ಲೇಖಕ: admin

ಸೋಮವಾರಪೇಟೆ ಮೇ 20 NEWS DESK : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಹೆಚ್ಚು ಒತ್ತು ನೀಡಿದರೆ ಉತ್ತಮ ಸಾಧನೆ ಮಾಡಬಹುದು ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದರು. ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವತಿಯಿಂದ ಪಟ್ಟಣದಲ್ಲಿರುವ ಹಾಕಿ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಆಯೋಜಿಸಿದ್ದ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಆರ್ಹತಾ ಪತ್ರ ವಿತರಿಸಿ ಮಾತನಾಡಿದರು. ಕ್ರೀಡಾಕ್ಷೇತ್ರದಲ್ಲಿ ಆಸಕ್ತಿಯಿರುವ ಮಕ್ಕಳಿಗೆ ನಾವುಗಳು ಪ್ರೋತ್ಸಾಹ ನೀಡಬೇಕು. ಸಿಕ್ಕ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಡಿಸಿಕೊಳ್ಳಬೇಕು ಎಂದು ಹೇಳಿದರು. ಕೊಡಗಿನಲ್ಲಿ ಹಾಕಿ ಎಂಬುದು ರಕ್ತದಲ್ಲಿದೆ. ಇಲ್ಲಿನ ಮೈದಾನದಲ್ಲಿ ಆಟವಾಡಿದ ಹಾಕಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅಂತಹ ಪ್ರತಿಭಾವಂತರು ಸೃಷ್ಟಿಯಾಗಬೇಕಿದೆ. ಗ್ರಾಮೀಣ ಭಾಗದಲ್ಲಿ ಎಲೆಮರೆ ಕಾಯಿಯಂತಿರುವ ಪ್ರತಿಭೆಗಳನ್ನು ಹುಡುಕಿ ತರಬೇತಿ ನೀಡಬೇಕು. ಸಿಂಥೆಟಿಕ್ ಟರ್ಫ್ ಮೈದಾನ ಉಪಯೋಗವಾಗಬೇಕು. ಕ್ರೀಡಾ ಇಲಾಖೆಯವರು ಹಾಕಿ ಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ…

Read More

ಮಡಿಕೇರಿ ಮೇ 20 NEWS DESK : ಭಾರೀ ಗಾತ್ರದ ಕಾಡುಕೋಣವನ್ನು ಬೇಟೆಯಾಡಿ ಮಾಂಸ ಮಾಡಿ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಅರಣ್ಯ ಇಲಖಾ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎಮ್ಮೆಮಾಡು ಗ್ರಾಮದ ನಿವಾಸಿ ಹ್ಯಾರಿಸ್(42) ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಬಂಧಿತ ವ್ಯಕ್ತಿಯಿಂದ ಸುಮಾರು 549 ಕೆ.ಜಿ. ಕಾಡುಕೋಣದ ಮಾಂಸ, ಎರಡು ಕತ್ತಿ ಹಾಗೂ ಪಿಕಪ್ ವಾಹನವೊಂದನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ನಂದಿಮೊಟ್ಟೆ ಎಂಬಲ್ಲಿ ಕಾಡುಕೋಣವನ್ನು ಬೇಟೆಯಾಡಲಾಗಿದೆ ಎನ್ನಲಾಗಿದ್ದು, ಇದರ ಮಾಂಸವನ್ನು ವಾಹನದ ಮೂಲಕ ಸಾಗಾಟ ಮಾಡುವ ಸಂದರ್ಭ, ಸುಳಿವರಿತ ಅರಣ್ಯ ಇಲಾಖಾ ತಂಡ ಆರೋಪಿಗಳ ವಾಹನವನ್ನು ರಾತ್ರಿಯ ವೇಳೆ ಬೆನ್ನಟ್ಟಿ ಅಪ್ಪಂಗಳ ಬಳಿ ವಾಹನ ಸಹಿತ ಆರೋಪಿತಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಂತದಲ್ಲಿ ಹ್ಯಾರಿಸ್‍ನೊಂದಿಗೆ ಇದ್ದ ಮತ್ತೊಬ್ಬ ಪರಾರಿಯಾಗಿದ್ದಾನೆ. ಕಾರ್ಯಾಚರಣೆಯಲ್ಲಿ ಡಿಎಫ್‍ಓ ಭಾಸ್ಕರ್, ಎಸಿಎಫ್ ಮೊಹಿಸಿನ್ ಬಾಷ, ಆರ್‍ಎಫ್‍ಓ ಪೂಜಶ್ರಿ, ಸಿಬ್ಬಂದಿಗಳಾದ ಮಲ್ಲಯ್ಯ ಹೀರೆಮಠ್, ಸಂತೋಷ್ ವಾಸುದೇವ, ಜೀವನ್, ಯಶವಂತ್, ಕುಶನ್, ಪ್ರವೀಣ್, ಮಹೇಶ,…

