ಮಡಿಕೇರಿ ಮೇ 9 NEWS DESK : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ 5,905 ವಿದ್ಯಾರ್ಥಿಗಳಲ್ಲಿ, 5,393 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶೇ.91.24 ರಷ್ಟು ಫಲಿತಾಂಶ ಬಂದಿದೆ. ಇವರಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾದ 2,859 ಬಾಲಕರಲ್ಲಿ, 2,531 ಬಾಲಕರು ಉತ್ತೀರ್ಣರಾಗಿದ್ದು, ಶೇ.88.53 ರಷ್ಟು ಫಲಿತಾಂಶ ಪಡೆದಿದ್ದಾರೆ. ಹಾಗೆಯೇ ಪರೀಕ್ಷೆಗೆ ಹಾಜರಾದ 3,046 ಬಾಲಕಿಯರಲ್ಲಿ 2,862 ಬಾಲಕಿಯರು ಉತ್ತೀರ್ಣರಾಗಿ ಶೇ.93.96 ರಷ್ಟು ಫಲಿತಾಂಶ ಪಡೆದಿದ್ದಾರೆ. ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿದ್ದು, ಈ ಬಾರಿ ವೆಬ್‍ಕಾಸ್ಟಿಂಗ್ ಮೂಲಕ ಪರೀಕ್ಷೆ ನಡೆದಿರುವುದು ವಿಶೇಷವಾಗಿದೆ. ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ತಾಲ್ಲೂಕುವಾರು ವಿವರ: ಮಡಿಕೇರಿ ಶೈಕ್ಷಿಣಿಕ ತಾಲ್ಲೂಕಿನಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ವಿವರ : ಮಡಿಕೇರಿಯ ಬ್ಲಾಸಂ ಪ್ರೌಢ ಶಾಲೆ, ಚೆಟ್ಟಳ್ಳಿ ಪ್ರೌಢಶಾಲೆ, ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಗಾಳಿಬೀಡು ಸರ್ಕಾರಿ ಪ್ರೌಢ ಶಾಲೆ, ಕಡಗದಾಳು ಸರ್ಕಾರಿ ಪ್ರೌಢ ಶಾಲೆ, ಮಕ್ಕಂದೂರು ಸರ್ಕಾರಿ ಪ್ರೌಢ ಶಾಲೆ,…
ಲೇಖಕ: admin
ಮಡಿಕೇರಿ ಮೇ 9 NEWS DESK : ಪ್ರಸಕ್ತ (2024-25) ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷಕ್ಕೆ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹಾಗೂ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500 ರವರೆಗೆ ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024 ರ ಜುಲೈ, 01 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ವರ್ಷಗಳ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15 ರಿಂದ 25…
