ಮಡಿಕೇರಿ ಮಾ.22 NEWS DESK : ಚುನಾವಣೆಯಲ್ಲಿ ಅಭ್ಯರ್ಥಿಯ ಸಾಮರ್ಥ್ಯ ಆಧರಿಸಿ ಮತದಾರರು ಆಯ್ಕೆ ಮಾಡುತ್ತಾರೆ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ತಿಳಿಸಿದ್ದಾರೆ. ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಅಭ್ಯರ್ಥಿಯ ಸಾಮರ್ಥ್ಯ ಆಧರಿಸಿ ಜನ ಆಯ್ಕೆ ಮಾಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪ್ರಚಾರದ ಸಂದರ್ಭ ಜನರಿಂದ ಉತ್ತಮ ಸ್ಪಂದನೆ ಮತ್ತು ಉತ್ಸಾಹ ಕಂಡು ಬರುತ್ತಿದೆ. ಕ್ಷೇತ್ರದ ಸಮಸ್ಯೆಗಳನ್ನು ಪಕ್ಷದ ಪ್ರಮುಖರು ಗಮನಕ್ಕೆ ತಂದಿದ್ದು, ಅದರ ಪರಿಹಾರಕ್ಕೂ ಸಲಹೆ ನೀಡಿದ್ದಾರೆ ಎಂದು ಹೇಳಿದರು. ಪ್ರಚಾರ ಅಭಿಯಾನಕ್ಕೆ ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಗೈರಾಗಿರುವ ಕುರಿತು ಪ್ರತಿಕ್ರಿಯಿಸಿದ ಯದುವೀರ್ ಒಡೆಯರ್, ಪ್ರಚಾರ ಅಭಿಯಾನ ನಡೆಸುವಂತೆ ಪಕ್ಷವೇ ಸೂಚನೆ ನೀಡಿದ್ದು, ಅದರಂತೆ ಪ್ರಚಾರ ಆರಂಭಿಸಲಾಗಿದೆ. ಪ್ರತಾಪ್ ಸಿಂಹ ಅವರು ಕೂಡ ಎಲ್ಲಾ ಸಹಕಾರ ನೀಡುವುದಾಗಿ ಈಗಾಗಲೇ ಹೇಳಿದ್ದಾರೆ.…
ಲೇಖಕ: admin
ಮಡಿಕೇರಿ ಮಾ.22 NEWS DESK : ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಅವರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೊಡಗು ಜಿಲ್ಲೆಯಿಂದಲೇ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ತಮ್ಮ ಚುನಾವಣಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದರು. ಶುಕ್ರವಾರ ಬೆಳಗ್ಗೆ ಭಾಗಮಂಡಲಕ್ಕೆ ಆಗಮಿಸಿದ ಯದುವೀರ್ ಅವರನ್ನು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಬರ ಮಾಡಿಕೊಂಡರು. ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿದ ಯದುವೀರ್ ಪುಣ್ಯ ನೀರು ಪ್ರೋಕ್ಷಣೆ ಮಾಡಿ ಶ್ರೀ ಭಗಂಡೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ತದನಂತರ ಪುಣ್ಯ ಕ್ಷೇತ್ರ ತಲಕಾವೇರಿಗೆ ತೆರಳಿ ಮಾತೆ ಕಾವೇರಿಗೆ ನಮಿಸಿ ಪ್ರಾರ್ಥನೆ ಸಲ್ಲಿಸಿದರು. ಚೇರಂಬಾಣೆಯಲ್ಲಿ 4 ಗ್ರಾಮ ಪಂಚಾಯಿತಿ ಒಳಗೊಂಡ ಬಿಜೆಪಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಭ್ಯರ್ಥಿ ಯದುವೀರ್ ಒಡೆಯರ್ ಅವರು, ಪ್ರಧಾನಿ ನರೇಂದ್ರ ಮೋದಿ…
