ಮಡಿಕೇರಿ ಮೇ 10 NEWS DESK : ಸುಮಾರು 100 ವರ್ಷಗಳ ಇತಿಹಾಸ ಹೊಂದಿರುವ ಮೂರ್ನಾಡು ಪಟ್ಟಣದ ಶ್ರೀರಾಮಮಂದಿರವನ್ನು ಪುನರ್ ನಿರ್ಮಾಣ ಮಾಡಲಾಗುತ್ತಿದೆ. ನೂತನ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಲಾಯಿತು. ಮೊದಲ ಹಂತದಲ್ಲಿ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ರಾಮಮಂದಿರ ನಿರ್ಮಾಣಗೊಳ್ಳಲಿದೆ. 2ನೇ ಹಂತದಲ್ಲಿ ಸಭಾ ಭವನ ಹಾಗೂ 3ನೇ ಹಂತದಲ್ಲಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗುತ್ತದೆ. ಒಟ್ಟು ಯೋಜನಾ ವೆಚ್ಚ 4 ಕೋಟಿ ರೂ. ಎಂದು ಶ್ರೀರಾಮಮಂದಿರ ಜೀರ್ಣೋದ್ಧಾರ ಸಮಿತಿ ತಿಳಿಸಿದೆ. ವಿಶ್ವ ಹಿಂದೂ ಪರಿಷತ್ ವತಿಯಿಂದ ಅಯೋಧ್ಯೆ, ತಲಕಾವೇರಿ, ಇರ್ಪುವಿನ ಮೃತ್ತಿಕೆ (ಮಣ್ಣು), ಕಾವೇರಿ, ಗಂಗಾ ಮತ್ತು ಕಾಶಿ ತೀರ್ಥವನ್ನು ಶಿಲಾನ್ಯಾಸದ ಸಂದರ್ಭ ಸಮರ್ಪಿಸಲಾಯಿತು. ಭೂಮಿಪೂಜೆ ಸಂದರ್ಭ ಮೂರ್ನಾಡು ಶ್ರೀರಾಮಮಂದಿರ ಟ್ರಸ್ಟ್, ಶ್ರೀರಾಮಮಂದಿರ ಜೀರ್ಣೋದ್ಧಾರ ಸಮಿತಿ, ವಿಶ್ವ ಹಿಂದೂ ಪರಿಷತ್, ಮೂರ್ನಾಡುವಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಭಕ್ತರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಮೇ 10 NEWS DESK : ವ್ಯಕ್ತಿಯೊಬ್ಬರು ಮಸೀದಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಬಳಿಯ ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿಯಾಣಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಪಡಿಯಾಣಿ ಬೈರಂಡಾಣೆ ಗ್ರಾಮದ ನಿವಾಸಿ ಬಿ.ಯು.ಶಾದುಲಿ (55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೂಲಿ ಕೆಲಸ ಮಾಡಿಕೊಂಡಿದ್ದ ಶಾದುಲಿ ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ ಮನೆಯಿಂದ ಹೋದ ಶಾದುಲಿ ಅವರು ಮನೆ ಸಮೀಪದ ಬೈರಂಡಾಣೆ ಮಸೀದಿಯ ಮೇಲ್ಭಾಗದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. (ವರದಿ : ಸಾಜಿದ್ ಪಯ್ಯಾಡಿ)
