ಮೈಸೂರು ಮೇ 23 NEWS DESK : ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಹೇಶ್ ಕಾಳೇಗೌಡ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭ ಕಲುಷಿತ ನೀರು ಕುಡಿದು ಮೃತಪಟ್ಟ ಕನಕರಾಜು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ವೈಯುಕ್ತಿಕವಾಗಿ ನಗದು ಪರಿಹಾರ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಮೃತ ಕಾಂತರಾಜು ಅವರ ಸಹೋದರ ರವಿಗೆ ಕೆಲಸ ಕೊಡಿಸುವ ಭರವಸೆ ನೀಡಿದರು.
ಲೇಖಕ: admin
ಮಡಿಕೇರಿ ಮೇ 23 NEWS DESK : ಶ್ರೀ ಮುತ್ತಪ್ಪ ಮಹಿಳಾ ವೇದಿಕೆ ವತಿಯಿಂದ ನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿರುವ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಪಾರ್ವತಿ, ಸರಸ್ವತಿ, ಮಹಾಲಕ್ಷ್ಮಿ ಸಂಕಲ್ಪದಲ್ಲಿರುವ ಶ್ರೀ ಭಗವತಿ ದೇವಿಗೆ ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ನಂತರ ದೇವಾಲಯದ ಆವರಣದಲ್ಲಿ ನೂರಾರು ಮಹಿಳೆಯರು ಏಕಕಾಲದಲ್ಲಿ ಸೌದೆ ಸೌದೆ ಒಲೆಯನ್ನು ಬಳಸಿ ಮಣ್ಣಿನ ಮಡಕೆಯಲ್ಲಿ ಸಿಹಿ ಪೊಂಗಲ್ ತಯಾರಿಸಿ ದೇವರಿಗೆ ಅರ್ಪಿಸಿದರು. ಇದು ಕೇವಲ ಮಹಿಳೆಯರು ಮಾತ್ರ ನಡೆಸುವ ಪುಣ್ಯ ಕಾರ್ಯವಾಗಿದ್ದು, ಪೊಂಗಾಲ ಸಮರ್ಪಣೆಯಿಂದ ಮನೆಯಲ್ಲಿ ಆರೋಗ್ಯ ಶಾಂತಿ, ನೆಮ್ಮದಿ ನೆಲೆಸುವ ನಂಬಿಕೆ ಇದೆ ಎಂದು ಶ್ರೀ ಮುತ್ತಪ್ಪ ಮಹಿಳಾ ವೇದಿಕೆಯ ಅಧ್ಯಕ್ಷೆ ಶಾರದ ರಾಮನ್ ಮಾಹಿತಿ ನೀಡಿದರು.
ಮಡಿಕೇರಿ ಮೇ 23 NEWS DESK : ರಾಜ್ಯಾದ್ಯಂತ ‘ಪೂರ್ವ ಮುಂಗಾರು’ ಉತ್ತಮವಾಗಿದ್ದು, ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಆ ನಿಟ್ಟಿನಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕೀತು ಮಾಡಿದ್ದಾರೆ. ಬರ ನಿರ್ವಹಣೆ ಮತ್ತು ‘ಮುಂಗಾರು’ ಪೂರ್ವ ಸಿದ್ಧತೆ ಕುರಿತು ವಿಡಿಯೋ ಸಂವಾದ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಗುರುವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು. ರಾಜ್ಯಾದ್ಯಂತ ಈಗಾಗಲೇ ಪೂರ್ವ ಮುಂಗಾರು ಉತ್ತಮವಾಗಿ ಆಗುತ್ತಿರುವ ಹಿನ್ನೆಲೆ ಹಲವು ಕಡೆಗಳಲ್ಲಿ ಬಿತ್ತನೆ ಕಾರ್ಯ ಆರಂಭವಾಗಿದೆ. ಆದ್ದರಿಂದ ಸಮರ್ಪಕವಾಗಿ ಬಿತ್ತನೆ ಬೀಜ ವಿತರಿಸುವುದು ಹಾಗೂ ರಸಗೊಬ್ಬರ ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದ್ದರೂ ಸಹ, ಕೆಲವು ಕಡೆಗಳಲ್ಲಿ ಕುಡಿಯುವ ನೀರು ಸಮಸ್ಯೆ ಇದ್ದು, ಕುಡಿಯುವ ನೀರು ಸರಿಯಾಗಿ ಸರಬರಾಜು ಮಾಡಬೇಕು. ಜೊತೆಗೆ ಕುಡಿಯುವ ನೀರನ್ನು ಪ್ರತೀನಿತ್ಯ ಪರೀಕ್ಷಿಸಬೇಕು ಎಂದು ಮುಖ್ಯಮಂತ್ರಿ ಅವರು ಕಟ್ಟುನಿಟ್ಟಿನ…
ಮಡಿಕೇರಿ ಮೇ 23 NEWS DESK : ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 9 ತಿಂಗಳ ತೋಟಗಾರಿಕೆ ತರಬೇತಿಯು 2024ರ ಜು.1 ರಿಂದ 2025 ರ ಮಾ.31 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್‍ನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸಲು ಜೂ.3 ರ ಸಂಜೆ 5.30 ಗಂಟೆಗೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ, ಮಡಿಕೇರಿ ಕಚೇರಿಯನ್ನು ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಮತ್ತು ಅಂತರ್ಜಾಲ https://horticulturedir.karnataka.gov.in ದಲ್ಲಿ ಅರ್ಜಿ ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ, ತಾಯಿ, ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ, ತಾಯಿಯವರ ಒಪ್ಪಿಗೆ ಪತ್ರ ಮತ್ತಿತರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ…
ಮಡಿಕೇರಿ ಮೇ.23 NEWS DESK : ಪ್ರಸಕ್ತ(2024-25) ಸಾಲಿಗೆ ಕೊಡ್ಲಿಪೇಟೆ ಕ್ಯಾತೆ ಗ್ರಾಮದ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ 2024-25ನೇ ಸಾಲಿಗೆ ಗಣಿತ ಉಪನ್ಯಾಸಕರು(1), ರಸಾಯನಶಾಸ್ತ್ರ ಉಪನ್ಯಾಸಕರು(1), ಜೀವಶಾಸ್ತ್ರ, ಭೌತಶಾಸ್ತ್ರ, ಕನ್ನಡ, ಆಂಗ್ಲ ಭಾಷೆ ಉಪನ್ಯಾಸಕರು( ತಲಾ 1), ಕನ್ನಡ ಶಿಕ್ಷಕರು(1), ಆಂಗ್ಲ ಭಾಷೆ ಶಿಕ್ಷಕರು(1), ಸಮಾಜ ವಿಜ್ಞಾನ ಶಿಕ್ಷಕರು(1), ವಿಜ್ಞಾನ ಶಿಕ್ಷಕರು(1), ಗಣಕಯಂತ್ರ ಶಿಕ್ಷಕರು(1), ಸ್ಟಾಪ್ ನರ್ಸ್ ಶಿಕ್ಷಕರು(1) ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು(1) ಹಾಗೂ ವಿರಾಜಪೇಟೆಯ ಪೆರುಂಬಾಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಗಣಕಯಂತ್ರ ಶಿಕ್ಷಕರು(01) ಮತ್ತು ಸ್ಟಾಪ್ ನರ್ಸ್ ಶಿಕ್ಷಕರು(1) ವಿಷಯಗಳಿಗೆ ಅನುಗುಣವಾಗಿ ಅತಿಥಿ ಉಪನ್ಯಾಸಕರು ಮತ್ತು ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಕಡೆಯ ದಿನಾಂಕದೊಳಗೆ ಜಿಲ್ಲಾ ಕಚೇರಿಗೆ ಅಥವಾ ಸಂಬಂಧಪಟ್ಟ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದು. ಉಪನ್ಯಾಸಕರ ಮತ್ತು ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆ ಎಂಎಸ್ಸಿ ಮತ್ತು ಬಿ.ಎಡ್ ಆಗಿರಬೇಕು. ಗಣಕಯಂತ್ರ ಶಿಕ್ಷಕರಿಗೆ…
ಮಡಿಕೇರಿ ಮೇ 23 NEWS DESK : ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ನಡೆದ ಅಂತರ್ ಕಾಲೇಜು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ ಪ್ರಶಸ್ತಿಯನ್ನು ಮಡಿಕೇರಿಯ ಪೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ತನ್ನ ಮುಡಿಗೇರಿಸಿಕೊಂಡಿದ್ದು, ರನ್ನರ್ಸ್ ಅಪ್ ಪ್ರಶಸ್ತಿಗೆ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ತಂಡ ಭಾಜನವಾಗಿದೆ. ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಬಿ.ಬಿ.ಎ. ವಿಭಾಗ ಮತ್ತು ದೈಹಿಕ ಶಿಕ್ಷಣ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಪಂದ್ಯಾವಳಿಯಲ್ಲಿ ರಾಜ್ಯದ ಪ್ರತಿಷ್ಠಿತ 16 ಕಾಲೇಜುಗಳ 124 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಂತಿಮ ಪಂದ್ಯದಲ್ಲಿ ಮಡಿಕೇರಿಯ ಎಫ್.ಎಂ.ಸಿ. ಕಾಲೇಜು ಎ ತಂಡ ಟೈಬ್ರೇಕರ್ ಮೂಲಕ 6-5 ಗೋಲುಗಳ ಅಂತರದಿಂದ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಎ ತಂಡದ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ತನ್ನದಾಗಸಿಕೊಂಡಿತು. ನಿಗದಿತ ಅವಧಿಯಲ್ಲಿ ಈ ತಂಡಗಳು ತಲಾ 3 ಗೋಲು ಗಳಿಸಿದ್ದವು. ವಿಜೇತ ತಂಡಗಳಿಗೆ ಟ್ರೋಫಿ ಮತ್ತು ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಪಂದ್ಯಾವಳಿಯ ಉತ್ತಮ ಗೋಲು…
