ಲೇಖಕ: admin

ಕುಶಾಲನಗರ, ಏ.12 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಗ್ರಾಮದ ದೇವಾಲಯ ಸಮಿತಿ ವತಿಯಿಂದ ಹೊಸ ವರ್ಷ ಯುಗಾದಿ ಹಬ್ಬದ ಅಂಗವಾಗಿ ಗ್ರಾಮೀಣ ಜನಪದ ಸಂಸ್ಕೃತಿಯ ‘ಹೊನ್ನಾರು’ ಉತ್ಸವ( ಚಿನ್ನದ ಉಳುಮೆ)ಕ್ಕೆ ರೈತರು ಸಂಭ್ರಮ, ಸಡಗರದಿಂದ ಆಚರಿಸಿದರು. ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಅಲಂಕೃತ ಜಾನುವಾರುಗಳಿಗೆ ಸಾಮೂಹಿಕ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಿದರು. ಹೊನ್ನಾರು ಉತ್ಸವಕ್ಕೆ ಚಾಲನೆ ನೀಡಿದ ಮಾತನಾಡಿದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಯುಗಾದಿ ಹಬ್ಬವು ರೈತರ ಪಾಲಿಗೆ ಹೊಸ ವರ್ಷವಾಗಿದ್ದು, “ಹೊನ್ನಾರು” ಉಳುಮೆ ಕಾರ್ಯವು ರೈತರಲ್ಲಿ ಹೊಸ ಉತ್ಸಾಹ ತರಲಿದೆ. ಹೊನ್ನಾರು ಉತ್ಸವದ ಮೂಲಕ ರೈತರ ಕೃಷಿ ಫಸಲಿಗೆ ಉತ್ತಮ ಮಳೆ ಬೆಳೆ ಬಂದು ಕೃಷಿ ಕಾರ್ಯ ದೇಶ ಸಂವೃದ್ದಿಗೊಳ್ಳಲಿ ಎಂದು ಆಶಯ ವ್ಯಕ್ತಪಡಿಸಿದರು. ನಂತರ ರೈತರು ಗ್ರಾಮದ ದೇವಾಲಯಕ್ಕೆ ಸೇರಿದ ಜಮೀನಿನಲ್ಲಿ ಗ್ರಾಮದಲ್ಲಿ ಗ್ರಾಮ ದೇವಾಲಯ ಸಮಿತಿ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ದೇವಸ್ಥಾನಕ್ಕೆ ಸೇರಿದ ಜಮೀನಿನಲ್ಲಿ ಮೊದಲಿಗೆ ರೈತ ಗಂಗಾರಾಜು…

Read More

ಮಡಿಕೇರಿ ಏ.12 NEWS DESK : ಮೂಡಿಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು ಘೋಷಿಸಿದೆ ಎಂದು ಕಾಲೇಜಿನ ಪತ್ರಿಕೋಧ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, 10ನೇ ತರಗತಿಯಲ್ಲಿ ಸಿಬಿಎಸ್‍ಸಿ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್‍ಇ(ಭಾರತೀಯ ಪ್ರೌಢ ಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ(ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಬಹುದು. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗುತ್ತಾರೆ ಎಂದು ಮಾಹಿತಿ ನೀಡಿದರು. ಗಣಿತ, ವಿಜ್ಞಾನ ಹಾಗೂ…

Read More

ಮಡಿಕೇರಿ ಏ.12 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡರ ಪರ ಮತಯಾಚಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾನುವಾರ ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಭೋಸರಾಜು, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕೊಡಗು ಜಿಲ್ಲೆಯ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಸೇರಿದಂತೆ ಹಿರಿಯ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಈಗಾಗಲೇ ಕೊಡಗು ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ಕಾರ್ಯ ನಡೆದಿದೆ. ಜನರಿಂದ ಎಂ.ಲಕ್ಷ್ಮಣ ಗೌಡ ಅವರ ಪರ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಚ್ಚು ಜನಪ್ರಿಯತೆಯನ್ನು ಗಳಿಸಿದ್ದು,…

Read More

ಮಡಿಕೇರಿ ಏ.12 NEWS DESK :  ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಹಾಗೂ ತಮ್ಮವರನ್ನು ಕೂಡ ಮತ ಚಲಾಯಿಸುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಾರ್ವಜನಿಕರಿಗೆ ಕರೆ ನೀಡಿದರು. ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ  ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಹಮ್ಮಿಕೊಳ್ಳಲಾದ ಕಾಲ್ನಡಿಗೆ ಜಾಥಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಅವರು ಮಾತನಾಡಿದರು. ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬವಾಗಿದೆ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯು ವಿವೇಚನೆಯಿಂದ ಅರ್ಹ ವ್ಯಕ್ತಿಗೆ ನೀಡುವ ಮೂಲಕ ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮುಂದಾಗಬೇಕು. ಈ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಿಂದ ದೂರವುಳಿಯದೆ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಏ.26 ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ.…