ಕಡಂಗ ಮೇ 10 NEWS DESK : ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದ 20ನೇ ವರ್ಷದ ಮುಸ್ಲಿಂ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಿತು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಆಟಗಾರರು ಶಿಸ್ತಿನಿಂದ ಪಂದ್ಯಾವಳಿಯಲ್ಲಿ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದರು. ಇಂತಹ ಕ್ರೀಡಾಕೂಟದಿಂದ ಸಮುದಾಯ ಬಾಂಧವರಲ್ಲಿ ಸೌಹಾರ್ದತೆ ಹೆಚ್ಚಾಗಲಿದೆ ಎಂದು ನುಡಿದರು. ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫಾ ಚೋಕಂಡಳ್ಳಿ ಮಾತನಾಡಿ, ಯುವ ಪ್ರತಿಭೆಗಳು ಬೆಳೆಯಲು ಇಂತಹ ಕ್ರೀಡೆಗಳು ಅನಿವಾರ್ಯತೆ ಇದೆ ಎಂದು ನುಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಮಾತನಾಡಿ, 1996 ರಿಂದ ಕೊಡಗಿನ ಎಲ್ಲಾ ಭಾಗಗಳಲ್ಲಿ ಎಲ್ಲಾ ಸಮುದಾಯಗಳ ನಡುವೆ ಸೌಹಾರ್ದತೆ ಬೆಳೆಯಲು ಕ್ರೀಡೆ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ನಿವೃತ್ತ ಯೋಧ ಎ.ಎಂ.ಉಮ್ಮರ್ ಎಡಪಾಲ ಮಾತನಾಡಿ, ಯುವಕರು ಕ್ರೀಡೆಯ ಜೊತೆಗೆ ಶೈಕ್ಷಣಿಕ ಪ್ರಗತಿಗೂ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಕೊಡಗು…
ಕುಶಾಲನಗರ ಮೇ 10 NEWS DESK : 12ನೆಯ ಶತಮಾನದ ಭಕ್ತಿ ಪಂಥದ ಹರಿಕಾರರಾದ ಜಗಜ್ಯೋತಿ ಬಸವಣ್ಣನವರು ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿ ಕ್ರಾಂತಿಯ ಬೀಜವನ್ನು ಬಿತ್ತಿದ ಹರಿಕಾರ ಎಂದು ತೊರೆನೂರು ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಟಿ.ಬಿ.ಮಂಜುನಾಥ್ ತಿಳಿಸಿದರು. ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕ, ಕುಶಾಲನಗರ ವೀರಶೈವ ಸಮಾಜ ಹಾಗೂ ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಸಂಘದ ವತಿಯಿಂದ ಕುಶಾಲನಗರ ಬಸವೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದರು. ಇವನಾರವ, ಇವನಾರವ ಎಂದೆನ್ನದಿರಯ್ಯ ಇವ ನಮ್ಮವ, ಇವ ನಮ್ಮವ ಎಂದೆನ್ನಿರಯ್ಯ” ಎಂದು, ಸಮಾಜದ ಎಲ್ಲ ವರ್ಗದ ಜನರನ್ನು ಒಂದು ಗೂಡಿಸಿದ ಬಸವಣ್ಣ, ಜಾತೀಯತೆಯ ವಿರುದ್ಧ ಸಮರ ಸಾರಿದರು ಎಂದರು. ಬಸವಣ್ಣ ನಡೆದು ಬಂದ ದಾರಿ ಅವರ ವಚನಗಳ ಸಾರ ಅಂತರಂಗ ಬಹಿರಂಗ ಶುದ್ಧತೆಯ ಬಗ್ಗೆ ಧರ್ಮದ ಮಹತ್ವದ ಬಗ್ಗೆ ಬಸವಣ್ಣನವರಲ್ಲಿದ್ದ ಆಲೋಚನೆಗಳನ್ನು ವಚನಗಳ ಮೂಲಕ ಮಂಜುನಾಥ್ ತಿಳಿಸಿದರು. ಬಸವಣ್ಣನವರ ಭಾವಚಿತ್ರಕ್ಕೆ…
