ಲೇಖಕ: admin

ಪೊನ್ನಂಪೇಟೆ, NEWS DESK ಸೆ.26: ತಾಲೂಕಿನ ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗೆ ₹1 ಕೋಟಿ ವೆಚ್ಚದ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಶ್ರೀಮಂಗಲ-ನಾಲ್ಕೇರಿ ಭಾಗದ ರಸ್ತೆಯಲ್ಲಿ ಪ್ರತಿದಿನ ನೂರಾರು ಜನರು ಹಾಗೂ ವಾಹನಗಳು ಸಂಚರಿಸುತ್ತಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆಯನ್ನು ಉತ್ತಮ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಸುಗಮ ಮತ್ತು ಉತ್ತಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದ್ದು, ರಸ್ತೆ ನಿರ್ಮಾಣದ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸುವ ಮೂಲಕ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಡ ಪ್ರಶಾಂತ್, ಬಗರ್ ಹುಕುಂ ಅಧ್ಯಕ್ಷ…

Read More

ನಾಪೋಕ್ಲು, NEWS DESK ಸೆ.26: ದಕ್ಷಿಣ ಕನ್ನಡ, ಕೊಡಗು ಮತ್ತು ಉಡುಪಿ ಜಿಲ್ಲೆಗಳ ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರ ಕ್ರೀಡಾಕೂಟದಲ್ಲಿ ಕೊಡಗಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿವಿಧ ವಿಭಾಗಗಳಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಿಟ್ಟಂಗಾಲ ಬೆಸಗೂರು ಗ್ರಾಮದ ಸೀತಮ್ಮ ಪ್ರೇಮ ಅವರು ಭಾರದ ಗುಂಡು ಎಸೆತ, ತಟ್ಟೆ ಎಸೆತ ಹಾಗೂ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಮೂರು ಚಿನ್ನದ ಪದಕಗಳನ್ನು ಗಳಿಸಿದ್ದಾರೆ. ಕುಶಾಲನಗರ ತಾಲೂಕಿನ ಕೋಣನೂರು ಗ್ರಾಮದ ಆಶಾ ಅವರು ಭಾರದ ಗುಂಡು ಎಸೆತದಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ದ್ವಿತೀಯ ಹಾಗೂ ತಟ್ಟೆ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಿಟ್ಟಂಗಾಲ ಬಾಳುಗೋಡು ನಿವಾಸಿ ಶಾಂತಿ ಬೊಳ್ಳಪ್ಪ ಅವರು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಪೆಟ್ಟೆಬೆಟ್ಟ ಚೊಟ್ಟೆಯಂಡ ಗ್ರಾಮದ ಗಗನ್ ಮೇದಪ್ಪ ಅವರು ಉದ್ದ ಜಿಗಿತ ಹಾಗೂ 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಹಾಗೂ ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕೊಡಗಿನ ಕ್ರೀಡಾಪಟುಗಳ ಈ…

Read More

ನಾಪೋಕ್ಲು, NEWS DESK ಸೆ.26: ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಕೃಷಿ ಇಲಾಖೆಯ ‘ಆತ್ಮ’ ಯೋಜನೆಯಡಿ ನಾಪೋಕ್ಲು ಗ್ರಾಮದ ಮಹಿಳಾ ಸಮಾಜದ ಸದಸ್ಯರಿಗೆ ಆಯೋಜಿಸಲಾಗಿದ್ದ ಅಣಬೆ ಬೇಸಾಯದ ‘ರೈತ ಕ್ಷೇತ್ರ ಪಾಠಶಾಲೆ’ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಅಣಬೆ ಬೇಸಾಯದ ಪ್ರಾಯೋಗಿಕ ತರಬೇತಿ ಹಾಗೂ ಅಣಬೆ ಕಟಾವು ಪ್ರಕ್ರಿಯೆ ನಡೆಯಿತು. ಅಣಬೆ ಬೀಜಗಳನ್ನು ಬಿಸಿ ನೀರಿನಲ್ಲಿ ಸಂಸ್ಕರಿಸಿ, ಸಿದ್ಧಪಡಿಸಿದ ಹುಲ್ಲಿನೊಂದಿಗೆ ಪಾಲಿಥಿನ್ ಚೀಲಗಳಲ್ಲಿ ತುಂಬಿ 21 ದಿನಗಳ ಕಾಲ ಕತ್ತಲೆ ಕೊಠಡಿಯಲ್ಲಿ ಇರಿಸಲಾಗಿತ್ತು. ಬಳಿಕ 5ರಿಂದ 8 ದಿನಗಳ ಕಾಲ ಬೆಳಕಿನ ವಾತಾವರಣದಲ್ಲಿಟ್ಟು ಪ್ರತಿದಿನ ಎರಡು ಬಾರಿ ನೀರು ಸಿಂಪಡಿಸಿ ಬೆಳೆಸಲಾಗಿದ್ದ ಅಣಬೆಯನ್ನು ಕ್ಷೇತ್ರ ಪಾಠಶಾಲೆಯ ಭಾಗವಾಗಿ ಕಟಾವು ಮಾಡಲಾಯಿತು. ಅಣಬೆ ಕೃಷಿಗೆ ಅಗತ್ಯವಿರುವ ಸಾಮಗ್ರಿಗಳು ಹಾಗೂ ಉಪಕರಣಗಳನ್ನು ‘ಆತ್ಮ’ ಯೋಜನೆಯ ವತಿಯಿಂದ ಉಚಿತವಾಗಿ ಒದಗಿಸಿ, ಮಹಿಳೆಯರಿಗೆ ಪ್ರಾಯೋಗಿಕ ತರಬೇತಿ ನೀಡಲಾಯಿತು. ನರಿಯಂದಡ ಗ್ರಾಮದ ಪ್ರಗತಿಪರ ಕೃಷಿ ಮಹಿಳೆ ಅಂಬಿಕಾ ಬಿ.ಎ. ಅವರು ಅಣಬೆ ಬೇಸಾಯದ ತಾಂತ್ರಿಕ ಹಾಗೂ ಪ್ರಾಯೋಗಿಕ ತರಬೇತಿ ನೀಡಿದರು. ಮಡಿಕೇರಿ…

