ಲೇಖಕ: admin

ಮಡಿಕೇರಿ ಮೇ 16 NEWS DESK  : ದಾರುಣವಾಗಿ ಹತ್ಯೆಯಾದ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಮನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್  ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೀನಾಳ ಪೋಷಕರಿಗೆ ವೈಯಕ್ತಿಕ ಪರಿಹಾರ ನೀಡಿದ ಸಚಿವರು, ನೀತಿ ಸಂಹಿತೆ ಸಡಿಲವಾದ ಬಳಿಕ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್  ಪ್ರಮುಕರು ಹಾಗೂ ಕಾರ್ಯಕರ್ತರು ಹಾಜರಿದ್ದರು. 

Read More

ಮಡಿಕೇರಿ ಮೇ 16 NEWS DESK : ಗಾಂಧಿ ಯುವಕ ಸಂಘ ಕಂಡಕರೆ ವತಿಯಿಂದ ನೀಡಲಾಗುವ “ಮಾದರಿ ಸಮಾಜ ಸೇವಕ” ಪ್ರಶಸ್ತಿಗೆ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಹಿರಿಯ ಸಲಹೆಗಾರ ಮತ್ತು ಎಸ್.ಎನ್.ಡಿ.ಪಿ ಮಡಿಕೇರಿ ಶಾಖಾ ಅಧ್ಯಕ್ಷ ಟಿ.ಆರ್ ವಾಸುದೇವ್ ಹಾಗೂ ಕೊಡಗು ಜಿ.ಪಂ ಮಾಜಿ ಸದಸ್ಯ ಪಿ.ಎಂ‌.ಲತೀಫ್ ಆಯ್ಕೆಯಾಗಿದ್ದಾರೆ. ಟಿ.ಆರ್ ವಾಸುದೇವ್ ಮತ್ತು ಪಿ.ಎಂ ಲತೀಫ್ ಸುಂಟ್ಟಿಕೊಪ್ಪ ಅವರ ಸಮಾಜ ಸೇವೆಯನ್ನು ಗುರುತಿಸಿ ಮಾದರಿ ಸಮಾಜ ಸೇವಕ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿ ವಿತರಣಾ ಕಾರ್ಯಕ್ರಮವು ಜೂ.9 ರಂದು ಕಂಡಕರೆಯಲ್ಲಿ ನಡೆಯಲಿರುವ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಮತ್ತು ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ಅಧ್ಯಕ್ಷ  ಇಸ್ಮಾಯಿಲ್ ಕಂಡಕರೆ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 16 NEWS DESK : ಕುಶಾಲನಗರ ಕೊಪ್ಪ ಗೇಟ್ ಬಳಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು  ಭವ್ಯ ಸ್ವಾಗತ ಕೋರಿದರು. ಸಂದರ್ಭದಲ್ಲಿ ಶಾಸಕ ಡಾ. ಮಂತರ್‌ ಗೌಡ, ಕುಶಾಲನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮುಖಂಡರಾದ ಕೆ.ಪಿ.ಚಂದ್ರಕಲಾ, ಆರ್.ಪಿ.ಚಂದ್ರಶೇಖರ್ ಸೇರಿದಂತೆ ಇತರ ಕಾರ್ಯಕರ್ತರು  ಡಾ. ಜಿ.ಪರಮೇಶ್ವರ್ ಅವರಿಗೆ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಪುರಸಭೆ ಸದಸ್ಯ ಶಿವಶಂಕರ್. ದಿನೇಶ್ ಪ್ರಕಾಶ್. ನವೀನ್. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್. ಕೆ.ಪಿ.ಸಿ.ಸಿ ಸದಸ್ಯರಾದ ಮಂಜುನಾಥ್, ಹೆಬ್ಬಾಲೆ ರಂಜು, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್, ಸಾಜಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು. ಇದಕ್ಕೂ ಮುನ್ನ ಮಾದಪುರ ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಹಂಸ ಹಾಗೂ ಸಮರ್ಪಡೆ ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಟಿ.ಎಂ.ಅಯ್ಯಪ್ಪ, ಕೆ.ಎ.ಯಾಕೂಬ್ , ಸುರಯ್ಯ ಅಬ್ರಾರ್, ಜುಲೆಕಾಬಿ, ಶೀಲಾ ಡಿಸೋಜಾ, ಕೆ.ಎ.ಆದಮ್,…

Read More

ಬೆಂಗಳೂರು ಮೇ 15 NEWS DESK : ಪಶ್ಚಿಮ ಘಟ್ಟಗಳಂತಹ ಕಾಡುಗಳನ್ನು ನಾಶಪಡಿಸುವ ಯೋಜನೆಗಳ ಚಿತ್ರಣವಿರುವ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ಎಂಥಾ ಕಥೆ ಮಾರಾಯ’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಚೆನ್ನೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡು ಮೆಚ್ಚುಗೆಗೆ ಪಾತ್ರವಾಗಿದ್ದ ‘ಎಂಥಾ ಕಥೆ ಮಾರಾಯ’ ಸಿನಿಮಾ ಪ್ರಸ್ತುತ ಏರ್‌ಟೆಲ್ ಎಕ್ಸ್‌ಟ್ರೀಮ್, ಹಂಗಾಮಾ ಪ್ಲೇ, ಒಟಿಟಿ ಪ್ಲೇಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಸಿನಿಮಾ ಬೆಂಗಳೂರಿನ ಪ್ರಸಕ್ತ ನೀರಿನ ಬಿಕ್ಕಟ್ಟನ್ನು ಎತ್ತಿ ತೋರಿಸುತ್ತದೆ ಮತ್ತು ಜಾಗತಿಕ ತಾಪಮಾನದ ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿದೆ. ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ ಅವರು ತಾವೇ ಬರೆದಿರುವ ‘ಕಾಡಿನ ನೆಂಟರು‘ ಕಥಾಸಂಕಲನವನ್ನು ಆಧರಿಸಿ “ಎಂಥಾ ಕಥೆ ಮಾರಾಯ” ಸಿನಿಮಾವನ್ನು ತೆರೆಗೆ ತಂದಿದ್ದಾರೆ.

