ಲೇಖಕ: admin

ಮಡಿಕೇರಿ ಏ.16 NEWS DESK : ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಕಳೆದ 10 ವರ್ಷಗಳಿಂದ ಆಡಳಿತ ನಡೆಸಿದ ಕೇಂದ್ರದ ಬಿಜೆಪಿ ಸರ್ಕಾರದಿಂದ ಶ್ರಮಿಕ ಸಮೂಹ ಸ್ವಾತಂತ್ರ್ಯ ಕಳೆದುಕೊಳ್ಳುವ ಆತಂಕದಲ್ಲಿದೆ. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಕಾರ್ಮಿಕವರ್ಗ ಹಾಗೂ ರೈತ ಸಮೂಹ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಮತದಾನ ಮಾಡಬೇಕೆಂದು ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಜನರ ಹಸಿವಿನ ಪ್ರಶ್ನೆಗಳಿಗೆ, ಒಕ್ಕೂಟ ವ್ಯವಸ್ಥೆಯ ರಕ್ಷಣೆಯ ಬಗ್ಗೆ, ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಗಂಭೀರ ಚಿಂತನೆಗಳನ್ನು ಮಾಡಿಲ್ಲ. ರಾಷ್ಟ್ರದ ಆರ್ಥಿಕ ಶಕ್ತಿಗೆ ಪೂರಕವಾಗಿದ್ದ ಸರಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಬಂಡವಾಳಶಾಹಿಗಳನ್ನು ರಕ್ಷಿಸುವ ಪ್ರಯತ್ನಗಳನ್ನಷ್ಟೆ ಮಾಡಿದೆ ಎಂದು ಆರೋಪಿಸಿದರು. ಈ ಲೋಕಸಭಾ ಚುನಾವಣೆ ದೇಶದ ಆರ್ಥಿಕತೆಯನ್ನು, ಜನರ ಸಾಮಾಜಿಕ ಪರಿಸ್ಥಿತಿಗಳನ್ನು ನಿರ್ಧರಿಸುವ ಚುನಾವಣೆಯಾಗಿದೆ. ಹಸಿವಿನ ಭಾರತ ಆರ್ಥಿಕವಾಗಿ ಪ್ರಬಲ ರಾಷ್ಟ್ರವಾಗುತ್ತಿದೆ ಎನ್ನುವ ಕೇಂದ್ರದ ಬಿಜೆಪಿ ಸರ್ಕಾರದ ಹೇಳಿಕೆಗಳ ನಡುವೆಯೇ ವಿಶ್ವದ ಹಸಿವಿನ ಸೂಚ್ಯಂಕ ಪಟ್ಟಿಯನ್ನು…

