ಲೇಖಕ: admin

ಮಡಿಕೇರಿ ಜೂ.17 NEWS DESK : ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಕಳೆದ ಹಲವು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಎಸ್.ಗುರುಸ್ವಾಮಿ ಅವರು ಉಪ ನಿರ್ದೇಶಕರಾಗಿ ಮುಂಬಡ್ತಿ ಹೊಂದಿ, ವರ್ಗಾವಣೆಗೊಂಡಿರುವ ಹಿನ್ನೆಲೆ ಕೈಗಾರಿಕೆ, ಕೈಮಗ್ಗ ಮತ್ತು ಜವಳಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಸೇರಿದಂತೆ ವಿವಿಧ ಇಲಾಖೆ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಶಾಲೂ, ಫಲ ತಾಂಬೂಲ, ಪೇಟ ಹಾಗೂ ಉಡುಗೊರೆ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರಾದ ಸಿ.ವಿ.ನಾಗೇಶ್ ಅವರು ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಮಟ್ಟದಲ್ಲಿ ಕೈಮಗ್ಗ ಮತ್ತು ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ, ಜವಳಿ ಕೈಗಾರಿಕೆಗೆ ಸಹಾಯಧನ ಸೌಲಭ್ಯ, ಸಾಲ ಆಧಾರಿತ ಬಂಡವಾಳ ಸಹಾಯಧನ, ಬಡ್ಡಿ ಸಹಾಯಧನ, ವಿಮಾ ಯೋಜನೆ, ವಿದ್ಯುತ್ ಮಗ್ಗಕ್ಕೆ ಸಹಾಯಧನ ಹೀಗೆ…

Read More

ಮಡಿಕೇರಿ ಜೂ.17 NEWS DESK : ಮಳೆಗಾಲದ ಅವಧಿಯಲ್ಲಿ ರಸ್ತೆ ಅಪಘಾತ ತಡೆಯಲು ರಸ್ತೆ ಸುರಕ್ಷತಾ ನಿಯಮಗಳು ಮತ್ತು ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ `ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಿ, ಇಂತಹ ಸ್ಥಳಗಳಲ್ಲಿ ಸೂಕ್ತ ರಸ್ತೆ ಸುರಕ್ಷತಾ ಕ್ರಮ ವಹಿಸಬೇಕು. ಅಪಘಾತ ಸಂಭವಿಸುವ ರಸ್ತೆಗಳಲ್ಲಿ ಸಂಚಾರ ಚಿಹ್ನೆ ಹಾಗೂ ರಸ್ತೆ ಗುರುತು ಫಲಕ ಅಳವಡಿಸಬೇಕು. ಅವಶ್ಯವಿದ್ದೆಡೆ ಬ್ಯಾರಿಕೇಡ್ ಸೇರಿದಂತೆ ಸುರಕ್ಷತಾ ಕ್ರಮವಹಿಸಿ ರಸ್ತೆ ನಿಯಮಗಳ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಸಭೆಯಲ್ಲಿ ಈ ಹಿಂದೆ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಅನುಷ್ಠಾನ ಕುರಿತಂತೆ ಸಂಬಂಧಪಟ್ಟ ಇಲಾಖೆಯವರು ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಮಾತನಾಡಿದ ರಾಷ್ಟ್ರೀಯ ಹೆದ್ದಾರಿ ಉಪ-ವಿಭಾಗದ ಸಹಾಯಕ ಎಂಜಿನಿಯರ್…

