ಲೇಖಕ: admin

ಮಡಿಕೇರಿ ಮಾ.26 NEWS DESK: ಅಭಿವೃದ್ಧಿ ಕಾರ್ಯಗಳನ್ನು ಹೀಗೂ ಮಾಡಬಹುದು ಎಂದು ಕೊಡಗಿನ ಇಬ್ಬರು ನೂತನ ಶಾಸಕರು ಕೇವಲ 10 ತಿಂಗಳಿನಲ್ಲಿ ತೋರಿಸಿಕೊಟ್ಟಿದ್ದಾರೆ. ಶಾಸಕರೊಂದಿಗೆ ಕೈಜೋಡಿಸಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನನ್ನನ್ನು ಗೆಲ್ಲಿಸಿ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಮನವಿ ಮಾಡಿದ್ದಾರೆ. ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನೂತನ ಶಾಸಕರುಗಳ ಆಯ್ಕೆಯಿಂದ ಕಳೆದ 20- 25 ವರ್ಷಗಳ ಕೆಟ್ಟ ಆಡಳಿತದಿಂದ ಕೊಡಗಿಗೆ ಮುಕ್ತಿ ಸಿಕ್ಕಿದೆ, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರಕ್ಕೂ 10 ವರ್ಷಗಳ ಕಿಡಿ ಹೊತ್ತಿಸುವ ವ್ಯವಸ್ಥೆಗೆ ಮುಕ್ತಿ ಸಿಗಬೇಕಾಗಿದೆ. ಕೊಡಗಿನಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಜನರು ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೊಡಗಿನ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ, ಎಲ್ಲಿ ನೋಡಿದರೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಕೇವಲ 10 ತಿಂಗಳಿನಲ್ಲಿ 350…

Read More

ಮಡಿಕೇರಿ ಮಾ.26 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರು ಇಂದು ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿದರು. ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು ಮೈಸೂರು ಹಾಗೂ ಕೊಡಗಿನ ಜನ ನನ್ನ ಕೈಹಿಡಿಯಲಿದ್ದಾರೆ ಎಂದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮತ್ತಿತರ ಪ್ರಮುಖರು ಹಾಜರಿದ್ದರು.

Read More

ಸಿದ್ದಾಪುರ ಮಾ.25 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಕೊಡಗಿನ ವಿವಿಧೆಡೆ ಪ್ರಚಾರವನ್ನು ಬಿರುಸುಗೊಳಿಸಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ಸಿದ್ದಾಪುರಕ್ಕೆ ಆಗಮಿಸಿದ ಅವರನ್ನು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಪಾಲಿಬೆಟ್ಟ, ಸಿದ್ದಾಪುರ, ಅಮ್ಮತ್ತಿ, ಚನ್ನಯ್ಯನಕೋಟೆ, ಮಾಲ್ದಾರೆ, ನೆಲ್ಯಹುದಿಕೇರಿ ಪಂಚಾಯಿತಿ ವ್ಯಾಪ್ತಿಯ ನೂರಾರು ಕಾರ್ಯಕರ್ತರು ಚಂಡೆ ವಾದ್ಯ ಮೇಳಗಳೊಂದಿಗೆ ಸ್ವಾಗತಿಸಿದರು. ನಂತರ ಎಸ್‌ಎನ್‌ಡಿಪಿ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಅಭ್ಯರ್ಥಿ ಯದುವೀರ್ ಒಡೆಯರ್ ಮಾತನಾಡಿ ದೇಶವನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕಾದ ಅನಿವಾರ್ಯತೆ ಇದೆ ಎಂದರು. ಕಾವೇರಿ ತವರು ಕೊಡಗು ಮತ್ತು ಮೈಸೂರಿಗೂ ಅವಿನಭಾವ ಸಂಬಂಧವಿದೆ, ಈ ಭಾಗದ ಜನರ ಸೇವೆ ಮಾಡುವ ಆಕಾಂಕ್ಷೆಯೊಂದಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದೇನೆ. ಪಕ್ಷದ ಬೆನ್ನೆಲುಬಾಗಿರುವ ಕಾರ್ಯಕರ್ತರು ಭವಿಷ್ಯದ ಚಿಂತನೆಯೊAದಿಗೆ ಪಕ್ಷವನ್ನು ಗೆಲ್ಲಿಸಬೇಕಾಗಿದೆ ಎಂದು ಕರೆ ನೀಡಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ ಕೊಡಗಿನಲ್ಲಿ ಕಳೆದ 20 ವರ್ಷಗಳ…

