ಲೇಖಕ: admin

ಮಡಿಕೇರಿ ಏ.18 NEWS DESK : ಆಕಸ್ಮಿಕವಾಗಿ ಕಾಡು ಹಂದಿ ನುಗ್ಗಿದ ಪರಿಣಾಮ ಬೈಕ್ ಬಿದ್ದು ಸವಾರ ಸಾವನ್ನಪ್ಪಿರುವ ಘಟನೆ ಪಾವಗಡ ತಾಲ್ಲೂಕಿನ ಶೈಲಾಪುರ ಮತ್ತು ಕೊಟಗುಡ್ಡ ಗ್ರಾಮಗಳ ಮಧ್ಯ ಮದ್ರೇನಹಳ್ಳಿ ಅರಣ್ಯ ಪ್ರದೇಶದ ಬಳಿ ನಡೆದಿದೆ. ಪಾವಗಡ ತಾಲ್ಲೂಕಿನ ಬೆಳ್ಳಿಬಟ್ಟಲು ಗ್ರಾಮದ ನಿವಾಸಿ ಗ್ರಾ.ಪಂ ಸದಸ್ಯ ಕೃಷ್ಣಪ್ಪ ಮೃತ ದುರ್ದೈವಿ. ಬುಧವಾರ ರಾತ್ರಿ 9ಗಂಟೆ ಸಮಯದಲ್ಲಿ ಅಚ್ಚಮ್ಮನಹಳ್ಳಿ ಗ್ರಾಮದಿಂದ ಬೆಳ್ಳಿಬಟ್ಟಲು ಗ್ರಾಮಕ್ಕೆ ಕೃಷ್ಣಪ್ಪ ಹಾಗೂ ಪತ್ನಿ ಗುಂಡಮ್ಮ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾಡು ಹಂದಿ ಆಕಸ್ಮಿಕವಾಗಿ ನುಗ್ಗಿದೆ. ಇದರ ಪರಿಣಾಮ ದಂಪತಿ ಬೈಕ್ ಸಹಿತ ರಸ್ತೆಗೆ ಬಿದ್ದಿದ್ದಾರೆ. ಇಬ್ಬರನ್ನು ಪಾವಗಡ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಕೃಷ್ಣಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Read More

ಮಡಿಕೇರಿ, ಏ.18 NEWS DESK  : ನಗರದ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದ ವತಿಯಿಂದ ಶ್ರೀ ರಾಮಮಂದಿರ ಟ್ರಸ್ಟ್, ಶ್ರೀರಾಮ ಸೇವಾ ಸಮಿತಿ, ಜ್ಯೋತಿ ಯುವಕ, ಕೋದಂಡ ರಾಮ ಭಜನಾ ಮಂಡಳಿ ಸಹಯೋಗದೊಂದಿಗೆ ದೇವಾಲಯದ ಪುನರ್ ಪ್ರತಿಷ್ಠಾಪನ ವಾರ್ಷಿಕೋತ್ಸವ ಹಾಗೂ ರಾಮನವಮಿ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದಲ್ಲಿ ಮುಂಜಾನೆ ತತ್ವ ಕಲಶ ಹೋಮ, ನವಗ್ರಹ ಹೋಮ, ತತ್ವ ಕಲಶಾಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿತು. ನಂತರ ದೇವಾಲಯದ ಆವರಣದಿಂದ ಉತ್ಸವ ಮೂರ್ತಿ ಹೊತ್ತ ಹೂವಿನ ಅಲಂಕೃತ ಮಂಟಪದೊಂದಿಗೆ ಹೊರಟ ಮೆರವಣಿಗೆಯು ಮಹಾದೇವಪೇಟೆಗಾಗಿ, ಚೌಕಿ, ಹಳೆ ಖಾಸಗಿ ಬಸ್ ನಿಲ್ದಾಣ, ಗಣಪತಿ ಬೀದಿಗಾಗಿ ಸಾಗಿ ದೇವಾಲಯಲ್ಲಿ ಸಮಾಪ್ತಿಗೊಂಡಿತು. ಮೆರವಣಿಗೆಯಲ್ಲಿ ಚಂಡೆ ವಾದ್ಯ ಗಮನ ಸೆಳೆಯಿತು. ಮಹಿಳೆಯರು ಕಲಶ ಹೊತ್ತ ತಂಡ, ಭಜನಾ ತಂಡ ಹಾಗೂ ದೇವಾಲಯದ ಆಡಳಿತ ಮಂಡಳಿ ಸದಸ್ಯರು, ಭಕ್ತಾದಿಗಳು ಮೆರವಣಿಗೆಯಲ್ಲಿ ಸಾಗಿದರು. ಮೆರವಣಿಗೆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಬಂದೋಬಸ್ತ್ ಕಲ್ಪಿಸಿತ್ತು. ಬಂಟಿಂಗ್ಸ್…

