ಲೇಖಕ: admin

ಮಡಿಕೇರಿ ಮೇ 14 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2024-25 ರ ಸಾಲಿನ ಪ್ರಥಮ ವರ್ಷದ ಬಿ.ಎ(ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಕನ್ನಡ ಐಚ್ಛಿಕ), ಬಿ.ಕಾಂ ಮತ್ತು ಬಿ ಬಿ ಎ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಕಾಲೇಜು ಸುಸಜ್ಜಿತವಾದ ತರಗತಿ ಕೊಠಡಿಗಳನ್ನು ಮತ್ತು ನುರಿತ ಬೋಧಕರನ್ನು ಒಳಗೊಂಡಿದೆ. ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅವಶ್ಯಕತವಿರುವ 14,000 ಪುಸ್ತಕಗಳನ್ನು ಹೊಂದಿರುವ ವಿಶಾಲವಾದ ಗ್ರಂಥಾಲಯ, ಇ-ಗ್ರಂಥಾಲಯ, ಸ್ಮಾರ್ಟ್ ಕ್ಲಾಸ್ ಸೌಲಭ್ಯ, ವೈಫೈ ಸೌಲಭ್ಯ, ಸಿ.ಸಿ.ಕ್ಯಾಮರಾ ಕಣ್ಗಾವಲಿನಲ್ಲಿರುವ ಸುಸಜ್ಜಿತ ಕಟ್ಟಡ, ಮಹಿಳಾ ದೌರ್ಜನ್ಯ ನಿರ್ಮೂಲನಾ ಸಮಿತಿ, ಮಾದಕ ವಸ್ತು ನಿರ್ಮೂಲನಾ ಸಮಿತಿ, ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಆಧುನಿಕ ರೀತಿಯ ಬೋಧನಾ ಕ್ರಮ, ಉದ್ಯೋಗ ಮಾರ್ಗ ದರ್ಶನ ಕೇಂದ್ರ, ವಿದ್ಯಾರ್ಥಿ ನಿಲಯ, ಕ್ಯಾಂಟೀನ್ ವ್ಯವಸ್ಥೆ, ಇಕೋಕ್ಲಬ್,ವಿದ್ಯಾರ್ಥಿ ಭ್ರಾತೃತ್ವ ವೇದಿಕೆ, ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ಸಂಘ, ಅಂತರಕಾಲೇಜು ವಿದ್ಯಾರ್ಥಿಗಳ ಕಲಿಕಾ ವಿನಿಮಯ ಕಾರ್ಯಕ್ರಮಗಳು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ, ಎನ್‍ಎಸ್‍ಎಸ್, ರೋವರ್ಸ್, ರೇಂಜರ್ಸ್,…

Read More

ಮಡಿಕೇರಿ ಮೇ 14 NEWS DESK : ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವತಿಯಿಂದ ಇತ್ತೀಚೆಗೆ ಅಬಾಕಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರೈನೋಬ್ರೈನ್ ಕೇಂದ್ರದ ಇಪ್ಪತ್ತನೇ ಬ್ಯಾಚ್ ನ ಒಟ್ಟು 20 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ 10 ಹಂತಗಳಿರುವ ಅಬಾಕಸ್ ಕೋರ್ಸ್ ಅನ್ನು ಈ ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರೈಸಿದ್ದಾರೆ. ಅಂತರರಾಷ್ಟ್ರೀಯ ಬ್ರೈನೋಬ್ರೈನ್ ಸಂಸ್ಥೆಯ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಹ್ಮಣ್ಯಂ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ ಇಲ್ಲಿಯವರೆಗೆ ಮಡಿಕೇರಿ ಕೇಂದ್ರದಿಂದ ಒಟ್ಟು 540 ವಿದ್ಯಾರ್ಥಿಗಳು ಪದವಿ ಸ್ವೀಕಾರ ಮಾಡಿದ್ದಾರೆ. ಇದು ರಾಜ್ಯದ ಇತರ ಬ್ರೈನೋಬ್ರೈನ್ ಕೇಂದ್ರಗಳಲ್ಲೆ ಅತ್ಯಧಿಕ ಮತ್ತು ಎಲ್ಲಾ ಕೇಂದ್ರಗಳಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ಮುಖ್ಯಸ್ಥೆ ಹಾಗೂ ತರಬೇತುದಾರರಾದ ಮಾಪಂಗಡ ಕವಿತಾ ಕರಂಬಯ್ಯ ಅವರ ಕಾರ್ಯ ವೈಖರಿ ಮತ್ತು ಬದ್ಧತೆಯನ್ನು ಕೊಂಡಾಡಿದರು. ಮಕ್ಕಳ ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ನೋಡಿ ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ…

Read More

ಮಡಿಕೇರಿ ಮೇ.14 NEWS DESK  : ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮೇ 15 ರಂದು ಸೂರ್ಲಬ್ಬಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:.30 ಗಂಟೆಗೆ  ಶಾಸಕ ಡಾ.ಮಂತರ್ ಗೌಡ ಅವರೊಂದಿಗೆ ಇತ್ತೀಚೆಗೆ ದಾರುಣವಾಗಿ ಹತ್ಯೆಯಾದ ಬಾಲಕಿ ಮೀನಾ ಮನೆಗೆ ಭೇಟಿ ನೀಡಲಿದ್ದಾರೆ.

