ಶಿವಮೊಗ್ಗ ಮೇ 18 NEWS DESK : ನಗರದ ಪಿಇಎಸ್ ಕಾಲೇಜ್ ಸಭಾಂಗಣದಲ್ಲಿ ಶನಿವಾರ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಪಿಎಸ್ ಕಾಲೇಜಿನ ಆಡಳಿತ ಸಂಯೋಜಕರಾದ ಡಾ. ನಾಗರಾಜ್ ಮಾತನಾಡಿ, ಡಾ. ಧನಂಜಯ ಸರ್ಜಿ ಅವರು ರಾಜ್ಯದ ಹೆಸರಾಂತ ಮಕ್ಕಳ ತಜ್ಞರು, ವಿದ್ಯಾವಂತರು ರಾಜಕೀಯಕ್ಕೆ ಬರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ಬಾರಿ ಹೇಳುತ್ತಲೇ ಇರುತ್ತಾರೆ , ಅಂತೆಯೇ ಡಾ. ಧನಂಜಯ ಸರ್ಜಿ ಇಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಮ್ಮ ಮುಂದಿದ್ದಾರೆ. ಕೃಷಿ ಮತ್ತು ವ್ಯಾಪಾರ ಕುಟುಂಬದ ಹಿನ್ನೆಲೆಯಲ್ಲಿ ಬಂದ ಸರ್ಜಿ, ಉತ್ತಮ ಸೇವೆ ಸಲ್ಲಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಇದೀಗ ನೈರುತ್ಯ ಪದವೀಧರ ಕ್ಷೇತ್ರದ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಸರ್ಜಿ ಅವರಿಗೆ ಮತ ಹಾಕುವುದರ ಮೂಲಕ ಈ ಬಾರಿ ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಿ ಕಳುಹಿಸಬೇಕು ಎಂದು…
ಲೇಖಕ: admin
ಶಿವಮೊಗ್ಗ ಮೇ 18 NEWS DESK : ಇದೇ ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡಿ ಅಭೂತ ಪೂರ್ವ ಗೆಲುವಿಗೆ ಕಾರಣರಾಗಬೇಕು ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮನವಿ ಮಾಡಿದರು. ನಗರದ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ವೈದ್ಯ ಶಿಕ್ಷಣ ಮುಗಿದ ತಕ್ಷಣ ನಾನು ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ನಂತರ ಚಿಕ್ಕದಾಗಿ ಒಂದು ಕ್ಲಿನಿಕ್ ಆರಂಭಿಸಿದ್ದು, ಇದೀಗ 1000 ಸಿಬ್ಬಂದಿ ಹಾಗೂ 100 ವೈದ್ಯರು ಆಸ್ಪತ್ರೆಯಲ್ಲಿ ಸೇವೆಸಲ್ಲಿಸುತ್ತಿದ್ದಾರೆ, ವಿವಿಧ ಹಂತಗಳಲ್ಲಿ ಪದವೀದರರ ಸಮಸ್ಯೆಗಳನ್ನು ಹತ್ತಿರದಿಂದ ಅರಿತುಕೊಂಡಿದ್ದೇನೆ, ನೈರುತ್ಯ ಪದವೀಧರ ಕ್ಷೇತ್ರವು 14 ಮೆಡಿಕಲ್ ಕಾಲೇಜು, 30 ಎಂಜಿನಿಯರಿಂಗ್ ಕಾಲೇಜು, 100 ಕ್ಕಿಂತ ಹೆಚ್ಚು ದೊಡ್ಡ ದೊಡ್ಡ ವಿದ್ಯಾಸ್ಥೆಗಳನ್ನು ಹೊಂದಿದ ಸುಶಿಕ್ಷಿತರ ಕ್ಷೇತ್ರ. ಈ ಕ್ಷೇತ್ರವು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಮಂಗಳೂರು, ದಕ್ಷಿಣ ಕನ್ನಡ…