Read More

ಸುಂಟಿಕೊಪ್ಪ ಏ.18 NEWS DESK : ಕೆದಕಲ್ ಭದ್ರಕಾಳೇಶ್ವರಿ ದೇವಾಲಯದ ವತಿಯಿಂದ ವಿಷ್ಣುಮೂರ್ತಿ ದೇವರ ಕಟ್ಟಿತೆರೆ ಹಾಗೂ ಕೋಲಗಳು ಶ್ರದ್ಧಾಭಕ್ತಿಯಿಂದ ನಡೆಯಿತು. ತೆರೆಯ ಅಂಗವಾಗಿ ಭದ್ರಕಾಳೇಶ್ಚರಿ, ಈಶ್ವರ, ವಿಷ್ಣುಮೂರ್ತಿ ಹಾಗೂ ಅಜ್ಜಪ್ಪ ದೇವರ ಕೋಲ ಮತ್ತು ದರ್ಶನಗಳು ನಡೆದವು. ಇದೇ ಮೊದಲ ಬಾರಿಗೆ ವಿಷ್ಣುಮೂರ್ತಿಯ ಕಟ್ಟಿತೆರೆ ನಡೆದಿತ್ತು. ವಿಷ್ಣುಮೂರ್ತಿ ದೇವರಿಗೆ ತೆರೆ ಕಟ್ಟುವ ಮೊದಲು ತೆರೆಯನ್ನು ಕೆದಕಲ್ ಮುಖ್ಯ ರಸ್ತೆಯಲ್ಲಿ ಕೇರಳದ ಚಂಡೆ ವಾದ್ಯ ದೊಂದಿಗೆ ಮೆರವಣಿಗೆ ನಡೆಸಲಾಯಿತು. ರಾತ್ರಿ ಮಹಾಮಂಗಳಾರತಿ, ಭಂಡಾರ ಹಾಕುವುದು, ದೇವರ ಹರಕೆ ಸೇರಿದಂತೆ ವಿವಿಧ ಪೂಜಾ ಕೈಂಕಾರ್ಯಗಳು ನೆರವೇರಿತು. ಕೆದಕಲ್, ಬಾಳೆಕಾಡು, ಸುಂಟಿಕೊಪ್ಪ, ಹಾಲೇರಿ, ಬೋಯಿಕೇರಿ, ಮಡಿಕೇರಿ, ಕಾಂಡನಕೊಲ್ಲಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.  

Read More

ಸುಂಟಿಕೊಪ್ಪ ಏ.18 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡರಾಮ ದೇವಾಲಯದಲ್ಲಿ ರಾಮನವಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊದಂಡರಾಮ ಮಂದಿರದಲ್ಲಿ ಬೆಳಿಗ್ಗೆ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ಸ್ವಾಮಿಗೆ ಬೆಳ್ಳಿಯ ಕವಚವನ್ನು ಅಳವಡಿಸಿ, ವಿವಿಧ ರೀತಿಯ ಹೂವುಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ರಾಮನಿಗೆ ಪಂಚಾಮೃತ ಅಭಿಷೇಕ, ರಾಮತಾರಕ ಹೋಮ ನಡೆದು ಮಹಾಪೂಜೆ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿತರಿಸಲಾಯಿತು. ಪೂಜಾ ಕೈಂಕಾರ್ಯವನ್ನು ದೇವಾಲಯದ ಮುಖ್ಯ ಅರ್ಚಕ ಜಯಂತ್ ಭಟ್ ಅವರ ನೇತೃತ್ವದಲ್ಲಿ ಅರ್ಚಕರುಗಳಾದ ಗಣೇಶ್ ಉಪಾಧ್ಯಯ, ಮಂಜುನಾಥ್ ಭಟ್, ಮಂಜುನಾಥ್ ಉಡುಪ, ಗಣೇಶ್ ಭಟ್ ನೆರವೇರಿಸಿದರು. ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಘ್ನೇಶ್, ಪದಾಧಿಕಾರಿಗಳು ಗೌರಿ ಗಣೇಶೋತ್ಸವ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಬಿ.ಎಂ.ಸುರೇಶ್, ನಿಕಟಪೂರ್ವ ಕಾರ್ಯದರ್ಶಿ ಸುರೇಶ್ ಗೋಪಿ, ಮುಖಂಡರಾದ ಪಿ.ಆರ್.ಸುನಿಲ್‍ಕುಮಾರ್, ಧನುಕಾವೇರಪ್ಪ, ಶಾಂತರಾಮ್ ಕಾಮತ್, ರಾಮ ಸೇವಾ ಸಮಿತಿಯ ಅಶೋಕ್ ಶೇಟ್, ಪ್ರೀತಂ ಪ್ರಭಾಕರ್, ವಿಜಯ ಸೇರಿದಂತೆ ಮತ್ತಿತರರು…