Read More

NEWS DESK :: ಕೊಡಗಿನಿಂದ 6 ಅಂತರಾಷ್ಟ್ರೀಯ ಗೋಲ್ ಕೀಪರ್ ಗಳನ್ನು ಕೊಟ್ಟ ಪುಟ್ಟ ಜಿಲ್ಲೆ ಎಂಬ ಹೆಮ್ಮೆಯಿದೆ. ಸುಬ್ಬಯ್ಯ, ಪೂಣಚ್ಚ, ಜಗದೀಶ್, ಬೋಪಣ್ಣ, ಕುಟ್ಟಪ್ಪ, ನಿಲನ್, ಹಾಗೂ ಇತ್ತೀಚೆಗೆ ಕರ್ನಾಟಕದಲ್ಲಿ ಕೊಡಗಿನ ಗೋಲ್ ಕೀಪರ್ ಗಳು ಬಹಳಷ್ಟು ಹೆಸರು ಮಾಡಿದ್ದಾರೆ. ಬಾಳೆಯಡ ಚರ್ಮಣ ಹಾಗೂ ಪಾಚಿ( ತಾಮನೆ ಮಚೆಟೀರ) ದಂಪತಿಯರ ತೃತೀಯ ಪುತ್ರನಾಗಿ ಪೂಣಚ್ಚನವರು ಮಡಿಕೇರಿಯಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಮಡಿಕೇರಿಯಲ್ಲಿ ಮುಗಿಸಿ, ಪ್ರೌಢ ಶಿಕ್ಷಣಕ್ಕೆ ಸಂತ ಮೈಕಲರ ಶಾಲೆಗೆ ದಾಖಲಾದರು, ನಂತರ ವಾಂಡರ್ಸ್ ಕ್ಲಬ್ ನ ಸದಸ್ಯರಾಗಿ, ತಮ್ಮ ಪ್ರತಿಭೆಯನ್ನು ಹಾಕಿಯಲ್ಲಿ ಪ್ರದರ್ಶಿಸಿದರು. ವಾಂಡರ್ಸ್ ಕ್ಲಬ್ ನಲ್ಲಿ ಇವರಿಗೆ ಹರಿಪಾಲ್, ಹಸ್ತಾ ಹಾಗೂ ಹರೀಶ್ ಇವರುಗಳು ಮಾರ್ಗದರ್ಶನ ನೀಡಿದರು. S.A.I ಗೆ ಪ್ರವೇಶಿಸಿ, ಪದವಿ ಪೂರ್ವ ಶಿಕ್ಷಣವನ್ನು ಕ್ರೈಸ್ಟ್ ಕಾಲೇಜಿನಲ್ಲಿ ಮುಗಿಸಿ, ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಪಡೆದರು. ಕ್ರೀಡೆಯ ಹಾದಿ ::  1986 ರಿಂದ 88 ರ ವರೆಗೆ ರಾಷ್ಟ್ರೀಯ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗಿಯಾದರು. 1987ರಲ್ಲಿ ಕರ್ನಾಟಕ ತಂಡದ…

Read More

ಮಡಿಕೇರಿ ಏ.16 NEWS DESK : ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿ ಹಳ್ಳಿಯ ಮುಗ್ಧ ಮಹಿಳೆಯರನ್ನು ದಿಕ್ಕು ತಪ್ಪಿಸಿ ಮತ ಪಡೆದು ಅಧಿಕಾರಕ್ಕೆ ಬಂದಿದೆ. ಮಹಿಳೆಯರು ಯಾವುದೇ ಆಮಿಷಗಳಿಗೆ ಒಳಗಾಗದೆ ಎಚ್ಚರಿಕೆಯಿಂದ ಇರಿ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆಯೇ ಹೊರತು ಮಹಿಳೆಯರನ್ನು ಅವಮಾನಿಸಿಲ್ಲವೆಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾ ದಳದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೂಟೆರಾ ಪುಷ್ಪಾವತಿ ರಮೇಶ್ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕುಮಾರಸ್ವಾಮಿ ಅವರ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗರು ನೀಡಿರುವ ಹೇಳಿಕೆ ಖಂಡನೀಯ ಮತ್ತು ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುವಂತೆ ಮಹಿಳಾ ಸಂಘಟನೆಗಳಿಗೆ ಕರೆ ನೀಡಿರುವುದು ದುರಾದೃಷ್ಟಕರವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತೆನೆಹೊತ್ತ ರೈತ ಮಹಿಳೆಯೇ ಜೆಡಿಎಸ್ ಪಕ್ಷದ ಲಾಂಛನ, ಗ್ರಾಮೀಣ ರೈತ ಮಹಿಳೆಯೇ ಜೆಡಿಎಸ್ ಪ್ರತೀಕ. ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಕೆಟ್ಟ ಸರ್ಕಾರವನ್ನು ಆಯ್ಕೆ ಮಾಡಿ ದಿಕ್ಕು ತಪ್ಪಿದ್ದಾರೆ ಎನ್ನುವ ಮಾರ್ಮಿಕ…

