ಮಡಿಕೇರಿ ಏ.17 NEWS DESK : ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2023-24ನೇ ಸಾಲಿಗೆ ಭಾರತೀಯ ಸೇನೆ, ಭದ್ರತಾ ಪಡೆ, ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತವಾಗಿ 2 ತಿಂಗಳು ವಸತಿಯುತ ದೈಹಿಕ ಸಾಮರ್ಥ್ಯ ತರಬೇತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಮವಸ್ತ್ರ ಸೇವೆಗಳಿಗೆ ವಸತಿಯುತ 60 ದಿನಗಳ ದೈಹಿಕ ಹಾಗೂ ಇತರೆ ತರಬೇತಿ. 10ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ 17 ವರ್ಷ 6 ತಿಂಗಳಿನಿಂದ 23 ವರ್ಷಗಳು, ಅಭ್ಯರ್ಥಿಯ ಸಾಮಾನ್ಯ ಅರ್ಹತೆ ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ…
ಲೇಖಕ: admin
ಮಡಿಕೇರಿ ಏ.17 NEWS DESK : ಮಡಿಕೇರಿಗೆ ಆಗಮಿಸಿದ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೊಡಗು ಜಿಲ್ಲೆಯ ಅರೆಭಾಷಿಕ ಗೌಡರು ಹಾಗೂ ಒಕ್ಕಲಿಗರ ನಾಯಕರನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ ಹಿನ್ನೆಲೆ ಕೊಡಗು ಗೌಡ ವಿದ್ಯಾಸಂಘದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯದ ಉಪ ಮುಖ್ಯಮಂತ್ರಿಗಳಿಗೆ ಗೌರವ ಸೂಚಿಸಿ ಜನಾಂಗದ ನಾಯಕನಾಗಿ ಈ ಸಭೆಗೆ ಹಾಜರಾಗಿದ್ದೇನೆ ಹೊರತು ಯಾವುದೇ ಪಕ್ಷದ ಅಭಿಮಾನಿಯಾಗಿ ಅಲ್ಲ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಉಪ ಮುಖ್ಯಮಂತ್ರಿಗಳು ಆಸೀನರಾಗಿದ್ದ ವೇದಿಕೆಯಲ್ಲಿ ಕೊಡಗು ಗೌಡ ಯುವ ವೇದಿಕೆ ವತಿಯಿಂದ ಗೌಡ ಕ್ರಿಕೆಟ್ ಕಪ್ ನ ಟ್ರೋಫಿ ಅನಾವರಣ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನನಗೆ ಆಹ್ವಾನವಿದ್ದ ಕಾರಣ ನಾನು ಹಾಜರಿದ್ದೆ ಎಂದು ತಿಳಿಸಿದ್ದಾರೆ. ವೇದಿಕೆಯಲ್ಲಿ ನಾನು ಯಾವ ಪಕ್ಷಕ್ಕೂ ಅಥವಾ ಅಭ್ಯರ್ಥಿಗೂ ಮತ ಚಲಾಯಿಸಲು ಕರೆ ನೀಡಿರುವುದಿಲ್ಲ. ಅರೆಭಾಷಿಕ ಜನಾಂಗದ ಮತ ಬಾಂಧವರು ವಿದ್ಯಾವಂತರು ಹಾಗೂ ಮತ…