ಮಡಿಕೇರಿ ಮೇ 9 NEWS DESK : ಹತ್ತನೇ ತರಗತಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ >> ಕುಶಾಲನಗರ ಫಾತಿಮಾ ಕಾನ್ವೆಂಟ್ ಪ್ರೌಢಶಾಲೆಯ ಸಿರಿ ಎಂ. 622(ಪ್ರಥಮ), ಎನ್.ಸಿ.ತೇಜಸ್ವಿನಿ 620(ದ್ವಿತೀಯ), ವಿರಾಜಪೇಟೆ ತಾಲ್ಲೂಕು ಕಳತ್ಮಾಡು ಲಯನ್ಸ್ ಪ್ರೌಢಶಾಲೆಯ ಕೆ.ಡಿ.ದಕ್ಷಿತಾ 619 (ತೃತೀಯ) ಸ್ಥಾನ ಪಡೆದಿದ್ದಾರೆ. ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಸೇಕ್ರೇಡ್ ಹಾರ್ಟ್ ಇಂಗ್ಲೀಷ್ ಮಾಧ್ಯಮ ಪ್ರೌಢ ಶಾಲೆಯ ಜ್ಞಾನೇಶ್ ಕುಮಾರ್ ಬಿ.ಎಸ್ 618, ಕುಶಾಲನಗರ ಫಾತಿಮಾ ಕಾನ್ವೆಂಟ್ ಪ್ರೌಢಶಾಲೆಯ ಸಿಂಧು ಎಂ. 618, ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಸೇಕ್ರೇಡ್ ಹಾರ್ಟ್ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಯ ದೀಕ್ಷಾ ಸಿ.ಎಸ್. 616 ಮತ್ತು ತನಿಷ್ಕ ಎನ್. ಕೂಚಳ್ಳಿ 616, ವಿರಾಜಪೇಟೆ ಸೇಂಟ್ ಆನ್ಸ್ ಪ್ರೌಢಶಾಲೆಯ ಹರಿಕೃಷ್ಣನ್ ಎಂ. 615, ಬಳಗುಂದ ಸಂತ ಜೋಸೆಫರ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಯ ವರ್ಷಿಣಿ ಎನ್.ಸಿ. 614, ಮಡಿಕೇರಿ ಸಂತ ಜೋಸೆಪರ ಕಾನ್ವೆಂಟ್ ಕಾಂಪೋಸಿಟ್ ಪ್ರೌಢಶಾಲೆಯ ಧೃತಿ ದೇಚಮ್ಮ ಸಿ.ಎಂ., 613 ಹಾಗೂ ಗೋಣಿಕೊಪ್ಪಲು ಕಳತ್ಮಾಡು…
ಮಡಿಕೇರಿ ಮೇ 9 NEWS DESK : ಪ್ರಸಕ್ತ(2024-25) ಸಾಲಿನ ಮೈಸೂರು ವಿಭಾಗ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮ `ಪಿಂಚಣಿ ಅದಾಲತ್’ ಮೇ, 17 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಜಿಲ್ಲಾಧಿಕಾರಿ ಅವರ ಕಾರ್ಯಾಲಯದ ವಿ.ಸಿ.ಸಭಾಂಗಣದಲ್ಲಿ (ವೆಬಿನಾರ್ ಮೂಲಕ) ನಡೆಯಲಿದೆ. ಈ ಸಂಬಂಧ ಕುಂದುಕೊರೆಗಳು ಇದ್ದಲ್ಲಿ, ನಿವೃತ್ತ ರಾಜ್ಯ ಸರ್ಕಾರಿ ನೌಕರರು ತಮ್ಮ ಅಹವಾಲುಗಳನ್ನು ಸೂಕ್ತ ದಾಖಲೆಗಳೊಂದಿಗೆ ಮೇ 15 ರೊಳಗೆ ಕೊಡಗು ಜಿಲ್ಲೆಯ ಉಪ ನಿರ್ದೇಶಕರು, ಜಿಲ್ಲಾ ಖಜಾನೆ ಕೊಠಡಿ ಸಂಖ್ಯೆ 10, (ದೂ.ಸಂ. 225654) ಜಿಲ್ಲಾಡಳಿತ ಭವನ, ಮಡಿಕೇರಿ ರವರಿಗೆ ಸಲ್ಲಿಸಲು ಹಾಗೂ ಅದಾಲತ್ ನಲ್ಲಿ ಭಾಗವಹಿಸುವಂತೆ ಜಿಲ್ಲಾ ಖಜಾನೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಮೇ 9 NEWS DESK : ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯನಿರ್ವಹಿಸಬೇಕಿರುವ ಹಿನ್ನೆಲೆ ಮೇ 11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಶಾಂತಳ್ಳಿ, ಗೌಡಳ್ಳಿ, ಸೋಮವಾರಪೇಟೆ ಪಟ್ಟಣ, ಅಬ್ಬೂರುಕಟ್ಟೆ, ಐಗೂರು, ಬಜೆಗುಂಡಿ, ಬೇಳೂರು, ಕುಂಬೂರು ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಕೋರಿದ್ದಾರೆ.
