ಮಡಿಕೇರಿ ಏ.5 NEWS DESK : ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಆದರ್ಶ ಜೀವನ ಮೌಲ್ಯಗಳು ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ನಡೆದ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಬು ಜಗಜೀವನ್ ರಾಂ ಅವರು ಬಿಹಾರದಲ್ಲಿ ಬಡ ಕುಟುಂಬದಲ್ಲಿ ಜನಿಸಿ ಬಾಲ್ಯ ಜೀವನವನ್ನು ಕಷ್ಟದಿಂದಲೇ ಎದುರಿಸಿದವರು. ತಮ್ಮ ಜೀವನದುದ್ದಕ್ಕೂ ಹೋರಾಟದ ಮೂಲಕ ಬೆಳವಣಿಗೆ ಕಂಡು ರಾಜಕೀಯ ಪ್ರವೇಶ ಮಾಡಿ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಅತ್ಯಂತ ಕಿರಿ ವಯಸ್ಸಿನ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ ಸಾಧನೆ ಬಾಬು ಜಗಜೀವನ್ ರಾಂ ಅವರದ್ದಾಗಿದೆ ಎಂದರು. ಕಾರ್ಮಿಕ ಸಚಿವರಾಗಿ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಹಲವು ಕಾನೂನು ಜಾರಿಗೊಳಿಸುವ ಮೂಲಕ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಜೊತೆಗೆ ಕೃಷಿ ಸಚಿವರಾಗಿ…
ಲೇಖಕ: admin
ಮಡಿಕೇರಿ ಏ.5 NEWS DESK : ಭಾರತ ಚುನಾವಣಾ ಆಯೋಗವು ಏ.26 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಕೊಡಗು ಜಿಲ್ಲೆಯಲ್ಲಿ ಮತದಾನ ದಿನವಾಗಿದ್ದು, ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ, ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ ಸಂಸ್ಥೆಯವರು ಅನುವು ಮಾಡಿ ಕೊಡುವಂತೆ ಕೊಡಗು ಉಪವಿಭಾಗದ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಏ.5 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಸಂಪಾಜೆ ಫೀಡರ್‍ನ ವಿದ್ಯುತ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ಏ.6 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕಾಟಕೇರಿ, ಮದೆನಾಡು, ಜೋಡುಪಾಲ, ದೇವರಕೊಲ್ಲಿ, ಕೊಯನಾಡು, ಸಂಪಾಜೆ, ಚೆಂಬು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ವಿರಾಜಪೇಟೆ ಏ.5 NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ (ನಿ) ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯರಾದ ನಿರ್ಮಲ ಕಾಮತ್ ಮಾತನಾಡಿ, ಮಹಿಳೆ ಮನೆಯಿಂದಲೇ ದೇಶಭಕ್ತಿ, ದೈವಭಕ್ತಿ ಗಳಿಸುತ್ತಾಳೆ. ಅಲ್ಲದೇ ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿದ್ದಾರೆ ಆದರೆ ಮನ್ನಣೆ ಸಿಗುವುದು ಮಾತ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುವರಿಗೆ. ದೇಶದ ಯಶಸ್ಸಿನ ಹಿಂದೆ ಎಷ್ಟೋ ಕೋಟಿ ಮಹಿಳೆಯರ ಶ್ರಮವಿದೆ. ಅಂತಹ ಪರಿಶ್ರಮಕ್ಕೆ ಬೆಲೆ ನೀಡಬೇಕು ಎಂದರು. ನಿವೃತ್ತ ಶಿಕ್ಷಕಿ ಮುಕ್ತ ಬಾಯಿ ಮಾತನಾಡಿ, ಸ್ತ್ರೀ ಪುರುಷರಿಗಿಂತ ಯಾವುದರಲ್ಲಿಯೂ ಕಡಿಮೆ ಇಲ್ಲ ಅನ್ನುವದು ಈಗಾಗಲೇ ಸಾಬೀತಾಗಿದೆ, ಆದರೂ ಪುರುಷ ಪ್ರದಾನ ಸಮಾಜದಲ್ಲಿ ಎಷ್ಟೋ ಪ್ರತಿಭಾನ್ವಿತ ಮಹಿಳೆಯರು ಮೂಲೆಗುಂಪಾಗುತ್ತಿದ್ದಾರೆ. ಇಂತಹ ಸಮಾಜದ ಮುಂದೆ ಸಾಧಕ ಮಹಿಳೆಯರನ್ನು ಗುರುತಿಸಿ ಆತ್ಮ ಸ್ಥೈರ್ಯವನ್ನು ತುಂಬಿಸುವ ಕಾರ್ಯ ನಡೆಯುತ್ತಿದೆ. ಈಗಿನ ಮಹಿಳೆಯರಿಗೆ ಪುರುಷರಿಂದ ಪ್ರೋತ್ಸಾಹ ಇರುವುದರಿಂದ ಮನೆ ಒಳಗೆ ಹೊರಗೆ ಕೆಲಸ ಮಾಡಲು ಉತ್ಸಾಹವಿದೆ…
ಪಣಂಬೂರು ಕಡಲತೀರವು ಭಾರತದ ಕರ್ನಾಟಕ ರಾಜ್ಯದ ಮಂಗಳೂರು ನಗರದಲ್ಲಿದೆ. ಈ ಕಡಲತೀರವು ಅರಬ್ಬೀ ಸಮುದ್ರದ ತೀರದಲ್ಲಿದೆ. ಇದು ಭಾರತದ ಸುರಕ್ಷಿತವಾದ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟ ಕಡಲತೀರಗಳಲ್ಲಿ ಒಂದಾಗಿದೆ. ಇದು ಕರಾವಳಿ ಕರ್ನಾಟಕದ ಅತ್ಯಂತ ಜನಪ್ರಿಯ, ಉತ್ತಮವಾಗಿ ಸಂಪರ್ಕ ಹೊಂದಿದ ಮತ್ತು ಹೆಚ್ಚು ಭೇಟಿ ನೀಡಿದ ಕಡಲ ತೀರಗಳಲ್ಲಿ ಒಂದಾಗಿದೆ. ಈ ಬೀಚ್ ನಗರದಿಂದ 10 ಕಿ.ಮೀ ಉತ್ತರಕ್ಕೆ ಪಣಂಬೂರು ಎಂಬ ಸ್ಥಳದಲ್ಲಿದೆ.ಇದು ಮಂಗಳೂರು ಮಹಾನಗರ ಪಾಲಿಕೆಯ ಆಡಳಿತದಲ್ಲಿದೆ. ಸದ್ಯಕ್ಕೆ ಇದು ಖಾಸಗಿ ಉದ್ಯಮಿಗಳಿಂದ ಪಣಂಬೂರು ಬೀಚ್ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಡಿಯಲ್ಲಿ ನಿರ್ವಹಿಸಲಾಗುತ್ತಿದೆ.ಇತರ ಆಕರ್ಷಣೆಗಳಲ್ಲಿ ಜೆಟ್ ಸ್ಕೈ ಸವಾರಿಗಳು, ಬೋಟಿಂಗ್, ಡಾಲ್ಫಿನ್ ವೀಕ್ಷಣೆ, ಆಹಾರ ಮಳಿಗೆಗಳು ಸೇರಿವೆ ಮತ್ತು ಸಂದರ್ಶಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಡಲತೀರದಲ್ಲಿ ಗಸ್ತು ತಿರುಗುವ ಹೆಚ್ಚು ನುರಿತ ಮತ್ತು ತರಬೇತಿ ಪಡೆದ ಜೀವರಕ್ಷಕರಿಗೆ ಹೆಸರುವಾಸಿಯಾಗಿದೆ. ಈ ಬೀಚ್ ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೆ ಪಿಕ್ನಿಕ್ ತಾಣವಾಗಿದೆ ಮತ್ತು ಸೂರ್ಯಾಸ್ತದ ವೀಕ್ಷಣೆಗಳನ್ನು ನೀಡುತ್ತದೆ. ನಗರಕ್ಕೆ ಹತ್ತಿರದಲ್ಲಿರುವುದರಿಂದ ಬೀಚ್ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಬಂದರಿನಲ್ಲಿ ಬೆರ್ತ್‌ಗಾಗಿ…
