ಲೇಖಕ: admin

ಮಡಿಕೇರಿ ಮೇ 6 NEWS DESK : ಪ್ರಸಕ್ತ 2024ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯು ‘ಭೂಸುಧಾರಣೆ ಹಾಗೂ ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ’ ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿದೆ. ಈ ಜಾಗತಿಕ ಆಚರಣೆಯ ಅನುಗುಣವಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು (ಎನ್ವಿರಾನ್ಮೆಂಟ್ ಅಸೋಸಿಯೇಷನ್ ಆಫ್ ಬೆಂಗಳೂರು) ಜಂಟಿಯಾಗಿ ‘ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು’ ಎಂಬ ಶೀರ್ಷಿಕೆಯಡಿಯಲ್ಲಿ ಒಂದು ದಿನದ ರಾಷ್ಟ್ರೀಯ ಕಾರ್ಯಗಾರವು ಜೂ. 8 ರಂದು ಅಕಾಡೆಯ ಕಚೇರಿಯಲ್ಲಿ ನಡೆಯಲಿದೆ. ಈ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ (ಕನ್ನಡ ಮತ್ತು ಇಂಗ್ಲೀಷ್-1000 ಪದಗಳಿಗೆ ಮೀರದಂತೆ) ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ https://kstacademy.in ನ್ನು ವೀಕ್ಷಿಸಬಹುದು. ಪ್ರಬಂಧ ಸ್ಪರ್ಧೆಯನ್ನು ‘ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು’ ಎಂಬ ವಿಷಯದ ಮೇಲೆ ಆಯೋಜಿಸಲಾಗುತ್ತಿದ್ದು, ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ವಿದ್ಯಾರ್ಥಿಗಳು ಹೆಸರು,…

Read More

ಮಡಿಕೇರಿ ಮೇ 6 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ’(ಸಸ್ಟೈನೇಬಲ್ ಗ್ರೌಂಡ್ ವಾಟರ್ ಮ್ಯಾನೇಜ್‍ಮೆಂಟ್ ಫಾರ್ ವಾಟರ್ ಸೆಕ್ಯುರಿಟಿ) ಎಂಬ ವಿಷಯದ ಕುರಿತು ಜೂ.19 ರಿಂದ ಜೂ.21 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸ ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು ಭಾಗವಹಿಸಲು ಅವಕಾಶವಿದೆ. ಅಲ್ಲದೇ ಈ ಸಮ್ಮೇಳನದಲ್ಲಿ ರಿಸರ್ಚ್ ಪೇಪರ್ ಮಂಡಿಸಬಹುದಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್‍ಗಳಿಗೆ ನಗದು ಬಹುಮಾನ ನೀಡಲಾಗುವುದು. ಈ ಸಮ್ಮೇಳನದಲ್ಲಿ ಭಾಗವಹಿಸಲು ಜೂನ್, 10 ರೊಳಗೆಗೂಗಲ್ ಫಾರ್ಮ್ (https://forms.gle/QDXV64LDibFbHydc9) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮ ಸಂಯೋಜಕರು (ಮೊ. 9845258894 ಮತ್ತು 9743084194) ಅಥವಾ ಅಕಾಡೆಮಿಯ ವೆಬ್‍ಸೈಟ್ www.kstacademy.in ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