Read More

ಮಡಿಕೇರಿ ಏ.16 NEWS DESK : 2023-24ನೇ ಸಾಲಿನ ಯು.ಪಿ.ಎಸ್.ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗಿನ ಕೆ.ಎಲ್.ಸೂರಜ್ 713ನೇ ರ್ಯಾಂಕ್ ಪಡೆದು ಉತ್ತೀರ್ಣರಾಗಿದ್ದಾರೆ. ಇವರು ಪ್ರಸ್ತುತ ಬೆಂಗಳೂರಿನಲ್ಲಿ ಅಸಿಸ್ಟೆಂಟ್ ಸೆಂಟ್ರಲ್ ಇನ್ ವೆಸ್ಟಿಗೇಷನ್ ಅಧಿಕಾರಿ (Assistant Central Investigation Officer) ಆಗಿ ಕೇಂದ್ರ ಗೃಹ ಇಲಾಖೆಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೂರಜ್ ಅವರ ತಂದೆ ಕೆ.ಬಿ.ಲಿಂಗರಾಜ್ ಅವರು ಮೈಸೂರಿನಲ್ಲಿ Central Customs Department ಇಲಾಖೆಯಲ್ಲಿ ಜಿಎಸ್‍ಟಿ ವಿಭಾಗದ ಉನ್ನತ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಿಂಗರಾಜ್ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿರಾಜಪೇಟೆಯ ಕೆ.ಬಿ.ಶಾಂತಪ್ಪ ಅವರ ಕಿರಿಯ ಸಹೋದರರಾಗಿದ್ದಾರೆ. (ಸೂರಜ್ ಅವರ ಮೊ.ಸಂಖ್ಯೆ : 9880405594)

Read More

ಮಡಿಕೇರಿ ಏ.16 NEWS DESK : ಕಾನಡ್ಕ ಕುಟುಂಬದ ಆಶ್ರಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ 10ನೇ ವರ್ಷದ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಮರಗೋಡಿನ ಕಾನಡ್ಕ ಕುಟುಂಬದ ಐನ್‍ಮನೆಯಲ್ಲಿ ನಡೆದ ಕಾರ್ಯಕ್ರಮವನ್ನು ನಿವೃತ್ತ ಅಧ್ಯಾಪಕರಾದ ಹೊಸ್ಕೇರಿ ಗ್ರಾಮದ ಕೆಂಜನ ಕೆಂಚಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಹಬ್ಬಕ್ಕೆ ಮತ್ತಷ್ಟು ಮೆರಗು ನೀಡಿದಂತಾಗುತ್ತದೆ. ಅಲ್ಲದೆ ಕುಟುಂಬದಲ್ಲಿ ಒಗ್ಗಟ್ಟು, ಸಹಬಾಳ್ವೆ ನಡೆಸಲು ಸಹಕಾರಿಯಾಗಲಿದೆ ಎಂದರು ಅಭಿಪ್ರಾಯಪಟ್ಟರು. ಶಕ್ತಿ ದಿನಪತ್ರಿಕೆಯ ಉಪ ಸಂಪಾದಕ ಕುಡೆಕಲ್ ಸಂತೋಷ್ ಮಾತನಾಡಿ, ಗೌಡ ಸಮುದಾಯ ಸಂಘಟಿತರಾಗಿ ಅರೆಭಾಷೆ ಸಂಸ್ಕೃತಿ, ಆಚಾರ, ವಿಚಾರಗಳನ್ನು ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸಿ ಕೊಡಬೇಕೆಂದು ಕರೆ ನೀಡಿದರು. ಕ್ರೀಡೆ ಎಲ್ಲರನ್ನು ಒಗ್ಗೂಡಿಸುವುದಲ್ಲದೆ, ಸಂಘಟನೆಗೂ ಸಹಕಾರಿಯಾಗಲಿದೆ. ಎಲ್ಲಾ ಭಾಗದಲ್ಲ್ಲೂ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಘಟನೆ ಮತ್ತು ಸಂಸ್ಕೃತಿಯನ್ನು ಬೆಳೆಸಬೇಕು. ಅರೆಭಾಷಿಕ ಸಮುದಾಯದ ಸಂಸ್ಕೃತಿ, ಪದ್ಧತಿಯನ್ನು ಪೋಷಕರು ಮೊದಲು ತಿಳಿದುಕೊಂಡು ಯುವ ಸಮೂಹಕ್ಕೆ ಪರಿಚಯಿಸುವ ಕಾರ್ಯವಾಗಬೇಕು. ಜೀವನದಲ್ಲಿ ನೋವು-ನಲಿವನ್ನು ಸಮಾನವಾಗಿ ಸ್ವೀಕರಿಸಬೇಕೆಂದು…