ಮಡಿಕೇರಿ ಮೇ 10 NEWS DESK : ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದ ಜಮೀನುಗಳನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತಿಸಬಾರದು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ಪ್ರಮುಖರು ಭೂಪರಿವರ್ತನೆಗೆ ಅವಕಾಶ ನೀಡುವ ಸರಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು. ವಾಣಿಜ್ಯೋದ್ಯಮ ಉದ್ದೇಶಕ್ಕಾಗಿ ಭೂಪರಿವರ್ತಿಸುವುದನ್ನು ಸಂಪೂರ್ಣವಾಗಿ ತಡೆಯಬೇಕು. ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ ಭೂಪರಿವರ್ತನಾ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎನ್.ಯು.ನಾಚಪ್ಪ ಅವರು ಮಾತನಾಡಿ ಕೊಡಗಿನ ಕಾಫಿ ತೋಟಗಳನ್ನು ಭೂಪರಿವರ್ತಿಸುವ ಮೂಲಕ ಭೂಮಾಫಿಯಾ, ರೆಸಾರ್ಟ್ ದೊರೆಗಳು, ರಿಯಲ್ ಎಸ್ಟೇಟ್ ದಣಿಗಳು, ಅನಿವಾಸಿ ಭಾರತೀಯ ಉದ್ಯಮಪತಿಗಳು, ಬಹುರಾಷ್ಟ್ರೀಯ ಕಂಪನಿಗಳು ಮತ್ತು ಕಾರ್ಪೋರೇಟ್ ವಲಯಗಳಿಗೆ ವಿಲಾ, ಬೃಹತ್ ಬಂಗಲೆ ಹಾಗೂ ಟೌನ್ ಶಿಪ್ ಗಳನ್ನು ನಿರ್ಮಿಸಲು ಸರಕಾರ ಅವಕಾಶ ನೀಡಲು ಮುಂದಾಗಿದೆ. ಕಾವೇರಿ…
ನಾಪೋಕ್ಲು ಮೇ 10 NEWS DESK : ಮೈಸೂರಿನ ಡೀ ಪೌಲ್ ಇಂಟರ್ನ್ಯಾಷನಲ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಪಂದ್ಯಾಟದಲ್ಲಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಯುವಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ರೇಖಾ ಚಿಣ್ಣಪ್ಪ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಮೇ 10 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಲೆದರ್ ಬಾಲ್ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ನ ದಿನದ ಎರಡು ಪಂದ್ಯಗಳನ್ನು ಮುಂಜಾನೆ ನಗರದಲ್ಲಿ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ರದ್ದುಗೊಳಿಸಿ ತಂಡಗಳಿಗೆ ಸಮಾನ ಅಂಕಗಳನ್ನು ಹಂಚಲಾಯಿತು. ಭಾರೀ ಮಳೆಯಿಂದ ಮೈದಾನ ಸಂಪೂರ್ಣ ಕೆಸರು ಮಯವಾಗಿ, ಕ್ರಿಕೆಟ್ ಆಡಲು ಅಸಾಧ್ಯವಾಗಿ ಪರಿಣಮಿಸಿದ ಹಿನ್ನೆಲೆ ಆಯೋಜಕರು ಪಂದ್ಯಗಳನ್ನು ರದ್ದುಗೊಳಿಸಿದರು. ದಿನದ ಮೊದಲ ಪಂದ್ಯ ಕೂರ್ಗ್ ಯುನೈಟೆಡ್ ಮತ್ತು ಕೊಡವ ವಾರಿಯರ್ಸ್ ನಡುವೆ ನಡೆಯಬೇಕಿತ್ತಾದರು, ಆಟ ಸಾಧ್ಯವಾಗದ ಹಿನ್ನೆಲೆ ಎರಡೂ ತಂಡಗಳಿಗೆ ಸಮಾನ ಅಂಕಗಳನ್ನು ಹಂಚಲಾಯಿತು. ಕೂರ್ಗ್ ಬ್ಲಾಸ್ಟರ್ಸ್ ಮತ್ತು ರಾಯಲ್ ಟೈಗರ್ಸ್ ನಡುವಿನ ದಿನದ ದ್ವಿತೀಯ ಪಂದ್ಯವನ್ನು ರದ್ದುಗೊಳಿಸಿ, ಅಂಕಗಳನ್ನು ಹಂಚಿರುವುದಾಗಿ ಆಯೋಜಕರು ತಿಳಿಸಿದ್ದಾರೆ.
