ಸೋಮವಾರಪೇಟೆ ಮೇ 16 NEWS DESK : ಸೋಮವಾರಪೇಟೆ ತಾಲ್ಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ನಡೆದ ಅಪ್ರಾಪ್ತೆ ಮೀನಾ (16) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮೃತೆಯ ಕುಟಂಬದವರನ್ನು ಗುರುವಾರ ಭೇಟಿ ಮಾಡಿ ಸಾಂತ್ವನ ಹೇಳಿದರು. ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ, ಹತ್ಯೆ ಆರೋಪಿ ಪ್ರಕಾಶನಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗದುಕೊಳ್ಳಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಸರ್ಕಾರದಿಂದ ವಿಶೇಷ ಅಭಿಯೋಜಕರನ್ನು ನೇಮಿಸಿ, ವಿಶೇಷ ನ್ಯಾಯಾಲಯದಲ್ಲಿ ತ್ವರಿತ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು. ಇಂತಹ ಘೋರ ಕೃತ್ಯ ನಡೆಸುವವರಿಗೆ ಕಠಿಣ ಶಿಕ್ಷೆಯಾಗಲೇಬೇಕು. ಬಡ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದರು. ಪ್ಲಾಸ್ಟಿಕ್ ಹೊದಿಕೆಯ ಗುಡಿಸಿನ ಒಳಗೆ ಮೃತಳ ತಂದೆ, ತಾಯಿ, ಸಹೋದರ, ಸಹೋದರಿಯೊಂದಿಗೆ ಮಾತಾನಾಡಿದ ಗೃಹಸಚಿವರು ಸಂಕಷ್ಟವನ್ನು ಕೇಳಿ ಮರುಗಿದರು. ವೈಯುಕ್ತಿಕವಾಗಿ ಧನ ಸಹಾಯ ಮಾಡಿದರು. ಚುನಾವಣಾ ನೀತಿ ಸಂಹಿತೆಯಿರುವ ಕಾರಣ ಸಧ್ಯಕ್ಕೆ ಏನನ್ನು ಹೇಳಲು ಸಾಧ್ಯವಿಲ್ಲ. ಚುನಾವಣೆ ಮುಗಿದ ನಂತರ…
ಲೇಖಕ: admin
ಸುಂಟಿಕೊಪ್ಪ ಮೇ 16 NEWS DESK : ಸ್ಯಾಂಡಲ್ ತೋಟದ ನಿವಾಸಿ ಬಾಲಕೃಷ್ಣ (ಮೆಕಾನಿಕ್ ಬಾಲೇಟ) (62) ಎಂಬವರು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಸುಂಟಿಕೊಪ್ಪದ ಹಿಂದೂ ರುದ್ರಭೂಮಿಯಲ್ಲಿ ನೇರವೇರಿತು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರಿಗೆ ಸುಂಟಿಕೊಪ್ಪ ವರ್ಕ್‍ಶಾಫ್ ಮಾಲೀಕರ ಸಂಘದ ಅಧ್ಯಕ್ಷ ಹಾಗೂ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಸಂತಾಪ ಸೂಚಿಸಿದ್ದಾರೆ.