Read More

ಮಡಿಕೇರಿ ಏ.12 NEWS DESK :  ವಿರಾಜಪೇಟೆ ಡಿವೈಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಆನಂದ ಡೊಳ್ಳಿನ್ ಅವರು ಇಂದು ವಿರಾಜಪೇಟೆಯಲ್ಲಿರುವ ವಸತಿ ಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

Read More

ನಾಪೋಕ್ಲು ಫೆ.12 NEWS DESK : ಚೆರಿಯಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯಲ್ಲಿ ನಾಪಂಡ, ಚೇಂದಂಡ, ಚೆಟ್ಟೋಳಂಡ, ಸೋಮಯಂಡ, ಮಚ್ಚಾರಂಡ, ಕಂಗಂಡ, ಮಾತ್ರಂಡ ಸೇರಿದಂತೆ ವಿವಿಧ ತಂಡಗಳು ಮುನ್ನಡೆ ಸಾಧಿಸಿದವು. ದಿನದ ಪಂದ್ಯದಲ್ಲಿ ಕಂಗಂಡ ಮತ್ತು ಮಾಚಮಾಡ ತಂಡಗಳು ಸಮಬಲ ಸಾಧಿಸಿದವು. ಬಳಿಕ ಟೈಬ್ರೇಕರ್ ನಲ್ಲಿ ಕಂಗಡ ತಂಡವು ನಾಲ್ಕು ಗೋಲು ಗಳಿಸಿದರೆ ಮಾಚಮಾಡು ತಂಡ ಎರಡು ಗೋಲು ಗಳಿಸಿತು. ಕಂಗಂಡ ಮಾಚಮಾಡ ವಿರುದ್ಧ ಗೆಲುವು ಸಾಧಿಸಿತು. ಮತ್ತೊಂದು ಟೈ ಬ್ರೇಕರ್ ಪಂದ್ಯದಲ್ಲಿ ಪೊಂಜಂಡ ತಂಡವು ಕಾಲಚಂಡ ವಿರುದ್ಧ 4-3 ಅಂತರದ ಗೆಲುವು ಸಾಧಿಸಿತು. ಕೊಟ್ಟಂಗಡ ಮತ್ತು ಅಚ್ಚಪಂಡ ತಂಡಗಳ ನಡುವೆಯೂ ಸಮಬಲದ ಸೆಣೆಸಾಟ ನಡೆಯಿತು. ಬಳಿಕ ನಡೆದ ಟೈ ಬ್ರೇಕರ್ ನಲ್ಲಿ ಕೊಟ್ಟಂಗಡ ತಂಡದ ಆಟಗಾರರು ಐದುಗೋಲು ಗಳಿಸಿದರು. ಅಚ್ಚ ಪಂಡ ತಂಡದ ಆಟಗಾರರು 3 ಗೋಲು ಗಳಿಸಿದರು ಈ ಪಂದ್ಯದಲ್ಲಿ ಕೊಟ್ಟಂಗಡ ತಂಡ ಗೆಲುವು ಸಾಧಿಸಿ ಮುಂದಿನ ಸುತ್ತು ಪ್ರವೇಶಿಸಿತು.…

Read More

ಸುಂಟಿಕೊಪ್ಪ,ಏ.12 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಸುಂಟಿಕೊಪ್ಪದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು. ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗದಲ್ಲಿ ಸಾರ್ವಜನಿಕರಲ್ಲಿ ಮತಯಾಚಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ, ರಾಜ್ಯದಲ್ಲಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರಕಾರ ಚುನಾವಣೆಗೆ ಮುನ್ನಘೋಷಣೆ ಮಾಡಿದ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಅದೇ ರೀತಿ ಕೇಂದ್ರದ ನಾಯಕರಾದ ಮಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಘೋಷಿಸಿದ ಗ್ಯಾರಂಟಿಯನ್ನು ಈಡೇರಿಸುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು. ಲೋಕಸಭಾ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರು ಕಛೇರಿಯನ್ನು ತೆರದಿರಲಿಲ್ಲ ಇಲ್ಲಿ ಉಳಿಯುತ್ತಲೂ ಇರಲಿಲ್ಲ ಎಂದು ಹೇಳಿದ ಅವರು ನಾನು ಗೆದ್ದರೆ 15 ದಿನ ಮಡಿಕೇರಿ ಮತ್ತು 15 ದಿನ ಮೈಸೂರಿನಲ್ಲಿರುತ್ತೇನೆ ಎಂದು ಮತದಾರರಿಗೆ ಭರವಸೆ ನೀಡಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‍ಗೌಡ ಮಾತನಾಡಿ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನಗೆ ತೋರಿದ ಪ್ರೀತಿಯನ್ನೆ ನಮ್ಮ…