ಬೆಂಗಳೂರು ಮೇ 23 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ.ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ ಎಂದು ಹೇಳಿದರು. ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು. ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ…
ಮಡಿಕೇರಿ ಮೇ 23 NEWS DESK : ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ.ಎಂ ಪಾಲಿಬೆಟ್ಟ ರೇಂಜ್ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ರೇಂಜ್‍ನ ಕೇಂದ್ರ ಮದ್ರಸ ಪಾಲಿಬೆಟ್ಟ ಮುಹಿಮಾತುದ್ದೀನ್ ಮದ್ರಸ ವಠಾರದಲ್ಲಿ ನಡೆದ ಕಾರ್ಯಕ್ರಮವನ್ನು ಪಾಲಿಬೆಟ್ಟ ಮುಹ್ಯುದ್ದೀನ್ ಜುಮಾ ಮಸ್ಟಿದ್ ಖತೀಬ್ ಝುಬೈರ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು. ರೇಂಜ್ ಅಧ್ಯಕ್ಷ ಮುಸ್ತಫ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಪಾಲಿಬೆಟ್ಟ ಮುಹ್ಯುದ್ದೀನ್ ಜುಮಾ ಮಸೀದ್ ಖತೀಬ್ ಆಡಳಿತ ಮಂಡಳಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿ ಶಮೀರ್ ಮುನ್ನಾ, ಸದಸ್ಯ ಫಝಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಎಸ್.ಜೆ.ಎಂ ಕೇಂದ್ರ ಸಮಿತಿ ಆಯೋಜಿಸಿದ ಸ್ಮಾರ್ಟ್ ಸ್ಕಾಲರ್‍ಶಿಪ್ ಪರೀಕ್ಷೆಯ ಕೊಡಗು ಜಿಲ್ಲೆಯಲ್ಲಿ ಪ್ರಥಮ ಸ್ಥಾನಿಗಳಾದ ಪಾಲಿಬೆಟ್ಟ ಮುಹಿಮಾತುದ್ದೀನ್ ಮದ್ರಸ ವಿದ್ಯಾರ್ಥಿ ಆದಿಲ್ ಮತ್ತು ಮಟ್ಟಂ ಹಯಾತುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿ ಆಶಿಖ್ ಅವರನ್ನು ಸನ್ಮಾನಿಸಲಾಯಿತು. ರೇಂಜ್ ಸಮಿತಿಯ ಒಂದು ವರ್ಷದ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಸಬಾಹ್ ಸಖಾಫಿ ಅಲ್ ಹಿಮಮಿ…
ಮಡಿಕೇರಿ ಮೇ 23 NEWS DESK : ತಾಳತ್ತಮನೆ ನೇತಾಜಿ ಬಡಾವಣೆಯಲ್ಲಿ ಪುನರ್ ನಿರ್ಮಿಸಿರುವ ಶ್ರೀ ಗುಳಿಗರಾಜ (ಭೂಮಿ ಗುಳಿಗ) ಸಾನಿಧ್ಯದಲ್ಲಿ ಮೇ 24 ರಂದು ಶ್ರೀ ಗುಳಿಗರಾಜ ದೈವದ ಕೋಲ ನಡೆಯಲಿದೆ. ಸಂಜೆ 7 ಗಂಟೆಗೆ ಗುಳಿಗನ ಕಟ್ಟೆಯಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಕೋಲ ನೆರವೇರಲಿದ್ದು, ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಗುಳಿಗರಾಜ(ಭೂಮಿ ಗುಳಿಗ) ಸಾನಿಧ್ಯ ಜೀರ್ಣೋದ್ಧಾರ ಹಾಗೂ ಸೇವಾ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.
ಮಡಿಕೇರಿ ಮೇ 23 NEWS DESK : ನಾಪೋಕ್ಲು ಹೋಬಳಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಕಾಂಡಂಡ ಚರ್ಮಣ ಎಂಬವರ ಮನೆಯ (ಕಂಪೌಂಡ್) ತಡೆಗೋಡೆ ಮಳೆಯಿಂದಾಗಿ ಕುಸಿದು ನಷ್ಟ ಸಂಭವಿಸಿದೆ. ಚರ್ಮಣನವರು ಕೆಲವು ಸಮಯಗಳ ಹಿಂದೆ ಮನೆಗೆ ತಡೆಗೋಡೆ ನಿರ್ಮಿಸಿದ್ದು, ರಾತ್ರಿ ಸುರಿದ ಮಳೆಗೆ ತಡೆಗೋಡೆ ಸಂಪೂರ್ಣ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ನಾಪೋಕ್ಲು ಕಂದಾಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವರದಿ : ದುಗ್ಗಳ ಸದಾನಂದ