ಮಡಿಕೇರಿ ಏ.17 NEWS DESK : 2024ರ ಲೋಕಸಭಾ ಚುನಾವಣೆಯ ಪ್ರಯುಕ್ತ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಚುನಾವಣಾ ಸಾಕ್ಷರತಾ ಸಮಿತಿ ಹಾಗೂ ಪುರಸಭೆಯ ಸಹಯೋಗದಲ್ಲಿ ಮತದಾನ ಜಾಗೃತಿ ಜಾಥಾ ನಡೆಯಿತು. ಪುರಸಭೆಯ ಸದಸ್ಯ ರಾಫಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ, ಚುನಾವಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪುರಸಭೆಯಿಂದ ನಗರದ ಮುಖ್ಯ ಬೀದಿಗಳಲ್ಲಿ ಘೋಷಣೆಳೊಂದಿಗೆ ಜಾಥಾ ನಡೆಸಿ ಸಾರ್ವಜನಿಕರಿಗೆ ಮತದಾನದ ಜಾಗೃತಿ ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ದಯಾನಂದ ಮಾರ್ಗದರ್ಶನದೊಂದಿಗೆ, ಕಾಲೇಜಿನ ಎನ್.ಎಸ್.ಎಸ್ ಘಟಕದ ಅಧಿಕಾರಿ ಹೆಚ್.ಎಸ್.ವೇಣುಗೋಪಾಲ್, ಚುನಾವಣಾ ಸಾಕ್ಷರತಾ ಸಮಿತಿಯ ಸಂಚಾಲಕ ಎಂ.ಬಿ.ದಿವ್ಯ ಜಾಥಾದ ಸಂಪೂರ್ಣ ಉಸ್ತುವಾರಿಯನ್ನು ವಹಿಸಿ ಯಶಸ್ವಿಗೊಳಿಸಿದರು. ಜಾಥಾದಲ್ಲಿ ಪುರಸಭೆಯ ಸದಸ್ಯರು ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಏ.17 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಏ.28 ರವರೆಗೆ ನಡೆಯಲಿರುವ 25ನೇ ವರ್ಷದ ಗೌಡ ಸಮೂಹದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ಹತ್ತು ಪ್ರಾಂಚೈಸಿ ತಂಡಗಳ ನಡುವೆ ಇಂದಿನಿಂದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಎಳೆಯ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವ ಮತ್ತು ಸಮಾಜವನ್ನು ಒಗ್ಗೂಡಿಸಿ ಸೌಹಾರ್ದತೆಯನ್ನು ಮೂಡಿಸುವ ಶಕ್ತಿ ಕ್ರೀಡಾಕೂಟಗಳಿಗೆ ಇದೆ ಎಂದು ಅಭಿಪ್ರಾಯಪಟ್ಟರು. ಕೊಡಗು ಗೌಡ ಯುವ ವೇದಿಕೆ ಕ್ರೀಡಾಕೂಟದ ಆಯೋಜನೆಯೊಂದಿಗೆ ಉತ್ತಮ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯವೆಂದರು. ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಮಾತನಾಡಿ, ಕೊಡಗು ಗೌಡ ಯುವ ವೇದಿಕೆ ಈ ಹಿಂದೆ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿತ್ತು. ಪ್ರಸ್ತುತ ಕ್ರೀಡಾ ಪ್ರತಿಭೆಗಳ ಬೆಳವಣಿಗೆಗೆ ಪೂರಕವಾಗಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆಗೆ ಮುಂದಾಗಿರುವುದು…
