ಮಡಿಕೇರಿ ಮೇ 7 NEWS DESK : ಪ್ರಸಕ್ತ(2024-25) ಸಾಲಿನ ಡಿಇಎಲ್‍ಇಡಿ ದಾಖಲಾತಿ ಸಂಬಂಧವಾಗಿ ಸರ್ಕಾರಿ ಕೋಟಾದ ಸೀಟುಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 05 ಕೊನೆಯ ದಿನವಾಗಿದೆ. ಈ ಸಂಬಂಧವಾಗಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಅದರಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ.50, ಪ.ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು ಶೇ.45 ಅಂಕ ಪಡೆದಿರಬೇಕು. ಇತರೆ ಸೂಚನೆಗಳನ್ನು ವೆಬ್‍ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ. ವೆಬ್‍ಸೈಟ್‍ನಲ್ಲಿನ ಮಾಹಿತಿಯನ್ನು ಕಡ್ಡಾಯವಾಗಿ ಓದಿಕೊಂಡು ಅರ್ಜಿ ಕ್ರಮವಾಗಿ ಭರ್ತಿ ಮಾಡುವುದು. ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕೂಡಿಗೆ, ಕೊಡಗು ಜಿಲ್ಲೆ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಡಯಟ್ ಕೂಡಿಗೆ, ಕೊಡಗು ಜಿಲ್ಲೆ ದೂರವಾಣಿ ಸಂಖ್ಯೆ 08276-242189, 8139956802, 9448813576 ನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಜೂ.5 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕವನ್ನು ಬ್ಯಾಂಕ್‍ನಲ್ಲಿ ಡಿ.ಡಿ. ಮೂಲಕ ಪಾವತಿಸಲು ಜೂ.5 ಕೊನೆಯ ದಿನವಾಗಿದೆ(ಸಾಮಾನ್ಯ/ ಇತರೆ ವರ್ಗ…
ಲೇಖಕ: admin
ಮಡಿಕೇರಿ ಮೇ 7 NEWS DESK : ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ನಿಡ್ತ ಗ್ರಾಮದ ಶ್ರೀ ಬಸವೇಶ್ವರ ಮತ್ತು ಶ್ರೀ ಕನ್ನಂಬಾಡಿಯಮ್ಮ ದೇವಾಲಯದಲ್ಲಿ ವಾರ್ಷಿಕ ಪೂಜೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಪಟ್ಟಣದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮಡಿಕೇರಿ ಮೇ 7 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ಹಾಗೂ ತೀರ್ಥ ಸ್ನಾನ ನಡೆಯಿತು. ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ಬಳಿಕ ದೇವಾಲಯದ ಆವರಣದ ಸುತ್ತಲೂ ದೇವಿಯ ರಥೋತ್ಸವವು ಜರುಗಿತು. ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ, ಮಂಗಳಾರತಿ ಹಾಗೂ ತಾಯಿಯ ದರ್ಶನ ನಡೆಯಿತು. ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ದೇವಾಲಯಕ್ಕೆ ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ, ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದೆ.
