ನಾಪೋಕ್ಲು ಮೇ 13 NEWS DESK : ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಮೇ 22 ರಿಂದ 27 ರವರೆಗೆ ಅಂತರ ಗ್ರಾಮ ನಾಲ್ನಾಡ್ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ನಾಲ್ನಾಡು ಹಾಕಿ ಪಂದ್ಯಾವಳಿಯ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹೇಳಿದರು. ಬಲ್ಲಮಾವಟಿಯ ನೇತಾಜಿ ಪ್ರೌಢಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ 2000 ದಿಂದ 2012 ರವರೆಗೆ ನಾಲ್ನಾಡ್ ಕಪ್ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಬಳಿಕ ಕಾರಣಾಂತರಗಳಿಂದ ಸ್ಥಗಿತಗೊಂಡಿತು. 10 ವರ್ಷಗಳ ಬಳಿಕ ಸಾರ್ವಜನಿಕರ ಒತ್ತಾಯದ ಮೇರೆಗೆ ಹೊಸ ಸಮಿತಿಯನ್ನು ರಚಿಸಿ ಪಂದ್ಯಾವಳಿಯನ್ನು ಆರಂಭಿಸಲಾಗಿದೆ ಎಂದರು. ನಾಲ್ನಾಡು ಕಪ್ ಹಾಕಿ ಪಂದ್ಯಾವಳಿಯ ಮೊತ್ತ ಮೊದಲು ಗ್ರಾಮೀಣ ಮಟ್ಟದಲ್ಲಿ ಯಾವುದೇ ಜಾತಿ ಭೇದಗಲಿಲ್ಲದೆ ಮನೋರಂಜನೆಯ ಜೊತೆಗೆ ಹಾಕಿ ಕ್ರೀಡೆಯ ಹೇಳಿಕೆಗಾಗಿ ಅಯೋಜಿಸಿದ ಹೆಗ್ಗಳಿಕೆ ಈ ಸಮಿತಿಯದಾಗಿದ್ದು ಬಳಿಕ ವಿವಿಧಡೆ ಹಾಕಿ ಪಂದ್ಯಾಟಗಳು ಆರಂಭಗೊಂಡವು. ಈ ವ್ಯಾಪ್ತಿಯಲ್ಲಿ ಬಹಳಷ್ಟು ಕ್ರೀಡಾ ಪ್ರತಿಭೆಗಳಿದ್ದು ಮನೋರಂಜನೆಯ ಜೊತೆಗೆ ಹಾಕಿ…
ಲೇಖಕ: admin
ಮಡಿಕೇರಿ ಮೇ 13 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಮಾರಿಯಮ್ಮ ಬೇವಿನ ಸೊಪ್ಪಿನ ಕರಗೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ಪಂಪಿನ ಕೆರೆಯಲ್ಲಿ ಕರಗಗಳಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ವಾದ್ಯಗೋಷ್ಠಿಯೊಂದಿಗೆ ದೇವಿಯ ಕರಗಗಳ ಮೆರವಣಿಗೆ ನಡೆಯಿತು. ಅನಾದಿ ಕಾಲದಿಂದಲೂ ಶಕ್ತಿ ದೇವಿಯ ಬೇವಿನ ಸೊಪ್ಪಿನ ಕರಗೋತ್ಸವ ನಡೆಸಿಕೊಂಡು ಬರುತ್ತಿದ್ದು, ಭೀಕರ ಸಾಂಕ್ರಾಮಿಕ ರೋಗಗಳು ನಾಡಿಗೆ ಬರಬಾರದೆಂಬ ನಂಬಿಕೆಯಿಂದ ನಾಡಿನ ಸುಭಿಕ್ಷೆಗಾಗಿ ಈ ಕರಗೋತ್ಸವವನ್ನು ಆಚರಿಸಲಾಗುತ್ತಿದೆ. ಇಂದು ಕರಗಗಳಿಗೆ ವಿಶೇಷ ಪೂಜೆ, ನಡೆಯಲಿದೆ. ಮೇ 14 ರಂದು ರಾತ್ರಿ 10 ಗಂಟೆಗೆ ಶ್ರೀ ಕಂಚಿ ಕಾಮಾಕ್ಷಿಯಮ್ಮ, ಶ್ರೀ ಮಾರಿಯಮ್ಮ ಸನ್ನಿಧಿಯಲ್ಲಿ ಸಾಂಪ್ರದಾಯಿಕ ದೇವಿಯ ಪೂಜೆಗಳು ಜರುಗಲಿದ್ದು, ನಂತರ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ. ಮೇ 15 ರಂದು ಸಂಜೆ 7 ಗಂಟೆಗೆ ದೇವಿಯ ಕರಗಗಳಿಗೆ ದೀಪಗಳ ಆರಾಧನೆಯೊಂದಿಗೆ ಸಾಂಪ್ರದಾಯಿಕ ಕರಗಗಳ ವಿಸರ್ಜನೋತ್ಸವ ಜರುಗಲಿದ್ದು, ಶ್ರೀ ಮಾರಿಯಮ್ಮ ಕರಗೋತ್ಸವಕ್ಕೆ ಭಕ್ತರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ…
