ಮಡಿಕೇರಿ ಏ.20 NEWS DESK : ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಮತದಾರರಿಗೆ ತಿಳಿಸಿ, ಪಕ್ಷದ ಗೆಲುವಿಗೆ ಶ್ರಮಿಸುವಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು. ಲೋಕಸಭಾ ಚುನಾವಣ ಹಿನ್ನೆಲೆ ನಗರದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಬೈಕ್ ಹಾಗೂ ಆಟೋ ಜಾಥಾದ ಮೂಲಕ ಬಿರುಸಿನ ಮತಪ್ರಚಾರದಲ್ಲಿ ಮಾತನಾಡಿದರು. ನಮ್ಮ ಸರಕಾರ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದೆ. ಇದನ್ನು ಮತದಾರರಿಗೆ ತಿಳಿಸಿ ಮತ ಹಾಕಿಸುವಂತಾಗಬೇಕು. ಕಾರ್ಯಕರ್ತರು ಪಕ್ಷದ ಶಕ್ತಿ. ಭಿನ್ನಭಿಪ್ರಾಗಳನ್ನು ಬದಿಗೊತ್ತಿ ಎಲ್ಲರೂ ಒಂದಾಗಿ ಕಾಂಗ್ರೆಸ್ ಅಭ್ಯಥಿ ಲಕ್ಷ್ಮಣ್ ಅವರನ್ನು ಗೆಲ್ಲಿಸಬೇಕು ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಚುನಾವಣೆಯಲ್ಲಿ ಉತ್ಸಾಹದಿಂದ ಕಾರ್ಯಕರ್ತರು ಕೆಲಸ ಮಾಡಬೇಕು. ದೇಶ, ರಾಜ್ಯಕ್ಕೆ ನೀಡಿರುವ ಕಾಂಗ್ರೆಸ್ ಕೊಡುಗೆಯನ್ನು ಮನೆ ಮನೆಗೆ ತಲುಪಿಸಬೇಕು. ಮೂಲಭೂತ ಸೌಲಭ್ಯ, ಆಹಾರ ಕೊರತೆಯಿಂದ ಹಿಂದುಳಿದ್ದ ಭಾರತವನ್ನು ಅಭಿವೃದ್ಧಿ ಕಡೆಗೆ ಕೊಂಡೊಯ್ದಿದ್ದು, ಕಾಂಗ್ರೆಸ್ ಸರಕಾರ ಎಂದರು. ವಿಧಾನ ಪರಿಷತ್ತು ಮಾಜಿ ಸದಸ್ಯೆ ಶಾಂತೆಯಂಡ ವೀಣಾ…
ಲೇಖಕ: admin
ಮಡಿಕೇರಿ ಏ.20 NEWS DESK : ಸಿದ್ದಾಪುರ ಗ್ರಾ.ಪಂ ಅಧ್ಯಕ್ಷರಾದ ಪ್ರೇಮಾ ಗೋಪಾಲ, ಸದಸ್ಯರಾದ ಅಭಿತಾ, ಮೀನಾ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮೂವರಿಗೆ ಸಾಲು ಹೊದಿಸಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಏ.19 NEWS DESK : ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ಗುರುವಾರ ರಾತ್ರಿ ಅಪಘಾತದಿಂದ ಬಿಜೆಪಿ ಕಾರ್ಯಕರ್ತ ರಾಮಪ್ಪ (68) ಅವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ನಿವಾಸಿಗಳಾದ ವಾಹನದ ಮಾಲೀಕ ಮಹಮ್ಮದ್ ಹರ್ಷದ್ (26) ಹಾಗೂ ವಾಹನದ ಚಾಲಕ ಶೌಕತ್ ಅಲಿ (32) ಎಂಬುವವರನ್ನು ದಸ್ತಗಿರಿ ಮಾಡಲಾಗಿದೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಂಡು ತನಿಖೆಯನ್ನು ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಎಸ್‌ಪಿ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್.