ಲೇಖಕ: admin

ಮಡಿಕೇರಿ ಏ.20 NEWS DESK : ವಾಲ್ನೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಅಪಘಾತ ಪ್ರಕರಣವನ್ನು ಕೊಲೆ ಎಂದು ಬಿಂಬಿಸಿ ರಾಜಕೀಯ ಲಾಭ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಬಿಜೆಪಿ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಇದು ಅಪಘಾತ ಪ್ರಕರಣವಾಗಿದೆ, ಆದರೆ ಬಿಜೆಪಿಯ ಮಾಜಿ ಶಾಸಕರುಗಳು ಹಾಗೂ ಪ್ರಮುಖರು ಇದು ಕೊಲೆ ಎಂದು ಹೇಳಿಕೆ ನೀಡಿ ಪ್ರತಿಭಟನೆ ನಡೆಸುವ ಮೂಲಕ ಅಶಾಂತಿಯ ವಾತಾವರಣ ಸೃಷ್ಟಿಗೆ ಮುಂದಾಗಿದ್ದಾರೆ. ಕೊಡಗಿನ ವಿವಿಧೆಡೆ ಹುಲಿ, ಆನೆ ದಾಳಿಗಳಾಗಿ ಕೃಷಿಕರು ಹಾಗೂ ಕಾರ್ಮಿಕರು ಪ್ರಾಣ ಕಳೆದುಕೊಂಡಾಗ ಪ್ರತಿಭಟನೆ ಮಾಡದೆ ಇದ್ದವರು, ಇದೀಗ ಅಪಘಾತ ಪ್ರಕರಣವನ್ನು ಮುಂದಿಟ್ಟುಕೊಂಡು ಜನರ ಹಾದಿ ತಪ್ಪಿಸುವ ಯತ್ನವಾಗಿ ಚುನಾವಣಾ ಗಿಮಿಕ್ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಕೊಡಗಿನ ಮತದಾರರು ಪ್ರಜ್ಞಾವಂತರಾಗಿದ್ದು, ಬಿಜೆಪಿಯ ಈ ರೀತಿಯ ಕ್ಷುಲ್ಲಕ ರಾಜಕಾರಣಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ…

Read More

ವಿರಾಜಪೇಟೆ ಏ.20 NEWS DESK : ಕಾವೇರಿ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಇರ್ಪುವಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಎನ್.ಎಸ್.ಎಸ್. ಸ್ವಯಂ ಸೇವಾ ವಿದ್ಯಾರ್ಥಿಗಳು ಇರ್ಪು ಶ್ರೀ ರಾಮೇಶ್ವರ ದೇವಸ್ಥಾನದ ಆವರಣ, ಹಿಂಭಾಗದ ನದಿ ಪ್ರದೇಶದ ಹಾಗೂ ಇರ್ಪು ಫಾಲ್ಸ್ ಬಳಿಯೂ ಸ್ವಚ್ಛ ಗೊಳಿಡಿದರು. ಅಲ್ಲಲ್ಲಿ ಎಸೆದಿದ್ದ ಪ್ಲಾಸ್ಟಿಕ್, ಪೇಪರ್ಸ್, ನೀರಿನ ಬಾಟಲಿಗಳು ಮುಂತಾದ ಕಸವನ್ನು ತೆಗೆದರು. ವಿದ್ಯಾರ್ಥಿಗಳ ಈ ಸೇವಾ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಬಿ.ಬಿ.ಸುನಿಲ್ ಕುಮಾರ್, ಉಪನ್ಯಾಸಕರಾದ ಬೋಜಮ್ಮ, ಕನ್ನಿಕಾ, ಶ್ರೀಮಂಗಲದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ಹಾಜರಿದ್ದರು. ಸುಮಾರು 60 ಎನ್.ಎಸ್.ಎಸ್. ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಏ.20 NEWS DESK : ಬಿಜೆಪಿ ಕಾರ್ಯಕರ್ತರಲ್ಲಿ ಭಯದ ವಾತಾವರಣ ಸೃಷ್ಟಿಸಿ ಮನೋಸ್ಥೈರ್ಯವನ್ನು ಕುಗ್ಗಿಸುವ ಯತ್ನ ರಾಜ್ಯಾವ್ಯಾಪಿ ನಡೆಯುತ್ತಿದ್ದು, ವಾಲ್ನೂರಿನಲ್ಲಿ ನಡೆದ ಅಪಘಾತ ಪ್ರಕರಣ ಇದರ ಒಂದು ಭಾಗವಾಗಿದೆ. ಇದಕ್ಕೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಗಂಭೀರ ಆರೋಪ ಮಾಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ತಳೂರು ಕಿಶೋರ್ ಕುಮಾರ್, ವಾಲ್ನೂರಿನಲ್ಲಿ ನಡೆದಿರುವುದು ಆಕಸ್ಮಿಕ ಘಟನೆಯಲ್ಲ, ಉದ್ದೇಶಪೂರ್ವಕ ಅಪಘಾತವಾಗಿದ್ದು, ಬಿಜೆಪಿ ಕಾರ್ಯಕರ್ತ ರಾಮಪ್ಪ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇದನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದರು. ಈ ಘಟನೆ ಆಕಸ್ಮಿಕವೇ ಆಗಿದ್ದರೆ ಅಪಘಾತ ಮಾಡಿದವರು ಪರಾರಿಯಾಗದೆ ಗಾಯಾಳುಗಳಿಗೆ ನೆರವಾಗುತ್ತಿದ್ದರು. ಬಿಜೆಪಿ ಅಪಘಾತ ಪ್ರಕರಣದ ಲಾಭ ಪಡೆಯುತ್ತಿದೆ ಎನ್ನುವ ಮೂಲಕ ಕಾಂಗ್ರೆಸ್ ಈ ರೀತಿಯ ದಾಳಿಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಭಯದ ವಾತಾವರಣ ಸೃಷ್ಟಿಯಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ಕೊಡಗು…

