ಸೋಮವಾರಪೇಟೆ ಏ.13 NEWS DESK : ಸೋಮವಾರಪೇಟೆ ಶ್ರೀ ಆಂಜನೇಯ ದೇವಾಲಯದಲ್ಲಿ ಶ್ರೀ ರಾಮನವಮಿ ಉತ್ಸವ ಅಂಗವಾಗಿ ವಿಶೇಷ ಪೂಜೆ ನಡೆಯುತ್ತಿದ್ದು, ಆಂಜನೇಯ ದೇವರಿಗೆ ಬೆಣ್ಣೆ ಅಲಂಕಾರ ಮಾಡಿ ಪೂಜಿಸಿಲಾಯಿತು.
ಲೇಖಕ: admin
ಮಡಿಕೇರಿ. ಏ.13 NEWS DESK : ಕೊಡಗು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಡಿಸಿ-XI ಮತ್ತು ಜಿಲ್ಲೆಯ ಪತ್ರಕರ್ತರ ತಂಡದ ಪ್ರೆಸ್-XI ನಡುವೆ 8 ಓವರ್ ಗಳ ಪಂದ್ಯಾವಳಿ ನಡೆಯಿತು. ಪಂದ್ಯ ಆರಂಭಕ್ಕೂ ಮುನ್ನ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಚುನಾವಣೆಯಂತಹ ಪ್ರಜಾಪ್ರಭತ್ವದ ಹಬ್ಬದಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ. ಮತದಾನ ಮಾಡುವವರು ಎಂದಿಗೂ ಚಾಂಪಿಯನ್ ಇದ್ದಂತೆ ಎಂದು ಬಣ್ಣಿಸಿದರು. ನೈತಿಕ ಮತದಾನಕ್ಕಾಗಿ ಪತ್ರಕರ್ತರ ಸಹಕಾರವೂ ಅಗತ್ಯ. ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂದರು. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಡಿಸಿ-XI ತಂಡ ಉತ್ತಮ ಬೌಲಿಂಗ್ ದಾಳಿ ಪ್ರದರ್ಶಿಸಿತು. ಪ್ರೆಸ್- XI ತಂಡವು ನಿಗದಿತ 8 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 68 ರನ್ ಗಳ ಸವಾಲಿನ ಗುರಿ…
NEWS DESK : *ಕೊಡವ ಮಹಾಜನಕ್ ಕೊಡವ ಪುದಿಯ ಕಾಲ “ಎಡಮ್ಯಾರ್” ರ ನಲ್ಲಾಮೆ* (ಹಂಚೆಟ್ಟಿರ ಮನುಮುದ್ದಪ್ಪ, ಅಧ್ಯಕ್ಷರು, ಕೊಡವ ಕಲ್ಚರಲ್ ಅಸೋಸಿಯೇಷನ್)
ಮಡಿಕೇರಿ ಏ.13 NEWS DESK: ಕೊಡವರ ಹೊಸ ವರ್ಷಾಚರಣೆ ಎಡಮ್ಯಾರ್ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಏ.14 ರಂದು ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ವಸಂತಋತು ಫೆ.15 ರಿಂದ ಆರಂಭಗೊಂಡು ಏ.14 ಕ್ಕೆ ಕೊನೆಗೊಳ್ಳುವ “ಎಡಮ್ಯಾರ್” ನ್ನು ಸಿಎನ್‌ಸಿ ಸಂಘಟನೆ ಪ್ರತಿವರ್ಷ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದ್ದು, ಇದು 30ನೇ ವರ್ಷದ ಕಾರ್ಯಕ್ರಮವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಏ.14 ರಂದು ಸಂಜೆ 6.30ಗಂಟೆಗೆ ಗೋಣಿಕೊಪ್ಪಲಿನ ಶ್ರೀಉಮಾಮಹೇಶ್ವರಿ ದೇವಾಲಯದ ಬಳಿಯಿಂದ ದುಡಿಕೊಟ್ಟ್ ಪಾಟ್ ನೊಂದಿಗೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಂಜಿನ ಮೆರವಣಿಗೆ ಸಾಗಿ ಆರ್‌ಎಂಸಿ ಯಾರ್ಡ್ ನಲ್ಲಿ ಕೊನೆಗೊಳ್ಳಲಿದೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗ ಕೊಡವರ ಹಕ್ಕುಗಳ ಕುರಿತು ಕಾರ್ಯಕ್ರಮದಲ್ಲಿ ಪ್ರತಿಪಾದನೆ ಮಾಡುವ ಮೂಲಕ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯಲಾಗುವುದು. ರಾಜ್ಯಾಂಗದತ್ತ ಹಕ್ಕೊತ್ತಾಯಗಳನ್ನು ಪ್ರಚುರಪಡಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕೂ ಮೊದಲು ಅಂದು ಬೆಳಗ್ಗೆ 6ಗಂಟೆಗೆ…
ಮಡಿಕೇರಿ ಏ.13 NEWS DESK : ಪ್ರಸ್ತುತ ರಾಜಕೀಯ ವಾತಾವರಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಗೆಲುವಿಗೆ ಪೂರಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ನಗರದ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ ಬಿಜೆಪಿ ಮತ್ತು ತಟಸ್ಥವಾಗಿ ಉಳಿದಿರುವ ಜೆಡಿಎಸ್ ಪ್ರಮುಖರ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲೆಯ ಬಿಜೆಪಿ ನಾಯಕರು ಜೆಡಿಎಸ್‍ನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಯಲ್ಲಿ ಮುಂದುವರೆಯಬೇಕು. ಗೆಲುವಿಗೆ ಪೂರಕವಾಗಿ ಎರಡೂ ಪಕ್ಷಗಳು ಪರಸ್ಪರ ಅರ್ಥೈಸಿಕೊಂಡು ಮುನ್ನಡೆಯುವ ಮೂಲಕ ಯದುವೀರ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ತಟಸ್ಥರಾಗಿದ್ದ ಕೊಡಗಿನ ಜೆಡಿಎಸ್ ಪ್ರಮುಖರನ್ನು ಸಂಪರ್ಕಿಸಿ ಈ ಚುನಾವಣೆಯಲ್ಲಿ ಯದುವೀರ್ ಪರವಾಗಿ ಸಕ್ರಿಯರಾಗುವಂತೆ ಮನವಿ ಮಾಡಿದ್ದೇನೆ. ಮೈಸೂರು ರಾಜರು ಈ ನಾಡಿಗೆ ನೀಡಿದ ಕೊಡುಗೆಗಳು ಅನುಪಮವಾದವು. ಇಂತಹ ರಾಜವಂಶಸ್ಥರ ಕುಡಿ ಯದುವೀರ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸವುದು ಉಪಕಾರಸ್ಮರಣೆಯೆಂದು ವಿಶ್ವನಾಥ್ ತಿಳಿಸಿದರು. ಯಾವುದೇ ಸರ್ಕಾರಗಳು ಮೂಲಭೂತವಾಗಿ ಅಕ್ಷರ, ಆರೋಗ್ಯ ಮತ್ತು ಉದ್ಯೋಗ ಭದ್ರತೆಯನ್ನು ಜನತೆಗೆ ಒದಗಿಸುವ…