ಮಡಿಕೇರಿ ಮೇ 16 NEWS DESK : ಇದೇ ಜೂನ್ ಮೊದಲ ವಾರದಲ್ಲಿ `ಮುಂಗಾರು’ ಆರಂಭವಾಗುವ ಸಾಧ್ಯತೆ ಇದ್ದು, ಕೊಡಗು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆ ಮಳೆಯಾಗುವ ನಿರೀಕ್ಷೆ ಇದೆ. ಆದ್ದರಿಂದ ಹೆಚ್ಚಿನ ಮಳೆಯಾದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ `ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹವಾಮಾನ ಇಲಾಖೆಯಿಂದ ಕಾಲ ಕಾಲಕ್ಕೆ ಮಳೆ ಮುನ್ಸೂಚನೆ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗುತ್ತದೆ. ಆ ದಿಸೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದರು. ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಹಶೀಲ್ದಾರರು, ತಾ.ಪಂ.ಇಒಗಳು ಇತರರು ಜಂಟಿಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು. ಶಾಲಾ-ಕಾಲೇಜುಗಳು, ಅಂಗನವಾಡಿ ಕಟ್ಟಡಗಳು ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಪರಿಹಾರ/ ಕಾಳಜಿ ಕೇಂದ್ರವನ್ನು ತೆರೆಯುವುದು ಮತ್ತಿತರ ಕೆಲಸವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹೇಳಿದರು. ಕೃಷಿ ಸಂಬಂಧಿಸಿದಂತೆ ಜಿಲ್ಲೆಗೆ…
ಮಡಿಕೇರಿ ಮೇ 16 NEWS DESK : ಸಿ.ಬಿ.ಎಸ್.ಇ. ಬೋರ್ಡ್ ಇತ್ತೀಚೆಗೆ ಹತ್ತು ಮತ್ತು ಹನ್ನೆರಡನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯವು ಅತ್ಯುತ್ತಮ ಫಲಿತಾಂಶ ಗಳಿಸಿದೆ. ಹತ್ತು ಮತ್ತು ಹನ್ನೆರಡನೆಯ ತರಗತಿಗಳಲ್ಲಿ ಶೇ.100 ಮಕ್ಕಳು ಉತ್ತೀರ್ಣರಾಗಿದ್ದಾರೆ. ಹತ್ತನೆಯ ತರಗತಿಯಲ್ಲಿ ಎ.ಕೀರ್ತನಾ ಶೇ.95 ಮತ್ತು ಎಂ.ಎಂ.ತನುಷಾ ಶೇ.95(ಪ್ರಥಮ), ಎಂ.ಅಮೋಘರಾಜ್ ಶೇ.94.4(ದ್ವಿತೀಯ) ಹಾಗೂ ಎಚ್. ಐಸಿರಿ ಶೇ.93.6 (ತೃತೀಯ) ಸ್ಥಾನ ಪಡೆದಿದ್ದಾರೆ. ಹನ್ನೆರಡನೇ ತರಗತಿ ವಿಜ್ಞಾನ- ಜಿ.ಎ.ಅಂಕಿತಾ ಶೇ.94.4(ಒರಥಮ), ಸಮನ್ವಿತಾ ಶೇ.92(ದ್ವಿತೀಯ) ಹಾಗೂ ಭೂಮಿ ಮಂಜುನಾಥ ಶೇ.90.4(ತೃತೀಯ) ಸ್ಥಾನ ಪಡೆದಿದ್ದಾರೆ. ಹನ್ನೆರಡನೇ ತರಗತಿ ವಾಣಿಜ್ಯ ವಿಭಾಗದಲ್ಲಿ ರಚನಾ ಶೇ.92.2(ಪ್ರಥಮ), ಪ್ರಥಮ್ ಹೆಬ್ಬಾರ್ ಶೇ.90.4(ದ್ವಿತೀಯ) ಹಾಗೂ ಕೆ.ಎಸ್.ರೋಹಿತ್ ಶೇ.87.2(ತೃತೀಯ) ಸ್ಥಾನ ಪಡೆದಿದ್ದಾರೆ ಎಂದು ಪ್ರಾಂಶುಪಾಲರಾದ ಒ.ಎಂ.ಪಂಕಜಾಕ್ಷನ್ ಅಭಿನಂದಿಸಿದ್ದಾರೆ.
ಮಡಿಕೇರಿ ಮೇ 16 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾದ ಡಾ. ಧನಂಜಯ್ ಸರ್ಜಿ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಜರಿದ್ದರು.