ಕುಶಾಲನಗರ, ಮಾ.22 NEWS DESK : ಪ್ರತಿಯೊಬ್ಬರೂ ನಾಳಿನ ಉತ್ತಮ ಭವಿಷ್ಯತ್ತಿಗಾಗಿ ನೀರನ್ನು ಮಿತವಾಗಿ ಬಳುಸುವುದರ ಮೂಲಕ ಜಲ ಸಂರಕ್ಷಣೆಗಾಗಿ ನಾವು ಸಾಮೂಹಿಕವಾಗಿ ಜಲ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದು ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕು ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕ, ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಘಟಕ ಸಹಯೋಗದೊಂದಿಗೆ “ಶಾಂತಿಗಾಗಿ ನೀರು” ಎಂಬ ಧ್ಯೇಯದೊಂದಿಗೆ ವಿಶ್ವ ಜಲ ದಿನ:2024ರ ಅಂಗವಾಗಿ ನಡೆದ ಜಲ ಸಂರಕ್ಷಣಾ ಜಾಗೃತಿ ಆಂದೋಲನದಲ್ಲಿ ನೀರಿನ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿ ಜಲ ಸಂರಕ್ಷಣೆಯ ಪ್ರತಿಜ್ಞಾ ವಿಧಿ…
ಮಡಿಕೇರಿ ಮಾ.22 NEWS DESK : ಕೇರಳ ಮಾನಂದವಾಡಿಯಿಂದ ಕರ್ನಾಟಕದ ಕಡೆಗೆ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5ಲಕ್ಷ ರೂ.ಗಳನ್ನು ಕುಟ್ಟ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೊಡಗು-ಮೈಸೂರು ಗಡಿ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಚುನಾವಣಾಧಿಕಾರಿಗಳು ಕೇರಳದ ಕಡೆಯಿಂದ ಬಂದ ಕಾರನ್ನು ಪರಿಶೀಲನೆ ನಡೆಸಿದ ಸಂದರ್ಭ ಕೇರಳ ವೈನಾಡು ಜಿಲ್ಲೆಯ ಮಾನಂದವಾಡಿ ನಿವಾಸಿ ನಾಸಿರ್(58) ಎಂಬುವವರು ಯಾವುದೇ ದಾಖಲೆಗಳಿಲ್ಲದೆ ಒಟ್ಟು 5 ಲಕ್ಷ ರೂ.ಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಾರಿನಲ್ಲಿದ್ದ ನಾಸಿರ್ ಅವರು ಹಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನೀಡದಿರುವ ಹಿನ್ನೆಲೆ ಚುನಾವಣಾಧಿಕಾರಿಗಳು 5ಲಕ್ಷ ರೂ.ಗಳನ್ನು ವಶಕ್ಕೆ ಪಡೆದರು. ಬಳಿಕ ಮುಂದಿನ ಕ್ರಮಕ್ಕಾಗಿ ಹಣವನ್ನು ಸ್ಕ್ರೀನಿಂಗ್ ಕಮಿಟಿಗೆ ಹಸ್ತಾಂತರಿಸಿದರು. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನವೀನ್, ಕುಟ್ಟ ಪೊಲೀಸ್ ಠಾಣೆಯ ಸಹಾಯಕ ನಿರೀಕ್ಷಕ ಫ್ರಾನ್ಸಿಸ್, ಸಿಬ್ಬಂದಿಗಳಾದ ಮೋಹನ್ ಕುಮಾರ್, ಮಂಜು, ಅಬಕಾರಿ ಇಲಾಖೆ ಉಪನಿರೀಕ್ಷಕ ವಿ.ಸುರೇಂದ್ರ, ಶಿಕ್ಷಕ ಧರ್ಮಲಿಂಗ ಅವರುಗಳ ತಂಡ ಕಾರ್ಯಾಚರಣೆ ನಡೆಸಿತು.