ಮಡಿಕೇರಿ ಏ.13 NEWS DESK : ಕೊಡಗಿನ ವಿವಿಧ ದೇವಾಲಯಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಅರಮೇರಿಯ ಪಂನಂಗಲತಮ್ಮೆ ದೇವಸ್ಥಾನ, ಬೆಳ್ಳೂರು ದುರ್ಗಾ ಪರಮೇಶ್ವರಿ ದೇವಸ್ಥಾನ, ಸಂಪಾಜೆಯ ಪಂಚಾಲಿಂಗೇಶ್ವರ ದೇವಸ್ಥಾನ ಹಾಗೂ ಮದೇನಾಡು ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಏ.13 NEWS DESK : ಹಿಂದಿನ ಬಿಜೆಪಿ ಸರಕಾರ ನೀಡಿದ ಯೋಜನೆಗಳಿಗೆ ಕಾಂಗ್ರೆಸ್ ತನ್ನ “ಲೇಬಲ್” ಹಾಕುವ ಮೂಲಕ ಪ್ರಚಾರ ಪಡೆದುಕೊಳ್ಳುತ್ತಿದೆ. ಕೊಡಗಿನ ಶಾಸಕರ ಕೊಡುಗೆ ಏನೂ ಇಲ್ಲ ಎಂದು ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಟೀಕಿಸಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕರುಗಳು ಕಾಂಗ್ರೆಸ್ ಪಕ್ಷ ಹಾಗೂ ಹಾಲಿ ಶಾಸಕರುಗಳ ವಿರುದ್ಧ ವಾಗ್ಧಾಳಿ ನಡೆಸಿದರು. ಕೆ.ಜಿ.ಬೋಪಯ್ಯ ಮಾತನಾಡಿ ಸುಮ್ಮನೆ ಶ್ವೇತಪತ್ರ ಹೊರಡಿಸಿದರೆ ಸಾಲದು, ಜನರಿಗೆ ನಿಖರವಾದ ಲೆಕ್ಕ ನೀಡಲಿ. ಬಿಜೆಪಿ ಸರಕಾರದ ಅವಧಿಯ ಅನುದಾನದ ಲೆಕ್ಕ ನಮ್ಮ ಬಳಿ ಇದೆ, ನಿಮ್ಮ ಲೆಕ್ಕ ಕೊಡಿ ಎಂದರು. ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ರಡಿ ಪಾರಂಪರಿಕವಾಗಿ ಬಂದ ವನ್ಯಜೀವಿ ಉತ್ಪನ್ನವನ್ನು ಘೋಷಿಸಿಕೊಳ್ಳಲು ಅವಕಾಶವಿದ್ದರೂ ಮಾಹಿತಿ ಕೊರತೆಯಿಂದ ಘೋಷಿಸಿಕೊಂಡಿರಲಿಲ್ಲ. ಜಿಲ್ಲೆಯಲ್ಲಿ ಪಾರಂಪರಿಕ ವನ್ಯಜೀವಿ ಉತ್ಪನ್ನಗಳು ಧಾರ್ಮಿಕ ಆಚರಣೆಯ ಭಾಗವಾಗಿದೆ. ಇದನ್ನು ಸ್ವಾಧೀನಕ್ಕೆ ನೀಡಲು ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬಹುದಿತ್ತು. ಆದರೆ, ಸರಕಾರದ ಸುತ್ತೋಲೆಗೆ ಸರಕಾರದ ಭಾಗವಾಗಿರುವ…
ಮಡಿಕೇರಿ ಏ.13 NEWS DESK : ಗೋಣಿಕೊಪ್ಪದಲ್ಲಿ ಕಾಂಗ್ರೆಸ್ ಪಕ್ಷದ ನೂತನ ಕಚೇರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಏ.13 NEWS DESK : ಕಾಡುಕೋಣವನ್ನು ಗುಂಡಿಕ್ಕಿ ಕೊಂದು ಮಾಂಸವನ್ನಾಗಿ ಕತ್ತರಿಸಿ ಸಾಗಿಸಿದ ಆರೋಪದಡಿ ತಲೆ ಮರೆಸಿಕೊಂಡಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಕುಂಜಿಲ ಗ್ರಾಮದ ಮಹಮ್ಮದ್ ಜಾಬೀರ್(29) ಹಾಗೂ ನೌಫಲ್(24) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ ಒಂದು ಮಾರುತಿ ಓಮಿನಿ ಕಾರು ಮತ್ತು ಎರಡು ಮೊಬೈಲ್ ಫೋನ್’’ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕುಶಾಲನಗರ ವಲಯ ವ್ಯಾಪ್ತಿಯ ಮಾಲ್ದಾರೆ ಶಾಖೆಯ ಮಾಲ್ದಾರೆ ಗಸ್ತಿನ ಪಿರಿಯಾಪಟ್ಟಣ-ಸಿದ್ದಾಪುರ ರಸ್ತೆಯಂಚಿನಲ್ಲಿ ಕಾಡುಕೋಣವೊಂದವನ್ನು ಗುಂಡಿಕ್ಕಿ ಕೊಂದು ಮಾಂಸವನ್ನಾಗಿ ಕತ್ತರಿಸಿಕೊಂಡು ಸಾಗಿಸಿರುವ ಸಂಬಂಧ ಮಾ.14ರಂದು ಪ್ರಕರಣ ದಾಖಲಾಗಿತ್ತು. ಅಲ್ಲದೆ ಮಾ.24 ರಂದು ಆನೆಚೌಕೂರು ವನ್ಯಜೀವಿ ವಲಯದ ಪಿರಿಯಾಪಟ್ಟಣ-ಸಿದ್ದಾಪುರ ಮುಖ್ಯ ರಸ್ತೆಯಲ್ಲಿ ಕಾಡುಕೋಣವನ್ನು ಹತ್ಯೆ ಮಾಡಿ ಮಾಂಸ ಮಾಡಿ ಸಾಗಿಸಿದ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಎರಡೂ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚಲು ಮಡಿಕೇರಿ ವಿಭಾಗದ ಉಪ ಅರಣ್ಯ…
ಮಡಿಕೇರಿ ಏ.13 NEWS DESK : ಬಿಜೆಪಿ ಪರಿಶಿಷ್ಟರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಎಲ್ಲಾ ವರ್ಗದವರಿಗೆ ಸಮಾನ ಅವಕಾಶಗಳನ್ನು ನೀಡಿದ ಹೆಗ್ಗಳಿಕೆ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಲ್ಲುತ್ತದೆ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪರಿಶಿಷ್ಟರ ಬಹುಪಾಲು ಮತಗಳು ಕಾಂಗ್ರೆಸ್ ಪಾಲಾಗಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟರಿಗೆ ಕಾಂಗ್ರೆಸ್ ಸೂಕ್ತ ಸ್ಥಾನಮಾನ ಮತ್ತು ಸಮಾನ ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಯಶಸ್ವಿಯಾಗಿದೆ. ಆದರೆ ಬಿಜೆಪಿ ಪರಿಶಿಷ್ಟರಿಗಾಗಿ ನೀಡಿದ ಕೊಡುಗೆ ಏನು ಎನ್ನುವುದನ್ನು ಆ ಪಕ್ಷದ ಮುಖಂಡರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು. ಬಿಜೆಪಿ ಸಂವಿಧಾನ ವಿರೋಧಿಯಾಗಿದೆ, ಬಡವರ ಪಾಲಿಗೆ ಇಲ್ಲದಂತಾಗಿದ್ದು, ಶ್ರೀಮಂತರ ಪರವಾಗಿದೆ. ಇದರ ನಡುವೆಯೇ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷರು ತಮ್ಮ ಪಕ್ಷದ ಪರ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ. ಪಕ್ಷದಲ್ಲಿ ಅವರ ಸ್ಥಾನಮಾನ ಏನು ಎಂಬುವುದನ್ನು ಎಸ್.ಸಿ ಮೋರ್ಚಾದ ಜಿಲ್ಲಾಧ್ಯಕ್ಷರು ಅರ್ಥಮಾಡಿಕೊಳ್ಳಬೇಕಾಗಿದೆ. ಕಾಂಗ್ರೆಸ್ ಹೆಚ್.ಬಿ.ಜಯಮ್ಮ, ರಾಜಮ್ಮ, ಪಾಪುಸಣ್ಣಯ್ಯ ಸೇರಿದಂತೆ…