ಮಡಿಕೇರಿ ಏ.17 NEWS DESK : ಹುದಿಕೇರಿ ಮಹಾದೇವರ ವಾರ್ಷಿಕ ಉತ್ಸವ ಇದೇ ಏ.21 ಮತ್ತು 22ರಂದು ನಡೆಯಲಿದ್ದು, ಏ.14ರಂದು ಕೊಡಿಮರ ನಿಲ್ಲಿಸುವ ಮೂಲಕ ಈ ಬಾರಿ 9ದಿನಗಳ ಹಬ್ಬಕ್ಕೆ ಚಾಲನೆ ನೀಡಲಾಗಿದೆ. ಏ.21ರಂದು ನೆರ್ಪು ಹಾಗೂ 22ರಂದು ಸಂಜೆ 7-30ಗಂಟೆಗೆ ದೇವರ ಅವಭೃತ ಸ್ನಾನ ನಡೆಯಲಿದೆ. ವರ್ಷ 11 ದಿವಸ ಹಬ್ಬವನ್ನು ನಡೆಸಿಕೊಂಡು ಬರಲಾಗುತ್ತಿದ್ದು ಪ್ರತಿ ಮೂರು ವರ್ಷಗಳಿಗೊಮ್ಮೆ ಹುದಿಕೇರಿ ಹಾಗೂ ಕುತ್ತ್’ನಾಡ್ ಮಹಾದೇವರ ಅವಭೃತ ಸ್ನಾನ ಒಂದೇ ಸ್ಥಳದಲ್ಲಿ ಆಗುವುದು ಈ ಹಿಂದಿನಿಂದಲೂ ಬೆಳೆದು ಬಂದಿರುವ ಆಚರಣೆಯಾಗಿದ್ದು, ಕಾರಣಾಂತರಗಳಿಂದ ಕಳೆದ ಏಳು ವರ್ಷ ಜೊತೆಯಲ್ಲಿ ಆಚರಣೆ ಮಾಡಲು ಸಾಧ್ಯವಾಗಿಲ್ಲ. ಹಿಂದಿನ ಆಚರಣೆಯನ್ನು ಮುಂದುವರಿಸಿಕೊಂಡು ಹೋಗುವ ಉದ್ದೇಶದಿಂದ ಹಾಗೂ ಊರು ತಕ್ಕರಾದ ಬೊಳ್ಳಜ್ಜೀರ ಮಣಿ ನಂಜಪ್ಪನವರಿಗೆ ದೇವರು ಕನಸಿನಲ್ಲಿ ಕಾಣಿಸಿಕೊಂಡು ಹಿಂದಿನ ಆಚರಣೆಗಳನ್ನು ಪಾಲಿಸುವಂತೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಈ ವರ್ಷಕ್ಕೆ ಸೀಮಿತವಾಗಿ ಹಬ್ಬವನ್ನು ಒಂಬತ್ತು ದಿನಗಳಿಗೆ ಮೊಟಕುಗೊಳಿಸಲಾಗಿದೆ. ಮುಂದಿನ ವರ್ಷದಿಂದ 11 ದಿನಗಳ ಕಾಲ ಹಬ್ಬವನ್ನು ಆಚರಿಸಲಾಗುತ್ತದೆ ಎಂದು…
ಕುಶಾಲನಗರ ಏ.17 NEWS DESK : ಕುಶಾಲನಗರ ತಾಲ್ಲೂಕಿನ ಪ್ರಮುಖ ಪುಣ್ಯ ಕ್ಷೇತ್ರವಾದ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಶ್ರದ್ದಾ ಭಕ್ತಿಯಿಂದ ನೆರವೇರಿತು. ಬೆಳಗ್ಗೆಯಿಂದಲೇ ದೇವಾಲಯದಲ್ಲಿ ಶ್ರೀ ರಾಮನು ಮರಳಿನಿಂದ ಲಿಂಗವನ್ನು ಪ್ರತಿಷ್ಠಾಪಿಸಿದನು ಎಂಬ ಪ್ರತೀತಿ ಇರುವ ಸನ್ನಿಧಿಯಲ್ಲಿ ಬೆಂಗಳೂರಿನಿಂದ ಧಾವಿಸಿರುವ ವೇದಬ್ರಹ್ಮ ನರಹರಿಶರ್ಮಾ ನೇತೃತ್ವದ ಪುರೋಹಿತರ ತಂಡ ಧಾರ್ಮಿಕ ವಿಧಿಗಳನ್ನು ಪೂರೈಸಿತು. ಮಧ್ಯಾಹ್ನ ಒಂದು ಗಂಟೆಯ ಅಭಿಜಿನ್ ಲಗ್ನದಲ್ಲಿ ರಥಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನಾ ನೆರೆಯ ಹೆಬ್ಬಾಲೆ ಗ್ರಾಮಸ್ಥರು ಕಾಶಿಯಿಂದ ಅಂಚೆಯಲ್ಲಿ ತರಿಸಿದ್ದ ಪವಿತ್ರ ಗಂಗಾ ಜಲವನ್ನು ಅಲಂಕೃತ ಮಂಟಪದಲ್ಲಿಟ್ಟು ಮಂಗಳವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ಕಣಿವೆಯ ಶ್ರೀಕ್ಷೇತ್ರಕ್ಕೆ ತಂದು ದೇವರಿಗೆ ಪ್ರೋಕ್ಷಣೆ ಗೈದ ಬಳಿಕ ರಾಮಲಿಂಗೇಶ್ವರ ಉತ್ಸವ ಮೂರ್ತಿಯನ್ನು ಅಲಂಕೃತ ರಥದಲ್ಲಿ ಇರಿಸಿ ಧಾರ್ಮಿಕ ವಿಧಿಗಳನ್ನು ನಡೆಸಲಾಯಿತು. ರಥ ಸಾಗುತ್ತಿದ್ದಂತೆಯೇ ದೇವಾಲಯದ ಆವರಣದಲ್ಲಿ ನೆರೆದಿದ್ದ ಅನೇಕ ಭಕ್ತರು ಬಾಳೆ ಹಣ್ಣು ಹಾಗೂ ಜವುನಗಳನ್ನು ರಥದ ಮೇಲೆ ಎಸೆದು ಭಕ್ತಿ ಮೆರೆದುದು ಕಂಡು ಬಂತು. ದೇವಾಲಯದಿಂದ ಹೊರಟ…