ವಿರಾಜಪೇಟೆ ಮಾ.22 NEWS DESK : ವಿರಾಜಪೇಟೆತ ನಂ.371 ನೇ ಕೊಡಗು ಮಹಿಳಾ ಸಹಕಾರ ಸಂಘದ ವತಿಯಿಂದ ಮಾ.23 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಹಿಳಾ ಸಮಾಜದ ಎಲ್ಲ ಸದಸ್ಯರು ಪಾಲ್ಗೊಳ್ಳುವಂತೆ ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರಪೇಟೆ ಮಾ.22 NEWS DESK : ಸೋಮವಾರಪೇಟೆಯಲ್ಲಿ ಬಹುದಿನಗಳ ಬೇಡಿಕೆಯಾದ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಪಟ್ಟಣದ ಸಿ.ಕೆ.ಸುಬ್ಬಯ್ಯ ರಸ್ತೆಯ ಬಳಿ ಇರುವ ಪಟ್ಟಣ ಪಂಚಾಯಿತಿಗೆ ಸೇರಿದ ಮಾರುಕಟ್ಟೆ ಜಾಗದಲ್ಲಿ ಕ್ಯಾಂಟಿನ್ ಪ್ರಾರಂಭಗೊಳ್ಳಲಿದೆ.
ಮಡಿಕೇರಿ ಮಾ.22 NEWS DESK : ಯಾವುದೇ ದಾಖಲೆಗಳಿಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 4 ಲಕ್ಷ ರೂ.ಗಳನ್ನು ಕುಶಾಲನಗರದ ಕೊಪ್ಪದಲ್ಲಿರುವ ವಾಹನ ತಪಾಸಣಾ ಕೇಂದ್ರದಲ್ಲಿ ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಟಿಬೆಟಿಯನ್ ನಿರಾಶ್ರಿತ ವ್ಯಕ್ತಿ ತನ್ನ ದ್ವಿಚಕ್ರ ವಾಹನದಲ್ಲಿ ಬೈಲುಕೊಪ್ಪದಿಂದ ಕುಶಾಲನಗರ ಪಟ್ಟಣದ ಕಡೆಗೆ ಹಣ ಸಾಗಿಸುತ್ತಿದ್ದ ಸಂದರ್ಭ ಅಧಿಕಾರಿಗಳು ಪತ್ತೆಹಚ್ಚಿ ಕ್ರಮ ಕೈಗೊಂಡಿದ್ದಾರೆ. ಕೇಂದ್ರದ ಚುನಾವಣಾ ಅಧಿಕಾರಿ ಪೂವಯ್ಯ, ಮಹಾದೇವ್, ಅಭಿಷೇಕ್, ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಬಿ.ಎಸ್.ಉಮಾ, ಸಿಬ್ಬಂದಿಗಳಾದ ಅರುಣ್ ಕುಮಾರ್, ಶಶಿಕುಮಾರ್ ಹಾಗೂ ಜಯಪ್ರಕಾಶ್ ಈ ಸಂದರ್ಭ ಇದ್ದರು.
ಮಡಿಕೇರಿ ಮಾ.22 NEWS DESK : ನದಿ ಜಲಮೂಲಗಳ ಅಸ್ತಿತ್ವವನ್ನು ಉಳಿಸಿ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ತಿಳಿಸಿದ್ದಾರೆ. ವಿಶ್ವಜಲ ದಿನಾಚರಣೆ ಅಂಗವಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಆಶ್ರಯದಲ್ಲಿ ಕುಶಾಲನಗರ ಪುರಸಭೆ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡ ಹಾಗೂ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ತಂಡಗಳ ಸಹಯೋಗದೊಂದಿಗೆ ನಡೆದ ತಾವರೆಕೆರೆ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸಕ್ತ ದಿನಗಳಲ್ಲಿ ಹಲವು ಕಾರಣಗಳಿಂದ ಕೆರೆಗಳ ನಾಶ ಉಂಟಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು ಸಾರ್ವಜನಿಕರು ಇಂತಹ ಕಾರ್ಯಕ್ರಮಗಳ ಮೂಲಕ ತಮ್ಮನ್ನು ಸಮಾಜದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಚುನಾವಣೆ ಪ್ರಕ್ರಿಯೆ ನಂತರ ಪಟ್ಟಣ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಅವರು ಹೇಳಿದರು. ಈ ಸಂದರ್ಭ ಮಾತನಾಡಿದ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ…
