ಮಡಿಕೇರಿ ಮೇ 8 NEWS DESK : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ತರಬೇತಿ ನೀಡಲು ಕೌಶಲ್‍ಕರ್ ಪೋರ್ಟಲ್ ಅನ್ನು ಅನಾವರಣಗೊಳಿಸಿದೆ. ಈ ವೆಬ್‍ಪೋರ್ಟಲ್ ಮೂಲಕ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಕೌಶಲ್‍ಕರ್ ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಈ ಪೋರ್ಟಲ್‍ನಲ್ಲಿ ಹಲವಾರು ಜಾಬ್‍ರೋಲ್‍ಗಳಿದ್ದು, ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಕೌಶಲ್ಯ ಹಾಗೂ ಅನುಭವವನ್ನು http://www.kaushalkar.com ನಲ್ಲಿ ನೋಂದಾಯಿಸಿಕೊಂಡು ತರಬೇತಿ ಪಡೆಯಬಹುದು. ತರಬೇತಿ ಪೂರ್ಣಗೊಂಡ ನಂತರ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುವುದು. ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಎನ್.ಆರ್.ರವಿಕುಮಾರ್, ಜಿಲ್ಲಾ ಸಂಯೋಜಕರನ್ನು ಕಚೇರಿ ವೇಳೆಯಲ್ಲಿ ಮೊಬೈಲ್ ಸಂಖ್ಯೆ 9738361502 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಮೇ 8 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಬುಧವಾರದ ಮೊದಲ ಪಂದ್ಯದಲ್ಲಿ ಪ್ರಗತಿ ಕ್ರಿಕೆಟರ್ಸ್ ತಂಡ ಟೀಮ್ ಲಿವರೇಜ್ ವಿರುದ್ಧ 14 ರನ್ ಗಳ ಜಯ ದಾಖಲಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪ್ರಗತಿ ಕ್ರಿಕೆಟರ್ಸ್ ತಂಡ 20 ಓವರ್ ಗಳಲ್ಲಿ 167 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಎದುರಾಳಿ ತಂಡ ಟೀಮ್ ಲಿವರೇಜ್ 18.2 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 153 ರನ್ ಗಳನ್ನಷ್ಟೇ ಗಳಿಸಿ ಸೋಲು ಒಪ್ಪಿಕೊಂಡಿತು. ಪ್ರಗತಿ ಕ್ರಿಕೆಟರ್ಸ್ ನ ಅಭಿಮನ್ಯು ದೇವಯ್ಯ ಅವರು 36 ಬಾಲ್ ಗಳಲ್ಲಿ ಭರ್ಜರಿ 73 ರನ್ ಗಳನ್ನು ಗಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಮಡಿಕೇರಿ ಮೇ 8 NEWS DESK : ಪೊನ್ನಂಪೇಟೆಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಐ ಮತ್ತು ಎಮ್‍ಎಲ್ ವಿಭಾಗದಿಂದ “ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ” ವಿಷಯದ ಕುರಿತು ಮೂರು ದಿನಗಳ ಕಾರ್ಯಾಗಾರ ನಡೆಯಿತು. ಕೊಡವ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಸಿ.ಪಿ.ರಾಕೇಶ್ ಪೂವಯ್ಯ ಕಾರ್ಯಕ್ರಮವನ್ನು ಉಧ್ಘಾಟಿಸಿ, ಮಾತನಾಡಿ ಕೃತಕ ಬುದ್ಧಿಮತ್ತೆಯ ಮಹತ್ವ, ದೈನಂದಿನ ಜೀವನದಲ್ಲಿ ಅಳವಡಿಕೆ ಮತ್ತು ಸಮಾಜದಲ್ಲಿ ಕೃತಕ ಬುದ್ಧಿಮತ್ತೆಯ ಪ್ರಭಾವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಬೆಂಗಳೂರಿನ ಕೊಕ್ಕೆನ್ ರೊಬೋಟಿಕ್ಸ್ ನ ಸಿಇಒ ದರ್ಶನ್ ಕೊಕ್ಕೆಂಗಡ ಮಾತನಾಡಿ, ಕೃತಕ ಬುದ್ಧಿಮತ್ತೆ ಹೇಗೆ ನಮ್ಮ ದೈನಂದಿನ ಕೆಲಸಗಳಲ್ಲಿ ಬದಲಾವಣೆಗಳನ್ನು ತರುತ್ತಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಡೇಟಾಸೈನ್ಸ್ ಎಮ್.