Read More

ಮಡಿಕೇರಿ ಮೇ 20 NEWS DESK : 2024-25 ನೇ ಸಾಲಿನಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿ ಯಾವುದೇ ಶುಲ್ಕವಿಲ್ಲದೇ ಸರ್ಕಾರದ ವತಿಯಿಂದ ಊಟ, ವಸತಿ, ಸಮವಸ್ತ್ರ, ಶೂ, ಸಾಕ್ಸ್, ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಶುಚಿ ಸಂಭ್ರಮ ಕಿಟ್(ಸೋಪು, ಎಣ್ಣೆ, ಬ್ರಶಸ್, ಪೇಸ್ಟ್, ಪೌಡರ್), ಕಂಪ್ಯೂಟರ್ ಲ್ಯಾಬ್, ಆಟೋಪಕರಣಗಳು ಹಾಗೂ ಇತರೆ ಸೌಲಭ್ಯಗಳು ಮತ್ತು ನುರಿತ ಬೋಧಕರಿಂದ ಬೋಧನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕುಶಾಲನಗರ ತಾಲ್ಲೂಕು ನಂಜರಾಯಪಟ್ಟಣ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, (6362555320), ಕುಶಾಲನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (9481143491), ಸೋಮವಾರಪೇಟೆ ತಾಲ್ಲೂಕಿನ ಮಾಲಂಬಿ ವಾಲ್ಮೀಕಿ ಆಶ್ರಮ ಶಾಲೆ (6362555320), ಯಡವನಾಡು ವಾಲ್ಮೀಕಿ ಆಶ್ರಮ ಶಾಲೆ (8618546009), ಕುಶಾಲನಗರ ಬಸವನಹಳ್ಳಿ ವಾಲ್ಮೀಕಿ ಆಶ್ರಮ ಶಾಲೆ…

Read More

ಮಡಿಕೇರಿ ಮೇ 20 NEWS DESK : ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ)ಗೆ 2024-25 ನೇ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕಾನಿಕ್ (2 ವರ್ಷ ಎನ್‍ಸಿವಿಟಿ ಸಂಯೋಜನೆ), ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ (1 ವರ್ಷ ಎನ್‍ಸಿವಿಟಿ ಸಂಯೋಜನೆ) ವೃತ್ತಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಜೂನ್, 03 ಕೊನೆಯ ದಿನವಾಗಿದೆ. ಅರ್ಜಿಯನ್ನು ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ), ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂ.ಸಂ.08274-200221 ಮತ್ತು 9036796935, 8971358220 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