ಮಡಿಕೇರಿ ಮೇ 18 NEWS DESK : ಆಟೋರಿಕ್ಷಾದಲ್ಲಿ ಕಳೆದು ಹೋಗಿದ್ದ ಮೊಬೈಲ್ ಫೋನ್ ನ್ನು ಕೊಡಗು ಸೈಬರ್ ಅಪರಾಧ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಎರಡು ತಿಂಗಳ ಹಿಂದೆ ಮಡಿಕೇರಿ ಮಾರುಕಟ್ಟೆ ವ್ಯಾಪಾರಿ ಎಂ.ಎ.ರಜಾ಼ಕ್ ಅವರು ಶ್ರೀ ರಾಜರಾಜೇಶ್ವರಿ ನಗರದ ರಸ್ತೆಯಲ್ಲಿ ಆಟೋರಿಕ್ಷಾವೊಂದರಲ್ಲಿ ಮೊಬೈಲ್ ಫೋನ್ ಕಳೆದುಕೊಂಡಿದ್ದರು. ಈ ಬಗ್ಗೆ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎರಡು ತಿಂಗಳ ತನಿಖೆಯ ನಂತರ ಮೊಬೈಲ್ ಫೋನ್ ಪತ್ತೆಯಾಗಿದ್ದು, ಠಾಣಾಧಿಕಾರಿ ಶ್ರೀಕಾಂತ್ ಅವರು ಇಂದು ಎಂ.ಎ.ರಜಾ಼ಕ್ ಅವರಿಗೆ ಹಸ್ತಾಂತರಿಸಿದರು. ಪೊಲೀಸರ ಕಾರ್ಯದಕ್ಷತೆಯ ಬಗ್ಗೆ ರಜಾ಼ಕ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸೈಬರ್ ಅಪರಾಧ ಠಾಣೆಯ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮಡಿಕೇರಿ ಮೇ 17 NEWS DESK : ಮಹಿಳೆಯರು ಹಾಗೂ ಯುವತಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಕಠಿಣ ಕಾನೂನು ಜಾರಿಗೆ ತರಬೇಕು ಮತ್ತು ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದೆ. ನಗರದಲ್ಲಿ ನಡೆದ ಬಿಜೆಪಿ ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ಪದಾಧಿಕಾರಿಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆಯರು ಆತಂಕದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಹತ್ಯೆ, ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದೆ ಎಂದು ಆರೋಪಿಸಿದರು. ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತçಗೊಳಿಸಿ ದೌರ್ಜನ್ಯ ನಡೆಸಲಾಗಿದೆ. ರಾಣಿಬೆನ್ನೂರಿನಲ್ಲಿ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ವಿವಸ್ತçಗೊಳಿಸಿ ಥಳಿಸಲಾಗಿದೆ. ಹಾವೇರಿಯಲ್ಲಿ ಏಳು ಪುರುಷರು ಯುವತಿಯೊಬ್ಬಳನ್ನು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್ ನಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರಿ…
ಮಡಿಕೇರಿ ಮೇ 17 NEWS DESK : ಜಿಲ್ಲೆಯಲ್ಲಿ ಕಾಡಾನೆಗಳ ಸಂಖ್ಯೆ ಮಿತಿಮೀರಿದ್ದು, ಅವುಗಳ ಉಪಟಳದಿಂದ ಗ್ರಾಮೀಣರು ಕಂಗಾಲಾಗಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಅರಣ್ಯ ಭವನದ ಎದುರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರಕಾರ ಕಾಡಾನೆ ಉಪಟಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ‘ಅರಣ್ಯ ಭವನ’ವನ್ನೇ ಆನೆ ಸಾಕಾಣಿಕೆ ಕೇಂದ್ರ’ವನ್ನಾಗಿ ಮಾಡಲಿ. ಪರಿಸರವಾದಿಗಳು ತಮ್ಮ ಮನೆಯಲ್ಲಿ ಕಾಡಾನೆಗಳನ್ನು ಸಾಕಿಕೊಳ್ಳಲಿ, ಇಲ್ಲದಿದ್ದಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ನಮಗೆ ಅವಕಾಶ ನೀಡಲಿ ಎಂದರು.
