ಲೇಖಕ: admin

ಮಡಿಕೇರಿ ಏ.11 NEWS DESK : ಸ್ನಾನಕ್ಕೆಂದು ತೆರಳಿದ ವ್ಯಕ್ತಿ ಹೊಳೆಯಲ್ಲಿ ಮುಳುಗಿ ಸಾವನ್ನಪಿದ ಘಟನೆ ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಕೊಳಕೇರಿ ಗ್ರಾಮದಲ್ಲಿ ನಡೆದಿದೆ. ಕಕ್ಕಬ್ಬೆ ಕುಂಜಿಲ ಗ್ರಾಮದ ವಾಟೆಕಾಡು ನಿವಾಸಿ ದೇವಯ್ಯ(38) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ದೇವಯ್ಯ ಅವರು ತನ್ನ ಸಹೋದರನ ಜೊತೆ ತೋಟದ ಕೆಲಸಕ್ಕೆ ತೆರಳಿದ್ದು, ಬಿಸಿಲಿನ ತಾಪದಿಂದ ಸ್ನಾನ ಮಾಡಲು ಕುವಲೆಕಾಡು ಗ್ರಾಮದ ಕುಪ್ಪೋಟು ಹೊಳೆಗೆ ಇಳಿದಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಈಜುಗಾರರ ಸಹಾಯದಿಂದ ಮೃತದೇಹವನ್ನು ನೀರಿನಿಂದ ಹೊರ ತೆಗೆಯಲಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸುಂಟಿಕೊಪ್ಪ ಏ.11 NEWS DESK : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಂಟಿಕೊಪ್ಪ ವ್ಯಾಪ್ತಿಯಲ್ಲಿನ ಸರಕಾರಿ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳು ಉತ್ತಮ ಸಾಧನೆ ಮಾಡಿರುವುದು ಪೋಷಕರಲ್ಲಿ ಮತ್ತು ಕಾಲೇಜಿನ ಉಪನ್ಯಾಸಕರಲ್ಲಿ ಹರ್ಷ ಉಂಟು ಮಾಡಿದೆ. ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ 51 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದು, ಶೇ.97 ರಷ್ಟು ಫಲಿತಾಂಶ ಪಡೆದಿದ್ದಾರೆ. ವಿಜ್ಞಾನ ವಿಷಯದಲ್ಲಿ ಶೇ.100, ವಾಣಿಜ್ಯ ವಿಷಯದಲ್ಲಿ ಶೇ.96, ಹಾಗೂ ಕಲಾ ವಿಷಯದಲ್ಲಿ ಶೇ.94 ಫಲಿತಾಂಶವನ್ನು ಪಡೆದಿದೆ. ಮೂವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಎಂ.ಪಿ.ಶ್ವೇತಾ ಕಲಾವಿಭಾಗದಲ್ಲಿ, ವಾಣಿಜ್ಯ ವಿಭಾಗದಲ್ಲಿ ಕವಿತ ಮತ್ತು ವಿಜ್ಞಾನ ಕೆ.ಎಂ.ಶಫ್‍ರೀನಾ ಮೊದಲಿಗರಾಗಿದ್ದಾರೆ. ಕಾಲೇಜಿನ ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದವು ಮಕ್ಕಳ ಸಾಧನೆಯನ್ನು ಶ್ಲಾಘಿಸಿದರು. ಮಾದಾಪುರ ಡಿ.ಚೆನ್ನಮ್ಮ ಪದವಿ ಪೂರ್ವಕಾಲೇಜು 96.66 ಫಲಿತಾಂಶ ಪಡೆದಿದ್ದು, ಅತ್ಯುನ್ನತ ಶ್ರೇಣಿಯಲ್ಲಿ 17 ಮಂದಿ, ಪ್ರಥಮ ದರ್ಜೆ 45 ಮಂದಿ, ದ್ವಿತೀಯ ದರ್ಜೆಯಲ್ಲಿ 26 ಮಂದಿ ಮತ್ತು ಸಾಮಾನ್ಯ ದರ್ಜೆಯಲ್ಲಿ 7 ಮಂದಿ ಉತ್ತೀರ್ಣರಾಗಿದ್ದಾರೆ. ಕಾಲೇಜಿ…

