ಲೇಖಕ: admin

ಮಡಿಕೇರಿ ಏ.19 NEWS DESK : ವಾಲ್ನೂರು ಗ್ರಾಮದಲ್ಲಿ ನಡೆದ ಅಪಘಾತ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಪಘಾತಗಳು ಆಕಸ್ಮಿಕವಾಗಿ ನಡೆಯುತ್ತದೆ, ತಪ್ಪು ಮಾಡಿದವರಿಗೆ ಶಿಕ್ಷೆ ನೀಡಲು ಕಾನೂನು ಇದೆ, ಬಂಧನವಾಗಲಿದೆ. ಆದರೆ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಅತ್ಯಂತ ಕೆಳಮಟ್ಟದ ರಾಜಕೀಯ ಮಾಡುತ್ತಿದೆ ಎಂದರು. ಅಪಘಾತ ಆಕಸ್ಮಿಕ ಎನ್ನುವುದು ದೊಡ್ಡ ಹುದ್ದೆಯಲ್ಲಿದ್ದ ಮಾಜಿ ಸ್ಪೀಕರ್, 25 ವರ್ಷಗಳಿಂದ ಶಾಸಕರಾಗಿದ್ದವರಿಗೆ ತಿಳಿದಿಲ್ಲವೇ, ರಸ್ತೆಯಲ್ಲಿ ನಿಂತು ಪ್ರತಿಭಟನೆ ಮಾಡಬೇಕೆ, ಅಪಘಾತ ನಡೆದರೆ ಕಾಂಗ್ರೆಸ್ ಶಾಸಕರಿಗೆ, ಪಕ್ಷಕ್ಕೆ ದಿಕ್ಕಾರ ಕೂಗುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು. ಜನರ ಹಾದಿ ತಪ್ಪಿಸಬಹುದೆನ್ನುವ ಭ್ರಮೆಯಲ್ಲಿ ಬಿಜೆಪಿ ಮಂದಿ ಇದ್ದಾರೆ, ಆದರೆ ಕೊಡಗಿನ ಜನ ಪ್ರಜ್ಞಾವಂತರಾಗಿದ್ದು, ಬಿಜೆಪಿಯ ಕ್ಷುಲ್ಲಕ ರಾಜಕಾರಣವನ್ನು ಬಲ್ಲವರಾಗಿದ್ದಾರೆ ಎಂದು ಧರ್ಮಜ ಉತ್ತಪ್ಪ ಹೇಳಿದರು.

Read More

ಮಡಿಕೇರಿ ಏ.19 : NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಗೆ 4 ಪಕ್ಷಗಳು ಬೆಂಬಲ ಘೋಷಿಸಿವೆ. ಇಂಡಿಯಾ ಒಕ್ಕೂಟದ ಭಾಗವಾಗಿ ಜಿಲ್ಲೆಯಲ್ಲೂ ಪಂಚ ಪಕ್ಷಗಳ ಸಮಿತಿಯೊಂದನ್ನು ರಚಿಸಿಕೊಂಡಿದ್ದು, ಒಗ್ಗಟ್ಟಾಗಿ ಕಾಂಗ್ರೆಸ್ ನ್ನು ಗೆಲ್ಲಿಸಲು ಶ್ರಮಿಸುವುದಾಗಿ ಮುಖಂಡರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ಬಿಜೆಪಿಯನ್ನು ಸೋಲಿಸಲೇಬೇಕೆಂದು ಪಣತೊಟ್ಟು ರಾಷ್ಟ್ರಮಟ್ಟದಲ್ಲಿ ಇಂಡಿಯಾ ಒಕ್ಕೂಟವನ್ನು ರಚಿಸಲಾಗಿದೆ. ಇದರ ಭಾಗವಾಗಿ ಕೊಡಗು ಜಿಲ್ಲೆಯಲ್ಲೂ ಕಾಂಗ್ರೆಸ್ ನೊಂದಿಗೆ ಆಮ್ ಆದ್ಮಿ ಪಾರ್ಟಿ, ಸಿಪಿಎಂ, ಸಿಪಿಐ ಮತ್ತು ಸಿಪಿಐಎಂಎಲ್ ಸೇರಿಕೊಂಡು ಪಂಚ ಪಕ್ಷಗಳ ಸಮಿತಿಯೊಂದನ್ನು ರಚಿಸಲಾಗಿದೆ ಎಂದರು. ದೇಶದಲ್ಲಿ ಬಿಜೆಪಿಯ ಸರ್ವಾಧಿಕಾರಿ ಆಡಳಿತವನ್ನು ಕೊನೆಗಾಣಿಸಬೇಕಾಗಿದೆ. ಬಡವರು, ಕಾರ್ಮಿಕರು, ಪರಿಶಿಷ್ಟರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ವಸತಿಹೀನರಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಮಾಡಬೇಕಾಗಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮತ್ತು ಸಮಸ್ಯೆಗಳಿಗೆ ಸ್ಪಂದಿಸುವ ಸಿದ್ದಾಂತವನ್ನು ಹೊದಿರುವ ಕಾಂಗ್ರೆಸ್ ಪಕ್ಷಕ್ಕೆ ನಾಲ್ಕು ಪಕ್ಷಗಳು ಬೆಂಬಲ ಸೂಚಿಸಿವೆ. ಈ…