ಮಡಿಕೇರಿ ಏ.17 NEWS DESK : ಗೌಡ ಜನಾಂಗದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೊಡಗು ಗೌಡ ಯುವ ವೇದಿಕೆ ವತಿಯಿಂದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುವ ಗೌಡ ಪ್ರೀಮಿಯರ್ ಲೀಗ್ ಸೀಸನ್-2 ಪಂದ್ಯಾವಳಿಗೆ ಮಾಜಿ ಶಾಸಕ ಕೊಂಬಾರನ ಜಿ.ಬೋಪಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಜನಾಂಗ ಬಾಂಧವರು ಸ್ಪರ್ಧಾತ್ಮಕ ಕ್ರೀಡಾಕೂಟ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಈ ಮೂಲಕ ಇನ್ನಷ್ಟು ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿ ಜಿಲ್ಲೆಗೆ ಕೀರ್ತಿಯನ್ನು ತರುವಂತಾಗಲಿ ಎಂದು ಶುಭಹಾರೈಸಿದರು. ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅಧ್ಯಕ್ಷತೆ ನಡೆದ ಕಾರ್ಯಕ್ರಮದಲ್ಲಿ ಪುದಿಯನೆರವನ ರಿಶಿತ್ ಮಾದಯ್ಯ ಪ್ರಾಸ್ತಾವಿಕ ಮಾತನಾಡಿದರು. ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ್, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷ ಅಮೆ ದಮಯಂತಿ, ಸ್ಥಾಪಕ ಅಧ್ಯಕ್ಷ ಪೆÇನ್ನಚ್ಚನ…
ವಿರಾಜಪೇಟೆ ಏ.17 NEWS DESK : ಬೈತೂರಪ್ಪ ಸಹೋದರರ ತಂಗಿಯಾದ ಅರಮೇರಿ ಗ್ರಾಮ ಬೆಪ್ಪುನಾಡ್ ಶ್ರೀ ಪನ್ನಂಗಾಲತಮ್ಮೆ ದೇವಿಯ ವಾರ್ಷಿಕ ಉತ್ಸವವು ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನೆರವೇರಿತು. ಮೂಕೇರಿರ ಕುಟುಂಬದ ಸದಸ್ಯರಿಂದ ಶ್ರೀ ದೇವಿಯ ಉತ್ಸವ ಮೂರ್ತಿಯನ್ನು ಎಳೆನೀರಿನಿಂದ ಶುದ್ಧಗೊಳಿಸಿ ಪೂಜೆ ಸಲ್ಲಿಸಲಾಯಿತು. ಮುಂಜಾನೆ ಬಾಚೀರ ಮನೆಯಿಂದ ಭಂಡಾರ ದೇಗುಲಕ್ಕೆ ತರಲಾಯಿತು. ದೇವರ ದರ್ಶನದ ಬಳಿಕ ವಿಶೇಷ ಪೊಜೆ ನಡೆಯಿತು. ಮರು ದಿನ ಬೆಳಿಗ್ಗೆ ದೇವರ ದರ್ಶನ, ದೇವಿ ನೆಲೆನಿಂತ ಕೊಡೆ ತರರುವುದು. ಚೆರಿಯಕಂಡ ಕುಟುಂಬದ ಸ್ಥಳದಿಂದ ವಿವಿಧ ಗದ್ದೆಗಳ ಮಾರ್ಗದಿಂದ ಜನಾಂಗ ಬಾಂದವರು ಕೊಡೆಯನ್ನು ಹೊತ್ತು ದೇಗುಲ ಪ್ರವೇಶ ಮಾಡಿದರು. ಕೊಡೆ ದೇಗುಲ ಪ್ರವೇಶ ಮಾಡಿದಂತೆ ವಿವಿಧ ದೇವರುಗಳ ದೈವ ನರ್ತಕರು ಕೊಡೆಯನ್ನು ಬರಮಾಡಿಕೊಂಡರು. ನಂತರ ದೇಗುಲಕ್ಕೆ ಪ್ರದಕ್ಷಿಣೆ ಸಲ್ಲಿಸಿ, ಕೊಡೆಯನ್ನು ಉತ್ಸವ ಮೂರ್ತಿ ಬಳಿ ಇಡಲಾಯಿತು. ಎತ್ತು ಪೋರಾಟ್, ದುಡಿಕೊಟ್ಟ್ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು…