ಮಡಿಕೇರಿ ಮೇ 12 NEWS DESK : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಪೋಕ್ಲು ಸಮೀಪ ಬಲ್ಲಮಾವಟಿಯಲ್ಲಿ ನಡೆದಿದೆ. ಅಯ್ಯಂಗೇರಿ ನಿವಾಸಿಗಳು ಗಾಯಗೊಂಡವರು ಎಂದು ತಿಳಿದು ಬಂದಿದೆ. (ವರದಿ : ದುಗ್ಗಳ ಸದಾನಂದ)
ಕುಶಾಲನಗರ ಮೇ 12 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಂಗ ಸಂಸ್ಥೆಯಾದ ಕದಳಿ ವೇದಿಕೆಗೆ ಕೊಡಗು ಜಿಲ್ಲಾಧ್ಯಕ್ಷರಾಗಿ ಸೋಮವಾರಪೇಟೆಯ ಜಲಜಾ ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಕೊಡಗು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಕದಳಿ ವೇದಿಕೆಗೆ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಶರಣ ಸಾಹಿತ್ಯ ಹಾಗೂ ಸಂಸ್ಕ್ರತಿಯನ್ನು ಬೆಳೆಸಬೇಕೆಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರಾದ ಸುಶೀಲಾ ಸೋಮಶೇಖರ್ ನೇಮಕ ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರ ಮೇ 12 NEWS DESK : ಕೊಡಗು ಜಿಲ್ಲೆಯ ವಾತಾವರಣ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ ಎಂದು ಕೊಡಗು ಜಿಲ್ಲಾ ಚೇಂಬರ್ ಅಪ್ ಕಾಮರ್ಸ್ ನ ಉಪಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಚೇಂಬರ್ ಅಪ್ ಕಾಮರ್ಸ್ ವತಿಯಿಂದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವರ್ತಕರ ಸ್ನೇಹ ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸಿಗರಿಗೆ ಉತ್ತಮ ಸೌಲಭ್ಯ ಸೇವೆಗಳನ್ನು ಒದಗಿಸಿದಲ್ಲಿ ಜಿಲ್ಲೆಯ ಉದ್ಯಮಗಳ ಬೆಳವಣಿಗೆ ಸಾಧ್ಯ ಎಂದರು. ಕುಶಾಲನಗರದಲ್ಲಿ ಮೂರು ದಶಕಗಳಿಂದ ಚೇಂಬರ್ ಅಪ್ ಕಾಮರ್ಸ್ ತನ್ನ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಹಿಂದಿನ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳು ವರ್ತಕರಿಗೆ ಅನಾವಶ್ಯಕ ಕಿರುಕುಳ ನೀಡಿ ವರ್ತಕರಿಗೆ ಸಮಸ್ಯೆಗಳನ್ನು ಉಂಟು ಮಾಡುತ್ತಿದ್ದರು. ಅಂತಹ ಸಂದರ್ಭದಲ್ಲಿ ಚೇಂಬರ್ ಮೂಲಕ ವರ್ತಕರ ಪರವಾಗಿ ನಿಂತು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದಿದೆ ಎಂದು ನೆನಪಿಸಿದರು. ಕೊಡಗು ಜಿಲ್ಲಾ ಚೇಂಬರ್ ಅಪ್ ಕಾಮರ್ಸ್ ನ ನಿರ್ದೇಶಕ ಎಸ್.ಕೆ.ಸತೀಶ್ ಮಾತನಾಡಿ, ನಿರಂತರ ಕೆಲಸಗಳ ಒತ್ತಡದ ಜಂಜಾಟದಲ್ಲಿರುವ ಉದ್ಯಮಿಗಳು ವರ್ತಕರ ದಿನಾಚರಣೆಯನ್ನು ಆಚರಿಸುವಂತಾಗಬೇಕು. ಕುಶಾಲನಗರ ಸ್ಥಾನಿಯ…