Read More

ಮಡಿಕೇರಿ ಏ.20 NEWS DESK :  ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್.‌ಎಸ್.‌ಎಸ್ ಘಟಕದ ವತಿಯಿಂದ “ನಮ್ಮ ನಡೆ ಮತಗಟ್ಟೆಯ ಕಡೆ” ಮತದಾನ ಜಾಗೃತಿ ಅಭಿಯಾನ ನಡೆಯಿತು. ಜಾಥಕ್ಕೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಬಿ.ಕಾವೇರಿಯಪ್ಪ  ಚಾಲನೆ ನೀಡಿ ಮಾತನಾಡಿ,  ಪ್ರತಿಯೊಬ್ಬ ಭಾರತೀಯನ್ನು ಮತದಾನದಲ್ಲಿ ಭಾಗವಹಿಸಬೇಕು. ಭಾರತದ ಪ್ರಜಾಪ್ರಭುತ್ವ ದೇಶ. ಮತದಾನ ಇದರ ತಿರುಳು 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನದಲ್ಲಿ ಭಾಗವಹಿಸುವ ಅವಕಾಶವನ್ನು ಸಂವಿಧಾನದ ನೀಡಿದೆ.ಅದ್ದರಿಂದ ಮತದಾನದಲ್ಲಿ ತಪ್ಪದೆ ಭಾಗವಹಿಸಿ ಮತದಾನ ಯಶಸ್ವಿ ನಾವು ಪ್ರಯತ್ನಿಸೋಣ ಹಾಗೂ ಇತರಿಗೂ ತಿಳಿಸೋಣ ಎಂದು ತಿಳಿಸಿದರು. ಯೋಜನಾಧಿಕಾರಿ ವನಿತ್ ಕುಮಾರ್ ಹಾಜರಿದ್ದರು. ಕಾವೇರಿ ಕಾಲೇಜಿನಿಂದ ಆರಂಭಗೊಂಡ ಜಾಥಾವು  ಗೋಣಿಕೊಪ್ಪಲು- ವಿರಾಜಪೇಟೆ ಮುಖ್ಯ ರಸ್ತೆಯ ಮೂಲಕ ಸಾಗಿ ಖಾಸಗಿ ಬಸ್ ನಿಲ್ದಾಣ ವರಗೆ ಜಾಥ ನಡೆಸಲಾಯಿತು.

Read More

ಮಡಿಕೇರಿ ಏ.20 NEWS DESK : ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಪ್ರತಿಷ್ಠಿತ 24ನೇ ಕುಂಡ್ಯೋಳಂಡ ಹಾಕಿ ಹಬ್ಬದ ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯಾವಳಿಯು ಏ.27 ಮತ್ತು ಏ.28 ರಂದು ನಡೆಯಲಿದೆ. ಎರಡು ದಿನ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ಕುಂಡ್ಯೋಳಂಡ ಎ.ನಾಣಯ್ಯ ವಹಿಸಲಿದ್ದಾರೆ. ಏ.27 ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸೆಮಿ ಫೈನಲ್ ಪಂದ್ಯಾವಳಿಯ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚೆಪ್ಪುಡಿರ ಮೊಣ್ಣಪ್ಪ ಪೂಣಚ್ಚ ಪಾಲ್ಗೊಳ್ಳಲಿದ್ದು, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಉಪಸ್ಥಿತರಿರುವರು. ಎರಡನೇ ಪಂದ್ಯದ ಅತಿಥಿಯಾಗಿ ಡಾ.ಕಲಿಯಾಟಂಡ ಚಿಣ್ಣಪ್ಪ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮೇ.ಜ.ಬಾಚಮಂಡ ಎ.ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳು, ಪಂದ್ಯಾವಳಿಯಲ್ಲಿ ಕಾರ್ಯನಿರ್ವಹಿಸಿದ ಅಂಪೈರ್‍ಗಳು, ತಾಂತ್ರಿಕವರ್ಗ ಮತ್ತು ಸಹಕಾರ ನೀಡಿದ ಎಲ್ಲರನ್ನು ಅಭಿನಂದಿಸಿ ಗೌರವಿಸಲಾಗುವುದು. ಏ.28 ರಂದು ಬೆಳಿಗ್ಗೆ 10.30…

Read More

ಮಡಿಕೇರಿ ಏ.20 NEWS DESK : ಇತ್ತೀಚೆಗೆ ವಾಲ್ನೂರು ಗ್ರಾಮದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ರಾಮಪ್ಪ ಅವರ ಕುಟುಂಬಕ್ಕೆ ಬಿಜೆಪಿ ವತಿಯಿಂದ ರೂ.10 ಲಕ್ಷ ಮತ್ತು ಇಬ್ಬರು ಗಾಯಾಳುಗಳಿಗೆ ತಲಾ 2ಲಕ್ಷ ರೂ. ನೀಡಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ತಳೂರು ಕಿಶೋರ್ ಕುಮಾರ್ ತಿಳಿಸಿದ್ದಾರೆ.

Read More

ನಾಪೋಕ್ಲು ಏ.20 NEWS DESK : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಾಪೋಕ್ಲುವಿನಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು. ಈ ಸಂದರ್ಭ ಮಾತನಾಡಿದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್, ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ .ಯುವಕರಿಗೆ ಉದ್ಯೋಗ ಪೂರೈಸಿಲ್ಲ. ಮೀಸಲಾತಿಯನ್ನು ಕಿತ್ತು ಹಾಕಿದ್ದಾರೆ. ಸಂವಿಧಾನ ಬದಲಾಯಿಸುವುದೇ ಬಿಜೆಪಿಯ ಮುಖ್ಯ ಕಾರ್ಯಕ್ರಮವಾಗಿದೆ. ಬಿಜೆಪಿ ಸರ್ಕಾರದಲ್ಲಿ ಸರ್ವಾಧಿಕಾರಿ ನಡೆಯುತ್ತಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಜನ ಮಾನಸದಲ್ಲಿ ಉಳಿದಿವೆ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ನೀಡಿದ್ದ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಅತ್ಯಧಿಕ ಮತಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭ ಡಿಸಿಸಿ ಅಧ್ಯಕ್ಷ ಧರ್ಮಜಾ…

