ಸೋಮವಾರಪೇಟೆ NEWS DESK : ಶರಣ ಸಾಹಿತ್ಯ ಪರಿಷತ್ತಿನ ಸೋಮವಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಪಟ್ಟಣದ ಹಿರಿಯ ವಕೀಲ ಹಾಗೂ ಕಾಫಿ ಬೆಳೆಗಾರ ಎ.ಎಸ್.ಮಹೇಶ್ ಅವರನ್ನು ನೇಮಕ ಮಾಡಲಾಗಿದೆ. ತಾಲ್ಲೂಕಿನಾದ್ಯಂತ ಶರಣ ಸಾಹಿತ್ಯ ಚಟುವಟಿಕೆಗಳನ್ನು ಸಕ್ರಿಯಗೊಳಿಸುವ ಜೊತೆಗೆ ಪರಿಷತ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾಯಿಸುವ ಮೂಲಕ ಪರಿಷತ್ತನ್ನು ಕಟ್ಟಿ ಬೆಳೆಸುವ ಪಣ ತೊಡಬೇಕೆಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಮಾ.27 NEWS DESK : ಲೋಕಸಭಾ ಚುನಾವಣೆ ಸಂಬಂಧ ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನವು ಈಗಾಗಲೇ ಆರಂಭವಾಗಿದೆ. ಆ ನಿಟ್ಟಿನಲ್ಲಿ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ವತಿಯಿಂದ ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಂದಾಗಲಾಗಿದೆ. ಪ್ರಥಮ ಹಂತದಲ್ಲಿ ಜಿಲ್ಲೆಯ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲಾ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ‘ಪೋಸ್ಟ್ ಕಾರ್ಡ್’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಶೇಕಡವಾರು ಮತದಾನ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜಾಥ ಕಾರ್ಯಕ್ರಮ, ಚಿತ್ರಕಲೆ, ಸೇರಿದಂತೆ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತದಾನದ ಮಹತ್ವವನ್ನು ಸಾರುವಲ್ಲಿ ಪ್ರಯತ್ನಿಸಲಾಗುತ್ತದೆ ಎಂದು ವರ್ಣಿತ್ ನೇಗಿ ತಿಳಿಸಿದ್ದಾರೆ.
ಮಡಿಕೇರಿ ಮಾ.27 NEWS DESK : ಇದೇ ಏ.5 ರಂದು ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 117 ನೇ ಜನ್ಮ ದಿನಾಚರಣೆ ಹಾಗೂ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯನ್ನು ನಗರದ ಗಾಂಧಿ ಭವನದಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು. ಏಪ್ರಿಲ್, 05 ರಂದು ಡಾ.ಬಾಬು ಜಗಜೀವನ್ ರಾಂ ಅವರ 117 ನೇ ಜನ್ಮ ದಿನಾಚರಣೆ ಮತ್ತು ಏಪ್ರಿಲ್, 14 ರಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಯಾಯ ದಿನಗಳಂದು ಬೆಳಗ್ಗೆ 10.30…
ಮಡಿಕೇರಿ ಮಾ.27 NEWS DESK : ಬೆಳ್ಳಂಬೆಳ್ಳಗೆ ಕೊಡಗಿನ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಕಡಬಕ್ಕೆ ಚುನಾವಣೆ ಹಿನ್ನೆಲೆ ವರ್ಗಾವಣೆಗೊಂಡಿರುವ ಜಯಣ್ಣ ಅವರ ಕುಶಾಲನಗರದ ಶಿವರಾಮ ಕಾರಂತ ಕಾಲೋನಿಯಲ್ಲಿರುವ ಮನೆ ಹಾಗೂ ಜಿಲ್ಲಾ ಪಂಚಾಯತ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಎಂಜಿನಿಯರ್ ಫಯಾಜ್ ಅಹಮ್ಮದ್ ಅವರ ಕುಶಾಲನಗರದ ಯೋಗಾನಂದ ಬಡಾವಣೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಡಗು ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು, ತನಿಖೆ ಮುಂದುವರೆದಿದೆ. ಇಬ್ಬರು ಅಧಿಕಾರಿಗಳ ಕಚೇರಿ ಮತ್ತಿತರ ಆಸ್ತಿಗಳ ಪರಿಶೀಲನೆಯೂ ನಡೆದಿದೆ. ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಅಭಿಯಂತರ ಫಯಾಜ್ ಅಹಮ್ಮದ್ ಅವರ ಕುಶಾಲನಗರದ ಮನೆ ಮೇಲೆ ಲೋಕಾಯುಕ್ತ ಧಾಳಿ ನಡೆಸಿದ ನಂತರ, ಸೋಮವಾರಪೇಟೆಗೆ ಕರೆತಂದು, ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿ, ಹಲವು ದಾಖಲೆಗಳನ್ನು ಪರಿಶೀಲಿಸಿದರು. ಕುಶಾಲನಗರದಿಂದ ಆಗಮಿಸಿದ ಲೋಕಾಯುಕ್ತ ಇನ್ಸ್ಪೆಕ್ಟರ್…
ಮಡಿಕೇರಿ ಮಾ.27 NEWS DESK : ಮೂಲತಃ ಪೊನ್ನಂಪೇಟೆ ತಾಲ್ಲೂಕು ಹಳ್ಳಿಗಟ್ಟು ನಿವಾಸಿ, ಮಾಜಿ ಸೈನಿಕ ಹಾಗೂ ಗೋಣಿಕೊಪ್ಪ ವಿಜಯ ಬ್ಯಾಂಕ್ ನಿವೃತ್ತ ಉದ್ಯೋಗಿ ಚಮ್ಮಟೀರ ಸುಗುಣ ಮುತ್ತಣ್ಣ (67) ಮಾರ್ಚ್ 26 ಮಂಗಳವಾರ ರಾತ್ರಿ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಬುಧವಾರ ಹಳ್ಳಿಗಟ್ಟುವಿನಲ್ಲಿರುವ ಮೃತರ ಸ್ವಗೃಹದಲ್ಲಿ ನಡೆಯಲಿದೆ.
ಸುಂಟಿಕೊಪ್ಪ ಮಾ.26 NEWS DESK : ಸಹೋದರ ಮರದಿಂದ ಬಿದ್ದು ಮೃತಪಟ್ಟ ಏಳೇ ತಿಂಗಳಿನಲ್ಲಿ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಂಟಿಕೊಪ್ಪದ ಕಾನ್‌ಬೈಲ್ ಬೈಚನಹಳ್ಳಿ (ನೆಟ್ಲಿ‘ಬಿ’) ಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಂಜೀವ ಪೂಜಾರಿ ಅವರ ಪುತ್ರ ಮನು ಪೂಜಾರಿ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರ ಸಹೋದರ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಬಳಿ ಗನ್‌ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ ಅವರು 7 ತಿಂಗಳ ಹಿಂದೆಯಷ್ಟೇ ಮರದಿಂದ ಬಿದ್ದು ಮೃತಪಟ್ಟಿದ್ದರು. ಮೃತ ಮನು ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕೇವಳ ಏಳೇ ತಿಂಗಳಿನಲ್ಲಿ ಇಬ್ಬರು ಪುತ್ರರನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಮಾ.26 NEWS DESK : ಕೊಡವ ಕುಟುಂಬಗಳ ನಡುವಿನ 24ನೇ ಹಾಕಿ ಹಬ್ಬ ಪ್ರತಿಷ್ಠಿತ “ಕುಂಡ್ಯೋಳಂಡ ಹಾಕಿ ಕಾರ್ನಿವಲ್ 2024” ಮಾ.30 ರಂದು ಬೆಳಿಗ್ಗೆ 10.30 ಗಂಟೆಗೆ ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರು ಹಾಕಿ ಹಬ್ಬವನ್ನು ಉದ್ಘಾಟಿಸಲಿದ್ದಾರೆ ಎಂದು ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಹಾಕಿ ಹಬ್ಬದ ಅಧ್ಯಕ್ಷ ರಮೇಶ್ ಮುದ್ದಯ್ಯ ಹಾಗೂ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ. ಇದಕ್ಕೂ ಮೊದಲು ನಾಪೋಕ್ಲು ಶ್ರೀ ರಾಮ ಮಂದಿರದಿಂದ ಜನರಲ್ ತಿಮ್ಮಯ್ಯ ಕ್ರೀಡಾಂಗಣದವರೆಗೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಮೆರವಣಿಗೆ ಸಾಗಲಿದೆ. ಮೈದಾನದಲ್ಲಿ ಪಥಸಂಚಲನ ಮತ್ತು ಧ್ವಜಾರೋಹಣವಾದ ನಂತರ “ಸಾಯಿ ಮಡಿಕೇರಿ” ಬಾಲಕಿಯರು ಹಾಗೂ “ಕೂರ್ಗ್ 11” ಬಾಲಕಿಯರ ನಡುವೆ ಪ್ರದರ್ಶನ ಪಂದ್ಯವನ್ನು ಆಯೋಜಿಸಲಾಗಿದೆ. ಕೊಡವ ಸಾಂಸ್ಕೃತಿಕ ಕಾರ್ಯಕ್ರಮದ ಬಳಿಕ ಹಾಕಿ ಹಬ್ಬ ಉದ್ಘಾಟನೆ ಮತ್ತು ವಿಶೇಷ ಅಂಚೆ ಲಕೋಟೆ…
ಮಡಿಕೇರಿ ಮಾ.26 NEWS DESK : ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿಯ ನಂದಿ ಕಾಫಿ ಎಸ್ಟೇಟ್ ಮಾಲೀಕರು ಹಾಗೂ ಜಿಲ್ಲೆಯ ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರ ತಂದೆ ಬಿ.ವಿ.ಚಂದ್ರಶೇಖರ್(86) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಸೀತೆ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮಡಿಕೇರಿ ಮಾ.26 NEWS DESK : ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಬೋಗಸ್ ಶ್ವೇತಪತ್ರ ಬಿಡುಗಡೆ ಮಾಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಡುಗಡೆ ಮಾಡಿರುವ ಶ್ವೇತಪತ್ರದಲ್ಲಿ ಅರ್ಧದಷ್ಟು ಅನುದಾನ ಈ ಹಿಂದಿನ ಶಾಸಕ ಕೆ.ಜಿ.ಬೋಪಯ್ಯ ಅವರ ಅವಧಿಯದ್ದಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆ ಪೊನ್ನಣ್ಣ ಅವರು ಜನರನ್ನು ಮರುಳು ಮಾಡಲು ಶ್ವೇತಪತ್ರ ಬಿಡುಗಡೆ ಮಾಡಿದ್ದಾರೆ. ಆದರೆ ಕೊಡಗು ಜಿಲ್ಲೆಯ ಜನ ಬುದ್ದಿವಂತರಾಗಿದ್ದು, ಇದನ್ನೆಲ್ಲ ನಂಬುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಜಿಲ್ಲಾ ವಕ್ತಾರ ಅರುಣ್ ಕುಮಾರ್ ಹಾಗೂ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.
ಮಡಿಕೇರಿ ಮಾ.26 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ಭಾರತೀಯ ಜನತಾ ಪಾರ್ಟಿಗೆ ಪ್ರತಿಷ್ಠೆಯ ಕಣವಾಗಿದ್ದು, ಸುಮಾರು 2ಲಕ್ಷ ಮತಗಳ ಅಂತರದಿAದ ಯದುವೀರ್ ಅವರನ್ನು ಗೆಲ್ಲಿಸುವ ಗುರಿ ಹೊಂದಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದಾರೆ. ಅತ್ಯಧಿಕ ಮತಗಳ ಅಂತರದಿAದ ಯದುವೀರ್ ಅವರನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಕ್ಕ ಉತ್ತರ ನೀಡಲು ಮುಂದಾಗಿದ್ದಾರೆ ಎಂದರು. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಸುಮಾರು 1.30 ಲಕ್ಷ ಮತಗಳ ಅಂತರದಿAದ ಗೆಲುವು ಸಾಧಿಸಿದ್ದರು. ಈ ಬಾರಿ ಯದುವೀರ್ ಅವರು 2ಲಕ್ಷ ಮತಗಳ ಅಂತರದಿAದ ಗೆಲುವು ಸಾಧಿಸಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿ 85 ಸಾವಿರ ಮತಗಳ ಅಂತರವಿತ್ತು, ಈ ಬಾರಿ 1ಲಕ್ಷಕ್ಕೂ ಅಧಿಕ ಗೆಲುವಿನ ಮತಗಳನ್ನು ನೀಡಲಿದ್ದೇವೆ ಎಂದು ತಿಳಿಸಿದರು.…