ಮಡಿಕೇರಿ ಮೇ 17 NEWS DESK : ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ಮರಗಳ ಗಣತಿ ಕಾರ್ಯವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಅರಣ್ಯ ಭವನದ ಎದುರು ಅರಣ್ಯ ಇಲಾಖೆ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮರ ಗಣತಿ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಮತ್ತು ವಿನಾಕಾರಣ ಬೆಳೆಗಾರರಿಗೆ ಕಿರುಕುಳ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಮರಗಳ ಸರ್ವೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲಾಗುತ್ತಿರುವ ಬಗ್ಗೆ ಅರಿವಿದ್ದರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಉದ್ದೇಶ ಪೂರ್ವಕವಾಗಿಯೇ ಇಂದು ಬೆಂಗಳೂರಿನ ಸಭೆಯ ನೆಪದಲ್ಲಿ ಗೈರು ಹಾಜರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಖಾಸಗಿ ಜಮೀನುಗಳಲ್ಲಿನ…
ನಾಗಮಂಗಲ ಮೇ 17 NEWS DESK : ಕಾಡು ಹಂದಿ ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಂಡ್ಯದ ನಾಗಮಂಗಲದಲ್ಲಿ ನಡೆದಿದೆ. ಚಿಂದಗಿರಿ ದೊಡ್ಡಿ ಗ್ರಾಮದ ಪುಟ್ಟಸ್ವಾಮಿ ಎಂಬುವವರ ಪುತ್ರ ಶಿವು (48) ಮೃತ ದುರ್ದೈವಿ. ಮಂಡ್ಯ- ನಾಗಮಂಗಲ ರಸ್ತೆಯಲ್ಲಿ ಬೈಕ್ ನಲ್ಲಿ ಬರುತ್ತಿದ್ದಾಗ ಏಕಾಏಕಿ ಕಾಡು ಹಂದಿ ದಾಳಿ ಮಾಡಿದೆ. ಈ ಸಂದರ್ಭ ಕೆಳಗೆ ಬಿದ್ದ ಶಿವು ಅವರ ತೊಡೆ ಮತ್ತು ಮರ್ಮಾಂಗಕ್ಕೆ ಹಂದಿ ಗುದ್ದಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಶಿವು ಸಂಬಂಧಿಕರು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಾಗಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಮೇ 17 NEWS DESK : 35 ವರ್ಷ ಪೂರೈಸಿ 36ನೇ ಪುನರ್ ಪ್ರತಿಷ್ಠಾ ಮಹೋತ್ಸವದ ಪರ್ವ ಕಾಲದಲ್ಲಿ ಸಿಂಹಾರೋಹಣಗೈದು ಶಂಖ-ತೋಮರವನ್ನು ಧರಿಸಿ ತ್ರಿಶೂಲ ಧಾರಿಣಿಯಾಗಿ ಸಂಭ್ರಮದಿ ಮೆರೆಯಲ್ಪಡುತ್ತಿರುವ ಭಾರ್ಗವ ಕ್ಷೇತ್ರಾಧಿಪತಿ ಭಕ್ತ ವತ್ಸಲೆ ಮಂಗಳೂರಿನ ಶ್ರೀ ಮಂಗಳಾದೇವಿ ಅಮ್ಮನಿಗೆ ಪುನಃ ಪ್ರತಿಷ್ಠಾ ವರ್ಧಂತಿಯ ಶುಕ್ರವಾರದ ಮಹಾಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು.