Read More

ಸುಂಟಿಕೊಪ್ಪ ಏ.18 NEWS DESK : ಸುಂಟಿಕೊಪ್ಪದಲ್ಲಿ ಆಯೋಜಿಸಲಾದ ವಿಪಿ ಯೋಧ ಕ್ರಿಯೇಟಿವ್ ಅಕಾಡೆಮಿ ಮಾರ್ಷಲ್ ಆರ್ಟ್ ಅಂಡ್ ಫಿಟ್ನೆಸ್ ವತಿಯಿಂದ ಕರಾಟೆ ಬ್ಲಾಕ್‍ಬೆಲ್ಟ್ ಪರೀಕ್ಷೆಯನ್ನು ಪದವಿ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದು ಉತ್ತೀರ್ಣರಾದ ಪ್ರಮಾಣಪತ್ರ ಹಾಗೂ ಬ್ಲಾಕ್‍ಬೆಲ್ಟ್‍ಗಳನ್ನು ವಿತರಿಸಲಾಯಿತು. ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ವಿವಿಧ ಬೆಲ್ಟ್ ಸ್ಥಾನಗಳಿಗೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಒಟ್ಟು 40 ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸತೀಶ್, ಪ್ರಶಾಂತಿನಿ ದಂಪತಿಗಳ ಪುತ್ರ  ಕೆ.ಎಸ್.ಅಕ್ಷಯ್ ಬ್ಲಾಕ್ ಬೆಲ್ಟ್, ಎಫ್ ಎಂ ಸಿ ಕಾಲೇಜಿನ ದ್ವಿತೀಯ ಬಿ ಸಿ ಎ ವಿದ್ಯಾರ್ಥಿ ಡಾನ್ ದ್ವಿತೀಯ ಸ್ಥಾನ ಪಡೆದಿದ್ದಾನೆ. 7ನೇ ಹೊಸಕೋಟೆ ನಿವಾಸಿ ಎಚ್.ಎನ್.ಶ್ರೀಧರ್  ಹಾಗೂ ಅನಿತಾ ದಂಪತಿಗಳ ಪುತ್ರ ಎಸ್. ಅಂಕಿತ್ ಬ್ಲಾಕ್ ಬೆಲ್ಟ್,  ಎಫ್ ಎಂ ಸಿ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಡಾನ್ ದ್ವಿತೀಯ. ಕೊಡಗರಹಳ್ಳಿ ಅಂದಗೋವೆಯ ವಲ್ಲಂಡ ಕಾಶಿಯಪ್ಪ ಹಾಗೂ ವಲ್ಲಂಡ ಗೌರಮ್ಮ ಅವರ ಪುತ್ರಿ ವಲ್ಲಂಡ ಕೆ.ಹರಿಪ್ರಿಯ ಬ್ಯಾಕ್ ಬೆಲ್ಟ್, ಇವಳು ಸಂತ…