ಮಡಿಕೇರಿ ಮೇ.16 NEWS DESK : ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೆಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ವಿರಾಜಪೇಟೆ :: ವಿರಾಜಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ವಿಎಫ್ 7 ಹೆಗ್ಗಳ, ಫೀಡರ್‍ನ ಎಚ್‍ಟಿ/ಎಲ್‍ಟಿ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ಮೇ, 17 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ವಿರಾಜಪೇಟೆ ಪಟ್ಟಣ, ಮಲಬಾರ್ ರಸ್ತೆ, ಆರ್ಜಿ ಬೇಟೋಳಿ, ಹೆಗ್ಗಳ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ…
ಮಡಿಕೇರಿ ಮೇ 16 NEWS DESK : 24ನೇ ಕೊಡವ ಕೌಟುಂಬಿಕ ಹಾಕಿ ಉತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸುವುದರ ಮೂಲಕ ಕುಂಡ್ಯೋಳಂಡ ಕುಟುಂಬಸ್ಥರು ಗಮನಾರ್ಹ ಸಾಧನೆ ಮಾಡಿದ್ದಾರೆ. ದೇಶದ ಯಾವುದೇ ಮೂಲೆಗೆ ತೆರಳಿದರೂ ಹಾಕಿ ಉತ್ಸವದ ಮಾತು ಕೇಳಿ ಬರುತ್ತಿದೆ. ಹಾಕಿ ಉತ್ಸವದ ಮೂಲಕ ಗಿನ್ನಿಸ್ ದಾಖಲೆಗೆ ಸೇರ್ಪಡೆ ಮಾಡಲು ಕಾರಣಕರ್ತರಾದ ಕುಂಡ್ಯೋಳಂಡ ಕುಟುಂಬಸ್ಥರ ಕಾರ್ಯ ಶ್ಲಾಘನೀಯ ಎಂದು ಒಲಂಪಿಯನ್, ಲೆಫ್ಟಿನಲ್ ಕರ್ನಲ್ ಬಾಳೆಯಡ ಸುಬ್ರಮಣಿ ಹೇಳಿದರು. ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಕುಟುಂಬಸ್ಥರ ಐನ್ ಮನೆಯಲ್ಲಿ ಆಯೋಜಿಸಲಾಗಿದ್ದ ಕುಂಡ್ಯೋಳಂಡ ಹಾಕಿ ಕಾರ್ನಿವಲ್ ಗೆ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕುಂಡ್ಯೋಳಂಡ ಕುಟುಂಬ ಸಣ್ಣ ಕುಟುಂಬವಾದರೂ ಅವರ ಸಾಧನೆ ದೊಡ್ಡದು. ದೇಶ ವಿದೇಶಗಳಲ್ಲಿ ಕೌಟುಂಬಿಕ ಹಾಕಿಯ ಖ್ಯಾತಿ ಹಬ್ಬಿರುವುದು ಶ್ಲಾಘನೀಯ ಎಂದರು. ರಾಷ್ಟ್ರೀಯ ವೀಕ್ಷಕ ವಿವರಣೆಗಾರ ಚೆಪ್ಪುಡಿರ ಕಾರ್ಯಪ್ಪ ಮಾತನಾಡಿ ಪುಟ್ಟ ಜಿಲ್ಲೆ ಕೊಡಗಿನಲ್ಲಿ ಎಲ್ಲಾ ಸಂಘ ಸಂಸ್ಥೆಗಳನ್ನು ಜೊತೆಗೂಡಿಸಿ ಹಾಕಿ ಕೂರ್ಗ್, ಹಾಕಿ ಕರ್ನಾಟಕ, ಹಾಕಿ ಇಂಡಿಯಾ ಸೇರಿದಂತೆ…
ಮಡಿಕೇರಿ ಮೇ 6 NEWS DESK : ಪ್ರಾಶರ್ ಸೆನ್ಸರ್ ಟೆಕ್ನಾಲಜಿ ಮತ್ತು ಹಾಕಿ ಕರ್ನಾಟಕದ ಸಹಯೋಗದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಹಾಕಿ ಕ್ರೀಡೆಯ ಬಗ್ಗೆ ಪ್ರೋತ್ಸಾಹ ನೀಡುವ ಸಲುವಾಗಿ ಹಾಕಿ ಕಿಟ್ ವಿತರಿಸಲಾಯಿತು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಮುಖರು ಮತ್ತು ಅಂತಾರಾಷ್ಟ್ರೀಯ ಹಾಕಿ ಆಟಗಾರರಾದ ಕರಿನೆರವಂಡ ಸೋಮಣ್ಣ ಮತ್ತು ವಿ.ಆರ್.