ಐ.ಕ್ಯೂ ಸಂಸ್ಥೆಯ ನಿರ್ದೇಶಕ ಬಿದ್ದಪ್ಪ ಮುತ್ತಪ್ಪ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ದೈನಂದಿನ ಜೀವನದಲ್ಲಿ ದತ್ತಾಂಶ ವಿಜ್ಞಾನವು ಹೇಗೆ ಸಹಕಾರಿ ಎಂಬುದನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಸವರಾಜು ಮಾತನಾಡಿ, ಸ್ವಯಂಚಾಲಿತ ಕೃತಕ ಬುದ್ಧಿಮತ್ತೆಯ ಪ್ರಯೋಜನಗಳನ್ನು ವಿವರಿಸಿ, ಕಾರ್ಯಕ್ರಮದ ಯಶಸ್ಸಿಗೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಎಐ…
ಪುತ್ತೂರು ಮೇ 8 NEWS DESK : ಹೊಸ ಹೊಸ ತಂತ್ರಜ್ಞಾನಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದರ ಆಶಯಗಳು ಸಾಕಾರವಾಗುತ್ತದೆ. ಅದಕ್ಕಾಗಿ ಯುವ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ರಾಯಭಾರಿಗಳಾಗಬೇಕು ಎಂದು ಮೈಸೂರಿನ ಎಸ್.ಡಿ.ಎಂ ರೀಸರ್ಚ್ ಸೆಂಟರ್ ಫಾರ್ ಮೆನೇಜ್‍ಮೆಂಟ್ ಸ್ಟಡೀಸ್ ನ ಅಧ್ಯಕ್ಷ ಡಾ. ಬಿ.ವೆಂಕಟ್ ರಾಜ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕೋತ್ಸವ ವಿಬ್‍ಜಯಾರ್-2024 (VIBGYOR-2024) ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತಾಡಿದರು. ಶಿಕ್ಷಣ ನೀಡುವ ಸಂಸ್ಥೆಗಳು ಸಾಕಷ್ಟಿವೆ ಆದರೆ ಜೀವನಾನುಭವಗಳನ್ನು, ಸಂಸ್ಕೃತಿ, ಉದ್ದೇಶ, ರಾಷ್ಟ್ರ ಚಿಂತನೆಗಳನ್ನು ತಿಳಿಸುವ ಶಿಕ್ಷಣ ವ್ಯವಸ್ಥೆ ಇಂದಿನ ಆವಶ್ಯಕತೆ ಎಂದರು. ತಮ್ಮ ಯೋಚನೆಗಳನ್ನು ಯೋಜನೆಗಳಾಗಿಸಿ ಅದಕ್ಕೊಂದು ಮೂರ್ತರೂಪ ಕೊಟ್ಟು ಅದನ್ನು ಒಂದು ಉತ್ಪನ್ನವಾಗಿಸಿ ಸಮಾಜದ ಒಳಿತಿಗಾಗಿ ಶ್ರಮಿಸುವ ಜವಾಬ್ಧಾರಿ ನಿಮ್ಮ ಮೇಲಿದೆ ಎಂದರು. ಸನಾತನ ಧರ್ಮವನ್ನು ಮುಂದುವರಿಕೊಂಡು ವಿಕಸಿತ ಭಾರತಕ್ಕಾಗಿ ಕೈಜೋಡಿಸುತ್ತಾ ಭಾರತವು ವಿಶ್ವಗುರುವಾಗುವಲ್ಲಿ ತಮ್ಮ ಕೊಡುಗೆಯನ್ನು ನೀಡಿ ಎಂದು ಹೇಳಿದರು. ವಿವೇಕಾನಂದ…
ಮಡಿಕೇರಿ ಮೇ 8 NEWS DESK : ಸೋಮವಾರಪೇಟೆ ಮತ್ತು ಯಲಹಂಕ ಬೆಂಗಳೂರು ಲಯನ್ಸ್ ಕ್ಲಬ್ ಗಳ ಜಂಟಿ ಸಮಾವೇಶ ನಡೆಯಿತು. ನಂತರ ಗೋಣಿಮರೂರು ಹಾಲು ಉತ್ಪಾದಕರ ಸಹಕಾರ ಸಂಘದ ಸುಮಾರು 100 ಸದಸ್ಯರಿಗೆ ರೈನ್ ಕೋಟ್ ವಿತರಿಸಿದರು. ಈ ಸಂದರ್ಭ ಉಭಯ ಕ್ಲಬ್ ಗಳ ಅಧ್ಯಕ್ಷರಾದ ಮಹೇಶ್, ಜಯಪ್ರಕಾಶ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಕೊಮಲ ಧರ್ಮಪ್ಪ, ಕಾರ್ಯದರ್ಶಿ ಶ್ಯಾಮಲಾ ತಾರಣ್ಣಯ್ಯ, ಉಪಾಧ್ಯಕ್ಷ ಯಶೋಧಾ ತಿಮ್ಮಯ್ಯ ಹಾಗೂ ಎಲ್ಲಾ ಸದಸ್ಯರು, ಸೋಮವಾರಪೇಟೆ ಲಯನ್ಸ್ ಕ್ಲಬ್ ನ ಚಟ್ಠಿಮಾಡ ರೋಹಿತ್, ನಂಗಾರು ರಾಮಚಂದ್ರ ಯಲಹಂಕ ಲಯನ್ಸ್ ಕ್ಲಬ್ ನ ಜಿತೇಂದ್ರ, ನಂಗಾರು ನಿಂಗರಾಜು ಹಾಜರಿದ್ದರು.