Read More

ಮಡಿಕೇರಿ ಮೇ NEWS DESK 6 : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 2024-25 ನೇ ಸಾಲಿಗೆ ಪ್ರಥಮ ಬಿಎ ಮತ್ತು ಬಿಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಕಾಲೇಜಿನ ಕಚೇರಿಯ ವೇಳೆಯಲ್ಲಿ ಅರ್ಜಿ ಪಡೆದು ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ. 9945185783, 9845907344, 9008180049, 9538506370 ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಸುಂಟಿಕೊಪ್ಪ ಮೇ 6 NEWS DESK  : 7ನೇ ಹೊಸಕೋಟೆ ಸಂತ ಸೆಬಾಸ್ಟೀನ್ ದೇವಾಲಯದ ವಾರ್ಷಿಕೋತ್ಸವದ 2 ದಿನದ ವಿಶೇಷ ಪೂಜೆ ಸೇರಿದಂತೆ ಆರಾಧನೆ, ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ಹಾಗೂ ದೇವಾಲಯದ ಸುತ್ತ ಸಂತ ಸಬಾಸ್ಟಿನ್ ಅವರ ಮೂರ್ತಿಯ ಮೆರವಣಿಗೆಯನ್ನು ನೇರವೇರಿಸಲಾಯಿತು. 7ನೇ ಹೊಸಕೋಟೆಯ ಸಂತ ಸೆಬಾಸ್ಟಿನ್ ದೇವಾಲಯದ ಧರ್ಮಗುರುಗಳಾದ ವಂ.ರೆ.ಫಾದರ್ ಸೆಬಾಸ್ಟಿನ್ ಪೂವತ್ತಿಗಲ್ ಅವರು ಸಂಜೆ ದೇವಾಲಯದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ನೂತನ ದೇವಾಲಯದಲ್ಲಿ ಹಬ್ಬದ ಆರಾಧನೆ ಹಾಗೂ ವಿಶೇಷ ಬಲಿ ಪೂಜೆಯನ್ನು ಸಲ್ಲಿಸಿದರು. ಸಂತ ಸೆಬಾಸ್ಟಿನ್ ವಾರ್ಷಿಕೋತ್ಸವದ ಅಂಗವಾಗಿ ಮಡಿಕೇರಿ, ಸುಂಟಿಕೊಪ್ಪ, ಕೊಡಗರಹಳ್ಳಿ, ಕಂಬಿಬಾಣೆ, ಕುಶಾಲನಗರ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಕ್ರೈಸ್ತ ಬಾಂಧವರು ಅಂಬು ಕಾಣಿಕೆಯ ಹರಕೆಗಳನ್ನು ಸಲ್ಲಿಸಿದರು. ನಂತರ ಬೆಳ್ತಂಗಡಿ ಧರ್ಮಕ್ಷೇತ್ರದ ಧರ್ಮಗುರುಗಳಾದ ವಂ.ರೆ.ಫಾದರ್ ಟೋಮಿ ಕಳ್ಳಿಪಾತ್ ಅವರು ಹಬ್ಬದ ಅಡಂಬರ ಬಲಿಪೂಜೆ ಹಾಗೂ ಮಕ್ಕಳಿಗೆ ನೂತನ ಪರಮ ಪ್ರಸಾದವನ್ನು ನೀಡಿದರು. ಸಂತ ಸಬಾಸ್ಟೀನ್ ಅವರ ಮೂರ್ತಿಯನ್ನು ಹಿಡಿದು ದೇವಾಲಯದ ಆವರಣದಲ್ಲಿ ಮೆರವಣಿಗೆಯನ್ನು ನಡೆಸಲಾಯಿತು.…

Read More

ಮಡಿಕೇರಿ ಮೇ NEWS DESK 6 : ಖಾಸಗಿ ಜಮೀನಿನಲ್ಲಿರುವ ಸರಕಾರಿ ಮರಗಳ ಸರ್ವೆ ಕಾರ್ಯವನ್ನು ತಕ್ಷಣ ಸ್ಥಗಿತಗೊಳಿಸಬೇಕೆನ್ನುವ ಒತ್ತಾಯವಿದ್ದರೂ ಅರಣ್ಯ ಅಧಿಕಾರಿಗಳು ಸರ್ವೆಯನ್ನು ಮುಂದುವರೆಸಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮಗುವನ್ನು ಚಿವುಟಿ ತೊಟ್ಟಿಲು ತೂಗುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸುಬ್ಮಮಣ್ಯ ಉಪಾಧ್ಯಾಯ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರಣ್ಯ ಇಲಾಖೆಯ ನಡೆ ಜಿಲ್ಲೆಯ ಕೃಷಿಕ ವರ್ಗದಲ್ಲಿ ಆತಂಕವನ್ನು ಸೃಷ್ಟಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರ ಮಾತಿಗೆ ಅಧಿಕಾರಿಗಳು ಬೆಲೆ ನೀಡಿದಂತೆ ಕಾಣುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮರಗಳ ಸರ್ವೆ ಕಾರ್ಯಕ್ಕೆ ಬೆಳೆಗಾರರ ತೀವ್ರ ವಿರೋಧವಿರುವ ಕಾರಣ ಬೆಳೆಗಾರರಿಗೆ ಬೆಂಬಲವಾಗಿ ನಿಂತ ಬಿಜೆಪಿ ಹೋರಾಟದ ಎಚ್ಚರಿಕೆ ನೀಡಿದ ನಂತರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಭರವಸೆಯ ಮಾತುಗಳನ್ನಾಡಿದ್ದರು. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಬೆಳೆಗಾರರಿಗೆ ವಿರುದ್ಧವಾಗಿ ಸರಕಾರ ನಡೆದುಕೊಳ್ಳುವುದಿಲ್ಲ, ಚುನಾವಣೆಯ ನಂತರ ಎಲ್ಲವನ್ನೂ ಸರಿ ಮಾಡುವುದಾಗಿ ತಿಳಿಸಿದ್ದರು. ಆದರೆ ಅರಣ್ಯ ಅಧಿಕಾರಿಗಳು ಬೆಳೆಗಾರರ ಆಕ್ಷೇಪಕ್ಕೆ ವಿರುದ್ಧವಾಗಿ…