Read More

ಮಡಿಕೇರಿ NEWS DESK ಜೂ.17 : ಅಕ್ರಮವಾಗಿ “ನಕ್ಷತ್ರ ಆಮೆ”ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡುವಿನ ಮಡಿಕೈ ಎಂಬಲ್ಲಿನ ನಿವಾಸಿ ಶ್ರೀಧರನ್ ಸಿ.ಕೆ.(70) ಹಾಗೂ ಕಾಸರಗೋಡು ನಿವಾಸಿ ವಿಷ್ಣು ಆಚಾರ್ಯ(68) ಬಂಧಿತ ಆರೋಪಿಗಳಾಗಿದ್ದಾರೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೋಮವಾರಪೇಟೆಗೆ ತೆರಳುವ ರಸ್ತೆಯ ಕನ್ನಂಡ ಪಡುಬೀರ ವೃತ್ತದ ಬಳಿ ಇರುವ ಬಸ್ ತಂಗುದಾಣದಲ್ಲಿ ಇಬ್ಬರು ವ್ಯಕ್ತಿಗಳು ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತು ಮಾಹಿತಿ ಲಭಿಸಿದ ಹಿನ್ನೆಲೆ ದಾಳಿ ನಡೆಸಿದ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ನಕ್ಷತ್ರ ಆಮೆಯೊಂದನ್ನು ವಶಕ್ಕೆ ಪಡೆದಿದ್ದಾರೆ. ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾನಿರೀಕ್ಷಕರಾದ ಸಂಗೀತಾ ಜಿ., ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಟ್ಟೂರು ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ…

Read More

ಮಡಿಕೇರಿ NEWS DESK ಜೂ.17 : ಈವಿ ಪವರ್ ಪ್ಲಸ್ ಬಸ್‌ನಲ್ಲಿ ಅಗತ್ಯ ಸೇವೆಯನ್ನು ಒದಗಿಸದ ಕೆಎಸ್‌ಆರ್‌ಟಿಸಿಗೆ ಬಡ್ಡಿ ಸಹಿತ 13 ಸಾವಿರ ರೂ. ಪಾವತಿಸುವಂತೆ ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದ ನಿವಾಸಿ ಸಚ್ಚಿತ್ ಕೆ.ಹೆಚ್ ಎಂಬುವವರು ಕಳೆದ 2025ರ ನವೆಂಬರ್ 6 ರಂದು ಮಡಿಕೇರಿಯಿಂದ ಬೆಂಗಳೂರಿಗೆ ಕೆಎಸ್‌ಆರ್‌ಟಿಸಿಯ ಈವಿ ಪವರ್ ಪ್ಲಸ್ ಬಸ್‌ನಲ್ಲಿ ಪ್ರಯಾಣಿಸಿದ್ದರು. ಈ ಪ್ರಯಾಣದ ಸಂದರ್ಭ ಮಾರ್ಗದ ಮಧ್ಯ ಬಸ್ ನ ಹವಾ ನಿಯಂತ್ರಣ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಯಿಸದೆ ಸಚ್ಚಿತ್ ತೊಂದರೆ ಅನುಭವಿಸಿದ್ದರು. ಈ ಬಗ್ಗೆ ಬಸ್ಸಿನ ನಿರ್ವಾಹಕರಿಗೆ ಮಹಿತಿ ನೀಡಿದರೂ ಸಹ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಸದರಿ ಬಸ್‌ನಲ್ಲಿ ಕಿಟಕಿ ತೆಗೆಯುವ ವ್ಯವಸ್ಥೆ ಕೂಡ ಇಲ್ಲದಿರುವುದರಿಂದ ಸಚ್ಚಿತ್ ಸಂಕಷ್ಟಕ್ಕೆ ಒಳಗಾಗಿದ್ದರು. ಈ ಬಗ್ಗೆ ಸಚ್ಚಿತ್ ಅವರು ಪರಿಹಾರ ಕೋರಿ ಸಲ್ಲಿಸಿದ ದೂರಿನ ಮೇರೆ ವಿಚಾರಣೆ ನಡೆಸಿದ ಕೊಡಗಿನ ಜಿಲ್ಲಾ ಗ್ರಾಹಕರ ಆಯೋಗದ ಪ್ರಬಾರ ಅಧ್ಯಕ್ಷರಾದ ಡಾ.ರೇಣುಕಾಂಬ.ಸಿ…

Read More

ಮಡಿಕೇರಿ NEWS DESK ಜೂ.17 : ಕೊಡಗಿನ ಸಮಗ್ರ ಅಭಿವೃದ್ಧಿಗಾಗಿ ಮತ್ತು ರಾಜ್ಯದ ಜನರ ಸೇವೆಗಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಹಾಗೂ ಕರಿಕೆ ಗ್ರಾ.ಪಂ ಮಾಜಿ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಮತ್ತು ಶಾಸಕರಾಗಿ ಪೊನ್ನಣ್ಣ ಅವರು ದಕ್ಷತೆಯಿಂದ ಕಾರ್ಯನಿರ್ವಹಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಅಭಿವೃದ್ಧಿ ಕಾರ್ಯಗಳ ಮೂಲಕವೇ ಅಭಿವೃದ್ಧಿಪರ ಚಿಂತನೆಯ ಜನಸ್ನೇಹಿ ಶಾಸಕರು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಚಿವ ಸ್ಥಾನವನ್ನು ಹೊಂದಲು ಇವರು ಸಮರ್ಥರಾಗಿದ್ದು, ನೂತನ ಮುಖ್ಯಮಂತ್ರಿಗಳು ಸಂಪುಟದಲ್ಲಿ ಅಧಿಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಕೊಡಗು ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾಗಿದೆ. ಪ್ರಸ್ತುತ ರಾಜ್ಯದಲ್ಲಿ ಬಹುಮತ ಹೊಂದಿರುವ ಕಾಂಗ್ರೆಸ್ ಸರಕಾರ ಕೊಡಗಿನವರಿಗೆ ಸಚಿವ ಸ್ಥಾನ ನೀಡುತ್ತದೆ ಎನ್ನುವ ವಿಶ್ವಾಸವಿದೆ. ಕಾವೇರಿ ನಾಡು ಕೊಡಗು ರಾಜ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದೆ.…

Read More

ಮಡಿಕೇರಿ NEWS DESK ಜೂ.17 : ಮಳೆಗಾಲ ಆರಂಭಗೊoಡು ಎರಡು ವಾರಗಳೇ ಕಳೆದಿದ್ದರೂ ಕಾವೇರಿ ನಾಡು ಕೊಡಗಿಗೆ ಮಳೆಯಾಗದೆ ಇರುವುದರಿಂದ ಆತಂಕ ಎದುರಾಗಿದೆ. ಈ ಕಾರಣದಿಂದ ಮಳೆಗಾಗಿ ಪ್ರಾರ್ಥಿಸಲು ನಾಪೋಕ್ಲು ಹೋಬಳಿಯ ಬಲಮುರಿಯ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಜೂ.20 ರಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಪರ್ಜನ್ಯ ಜಪ ನಡೆಸಲಾಗುವುದು ಎಂದು ವಿಹೆಚ್‌ಪಿಯ ಕೊಡಗು ಜಿಲ್ಲಾ ಮಠ ಮಂದಿರ ಪುರೋಹಿತ ಪ್ರಮುಖ್ ಮಹಾಬಲೇಶ್ವರ ಭಟ್ ಅವರು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ 10.30 ಗಂಟೆಗೆ ಶ್ರೀ ಅಗಸ್ತೇಶ್ವರನ ಸನ್ನಿಧಿಯಲ್ಲಿ ಪರ್ಜನ್ಯ ಜಪ, ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ರುದ್ರ ಪಠಣ, ಮಹಾಪೂಜೆ, ಮಹಾ ಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆಯಾಗಲಿದೆ. ಭಕ್ತರು ದೇವರಿಗೆ ಹಾಲು, ಹಣ್ಣು, ಎಳನೀರು, ತೆಂಗಿನ ಕಾಯಿ, ಮೊಸರು, ಜೇನು, ಹಸುವಿನ ತುಪ್ಪ ಮತ್ತು ಹೂವನ್ನು ತರಬಹುದು. ನಾಡಿಗೆ ಉತ್ತಮ ಮಳೆ ಬೆಳೆಯಾಗಿ ಸಮೃದ್ಧಿಯಾಗಲಿ ಎಂದು ಪ್ರಾರ್ಥಿಸಲು ಜಿಲ್ಲೆಯ ಸರ್ವ ಭಕ್ತರು, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಎಲ್ಲಾ ಹಿಂದೂ ಸಂಘಟನೆಗಳ…