ಮಡಿಕೇರಿ ಮೇ 12 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ನಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಅಂತಿಮ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕ್ರೀಡಾಕೂಟಗಳಲ್ಲಿ ಕಾಣುವ ಸಾಮರಸ್ಯ ಸಮಾಜದಲ್ಲೂ ಕಾಣಬೇಕು, ಸಾಮರಸ್ಯವನ್ನು ಬೆಳೆಸಲು ಎಲ್ಲರೂ ಕೈಜೋಡಿಸಬೇಕು ಎಂದರು. ಕೊಡಗು ಜಿಲ್ಲೆಯಲ್ಲಿ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹದಾಯಕವಾಗಿ ಹೆಚ್ಚು ಹೆಚ್ಚು ಕ್ರೀಡಾಕೂಟಗಳು ನಡೆಯುತ್ತಿರುವುದು ಶ್ಲಾಘನೀಯವೆಂದ ಶಾಸಕರು ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬಹುಮಾನ ವಿತರಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಪ್ರೋತ್ಸಾಹ ಅಗತ್ಯವೆಂದರು. ತಾವು ಕೂಡ ಒಳ್ಳೆಯ ಕ್ರಿಕೆಟ್ ಆಟಗಾರನಾಗಿದ್ದು, ಲೆದರ್ ಬಾಲ್ ಪಂದ್ಯವನ್ನು ಹೆಚ್ಚು ಇಷ್ಟ ಪಡುತ್ತಿದೆ. ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉತ್ತೇಜಿಸುತ್ತಿರುವ…
ಮಡಿಕೇರಿ ಮೇ 12 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಅಂತಿಮ ಪಂದ್ಯಾಟದಲ್ಲಿ ಕೂರ್ಗ್ ಬ್ಲಾಸ್ಟರ್ಸ್ ತಂಡ 28 ರನ್‌ಗಳ ಜಯ ಸಾಧಿಸಿ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಕೂರ್ಗ್ ಯುನೈಟೆಡ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಟಾಸ್ ಗೆದ್ದ ಕೂರ್ಗ್ ಯುನೈಟೆಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೂರ್ಗ್ ಬ್ಲಾಸ್ಟರ್ಸ್ ತಂಡ 10 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 117 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕೂರ್ಗ್ ಯುನೈಟೆಡ್ ತಂಡ 10 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 89 ರನ್ ಗಳನ್ನು ಗಳಿಸಿ ಸೋಲು ಒಪ್ಪಿಕೊಂಡಿತು. ಕೂರ್ಗ್ ಬ್ಲಾಸ್ಟರ್ಸ್ ತಂಡದ ಆಟಗಾರ ಸಿ.ಎ.ಕಾರ್ತಿಕ್ 35 ಬಾಲ್ ಗಳಲ್ಲಿ 95 ರನ್ ಗಳನ್ನು ಸಿಡಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.…
ಮಡಿಕೇರಿ ಮೇ 12 NEWS DESK : ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿ ಫಾರಂ ನೀಡಿ ಶುಭ ಹಾರೈಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಜರಿದ್ದರು. ಈ ಬಾರಿ ನನ್ನ ಗೆಲುವು ಖಚಿತವೆಂದು ಇದೇ ಸಂದರ್ಭ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದರು.