ಸುಂದರ್ ರಾಜ್, ಮಡಿಕೇರಿ ವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್ ಎಸ್, ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಸಿದ್ದಾಪುರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ಮಡಿಕೇರಿ ಏ.19 NEWS DESK : ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾರತದ ರಾಜಮನೆತನಗಳಲ್ಲಿ ಪ್ರತಿಷ್ಠಿತವಾದ ಮೈಸೂರು ರಾಜವಂಶಸ್ಥ ಕುಟುಂಬದವರು. ಮೈಸೂರಿನ ಹೆಸರಾಂತ ಮಹಾರಾಜರಾಗಿದ್ದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಮರಿ ಮೊಮ್ಮಗನಾಗಿರುವ ಯದುವೀರ್ ಮೈಸೂರಿನ ಮಹಾರಾಜ ಎಂದೇ ರಾಜಮನೆತನದಲ್ಲಿ, ಜನಮಾನಸದಲ್ಲಿ ಖ್ಯಾತಿ ಪಡೆದಿದ್ದಾರೆ. ಬೆಂಗಳೂರಿನ ವಿದ್ಯಾನಿಕೇತನ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಯದುವೀರ್ ತರುವಾಯ ಕೆನಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಶಿಕ್ಷಣ ಪಡೆದು, ಅಮ್ ರೆಸ್ಟ್ ನ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲೀಷ್ ಇತಿಹಾಸ ಮತ್ತು ಎಕಾನಾಮಿಕ್ಸ್ ನಲ್ಲಿ ಪದವಿ ಪಡೆದಿದ್ದಾರೆ. ತನ್ನ 23 ನೇ ವಯಸ್ಸಿನಲ್ಲಿಯೇ ಮೈಸೂರು ರಾಜಮನೆತನದ 27ನೇ ಮಹಾರಾಜರಾಗಿ ಅಧಿಕಾರ ಪಡೆದ ಯದುವೀರ್ ಅಂದಿನಿಂದ ಇಂದಿನವರೆಗೂ ರಾಜಪರಂಪರೆಗೆ ಚ್ಯುತಿ ಬಾರದಂತೆ ಜನಸೇವೆ ಮತ್ತು ಸಮಾಜಸೇವೆ ಮಾಡಿಕೊಂಡು ಬಂದಿದ್ದಾರೆ. ವಿಶ್ವವಿಖ್ಯಾತವಾಗಿರುವ ಮೈಸೂರು ದಸರಾ ಖಾಸಗಿ ದರ್ಬಾರ್ ನ್ನು 2015 ರಿಂದಲೂ ಯದುವೀರ್ ಪರಂಪರೆಗೆ ದಕ್ಕೆ ಬಾರದಂತೆ ನಿರ್ವಹಿಸಿಕೊಂಡು ಬಂದಿರುವುದು ಕೂಡ ಈ ತರುಣನ ಚಾಕಚಕ್ಯತೆಗೆ ಉದಾಹರಣೆಯಾಗಿದೆ. ಯದುವೀರ್…
ಮಡಿಕೇರಿ ಏ.19 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕರೂ ಆದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಿದ್ದಾಪುರ ಆಸ್ಪತ್ರೆಗೆ ಭೇಟಿ ನೀಡಿ ಅಪಘಾತದಲ್ಲಿ ಮೃತಪಟ್ಟ ರಾಮಪ್ಪ ಅವರ ಅಂತಿಮ ದರ್ಶನ ಪಡೆದು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಡಿಕೇರಿ ಏ.19 NEWS DESK : ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ಗುರುವಾರ ರಾತ್ರಿ ಅಪಘಾತದಿಂದ ಬಿಜೆಪಿ ಕಾರ್ಯಕರ್ತ ರಾಮಪ್ಪ (68) ಅವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಬಂಧಿಸಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿದವು. ಕಾರು ಡಿಕ್ಕಿಪಡಿಸಿ ಪರಾರಿಯಾದ ಆರೋಪಿಗಳ ಪೈಕಿ ಒಬ್ಬನನ್ನು ಮಾತ್ರ ಬಂಧಿಸಲಾಗಿದೆ. ಉಳಿದವರನ್ನು ತಕ್ಷಣ ಬಂಧಿಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು ರಸ್ತೆ ತಡೆ ಪ್ರತಿಭಟನೆ ನಡೆಸಿ ರಾಮಪ್ಪ ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದರು. ::: ಯದುವೀರ್ ಭೇಟಿ ::: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಮಾಜಿ ಶಾಸಕರುಗಳಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ವಿಧಾನ…