Read More

ಮಡಿಕೇರಿ ಏ.11 NEWS DESK : ಶ್ರೇಷ್ಠ ಭಾರತಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಬೆಂಬಲಿಸುವಂತೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಮನವಿ ಮಾಡಿದ್ದಾರೆ. ಹುಣುಸೂರು ತಾಲ್ಲೂಕಿನ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ವಿಕಸಿತ ಭಾರತಕ್ಕಾಗಿ ಬಿಜೆಪಿಗೆ ಮತ ನೀಡುವಂತೆ ಕೋರಿದರು. ನಗರದ ದೇವರಾಜ ಅರಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಯದುವೀರ್ ಅವರು, ಕಲ್ಲಹಳ್ಳಿಯ ದೇವರಾಜ ಅರಸರ ಸಮಾಧಿಗೆ ಗೌರವ ಸಮರ್ಪಿಸಿದರು. ನಂತರ ಹನಗೋಡು ಬಳಿಯ ದೊಡ್ಡಹೆಜ್ಜೂರಿನ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪ್ರಚಾರ ಆರಂಭಿಸಿದರು. ಪ್ರಚಾರ ಸಭೆಯಲ್ಲಿ ಮಾತನಾಡಿದ ಯದುವೀರ್ ನಮ್ಮ ಪೂರ್ವಜರು ಈ ನಾಡಿನ ಜನರ ಶ್ರೇಯೋಭಿವೃದ್ಧಿಗಾಗಿ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಈ ಬಗ್ಗೆ ಜನರಲ್ಲಿ ಕೃತಜ್ಞತಾ ಭಾವವಿದೆ. ನಾನು ಕೂಡ ಜನಸೇವೆ ಮಾಡಲು ಉತ್ಸುಕನಾಗಿದ್ದೇನೆ ಎಂದರು. ದೇಶದ ಅಭಿವೃದ್ಧಿ ಮತ್ತು ಜನರ ರಕ್ಷಣೆಗೆ ಸದಾ ಮಿಡಿಯುವ ಪ್ರಧಾನಿ ಮೋದಿಯವರ ಪ್ರಭಾವದಿಂದ ನಾನು ಸ್ಪರ್ಧಿಸಿದ್ದೇನೆ.…

Read More

ಮಡಿಕೇರಿ ಏ.11 NEWS DESK : ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಅವರು ಸುಮಾರು ಎರಡೂವರೆ ಮೂರು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಯದುವೀರ್ ಅವರಿಗೆ ಶುಭಕೋರಿರುವ ಅವರು ಅತ್ಯಧಿಕ ಮತಗಳ ಅಂತರದಿಂದ ಯದುವೀರ್ ಅವರು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ಮೈಸೂರು ಮಾತ್ರವಲ್ಲ ಇಡೀ ರಾಜ್ಯ ಮತ್ತು ದೇಶದಲ್ಲಿ ರಾಜವಂಶಸ್ಥ ಯದುವೀರ್ ಅವರ ಬಗ್ಗೆ ಜನರಿಗೆ ಅಪಾರ ಅಭಿಮಾನವಿದೆ, ಅವರ ಗೆಲುವು ನಿಶ್ಚಿತವಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Read More

ಮಡಿಕೇರಿ ಏ.11 NEWS DESK : ಮಡಿಕೇರಿ ನಗರದ ವಿವಿಧೆಡೆ ಮುಸ್ಲಿಂ ಬಾಂಧವರ ಸಂಭ್ರಮದ ಹಬ್ಬ ಈದುಲ್ ಫಿತ್ರ್ ರಂಜಾ಼ನ್ ನನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮಸೀದಿ ಹಾಗೂ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಧರ್ಮಗುರುಗಳು ಧರ್ಮಸಂದೇಶ ನೀಡಿ ಹಬ್ಬಗಳ ಆಚರಣೆಯ ಕುರಿತು ವಿವರಿಸಿದರು. ಲೋಕಕಲ್ಯಾಣಕ್ಕಾಗಿ ಎಲ್ಲರೂ ಪ್ರಾರ್ಥಿಸುವಂತೆ ಕರೆ ನೀಡಿದರು. ಪರಸ್ಪರ ಆಲಿಂಗನದ ಮೂಲಕ ಹಬ್ಬದ ಶುಭಾಶಯಗಳನ್ನು ಹಂಚಿಕೊಂಡ ಮುಸ್ಲಿಂ ಬಾಂಧವರು, ಕುಟುಂಬ ವರ್ಗ ಹಾಗೂ ಸ್ನೇಹಿತರೊಂದಿಗೆ ವಿಶೇಷ ಖಾದ್ಯಗಳನ್ನು ಸವಿದರು. ಕಳೆದ ಒಂದು ತಿಂಗಳ ರಂಜಾ಼ನ್ ಉಪವಾಸಕ್ಕೆ ತೆರೆ ಎಳೆದರು.

Read More