Read More

ಮಡಿಕೇರಿ ಏ.16 NEWS DESK : ಪವಿತ್ರ ಹಜ್ ಯಾತ್ರೆ ಕೈಗೊಳ್ಳುತ್ತಿರುವ ಕೊಡಗು ಜಿಲ್ಲೆಯ ಹಜ್ ಯಾತ್ರಿಕರಿಗೆ ಆಝಾದ್ ನಗರ ಯುನಿಟ್  ಕೆ.ಎಂ.ಜೆ, ಎಸ್‌.ವೈ.ಎಸ್ ಹಾಗೂ ಎಸ್‍ಎಸ್‍ಎಫ್  ವತಿಯಿಂದ ಏ.18 ರಂದು ಹಜ್ ತರಬೇತಿ ಹಾಗೂ ಬೀಳ್ಕೊಡುಗೆ ಸಮಾರಂಭ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಆಝಾದ್ ನಗರದ ಶಾದಿಮಹಲ್’ ನಲ್ಲಿ ಹಜ್ ತರಬೇತಿ ಹಾಗೂ ಬೀಳ್ಕೊಡುಗೆ ಸಮಾರಂಭ ನಡೆಯಲಿದ್ದು, ದುಆ ನೇತೃತ್ವ ವನ್ನು ಕೂರ್ಗ್ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಅಸ್ಸಯ್ಯಿದ್ ಶಿಹಾಬುದ್ದೀನ್ ಹೈದ್ರೂಸಿ ಎಮ್ಮೆಮಾಡು  ವಹಿಸಲಿದ್ದಾರೆ. ವಯನಾಡು ಇಸ್ಮಾಈಲ್ ಸಖಾಫಿ ರಿಪ್ಪನ್ ತರಬೇತಿ ನೀಡಲಿದ್ದು, ಯಾತ್ರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಆಝಾದ್ ನಗರ ಯುನಿಟ್  ಕೆ.ಎಂ.ಜೆ, ಎಸ್‌.ವೈ.ಎಸ್ ಹಾಗೂ ಎಸ್‍ಎಸ್‍ಎಫ್ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ 8277385660, 9945102631, 9686537473 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಏ.16 NEWS DESK : ಪ್ರಾಮಾಣಿಕವಾಗಿ ಫಲಾನುಭವಿಗಳನ್ನು ತಲುಪುವ ಮತ್ತು ಯಾರಿಗೂ ಹೊರೆಯಿಲ್ಲದ ಏಕೈಕ ಗ್ಯಾರಂಟಿಯೆ0ದರೆ ಅದು “ಮೋದಿ ಗ್ಯಾರಂಟಿ” ಎಂದು ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ ತಿಳಿಸಿದ್ದಾರೆ. ನಗರದ ವಿವಿಧ ಬಡಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಪರ ಎರಡನೇ ಹಂತದ ಮನೆ ಮನೆ ಪ್ರಚಾರ ನಡೆಸಿ ಅವರು ಮಾತನಾಡಿದರು. ಕಳೆದ ಹತ್ತು ವರ್ಷಗಳ ಬಿಜೆಪಿ ನೇತೃತ್ವದ ಆಡಳಿತದಲ್ಲಿ ದೇಶ ಪ್ರಗತಿ ಪಥದತ್ತ ಸಾಗಿದ್ದು, ಈ ಬಾರಿ ಕೂಡ “ಮೋದಿ ಗ್ಯಾರಂಟಿ”ಗೆ ಬಹುಮತ ಲಭಿಸಲಿದೆ. ಇಡೀ ದೇಶದ ಜನ ಒಪ್ಪುವಂತಹ ಗ್ಯಾರಂಟಿಗಳನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ನೀಡಿದ್ದಾರೆ ಎಂದರು. ಮೋದಿ ಗ್ಯಾರಂಟಿಗೆ ಮತ ನೀಡಿದರೆ ವಿಕಸಿತ ಭಾರತದ ಹಿತ ಕಾಯಬಹುದಾಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಮತ್ತು ದೂರದೃಷ್ಟಿಯ ಸಂಕಲ್ಪ ಪತ್ರವನ್ನು ಮನೆ ಮನೆಗೆ ತಲುಪಿಸುತ್ತಿದ್ದೇವೆ. ಎಲ್ಲಾ ಕಡೆ ಅಭ್ಯರ್ಥಿ ಯದುವೀರ್ ಅವರ ಪರ ಜನ ಒಲವು ತೋರುತ್ತಿದ್ದಾರೆ. ಮೈಸೂರು- ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯ…