Read More

ನಾಪೋಕ್ಲು, NEWS DESK ಸೆ.26: ಕಿರುಂದಾಡು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 36 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ದೇವಮಾಜಿ ಹಾಗೂ ಕಿರುಂದಾಡು ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಭೋಜಮ್ಮ ಅವರಿಗೆ ಆತ್ಮೀಯ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು. ಗ್ರಾಮದ ಭಗವತಿ ಶ್ರೀ ಶಕ್ತಿ ಸಂಘ, ಆದಿಶಕ್ತಿ ಸ್ವಸಹಾಯ ಸಂಘ ಹಾಗೂ ವಿಷ್ಣು ಸ್ವಸಹಾಯ ಸಂಘಗಳ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡುಗೆ ಸಮಾರಂಭದ ಜೊತೆಗೆ ಪೋಷಣ್ ಮಾಸಾಚರಣೆ ಕಾರ್ಯಕ್ರಮವೂ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾನುಮತಿ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚೆಯ್ಯಂಡಾಣೆ ವೃತ್ತದ ಮೇಲ್ವಿಚಾರಕಿ ಶೀಲಾ ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಚಾರ ಕಾರ್ಯಕರ್ತೆ ಹೇಮಾವತಿ, ಆಶಾ ಕಾರ್ಯಕರ್ತೆ ಹರಿಣಿ ಹಾಗೂ ಶಾಲಾ ಶಿಕ್ಷಕಿ ರೋಹಿಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ರಾಧಾಮಣಿ ಸ್ವಾಗತಿಸಿದರು. ತಾರಾ ಪ್ರಾರ್ಥಿಸಿದರು. ಬಳಿಕ ವಂದನಾರ್ಪಣೆ ಸಲ್ಲಿಸಲಾಯಿತು. ಸಮಾರಂಭದಲ್ಲಿ ನಿವೃತ್ತರಾದ ದೇವಮಾಜಿ ಹಾಗೂ ಭೋಜಮ್ಮ…

Read More

ಮಡಿಕೇರಿ NEWS DESK ಸೆ.26 : ಗಣೇಶ ಮೂರ್ತಿಗಳ ವಿಸರ್ಜನೆಯ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ ಸಂಭವಿಸಿ ಐವರು ಗಾಯಗೊಂಡ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಮೂಲದ ಬಸವರಾಜು ಹಾಗೂ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಇವರಿಬ್ಬರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಮೂವರು ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಮಧ್ಯರಾತ್ರಿ ಮಂಟಪಗಳ ಮೆರವಣಿಗೆ ಸಾಗುತ್ತಿದ್ದ ಸಂದರ್ಭ ಡಿಜೆ ವಾಹನದ ಮೇಲಿದ್ದವರಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡಿದೆ. ಈ ಅವಘಡದಿಂದ ಐವರು ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಓರ್ವನ ಮೈಲಿನ ಬಟ್ಟೆಗಳಿಗೆ ಬೆಂಕಿ ವ್ಯಾಪಿಸಿದ ಘಟನೆಯೂ ನಡೆಯಿತು. ಇಬ್ಬರು ಸ್ಥಳದಲ್ಲೇ ಪ್ರಜ್ಞಾಹೀನರಾದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ವೈದ್ಯರೊಂದಿಗೆ ಚರ್ಚಿಸಿದರು.