Read More

ಮಡಿಕೇರಿ ಏ.19 NEWS DESK : ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ಬೈಕ್ ಜಾಥಾ ನಡೆಯಿತು. ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್ ನೇತೃತ್ವದಲ್ಲಿ ನಗರದ ಎವಿ ಶಾಲೆಯಿಂದ ಪ್ರಾರಂಭವಾದ ಜಾಥವು ಇಂದಿರಾ ಗಾಂಧಿ ವೃತ್ತವಾಗಿ ಸಾಗಿ, ಸುದರ್ಶನ ವೃತ್ತದಿಂದ ಹಿಂತಿರುಗಿ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಕೊನೆಗೊಂಡಿತು. ಈ ಸಂದರ್ಭ ಶಾಸಕರಾದ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Read More

ಸೋಮವಾರಪೇಟೆ ಏ.19 NEWS DESK : ಕೊಡಗು ಮತ್ತು ಹಾಸನ ಮಠಾಧಿಪತಿಗಳ ಪರಿಷತ್ತಿನ ಸ್ವಾಮೀಜಿಗಳು ಇಂದು ಮಳೆಗಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸೋಮವಾರಪೇಟೆ ತಾಲ್ಲೂಕಿನ ಪುಷ್ಪಗಿರಿ ಬೆಟ್ಟದ ತಪ್ಪಲಲ್ಲಿರುವ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಎರಡು ಜಿಲ್ಲೆಗಳ ಮಠಾಧೀಶರು ವಿಶೇಷ ಪ್ರಾರ್ಥನೆ ಸಲ್ಲಿಸಿ ಮಳೆ ನೀಡುವಂತೆ ಕೋರಿದರು. ಮಳೆ ಬಾರದೆ ಮಾನವ ಸಮೂಹ, ಪ್ರಾಣಿ, ಪಕ್ಷಿ, ಅರಣ್ಯ, ಕೃಷಿ ಕ್ಷೇತ್ರ, ಜಲಮೂಲಗಳು ಕಂಗಾಲಾಗಿವೆ. ಮುಂದೆಯೂ ಮಳೆ ಬಾರದೆ ಇದ್ದರೆ ಪರಿಸ್ಥಿತಿ ಕೈಮೀರಬಹುದು ಎನ್ನುವ ಆತಂಕ ಜನರನ್ನು ಕಾಡುತ್ತಿದೆ. ಈ ಕಾರಣದಿಂದ ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮಿಗಳ ನೇತೃತ್ವದಲ್ಲಿ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ರುದ್ರಾಭಿಷೇಕ, ಅಷ್ಟೋತ್ತರ, ಅರ್ಚನೆಯೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ, ದಾಸೋಹ ನಡೆಯಿತು. ಅರ್ಚಕರುಗಳಾದ ನಂದೀಶ್ ಶಾಸ್ತ್ರಿ, ಮೋಹನಮೂರ್ತಿ ಶಾಸ್ತ್ರಿ ಹಾಗೂ ಸೋಮಶೇಖರ ಶಾಸ್ತಿçಗಳಿಂದ ಪೂಜಾ ವಿಧಿವಿಧಾನಗಳು ನೆರವೇರಿತು. ಈ ಸಂದರ್ಭ ಮಾತನಾಡಿದ ಅರಮೇರಿ ಶ್ರೀಗಳು ಅಕ್ಕಪಕ್ಕದ ಗ್ರಾಮಗಳ ಜನರು, ರೈತಾಪಿ ವರ್ಗ…

Read More

ಮಡಿಕೇರಿ ಏ.19 NEWS DESK : ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮ ವ್ಯಾಪ್ತಿಯಲ್ಲಿ ಹುಲಿ ದಾಳಿಯಿಂದ ಅಸ್ಸಾಂ ಮೂಲದ ಕಾರ್ಮಿಕ ಮುಝೀದ್ ರೆಹಮಾನ್  ಮೃತಪಟ್ಟ ಸ್ಥಳಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ  ಸಂತಾಪ ವ್ಯಕ್ತಪಡಿಸಿದರು. ವನ್ಯಜೀವಿ ದಾಳಿ ತಡೆಗೆ ಸೂಕ್ತ ಕ್ರಮದ ಭರವಸೆ ನೀಡಿದರು. ಈ ಸಂದರ್ಭ ರೈತ ಸಂಘದ ಪ್ರಮುಖರು ಹಾಜರಿದ್ದು ವನ್ಯಜೀವಿ ದಾಳಿ ಮಿತಿ ಮೀರಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.

