ಲೇಖಕ: admin

ಸುಂಟಿಕೊಪ್ಪ ಏ.15 NEWS DESK : ಸುಂಟಿಕೊಪ್ಪ ಪಟ್ಟಣ ಸೇರಿದಂತೆ ಗದ್ದೆಹಳ್ಳ, ಕೆದಕಲ್, 7ನೇ ಹೊಸಕೋಟೆ, ಕಂಬಿಬಾಣೆ, ಕೊಡಗರಹಳ್ಳಿ ಮಾದಾಪುರ, ಗರಗಂದೂರು ಇನ್ನಿತರ ಕಡೆಗಳಲ್ಲಿ ಹಿಂದೂ ಮಲಯಾಳಿ ಭಾಂದವರು ಬಿಶು ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಕೇರಳದಲ್ಲಿ ಸಂಭ್ರಮದಿಂದ ಆಚರಿಸುತ್ತಿರುವ ಬಿಶು ಹಬ್ಬವನ್ನು ಕೊಡಗಿನ ಹಿಂದೂ ಮಲಯಾಳಿ ಭಾಂದವರು ಸಂಭ್ರಮದಿಂದ ಆಚರಿಸುತ್ತಾರೆ. ದವಸ ದಾನ್ಯ ಹೂ ಹಣ್ಣು ಹಂಪಲು (ಕಣಿ) ಹಳದಿ ಬಣ್ಣದ ಬಿಶು ಪುಷ್ಪ ಇರಿಸಿ ಬಿಶು ಹಬ್ಬ ದೇವರನಾಡು ಕೇರಳದಲ್ಲಿ ಹಿಂದೂ ಮಲಯಾಳಿ ನೆಲೆಸಿರುವ ಎಲ್ಲಾ ರಾಜ್ಯ ಹಾಗೂ ವಿದೇಶಗಳಲ್ಲೂ ಬಿಶು ಹಬ್ಬವನ್ನು ಆಚರಿಸುತ್ತಾರೆ. ಸುಂಟಿಕೊಪ್ಪ ಸುರೇಶ್ ಗೋಪಿ ಮನೆಯಲ್ಲಿ ಫಲಪುಷ್ಪಗಳನ್ನು ಇರಿಸಿ ಪೂಜೆಯನ್ನು ಸಲ್ಲಿಸಿದರು. ಹಿಂದೂ ಮಾಲಯಾಳಿಗಳ ಮನೆಂiÀಲ್ಲಿ ದವಸ ಧಾನ್ಯ, ಹೂ ಹಣ್ಣು ಹಂಪಲು (ಕಣಿ) ಹಳದಿ ಬಣ್ಣದ ಬಿಶು ಪುಷ್ಪ ಇರಿಸಿ ಬಿಶು ಹಬ್ಬ ಬರಚಿಸಿ ಹೊಸ ಬಟ್ಟೆ ಧರಿಸಿ ಇನ್ನಿತರ ತರಕಾರಿಗಳಿಂದ ತಯಾರಿಸಿದ ಭಕ್ಷ ಬೋಜನ ಸವಿಯುವುದು ಬಿಶು ಹಬ್ಬದ ವಿಶೇಷವಾಗಿದೆ.