Read More

ಮಡಿಕೇರಿ NEWS DESK ಜೂ.17 : ಪ್ರಗತಿಪರ ಸಂಘಟನೆಯ ಹೆಸರಿನಲ್ಲಿ ವಿವಿಧ ಸಂಘ-ಸAಸ್ಥೆಗಳು ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯನ್ನು ವಿರೋಧಿಸುತ್ತಿರುವುದು ಹಾಸ್ಯಾಸ್ಪದ ಮತ್ತು ದೇಶದ ಕಾನೂನಿಗೆ ತೋರುವ ಅಗೌರವವಾಗಿದೆ ಎಂದು ಬಿಜೆಪಿ ಎಸ್.ಸಿ ಮೋರ್ಚಾದ ಕೊಡಗು ಜಿಲ್ಲಾಧ್ಯಕ್ಷ ಪಿ.ಎಂ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಎಸ್‌ಐಆರ್ ನ ಅವಶ್ಯಕತೆ ಇದೆ. ಇದರ ಗಂಭೀರತೆಯನ್ನು ಅರಿಯದೆ ವಿನಾಕಾರಣ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುವುದರಿಂದ ಅಕ್ರಮ ಮತದಾನ ಮಾಡುವವರಿಗೆ ಪ್ರೇರಣೆ ನೀಡಿದಂತ್ತಾಗುತ್ತದೆ. ಈ ರೀತಿಯ ಪ್ರತಿಭಟನೆಗಳು ನೈಜ ಮತದಾರರ ಹಾದಿ ತಪ್ಪಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಎರಡು ದಶಕದ ನಂತರ ನಮ್ಮ ರಾಜ್ಯದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯನ್ನು ಚುನಾವಣಾ ಆಯೋಗ ನಡೆಸುತ್ತಿದೆ. ಇದಕ್ಕೆ ರಾಜ್ಯದ ಮತ್ತು ಜಿಲ್ಲೆಯ ಜನತೆ ಸಹಕಾರ ನೀಡಬೇಕೆ ಹೊರತು ಇಲ್ಲಸಲ್ಲದ ಹೇಳಿಕೆ ನೀಡಿ ಈ ಪ್ರಕ್ರಿಯೆಗೆ ತೊಡಕುಂಟು ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಎಸ್‌ಐಆರ್ ಮತದಾರರ ಪಟ್ಟಿಯ ನಿಖರ, ಸಂಪೂರ್ಣ…

Read More

ಮಡಿಕೇರಿ ಜೂ.16 NEWS DESK : ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟಂತೆ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ ಸಹಾಯಕಿ ಹುದ್ದೆಗಳಿಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ಚೈನ್‍ಗೇಟ್ ಹತ್ತಿರದಲ್ಲಿರುವ ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಪೂರಕ ದಾಖಲಾತಿಯೊಂದಿಗೆ ಜೂನ್, 22 ರೊಳಗೆ ಕಚೇರಿ ವೇಳೆ ಸಂಜೆ 5.30ರ ಒಳಗೆ ಈ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿಯಲ್ಲಿ ದೂ.ಸಂ.08272-295087 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ. :: ಸೋಮವಾರಪೇಟೆ :: ಶಿಶು ಅಭಿವೃದ್ಧಿ ಯೋಜನೆ ಸೋಮವಾರಪೇಟೆ ಇಲ್ಲಿಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆಯರ 15 ಹುದ್ದೆಗೆ ಹಾಗೂ 63 ಸಹಾಯಕಿಯರ ಹುದ್ದೆಗಳಿಗೆ…