ಮಡಿಕೇರಿ ಏ.19 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಂಚೆ ಸೌಲಭ್ಯ ಕೇಂದ್ರ ಸ್ಥಾಪಿಸಲು ಚುನಾವಣಾ ಆಯೋಗದಿಂದ ನಿರ್ದೇಶನ ನೀಡಲಾಗಿರುತ್ತದೆ. ಅದರಂತೆ 21-ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-12 ರಲ್ಲಿ ನೀಡಲಾದ ಅರ್ಜಿಗಳಿಗೆ ಮತ ಚಲಾಯಿಸಲು ಸೌಲಭ್ಯವನ್ನು ಒದಗಿಸಬೇಕಾಗಿರುತ್ತದೆ. ಈ ಮತದಾರರಿಗೆ ಅನುಕೂಲವಾಗುವಂತೆ ಅಂಚೆ ಮತದಾನ ಸೌಲಭ್ಯ ಕೇಂದ್ರವನ್ನು (ಪೋಸ್ಟಲ್ ಬ್ಯಾಲೆಟ್ ಫೆಸಿಲಿಟೇಷನ್ ಸೆಂಟರ್) ವಿರಾಜಪೇಟೆ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದು, ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿ/ಸಿಬ್ಬಂದಿಗಳಿಗೆ ಏ.20, ಏ. 21 ಮತ್ತು ಏ.22 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿರಾಜಪೇಟೆ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುವುದರಿಂದ ಅಂಚೆ ಮತದಾರರು ತಪ್ಪದೆ ಮತ ಚಲಾಯಿಸುವಂತೆ 209 ವಿರಾಜಪೇಟೆ ವಿಧಾನಸಭಾ ಕ್ಷೇತ್ರ, 21 ಮೈಸೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ…
ಮಡಿಕೇರಿ ಏ.19 NEWS DESK : ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಏ.20 ರಂದು ಜಿಲ್ಲಾ ಸಮಾವೇಶ ಮತ್ತು ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಎಂ.ಅಬ್ದುಲ್ ರಶೀದ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಒಕ್ಕೂಟದ ಉಪಾಧ್ಯಕ್ಷ ರಫೀಕ್ ಅಲಿ, ಜಿಲ್ಲಾ ಉಸ್ತುವಾರಿಗಳಾದ ಲೋಕೇಶ್, ಭಾರತೀಶ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು. ಒಕ್ಕೂಟವು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಲಿದೆ. ಕಾಲೇಜಿನಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಒಕ್ಕೂಟದ ಗಮನಕ್ಕೆ ತಂದರೆ ಶಾಸಕರ ಮೂಲಕ ಪರಿಹರಿಸುವ ಕೆಲಸವನ್ನು ಒಕ್ಕೂಟ ಮಾಡಲಿದೆ. ಏ.20 ರಂದು ನಡೆಯುವ ಸಮಾವೇಶ ಮತ್ತು ಪದಗ್ರಹಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಖಲೀಲ್ ಅಹಮ್ಮದ್, ಪ್ರಧಾನ…
