂದ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲರಾ, ವಾಂತಿ ಭೇದಿ ಪ್ರಕರಣಗಳು, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಇತ್ಯಾದಿ ಸಾಂಕ್ರಾಮಿಕ ರೋಗಗಳು ಸ್ಪೋಟಗೊಳ್ಳುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಈ ಸಾಂಕ್ರಾಮಿಕ ರೋಗಗಳು ಸಂಭವಿಸದಂತೆ ಮತ್ತು ಉಲ್ಭಣಗೊಳ್ಳದಂತೆ ತೆಗೆದುಕೊಳ್ಳಬಹುದಾದ ಅಗತ್ಯ ಮುಂಜಾಗ್ರತಾ ಕ್ರಮಗಳು. ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್‍ಗಳಲ್ಲಿ ಸಾರ್ವಜನಿಕರಿಗೆ ಶುದ್ದವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಮತ್ತು ಹೋಟೆಲ್‍ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು. ಸಂಬಂಧಪಟ್ಟ ಪಂಚಾಯತಿ…
ಮಡಿಕೇರಿ ಏ.22 NEWS DESK : ಮಡಿಕೇರಿ ಬ್ಲಾಕ್ ಕಾಂಗ್ರೆಸ್‍ನ ಕಾರ್ಯದರ್ಶಿಯಾಗಿ ಹಂಚೆಟ್ಟಿರ ಮನು ಮುದ್ದಪ್ಪ ಹಾಗೂ ಖಜಾಂಚಿಯಾಗಿ ರೋಷನ್ ಕೊಂಬಾರನ ನೇಮಕಗೊಂಡಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ತಿಳಿಸಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನ ಮೇರೆಗೆ ಇವರಿಬ್ಬರನ್ನು ಆಯ್ಕೆ ಮಾಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಏ.22 NEWS DESK : ಕಾಂಗ್ರೆಸ್ ಪಕ್ಷದ ವತಿಯಿಂದ ಬಿಟ್ಟಂಗಾಲದ ಹೆಗಡೆ ಸಮಾಜದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾವೇಶ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಪರ ಮತಯಾಚಿಸಿ, ಅಭ್ಯರ್ಥಿಯ ಗೆಲುವಿಗೆ ಸಹಕರಿಸುವಂತೆ ಮಾತನಾಡಿದರು. ಸಮಾವೇಶದಲ್ಲಿ ರಾಮದಾಸ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷದ ಮುಖಂಡರಾದ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ವಿರಾಜಪೇಟೆ- ಪೊನ್ನಂಪೇಟೆ ಹಾಗೂ ನಾಪೋಕ್ಲು ಬ್ಲಾಕ್ ಅಧ್ಯಕ್ಷ ರಂಜಿ ಪೂಣಚ್ಚ, ಮಿದೇರಿರ ನವೀನ್ , ಇಸ್ಮಾಯಿಲ್ ಹಾಗೂ ಇತರ ಪ್ರಮುಖ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಏ.22 NEWS DESK : ಪರಿಶಿಷ್ಟರ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್‍ಟಿ ಮೋರ್ಚಾ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಪರಿಶಿಷ್ಟರ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಬಳಕೆ ಮಾಡುವುದನ್ನು ಖಂಡಿಸುವುದಾಗಿ ತಿಳಿಸಿದರು. ಈ ರೀತಿ ಅನುದಾನವನ್ನು ನಿಯಮಬಾಹಿರವಾಗಿ ಬಳಕೆ ಮಾಡುವ ಮೂಲಕ ಪರಿಶಿಷ್ಟರಿಗೆ ಸರಕಾರ ವಂಚನೆ ಮಾಡುತ್ತಿದೆ. ದುರ್ಬಲ ವರ್ಗವನ್ನು ಹಸಿವಿನಲ್ಲಿಟ್ಟು ಇತರರ ಹೊಟ್ಟೆ ತುಂಬಿಸುವ ಕಾರ್ಯ ಯಾಕೆ ಮಾಡಬೇಕು, ಪರಿಶಿಷ್ಟರ ಅನುದಾನವನ್ನು ಬಳಸಿಕೊಂಡಂತೆ ಅಲ್ಪಸಂಖ್ಯಾತರ ಅನುದಾನವನ್ನು ಯಾಕೆ ಬಳಸಿಕೊಳ್ಳುತ್ತಿಲ್ಲವೆಂದು ಪ್ರಶ್ನಿಸಿದರು. ಇಂದು ಪರಿಶಿಷ್ಟರ ಅಭಿವೃದ್ಧಿಗೆ ಹಣ ಇಲ್ಲದಾಗಿದೆ, ಅಧಿಕಾರಿಗಳ ಬಳಿ ವಿಚಾರಿಸಿದರೆ ಸರಕಾರದಿಂದ ಹಣ ಬಂದಿಲ್ಲ ಎಂದು ಹೇಳುತ್ತಾರೆ. ಪರಿಶಿಷ್ಟ ವಿದ್ಯಾರ್ಥಿಗಳು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ, ವಿದ್ಯಾರ್ಥಿ ವೇತನಕ್ಕೆ ಕಷ್ಟವಾಗಿದೆ. ಹಾಸ್ಟೆಲ್ ಗಳಲ್ಲಿ ಸೂಕ್ತ ವ್ಯವಸ್ಥೆಗಳಿಲ್ಲದಾಗಿದೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ…
ಮಡಿಕೇರಿ ಏ.22 NEWS DESK : ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದ 20ನೇ ವರ್ಷದ ಕೊಡಗು ಜಿಲ್ಲಾ ಮುಸ್ಲಿಂ ಕ್ರಿಕೆಟ್ ಕಪ್ ಹಾಗೂ ಜನಾಂಗದ ಬಾಂಧವರಿಗೆ ಮೊದಲನೇ ವರ್ಷದ ಹಗ್ಗ ಜಗ್ಗಾಟ ಕ್ರೀಡಾಕೂಟವು ಮೇ 10 ರಿಂದ 19 ರವರೆಗೆ ಮೂರ್ನಾಡುವಿನಲ್ಲಿ ನಡೆಯಲಿದೆ ಎಂದು ಟ್ರಸ್ಟ್ ನ ಕಾರ್ಯದರ್ಶಿ ಅದಮ್ ತಿಳಿಸಿದ್ದಾರೆ. ಮೂರ್ನಾಡು ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಪಂದ್ಯಕ್ಕೆ ಜಿಲ್ಲೆಯ ಎಲ್ಲಾ ಭಾಗದಿಂದಲೂ ಜನಾಂಗಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಮುಸ್ಲಿಂ ಕ್ರಿಕೆಟ್ ಕಪ್ ಸ್ಥಾಪಕರಾದ ಹಾಗೂ ಟ್ರಸ್ಟ್ ನ ಗೌರವಾಧ್ಯಕ್ಷ ಅಬ್ದುಲ್ ರಶೀದ್, ಟ್ರಸ್ಟಿನ ಸದಸ್ಯರಾದ ಮುಜೀಬ್ ಮೂರ್ನಾಡು, ಸಮೀರ್ ಕಡಂಗ, ಹಾರಿಸ್ ನಂಜರಾಯಪಟ್ಟಣ, ಭಾಷಾ ಕುಶಾಲನಗರ ಹಾಜರಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಏ.22 NEWS DESK : ವೃತ್ತಿ ಶಿಕ್ಷಕರ ಸಂಘದ ವತಿಯಿಂದ ಕುಶಾಲನಗರದ ಸ.ಪ.ಪೂ ಕಾಲೇಜಿನ ನಿವೃತ್ತ ಕಲಾ ಶಿಕ್ಷಕ ಉ.ರಾ.ನಾಗೇಶ್ ಹಾಗೂ ನೆಲ್ಯಹುದಿಕೇರಿಯ ಕೆ.ಪಿ.ಎಸ್ ವೃತ್ತಿ ಶಿಕ್ಷಕ ಧರ್ಮಪ್ಪ ಅವರನ್ನು ಸನ್ಮಾನಿಸಲಾಯಿತು. ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜಿನಲ್ಲಿ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಹಾಗೂ ಸಂಘದ ಪ್ರಮುಖರು ಶಿಕ್ಷಕರನ್ನು ಸನ್ಮಾನಿಸಿ, ಗೌರಿವಿಸಿದರು. ಉಪಪ್ರಾಂಶುಪಾಲರಾದ ಪರಮೇಶ್ವರಪ್ಪ ಹಾಗೂ ಶಾಲಾ ಸಿಬ್ಬಂದಿಗಳು ಹಾಜರಿದ್ದರು. ವರದಿ : ನೌಫಲ್