Read More

ಸುಂಟಿಕೊಪ್ಪ,ಏ.11 NEWS DESK : ಸುಂಟಿಕೊಪ್ಪದಲ್ಲಿ ಮುಸ್ಲಿಂ ಬಾಂಧವರು ವಿವಿಧ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ರಂಜಾನ್ ಈದ್‍ಉಲ್ ಪಿತ್ತರ್ ಅಂಗವಾಗಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಹೊಸ ಉಡುಪುಗಳನ್ನು ತೊಟ್ಟು ಪರಸ್ಪರ ಅಲಂಗಿಸಿಕೊಂಡು ಈದ್‍ಉಲ್ ಪಿತರ್ ಶುಭಾಶಯ ವಿನಿಮಯ ಮಾಡಿಕೊಂಡರು. ಸುಂಟಿಕೊಪ್ಪ ಪಟ್ಟಣದ ಸುನ್ನಿ ಶಾಫಿ ಜುಮ್ಮ ಮಸ್ಜಿದ್‍ನಲ್ಲಿ ಮುಸ್ಲಿಯರ್ ರೌಫ್ ಸಖಾಫಿ, ಸುನ್ನಿ ಹನಫಿ ಮುಸ್ಲಿಂ ಜಮಾಅತ್ ಮೌಲನಾ ಜುಬೇರ್‍ಆಹ್ಮದ್, ಸುನ್ನಿ ಶಾಫಿ ಜುಮಾಮಸ್ಜಿದ್ ಧಾರ್ಮಿಕ ಮೌಲವಿ ಹಮೀದ್ ದಾರ್ಮಿ,  ಮಸ್ಜಿದ್ ಮೌಲನಾ ಇನಾಂ, ಗದ್ದೆಹಳ್ಳದ ನೂರು ಜುಮ್ಮ ಮಸ್ಜಿದ್ ಮುಸ್ಲಿಯರ್ ಒಸಾಮ ಸಖಾಫಿ, ಅವರುಗಳು ಧಾರ್ಮಿಕ ಪ್ರವಚ ಪ್ರಾರ್ಥನೆಯನ್ನು ಸಲ್ಲಿಸಿದರು. ಕಳೆದ 30 ದಿನಗಳ ಉಪವಾಸದ ಅಂಗವಾಗಿ ಪ್ರತಿದಿನ ರಾತ್ರಿ ಮಸೀದಿಗಳಲ್ಲಿ ಮೌಲವಿಗಳಿಂದ ಧಾರ್ಮಿಕ ಪ್ರವಚನ ಹಾಗೂ ವಿಶೇಷ ಪ್ರಾರ್ಥನೆಯನ್ನು ನೆರವೇರಿತು. ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು. ಜುಮ್ಮ ಮಸೀದಿಗಳಲ್ಲಿ ಪ್ರಾರ್ಥನೆ ಧಾರ್ಮಿಕ ಪ್ರವಚನ ನೆರವೇರಿತು. ನಂತರ ಗದ್ದೆಹಳ್ಳದ ಈದ್ಗಾದಲ್ಲಿ…