ರಘುನಾಥ್ ಹಾಕಿ ಸ್ಟಿಕ್ಸ್, ಬಾಲ್ಸ್, ಬಿಪ್ಸ್, ಶಿನ್ ಗಾರ್ಡ್ ಒಳಗೊಂಡ ಕಿಟನ್ನು ವಿತರಿಸಿದರು. ಈ ಸಂದರ್ಭ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ರಾಖಿ ಪೂವಣ್ಣ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ ಮೇ 16 NEWS DESK : ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಬಿ.ಆರ್.ನಾಗೇಂದ್ರ ಪ್ರಸಾದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೋಂತಿ ಗಣೇಶ್ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಪೊನ್ನಿಮಾಡ ಎಸ್.ಸುರೇಶ್, ಉಪಾಧ್ಯಕ್ಷರುಗಳಾಗಿ ನವೀನ್ ಅಂಬೆಕಲ್, ಎ.ಎನ್.ರವಿ ಉತ್ತಪ್ಪ ಸುನಿಲ್ ಮಾದಪ್ಪ ಕೆ.ಕೆ, ಬಿ.ಟಿ.ತಿಮ್ಮ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ಬಿ.ಅರ್.ಪ್ರಮೋದ್, ಟಿ.ಅರ್.ಶರವಣ ಕುಮಾರ್, ಪ್ರಭಾಕರ ನೆಲ್ಲಿತ್ತಾಯ, ಶ್ರೀನಿವಾಸ ಕೆ.ಕೆ ಹಾಗೂ ಮಹೇಶ್ ಪೈ ಎನ್.ಎಂ ಅವರುಗಳು ನೇಮಕಗೊಂಡರು. ನಗರದ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಬಿ.ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಮಾತನಾಡಿ ವಾಣಿಜ್ಯೋದ್ಯಮಿಗಳು, ವರ್ತಕರು ಹಾಗೂ ಗ್ರಾಹಕರ ಹಿತ ಕಾಯಲು ನಾವು ಬದ್ಧರಾಗಿದ್ದೇವೆ. ಕೊಡಗು ಜಿಲ್ಲೆಯ ಹಿತದೃಷ್ಟಿಯಿಂದ ನಾವೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿದ್ದೇವೆ ಎಂದರು.
ಕುಶಾಲನಗರ ಮೇ 16 NEWS DESK : ವಿಧಾನಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ಜರುಗಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕೆ.ಕೆ.ಮಂಜುನಾಥ್ ಕುಮಾರ್ ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಶಿಕ್ಷಣ ಸಚಿವ ಮಧುಬಂಗಾರಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಚಿಕ್ಕಮಗಳೂರು ಶಾಸಕ ತಮ್ಮಯ್ಯ, ಹೊನ್ನಾಳಿ ಶಾಸಕ ಶಾಂತನಗೌಡ, ಎಂಎಲ್ ಸಿ ಮಂಜುನಾಥ ಭಂಡಾರಿ, ಮಾಜಿ ಎಂಎಲ್ಸಿ ಪ್ರಸನ್ನಕುಮಾರ್, ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ ಕುಮಾರ್, ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರೇ ಆಯ್ಕೆಯಾಗುವ ಮೂಲಕ ಶಿಕ್ಷಕರ ಬವಣೆಗಳನ್ನು ಬಗೆಹರಿಸಬೇಕಿದೆ. ಕಳೆದ ಅವಧಿಗಳಲ್ಲಿ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜನಪ್ರತಿನಿಧಿಗಳು ಶಿಕ್ಷಕರ ಹಿತ ಕಾಯದೇ ಸ್ವಹಿತ ಮೆರೆದಿದ್ದು ಈ ಬಾರಿ ಕ್ಷೇತ್ರದ ಶಿಕ್ಷಕರು ನನ್ನನ್ನು ಚುನಾಯಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.