Read More

ಮಡಿಕೇರಿ ಮಾ.25 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ ಅವರು ಮಾ.26 ರಂದು ಬೆಳಗ್ಗೆ 10 ಗಂಟೆಗೆ ಪುಣ್ಯಕ್ಷೇತ್ರ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ||ಮಂತರ್ ಗೌಡ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

Read More

ಮಡಿಕೇರಿ ಮಾ.25 NEWS DESK : ಸೋಮವಾರದಿಂದ ಕೊಡಗು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನ ಯಾವುದೇ ಗೊಂದಲಗಳಿಲ್ಲದೆ ಶಾಂತ ರೀತಿಯಾಗಿ ಪರೀಕ್ಷೆ ನಡೆದಿದೆ. ಜಿಲ್ಲೆಯಲ್ಲಿ 171 ಶಾಲೆಗಳ 6121 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 6007 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ 114 ವಿದ್ಯಾರ್ಥಿಗಳು ವಿವಿಧ ಕಾರಣಗಳಿಗಾಗಿ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಇನ್ನು ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ನಿಗಧಿತ ಸಮಯಕ್ಕೆ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ತಮ್ಮ ರಿಜಿಸ್ಟರ್ ನಂಬರ್, ಕೊಠಡಿ ಸಂಖ್ಯೆಗಳನ್ನು ಖಾತ್ರಿ ಮಾಡಿಕೊಳ್ಳುತ್ತಿದ್ದುದು ಕಂಡು ಬಂತು. ಮಡಿಕೇರಿಯಲ್ಲಿ 8, ವಿರಾಜಪೇಟೆ 8 ಮತ್ತು ಸೋಮವಾರಪೇಟೆ ವ್ಯಾಪ್ತಿಯಲ್ಲಿ ಒಟ್ಟು 11 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಆರೋಗ್ಯ ಸೇವೆಯನ್ನು ಒದಗಿಸಲು ಅಗತ್ಯ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಇನ್ನು ಎಲ್ಲಾ ಪರೀಕ್ಷಾ ಕೆಂದ್ರಗಳ ಸುತ್ತಮುತ್ತಲ 200 ಮೀಟರ್ ಪ್ರದೇಶವನ್ನು ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗಿತ್ತು. ಕೇಂದ್ರಗಳ ಸುತ್ತ ಪಾರದರ್ಶಕ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.…

Read More

ಮಡಿಕೇರಿ ಮಾ.25 NEWS DESK : ಅನುದಾನದ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಕಾನೂನು ಹೋರಾಟ ಆರಂಭಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ ದಾಸ್ ಅಗರ್‍ವಾಲ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಧಾ ಮೋಹನ್ ದಾಸ್ ಅಗರವಾಲ್, ಯುಪಿಎ ಸರ್ಕಾರ 10 ವರ್ಷದಲ್ಲಿ ನೀಡಿದ ಅನುದಾನಕ್ಕಿಂತ ಹಲವು ಪಟ್ಟು ಹೆಚ್ಚು ಅನುದಾನವನ್ನು ಬಿಜೆಪಿ ಸರ್ಕಾರ ಕಳೆದ 10 ವರ್ಷಗಳಲ್ಲಿ ರಾಜ್ಯಕ್ಕೆ ನೀಡಿದೆ. ಈ ಕುರಿತ ಅಂಕಿ ಅಂಶಗಳು ಇದ್ದರೂ ಕೂಡ ರಾಜ್ಯ ಸರ್ಕಾರ ಚುನಾವಣೆ ವೇಳೆ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವುದು ಹಾಸ್ಯಾಸ್ಪದ ಎಂದು ಹೇಳಿದರು. ‘ಇಂಡಿಯಾ’ ಒಕ್ಕೂಟದ ಕಾರಣಕ್ಕೆ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿರುವುದರಿಂದಲೇ ಇಂದು ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಮೇಕೆದಾಟು ಯೋಜನೆಗೆ ಡಿಎಂಕೆ ಬಹಿರಂಗವಾಗಿ ವಿರೋಧಿಸುತ್ತಿದ್ದರೂ ಕಾಂಗ್ರೆಸ್ ಅವರೊಂದಿಗೆ ‘ಇಂಡಿಯಾ’ ಒಕ್ಕೂಟದಲ್ಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮುಸ್ಲಿಮರಿಂದ, ಮುಸ್ಲಿಮರಿಗಾಗಿ, ಮುಸ್ಲಿಮರಿಗೋಸ್ಕರ ಆಡಳಿತ ನಡೆಯುತ್ತಿದೆ ಎಂಬ…

