ಲೇಖಕ: admin

ಮಡಿಕೇರಿ ಏ.16 NEWS DESK : ಪ್ರಸಕ್ತ ಸಾಲಿಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ಪ್ರವೇಶಾತಿ ಆರಂಭಗೊಂಡಿದೆ. ಬಿಎ, ಬಿಕಾಂ, ಬಿಬಿಎ, ಬಿಬಿಎಟಿಟಿ, ಬಿಸಿಎ, ಬಿಎ-ಹೆಚ್‍ಆರ್‍ಡಿ, ಬಿಎಸ್ಸಿ, ಬಿಎಸ್‍ಡಬ್ಲ್ಯು ಕೋರ್ಸ್‍ಗಳಿಗೆ ಉಚಿತವಾಗಿ ಅರ್ಜಿ ಕಾಲೇಜಿನಲ್ಲಿ ಪಡೆದುಕೊಳ್ಳಬಹುದು. ನಿಯಮಾನುಸಾರ ಭರ್ತಿ ಮಾಡಿದ ಅರ್ಜಿಯನ್ನು ಕಾಲೇಜು ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ 08272-228334/ 8088272689 ಅಥವಾ ಜಾಲತಾಣ www.fmkmcc.edu.in ನ್ನು ಸಂಪರ್ಕಿಸಬಹುದು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಮಡಿಕೇರಿ ಏ.16 NEWS DESK : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 2024-25ನೇ ಸಾಲಿಗೆ ಪ್ರಥಮ ಬಿ.ಎ ಮತ್ತು ಬಿ.ಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಕಾಲೇಜಿನ ಕಚೇರಿಯ ವೇಳೆಯಲ್ಲಿ ಅರ್ಜಿಯನ್ನು ಪಡೆಯಬಹುದು. ಕಾಲೇಜಿನಲ್ಲಿ ಎಲ್ಲಾ ವಿಷಯಗಳಿಗೂ ಪೂರ್ಣಕಾಲಿಕ ಪ್ರಾಧ್ಯಾಪಕರು, ಗ್ರಂಥಪಾಲಕರು, ದೈಹಿಕ ಶಿಕ್ಷಣ ನಿರ್ದೇಶಕರು ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಲು ಲಭ್ಯವಿರುತ್ತಾರೆ. ಕಾಲೇಜಿನಲ್ಲಿ ಶುಲ್ಕವಿನಾಯಿತಿ, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಸ್ಟೆಲ್ ವ್ಯವಸ್ಥೆ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9945185783, 9845907344, 9008180049, 9538506370 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. 

Read More

ಮಡಿಕೇರಿ ಏ.16 NEWS DESK : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್10 ಕುಂಡಾಮೇಸ್ತ್ರಿ ಮತ್ತು ಎಫ್11 ಗಾಳಿಬೀಡು ಫೀಡರ್‍ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಏ.17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಗಾಳಿಬೀಡು, ಕಾಲೂರು, ಹೆಬ್ಬೆಟ್ಟಗೇರಿ, ಕೆ.ನಿಡುಗಣೆ, ಕುಂಡಾಮೇಸ್ತ್ರಿ, ಕೂಟುಹೊಳೆ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಏ.15 NEWS DESK : ಬಿಜೆಪಿ ಎಂದಿಗೂ ಸಂವಿಧಾನ ಬದಲಾಯಿಸಲ್ಲ, ಈ ಕುರಿತು ಪ್ರಧಾನಿ ನರೇಂದ್ರಮೋದಿ ಅವರೇ ಭರವಸೆ ನೀಡಿದ್ದಾರೆ. ಮತ ಗಳಿಕೆಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಸ್ಪಷ್ಟಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ತಳೂರು ಕಿಶೋರ್ ಕುಮಾರ್, ಬಿಜೆಪಿ ಗೆಲುವು ಸಾಧಿಸಿದರೆ ಸಂವಿಧಾನ ಬದಲಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಪ್ರಧಾನಮಂತ್ರಿಗಳೇ ಸಂವಿಧಾನವನ್ನು ಬದಲಾಯಿಸುವ ಪ್ರಶ್ನೇಯೇ ಇಲ್ಲ ಎಂದು ಬೃಹತ್ ಸಮಾವೇಶದಲ್ಲೇ ಹೇಳಿದ್ದಾರೆ. ಡಾ.ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷವೇ ಅಗೌರವದಿಂದ ನೋಡಿಕೊಂಡಿತ್ತು, ಚುನಾವಣೆಗಳಲ್ಲಿ ಸೋಲಿಸಿತ್ತು ಎಂದು ಟೀಕಿಸಿದರು. ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎನ್ನುವುದಕ್ಕೆ ಭಾನುವಾರ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ನಡೆದ ಬೃಹತ್ ಸಮಾವೇಶವೇ ಸಾಕ್ಷಿಯಾಗಿದೆ. ಈ…