ಮಡಿಕೇರಿ ಏ.19 NEWS DESK : ಕಳೆದ ಹತ್ತು ವರ್ಷಗಳಲ್ಲಿ ಭಾರತೀಯ ಸೇನೆಗೆ ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಗಳು ಸೈನಿಕರು, ಮಾಜಿ ಸೈನಿಕರು ಹಾಗೂ ಅವರ ಕುಟುಂಬ ವರ್ಗದ ಅಭ್ಯುದಯಕ್ಕೆ ಪೂರಕವಾಗಿದೆ. ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕೆನ್ನುವುದು ಎಲ್ಲರ ಅಭಿಲಾಷೆ ಎಂದು ಬಿಜೆಪಿ ಸೈನಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಮೇಜರ್ ಓಡಿಯಂಡ ಎಸ್.ಚಿಂಗಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಸುಮಾರು ಹತ್ತು ಸಾವಿರದಿಂದ ಹದಿನೈದು ಸಾವಿರದವರೆಗೆ ಮಾಜಿ ಸೈನಿಕರು, ವಿಧವೆಯರು ಹಾಗೂ ಸೈನಿಕರ ಅವಲಂಬಿತರು ವಾಸವಿದ್ದಾರೆ. ಹಲವು ಅವಕಾಶಗಳಿಂದ ವಂಚಿತರಾಗಿದ್ದ ಇವರಿಗೆ ಕೇಂದ್ರ ಸರಕಾರದ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೊಡಗಿನಲ್ಲಿ ಕಳೆದ 8 ವರ್ಷಗಳಿಂದ ಬಿಜೆಪಿ ಸೈನಿಕ ಪ್ರಕೋಷ್ಠ ಕಾರ್ಯನಿರ್ವಹಿಸುತ್ತಿದೆ ಎಂದರು. ಸುಮಾರು 500 ಸೈನಿಕರ, ಮಾಜಿ ಸೈನಿಕರ ಮನೆ ಮನೆಗೆ ಭೇಟಿ ನೀಡಿರುವ ಪ್ರಕೋಷ್ಠ, 100ಕ್ಕೂ ಹೆಚ್ಚು ಸಭೆ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹತ್ತು ಹಲವು ಯೋಜನೆಯ…
ವಿರಾಜಪೇಟೆ ಏ.19 NEWS DESK : ಹಣದಿಂದ ಜೀವವನ್ನು ಉಳಿಸಲು ಸಾಧ್ಯವಿಲ್ಲ. ರಕ್ತದಾನದಿಂದ ಮಾತ್ರ ಜೀವವನ್ನು ಉಳಿಸಲು ಸಾಧ್ಯ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಾಕರ್ ಅಭಿಪ್ರಾಯಪಟ್ಟರು. ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ, ಎನ್. ಎಸ್. ಎಸ್ ಘಟಕಗಳು, ಮೈಸೂರಿನ ಸಂತ ಜೋಸೆಫರ ಆಸ್ಪತ್ರೆಯ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮಾನವನ ಜೀವನ ಸ್ವಾರ್ಥ ರಹಿತವಾಗಿರಬೇಕು. ಪ್ರತಿಯೊಬ್ಬರು ರಕ್ತದ ಮಾಲೀಕರಾಗಿದ್ದು, ಅದರ ಜೊತೆಯಲ್ಲಿ ರಕ್ತದಾನಿಗಳು ಆಗಬೇಕೆಂದರು. ಆರೋಗ್ಯ ಜಾಗೃತಿಯಲ್ಲಿ ರೆಡ್ ಕ್ರಾಸ್ ಮತ್ತು ಎನ್. ಎಸ್. ಎಸ್ ಘಟಕಗಳ ಕಾರ್ಯವೈಖರಿ ಶ್ಲ್ಯಾಘನೀಯವಾಗಿದೆ ಎಂದರು. ಮಾತ್ರವಲ್ಲದೆ ಆರೋಗ್ಯ ರಕ್ಷಣೆಗೆ ಎಲ್ಲರೂ ಮುಂದಾಗಬೇಕೆಂದು ಕರೆ ನೀಡಿದರು. ಮೈಸೂರಿನ ಸಂತ ಜೋಸೆಫರ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಘಟಕದ ಅಧಿಕಾರಿ ಮೊಹಮ್ಮದ್ ಇಬ್ರಾಹಿಂ ಮಾತನಾಡಿ, ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವವನ್ನು ವಿವರಿಸಿದರು. ರಕ್ತದಾನ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಸೆಂಟ್…