ಮಡಿಕೇರಿ ಮೇ 7 NEWS DESK : ಬದುಕನ್ನು ಪ್ರತೀ ವ್ಯಕ್ತಿಯೂ ಮನಸ್ಸಾರೆ ಆನಂದಿಸಬೇಕು, ಆಗ ಅವರ ನಡುವಳಿಕೆಯಲ್ಲಿ ಶ್ರೇಷ್ಠತೆ, ಮನತೃಪ್ತಿ ಕಾಣಲು ಸಾಧ್ಯವಾಗುತ್ತದೆ ಎಂದು ಮ್ಯಾನೇಜ್ ಮೆಂಟ್ ಸಲಹೆಗಾರ ಮೈಸೂರಿನ ಕೊಡಂದೆರ ಹರೀಶ್ ಮಾಚಯ್ಯ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ 20 ದಿನಗಳಿಂದ ಆಯೋಜಿಸಲಾಗಿದ್ದ ಸಮಾಗಮ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಲಾಕೃತಿಗಳ ಪ್ರದಶ೯ನ ಅನಾವರಣಗೊಳಿಸಿದ ಬಳಿಕ ಮಾತನಾಡಿದ ಕೊಡಂದೆರ ಹರೀಶ್ ಮಾಚಯ್ಯ, ಬೇಸಿಗೆ ಶಿಬಿರದಲ್ಲಿ ಭಾಗವಹಿಸುವ ಪ್ರತಿಯೊಬ್ಬ ವಿದ್ಯಾರ್ಥಿಯು ಚಾಂಪಿಯನ್ ಆಗಿ ಹೊರಹೊಮ್ಮುತ್ತಾನೆಂದು ಅಭಿಪ್ರಾಯಪಟ್ಟರು. ಪ್ರತಿಯೊಬ್ಬ ವ್ಯಕ್ತಿ ಜೀವನವನ್ನು ಆನಂದಿಸಬೇಕು, ಹಾಗೇ ಅವರ ನಡವಳಿಕೆಯಲ್ಲಿ ಶ್ರೇಷ್ಠತೆಯನ್ನು ಹೊಂದಿರಬೇಕು, ಇಂದು ಎಲ್ಲಿದ್ದೀರಿ ಹಾಗೂ ಮುಂದೆ ಭವಿಷ್ಯದಲ್ಲಿ ನೀವು ಎಲ್ಲಿರುವಿರಿ ಎಂಬುದು ಬಹಳ ಮುಖ್ಯವಾಗುತ್ತದೆ ಎಂದು ಮಕ್ಕಳಿಗೆ ಹರೀಶ್ ಮಾಚಯ್ಯ ಕಿವಿಮಾತು ಹೇಳಿದರು. ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ ಮಾತನಾಡಿ, ಈ ಬಾರಿಯ ಮಾಗಮ ಬೇಸಿಗೆ ಶಿಬಿರ ಯಶಸ್ವಿಯಾಗಲು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದ…
ಕುಶಾಲನಗರ ಮೇ 7 NEWS DESK : ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ 10ನೇ ತರಗತಿ ನಂತರದ ಭವಿಷ್ಯದ ಶೈಕ್ಷಣಿಕ ಕೋರ್ಸ್‌ಗಳು ಮತ್ತು ಸಿಇಟಿ ನೀಟ್ ಕೋರ್ಸ್‌ನ ಪ್ರಾಮುಖ್ಯತೆಯ ಕುರಿತು ಓರಿಯಂಟೇಶನ್ ಕಾರ್ಯಕ್ರಮ ನಡೆಯಿತು. ವಿವೇಕಾನಂದ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆಯಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಪನ್ಮೂಲ ವ್ಯಕ್ತಿಗಳು ಎಸ್‌ಎಸ್‌ಎಲ್‌ಸಿ ನಂತರ ಲಭ್ಯವಿರುವ ಶೈಕ್ಷಣಿಕ ಅವಕಾಶಗಳು ಮತ್ತು ಸಿಇಟಿ, ನೀಟ್ ಕೋರ್ಸ್ ಪ್ರಾಮುಖ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು. ಸಿಇಟಿ, ನೀಟ್ ತತರಬೇತುದಾರರದಾದ ಡಾ. ಪಿ.ಗೋವಿಂದರಾಜ್, ಎಚ್.ಕೆ.ಪ್ರಕಾಶ್, ಯೆನೆಪೊಯ ಪಿಯು ಕಾಲೇಜು ಡಾ. ರಾಕೇಶ್, ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಡಾ. ಪ್ರಶಾಂತ್ ರಾವ್ ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ ಬಗ್ಗೆ ವಿದ್ಯಾರ್ಥಿ ಸಮೂಹ ಹಾಗೂ ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿ, ಮಾರ್ಗದರ್ಶನ ನೀಡಿದರು. ಈ ಸಂದರ್ಭ ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಹಾಗೂ ಉಪನ್ಯಾಸಕ ವೃಂದದವರು ಇದ್ದರು.