Read More

ಕುಶಾಲನಗರ NEWS DESK ಏ.15 : ಕುಶಾಲನಗರದ ಹಾರಂಗಿ ರಸ್ತೆಯಲ್ಲಿರುವ   ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2024-25 ನೇ ಸಾಲಿಗೆ ಪ್ರಥಮ ಬಿ.ಎ. ಬಿ.ಕಾಂ, ಬಿಸಿಎ, ಮತ್ತು ಬಿಬಿಎ  ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಏಪ್ರಿಲ್ 20  ರಿಂದ ಕಾಲೇಜಿನ ಕಚೇರಿ ವೇಳೆಯಲ್ಲಿ ಅರ್ಜಿ ಪಡೆದು ಪ್ರವೇಶ ಪಡೆಯಬಹುದು.        ಕಾಲೇಜಿನಲ್ಲಿ ಎಲ್ಲಾ ವಿಷಯಗಳಿಗೂ ಪೂರ್ಣಕಾಲಿಕ ಅಧ್ಯಾಪಕರುಗಳು , ಗ್ರಂಥಪಾಲಕರು, ದೈಹಿಕ ಶಿಕ್ಷಣ ನಿರ್ದೇಶಕರನ್ನು ಒಳಗೊಂಡಿದ್ದು, ಕಾಲೇಜಿನಲ್ಲಿ ಸರ್ಕಾರದ ಸೌಲಭ್ಯಗಳಾದ ಶುಲ್ಕ ವಿನಾಯಿತಿ, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಸ್ಟೆಲ್ ವ್ಯವಸ್ಥೆ ಲಭ್ಯವಿದೆ. ಇದರೊಂದಿಗೆ ಡಿಜಿಟಲ್ ಗ್ರಂಥಾಲಯ, ಸುಸಜ್ಜಿತವಾದ ಕ್ರೀಡಾ ಮೈದಾನ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಿಸಿ ಕ್ಯಾಮರಾ,ಮನೋರಂಜನ ಕಾರ್ಯಕ್ರಮಗಳ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.  ಹೆಚ್ಚಿನ ಮಾಹಿತಿಗೆ ದೂ. ಸಂಖ್ಯೆ +91 94804 48000, +919663557448,  +919844897554 ಅನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಬಿ.ಎಂ.ಪ್ರವೀಣ್ ಕುಮಾರ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಏ.15 NEWS DESK : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬೀರುಗ ಗ್ರಾಮದ ಅಯ್ಯಮಾಡ ಮಾದಯ್ಯ(63) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ಇಂದು ಬೆಳಗ್ಗೆ ಮಾದಯ್ಯ ಅವರು ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯ ಮೂಲಕ ತೆರಳುತ್ತಿದ್ದ ಸಂದರ್ಭ ಕಾಡಾನೆ ಇವರ ಮೇಲೆ ದಾಳಿ ಮಾಡಿದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ::: ತೀವ್ರ ಅಸಮಾಧಾನ ::: ಘಟನಾ ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹಿರಿಯ ಅಧಿಕಾರಿಗಳು ಬರುವವರೆಗೆ ಮೃತದೇಹವನ್ನು ಸ್ಥಳದಿಂದ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಇಂದಿನಿAದಲೇ ಕಾರ್ಯಾಚರಣೆ ಆರಂಭಿಸಿ, ನಾಡಿನಿಂದ ಕಾಡಿಗೆ ಆನೆಗಳನ್ನು ಅಟ್ಟುವಂತೆ ತಾಕೀತು ಮಾಡಿದರು. ಇದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸಮ್ಮತಿಯನ್ನು ಸೂಚಿಸಿದರು. ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ಅವರು ಮಾತನಾಡಿ,…