Read More

ಸೋಮವಾರಪೇಟೆ ಏ.15 NEWS DESK : ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ವಾಸ್ತುಶಿಲ್ಪಿ, ದಲಿತ ಚಳುವಳಿಯ ಪಿತಾಮಹಾ ಎಂದು ಪರಿಗಣಿಸಲಾಗಿದೆ. ಅವರು ಸಂವಿಧಾನದ ಹಕ್ಕುಗಳಿಂದ ನಾವೆಲ್ಲಾ ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದು ಮುಖ್ಯ ಶಿಕ್ಷಕ ಶಿರಂಗಾಲ ಲೋಕೇಶ್ ಅಭಿಪ್ರಾಯಿಸಿದರು. ತಾಲೂಕು ಆಡಳಿತ ವತಿಯಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಮಾನವ ಧರ್ಮದ ಪ್ರತಿಪಾದಕ, ಸಮಾಜ ಸುಧಾರಕ, ಸಂವಿಧಾನ ತಜ್ಞ, ಮಾನವ ಹಕ್ಕುಗಳ ಹೋರಾಟಗಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ಅವರು ಭಾರತದಲ್ಲಿಯ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯರು, ಎದುರಿಸುತ್ತಿದ್ದ ತಾರತಮ್ಯ ಮತ್ತು ದಬ್ಬಾಳಿಕೆಯ ವಿರುದ್ಧದ ಹೋರಾಟ ಮಾಡಿ, ನ್ಯಾಯ ಒದಗಿಸಿಕೊಟ್ಟ ಮಹಾನ್ ಚೇತನ ಎಂದು ಬಣ್ಣಿಸಿದರು. ಅಂಬೇಡ್ಕರ್ ಅವರು ಸ್ವಾತಂತ್ರ್ಯ ಭಾರತದ ಸಂವಿಧಾನವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಮಹಿಳೆಯರು, ಕಾರ್ಮಿಕರು, ಅಸ್ಪೃಶ್ಯರು, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಹಿತಾಸಕ್ತಿ ಕಾಪಾಡಲು ಶ್ರಮಿಸಿದ್ದಾರೆ. ಇವತ್ತು ನಾವೆಲ್ಲಾ ಪಡೆಯುತ್ತಿರುವ…

Read More

ಸೋಮವಾರಪೇಟೆ ಏ.15 NEWS DESK  : ಅಂಬೇಡ್ಕರ್ ಸೇನೆ ಮತ್ತು ಗಾಂಧಿನಗರದ ದೊಡ್ಡಮಾರಿಯಮ್ಮ ದೇವಾಲಯ ಸಮಿತಿ, ಬೆಟ್ಟದಳ್ಳಿ ಮಾನವತ ಯುವಕ ಸಂಘ, ಶಾಂತಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಗ್ರಾಮಾಭಿವೃದ್ಧಿ ಸಮಿತಿ, ವೆಂಕಟೇಶ್ವರ ಬ್ಲಾಕ್ ನ ಆದಿಕರ್ನಾಟಕ ಸಮಾಜ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಸೋಮವಾರಪೇಟೆಯಲ್ಲಿ ಆಚರಿಸಲಾಯಿತು. ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಲಂಕೃತ ವಾಹನದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸಿ, ವಾದ್ಯವೃಂಧ ಮತ್ತು ಡಿಜೆಯೊಂದಿಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರಮುಖರಾದ ಹಾನಗಲ್ ಜಯಪ್ಪ, ಪ್ರತಾಪ್ ಶಾಂತಳ್ಳಿ, ಜಗದೀಶ್ ಬೆಟ್ಟದಳ್ಳಿ, ಎಚ್.ಜೆ.ಜವರಪ್ಪ, ಪ್ರವೀಣ್, ಎಂ.ಪಿ.ಹೊನ್ನಪ್ಪ ಇದ್ದರು.

Read More

ಮಡಿಕೇರಿ ಏ.15 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಖಂಡನೀಯ. ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟಕ್ಕೆ ಸ್ವಾಭಿಮಾನಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ ಅವರ ಹೇಳಿಕೆ ಅವರು ಮಹಿಳೆಯರ ಮೇಲೆ ಹೊಂದಿರುವ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಮಾಜಿ ಮುಖ್ಯಮಂತ್ರಿಯೊಬ್ಬರು ಈ ರೀತಿಯ ಹೇಳಿಕೆ ನೀಡಿರುವುದರಿಂದ ರಾಷ್ಟ್ರದ ಇಡೀ ಮಹಿಳೆಯರನ್ನು ಅವಮಾನಿಸಿದಂತ್ತಾಗಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷ ಮಹಿಳೆಯರನ್ನು ಪೂಜ್ಯ ಭಾವನೆಯಿಂದ ಕಾಣುತ್ತದೆ, ಇಡೀ ಸಮಾಜ ಮಹಿಳೆಯರನ್ನು ಕಾವೇರಿ, ಚಾಮುಂಡೇಶ್ವರಿ, ಭೂತಾಯಿ ಎಂದು ಕೈಮುಗಿಯುತ್ತದೆ. ಆದರೆ ಮಹಿಳೆಯರ ಬಗ್ಗೆ ಕುಮಾರಸ್ವಾಮಿ ಅವರಿಗೆ ಇರುವ ಭಾವನೆಯನ್ನು ಯಾವ ಸ್ವಾಭಿಮಾನಿ ಮಹಿಳೆ ಕೂಡ ಸಹಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಮಹಿಳೆಯೂ ಇಂದು ಅವರ ವಿರುದ್ಧ ದಿಕ್ಕಾರ ಕೂಗುವ…

Read More

ವಿರಾಜಪೇಟೆ ಏ.15 NEWS DESK : ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಎನ್.ಎಸ್.ಎಸ್., ಐಕ್ಯೂಎಸಿ, ವಿದ್ಯಾರ್ಥಿ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಡಾ. ಬಿ.ಆರ್.ಅಂಬೇಡ್ಕರ್ ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ವಿಷಯದಂತೆ ವಿಶ್ವದಲ್ಲಿಯೇ ಬಲಿಷ್ಠ ಸಂವಿಧಾನವನ್ನು ರಚಿಸಿದ ಕೀರ್ತಿ ಡಾ.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಸಂವಿಧಾನದ ಆಶಯಗಳನ್ನು ವಿವರಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಅರ್ಜುನ್ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಚಿಂತನೆಗಳು ಸಾರ್ವಕಾಲಿಕವಾಗಿದ್ದು, ಅವರು ವಿಶ್ವದಲ್ಲಿಯೇ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ. ಮತ್ತು ಸಂವಿಧಾನದ ರಚನೆಯಲ್ಲಿ, ಆರ್.ಬಿ.ಐ ಸ್ಥಾಪನೆಯಲ್ಲಿ, ಅರ್ಥಶಾಸ್ತ್ರಕ್ಕೆ ಅಂಬೇಡ್ಕರ್ ಅವರ ಕೊಡುಗೆಗಳನ್ನು ಉದಾಹರಣೆ ಸಮೇತ ವಿವರಿಸಿದರು. ಕಾಲೇಜಿನ ಎನ್.ಎಸ್.ಎಸ್. ಘಟಕದ ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಸಂವಿಧಾನದ ಪೀಠಿಕೆಯ…

Read More

ಮಡಿಕೇರಿ ಏ.15 NEWS DESK : ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಅವರು ಈ ಬಾರಿ ಗೆಲುವು ಸಾಧಿಸುವುದು ನಿಶ್ಚಿತವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲೋಕಸಭಾ ಚುನಾವಣೆ ಮುಗಿದ ನಂತರ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಇಡೀ ಕಾಂಗ್ರೆಸ್ ಬಳಗ ಮಂಜುನಾಥ್ ಕುಮಾರ್ ಅವರ ಗೆಲುವಿಗಾಗಿ ಶ್ರಮಿಸಲಿದೆ ಎಂದರು. ಶಿಕ್ಷಕರ ಕ್ಷೇತ್ರದಿಂದ ಎರಡು ಬಾರಿ ಚುನಾವಣೆಯನ್ನು ಎದುರಿಸಿದ್ದ ಮಂಜುನಾಥ್ ಕುಮಾರ್ ಅವರು ಅಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಆದರೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ 15 ಮಂದಿ ಕಾಂಗ್ರೆಸ್ ಶಾಸಕರೇ ಇದ್ದಾರೆ. ಕೊಡಗು ಜಿಲ್ಲೆಯಲ್ಲಿ 1500 ಮತದಾರರಿದ್ದಾರೆ, ಇಬ್ಬರು ಶಾಸಕರು ಕಾಂಗ್ರೆಸ್ಸಿನವರೇ ಆಗಿರುವುದರಿಂದ ಗೆಲುವು ಮಂಜುನಾಥ್ ಕುಮಾರ್ ಅವರ ಸಮೀಪದಲ್ಲೇ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಶಿಕ್ಷಕ ವರ್ಗಕ್ಕೆ ಅತ್ಯಂತ ಆತ್ಮೀಯರಾಗಿ, ಶಿಕ್ಷಣ…