ಮಡಿಕೇರಿ ಮೇ 8 NEWS DESK : ಹಾಸನದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತ್ಯತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಮೂಟೆರಾ ಪುಷ್ಪಾವತಿ ರಮೇಶ್, ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಜಿಲ್ಲಾ ಜೆಡಿಎಸ್ ಮೇ 9 ರಂದು ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆ 11.30 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಕಾಂಗ್ರೆಸ್ ಸರಕಾರದ ನಡೆಯನ್ನು ಖಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಪೆನ್ ಡ್ರೈವ್ ನಲ್ಲಿ ಇತ್ತು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿಬಿಟ್ಟು ಸಂತ್ರಸ್ತ ಮಹಿಳೆಯರ ಮಾನಹಾನಿ ಮಾಡಿದ್ದಾರೆ. ಇದನ್ನು ತಡೆಯುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ, ಅಲ್ಲದೆ ವಿನಾಕಾರಣ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಹೆಸರನ್ನು ಬಳಕೆ ಮಾಡುವ ಮೂಲಕ…
ಮಡಿಕೇರಿ ಮೇ 8 NEWS DESK : 1999ರಲ್ಲಿ ಸ್ಥಾಪನೆಯಾದ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿದ್ದು, ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಇಡೀ ವರ್ಷ ಕ್ರೀಡೆ, ಸಾಮಾಜಿಕ ಕಾರ್ಯಕ್ರಮಗಳು ಸೇರಿದಂತೆ ಹಲವು ಜನಪರ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ ಎಂದು ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘ ನಡೆದು ಬಂದ ಹಾದಿ, ನೂತನ ಕುಶಾಲನಗರ ತಾಲೂಕಿನ ಸಮಗ್ರ ಮಾಹಿತಿ ಚಟುವಟಿಕೆಗಳು ದಾಖಲಿಸಲು ಸ್ಮರಣ ಸಂಚಿಕೆಯನ್ನು ಹೊರ ತರಲು ಸಂಘ ನಿರ್ಧರಿಸಿದೆ ಎಂದು ಮಾಹಿತಿ ನೀಡಿದರು. ನಮ್ಮ ಸಂಘದ ಸದಸ್ಯರಿಗೆ ಕ್ಷೇಮ ನಿಧಿ, ಕಚೇರಿ ಕಟ್ಟಡ ನಿರ್ಮಾಣ, ಸದಸ್ಯರಿಗೆ ನಿವೇಶನವನ್ನು ಪಡೆಯುವುದು ಈ ರೀತಿಯ ಚಟುವಟಿಕೆಗಳಿಗೆ ಸಾರ್ವಜನಿಕರು, ಉದ್ಯಮಿಗಳು, ರಾಜಕೀಯ ನೇತಾರರು ಹಾಗೂ ಸರ್ಕಾರದ ಸಹಕಾರದೊಂದಿಗೆ ಪ್ರೋತ್ಸಾಹದಾಯಕವಾಗಿ ನಿಧಿಯೊಂದನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಬೆಳ್ಳಿ ಮಹೋತ್ಸವದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷರು ಸೇರಿದಂತೆ ಇದುವರೆಗೆ ಸೇವೆ ಸಲ್ಲಿಸಿದ…