Read More

ಮಡಿಕೇರಿ ಮೇ 6 NEWS DESK : ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೀಗ 110 ವರ್ಷಗಳ ಸಂಭ್ರಮ. ಕನ್ನಡ ನಾಡು, ನುಡಿ, ಸಂಸ್ಕೃತಿ ರಕ್ಷಣೆಗಾಗಿ 1915ರಲ್ಲಿ ಆಗಿನ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ವಿಶೇಷ ಕಾಳಜಿ ವಹಿಸಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಷತ್ ಸಂಸ್ಥಾಪನೆಗೊಳ್ಳಲು ಪ್ರಮುಖ ಕಾರಣರಾಗಿದ್ದರು. ಆಗಿನಿಂದ ಇಂದಿನವರೆಗೂ ಹಲವು ಮಹನೀಯರು ಕನ್ನಡ ಕಟ್ಟುವ ಕಾರ್ಯದಲ್ಲಿ ತೊಡಗಿ ಕನ್ನಡ ನಾಡು, ನುಡಿ ಬೆಳವಣಿಗೆಗೆ ನೆರವಾಗಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ನಗರದ ಕ.ಸಾ.ಪ ಕಚೇರಿಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಕರ್ನಾಟಕ ಸುವರ್ಣ ಸಂಭ್ರಮ: 50 ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು, ಮಾತನಾಡಿದರು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯ ರಕ್ಷಣೆಗಾಗಿ ದುಡಿದವರನ್ನು ಸ್ಮರಿಸುವ ಮೂಲಕ ಎಲ್ಲರೂ ಕನ್ನಡಕ್ಕಾಗಿ ಕೈ…

Read More

ಮಡಿಕೇರಿ ಮೇ 6  NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಸೋಮವಾರದ ಮೊದಲ ಪಂದ್ಯದಲ್ಲಿ ಎಂಟಿಬಿ ರಾಯಲ್ಸ್ ತಂಡದ ವಿರುದ್ಧ ಟೀಮ್ ಲಿವರೇಜ್ 2 ವಿಕೆಟ್ ಗಳ ಜಯ ಸಾಧಿಸಿದೆ. ಟಾಸ್ ಗೆದ್ದ ಟೀಮ್ ಲಿವರೇಜ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಎಂಟಿಬಿ ರಾಯಲ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 142 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಟೀಮ್ ಲಿವರೇಜ್ ತಂಡ 19.2 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿ ಗೆಲುವು ಸಾಧಿಸಿತು. ಟೀಮ್ ಲಿವರೇಜ್ ತಂಡದ ಸಂಜು ಬೋಪಯ್ಯ ಅವರು 14 ರನ್ ಗಳನ್ನು ಗಳಿಸಿ, 29 ರನ್ ಗಳಿಗೆ 3 ವಿಕೆಟ್ ಗಳನ್ನು ಕಬಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Read More

ಸೋಮವಾರಪೇಟೆ ಮೇ 6 NEWS DESK  : ಅಕ್ಕನ ಬಳಗದ ವತಿಯಿಂದ ಪಟ್ಟಣದ ಕರ್ಕಳ್ಳಿಯಲ್ಲಿರುವ ಅಕ್ಕಮಹಾದೇವಿ ಸಭಾಂಗಣದಲ್ಲಿ ಅಕ್ಕನ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಳಗದ ಹಿರಿಯ ಸದಸ್ಯರಾದ ಸುಕನ್ಯಾ ಮೋಹನ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷೆ ಚಂದ್ರಕಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕ ಶಿವಾದೇವಿ ಅವನೀಶ್ ಚಂದ್ರ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಸಂಘದ ಉಪಾಧ್ಯಕ್ಷೆ ಗೀತರಾಜು, ಕಾರ್ಯದರ್ಶಿ ಮಾಯಾಗಿರಿಷ್, ಪದಾಧಿಕಾರಿಗಳಾದ ರಜಿನಿ, ದಿವ್ಯ, ಜಗಧಾಂಬ, ಅನುಪಮ, ನಂದಿನಿ,  ಸರಿತಾ, ಸವಿತಾ ಹಾಗೂ ಮುಂತಾದವರು ಈ ಸಂದರ್ಭ ಹಾಜರಿದ್ದರು.