Read More

ಮಡಿಕೇರಿ ಏ.17 NEWS DESK : ಕೊಡಗು ಮತ್ತು ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರು ಇಂದು ನಗರದಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಮೈಸೂರು-ಕೊಡಗು ರೈಲು ಸಂಪರ್ಕ, ಐಟಿ-ಬಿಟಿ ಕಂಪೆನಿಗಳಲ್ಲಿ ಕೊಡಗಿನವರಿಗೆ ಆದ್ಯತೆ, ಸಮಗ್ರ ನೀರು ಸರಬರಾಜು ವ್ಯವಸ್ಥೆ, ಪಿರಿಯಾಪಟ್ಟಣದಲ್ಲಿ ಕೃಷಿ ಸಂಶೋಧನಾ ಕೇಂದ್ರ, ಮಡಿಕೇರಿಯಲ್ಲಿ ವೈದ್ಯಕೀಯ ಟ್ರಾಮಾ ಕೇಂದ್ರ ಸ್ಥಾಪನೆ, ಸೋಮವಾರಪೇಟೆಯಲ್ಲಿ ಟೆಕ್ನಾಲಜಿ ಪಾರ್ಕ್, ಕಾಫಿ ಮತ್ತು ಕರಿಮೆಣಸು ಬೆಳೆಗಾರರ ಸಮಸ್ಯೆಗೆ ಪರಿಹಾರ, ಮಡಿಕೇರಿಯಲ್ಲಿ ಮಿನಿ ಏರ್‍ಪೋರ್ಟ್, ಯೋಗ ಶಾಲೆಗಳ ಸ್ಫಾಪನೆ, ಕ್ರೀಡಾಭಿವೃದ್ಧಿ ಪ್ರಾಧಿಕಾರ ಪ್ರಾರಂಭ, ಹುಣಸೂರಿನಲ್ಲಿ ಸೆಂಟ್ರಲ್ ಯೂನಿವರ್ಸಿಟಿ ಸ್ಥಾಪನೆ, ವಿರಾಜಪೇಟೆಯಲ್ಲಿ ಕಂಪ್ಯೂಟರ್ ಹಾರ್ಡ್‍ವೇರ್ ಕೇಂದ್ರ ಆರಂಭ, ಗೋಣಿಕೊಪ್ಪಲುವಿನಲ್ಲಿ ಕಾಫಿ ರಫ್ತು ಕೇಂದ್ರ ಸೇರಿದಂತೆ ವಿವಿಧ ಯೋಜನೆಗಳ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ ಎಂದು ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಹೇಳಿದರು. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಇಂದು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಲಕ್ಷ್ಮಣ್ ಗೌಡ ಹೇಳಿದರು. ಈ…

Read More

ಸೋಮವಾರಪೇಟೆ ಏ.17  NEWS DESK : ಶ್ರೀ ರಾಮನವಮಿ ಉತ್ಸವ ಸಮಿತಿ ಮತ್ತು ಹಿಂದುಜಾಗರಣಾ ವೇದಿಕೆ ವತಿಯಿಂದ ಆಂಜನೇಯ ದೇವಾಲಯದಲ್ಲಿ ಶ್ರೀ ರಾಮನವಮಿ ಆಚರಿಸಲಾಯಿತು. ಪಟ್ಟಣದ ರಾಮಮಂದಿರದಲ್ಲಿ ರಾಮನವಮಿ ಅಂಗವಾಗಿ ಮುಂಜಾನೆಯಿಂದಲೇ ವಿಶೇಷ ಪೂಜೆ, ಹೋಮಹವನ ನಡೆಯಿತು. ದೇವಾಲಯದಲ್ಲಿ ಭಕ್ತಾದಿಗಳಿಗೆ ಪಾನಕ ಮತ್ತು ಪ್ರಸಾದ ವಿನಿಯೋಗ ನಡೆಯಿತು. ಮತ್ತು ನೆರೆದಿದ್ದ ಭಕ್ತಾದಿಗಳಿಗೆ ಅನ್ನದಾನ ನಡೆಯಿತು. ಪಟ್ಟಣದ ಬಸ್ ನಿಲ್ದಾಣ ಮತ್ತು ಮಹಾತ್ಮಗಾಂಧಿ ವೃತ್ತದ ಬಳಿ ಸಾರ್ವಜನಿಕರಿಗೆ ಪಾನಕ ವಿತರಿಸಲಾಯಿತು. ರಾಮನವಮಿ ಶೋಭ ಯಾತ್ರೆ, ಶಾಂತಿಯುವವಾಗಿ ನಡೆಯಲು ಡಿವೈಎಸ್‍ಪಿ ಗಂಗಾಧರಪ್ಪ ಮತ್ತು ಇನ್ಸ್‍ಪೆಕ್ಟರ್ ವಸಂತ್ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ನಡೆಯಿತು.