Read More

ಮಡಿಕೇರಿ ಏ.11 NEWS DESK : ಚುನಾವಣಾ ಬಾಂಡ್ ಹಗರಣದ ಆರೋಪ ಎದುರಿಸುತ್ತಿರುವ ಪ್ರಧಾನಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕ ಮಡಿಕೇರಿ ನಗರದ ಗಾಂಧಿ ಮಂಟಪದ ಬಳಿ ಪ್ರತಿಭಟನೆ ನಡೆಸಿತು. ಈ ಸಂದರ್ಭ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಸರಕಾರದ ಸರ್ವಾಧಿಕಾರಿ ಧೋರಣೆ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ಜನಪ್ರಿಯ ನಾಯಕರಾಗಿರುವ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಯಾವುದೇ ತಪ್ಪು ಮಾಡದಿದ್ದರೂ ನೇರವಾಗಿ ಎದುರಿಸಲಾಗದೆ ಪಿತೂರಿ ನಡೆಸಿ ಬಂಧನಕ್ಕೆ ಒಳಗಾಗುವಂತೆ ಮಾಡಲಾಗಿದೆ. ಆದರೆ ಸ್ವತ: ಪ್ರಧಾನಮಂತ್ರಿಗಳೇ ಚುನಾವಣಾ ಬಾಂಡ್ ಹಗರಣದ ಆರೋಪ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಅವ್ಯವಹಾರದಲ್ಲಿ ನೇರವಾಗಿ ಭಾಗಿಯಾಗಿರುವ ಬಿಜೆಪಿ ನಾಯಕರನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮತದಾರರು ತಮ್ಮನ್ನು ಅಧಿಕಾರದಿಂದ ಕಿತ್ತೆಸೆಯುತ್ತಾರೆ ಎಂಬುವುದನ್ನು ಅರಿತಿರುವ ಕೇಂದ್ರ ಸರಕಾರ ಹೇಗಾದರೂ ಮಾಡಿ ಮತ್ತೆ ಅಧಿಕಾರ ಹಿಡಿಯಬೇಕೆಂಬ ಕಾರಣಕ್ಕೆ ವಾಮ…

Read More

ವಿರಾಜಪೇಟೆ ಏ.11 NEWS DESK : ವಿರಾಜಪೇಟೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಜ್ಞಾನಗಂಗಾ ಭವನ’ದಲ್ಲಿ ಏ.12ರಿಂದ 14ರವರೆಗೆ ಚಿಣ್ಣರ ಬೇಸಿಗೆ ‘ಸಂಭ್ರಮ’ ಶಿಬಿರ ನಡೆಯಲಿದೆ ಎಂದು ಕೇಂದ್ರದ ಮುಖ್ಯ ಸಂಚಾಲಕಿ ಬಿ.ಕೆ.ಕೋಮಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೂರು ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ 8 ರಿಂದ 15 ವರ್ಷದೊಳಗಿನ ಮಕ್ಕಳು ಭಾಗವಹಿಸಬುದಾಗಿದೆ. ಶಿಬಿರವು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ಏರೀಬಿಕ್ ವ್ಯಾಯಾಮ, ದ್ಯಾನ, ಸ್ವಚ್ಚ ಮನಸ್ಸು, ಸ್ವಚ್ಛ ಜೀವನದಿಂದ ಸ್ವಚ್ಚ ಭಾರತ, ಗೇಮ್ಸ್, ವ್ಯಕ್ತಿತ್ವ ವಿಕಸನ, ಆಲೋಚನೆಯ ನೆಲೆ, ಏಕಾಗ್ರತೆಯ ಕಲೆ, ಭಯದ ನಿವಾರಣೆ, ಧ್ಯಾನದ ಮಹತ್ವಿಕೆ, ಕ್ರಿಯೆಯಲ್ಲಿ ಆಲೋಚನೆಗಳು, ಮೌಲ್ಯಗಳು, ಗುಂಪು ಚಟುವಟಿಕೆಗಳು, ಒಳಾಂಗಣ, ಹೊರಾಂಗಣ ಆಟೋಟಗಳು ಸೇರಿದಂತೆ ಇತರ ಚಟುವಟಿಕೆಗಳು ನಡೆಯಲಿದೆ. ಆಸಕ್ತ ಮಕ್ಕಳು ನೊಂದಾವಣೆಗಾಗಿ 08274-256834, 8105419822 ಸಂಖ್ಯೆಗೆ ಸಂಪರ್ಕಿಸುವಂತೆ ಕೋರಿದ್ದಾರೆ.