Read More

ಮಡಿಕೇರಿ ಜೂ.16 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ, ಇವರ ವತಿಯಿಂದ ಜೂನ್, 20 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪೃಥ್ವಿ ಜ್ಯುವೆಲ್ಲರಿ ಕುಶಾಲನಗರ, ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ‘ಪೃಥ್ವಿ ಜ್ಯುವೆಲ್ಲರಿ ಕುಶಾಲನಗರ’ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.16 NEWS DESK : ಕೊಡಗು ಜಿಲ್ಲೆಯಲ್ಲಿ ಹೋಂ-ಸ್ಟೇ ನಡೆಸುವ ಮಾಲೀಕರು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ನಿಯಮಾನುಸಾರ ಹೋಂ-ಸ್ಟೇ ನೋಂದಣಿ ಮಾಡಿಕೊಳ್ಳಲು ಸರ್ಕಾರದ ಪ್ರವಾಸೋದ್ಯಮ ನೀತಿ ಹಾಗೂ ಮಾರ್ಗಸೂಚಿಗಳಿಗೆ ಬದ್ಧರಿದ್ದಲ್ಲಿ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ನಿರಾಕ್ಷೇಪಣಾ ಪತ್ರಗಳನ್ನು ಪಡೆದುಕೊಂಡಿರುವ ಮಾಲೀಕರಿಗೆ ಪ್ರವಾಸೋದ್ಯಮ ಇಲಾಖೆಯಿಂದ 5 ವರ್ಷದ ಅವಧಿಗೆ ಪರವಾನಿಗೆಯನ್ನು ನೀಡಲಾಗಿದೆ. ಹೋಂ-ಸ್ಟೇ ನಡೆಸುವ ಮಾಲೀಕರು ಪ್ರವಾಸಿಗರ ಮನೋರಂಜನೆಗಾಗಿ ಹೋಂ-ಸ್ಟೇಗಳಲ್ಲಿ ಈಜುಕೊಳ, ಜಿಪ್‍ಲೈನ್, ಕಾಯಾಕಿಂಗ್ ಮತ್ತು ಇತರೆ ಸಾಹಸ ಚಟುವಟಿಕೆ ಅಳವಡಿಸಿಕೊಂಡಿರುತ್ತಾರೆ. ಈ ಚಟುವಟಿಕೆಗಳನ್ನು ನಡೆಸುವ ಸಂಬಂಧ ಸರಿಯಾದ ಮಾರ್ಗಸೂಚಿ ಅನುಸರಿಸುವುದು ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು. ಇವುಗಳಿಂದ ಪ್ರವಾಸಿಗರಿಗೆ ತೊಂದರೆಗಳು ಉಂಟಾದಲ್ಲಿ ಮಾಲೀಕರೇ ನೇರ ಹೊಣೆಗಾರರಾಗಿರುತ್ತಾರೆ. ಹೋಂ-ಸ್ಟೇಗಳಲ್ಲಿ ಗ್ಯಾಸ್ ಗೀಸರ್ ಬಳಸುವಂತಿಲ್ಲ ಎಂದು ಈಗಾಗಲೇ ತಿಳಿಸಿದರೂ ಸಹ, ಹಲವು ಹೋಂ-ಸ್ಟೇಗಳಲ್ಲಿ ಗ್ಯಾಸ್ ಗೀಸರ್ ಬಳಕೆಯಲ್ಲಿರುವುದು ಕಂಡು ಬಂದಿರುತ್ತದೆ. ಗ್ಯಾಸ್ ಗೀಸರ್ ಬಳಕೆಯಿಂದ ಅನಾಹುತಗಳು ಸಂಭವಿಸಿದಲ್ಲಿ ಹೋಂ-ಸ್ಟೇ ಮಾಲೀಕರೇ ನೇರ ಹೊಣೆಗಾರರಾಗಿರುತ್ತಾರೆ. ಇಲಾಖೆಯು ನೀಡುವ ಮಾರ್ಗಸೂಚಿ…

Read More