ಮಡಿಕೇರಿ ಮೇ 8 NEWS DESK : ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದ ಎಲ್ಲಾ ಭೂ ಪರಿವರ್ತನೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ 10 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಗ್ಗೆ 10.30 ಗಂಟೆಯಿಂದ 11.30 ರವರೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ರಾಷ್ಟ್ರಪತಿ, ಪ್ರಧಾನಮಂತ್ರಿ, ಕೇಂದ್ರ ಪರಿಸರ ಮತ್ತು ಅರಣ್ಯ ಮಂತ್ರಾಲಯ, ಯುನೆಸ್ಕೋದ ಮಹಾನಿರ್ದೇಶಕರು, ದೆಹಲಿಯ ಜಲ ನಿರ್ವಹಣಾ ಪ್ರಾಧಿಕಾರ, ಕರ್ನಾಟಕದ ಕಾವೇರಿ ನೀರಾವರಿ ನಿಯಂತ್ರಣ ಸಮಿತಿ, ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣ್ಯನ್ ಸ್ವಾಮಿ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಹಸಿರ ಪರಿಸರದಿಂದ ಕೂಡಿರುವ ಕಾಫಿ ತೋಟವನ್ನು ಭೂಪರಿವರ್ತಿಸುವ ಮೂಲಕ ಭೂಮಾಫಿಯಾ, ರೆಸಾರ್ಟ್ ದೊರೆಗಳು, ರಿಯಲ್ ಎಸ್ಟೇಟ್ ದಣಿಗಳು, ಅನಿವಾಸಿ ಭಾರತೀಯ ಉದ್ಯಮಪತಿಗಳು,…
ಮಡಿಕೇರಿ ಮೇ 8 NEWS DESK : ತೆಲಂಗಾಣ ರಾಜ್ಯದ ನಿಝಾಮಬಾದ್ ಲೋಕಸಭಾ ಕ್ಷೇತ್ರದ ಎಐಸಿಸಿ ವಿಶೇಷ ವೀಕ್ಷಕರಾದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯ ಬೊಮ್ಮ ಮಹೇಶ್ ಕುಮಾರ್ ಗೌಡ್ ಅವರನ್ನು ಭೇಟಿಯಾಗಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಜರಿದ್ದರು.
ನಾಪೋಕ್ಲು ಮೇ 8 NEWS DESK : ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ತಮ್ಮ ವ್ಯಕ್ತಿತ್ವ ರೂಪಿಸಿಕೊಂಡು ತಮ್ಮ ಜೀವನದ ಮೌಲ್ಯಗಳ ಬೆಳವಣಿಗೆಗೆ ಅಡಿಪಾಯ ಹಾಕಿಕೊಳ್ಳಬೇಕು ಎಂದು ಸಮಾಜ ಸೇವಕ ಬೆಂಗಳೂರಿನ ಲಯನ್ ಡಾ. ಎಸ್.ನಾಗರಾಜ್ ರಾವ್ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐಕ್ಯೂ ಎ.ಸಿ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವ್ಯಕ್ತಿತ್ವ ವಿಕಸನ ಮತ್ತು ಬೆಳವಣಿಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದು ಸ್ಪರ್ಧಾತ್ಮಕ ಪ್ರಪಂಚವಾಗಿದ್ದು ಓದಿನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ ವಿದ್ಯಾರ್ಥಿಗಳು ಯಶಸ್ವಿಯಾಗಬೇಕು. ಸದ್ಯದ ಪರಿಸ್ಥಿತಿಯಲ್ಲಿ ಖಾಸಗಿ ಕಂಪನಿಗಳಲ್ಲಿ ನಡೆಸುವ ಸಂದರ್ಶನಗಳ ಬಗ್ಗೆ ಅರಿವು ಇರಬೇಕು. ವಿದ್ಯಾರ್ಥಿಗಳು ಅದಕ್ಕಾಗಿ ತಯಾರಿ ನಡೆಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆದಷ್ಟು ಇಂಗ್ಲಿಷ್ ಭಾಷೆಯನ್ನು ಕಲಿತು ಎಲ್ಲರೊಂದಿಗೆ ಸಂದರ್ಶನಗಳಲ್ಲಿ ಪಾಲ್ಗೊಂಡು ಯಶಸ್ವಿ ಆಗಬೇಕು ಎಂದರು. ಕಾರ್ಯಕ್ರಮವನ್ನು ಉದ್ಯಮಿ ಲಯನ್ ಎಂ.ಆರ್ ಶ್ರೀನಿವಾಸ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ.ಎನ್.ಪಿ ಕಾವೇರಿ, ಎಲ್ಲಾ…