Read More

ಮಡಿಕೇರಿ ಏ.20 NEWS DESK : ಕೆಎಸ್‌ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿರಾಜಪೇಟೆ-ಗೋಣಿಕೊಪ್ಪ ರಸ್ತೆಯ ಬಿಟ್ಟಂಗಾಲದಲ್ಲಿ ನಡೆದಿದೆ. ಗಿರೀಶ್ (25) ಮೃತ ದುರ್ದೈವಿಯಾಗಿದ್ದು, ದ್ವಿಚಕ್ರ ವಾಹನದಲ್ಲಿದ್ದ ಹನ್ನೊಂದು ವರ್ಷದ ದೀಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ನಾಪೋಕ್ಲು ಏ.20 NEWS DESK  : ಪಾಲೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಉತ್ಸವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪಾರ್ವತಿ-ಪರಮೇಶ್ವರ ಜೋಡು ದೇವರ ನೃತ್ಯಬಲಿ ನೆರವೇರಿತು. ಮಧ್ಯಾಹ್ನ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ತೀರ್ಥ ಪ್ರಸಾದ ವಿತರಣೆಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು . ಪಾಲೂರು ಗ್ರಾಮದಲ್ಲಿ ಒಂದು ವಾರಗಳ ಕಾಲ ಸಂಭ್ರಮದಿಂದ ಜರುಗಿದ ಉತ್ಸವದಲ್ಲಿ ಅಧಿಕ ಸಂಖ್ಯೆಯ ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು. ಎತ್ತುಪೆÇೀರಾಟ ಸೇರಿದಂತೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು. ಉತ್ಸವ ಸಮಿತಿಯ ಅಧ್ಯಕ್ಷ ಪೂದಾವಾಡ ಸುಜಯ್, ಕಾರ್ಯದರ್ಶಿ ಸೂದನ ಮದನ್, ಪಾರುಪತ್ತೆಗಾರ ಮನು ಸಮಿತಿಯ ಸದಸ್ಯರು, ಗ್ರಾಮದ ತಕ್ಕಮುಖ್ಯಸ್ಥರು, ಪಾಲ್ಗೊಂಡಿದ್ದರು. ಮುಖ್ಯ ಅರ್ಚಕ ದೇವಿಪ್ರಸಾದ್ ನೇತೃತ್ವದಲ್ಲಿ ತಂತ್ರಿಗಳಾಗಿ ಕೃಷ್ಣ ಪ್ರಸಾದ್ ಸತ್ಯಮೂರ್ತಿ, ಲೋಕೇಶ್ವಿ ಧಾರ್ಮಿಕ ವಿಧಿ ವಿಧಾನವನ್ನು ನೆರವೇರಿಸಿಕೊಟ್ಟರು. ತೆಂಗಿನಕಾಯಿಗೆ ಗುಂಡು ಹೊಡೆಯುವುದು, ದೇವರ ದರ್ಶನ, ಹರಿಶ್ಚಂದ್ರದಲ್ಲಿ ದೇವರ ಅವಭೃತ ಸ್ನಾನ, ದೀಪಾಲಂಕಾರ, ಮಹಾಪೂಜೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು ವಿಷ್ಣುಮೂರ್ತಿ ಕೋಲ, ಮೇಲೇರಿಯೊಂದಿಗೆ…

Read More

ಮಡಿಕೇರಿ ಏ.20 NEWS DESK : ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ನಡೆದ ಅಪಘಾತ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ರಾಮಪ್ಪ ಅವರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ದೌರ್ಜನ್ಯ ಮತ್ತು ಅಪರಾಧ ಪ್ರಕರಣಗಳು ಅಧಿಕವಾಗಿದೆ ಎಂದು ಆರೋಪಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಪಕ್ಷದ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ವಕ್ತಾರರಾದ ಸುಬ್ರಮಣ್ಯ ಉಪಾಧ್ಯಾಯ, ತಳೂರು ಕಿಶೋರ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ವಿವಿಧ ಘಟಕಗಳ ಪದಾಧಿಕಾರಿಗಳು, ನಗರಸಭೆಯ ಬಿಜೆಪಿ ಸದಸ್ಯರುಗಳು ಹಾಗೂ ಕಾರ್ಯಕರ್ತರು…

Read More