Read More

ಸೋಮವಾರಪೇಟೆ ಏ.11 NEWS DESK : ಕರ್ಕಳ್ಳಿ ಗ್ರಾಮದ ನಿವಾಸಿ, ಕಾಫಿ ಬೆಳೆಗಾರ ಬಿ.ಸಿ.ರವೀಂದ್ರ (71) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಏ.11 ರಂದು 12.30ರ ನಂತರ ಕರ್ಕಳ್ಳಿಯಲ್ಲಿ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ. ಕಾಫಿ ಬೆಳೆಗಾರ ಬಿ.ಸಿ.ರವೀಂದ್ರ ಪಯೋನಿಯರ್ ಟೆನ್ನಿಸ್ ಕ್ಲಬ್ಬಿನ ಅಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಏ.11 NEWS DESK : ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಸಮಾಗಮ ಹೆಸರಿನ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ಸಡಗರ ಸಂಭ್ರಮದಿಂದ ಜರುಗಿತು. ಗಾಳಿಯಲ್ಲಿ ಬಲೂನ್ ಗಳ ಗುಚ್ಛವನ್ನು ಹಾರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳು ಹಾಗೂ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳು ಪಾಲ್ಗೊಂಡು ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಕೊಡಗು ವಿದ್ಯಾಲಯದ ಕ್ರೀಡಾ ಅಧ್ಯಕ್ಷ ಕೋಡಿಮಣಿಯಂಡ ರಘು ಮಾದಪ್ಪ ಅವರನ್ನು ಶಾಲಾ ಮಕ್ಕಳ ಬ್ಯಾಂಡ್ ತಂಡದಿಂದ ಬರಮಾಡಿಕೊಳ್ಳಲಾಯಿತು. ನಂತರ ಮಾತನಾಡಿದ ಅವರು, ಕ್ರೀಡಾ ಸೌಲಭ್ಯದ ಬಗ್ಗೆ ವ್ಯಾಖ್ಯಾನ ನೀಡಿ ಅದರ ಕಲಿಕೆಯ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರು. ಕ್ರೀಡೆಯಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳುವುದರ ಬಗ್ಗೆ ಕಿವಿ ಮಾತು ಹೇಳಿದರು. ಶಾಲೆಯ ಕ್ರೀಡಾ ಮೈದಾನದಲ್ಲಿ ಬೇಸಿಗೆ ಕ್ರೀಡಾ ಶಿಬಿರಕ್ಕೆ ಶಾಲಾ ಆಡಳಿತ ಮಂಡಳಿಯ ಸದಸ್ಯೆ ನಿಯತ ದೇವಯ್ಯ ಚಾಲನೆ ನೀಡಿದರು. ನುರಿತ ತರಬೇತುದಾರರಿಂದ ಕ್ಯಾಲಿಗ್ರಾಫಿ ಹಾಗೂ ಚಿತ್ರಕಲಾ ಪ್ರದರ್ಶನ ನಡೆಯಿತು. ಮೇ 1 ರವರೆಗೆ ನಡೆಯುವ…

Read More

ಮಡಿಕೇರಿ ಏ.11 NEWS DESK : ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಪೊನ್ನಂಪೇಟೆ ತಾಲೂಕಿನ ಕುಟ್ಟ ಹಾಗೂ ಹುದಿಕೇರಿಯಲ್ಲಿ ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಪರ ಬಿರುಸಿನ ಮತಯಾಚನೆ ನಡೆಯಿತು. ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ನೇತೃತ್ವದಲ್ಲಿ ಪಟ್ಟಣದ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್ ಗಳಿಗೆ ತೆರಳಿ ಮತ ಯಾಚಿಸಿದರು. ಮತದಾರರ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ, ಜನಸಾಮಾನ್ಯರು, ಕೂಲಿ ಕಾರ್ಮಿಕರಿಗೆ ಜೀವನ ನೆಡೆಸಲು ಬೇಕಾದ ಸೌಲಭ್ಯ ಒದಗಿಸಲು ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಅಗತ್ಯ ಇದೆ ಎಂದರು. ಈ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ,ಲಕ್ಷ್ಮಣ್ ಅವರು ಸರಳ ವ್ಯಕ್ತಿತ್ವ ಹೊಂದಿವರಾಗಿದ್ದು, ಜನಸಾಮಾನ್ಯರ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ. ಈ ಹಿಂದೆ ಇದ್ದ ಸಂಸದ ಪ್ರತಾಪ್ ಸಿಂಹ ಕೊಡಗನ್ನು ಸಂಪೂರ್ಣ ನಿರ್ಲಕ್ಷಿಸಿದ್ದು,  ಆದರೆ ಲಕ್ಷ್ಮಣ್ ಅವರು ಕೊಡಗಿನಲ್ಲಿ 15 ದಿನಗಳ ಕಾಲ ನೋಡಬಹುದು ಎಂದು ಭರವಸೆ ವ್ಯಕ್ತಪಡಿದರು. ಈ ಬಾರಿ ಲಕ್ಷ್ಮಣ್ ಅವರು ಗೆಲ್ಲುತ್ತಾರೆ ಎಂಬ ವಿಶ್ವಾಸ…