Read More

ಮಡಿಕೇರಿ ಏ.16 NEWS DESK : ಕವಿಯತ್ರಿ ಮೂರ್ನಾಡುವಿನ ಕೆ.ಜಿ.ರಮ್ಯ ಅವರು ರಚಿಸಿದ “ದಾಹಗಳ ಮೈ ಸವರುತ್ತಾ” ಕವನ ಸಂಕಲನಕ್ಕೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಲಭ್ಯವಾಗಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ದತ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಗೌರಮ್ಮ ಅವರ ಪುತ್ರ ಬಿ.ಜಿ.ವಸಂತ ಅವರು ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ ಉತ್ತಮ ‌ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ 19 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ. 2023-24 ನೇ ಸಾಲಿನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, 9 ಲೇಖಕಿಯರು ತಮ್ಮ ಕೃತಿಗಳನ್ನು ಪ್ರಶಸ್ತಿಗಾಗಿ ಪ್ರಸ್ತುತ ಪಡಿಸಿದ್ದರು. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳನ್ನು ತೀರ್ಪುಗಾರರನ್ನಾಗಿಸಿ ಅವರು ಎಲ್ಲ ಪುಸ್ತಕಗಳನ್ನು ಪರಮಾರ್ಶಿಸಿ‌  ಕೆ.ಜಿ.ರಮ್ಯ  ಅವರು ರಚಿಸಿದ ಕವನ ಸಂಕಲನಕ್ಕೆ ಪ್ರಶಸ್ತಿ ಲಭ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಧ್ಯಾಪಕಿಯಾಗಿರುವ  ಕೆ.ಜಿ.ರಮ್ಯಾ ಜಿಲ್ಲೆಯ…

Read More

ಸುಂಟಿಕೊಪ್ಪ ಏ.16 NEWS DESK : ನಾರ್ಗಾಣೆ ಗ್ರಾಮದ ಅಣ್ಣಪ್ಪಸ್ವಾಮಿ ದೇವಾಲಯದಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರಲಾಗುತ್ತಿರುವ ಧರ್ಮ ದೈವದ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಎರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಧರ್ಮ ದೈವಗಳ ನೇಮೋತ್ಸವ ಸಂಪನ್ನಗೊಂಡಿತು. ಭಂಡಾರ ಮೆರವಣಿಗೆ, ಎಣ್ಣೆ ಅರ್ಪಣೆ, ಕಲ್ಲುರ್ಟಿ ದೈವದ ನೇಮೋತ್ಸವ ನಡೆಯಿತು. ನಂತರ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು. ರಾತ್ರಿ ಧರ್ಮ ದೈವವಾದ ಅಣ್ಣಪ್ಪ, ಪಂಜುರ್ಲಿ ದೈವದ ನೇಮವು ನೇರವೇರಿತು. ನಂತರ ಗುಳಿಗ ಹಾಗೂ ಚಾಮುಂಡೇಶ್ವರಿ ದೈವದ ಜೋಡಿ ಕೋಲ ನಡೆಯಿತು. ನಂತರ ಧರ್ಮ ದೈವದ ಹರಕೆ ಅರ್ಪಿಸಲಾಯಿತು. ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರೆವೇರಿತು. ನೆರೆದಿದ್ದ ಭಕ್ತಾಧಿಗಳಿಗೆ ಇದೇ ಸಂದರ್ಭ ಅನ್ನಸಂತರ್ಪಣೆ ನೆರವರೆತು. ಸುತ್ತ ಮುತ್ತಲ್ಲ ಗ್ರಾಮ ಹಾಗೂ ಊರುಗಳಾದ ವಿರಾಜಪೇಟೆ, ಸಿದ್ಧಾಪುರ ಕುಶಾಲನಗರ ಹಾಗೂ ನೆರೆಯ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ದೇವರಿಗೆ ವಿಶೇಷ ಪ್ರಾರ್ಥನೆ ನೆರವೇರಿಸಿದರು. ನಾರ್ಗಾಣೆ ಗ್ರಾಮದ ಶ್ರೀ ದೇವಿಯ…