Read More

ಮಡಿಕೇರಿ ಏ.17 NEWS DESK : ಇಂದಿರಾನಗರದ ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ 134ನೇ ವಾರ್ಷಿಕೋತ್ಸವವು ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ನಗರದ ಮುಖ್ಯ ಬೀದಿಗಳಲ್ಲಿ ದೇವಿಯ ಮೆರವಣಿಗೆ ನಡೆಯಿತು. ನಂತರ ಮನೆ ಮನೆಯಿಂದ ಪೂಜೆಯನ್ನು ದೇವಾಲಯಕ್ಕೆ ತಂದೊಪ್ಪಿಸಲಾಯಿತು. ರಾತ್ರಿ ಹೂವಿನವರ ಬೇಡುವುದು, ಮಹಿಳೆಯರು ಮನೆ, ಮನೆಯಿಂದ ಆರತಿಯನ್ನು ದೇವಾಲಯಕ್ಕೆ ತಂದೊಪ್ಪಿಸಿದರು. ದೇವಿಗೆ ಮಹಾ ಮಂಗಳಾರತಿ ಮತ್ತು ಮಹಾಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು. ಬಳಿಕ ಶ್ರೀ ದೇವಿಗೆ ಹರಕೆ ಮತ್ತು ಕಾಣಿಕೆ ಒಪ್ಪಿಸಲಾಯಿತು. ಇದೇ ಸಂದರ್ಭ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಏ.21 ರಂದು ಅಪರಾಹ್ನ 3 ಗಂಟೆಗೆ ಗುಳಿಗನ ಪೂಜೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎಂದು ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ತಿಳಿಸಿದೆ.

Read More

ಮಡಿಕೇರಿ ಏ.17  NEWS DESK : ಮತ ಚಲಾಯಿಸುವುದು ಅವರವರ ವೈಯುಕ್ತಿಕ ವಿಚಾರವಾಗಿದೆ. ಅನಗತ್ಯವಾಗಿ ಗೊಂದಲದ ಹೇಳಿಕೆಯನ್ನು ನೀಡಿ ಅರೆಭಾಷಿಕರನ್ನು ಇಕ್ಕಟ್ಟಿಗೆ ದೂಡುವ ಕೆಲಸವನ್ನು ಬಿಜೆಪಿಯ ಅರೆಭಾಷಿಕ ಮಿತ್ರರು ಮಾಡಕೂಡದು ಎಂದು ಕೊಡಗು ಗೌಡ ವಿದ್ಯಾ ಸಂಘದ ನಿರ್ದೇಶಕ ಸೂದನ ಎಸ್.ಈರಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು, ಸಚಿವ ವೆಂಕಟೇಶ್ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರೊಂದಿಗೆ ಕೊಡಗು ಗೌಡ ವಿದ್ಯಾಸಂಘದಲ್ಲಿ ಅರೆಭಾಷಿಕ ಪ್ರಮುಖರೊಂದಿಗೆ ಸಮಾಲೋಚಿಸಿ ಮತ ಯಾಚಿಸಿದ್ದು ನಿಜ. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಅವರು ರಾಜ್ಯದ ಉಪ ಮುಖ್ಯಮಂತ್ರಿಗಳಿಗೆ ಸಲ್ಲಬೇಕಾದ ಗೌರವವನ್ನು ಸಮಾಜದ ವತಿಯಿಂದ ನೀಡಿದ್ದಾರೆ. ಇದು ಅವರ ಕರ್ತವ್ಯ ಮತ್ತು ಹೃದಯ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ. ಆದರೆ ಸೋಮಣ್ಣ ಅವರು ಗೌಡ ಜನಾಂಗದವರಲ್ಲಿ ಲಕ್ಷ್ಮಣ್ ಗೌಡರ ಪರ ಮತಯಾಚನೆ ಮಾಡಿದ್ದಾರೆ ಎಂದು ಬಿಜೆಪಿಯ ಕೆಲವು ಅರೆಭಾಷಿಕ ಮಿತ್ರರು ಕಪೋಲಕಲ್ಪಿತ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಅಸಮಾಧಾನ…

Read More

ಮಡಿಕೇರಿ ಏ.17 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಭಾಗಮಂಡಲ ಫೀಡರ್‍ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಏ.18 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ತಾಳತ್ತಮನೆ, ಬೆಟ್ಟಗೇರಿ, ಚೇರಂಬಾಣೆ, ಅಪ್ಪಂಗಳ, ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More