Read More

ಮಡಿಕೇರಿ ಏ.11 NEWS DESK : ಹುಲಿ ಸೆರೆಯ ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾಕಾನೆ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಹರಿಹರ ಗ್ರಾಮದಲ್ಲಿ ನಡೆದಿದೆ. ಅರಣ್ಯಾಧಿಕಾರಿ ಕನ್ನಂಡ ರಂಜನ್, ಮಾವುತ ಕುಳ್ಳ ಹಾಗೂ ಸಾಕಾನೆ ಭೀಮನ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ರಂಜನ್ ಅವರಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಉಳಿದವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೆಜ್ಜೇನು ದಾಳಿ ಸಂದರ್ಭ ಸಾಕಾನೆ ಭೀಮ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಬುಧವಾರ ಹರಿಹರ ಗ್ರಾಮದ ಕೆರೆಯಲ್ಲಿ ಹುಲಿಯೊಂದು ನೀರು ಕುಡಿದು ಕಾಡಿಗೆ ಹೋಗುವ ದೃಶ್ಯ ಸಾಕಷ್ಟು ವೈರಲ್ ಆಗಿತ್ತು. ಸುತ್ತಮುತ್ತಲ ಗ್ರಾಮಸ್ಥರು ಹುಲಿ ಇರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹುಲಿಯ ಚಲನವಲನಗಳನ್ನು ಪತ್ತೆಹಚ್ಚಿ ಸೆರೆ ಹಿಡಿಯಲು ಮುಂದಾಗಿದ್ದರು. ಇಂದು ಬೆಳಿಗ್ಗೆ ಸಾಕಾನೆಗಳಾದ ಭೀಮ ಹಾಗೂ ಮಹೇಂದ್ರನ ಸಹಾಯದಿಂದ ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದರು. ಈ ಸಂದರ್ಭ…

Read More

ಮಡಿಕೇರಿ ಏ.11 NEWS DESK : ಮತಗಳಿಕೆಗಾಗಿ ಪರಿಶಿಷ್ಟರ ಹಾದಿ ತಪ್ಪಿಸುವ ಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿರುವ ಕರ್ನಾಟಕದ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನಸಾಮಾನ್ಯರು, ದೀನ ದಲಿತರು, ಪರಿಶಿಷ್ಟರು, ಕಾರ್ಮಿಕರು, ಕಡುಬಡವರು ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡÀರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದೆ. ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಮಾತನಾಡಿ ಜಿಲ್ಲೆಯಲ್ಲಿ ಅಭಿವೃದ್ಧಿಪರ ಚಿಂತನೆಯ ಇಬ್ಬರು ಕಾಂಗ್ರೆಸ್ ಶಾಸಕರಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ ಅವರನ್ನು ಗೆಲ್ಲಿಸಿದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ದೊರೆಯಲಿದೆ. ಆದ್ದರಿಂದ ಎಲ್ಲರೂ ಲಕ್ಷ್ಮಣ್ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. ಕೊಡಗಿನಲ್ಲಿ ಈ ಹಿಂದೆ ಇದ್ದ ಶಾಸಕರನ್ನು ಜನಸಾಮಾನ್ಯರು ಭೇಟಿ ಮಾಡುವುದೇ ಕಷ್ಟಕರವಾಗಿತ್ತು. ಆದರೆ ಈಗ ಇರುವ ಇಬ್ಬರು ಕಾಂಗ್ರೆಸ್ ಶಾಸಕರು ಕೇವಲ ಒಂದು ಫೋನ್ ಕರೆಗೆ ಜನಸಾಮಾನ್ಯರ ಮನವಿಗೆ ತಕ್ಷಣ ಸ್ಪಂದಿಸುವ ಮನೋಸ್ಥಿತಿ ಹೊಂದಿದ್ದಾರೆ. ಅಲ್ಲದೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ…

Read More