Read More

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡಗು ಸುರಕ್ಷಾ ಆಂದೋಲನ ಸಮಿತಿ ವತಿಯಿಂದ ಸೆ.28ರಿಂದ ಅ.9ರವರೆಗೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಜನಜಾಗೃತಿ ವಾಹನ ಜಾಥಾ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಮಿತಿಯ ಸಂಯೋಜಕ ಅಜಿತ್ ಕುಕ್ಕೇರ, ಸೆ.28ರಂದು ಬೆಳಿಗ್ಗೆ 10.30ಕ್ಕೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯ ಐದು ತಾಲ್ಲೂಕುಗಳ ಸುಮಾರು 50 ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಜಾಥಾ ಸಂಚರಿಸಲಿದ್ದು, ಅ.9ರಂದು ಮಡಿಕೇರಿಯಲ್ಲಿ ಸಮಾರೋಪಗೊಳ್ಳಲಿದೆ ಎಂದರು. ಅಕ್ರಮ ವಲಸಿಗರಿಂದ ಕೊಡಗಿನ ಸಾಮಾಜಿಕ ವ್ಯವಸ್ಥೆ ಹಾಗೂ ದೇಶದ ಭದ್ರತೆಗೆ ಸವಾಲು ಎದುರಾಗುತ್ತಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ. ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತ ಪ್ರವೇಶಿಸಿ ವಿವಿಧೆಡೆ ನೆಲೆಸಿರುವವರ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಜಾಥಾದ ಪ್ರಮುಖ ಉದ್ದೇಶವಾಗಿದೆ ಎಂದು ಅಜಿತ್ ತಿಳಿಸಿದರು. ಕಾಫಿ ತೋಟಗಳಲ್ಲಿ ಕಾರ್ಮಿಕರನ್ನು ನೇಮಿಸಿಕೊಳ್ಳುವ ಸಂದರ್ಭದಲ್ಲಿ ಅವರ ಗುರುತು ಹಾಗೂ ದಾಖಲೆಗಳನ್ನು ಕಾನೂನುಬದ್ಧವಾಗಿ…

Read More

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸ್ವಾಭಿಮಾನಿ ದಲಿತ ಸಂಘಟನೆಗಳು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದವು. ದಲಿತ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ್ ವಿಚಾರಧಾರೆಗೆ ಸಂಬ0ಧಿಸಿದ0ತೆ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆಗಳು ದಲಿತ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ತರುವಂತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ದಲಿತ ಚಳವಳಿಯೊಂದಿಗೆ ಗುರುತಿಸಿಕೊಂಡಿರುವ ನೀಲಿ ಶಾಲಿನ ಕುರಿತು ನೀಡಿರುವ ಹೇಳಿಕೆಗೆ ಆಕ್ಷೇಪಾರ್ಹ. ಇಂತಹ ಹೇಳಿಕೆಗಳು ಸಾಮಾಜಿಕ ಸಾಮರಸ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಲಿತ ಸಂಘರ್ಷ ಸಮಿತಿ ಸಾಮಾಜಿಕ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ದಶಕಗಳಿಂದ ಹೋರಾಟ ನಡೆಸಿಕೊಂಡು ಬಂದಿರುವ ಸಂಘಟನೆಯಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ…

Read More

ಮಡಿಕೇರಿ ಸೆ.25 NEWS DESK : ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು, ಕನಿಷ್ಟ ವೇತನ ಜಾರಿಗೊಳಿಸಬೇಕು, ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಸಂಘಟನೆ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ಸೆ.8ರಂದು ರಾಜ್ಯಮಟ್ಟದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಮಿಕರು ಪಾಲ್ಗೊಂಡಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ ಸ್ವೀಕರಿಸಿದ್ದರು. ಮುಖ್ಯಮಂತ್ರಿಗಳೊoದಿಗೆ ಸೆ.15ರಂದು ಮಾತುಕತೆ ನಡೆಸುವ ಭರವಸೆ ಹಿನ್ನೆಲೆಯಲ್ಲಿ ಹೋರಾಟ ಹಿಂಪಡೆಯಲಾಗಿತ್ತು. ಆದರೆ ಮಾತುಕತೆ ನಡೆಯದ ಹಿನ್ನೆಲೆಯಲ್ಲಿ ಸೆ.25ರಿಂದ ಶಾಸಕರು ಹಾಗೂ ಸಚಿವರ ಕಚೇರಿ-ಮನೆಗಳ ಎದುರು ಪ್ರತಿಭಟನೆ ನಡೆಸಲು ಸಿಐಟಿಯು ರಾಜ್ಯ ಸಮಿತಿ ನಿರ್ಧರಿಸಿದೆ. ಇದರ ಭಾಗವಾಗಿ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು ಎಂದು ಸಿಐಟಿಯು ಮುಖಂಡ ಪಿ.ಆರ್.ಭರತ್ ತಿಳಿಸಿದರು. ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿಯಿಂದ ಕಾರ್ಮಿಕರ ಹಕ್ಕುಗಳು ಮತ್ತು ಸಾಮಾಜಿಕ ಭದ್ರತೆಗೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಅಗತ್ಯ ತಿದ್ದುಪಡಿಗಳ ಬಳಿಕ ರಾಜ್ಯ ನಿಯಮಗಳನ್ನು ರೂಪಿಸಬೇಕು ಎಂದು…