Read More

ಸುಂಟಿಕೊಪ್ಪ,ಏ.16 NEWS DESK : ಸುಂಟಿಕೊಪ್ಪ ಪನ್ಯ ಗ್ರಾಮದಲ್ಲಿ ನೆಲೆನಿಂತಿರುವ ಗ್ರಾಮ ದೇವತೆಯಾದ ಶ್ರೀ ಮಳೂರು ಬೆಳ್ಳಾರಿಕ್ಕಮ್ಮ ದೇವರ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ಎತ್ತು ಪೋರಾಟ್, ಚೌರಿಕುಣಿತ, ಶ್ರೀ ದೇವರ ಉತ್ಸವ ಮೂರ್ತಿಯ ನೃತ್ಯ ಬಲಿ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ಸಂಪ್ನಗೊಂಡಿತು. ಕಳೆದ 7 ದಿನಗಳ ಕಾಲ ಸುಂಟಿಕೊಪ್ಪ, ಉಲುಗುಲಿ, ಆಂಜನಗೇರಿ ಬೇಟ್ಟಗೇರಿ, ಹರದೂರು ಗ್ರಾಮದ ಗ್ರಾಮಸ್ಥರು ವಾಡಿಕೆಯಂತೆ ವೃತದಲ್ಲಿದ್ದು, ಸಾಂಪ್ರದಾಯಿಕ ಪೂಜೆ ವಿಧಿವಿಧಾನಗಳನ್ನು ನೆರವೇರಿಸಿದರು. ದೇವಾಲಯದ ಭಂಡಾರವನ್ನು ಗ್ರಾಮದ ಮಂದನ ರಮೇಶ್ ಅವರ ಮನೆಯಿಂದ ಎತ್ತಿನ ಮೇಲೆ ಇರಿಸುವ ಮೂಲಕ ವಾದ್ಯಗೋಷ್ಠಿಯೊಂದಿಗೆ ದೇವಾಲಯಕ್ಕೆ ಮೆರವಣಿಗೆಯೊಂದಿಗೆ ತಂದು ದೇವಾಲಯದಲ್ಲಿ ಭಂಡಾರವನ್ನು ಸಮರ್ಪಿಸಲಾಯಿತು. ನಂತರ ಗ್ರಾಮದ ಜನತೆಯಿಂದ ಈಡು ಗಾಯಿ ಎತ್ತು ಪೋರಾಟ್, ಚೌರಿಕುಣಿತದಲ್ಲಿ ಪುರುಷರು ಯುವಕರು ಪಾಲ್ಗೊಂಡು ಬೆಳ್ಳಾರಿಕ್ಕಮ್ಮ ಉತ್ಸವ ಮೂರ್ತಿಯನ್ನು ದೇವಸ್ಥಾನಕ್ಕೆ ಪ್ರದಕ್ಷಿಣೆ ನಡೆಸಿ ದೇವಿಗೆ ಪೂಜೆ ಮಹಾಮಂಗಳಾರತಿ ಪ್ರಸಾದ ವಿತರಣೆಯನ್ನು ನಡೆಸಲಾಯಿತು. ದಿನದ ಪೂಜಾ ಕೈಂಕರ್ಯವನ್ನು ಅರ್ಚಕರಾದ ಗಣೇಶ್ ಶರ್ಮ, ಮಂಜುನಾಥ ಉಡುಪ, ಮಂಜುನಾಥ…

Read More