Read More

ಮಡಿಕೇರಿ ಏ.15 NEWS DESK : ಕೊಡವರ ಹೊಸ ವರ್ಷ ಎಡಮ್ಯಾರ್ ಆಚರಣೆ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗೋಣಿಕೊಪ್ಪದಲ್ಲಿ ಪಂಜಿನ ಮೆರವಣಿಗೆ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಉಮಾಮಹೇಶ್ವರಿ ದೇವಾಲಯದ ಬಳಿಯಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ಪ್ರಮುಖರು ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ಶಾಂತಿಧೂತ ಮಹಾತ್ಮಗಾಂಧಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶವಾದದ ಮಹತ್ವ ಮತ್ತು ಪ್ರಸ್ತುತತೆಯ ಬಗ್ಗೆ ವಿವರಿಸಿದರು. ಡಾ.ಅಂಬೇಡ್ಕರ್ ಅವರು ರಾಷ್ಟçದಾದ್ಯಂತ ಜಾತಿ, ಮತ, ಧರ್ಮ, ಜನಾಂಗ, ಲಿಂಗ, ಜನಾಂಗೀಯತೆ, ಸಮುದಾಯದ ಗಾತ್ರ ಮತ್ತು ಲಿಂಗವನ್ನು ಲೆಕ್ಕಿಸದೆ ಎಲ್ಲಾ ಜನರ ಯೋಗಕ್ಷೇಮಕ್ಕಾಗಿ ಭೂಮಿಯ ಮೇಲಿನ ಶ್ರೇಷ್ಠ ಸಂವಿಧಾನವನ್ನು ಜನತೆಗೆ ಅರ್ಪಿಸಿದ್ದಾರೆ. ಮಹಾತ್ಮ ಗಾಂಧಿ ಅವರು ಹಕ್ಕುಗಳನ್ನು ಸಾಧಿಸಲು ಇಡೀ ಜಗತ್ತಿಗೆ ಶಾಂತಿಯುತ ಮತ್ತು ಸತ್ಯವಾದ ಅಹಿಂಸಾತ್ಮಕ ಸತ್ಯಾಗ್ರಹವನ್ನು ಕಲಿಸಿದರು. ಸಿಎನ್‌ಸಿ ತನ್ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಸಾಧಿಸಲು ಸಂವಿಧಾನದ ತತ್ವಗಳನ್ನು ನಂಬುತ್ತದೆ…