Read More

ಮಡಿಕೇರಿ ಮೇ 19 NEWS DESK : ಕೊಡಗು ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಚುರುಕು ಪಡೆಯುತ್ತಿದ್ದು, ಜಿಲ್ಲೆಯ ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ಕೊಡಗು ಜಿಲ್ಲಾಡಳಿತ ಅತಿವೃಷ್ಟಿಯನ್ನು ಎದುರಿಸಲು ಸನ್ನದ್ಧವಾಗುತ್ತಿದೆ. ::: ಸಿಬ್ಬಂದಿಗಳಿಗೆ ತರಬೇತಿ ::: ಮುನ್ನೆಚ್ಚರಿಕಾ ಕ್ರಮಗಳ ಭಾಗವಾಗಿ ಕೊಡಗು ಜಿಲ್ಲಾ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ತನ್ನ ಸಿಬ್ಬಂದಿಗಳಿಗೆ ಕೂಟುಹೊಳೆ ಹಿನ್ನೀರಿನಲ್ಲಿ ಪ್ರವಾಹ ರಕ್ಷಣಾ ಕ್ರಮಗಳ ಕುರಿತು ತರಬೇತಿ ನೀಡಿತು. ರ್ಯಾಫ್ಟ್ ಬೋಟ್ ಮೂಲಕ ಹಿನ್ನೀರಿನಲ್ಲಿ ಅಭ್ಯಾಸ ನಡೆಸಿದ ಸಿಬ್ಬಂದಿಗಳು ಪ್ರವಾಹ ಎದುರಾದ ಸಂದರ್ಭ ಸ್ಥಳಕ್ಕೆ ಧಾವಿಸುವುದು, ಹರಿಯುವ ನದಿ ನೀರಿನ ಪ್ರವಾಹಕ್ಕೆ ಎದುರಾಗಿ ಬೋಟ್ ಚಲಾಯಿಸುವುದು, ಜನ ಜಾನುವಾರುಗಳ ರಕ್ಷಣೆ ಮಾಡುವುದು, ಹಗ್ಗದ ಸಹಾಯದಿಂದ ಜನರನ್ನು ರಕ್ಷಿಸುವುದು ಸೇರಿದಂತೆ ವಿವಿಧ ರೀತಿಯ ಕಸರತ್ತನ್ನು ನಡೆಸುವ ಮೂಲಕ ತನ್ನ ಸಿಬ್ಬಂದಿಗಳಿಗೆ ಮಳೆಗಾಲ ಎದುರಾಗುವ ವಿಪತ್ತುಗಳನ್ನು ಎದುರಿಸಲು ಸಿದ್ಧಗೊಳಿಸಿದೆ. ::: ರಕ್ಷಣಾ…

Read More

ಬಂಟವಾಳ ಮೇ 20 NEWS DESK : ಎನ್ ಡಿಎ ಮೈತ್ರೂಕೂಟದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು, ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಂತ ಬಹುಮತದಿಂದ ಗೆಲ್ಲಿಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಬಂಟವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು. ಬಂಟವಾಳ ಸರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಹೆಚ್ಚು ನೋಂದಣಿ ಮಾಡಿದ ಕ್ಷೇತ್ರವಿದು, ಈ ಭಾಗದಿಂದ ಅಭ್ಯರ್ಥಿಗಳಿಗೆ ಹೆಚ್ಚಿನ ಲೀಡ್ ಕೊಡಲು ಶ್ರಮಿಸುವುದಾಗಿ ಹೇಳಿದರು. ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕ ವಿಕಾಸ್ ಪುತ್ತೂರ್ ಮಾತನಾಡಿ, ಎಲ್ಲ ಮಹಾಶಕ್ತಿ ಕೇಂದ್ರದ ಪ್ರಮುಖರು ಒಟ್ಟಾಗಿ ಕೆಲಸ ಮಾಡಬೇಕಿದೆ. ವಿಧಾನ ಸಭೆ ಹಾಗೂ ಲೋಕಸಭಾ ಚುನಾವಣೆಗಿಂತ ವಿಭಿನ್ನವಾಗಿ ಈ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಾರ್ಯಶೀಲರಾಗಬೇಕಿದೆ, ಪ್ರತಿ ಮತದಾರರನ್ನು ಮತಗಟ್ಟೆಗೆ ಕರೆ ತಂದು ಮೊದಲ ಪ್ರಾಶಸ್ತ್ಯದ ಮತ ಹಾಕಿಸಬೇಕು ಎಂದು ಹೇಳಿದರು. ಕ್ಯಾಪ್ಟನ್ ಬ್ರಿಜೇಶ್ ಮಾತನಾಡಿ, ಬೇರೆಲ್ಲಾ ಚುನಾವಣೆಗಿಂತ ಪರಿಷತ್ ಚುನಾವಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಬೇಕು,…