Read More

ಸಿಂಗಾಪುರ ಮೇ 15 NEWS DESK : ಸಿಂಗಾಪುರದ 4ನೇ ಪ್ರಧಾನಮಂತ್ರಿಯಾಗಿ ಅರ್ಥಶಾಸ್ತ್ರಜ್ಞ ಲಾರೆನ್ಸ್ ವಾಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 72 ವರ್ಷದ ಲೀ ಹ್ಸಿಯೆನ್ ಲೂಂಗ್ ಎರಡು ದಶಕಗಳ ನಂತರ ಅಧಿಕಾರ ತ್ಯಜಿಸಿದ ನಂತರ ಅವರ ಉತ್ತರಾಧಿಕಾರಿಯಾಗಿ 51ವರ್ಷದ ವಾಂಗ್ ಅಧಿಕಾರ ವಹಿಸಿಕೊಂಡರು. ಇಬ್ಬರೂ ಆಡಳಿತಾರೂಢ ಪೀಪಲ್ಸ್ ಆಕ್ಷನ್ ಪಾರ್ಟಿ (PAP) ಗೆ ಸೇರಿದವರು.

Read More

ನವದೆಹಲಿ ಮೇ 15 NEWS DESK : ಗುಜರಾತ್ ನ ಮಾಜಿ ರಾಜ್ಯಪಾಲರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಕಮಲಾ ಬೆನಿವಾಲ್ (97) ಅವರು ಇಂದು ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದೀರ್ಘಾವಧಿಯ ಅನಾರೋಗ್ಯದ ಕಾರಣ ಬೆನಿವಾಲ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

Read More

ಪಲ್ನಾಡು ಮೇ 15 NEWS DESK : ಲಾರಿ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಸಂಪೂರ್ಣ ಅಗ್ನಿಗಾಹುತಿಯಾಗಿ ಆರು ಮಂದಿ ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ. ಈ ಭೀಕರ ಅಪಘಾತದಲ್ಲಿ ಗಾಯಗೊಂಡವರಿಗೆ ಚಿಲಕಲುರಿಪೆಟ್ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಗುಂಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು ಮೇ 15 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 16 ಬೇಡಿಕೆಗಳ ಬಹಿರಂಗ ಪತ್ರ ಬರೆದಿದ್ದಾರೆ. ಪ್ರಜ್ವಲ್​ ರೇವಣ್ಣ ಎಲ್ಲಿದ್ದರೂ ಪತ್ತೆ ಮಾಡಿ ಬಂಧಿಸಬೇಕು. ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಿ, ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು. ಹಗರಣದ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿರುವ ರಾಜಕೀಯ ನಾಯಕರ ನಡವಳಿಕೆಗೆ ಕಡಿವಾಣ ಹಾಕಬೇಕು. ಎಸ್​ಐಟಿ ತನಿಖೆ ಕಾಲಮಿತಿಯಲ್ಲಿ ನಡೆಯಬೇಕು. ಲೈಂಗಿಕ ಕೃತ್ಯ ಚಿತ್ರೀಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಮೊಕದ್ದಮೆ ಹೂಡಬೇಕು. ಕಾರು ಚಾಲಕ ಕಾರ್ತಿಕ್​ನನ್ನು ಕೂಡಲೇ ಬಂಧಿಸಬೇಕು. ವಿಡಿಯೋ ತಮ್ಮ ಬಳಿ ಇದೆ ಎಂದ ಹೇಳಿದ ರಾಜಕೀಯ ನಾಯಕ ಮತ್ತು ಕಾರು ಚಾಲಕ ಕಾರ್ತಿಕ್ ಗೌಡ​ ವಿರುದ್ಧ ಸಂಚು ರೂಪಿಸಿದ್ದಕ್ಕೆ ಸೂಕ್ತ ಕಾನೂನುಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು. ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ…

Read More

ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೂರ್ವ ಮುಂಗಾರು ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. `ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 42 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ನಾಯಿ ಕಡಿತಕ್ಕೆ 3,144, ಹಾವು ಕಡಿತಕ್ಕೆ 89 ಮಂದಿ, ಬೇಧಿ(ಡಯೇರಿಯಾ) ಪ್ರಕರಣಗಳು 1,486, ಕಾಲರಾ 2 ಪ್ರಕರಣ,…

Read More

ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಮತ್ತು ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ 21ನೇ ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭವು ಮೇ 21 ರಂದು ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ(ಕುಶಾಲನಗರ ಹಾರಂಗಿ ರಸ್ತೆ) ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಎಂ.ಪ್ರವೀಣ್‍ಕುಮಾರ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವಕಾಮತ್, ಗಾಳಿಬೀಡು ಜವಹರ್ ನವೋದಯ ವಿದ್ಯಾಲಯದ ಅಧ್ಯಾಪಕರು, ಸಾಹಿತಿ ಮಾರುತಿ ದಾಸಣ್ಣವರ್, ಕುಶಾಲನಗರ ಸಾಹಿತಿ ಮತ್ತು ಗೌರಮ್ಮ ಪ್ರಶಸ್ತಿ ಪುರಸ್ಕೃತರಾದ ಸುನಿತಾ ಲೋಕೇಶ್, ಕುಶಾಲನಗರ ಸರ್ಕಾರ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ಸುನೀಲ್ ಕುಮಾರ್, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ…

Read More