Read More

ಮಡಿಕೇರಿ ಮೇ.14 NEWS DESK  : ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್‍ರಾಜಾ ತಾಕೀತು ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯ ಅನುಷ್ಠಾನ ಸಂಬಂಧ ಅಧಿಕಾರಿಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಸಂಬಂಧ ಈಗಾಗಲೇ ಅಧಿನಿಯಮ ಜಾರಿಯಾಗಿದ್ದು, ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯ ಗಡಿಭಾಗ ಸೇರಿದಂತೆ ನಗರ, ಪಟ್ಟಣ ಹಾಗೂ ಎಲ್ಲೆಡೆ ಅಳವಡಿಸಿರುವ/ ಅಳವಡಿಸುವ ನಾಮಫಲಕದಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ‘ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿನ ನಾಮಫಲಕದಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯ…

Read More

ಮಡಿಕೇರಿ ಮೇ 14 NEWS DESK : ಹಾಕಿ ಕ್ರೀಡಾ ಮೈದಾನಕ್ಕೆ ಜಾಗ ಮಂಜೂರು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಡವ ಭಾಷಿಕ ಸಮುದಾಯಗಳ ಕೂಟ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಕಕ್ಕಬ್ಬೆಯ ಪ್ರೌಢಶಾಲಾ ಮೈದಾನದಲ್ಲಿ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರ ನೇತೃತ್ವದಲ್ಲಿ ಎಲ್ಲಾ 21 ಮೂಲನಿವಾಸಿ ಭಾಷಿಕ ನಿರ್ದೇಶಕರುಗಳ ನಿಯೋಗ ಶಾಸಕರನ್ನು ಭೇಟಿಯಾಗಿ ಬೇಡಿಕೆಗಳ ಕುರಿತು ಚರ್ಚಿಸಿತು. ಸುಮಾರು ಒಂದು ಲಕ್ಷಕ್ಕೂ ಮೇಲ್ಪಟ್ಟು ಜನಸಂಖ್ಯೆ ಹೊಂದಿರುವ ವಿಶಿಷ್ಟ ಸಂಸ್ಕೃತಿಯ, ಕೊಡವ ಭಾಷೆ ಮಾತನಾಡುವ ಕೊಡಗಿನ ಮೂಲ ನಿವಾಸಿ 21 ಸಮುದಾಯಗಳ ಸಂವಿಧಾನಬದ್ಧ ಮೂಲಭೂತ ಹಕ್ಕುಗಳನ್ನು ಈಡೇರಿಸಬೇಕು. ಜನಾಂಗದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಬೇಕು, ಸುಸಜ್ಜಿತ ಮತ್ತು ಮೂಲಭೂತ ಸೌಲಭ್ಯಗಳಿರುವ ಕಲ್ಯಾಣ ಮಂಟಪ ನಿರ್ಮಾಣ, ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಹಾಕಿ ಕ್ರೀಡಾ ಮೈದಾನಕ್ಕೆ ಪೈಸಾರಿ ಜಾಗ ಮಂಜೂರು ಮಾಡುವುದು, ಮೂಲನಿವಾಸಿ ಜನಪದ ಅಧ್ಯಯನ ಕೇಂದ್ರ, ಪುರಾತನ…