Read More

ಮಡಿಕೇರಿ ಮೇ 20 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿರುವ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವವು ಮೇ 23 ರಂದು ನಡೆಯಲಿದೆ ಎಂದು ಶ್ರೀ ಮುತ್ತಪ್ಪ ಮಹಿಳಾ ವೇದಿಕೆಯ ಅಧ್ಯಕ್ಷೆ ಶಾರದ ರಾಮನ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಪಾರ್ವತಿ, ಸರಸ್ವತಿ, ಮಹಾಲಕ್ಷ್ಮಿ ಸಂಕಲ್ಪದಲ್ಲಿರುವ ಶ್ರೀ ಭಗವತಿ ದೇವಿಗೆ ಪೊಂಗಾಲ ಸೇವೆಯನ್ನು ಬೆಳಿಗ್ಗೆ 8.30ಕ್ಕೆ ನಡೆಸಲು ಉದ್ದೇಶಿಸಲಾಗಿದ್ದು, ಈ ಬಾರಿ ವಿಜೃಂಭಣೆಯಿಂದ ಉತ್ಸವ ನಡೆಸಲಾಗುವುದು. ಇದು ಕೇವಲ ಮಹಿಳೆಯರು ಮಾತ್ರ ನಡೆಸುವ ಪುಣ್ಯ ಕಾರ್ಯವಾಗಿದ್ದು, ಪೊಂಗಾಲ ಸಮರ್ಪಣೆಯಿಂದ ಮನೆಯಲ್ಲಿ ಆರೋಗ್ಯ ಶಾಂತಿ, ನೆಮ್ಮದಿ ನೆಲೆಸುವ ನಂಬಿಕೆ ಇದೆ ಎಂದರು. ಇಟ್ಟಿಗೆ ಅಥವಾ ಕಲ್ಲುಗಳನ್ನು ಜೋಡಿಸಿ ಒಲೆಯನ್ನು ಹಾಕಿ ಸೌದೆಗಳನ್ನು ಜೋಡಿಸಿ ಸಿದ್ಧಪಡಿಸಿದ ನಂತರ ಅರ್ಚಕರು ನೀಡಿದ ಕರ್ಪೂರದಾರತಿಯಿಂದ ಒಲೆ ಉರಿಸಿ, ಹೊಸ ಮಡಿಕೆಯಲ್ಲಿ ನೀರು ತುಂಬಿಸಿ, ಪೊಂಗಾಲ ತಯಾರಿಕೆ ಮಾಡಲಾಗುತ್ತದೆ. ಪೊಂಗಾಲ ಸೇವೆ…