ಮಡಿಕೇರಿ ಮೇ 17 NEWS DESK : ರೋಟರಿ ಮಡಿಕೇರಿ ವತಿಯಿಂದ ಗ್ಲೋಬಲ್ ಪ್ರಾಸ್ಟೇಟ್ ಕ್ಯಾನ್ಸರ್ ಫೌಂಡೇಶನ್ ಸಹಯೋಗದಲ್ಲಿ ಮೇ 19 ರಂದು ಪ್ರಾಸ್ಟೇಟ್ ಮತ್ತು ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಮತ್ತು ತಪಾಸಣಾ ಉಚಿತ ಶಿಬಿರ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಶಿಬಿರ ನಡೆಯಲಿದೆ. ಹೆಚ್‌ಸಿಜಿ, ಯುರೋ-ಆಂಕೊಲಾಜಿಸ್ಟ್ ಡಾ. ಎಸ್.ಕೆ.ರಘುನಾಥ್, ಯುರೋ-ಆಂಕೊಲಾಜಿಸ್ಟ್ ಗಳಾದ ಡಾ.ದೀಪಕ್, ಡಾ. ಎನ್.ಸುನೀತಾ, ರೆಡಿಯೇಷನ್ ಆಂಕೊಲಾಜಿಸ್ಟ್ ಡಾ. ಸಾಗರಿಕಾ ನಿತ್ಯಾನಂದ್ ಪಾಲ್ಗೊಂಡು ಸೂಕ್ತ ಸಮಾಲೋಚನೆ ನಡೆಸಲಿದ್ದಾರೆ. ಹೊಸ ಪಿಎಸ್‌ಎ ಪರೀಕ್ಷೆಯನ್ನು ಸ್ಥಳದಲ್ಲೇ ಮಾಡಲಾಗುವುದು. ಪ್ರಾಸ್ಟೇಟ್ ತಪಾಸಣೆಗೆ ಹಾಜರಾಗುವ ಸಾರ್ವಜನಿಕರು ತಮ್ಮ ವೈದ್ಯಕೀಯ ದಾಖಲಾತಿ ಹಾಗೂ ಪಿಎಸ್‌ಎ ಅನ್ನು ತರುವಂತೆ ರೋಟರಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 7026699698 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಮೇ 17 NEWS DESK : ಕೊಡಗು ದಂತ ವೈದ್ಯಕೀಯ ಕಾಲೇಜಿನ 22ನೇ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಮುಖ್ಯ ಅಥಿತಿಗಳಾಗಿ ಪಾಲ್ಗೊಂಡಿದ್ದ ಅಮ್ಮತ್ತಿ ಆರ್ ಐ ಹೆಚ್ ಪಿ ಆಸ್ಪತ್ರೆಯ ಎಂ. ಎಂ. ಟ್ರಸ್ಟಿ ಡಾ. ಚೆಂಗಪ್ಪ ಮಾತನಾಡಿ, ವಿದ್ಯಾರ್ಥಿಗಳ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜಕ್ಕೆ ದಂತವೈದ್ಯಕೀಯ ಕಾಲೇಜು ಮತ್ತು ದಂತ ವೈದ್ಯರ ಅವಶ್ಯಕತೆ ಬಗ್ಗೆ ಮಾಹಿತಿ ನೀಡಿದರು. ಭಾರತದಲ್ಲಿ ದಂತವೈದ್ಯಕೀಯ ವೃತ್ತಿ ಆರಂಭದಿಂದ ಇತ್ತಿಚಿಗಿನ ಬೆಳವಣಿಗೆಗಳ ಬಗ್ಗೆ ಹೇಳಿದರು. ಕೊಡಗು ದಂತ ವೈದ್ಯಕೀಯ ಕಾಲೇಜಿನ ಡೀನ್ ಡಾ. ಸುನೀಲ್ ಮುದ್ದಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ಪೊನ್ನಪ್ಪ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ.ಸಿ.ಜಿಲನ ಸ್ವಾಗತಿಸಿದರು. ಕಾರ್ಯದರ್ಶಿ ಸೂಸನ್ನ ಪರಕ್ಕಟ್ಟು ವಂದಿಸಿದರು. ಕಾರ್ಯಕ್ರಮದಲ್ಲಿ 2023-2024 ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು. ವಿದ್ಯಾರ್ಥಿ ಹಾಗೂ ಶಿಕ್ಷಕ ವೃಂದದವರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ…