Read More

ಮಡಿಕೇರಿ ಮೇ 14 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ ಗ್ರಾಮದಲ್ಲಿ ನಟ್ ಕುಂದ್ ನದಿಗೆ ಎರಡು ಕಿಲೋಮೀಟರ್ ಅಂತರದಲ್ಲಿ ನಿರ್ಮಿಸಿರುವ 3 ಚೆಕ್ ಡ್ಯಾಮ್ ಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ವೈಫಲ್ಯ ಕಂಡಿರುವ ಯೋಜನೆಗಳನ್ನು ಮುಂಗಾರು ಮುನ್ನ ಸರಿಪಡಿಸಲು ಇಂಜಿನಿಯರ್,  ಅಧಿಕಾರಿ ವರ್ಗ ಹಾಗೂ ಕಾಮಗಾರಿ ನಿರ್ಮಾಣ ಮಾಡಿದ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ಸಂದರ್ಭ ಪೊನ್ನಂಪೇಟೆ ತಾಲೂಕು ಬಗರ್ ಹುಕುಂ ಅಕ್ರಮ ಸಕ್ರಮೀಕರಣ ಸಮಿತಿ ಅಧ್ಯಕ್ಷ ಅಣ್ಣಳಮಾಡ ಲಾಲ ಅಪ್ಪಣ್ಣ, ಬಿರುನಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಕುಪ್ಪಣಮಾಡ ಪ್ರೀತಮ್, ಗ್ರಾ.ಪಂ ಅಧ್ಯಕ್ಷ ಬುಟ್ಟಿಯಂಡ ನಾಣಯ್ಯ, ಬೊಳ್ಳೇರ ಪೊನ್ನಪ್ಪ, ಅಣ್ಣಳಮಾಡ ಚಿಣ್ಣಪ್ಪ, ಪ್ಯಾಕ್ಸ್ ನಿರ್ದೇಶಕ ಕರ್ತಮಾಡ ಮಿಲನ್, ಕಾಳಿಮಾಡ ರಶಿಕ್, ಕರ್ತಮಾಡ ನಂದ, ಕಳಕಂಡ ಜೀತು ಕುಶಾಲಪ್ಪ,ಬಲ್ಯಮೀದರೀರ ರನ್ನು ಮತ್ತಿತರರು ಹಾಜರಿದ್ದರು.

Read More

ಕಡಂಗ ಮೇ 14 NEWS DESK : ಬಪ್ಪನಾಡು ಕಡಂಗಮರೂರು ಗ್ರಾಮದ ಶ್ರೀ ಭಗವತಿ, ಈಶ್ವರ, ಅಯ್ಯಪ್ಪ ಹಾಗೂ ಪರಿವಾರ ದೇವರ ಜಾತ್ರಾ ಮಹೋತ್ಸವವು ಮೇ 16 ರಿಂದ 21ರ ವರೆಗೆ ನಡೆಯಲಿದೆ. ವೇದಮೂರ್ತಿ ಶ್ರೀ ಎ.ಜೆ.ಪಂಡರೀಶ ಅರಳಿತ್ತಾಯ ತಂತ್ರಿಗಳು ಹಾಗೂ ಸಂಗಡಿಗರ ನೇತೃತ್ವದಲ್ಲಿ ಆರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಮೇ 16 ರಂದು ಬೆಳಿಗ್ಗೆ 9  ಗಂಟೆಗೆ ಪುಣ್ಯಹ, ಗಣ ಹೋಮ, ತೋರಣ ಹಾಕುವುದು, ಮಹಾಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 6 ಗಂಟೆಗೆ ಸಾಮೂಹಿಕ ಪ್ರಾರ್ಥನೆ ಭ0ಡಾರ ತರುವುದು, ದೇವರ ಬಲಿ, ಮಹಾಪೂಜೆ, ಪ್ರಸಾದ ವಿನಿಯೋಗ ನೆರವೇರಲಿದ್ದು, ಉಳಿದ ದಿನಗಳಲ್ಲಿ ವಿಶೇಷ ಪೂಜೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ. ಮೇ 16 ರಿಂದ 19ರವರೆಗೆ ದೇವರ ಕಟ್ಟು ಇರುವುದರಿಂದ ಗ್ರಾಮಸ್ಥರು ಸಹಕರಿಸುವಂತೆ ಮನವಿ ಮಾಡಿದರು. ವರದಿ : ನೌಫಲ್ ಕಡಂಗ  