ಮಡಿಕೇರಿ ಏ.5 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಆರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಕಾಂಗ್ರೆಸ್ ಮಟ್ಟದ ಅಧ್ಯಕ್ಷರುಗಳು, ಬಿಎಲ್‍ಎ ಗಳು, ವಲಯ ಅಧ್ಯಕ್ಷರುಗಳು ಹಾಗೂ ಬೂತ್ ಪ್ರಮುಖರ ಸಭೆ ಏ.6 ರಿಂದ 9ರ ವರೆಗೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಾಲ್ಕು ದಿನಗಳ ಕಾಲ ನಡೆಯುವ ಸಭೆಗಳ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು, ಏ.6 ರಂದು ಅಪರಾಹ್ನ 2.30 ಗಂಟೆಗೆ ಮಡಿಕೇರಿ ನಗರ ಕಾಂಗ್ರೆಸ್ ಮತ್ತು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಭೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಏ.7 ರಂದು ಬೆಳಿಗ್ಗೆ 10.30 ಗಂಟೆಗೆ ಗೋಣಿಕೊಪ್ಪಲು ಕಿತ್ತಳೆ ಸಹಕಾರ ಸಂಘದ ಸಭಾಂಗಣದಲ್ಲಿ ಪೆÇನ್ನಂಪೇಟೆ ಬ್ಲಾಕ್ ಸಭೆ, ಅಪರಾಹ್ನ 2.30 ಗಂಟೆಗೆ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಭೆ ಶಾಸಕ ಎ.ಎಸ್.ಪೊನ್ನಣ್ಣ ಅವರ ನಿವಾಸದ ಬಳಿ…
ಇಡಗುಂಜಿ ವಿನಾಯಕ ದೇವಸ್ಥಾನವು ಕರ್ನಾಟಕದ ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರವಾಗಿದ್ದೂ ಸುಮಾರು 1500 ವರ್ಷಕೂ ಮಿಗಿಲಾದ ಇತಿಹಾಸ ಹೊಂದಿರುತ್ತದೆ. ಇದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ರಾ.ಹೆ. 66 (ರಾ.ಹೆ. 17)ರಿಂದ 7 ಕೀ.ಮಿ. ದೂರದಲ್ಲಿ ಪೂರ್ವ ದಿಕ್ಕಿನಲ್ಲಿ ಇದೆ. ಈ ದೇವಸ್ಥಾನವನ್ನು ಸಾಮಾನ್ಯವಾಗಿ “ಇಡಗುಂಜಿ ದೇವಸ್ಥಾನ” ಎಂದು ಕರೆಯುತ್ತಾರೆ. ಕರ್ನಾಟಕದ ಕಡಲ ತೀರದ ಪ್ರಸಿದ್ಧ (ಗೋಕರ್ಣ, ಇಡಗುಂಜಿ, ಹಟ್ಟಿ ಅಂಗಡಿ, ಗುಡ್ಡಟು ಆನೆಗುಡ್ಡೆ, ಶರವು, ಸೌತಡ್ಕ) ಗಣಪತಿ ದೇವಸ್ಥಾನಗಳಲ್ಲಿ ಇಡಗುಂಜಿ ವಿನಾಯಕ ದೇವಸ್ಥಾನವು ಕೂಡ ಒಂದು. ಈ ದೇವಾಲಯದ ಪರಿಸರದಲ್ಲಿನ ಪ್ರಶಾಂತತೆ ನಿಜವಾಗಿಯೂ ಒಂದು ಅದ್ಭುತ ಅನುಭವ. ವಿನಾಯಕ ಮೂರ್ತಿ :: ವಿನಾಯಕ (ಗಣಪತಿಯ ಒಂದು ರೂಪ)ನನ್ನು ಇಲ್ಲಿ “ಮಹೋತಭಾರ ಶ್ರೀ ವಿನಾಯಕ” ದೇವರು ಎಂದು ಕರೆಯುತ್ತಾರೆ. ಈ ದೇವಸ್ಥಾನದಲ್ಲಿ ವಿನಾಯಕ ಮೂರ್ತಿಯು ನಿಂತಿರುವ “ದ್ವಿ ಭುಜ” ಭಂಗಿಯಲ್ಲಿ ಸುಮಾರು 88 ಸೆ.ಮೀ ಎತ್ತರ ಮತ್ತು 59 ಸೆ.ಮೀ ಅಗಲವನ್ನು ಹೊಂದಿರುತ್ತದೆ. ಮೂರ್ತಿಯ ಬಲ ಕೈಯಲ್ಲಿ ಕಮಲದ…
ಬೇಕಾಗುವ ಪದಾರ್ಥಗಳು : ಮಶ್ರೂಮ್ –ಎರಡು ಪ್ಯಾಕೆಟ್, ಬಟಾಣಿ- ಒಂದು ಬಟ್ಟಲು, ಈರುಳ್ಳಿ –2, ಟೊಮೆಟೊ– 4, ದನಿಯಾ ಪುಡಿ– ಎರಡು ಚಮಚ, ಗರಂ ಮಸಾಲ –ಒಂದು ಚಮಚ, ಅರಿಸಿನ ಪುಡಿ– ಒಂದು ಚಮಚ, ಶುಂಠಿ -ಬೆಳ್ಳುಳ್ಳಿ ಪೇಸ್ಟ್- 1 ಚಮಚ, ಕಸ್ತೂರಿ ಮೇಥಿ–ಒಂದು ಚಮಚ, ಸೋಂಪು ಕಾಳು –ಒಂದು ಚಮಚ, ಚಕ್ಕೆ –2, ಲವಂಗ –2, ಸ್ಟಾರ್ ಮಸಾಲ ಹೂ– 