Read More

ಸುಂಟಿಕೊಪ್ಪ ಮಾ.26 NEWS DESK : ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಿರುವ ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ ಹಾಗೂ ಸಂತಮೇರಿ 2 ಪರೀಕ್ಷಾ ಕೇಂದ್ರಗಳನ್ನು ಮಾರ್ಪಡಿಸಿದ್ದು, 9 ಪ್ರೌಢಶಾಲೆಗಳ 381 ವಿದ್ಯಾರ್ಥಿಗಳಿಗೆ ಮಾ.25 ರಿಂದ ಏ.6 ರವರೆಗೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಸುಂಟಿಕೊಪ್ಪದ 2 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ನಿರ್ಮಲ ವಿದ್ಯಾಭವನ ಹಟ್ಟಿಹೊಳೆ, ಸೂರ್ಲಬ್ಬಿ ಸರಕಾರಿ ಪ್ರೌಢಶಾಲೆ, ಸರಕಾರಿ ಪ್ರೌಢಶಾಲೆ ಮಾದಾಪುರ, ಚೆನ್ನಮ್ಮ ಪ್ರೌಢಶಾಲೆ ಗರಗಂದೂರು, ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾದ್ಯಮ ಪ್ರೌಢಶಾಲೆ ಸುಂಟಿಕೊಪ್ಪ, ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ,ಕಾನ್‍ಬೈಲ್ ಸರಕಾರಿ ಪ್ರೌಢಶಾಲೆ, ಶಾಂತಿನಿಕೇತನ,ಸುಂಟಿಕೊಪ್ಪ ನಾಡು ಪ್ರೌಢಶಾಲೆ ಕೊಡಗರಹಳ್ಳಿ, ಒಟ್ಟು 381 ವಿದ್ಯಾರ್ಥಿಗಳು ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ 150 ಮಕ್ಕಳಲ್ಲಿ 1 ಓರ್ವ ವಿದ್ಯಾರ್ಥಿ ಗೈರಾಗಿದ್ದಾರೆ. 149 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದರೆ, ಸಂತ ಮೇರಿ ಆಂಗ್ಲ ಮಾದ್ಯಮ ಪರೀಕ್ಷಾ ಕೇಂದ್ರದಲ್ಲಿ 231 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆಯನ್ನು ಎದುರಿಸಿದ್ದಾರೆ. ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ ಹಾಗೂ ಸಂತಮೇರಿ ಆವರಣದಲ್ಲಿ ಪರೀಕ್ಷೆಗೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಅಧ್ಯಕ್ಷತೆಯನ್ನು…

Read More

ಮಡಿಕೇರಿ ಮಾ.25 NEWS DESK : ಕೊಡವ ಕುಟುಂಬಗಳ ನಡುವಿನ ಪ್ರತಿಷ್ಠಿತ ಕುಂಡ್ಯೋಳಂಡ ಹಾಕಿ ಹಬ್ಬಕ್ಕೆ ದಿನಗಣನೆ ಆರಂಭಗೊಂಡಿದ್ದು, ಕೊಡವ ಹಾಕಿ ಅಕಾಡೆಮಿ ಇಂದು ಒಂದು ಕೆ.ಜಿ ಬೆಳ್ಳಿಯ ರೋಲಿಂಗ್ ಟ್ರೋಫಿಯನ್ನು ಕುಂಡ್ಯೋಳಂಡ ಕುಟುಂಬಸ್ಥರಿಗೆ ಹಸ್ತಾಂತರಿಸಿತು. ನಗರದ ಹೊಟೇಲ್ ವೃಂದಾವನ್ ಕೂರ್ಗ್ ಸಭಾಂಗಣದಲ್ಲಿ ಹಾಕಿ ಅಕಾಡೆಮಿಯ ಪ್ರಮುಖರು ಹಾಗೂ ಕುಂಡ್ಯೋಳಂಡ ಕುಟುಂಬದ ಮುಖ್ಯಸ್ಥರು ಹಾಕಿ ಹಬ್ಬದ ಯಶಸ್ಸಿಗಾಗಿ ಸಮಾಲೋಚಿಸಿದರು. ಈ ಸಂದರ್ಭ ಅಕಾಡೆಮಿಯ ಪದಾಧಿಕಾರಿಗಳು ರೋಲಿಂಗ್ ಟ್ರೋಫಿಯನ್ನು ಕುಂಡ್ಯೋಳಂಡ ಕುಟುಂಬದ ಪ್ರಮುಖರಿಗೆ ನೀಡಿ ಶುಭ ಕೋರಿದರು. ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಕ್ರೀಡಾಕೂಟದ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ, ಅಧ್ಯಕ್ಷ ರಮೇಶ್ ಮುದ್ದಯ್ಯ, ಖಜಾಂಚಿ ಕುಂಡ್ಯೋಳಂಡ ವಿಶು ಪೂವಯ್ಯ, ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ, ಅಕಾಡೆಮಿ ನಿರ್ದೇಶಕರುಗಳಾದ ಮಾಳೇಟಿರ ಶ್ರೀನಿವಾಸ್, ಚೆಯ್ಯಂಡ ಸತ್ಯ, ಡೀನಾ ಪೂವಯ್ಯ ಹಾಗೂ ಕುಂಡ್ಯೋಳಂಡ ಕುಟುಂಬಸ್ಥರು ಉಪಸ್ಥಿತರಿದ್ದರು. ಮಾ.30 ರಿಂದ ಏ.28 ರವರೆಗೆ ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್…