Read More

ಬೆಂಗಳೂರು ಮೇ 20 NEWS DESK : ದೇಶದಲ್ಲಿ ಜುಲೈ 1ರಿಂದ ಮೂರು ಹೊಸ ಕಾನೂನುಗಳು ಅನುಷ್ಠಾನಕ್ಕೆ ಬರಲಿವೆ. ದೇಶದಲ್ಲಿ ಜಾರಿಯಲ್ಲಿದ್ದ ಐಪಿಸಿ, ಸಿಆರ್‌ಪಿಸಿ ಹಾಗೂ ಸಾಕ್ಷ್ಯ ಕಾಯ್ದೆಗಳು ಬದಲಾಗಿವೆ. ಈ ಮೂರು ಕಾಯ್ದೆಗಳ ಬದಲಾಗಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಸಂಹಿತೆ ರಚಿಸಲಾಗಿದೆ. ಈ ಮೂರು ಕಾಯ್ದೆಗಳು ಜು.1ರಿಂದ ಅನುಷ್ಠಾನಗೊಳ್ಳಲಿವೆ. ಸಾರ್ವಜನಿಕರು ಜುಲೈ 1ರಿಂದ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದರೆ, ನೂತನ ಕಾನೂನುಗಳ ಅನ್ವಯ ಎಫ್‌ಐಆರ್‌ ದಾಖಲಿಸಬೇಕಾಗುತ್ತದೆ. ಹೀಗಾಗಿ ಪೊಲೀಸ್‌ ಅಧಿಕಾರಿಗಳು ಯಾವ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂಬುದರ ಬಗ್ಗೆ ಯಾವುದೇ ಸಂಶಯವಿಲ್ಲದೆ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಎಫ್‌ಐಆರ್‌ ದಾಖಲಿಸಬೇಕು. ನ್ಯಾಯಾಲಯಗಳಲ್ಲಿ ಇಲಾಖೆಗೆ ಮುಜುಗರವಾಗದಂತೆ ಎಸಿಪಿ ಮಟ್ಟದ ಅಧಿಕಾರಿಗಳು ಗಮನ ಹರಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

Read More

ಕುಶಾಲನಗರ ಮೇ 20  NEWS DESK : ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬದ ಅಂಗವಾಗಿ ಪತ್ರಕರ್ತರ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿ ಕುಶಾಲನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಪಂದ್ಯಾವಳಿಗೆ ಚಾಲನೆ ನೀಡಿದರು. ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ 6 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಫೈನಲ್ ಪಂದ್ಯದಲ್ಲಿ ಇಸ್ಮಾಯಿಲ್ ಕಂಡಕೆರೆ‌ ಮಾಲೀಕತ್ವದ ಮುಸ್ತಾಪ ನಾಯಕತ್ವದ ಮಿಡಿಯಾ ಸೂಪರ್ ಕಿಂಗ್ಸ್ ತಂಡ ಪ್ರಥಮ ಸ್ಥಾನ ಗಳಿಸಿತು. ಜಯಪ್ರಕಾಶ್ ಮಾಲೀಕತ್ವದ ಶಿವರಾಜ್ ನಾಯಕತ್ವದ ಸೆನ್ಸಾ ತಂಡ ದ್ವಿತೀಯ ಸ್ಥಾನ, ಮಂಜು ಸುವರ್ಣ ಮಾಲಿಕತ್ವದ, ಆದರ್ಶ್ ನಾಯಕತ್ವದ ಟೀಂ ನಾಟೌಟ್ ತೃತೀಯ, ವಿಶ್ವ ಕುಂಬೂರು ಮಾಲಿಕತ್ವದ ಕೆ.ಎಂ.ವಿನೋದ್ ನಾಯಕತ್ವದ ವಿ.ತ್ರಿ.ತಂಡ ನಾಲ್ಕನೇ ಸ್ಥಾನ ಗಳಿಸಿತು. ಸಂಜೆ ನಡೆದ ಸಮಾರೋಪ…

Read More

ನವದೆಹಲಿ ಮೇ 20 NEWS DESK :  ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಅವರ ಸಂಪುಟ ಸದಸ್ಯರು ಹಾಗೂ ಸರ್ಕಾರಿ ಅಧಿಕಾರಿಗಳು ಸಜೀವ ದಹನವಾಗಿದ್ದಾರೆ ಎಂದು ಇರಾನ್ ಸರ್ಕಾರದ ಮಾಧ್ಯಮಗಳು ದೃಢಪಡಿಸಿವೆ.  ಇರಾನ್ ಅಧ್ಯಕ್ಷ ಇಬ್ರಹಾಂ ರೈಸಿ ಇರಾನ್‌ ನ ಪೂರ್ವ ಅಜರ್‌ಬೈಜಾನ್ ಪ್ರಾಂತ್ಯದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಅವರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು.

Read More