ನಾಪೋಕ್ಲು ಏ.17 NEWS DESK : ಮೂರ್ನಾಡು ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬರೆದ ಲೇಖನಗಳ ಗುಚ್ಛವಾದ “ಕ್ಯಾಂಪಸ್ ಕ್ರೋನಿಕಲ್” ನ್ಯೂಸ್ ಲೆಟರ್ ಬಿಡುಗಡೆ ಹಾಗೂ ವಿಶ್ವ ಪಾರಂಪರಿಕ ದಿನವನ್ನು ಆಚರಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ ಹಾಗೂ ಖಜಾಂಚಿ ಬಡುವಂಡ ಸುಬ್ರಮಣ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆನ್ಲೈನ್ ಹಾಗೂ ಆಫ್ಲೈನ್ ಗಳಲ್ಲಿ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ವಿಶ್ವ ಪಾರಂಪರಿಕ ದಿನದ ಅಂಗವಾಗಿ ನಡೆದ ವಿದ್ಯಾರ್ಥಿಗಳ ಚುಟುಕು ನಾಟಕ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ದ್ವಿತೀಯ ಬಿ.ಕಾಂ ನ ವಿದ್ಯಾರ್ಥಿನಿ ಹರ್ಷಿತಾ ವಿಶ್ವ ಪಾರಂಪರಿಕ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ರೇಖಾ ಚಿಣ್ಣಪ್ಪ, ಸಂಪಾದಕ ಮಂಡಳಿಯ ಇತರ ಸದಸ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಏ.17 NEWS DESK : ಈಸ್ಟ್ ಕೊಳಕೇರಿ ಗ್ರಾಮದ ಮೂಟೇರಿ ಉಮಾಮಹೇಶ್ವರಿ ದೇವಾಲಯದ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಸೋಮವಾರ ಪಟ್ಟಣಿ ಹಬ್ಬದ ಪ್ರಯುಕ್ತ ಭಕ್ತಾದಿ ಗಳು ತಮ್ಮ ಇಷ್ಟಾರ್ಥ ಸಿದ್ದಿಗೆ ವಿಶೇಷ ಸೇವೆಗಳನ್ನು ನೆರವೇರಿಸಲಾಯಿತು. ಮಧ್ಯಾಹ್ನ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಸಂಜೆ ಕಾವೇರಿನದಿಯಲ್ಲಿ ಅವಭೃತಸ್ನಾನದ ಬಳಿಕ ದೇವಾಲಯಕ್ಕೆ ಹಿಂತಿರುಗಿ ಬಂದು ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ದೇವರ ಪ್ರದರ್ಶನ ನೃತ್ಯ ಬಲಿಯನ್ನು ಭಕ್ತರು ವೀಕ್ಷಿಸಿದರು. ಈ ಸಂದರ್ಭ ಉತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಉತ್ಸವದಲ್ಲಿ ಊರ ಹಾಗೂ ಪರ ಊರಿನ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.