Read More

ಮಡಿಕೇರಿ ಏ.15 NEWS DESK : ಕಾಂತೂರು-ಮೂರ್ನಾಡು ಶ್ರೀಪನ್ನಂಗಾಲ ದೇವಿಯ ವಾರ್ಷಿಕೋತ್ಸವವು ಏ.18 ಮತ್ತು 19 ರಂದು ನಡೆಯಲಿದೆ. ಏ.18 ರಂದು ಬೆಳಿಗ್ಗೆ ದೇವರ ಶುದ್ಧ, ಕಳಸ ಪೂಜೆ, ಕೆರೆ ಮನೆಯಿಂದ ಭಂಡಾರ ತರುವುದು, ಎತ್ತು ಪೋರಾಟ, ದೇವರ ದರ್ಶನ ಹಾಗೂ ಸಂಜೆ 7 ಗಂಟೆಗೆ ಕುರುಂದ ಬಾರಣಿ ಜರುಗಲಿದೆ. ಏ.19 ರಂದು ಬೆಳಿಗ್ಗೆ ದೇವರ ದರ್ಶನ, ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ಚಾಮುಂಡಿ ಉತ್ಸವ, ಕುರುಂದಾಟ ದೇವರ ಜಳಕ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಹಾಗೂ ತಕ್ಕ ಮುಖ್ಯಸ್ಥರು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

Read More

ಮಡಿಕೇರಿ, ಏ.15 NEWS DESK : ಇತ್ತೀಚೆಗೆ ನಡೆದ ಕೇರಳ-ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಕೊಡಗಿನ ಮೂವರಿಂದ ಕವನ ವಾಚನಕ್ಕೆ ಆಹ್ವಾನವಿದ್ದು, ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಸಂಸ್ಥೆ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ ಆಯೋಜಿಸಿದ್ದ ಉತ್ಸವದಲ್ಲಿ ಶಕ್ತಿ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ಕೊಡವ ಸಿನಿಮಾ ನಟಿ, ನಿರ್ದೇಶಕಿ ಈರಮಂಡ ಹರಿಣಿ ವಿಜಯ್, ಕಲ್ಲುಗುಂಡಿಯ ಲೇಖಕಿ, ಸಾಹಿತಿ ಸಂಗೀತ ರವಿರಾಜ್, ಕವನ ಪ್ರಸ್ತುತ ಪಡಿಸಿದರು. ಸಮಾರಂಭದಲ್ಲಿ ಆಶೀರ್ವಚನ ನೀಡಿದ ಎಡನೀರು ಮಠಾಧೀಶ ಶ್ರೀ ಸಚ್ಛಿದಾನಂದ ಭಾರತಿ ಕನ್ನಡ ಭಾಷೆ, ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಪ್ರತಿ ಕನ್ನಡಿಗನೂ ಬದ್ಧನಾಗಿರಬೇಕು ಎಂದರು. ಕಲ್ಕೂರ ಪ್ರತಿಷ್ಠಾನದ ಪ್ರದೀಪ್‍ಕುಮಾರ್ ಕಲ್ಕೂರ ಕಾರ್ಯಕ್ರಮ ಉದ್ಘಾಟಿಸಿದರು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಶರಣಪ್ಪ ಗಬ್ಬೂರು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾಸರಗೋಡು ಜಿಲ್ಲಾ…