ಸೋಮವಾರಪೇಟೆ ಮೇ 9 NEWS DESK : ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಸೋಮವಾರಪೇಟೆ ತಾಲ್ಲೂಕಿಗೆ ಶೇ. 92.47 ರಷ್ಟು ಫಲಿತಾಂಶ ಲಭಿಸಿದೆ. 2,353 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2176 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 1227 ಬಾಲಕಿಯರು ಮತ್ತು 1126 ಬಾಲಕರು ಪರೀಕ್ಷೆ ಬರೆದಿದ್ದರು. ತಾಲ್ಲೂಕಿನ 33 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿವೆ. ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಣಿಮರೂರು ಸರ್ಕಾರಿ ಪ್ರೌಢಶಾಲೆ, ಕಾನ್‍ಬೈಲ್ ಸರ್ಕಾರಿ ಪ್ರೌಢಶಾಲೆ, ಅಂಕನಳ್ಳಿ ಸರ್ಕಾರಿ ಪ್ರೌಢಶಾಲೆ, ಸೋಮವಾರಪೇಟೆ ವಿಶ್ವಮಾನವ ಕುವೆಂಪು ಆಂಗ್ಲಮಾಧ್ಯಮ ಪ್ರೌಢಶಾಲೆ, ಸುಂಟಿಕೊಪ್ಪ ಸಂತಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಶಾಂತಿನೀಕೇತನ ಪ್ರೌಢಶಾಲೆ, ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆ, ಶನಿವಾರಸಂತೆ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ, ಚೌಡ್ಲು ಜ್ಞಾನವಿಕಾಸ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಅಂಕನಳ್ಳಿ ಸೆಂಟ್‍ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ, ಕಿರಗಂದೂರು ಸರ್ಕಾರಿ ಪ್ರೌಢಶಾಲೆ, ನೆಲ್ಲಿಹುದಿಕೇರಿ ಆಂಗ್ಲೋ ವರ್ಣಾಕುಲರ್ ಆಂಗ್ಲಮಾಧ್ಯಮ ಪೌಢಶಾಲೆ, ನಿಡ್ತ ಸರ್ಕಾರಿ ಪ್ರೌಢಶಾಲೆ, ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆ, ಕುಶಾಲನಗರ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಆಲೂರು…
ಮಡಿಕೇರಿ ಮೇ 9 NEWS DESK : ಸುಮಾರು 25 ವರ್ಷಗಳಿಂದ ಗ್ರಾಹಕರ ವಿಶ್ವಾಸ ಗಳಿಸಿರುವ ಕುಶಾಲನಗರದ ಬೈಚೇನಹಳ್ಳಿಯ ವಿಲ್ಕೋ ಗೋಲ್ಡ್ ಚಿನ್ನಾಭರಣ ಮಳಿಗೆ ಸಮೃದ್ಧಿ ಮತ್ತು ಐಶ್ವರ್ಯದ ಮತ್ತೊಂದು ಅಕ್ಷಯ ತೃತೀಯಕ್ಕಾಗಿ ಮೇ 10 ರಂದು ಅಮೋಘ ಕೊಡುಗೆಯನ್ನು ನೀಡುತ್ತಿದೆ. ಪ್ರತಿ ಗ್ರಾಂ 916 ಚಿನ್ನಾಭರಣಗಳ ಖರೀದಿಯ ಮೇಲೆ ರೂ.200/ ರಿಯಾಯಿತಿ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 08276 271117, 94485 73179
ಮಡಿಕೇರಿ ಮೇ 9 NEWSDESK : ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕ ವಸೂಲಾತಿ ವ್ಯವಹಾರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಿ ಪೋಷಕರು ಹಾಗೂ ವಿದ್ಯಾರ್ಥಿಗಳ ಹಿತ ಕಾಯಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಸರಕಾರಿ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಈ ಕಾರಣದಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳ ಹಿತ ಕಾಯಬೇಕಾದ ಖಾಸಗಿ ಶಿಕ್ಷಣ ಸಂಸ್ಥೆಗಳು ನಿಯಮ ಬಾಹಿರವಾಗಿ ದುಬಾರಿ ಶುಲ್ಕ ವಸೂಲಿ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ದೆಹಲಿಯ ಆಮ್ ಆದ್ಮಿ ಪಾರ್ಟಿ ಸರಕಾರ ಖಾಸಗಿ ಶಾಲೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ. ಕರ್ನಾಟಕ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿವರ್ಷ ಶೇ.15 ರಷ್ಟು ಶುಲ್ಕ ಹೆಚ್ಚಳ ಮಾಡುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ರಾಜ್ಯದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ಇದೆಯೇ ಎನ್ನುವ ಪ್ರಶ್ನೆ ಮೂಡುತ್ತಿದೆ. ಖಾಸಗಿ ಶಾಲೆಗಳಿಗೆ ಶುಲ್ಕ…
ಮಡಿಕೇರಿ ಮೇ 9 NEWS DESK : ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್ ನಮ್ಮೆ (ಬೇಡು ಹಬ್ಬ) ಮೇ 18 ಹಾಗೂ 19ರಂದು ನಡೆಯಲ್ಲಿದ್ದು, ಮೇ 11 ರಂದು ಹಬ್ಬದ ಸಾಂಪ್ರದಾಯಿಕ ಕಟ್ಟು ಬೀಳುವ ಮೂಲಕ ವಿವಿಧ ಕಟ್ಟುಪಾಡುಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ತಕ್ಕಮುಖ್ಯಸ್ಥರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಮೇ 11ರಂದು ಸಂಜೆ 5 ಗಂಟೆಗೆ ಮೂಕಳೇರ ಬಲ್ಯಮನೆ ಸಮೀಪದ ಅಂಬಲದಲ್ಲಿ ಹಬ್ಬಕ್ಕೆ ಕಟ್ಟು ಬೀಳಲಿದ್ದು, ಅಂದಿನಿಂದ ಹಬ್ಬ ಆಚರಣೆಯ ತನಕ ಹಳ್ಳಿಗಟ್ಟು ಊರಿನೊಳಗೆ ಪ್ರಾಣಿ ಹಿಂಸೆ ಹಾಗೂ ಹತ್ಯೆ ಮಾಡುವಂತಿಲ್ಲ, ಮರಗಿಡಗಳನ್ನು ಕುಡಿಯುವಂತ್ತಿಲ್ಲ, ಊರಿನೊಳಗಿರುವ ಮಂದಿ ಊರಿನ ಹೊರಗೆ ಹೋಗಿ ರಾತ್ರಿ ತಂಗುವಂತ್ತಿಲ್ಲ. ಒಂದು ಸಮಯ ಉಳಿದುಕೊಳ್ಳುವುದು ಅನಿವಾರ್ಯವಾದರೆ ಊರಿನವರಿಗೆ ತಿಳಿಸಿ ಹೋಗಬೇಕು ಹಾಗೂ ನಂತರ ತಪ್ಪು ಕಾಣಿಕೆಯನ್ನು ಹಾಕಬೇಕು.…
ಮಡಿಕೇರಿ ಮೇ 9 NEWS DESK : ಕೂಡಿಗೆ ಸಮೀಪದ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಶ್ರೀ ಶನೈಶ್ಚರ ಸ್ವಾಮಿ ದೇವಾಲಯದ ಧರ್ಮದರ್ಶಿ ಎಲ್ಲೂಬಾಯಿ (96) ಅಮ್ಮನವರು ಬುಧವಾರ ರಾತ್ರಿ ಶಿವೈಕ್ಯರಾಗಿದ್ದು, ಇಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಮೃತ ಎಲ್ಲೂಬಾಯಿ ಅವರ ಅಂತ್ಯಕ್ರಿಯೆ ಅವರ ಅಪೇಕ್ಷೆಯಂತೆ ವೀರಶೈವ ಲಿಂಗಾಯಿತ ಪದ್ದತಿಯಂತೆ ನೆರವೇರಿತು. ಬೆಳಿಗ್ಗೆಯಿಂದಲೇ ದೇವಾಲಯದ ಧರ್ಮದಶಿ ಎಲ್ಲೂಬಾಯಿ ಅಮ್ಮನವರಿಗೆ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ದೇವಾಲಯದ ಆವರಣದಲ್ಲಿ ಎಲ್ಲೂಬಾಯಿ ಅವರ ಪಾರ್ಥಿವವನ್ನು ಕ್ರಿಯಾಸಮಾಧಿ ಮಣ್ಣು ಮಾಡುವ ಮೂಲಕ ನೆರವೇರಿಸಲಾಯಿತು. ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಕೊಡ್ಲಿಪೇಟೆಯ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಅರಕಲಗೂಡು ಚಿಲುಮೆ ಮಠದ ಜಯದೇವ ಸ್ವಾಮೀಜಿ ಸೇರಿದಂತೆ ಹಲವರು ಪಾಲ್ಗೊಂಡು ಅಂತಿಮ ಮನವ ಸಲ್ಲಿಸಿದರು. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದು, ಮತ್ತೊಬ್ಬ ಪುತ್ರ ಕೊಡಗು ಜಿ.ಪಂ ಮಾಜಿ ಅಧ್ಯಕ್ಷರಾಗಿದ್ದ ಎಸ್.ಎನ್.ರಾಜಾರಾವ್ ಅನಾರೋಗ್ಯದಿಂದ ನಿಧನರಾಗಿದ್ದರು.…