Read More

ಮಡಿಕೇರಿ ಏ.15 NEWS DESK :  ಕೂರ್ಗ್ ಕಾಫಿವುಡ್ ಮೂವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ಮಾಣ -ನಿರ್ದೇಶನದ ಕೊಡವ ಚಲನಚಿತ್ರ “ಕಾಂಗತ ಮೂಡ್” (The shadow) ಚಿತ್ರದ ಮುಹೂರ್ತ ಮೂರ್ನಾಡಿನ ಬಿದ್ದಂಡ ಪೊನ್ನಪ್ಪ ಅವರ ನಿವಾಸದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿ ಮಾತನಾಡಿದ ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ನಾವು ಎಷ್ಟು ಓದುತ್ತೇವೆ ಎಂಬುದು ಮುಖ್ಯವಲ್ಲ. ನಾವು ಜೀವನದಲ್ಲಿ ಎಷ್ಟರ ಮಟ್ಟಿಗೆ ಮನವೀಯತೆಯ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸುತ್ತಿದ್ದೇವೆ ಎಂಬುದು ಮುಖ್ಯ ಗ್ರಂಥಾಲಯಕ್ಕೆ ಎಲ್ಲರೂ ಹೋಗುತ್ತಾರೆ. ಅಲ್ಲಿರುವ ಪ್ರತಿ ಪುಸ್ತಕಗಳನ್ನು ಓದುತ್ತಾರೆ. ಆದರೆ ಅದನ್ನು ಓದುವಿಕೆಗೆ ಅಷ್ಟೇ ಸೀಮಿತ ಪಡಿಸದೇ ಅದರಿಂದ ಪಡೆದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಳ್ಳಬೇಕು ಎಂದು ಹೇಳಿದರು. ಬಾಹ್ಯಕ್ಕಿಂತಲೂ ಅಂತರಾಳದಲ್ಲಿ ನೋಡುವ ದೃಷ್ಠಿಕೋನ ಬಾಳನ್ನು ಅಭ್ಯಾಸ ಮಾಡುತ್ತದೆ. ನಮ್ಮ ಒಳಗಿನ ಬಾಳನ್ನು ನಮ್ಮ ಮನಸ್ಸನ್ನು ನಾವು ಓಡಾಡುವ ನೆಲ, ಜಲ ಹಾಗೂ ಪರಿಸರವನ್ನು ನಾವು ಗಮನದಲ್ಲಿಟ್ಟುಕೊಳ್ಳುವುದು ಅತ್ಯಂತ…

Read More

ಮಡಿಕೇರಿ ಏ.15 NEWS DESK : ಕೊಡಗು ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಬಿ.ಶಾಂತಪ್ಪ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರ ಅನುಮೋದನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಪತ್ರ ನೀಡಿದ್ದು, ಇಂದು ನಡೆದ ಜೂ಼಼ಮ್ ಸಭೆಯಲ್ಲಿ ಪಾಲ್ಗೊಂಡು ಚುನಾವಣೆಯ ಜವಾಬ್ದಾರಿಯ ಕುರಿತು ಚರ್ಚಿಸಿರುವುದಾಗಿ ಶಾಂತಪ್ಪ ತಿಳಿಸಿದ್ದಾರೆ. ಜಿಲ್ಲಾ ಪರಿಷತ್ ನ ಮಾಜಿ ಸದಸ್ಯರಾಗಿರುವ ಕೆ.ಬಿ.ಶಾಂತಪ್ಪ ಅವರು ರಾಜ್ಯ ಕುರುಬರ ಸಂಘದ ಕಾರ್ಯಾಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

Read More

ಸುಂಟಿಕೊಪ್ಪ ಏ.15 NEWS DESK : ಗರಗಂದೂರು ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಹರದೂರು ಗ್ರಾ.ಪಂ ವ್ಯಾಪ್ತಿಯ ಗರಗಂದೂರು ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಸಮಾರಂಭದಲ್ಲಿ ದಿನದ ಮಹತ್ವತೆ ಕುರಿತು ಮಾತನಾಡಿದರು. ಸುಂಟಿಕೊಪ್ಪ ನಾಡು ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ದೇಶದಲ್ಲಿ ಐಕ್ಯತೆ, ಸಾಮಾಜಿಕತೆ, ರಾಜಕೀಯ, ಆರ್ಥಿಕವಾಗಿ ದೇಶವು ಬಲಿಷ್ಠಗೊಳ್ಳಬೇಕಿದರೆ ದೇಶದ ಪ್ರತಿಯೊಬ್ಬ ಪ್ರಜೆಯು ಶಿಕ್ಷಣವನ್ನು ಪಡೆದುಕೊಂಡಾಗ ಮಾತ್ರ ದೇಶವು ಬಲಿಷ್ಠ ರಾಷ್ಟ್ರವಾಗಿ ರೂಪುಗೊಳ್ಳಲು ಸಾಧ್ಯವೆಂದು ಮನಗಂಡಿದ್ದರು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ದೇಶವು ಬಲಿಷ್ಠ ರಾಷ್ಟ್ರವಾಗಲೂ ಕಾರಣಿಭೂತರಾಗಿದ್ದಾರೆಂದು ಅವರು ನುಡಿದರು. ಗಣ್ಯರು ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ನಿವಾಸಿಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Read More