Read More

ನಾಪೋಕ್ಲು ಮೇ 14 NEWS DESK : ಜಿಲ್ಲೆಯ ವಿಶಿಷ್ಟ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಂದು ಜನಾಂಗದ ಪಾತ್ರ ಪ್ರಮುಖ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕಕ್ಕಬೆಯ ಪ್ರೌಢಶಾಲಾ ಆಟದ ಮೈದಾನದಲ್ಲಿ ಕೊಡಗು ಕಣಿಯ ವಿದ್ಯಾ ಅಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಣಿಯ ಜನಾಂಗದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದವಾದ ವಿವಿಧ ಸಾಮೂದಾಯಗಳ ಸಂಖ್ಯೆಯು ಕಡಿಮೆ ಇದ್ದರೂ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಸಮುದಾಯವನ್ನು ಒಗ್ಗೂಡಿಸುವುದು ಹೆಮ್ಮೆಯ ವಿಷಯ. ಜಿಲ್ಲೆಯ ಪ್ರತಿಯೊಂದು ಜನಾಂಗವು ತನ್ನದೇ ಆದ ಆಚಾರ-ವಿಚಾರ ಪದ್ಧತಿ ಪರಂಪರೆಯನ್ನು ಹೊಂದಿದೆ. ಒಂದು ಜನಾಂಗವನ್ನು ಬಿಟ್ಟು ಜಿಲ್ಲೆ ಒಂದಾಗಲು ಸಾಧ್ಯವಿಲ್ಲ ಎಲ್ಲರೂ ಒಟ್ಟಾದರೆ ಮಾತ್ರ ಜಿಲ್ಲೆಯ ಸಂಸ್ಕೃತಿ ಆಚಾರ ವಿಚಾರ ಬೆಳೆಯಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಡಾ.ಮೇಚಿರ ಸುಭಾಷ್ ನಾಣಯ್ಯ , ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ನಪ್ಪ, ಬುಡಕಟ್ಟು ಜನಾಂಗದ ಅಧ್ಯಕ್ಷ ಕುಡಿಯರ ಮುತ್ತಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಕಣಿಯ ವಿದ್ಯಾ…

Read More

ವಾರಣಾಸಿ ಮೇ 14 NEWS DESK : 2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರು ಪ್ರತಿನಿಧಿಸುತ್ತಿರುವ ವಾರಣಾಸಿ ಕ್ಷೇತ್ರದಲ್ಲಿ ಜೂನ್ 1 ರಂದು ಸಾರ್ವತ್ರಿಕ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದೆ. ಸತತ ಮೂರನೇ ಬಾರಿಗೆ ತಮ್ಮ ಪಕ್ಷದ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಸಂಸತ್ತಿನ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಮುಂದಿನ ತಿಂಗಳು ಜಿ -7 ಶೃಂಗಸಭೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.

Read More

ಮಡಿಕೇರಿ ಮೇ 14 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ  ಕೊಡವ ಅಡುಗೆ ಸ್ಪರ್ಧೆ ನಡೆಯಿತು. ಮಹಿಳೆಯರು ವಿವಿಧ ಭಾಗಗಳಲ್ಲಿ ಪಾಲ್ಗೊಂಡು ಕೊಡವ ಸಾಂಪ್ರದಾಯಿಕ ಅಡುಗೆ ತಯಾರಿಸಿ ಸಂಭ್ರಮಿಸಿದರು. ಕೋಳಿಕರಿ-ಪುಟ್ಟ್ :  ಕನ್ನಂಡ ಸುನಿತ ಸಂಪತ್ ಪ್ರಥಮ, ಪೊನ್ನಚೆಟ್ಟಿರ ಡಾಟಿ ದ್ವಿತೀಯ ಪಂದಿಕರಿ-ಪುಟ್ಟ್/ಒಟ್ಟಿ : ಕಲಿಯಂಡ ಜೀಜಾ ಅಚ್ಚಪ್ಪ ಪ್ರಥಮ, ಪಾಲಚಂಡ ಸುಮಿ ಉತ್ತಪ್ಪ ದ್ವಿತೀಯ ಕೂಟ್‌ಕರಿ-ಪುಟ್ಟ್ : ಕನ್ನಂಡ ಸುನಿತ ಸಂಪತ್ ಪ್ರಥಮ, ಅಕ್ಕಪಂಡ‌ ನಮಿತ ತಮ್ಮಯ್ಯ ದ್ವಿತೀಯ ಪಜ್ಜಿ : ಚೆಟ್ರಂಡ ಭಾರತಿ ಪ್ರಥಮ, ಕಲಿಯಂಡ ಜೀಜಾ ಅಚ್ಚಪ್ಪ ದ್ವಿತೀಯ ತೊಪ್ಪು ಬರ್ತದ್ : ಅಕ್ಕಪಂಡ ಕಾವೇರಿ ಚೆಂಗಪ್ಪ ಪ್ರಥಮ, ಚೆಟ್ರಂಡ ವಸಂತಿ ದ್ವಿತೀಯ ಬರ್‌ತ ಪುಟ್ಟ್ : ಚೆಟ್ರಂಡ ಭಾರತಿ ಪ್ರಥಮ, ಕಲಿಯಂಡ ಜೀಜಾ ಅಚ್ಚಪ್ಪ ದ್ವಿತೀಯ ಕರಿ : ಚೆಟ್ರಂಡ ಭಾರತಿ ಪ್ರಥಮ, ಪಾಲಚಂಡ ಸುಮಿ ಉತ್ತಪ್ಪ ದ್ವಿತೀಯ ಜ್ಯೂಸ್ : ಪಾಲಚಂಡ ಸುಮಿ ಉತ್ತಪ್ಪ…

Read More