ಮಡಿಕೇರಿ ಮೇ 7 NEWS DESK : ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಬಾಡಿ, ಪಡ್ಪು ಹಾಗೂ ಮಂಗಳಪಾರೆಗೆ ಸಂಪರ್ಕಿಸುವ ರಸ್ತೆ ಕಾಮಗಾರಿ ಕೆಲಸ ಭರದಿಂದ ಸಾಗಿದೆ. ಗ್ರಾಮಸ್ಥರ ಬಹುಕಾಲದ ಬೇಡಿಕೆಯಾಗಿದ್ದ ಸಂಪರ್ಕ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ರಸ್ತೆ ಕಾಮಗಾರಿಗೆ ಅನುದಾನ ಮಂಜೂರು ಮಾಡಿದ್ದು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಮೇ 6 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಸೋಮವಾರದ ಎರಡನೇ ಪಂದ್ಯದಲ್ಲಿ ಅಂಜಿಗೇರಿ ನಾಡ್ ತಂಡದ ವಿರುದ್ಧ ಕೊಡವ ಟ್ರೈಬ್ ತಂಡ 81 ರನ್‍ಗಳ ಜಯ ಸಾಧಿಸಿದೆ. ಟಾಸ್ ಗೆದ್ದ ಅಂಜಿಗೇರಿ ನಾಡ್ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಕೊಡವ ಟ್ರೈಬ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 196 ರನ್ ಗಳನ್ನು ಗಳಿಸಿತು. ಅಂಜಿಗೇರಿ ನಾಡ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಕೇವಲ 115 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು. ಕೊಡವ ಟ್ರೈಬ್ ತಂಡದ ಆಯುಷ್ ಪೊನ್ನಪ್ಪ 54 ರನ್ ಗಳನ್ನು ದಾಖಲಿಸಿ, 1 ವಿಕೆಟ್ ನ್ನು ಪತನಗೊಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಪಡೆದುಕೊಂಡರು. ಮೇ 7 ರ ಕ್ರಿಕೆಟ್ ಪಂದ್ಯ :: Match…
ಸುಂಟಿಕೊಪ್ಪ ಮೇ 6 NEWS DESK : ವ್ಯಕ್ತಿಯೊಬ್ಬರು ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಂಟಿಕೊಪ್ಪದ 7ನೇ ಹೊಸಕೋಟೆಯಲ್ಲಿ ನಡೆದಿದೆ. ಐಗೂರು ಗ್ರಾಮದ ನಿವಾಸಿ ಮಧು (42) ಎಂಬುವವರೇ ಮೃತ ವ್ಯಕ್ತಿ. ಸುಂಟಿಕೊಪ್ಪ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ವಿರಾಜಪೇಟೆ ಮೇ 6 NEWS DESK : ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಅಂತಿಮ ಬಿಸಿಎ ವಿದ್ಯಾರ್ಥಿಗಳ ಆನ್ಸ್ ಪ್ರೀಮಿಯರ್ ಲೀಗ್ ಅಂತರ್ ತರಗತಿ ಕ್ರಿಕೆಟ್ ಮತ್ತು ಬಾಲಕಿಯರ ಥ್ರೋ ಬಾಲ್ ಪಂದ್ಯಾವಳಿ ನಡೆಯಿತು. ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳ ನಡುವೆ ಜಿದ್ದಾಜಿದ್ದಿನ ಪಂದ್ಯಾವಳಿ ನಡೆಯಿತು. ಕ್ರಿಕೆಟ್ ಪಂದ್ಯಾವಳಿಯ ವಿಶೇಷವೆಂದರೆ ಉಪನ್ಯಾಸಕರೇ ತಂಡಗಳ ನಿರ್ವಹಣೆಗಾರರಾಗಿ ಕಾರ್ಯನಿರ್ವಹಿಸಿದರು. ಎರಡು ದಿನಗಳ ಕಾಲ ನಡೆದ ಈ ಕ್ರೀಡಾಕೂಟವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಾಕರ್ ಉದ್ಘಾಟಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದ ಅವರು ಪಂದ್ಯಾವಳಿಯನ್ನು ಆಯೋಜಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗಳಲ್ಲಿಯೂ ಭಾಗವಹಿಸಬೇಕೆಂದು ಕಿವಿಮಾತು ಹೇಳಿದರು. ಒಟ್ಟು ಎಂಟು ತಂಡಗಳು ಭಾಗವಹಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎರಡನೇ ದಿವಸ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಾವಳಿ ನಡೆದು ಟೈಟಾನ್ಸ್ ತಂಡವು ಸ್ಪಾರ್ಟನ್ಸ್ ತಂಡದ ವಿರುದ್ಧ ಜಯಗಳಿಸಿ…
ಮಡಿಕೇರಿ ಮೇ 6 NEWS DESK : ಕೊಡಗು ಜಿಲ್ಲೆಯ 5 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳಾಗಿ ಘೋಷಣೆ ಮಾಡಿದ್ದು ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಜಿಲ್ಲಾಡಳಿತದ ಸಹಕಾರದೊಂದಿಗೆ ಎಲ್ಲಾ ಮುಂಜಾಗ್ರತಾ ಕ್ರಮವಹಿಸಲಾಗಿದೆ. ಜಿಲ್ಲೆಯಲ್ಲಿ 20 ನೇ ಜಾನುವಾರು ಗಣತಿಯ ಪ್ರಕಾರ 76920 ಜಾನುವಾರುಗಳು 8553 ಕುರಿ ಮತ್ತು ಮೇಕೆಗಳಿದ್ದು, ಸದ್ಯದ ಮಟ್ಟಿಗೆ ಜಿಲ್ಲೆಯಲ್ಲಿ ಮೇವಿನ ಕೊರತೆ ಕಂಡು ಬಂದಿರುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಮೇವಿನ ಕೊರತೆ ಉಂಟಾಗದಂತೆ ಮೇವಿನ ಬೀಜಗಳ 476 ಎಟಿಎಂ ಹಾಗೂ 309 ಸೋರ್ಗಂ ಮಿನಿ ಕಿಟ್‍ಗಳನ್ನು ಆಸಕ್ತ ನೀರಾವರಿ ಸೌಲಭ್ಯ ಇರುವ ಜಾನುವಾರು ಹೊಂದಿದ ರೈತಬಾಂಧವರಿಗೆ ವಿತರಿಸಲಾಗುತ್ತಿದ್ದು, ಇದರಲ್ಲಿ ಎ.ಟಿ.ಎಂ, ಏಕವಾರ್ಷಿಕ ಬೆಳೆಯಾಗಿದ್ದು ಮತ್ತು ಸೋರ್ಗಂ ಬಹುವಾರ್ಷಿಕ ಬೆಳೆಯಾಗಿರುತ್ತದೆ. ಮೇವು ಬೀಜಗಳನ್ನು ಬಿತ್ತನೆ ಮಾಡಿದ 60 ರಿಂದ 75 ದಿನದೊಳಗೆ ಮೇವು ಕಟಾವಿಗೆ ಬರುತ್ತದೆ. ನಂತರ 2 ತಿಂಗಳಿಗೊಂದಾವರ್ತಿಯಂತೆ ಮೂರ್ನಾಲ್ಕು ಬಾರಿ ಮೇವು ಕಟಾವು ಮಾಡಬಹುದಾಗಿದೆ. ಹಾಗೆಯೇ ಜಿಲ್ಲೆಯಲ್ಲಿ ಏ.1 ರಿಂದ ಮೇ 10 ರವರೆಗೆ…