Read More

ಮಡಿಕೇರಿ ಮಾ.25 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏ.4 ಕೊನೆಯ ದಿನವಾಗಿದೆ. ಏ.5 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏ.8 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏ.26 ರಂದು ಮತದಾನ ನಡೆಯಲಿದ್ದು, ಜೂ.4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ 4,66,154 ಮತದಾರರು ಇದ್ದು, ಇವರಲ್ಲಿ 2,28,478 ಪುರುಷ ಮತದಾರರು ಮತ್ತು 2,37,660 ಮಹಿಳಾ ಮತದಾರರು ಇದ್ದಾರೆ. 16 ಮಂದಿ ಇತರೆ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2,36,562 ಮತದಾರರು…

Read More

ಮಡಿಕೇರಿ ಮಾ.25 NEWS DESK : ಮಾನಸಿಕ ಆರೋಗ್ಯ, ನೀರಿನ ಮಹತ್ವ, ಹಸಿರು ಸಂರಕ್ಷಣೆ ಸಂಬಂಧಿತ ರೋಟರಿ ಸಂಸ್ಥೆಗಳ ವತಿಯಿಂದ ನಗರದಲ್ಲಿ ಜಾದೂ ಮೂಲಕ ಜಾಗೃತಿ ಮೂಡಿಸುವ ವಿಭಿನ್ನ ಕಾಯ೯ಕ್ರಮ ನಡೆಯಿತು. ನಗರದ ರೋಟರಿ ಸಭಾಂಗಣದಲ್ಲಿ ಮಂಗಳೂರು ರೋಟರಿ ಕ್ಲಬ್ ಗಳು, ಮಡಿಕೇರಿಯ ಮೂರು ರೋಟರಿ ಕ್ಲಬ್ ಗಳ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯ, ನೀರನ್ನು ಉಳಿಸಿ ಮತ್ತು  ಹಸಿರು ಸಂರಕ್ಷಣೆ ಸಂಬಂಧಿತ ರೋಟರಿ ಸಂಸ್ಥೆಯಿಂದ ವಾಹನ ಜಾಥಾ  ನಡೆಯಿತು. ಈ ಕಾಯ೯ಕ್ರಮದಲ್ಲಿ ಕುದ್ರೋಳಿ ಗಣೇಶ್ ಮ್ಯಾಜಿಕ್ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದರು. ನಮ್ಮ ಸಮಾಜದಲ್ಲಿ ಪರಿಸರವೇ ಜಾದೂವಿನಂತಿದೆ. ಇಂಥ ಪರಿಸರವನ್ನು ಸೂಕ್ತ ರೀತಿಯಲ್ಲಿ ಸಂರಕ್ಷಿಸುವುದು ಎಲ್ಲರ ಆದ್ಯ ಕತ೯ವ್ಯವಾಗಬೇಕಾಗಿದೆ ಎಂದು ಕುದ್ರೋಳಿ ಗಣೇಶ್ ಕರೆ ನೀಡಿದರು. ರೋಟರಿ ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷ ಕಿರಣ್ ಪ್ರಸಾದ್ ರೈ ಮಾತನಾಡಿ, ಮಂಗಳೂರಿನಿಂದ ಪ್ರಾರಂಭವಾಗಿರುವ ಈ ವಾಹನ ಜಾಥಾವು 52 ರೋಟರಿ ಸಂಸ್ಥೆಗಳಿಗೆ ತೆರಳಿ ಮಾನಸಿಕ ಆರೋಗ್ಯ, ನೀರನ್ನು ಉಳಿಸುವುದು ಮತ್ತು ಹಸಿರು ಸಂರಕ್ಷಣೆಯ ಮಹತ್ವವನ್ನು…

Read More