2, ಅನಾನಸ್ ಮೊಗ್ಗು-2, ಏಲಕ್ಕಿ –2, ಎಣ್ಣೆ- ನಾಲ್ಕು ಟೇಬಲ್ ಚಮಚ, ಉಪ್ಪು- ರುಚಿಗೆ ತಕ್ಕಷ್ಟು. ಮಾಡುವ ವಿಧಾನ : ಪಾತ್ರೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿಕೊಳ್ಳಬೇಕು. ಕಸ್ತೂರಿ ಮೇಥಿ, ಸೋಂಪು, ಚಕ್ಕೆ -ಲವಂಗ, ಸ್ಟಾರ್ ಮಸಾಲ ಹೂ, ಅನಾನಸ್ ಮೊಗ್ಗು, ಏಲಕ್ಕಿ ಸೇರಿಸಿ ಮಿಶ್ರಣ ಮಾಡಬೇಕು. ಬಳಿಕ ಹೆಚ್ಚಿದ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಚೆನ್ನಾಗಿ ಫ್ರೈ ಮಾಡಿಕೊಳ್ಳಬೇಕು. ಬಳಿಕ ಟೊಮೆಟೊ, ಶುಂಠಿ -ಬೆಳ್ಳುಳ್ಳಿ ಪೇಸ್ಟ್ ಹಾಗೂ ಸ್ವಲ್ಪ ಉಪ್ಪು ಹಾಕಿಕೊಂಡು ಬೆರೆಸಿಕೊಡಬೇಕು.…
ಬೆಂಗಳೂರು ಏ.5 NEWS DESK : ನಟಿ ಹಾಗೂ ಮಂಡ್ಯದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಹಾಜರಿದ್ದರು. ಬಿಜೆಪಿ ಸೇರ್ಪಡೆಯಾಗುವ ಮುನ್ನ ಅಂಬರೀಷ್ ಸಮಾದಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದರು, ಪತ್ರ ಅಭಿಷೇಕ್ ಅಂಬರೀಷ್ ಮತ್ತುನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಜೊತೆಯಲ್ಲಿದ್ದರು.
ಮಡಿಕೇರಿ ಏ.5 NEWS DESK : ಕುಶಾಲನಗರದ ಸಾಹಿತಿ ಹಂಚೆಟ್ಟೀರ ಫ್ಯಾನ್ಸಿ ಮುತ್ತಣ್ಣ ಅವರಿಗೆ ಸಾಹಿತ್ಯ ಮತ್ತು ಪಾಕಕಲಾ ರಂಗದ ಸಾಧನೆಗಾಗಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿಯನ್ನು ಇಂಡೋನೇಶ್ಯ ದೇಶದ ಬಾಲಿ ದ್ವೀಪದಲ್ಲಿ ಪ್ರದಾನ ಮಾಡಲಾಯಿತು. ವಿಶ್ವವಾಣಿ ಪತ್ರಿಕೆ ವತಿಯಿಂದ ನೀಡಲಾಗುವ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪೈಕಿ ಸಾಹಿತ್ಯ ಮತ್ತು ಪಾಕಕಲೆ ಕ್ಷೇತ್ರದಿಂದ ಈ ವಷ೯ದ ಗ್ಲೋಬಲ್ ಅಚೀವಸ್೯ ಪ್ರಶಸ್ತಿಗೆ ಕೊಡಗಿನ ಹಂಚೆಟ್ಟೀರ ಫ್ಯಾನ್ಸಿ ಮುತ್ತಣ್ಣ ಆಯ್ಕೆಯಾಗಿದ್ದರು. ಇವರಿಗೆ ಇಂಡೋನೇಷ್ಯಾದ ಬಾಲಿ ದ್ವೀಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಖ್ಯಾತ ಕಲಾವಿದೆ ಡಾ. ಜಯಮಾಲ, ಹರಿಹರ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀವಚನಾನಂದಸ್ವಾಮೀಜಿ, ಬಾಲಿಯ ವೈಸ್ ಕೌನ್ಸುಲ್ ಲವಲೇಶ್ ಕುಮಾರ್, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಸೇರಿದಂತೆ ಬಾಲಿ – ಇಂಡೋನೇಷ್ಯಾ ದೇಶದ ವಿವಿಧ ಗಣ್ಯರು ಪ್ರಶಸ್ತಿ ಪ್ರದಾನ ಕಾಯ೯ಕ್ರಮದಲ್ಲಿ ಹಾಜರಿದ್ದರು. ಬಾಲಿ ದ್ವೀಪದ ಸುಂದರ ಅರಮನೆ ಸುಕಾನೋ೯ಗೆ ಭೇಟಿ ನೀಡಿದ ಸಂದಭ೯ ಪ್ರಶಸ್ತಿ ಪಡೆದ ಸಾಧಕರನ್ನು ರಾಜಮನೆತನದ ಪ್ರಮುಖ, ಬಾಲಿಯ ಸೆನೆಟರ್ ಡಾ.ಗುಸ್ತಿ…