ಮಡಿಕೇರಿ ಮೇ 12 NEWS DESK : ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯ ವಿವಿಧೆಡೆ ನಸುಕಿನಲ್ಲಿ ಅಥವಾ ರಾತ್ರಿ ವೇಳೆ ಗಾಳಿ, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಿಡಿಲಬ್ಬರ ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಕಾಲೂರು ಗ್ರಾಮದ ಬಾರಿಕೆ ಮೊಟ್ಟೆ ಎಂಬಲ್ಲಿ ಶನಿವಾರ ರಾತ್ರಿ ಜೋರಾಗಿ ಮಳೆ ಸುರಿದು ಸಿಡಿಲು ಬಡಿದ ಪರಿಣಾಮ ಮನೆಯೊಂದಕ್ಕೆ ಹಾನಿಯಾಗಿದೆ. ಸಿಡಿಲಬ್ಬರಕ್ಕೆ ಮನೆಯ ಒಂದು ಭಾಗ ಬಿದ್ದು ಹೋಗಿದೆ. ಮನೆಯಲ್ಲಿದ್ದ ಲಿಂಗಮ್ಮ ಹಾಗೂ ಅವರ ಪುತ್ರ ಕಿರಣ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಬಿದ್ದು ಸುಮಾರು 10 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮನೆಯವರು ಹೇಳಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗಾಳಿಬೀಡು ಗ್ರಾಮ ಪಂಚಾಯ್ತಿ ಪಿಡಿಓ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಲಿಂಗಮ್ಮ ಅವರಿಗೆ ಧೈರ್ಯ ತುಂಬಿದರು. ಸರಕಾರದ ಮೂಲಕ ಅಗತ್ಯ ಸಹಕಾರ…
ಮಡಿಕೇರಿ ಮೇ 12 NEWS DESK : ಪ್ರತಿ ಮಳೆಗಾಲದಲ್ಲಿ ಪ್ರವಾಹದಿಂದ ದ್ವೀಪದಂತ್ತಾಗುತ್ತಿದ್ದ ಭಾಗಮಂಡಲದಲ್ಲಿ ಮೇಲುಸೇತುವೆ ಕಾಮಗಾರಿ ಕೊನೆಗೂ ಪೂರ್ಣಗೊಂಡಿದೆ. ಇದೀಗ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಸೇತುವೆಯನ್ನು ಮುಕ್ತಗೊಳಿಸಲಾಗಿದೆ. ಕಾವೇರಿ ನೀರಾವರಿ ನಿಗಮದ ಮೂಲಕ ಕಾಮಗಾರಿ ಅನುಷ್ಠಾನಗೊಂಡಿದ್ದು, ಒಟ್ಟು 28 ಕೋಟಿ ರೂ.ಗಳಲ್ಲಿ ಸೇತುವೆ ನಿರ್ಮಾಣಗೊಂಡಿದೆೆ. ಈ ಮೇಲ್ಸೇತುವೆ ಭಾಗಮಂಡಲ ಪ್ರವೇಶ ದ್ವಾರದ ಮುಂದಿನಿಂದ ಪ್ರಾರಂಭವಾಗಿ ತಲಕಾವೇರಿ ರಸ್ತೆಯನ್ನು ಸಂಪರ್ಕಿಸುತ್ತದೆ. ಮಾತ್ರವಲ್ಲದೇ ಭಾಗಮಂಡಲ ಹೃದಯ ಭಾಗದಿಂದ ಮೇಲ್ಭಾಗವಾಗಿ ಮತ್ತೊಂದು ಸಂಪರ್ಕ ರಸ್ತೆ ನಾಪೋಕ್ಲು ಕಡೆಗೆ ತೆರಳುವ ಸೇತುವೆ ಬಳಿ ಕೊನೆಗೊಳ್ಳುತ್ತದೆ. ಒಟ್ಟು 880 ಮೀಟರ್ ಉದ್ದವಿದ್ದು, ಮಡಿಕೇರಿ-ಭಾಗಮಂಡಲ, ಭಾಗಮಂಡಲ-ತಲಕಾವೇರಿ, ಭಾಗಮಂಡಲ-ಅಯ್ಯಂಗೇರಿ ಎಂಬಂತೆ ಒಟ್ಟು 3 ಭಾಗಗಳಾಗಿ ವಿಂಗಡಿಸಲಾಗಿದೆ. ಸೇತುವೆಯಲ್ಲಿ 60 ಟನ್ ಗೂ ಮೇಲ್ಪಟ್ಟ ಭಾರದ ವಾಹನಗಳು ಸಂಚರಿಸಬಹುದಾಗಿದ್ದು, 40 ಕಿ.ಮೀ ವೇಗದ ಮಿತಿ ನಿಗಧಿ ಮಾಡಲಾಗಿದೆ. ವಿದ್ಯುತ್ ದೀಪಗಳು, ಕೇಬಲ್, ಮಳೆ ನೀರು ಹರಿಯಲು ಪೈಪ್ ಗಳನ್ನು ಅಳವಡಿಸಲಾಗಿದ್ದು, ಸುಣ್ಣಬಣ್ಣ ಬಳಿಯುವ ಕಾರ್ಯ ಪೂರ್ಣಗೊಂಡಿದೆ. ಭಾಗಮಂಡಲ ಹಾಗೂ ತಲಕಾವೇರಿ…