Read More

ಮಡಿಕೇರಿ, ಏ.15 NEWS DESK : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರು ನವ ಭಾರತದ ನಿರ್ಮಾತೃ. ಅವರ ಚಿಂತನೆಗಳು ಆಧುನಿಕ ಭಾರತವನ್ನು ರೂಪಿಸಿದೆ ಎಂದು ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ ಅವರು ಅಭಿಪ್ರಾಯಪಟ್ಟರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ಜರುಗಿದ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 133ನೇ ಜನ್ಮ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಚಿಂತನೆಗಳು ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಅರ್ಥಿಕ ವಲಯಗಳ ಸಮಷ್ಟಿ ಕ್ರಾಂತಿಗೆ ಕಾರಣವಾಗಿದೆ. ಅವರಂತೆ ಶಿಕ್ಷಣವನ್ನು ಹುಲಿಯ ಹಾಲಿನ ಮೇವಾಗಿಸಿಕೊಂಡು ಘನತೆಯ ಬದುಕನ್ನು ಕಟ್ಟಿಕೊಳ್ಳುವ ಕಡೆಗೆ ನಾವೆಲ್ಲರೂ ಮುನ್ನೆಡೆಯ ಬೇಕಾಗಿದೆ ಎಂದರು. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಆದ್ದರಿಂದ ಯುವಜನತೆ ಶಿಕ್ಷಣವನ್ನು ಪಡೆದುಕೊಳ್ಳುವಲ್ಲಿ ಹೆಚ್ಚಿನ ಉತ್ಸುಕತೆ ತೋರಬೇಕಾಗಿದೆ ಎಂದು ಹೇಳಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ತಿಪ್ಪೇಸ್ವಾಮಿ ಮಾತನಾಡಿ, ಸಮಾನತೆಯ, ಸಾಮಾಜಿಕ ನ್ಯಾಯದ ಬದುಕಿಗೆ ಅಂಬೇಡ್ಕರ್…

Read More

ಮಡಿಕೇರಿ, ಏ.15 NEWS DESK : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ರಾಷ್ಟ್ರದಲ್ಲಿ ಸಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಅಪಾರ ಶ್ರಮ ಪಟ್ಟಿದ್ದಾರೆ. ಅಲ್ಲದೇ ಸಂವಿಧಾನವನ್ನು ರಚನೆ ಮಾಡುವಲ್ಲಿ ಅವರ ಪಾತ್ರ ಅವಿಸ್ಮರಣೀಯವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ 133ನೇ ಜಯಂತಿ ಕಾರ್ಯಕ್ರಮವನ್ನು  ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಮತ್ತು ಕರ್ತವ್ಯಗಳನ್ನು ಅರಿತು ಅವುಗಳನ್ನು ಪಾಲಿಸೋಣ. ಡಾ.ಬಿ.ಆರ್‌ ಅಂಬೇಡ್ಕರ್‌ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಪ್ರತಿಯೊಬ್ಬರು ನಡೆಯುವ ಮೂಲಕ ಯುವಕರು ಉತ್ತಮ ಜೀವನ ರೂಪಿಸಿಕೊಳ್ಳಲು ಕರೆ‌ ನೀಡಿದರು. ಸಂವಿಧಾನ ನಮಗೆ ಉತ್ತಮ ಪ್ರಜಾಪ್ರಭುತ್ವ ರಚಿಸಲು ಮತದಾನ ಹಕ್ಕು ನೀಡಿದೆ. ಅದನ್ನು ಅರ್ಹರಿಗೆ ನೀಡಿ, ಅಂಬೇಡ್ಕರ್ ಅವರ ಆಶಯ ದಂತೆ ಮುಂದೆ ಸಾಗೋಣ ಎಂದರು. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ…

Read More