Read More

ಬೆಂಗಳೂರು ಸೆ.26 NEWS DESK : ಕೊಡಗಿನ ನಾಡುಗಳ ಕುರಿತು ಅಧ್ಯಯನ ಕೈಗೊಂಡಿರುವ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಮೊದಲ ಹಂತವಾಗಿ ಸಿದ್ಧಪಡಿಸಿರುವ 808 ಪುಟಗಳನ್ನು ಒಳಗೊಂಡಿರುವ ಕಡಿಯತನಾಡಿನ ಸಮಗ್ರ ಅಧ್ಯಯನ ಕೃತಿ ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕಳೆದ ದಶಕದಿಂದ ಅಧ್ಯಯನ ನಡೆಸುತ್ತಿರುವ ರಮೇಶ್ ಉತ್ತಪ್ಪ ಅವರ ಈ ಕೃತಿಯನ್ನು ಬೆಂಗಳೂರಿನ ಕಡಿಯತನಾಡ್ ಕೊಡವ ಕೂಟ ಪ್ರಕಟಿಸುತ್ತಿದೆ. ಅಂದು ಪೂರ್ವಾಹ್ನ 10 ಗಂಟೆಗೆ ಬೆಂಗಳೂರು ಕೊಡವ ಸಮಾಜ ಕ್ಲಬ್ ರೂಫ್ ಗಾರ್ಡನ್‌ನಲ್ಲಿ ಕೂಟದ ಅಧ್ಯಕ್ಷ ಐಚೋಡಿಯಂಡ ಎಂ. ದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಒತ್ತೋಮೆ ಕೂಟ ಕಾರ್ಯಕ್ರಮದಲ್ಲಿ ಬ್ರಿಗೇಡಿಯರ್ ಚೇನಂಡ ಚೀಯಣ್ಣ (ನಿ), ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ, ಚಿರಿಯಪಂಡ ಸುರೇಶ್ ನಂಜಪ್ಪ, ಲೇಖಕ ಐತಿಚಂಡ ರಮೇಶ್ ಉತ್ತಪ್ಪ ಅವರು ಪಾಲ್ಗೊಳ್ಳಲಿದ್ದಾರೆ. ಅಂದು ಬಿಡುಗಡೆಯಾಗಲಿರುವ ಕಡಿಯತನಾಡ್ ಕೃತಿ ಇತಿಹಾಸ, ಸಂಸ್ಕೃತಿ ಹಾಗೂ ಜನಜೀವನದ ಸಮಗ್ರ ಅಧ್ಯಯನವಾಗಿದೆ. ಈ ಕೃತಿಯಲ್ಲಿ ಕಡಿಯತನಾಡಿನ ಮೂಲ, ಇತಿಹಾಸ, ನಾಯಕರು, ತಕ್ಕ ವ್ಯವಸ್ಥೆ, ಬಾವಲಿಪಟ್ಟಿ, ಊರ್ ಮಂದ್,…

Read More

ಮಡಿಕೇರಿ ಸೆ.25 NEWS DESK : ಕೊಡಗನ್ನು ಸ್ವಚ್ಛ ಹಾಗೂ ಹಸಿರಾಗಿಡುವ ಮೂಲಕ ಪ್ರವಾಸಿಗರಿಗೆ ಉತ್ತಮ ಅನುಭವ ಕಲ್ಪಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ ಹಾಗೂ ಪಾಲುದಾರರ ಸಹಯೋಗದಲ್ಲಿ ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿದೆ. ಸೆ.27ರಂದು ಬೆಳಿಗ್ಗೆ 7 ಗಂಟೆಗೆ ಮಡಿಕೇರಿಯ ರಾಜರ ಸಮಾಧಿ, ರಾಜಾ ಸೀಟ್, ಮಡಿಕೇರಿ ಕೋಟೆ ಹಾಗೂ ಓಂಕಾರೇಶ್ವರ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಮನವಿ ಮಾಡಿದೆ. ಕೊಡಗಿನ ನೈಸರ್ಗಿಕ ಸೌಂದರ್ಯ ಹಾಗೂ ಪ್ರವಾಸಿ ತಾಣಗಳ ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ಸ್ವಚ್ಛ ಕೊಡಗಿಗಾಗಿ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಇಲಾಖೆ ಕರೆ ನೀಡಿದೆ.

Read More