ನಾಪೋಕ್ಲು ಮೇ 10 NEWS DESK : ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು. ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ.ಕರುoಬಯ್ಯ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವ ಹಾಗೂ ಅದರ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿನಿ ಹರ್ಷಿತ ರಕ್ತದಾನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ಮಾಡಿದರು. ಸುಮಾರು 41 ಯೂನಿಟ್ ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ. ಚೌರಿರ ಜಗತ್ ತಿಮ್ಮಯ್ಯ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ವಿ.ಎ.ಯತೀಶ್, ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ, ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಕಲ್ಪನಾ ಸಾಮ್ರಾಟ್, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಸೋಮವಾರಪೇಟೆ ಮೇ 10 NEWS DESK : ಬಸವಣ್ಣ ಈ ನಾಡಿನ ಸಾಂಸ್ಕೃತಿಕ ಅಡಿಪಾಯದ ಬುನಾದಿ ಕಟ್ಟಿದ ಮಹಾನ್ ಪುರುಷ, ಈ ರಾಷ್ಟ್ರದ ಸಾಂಸ್ಕೃತಿಕ ನಾಯಕನಾಗಬೇಕು ಎಂದು ಸರ್ವಧರ್ಮ ಗುರುಗಳು ಬಣ್ಣಿಸಿದರು. ಸೋಮವಾರಪೇಟೆಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ, 891 ಬಸವ ಜಯಂತಿ ಅಂಗವಾಗಿ ಪಟ್ಟಣದ ಕಕ್ಕೆಹೊಳೆ ಬಳಿಯಲ್ಲಿರುವ ಬಸವೇಶ್ವರ ಪ್ರತಿಮೆಗೆ ಸರ್ವದರ್ಮೀಯರು ಸೇರಿ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಕರ್ನಾಟಕ ರಾಜ್ಯ ಸರ್ಕಾರ ಬಸವೇಶ್ವರರನ್ನು ರಾಜ್ಯದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಮೊದಲ ಬಸವ ಜಯಂತಿ ಕಾರ್ಯಕ್ರಮದಲ್ಲಿ ಹಿಂದೂ, ಕ್ರೈಸ್ತ, ಮುಸಲ್ಮಾನ ಧರ್ಮಗುರುಗಳು ಸೇರಿದಂತೆ ಎಲ್ಲಾ ಜನಾಂಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವೈಕ್ಯತೆ ಮೆರೆದಿದ್ದು ವಿಶೇಷವಾಗಿತ್ತು. ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, 12ನೇ ಶತಮಾನದಲ್ಲಿಯೇ ಬಸವಣ್ಣನವರು ಜಾತಿ, ಮತ, ಬೇಧ ತೊಡೆದು ಎಲ್ಲಾರೂ ಒಂದೇ ಎಂದು ಸಮಾನತೆ ಸಾರಿದ ಮಹಾನ್ ಪುರುಷ, ಅವರ ತತ್ವ ಆದರ್ಶಗಳನ್ನು ಇಂದಿನ ಜನಾಂಗ ಅನುಸರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು. ಹಟ್ಟಿಹೊಳೆ…
ಕುಶಾಲನಗರ ಮೇ 10 NEWS DESK : ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಆಶ್ರಯದಲ್ಲಿ ಮೇ 12 ರಂದು ವರ್ತಕರ ಸ್ನೇಹ ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಅಧ್ಯಕ್ಷ ರವೀಂದ್ರ ರೈ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30 ಕ್ಕೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಚೇಂಬರ್ ಅಪ್ ಕಾಮರ್ಸ್ ಉಪಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಚೇಂಬರ್ ಪ್ರಮುಖರಾದ ಎಸ್.ಕೆ.ಸತೀಶ್, ಪಿ.ಪಿ.ಸತ್ಯನಾರಾಯಣ, ಬಿ.ಅಮೃತ್ ರಾಜ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಮಡಿಕೇರಿಯ ವಿಕ್ರಂ ಜಾದುಗಾರ ಅವರಿಂದ ಮ್ಯಾಜಿಕ್ ಶೋ ನಡೆಯಲಿದೆ. ವರ್ತಕರ ಕುಟುಂಬ ಸದಸ್ಯರಿಗೆ ವಿವಿಧ ರೀತಿಯ ಆಟೋಟಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ 4.30 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ಎಲ್.ಎನ್. ಸಂಸ್ಥೆಯ ಎನ್.ವಿಶ್ವನಾಥನ್, ಚೇಂಬರ್ ನ ಕೊಡಗು ಜಿಲ್ಲಾ ನಿರ್ದೇಶಕ ಎಂ.ಡಿ.ರಂಗಸ್ವಾಮಿ, ಕೆ.ಎಸ್.ರಾಜಶೇಖರ್, ಟಿ.ಆರ್.ಶರವಣಕುಮಾರ್ ಪಾಲ್ಗೊಳ್ಳಲಿದ್ದಾರೆ. ಕಾರ್ಕಳದ ವಾಗ್ಮಿ ರಾಜೇಂದ್ರ ಭಟ್ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳುವರು…