ಸೋಮವಾರಪೇಟೆ ಮಾ.22 NEWS DESK : ಶ್ರೀ ಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಸಕ್ತ ಸಾಲಿನ ಜಾತ್ರೋತ್ಸವದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್‍ಗೌಡ ಪಾಲ್ಗೊಂಡು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ರಾಜಗೋಪುರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಜಿ.ಪಂ ಮಾಜಿ ಅಧ್ಯಕ್ಷ ವಿ.ಎಂ.ವಿಜಯನ್, ಪ್ರಮುಖರಾದ ಬಿ.ಬಿ.ಸತೀಶ್, ಚೇತನ್, ವಿನಿ, ಹೆಚ್.ಎ.ನಾಗರಾಜು, ಮೀನಾಕುಮಾರಿ, ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ.ವಿನೋದ್‍ಕುಮಾರ್, ದೇವಾಲಯ ಸಮಿತಿ ಪದಾಧಿಕಾರಿಗಳಾದ ಪ್ರಸನ್ನ ನಾಯರ್, ರಾಧಾಕೃಷ್ಣ, ಪಿ.ಕೆ.ರಾಜನ್, ಎನ್.ಜಿ.ಮೋಹನ್, ಕೆ.ಸಿ.ದಿನೇಶ್ ಮತ್ತು ನಿರ್ದೇಶಕರುಗಳು ಕ್ಷೇತ್ರದ ಭಕ್ತಾದಿಗಳು ಇದ್ದರು.
ಮಡಿಕೇರಿ ಮಾ.22 NEWS DESK : ಅನ್ನಭಾಗ್ಯ, ಬಸ್ ನಲ್ಲಿ ಉಚಿತ ಪ್ರಯಾಣ ಭಾಗ್ಯ, ಮಾಸಿಕ ರೂ.2 ಸಾವಿರ ಭಾಗ್ಯ ನೀಡುತ್ತಿರುವ ಸರಕಾರ ಬಡವರಿಗೆ ಭೂಮಿಭಾಗ್ಯ ಯಾಕೆ ನೀಡುತ್ತಿಲ್ಲವೆಂದು ಪ್ರಶ್ನಿಸಿರುವ ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ, ಉಳ್ಳವರಿಗೆ ಜಮೀನು ಗುತ್ತಿಗೆ ನೀಡುವ ಆದೇಶವನ್ನು ಹಿಂದಕ್ಕೆ ಪಡೆಯದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಿವೇಶನ ಮತ್ತು ವಸತಿ ರಹಿತರು ನಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಹೆಚ್.ಬಿ.ರಮೇಶ್ ನಿರ್ವಸತಿಗ ಕಾರ್ಮಿಕರಿಗೆ, ಬಡವರಿಗೆ ಅನ್ಯಾಯವೆಸಗುವ ರಾಜ್ಯ ಸರ್ಕಾರದ ‘ಪ್ಲಾಂಟೇಶನ್ ಬೆಳೆಗಳ ಜಮೀನು ಗುತ್ತಿಗೆ’ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಕೊಡಗು ಜಿಲ್ಲೆಯಲ್ಲಿ ಸಹಸ್ರಾರು ಕಾರ್ಮಿಕರು ಸೂರಿಲ್ಲದೆ, ವಿವಿಧ ತೋಟಗಳ ಲೈನ್‍ಮನೆಗಳಲ್ಲಿ ಸಂಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಇತ್ತೀಚೆಗೆ ಚೆರಿಯಪರಂಬು ವಿಭಾಗದಲ್ಲಿ ಬಡವರ್ಗದ ಮಂದಿಯ ಗುಡಿಸಲುಗಳನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ಹೋರಾಟಗಳನ್ನು ನಡೆಸಲಾಗಿದೆ. ಇದರ ನಡುವೆ ಹಿಂದಿನ ಬಿಜೆಪಿ ಸರ್ಕಾರ ಪ್ರಸ್ತಾಪಿಸಿದ್ದ ಪ್ಲಾಂಟೇಶನ್ ಬೆಳೆಗಳ ಭೂಮಿಯನ್ನು ಗುತ್ತಿಗೆ ನೀಡುವ…