Read More

ಸೋಮವಾರಪೇಟೆ ಮೇ 6 NEWS DESK :  ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಬಸವೇಶ್ವರ ಪ್ರತಿಮೆಯನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಲು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹಿಸಿದ್ದಾರೆ. ಕಳೆದ 24 ವರ್ಷಗಳ ಹಿಂದೆ ಪಟ್ಟಣದ ಕಕ್ಕೆ ಹೊಳೆ ಸಮೀಪ ಅಶ್ವಾರೂಢ ಬಸವೇಶ್ವರ ಪ್ರತಿಮೆಯನ್ನು ನಿರ್ಮಿಸಲಾಗಿತ್ತು. ಕಳೆದ 4 ತಿಂಗಳ ಹಿಂದೆ ಸೇತುವೆ ಕಾಮಗಾರಿಗಾಗಿ ಪ್ರತಿಮೆ ತೆರವುಗೊಳಿಸಲಾಗಿದ್ದು ಇನ್ನೂ ಕಾಮಗಾರಿ ಪ್ರಗತಿಯಲ್ಲಿದೆ ಆದರೆ ಮೇ 10 ರಂದು ಬಸವಜಯಂತಿ ಇದ್ದು ಈ ಭಾರಿ ಕರ್ನಾಟಕ ರಾಜ್ಯ ಸರ್ಕಾರ ಬಸವೇಶ್ವರರು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿರುವುದು ಹೆಮ್ಮೆಯಾಗಿದೆ. ಇಂತಹ ಸಂದರ್ಭದಲ್ಲಿ ಪ್ರತಿಮೆಯನ್ನು ಮುಚ್ಚೀಡಾಲಾಗಿದೆ ,ಬಸವಜಯಂತಿಯ ದಿನವಾದರೂ ಅದನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಿ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಯೊಂದಿಗೆ ಗೌರವ ಸಲ್ಲಿಸಲು ಅವಕಾಶ ಕಲ್ಪಿಸಬೇಕೆಂದು ತಹಶೀಲ್ದಾರ್ ನವೀನ್ ಕುಮಾರ್ ರವರಿಗೆ ಮನವಿ ಸಲ್ಲಿಸಿ,ಚರ್ಚಿಸಿದರು. ಈ ಸಂದರ್ಭ ತಹಶೀಲ್ದಾರ್ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ನಾಯಕ್ ರವರನ್ನು ದೂರವಾಣಿ ಮೂಲಕ ಸಂಪರ್ಕಿಸಿ…

Read More

ಮಡಿಕೇರಿ ಮೇ NEWS DESK 6 : ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಗಳಲ್ಲಿ ತಂದೆ, ತಾಯಿ, ಮಕ್ಕಳು ಎಲ್ಲರೂ ಮೊಬೈಲ್ ನಲ್ಲೇ ಮುಳುಗಿರುತ್ತಾರೆ, ಮೊಬೈಲ್ ನ್ನು ಬಿಟ್ಟು ಪುಸ್ತಕಗಳನ್ನು ಓದುವ ಮತ್ತು ಮಕ್ಕಳಿಗೆ ಓದುವ ಆಸಕ್ತಿಯನ್ನು ಮೂಡಿಸುವ ಕಾಳಜಿಯನ್ನು ಪೋಷಕರು ತೋರಬೇಕು ಎಂದು ಎಂ.ಬಾಡಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಮಡೆಯಂಡ ಉಮ್ಮಯ್ಯ ತಿಮ್ಮಯ್ಯ ಕಿವಿಮಾತು ಹೇಳಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ 90ನೇ ಪುಸ್ತಕ ಹಾಗೂ ಲೇಖಕಿ ಯಶೋಧ ಪೇರಿಯಂಡ ಅವರ ಎರಡನೇ ಪುಸ್ತಕ “ಮಕ್ಕಕ್ ಕೊದಿಮೊದ” ವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಬರಹಗಾರರ ಸಂಖ್ಯೆ ಹೆಚ್ಚಾಗುತ್ತಿದೆ, ಕಥೆ, ಕವನ ರಚನೆಯಲ್ಲಿ ಆಸಕ್ತಿ ತೋರುತ್ತಿದ್ದಾರೆ. ಆದರೆ ಬರಹಗಾರರಿಗಷ್ಟೇ ಆಸಕ್ತಿ ಇದ್ದರೆ ಸಾಲದು. ಓದುಗರ ಸಂಖ್ಯೆಯೂ ಹೆಚ್ಚಾಗಬೇಕು. ಇಂದು ಮೊಬೈಲ್ ನಲ್ಲೇ ಕಾಲಕಳೆಯುವ ಹೆಚ್ಚು ಮಂದಿ ಇದ್ದಾರೆ, ಜ್ಞಾನಾರ್ಜನೆಗೆ ಪುಸ್ತಕಗಳನ್ನು ಓದಬೇಕು ಎಂದು ತಿಳಿಸಿದರು. ಬರಹಗಾರರು ಯಾರ ಸಹಕಾರ ಇಲ್ಲದೆ ಪುಸ್ತಕ ಬರೆದು ಅವುಗಳನ್ನು…

Read More