Read More

ಮಡಿಕೇರಿ ಏ.19 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷಣ್  ಅವರ  ಪರವಾಗಿ ಸೋಮವಾರಪೇಟೆ ಪಟ್ಟಣದಲ್ಲಿ ಇಂದು ಪರ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ ನಡೆಸಿದರು. ಸೋಮವಾರಪೇಟೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ವಿವಿಧ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಮತಯಾಚಿಸಿದರು. ಪಟ್ಟಣದಲ್ಲಿ ಸಾರ್ವಜನಿಕರು, ವರ್ತಕರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಿಳೆಯರಿಗೆ  ಮಾಹಿತಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಎ.ಯಾಕುಬ್, ಕಾಂಗ್ರೆಸ್ ಮುಖಂಡರು ವಕೀಲರಾದ ನಾಗೇಶ್, ಕಾಂಗ್ರೆಸ್ ಮುಖಂಡರಾದ ಆದಂ, ವೆಂಕಟೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶೀಲಾ ಡಿಸೋಜ, ಮಂಜುನಾಥ್, ಮೊಹಮ್ಮದ್ ಶಫಿ, ಝಮೀರ್, ಮೀನಾ ಕುಮಾರಿ, ಜಾಕೋಬ್ ಸೈಮನ್, ಕಿರಣ್, ಚೇತನ್ ಇತರರು ಉಪಸ್ಥಿತರಿದ್ದು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆ ನಡೆಸಿದರು.

Read More

ಮಡಿಕೇರಿ ಏ.19 NEWS DESK : ವಾಲ್ನೂರು ಗ್ರಾಮದಲ್ಲಿ ಗುರುವಾರ ರಾತ್ರಿ ಅಪಘಾತದಿಂದ ಬಿಜೆಪಿ ಕಾರ್ಯಕರ್ತ ರಾಮಪ್ಪ (68) ಅವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಬಂಧಿಸಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾರು ಡಿಕ್ಕಿಪಡಿಸಿ ಪರಾರಿಯಾದ ಆರೋಪಿಗಳ ಪೈಕಿ ಒಬ್ಬನನ್ನು ಮಾತ್ರ ಬಂಧಿಸಲಾಗಿದೆ. ಉಳಿದವರನ್ನು ತಕ್ಷಣ ಬಂಧಿಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು ರಸ್ತೆ ತಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕೆಂದು ಆಗ್ರಹಿಸಿದರು.

Read More

ಮಡಿಕೇರಿ ಏ.19 NEWS DESK : ವಾಲ್ನೂರಿನಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಸಿದ್ದಾಪುರ ನಗರ, ವಾಲ್ನೂರು ಗ್ರಾಮ, ಅರೆಕಾಡು ಗ್ರಾಮ, ನೆಲ್ಯಹುದಿಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಏ.19ರ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರಬಾರದು, ಪ್ರತಿಭಟನೆ, ಮೆರವಣಿಗೆ, ರಾಲಿ, ಜಾಥಾ ನಡೆಸಬಾರದು, ಪ್ರಚೋದನಾತ್ಮಕ ಘೋಷಣೆಗಳನ್ನು ಕೂಗಬಾರದೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Read More

ನಾಪೋಕ್ಲು ಏ.21 NEWS DESK : ಜಿಲ್ಲೆಯಲ್ಲಿ ಕೊಡವ ಹಾಕಿ ಉತ್ಸವದಂತೆ ಹಗ್ಗಜಗ್ಗಾಟ ಕ್ರೀಡೆಯೂ ಪ್ರಸಿದ್ಧಿ ಹೊಂದಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೆರ ಬಾಂಡ್ ಗಣಪತಿ ಹೇಳಿದರು. ಕೆಪಿಎಸ್ ಶಾಲೆಯ ಆಟದ ಮೈದಾನದಲ್ಲಿ ಬೊಟ್ಟೋಳಂಡ ಕುಟುಂಬಸ್ಥರು ಆಯೋಜಿಸಿದ್ದ ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮೊಟ್ಟ ಮೊದಲ ಬಾರಿ ಪೊನ್ನೋಲತಂಡ ಕುಟುಂಬಸ್ಥರು ಕೊಡವ ಹಗ್ಗಜಗ್ಗಾಟ ಕ್ರೀಡಾಕೂಟವನ್ನು ಆರಂಭಿಸಿದ್ದರು. ನಂತರದ ದಿನಗಳಲ್ಲಿ ಇದು ಹಾಕಿ ನಮ್ಮೆಯಂತೆ ಉನ್ನತ ಮಟ್ಟಕ್ಕೆ ಬೆಳೆಯುತ್ತಿದೆ,. ಈ ಬಾರಿ 9 ಮಹಿಳಾ ತಂಡಗಳು ಕೂಡ ಪಾಲ್ಗೊಂಡಿರುವುದು ವಿಶೇಷ ಎಂದರು. ಕೊಡವ ಜನಾಂಗದಲ್ಲಿ ಹಬ್ಬದ ರೂಪದಲ್ಲಿ ಕ್ರೀಡೆಯನ್ನು ಆಚರಿಸಲಾಗುತ್ತಿದೆ. ಮುಂದಿನ ವರ್ಷ ಐದು ತಂಡಗಳು ಸ್ಪರ್ಧೆ ಆಯೋಜಿಸಲು ಮುಂದೆ ಬಂದಿರುವುದು ಹೆಮ್ಮೆಯ ವಿಷಯ ಎಂದರು. ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಮಾತನಾಡಿ, ಕಕ್ಕಬ್ಬೆಯಲ್ಲಿ ಮೊದಲ ಬಾರಿಗೆ ಪೊನ್ನೋಲತಂಡ ಕುಟುಂಬಸ್ಥರು ಕೌಟುಂಬಿಕ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಿದರು. ಕೊಡವ…

Read More

ನಾಪೋಕ್ಲು ಏ.19 NEWS DESK : ಚೆರಿಯ ಪರಂಬುವಿನ ಜನರಲ್ ಕೆ.ಎಸ್.ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಂಡ್ಯೋಳಂಡ ಕಪ್ ಹಾಕಿ ನಮ್ಮೆಯ ಪಂದ್ಯಗಳಲ್ಲಿ ನೆಲ್ಲಮಕ್ಕಡ, ಕುಪ್ಪಂಡ, ಅರೆಯಡ, ಕುಲ್ಲೇಟಿರ, ಅಂಜಪರವಂಡ, ಕೊಕ್ಕಂಡ ತಂಡಗಳು ಜಯಭೇರಿ ಬಾರಿಸಿದವು. ನೆಲ್ಲಮಕ್ಕಡ ಮತ್ತು ಕರ್ತಮಾಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ನೆಲ್ಲಮಕ್ಕಡ 3- 0 ಅಂತರದಿಂದ ಕರ್ತಮಾಡ ವಿರುದ್ಧ ಭರ್ಜರಿ ಜಯಗಳಿಸಿತು. ಕುಪ್ಪಮಡ (ಕೈಕೇರಿ) ಬೊಪ್ಪಂಡ ವಿರುದ್ಧ 4- 0 ಅಂತರದಲ್ಲಿ ಗೆಲುವು ಸಾಧಿಸಿತು. ಅರೆಯಡ ಕರೋಟಿರ ವಿರುದ್ಧ 5-4 ಅಂತರದಲ್ಲಿ ಟೈ ಬ್ರೇಕರ್ ನಲ್ಲಿ ಗೆಲುವು ಸಾಧಿಸಿತು.ಕುಲ್ಲೇಟಿರ ಕಲಿಯಾಟಂಡ ವಿರುದ್ಧ 4-0 ಅಂತರದಲ್ಲಿ ಗೆಲುವು ದಾಖಲಿಸಿತು. ಅಂಜಪರವಂಡ ಮತ್ತು ಅಪ್ಪಚೆಟ್ಟೋಳಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಅಂಜಪರವಂಡ 3-1 ಅಂತರದ ಗೆಲುವು ದಾಖಲಿಸಿತು. ಕೊಕ್ಕಂಡ ಮುಕ್ಕಾಟಿರ ವಿರುದ್ಧ 2-0 ಅಂತರದಲ್ಲಿ, ಜಯ ಸಾಧಿಸಿತು.ಚೆರುಮಮದಂಡ ಬಲ್ಲಚಂಡ ವಿರುದ್ಧ ಟೈ ಬ್ರೇಕರ್ ನಲ್ಲಿ 5-4 ಅಂತರದಿಂದ ಜಯ ದಾಖಲಿಸಿದರೆ ಮಂಡೇಪಂಡ ನಾಗಂಡ ವಿರುದ್ಧ 5-0 ಅಂತರದ ಗೆಲುವು ದಾಖಲಿಸಿತು.…

Read More