ಸುಂಟಿಕೊಪ್ಪ ಮಾ.31 NEWS DESK : ಸುಂಟಿಕೊಪ್ಪದ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಮುತ್ತಪ್ಪ ದೇವಸ್ಥಾನ ಸಮಿತಿ ವತಿಯಿಂದ 56 ನೇ ವಾರ್ಷಿಕೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ನಡೆಯುವ ರಕ್ತ ಚಾಮುಂಡಿ, ಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ದೇವಾಲಯದ ಮುಖ್ಯ ಅರ್ಚಕ ಮಂಜುನಾಥ್ ಉಡುಪ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ಪೂಜಾ ಕೈಂಕಾರ್ಯಗಳು ಪ್ರಾರಂಭಗೊಂಡವು. ನಂತರ ಹಿರಿಯ ಅರ್ಚಕರಾದ ಹಾ.ಮಾ.ಗಣೇಶ ಶರ್ಮಾ, ಮಂಜುನಾಥ್ ಉಡುಪ ಹಾಗೂ ಮುತ್ತಪ್ಪ ದೇವಾಲಯದ ಪೂಜಾರಿ ಶಿವಮಣಿ ಅವರು ಶುದ್ಧಿ ಪುಣ್ಯಾಹ ನಡೆಸಿದರು. ಬಾವುಟ ಕಂಬಕ್ಕೆ ಶುದ್ಧಿ ಪೂಜೆ ನಡೆಸಿದ ನಂತರ ದೇವಾಲಯ ಸಮಿತಿ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್ ಅವರು ಬಾವುಟ ಏರಿಸುವುದರ ಮೂಲಕ ತೆರೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಮುತ್ತಪ್ಪ ದೇವರ ಮಲೆ ಇಳಿಸಿದ ನಂತರ ಮುತ್ತಪ್ಪ ದೇವರ ಬೆಳ್ಳಾಟ ನಡೆಯಿತು. ದೇವಾಲಯ ಸಮಿತಿಯ ಕಾರ್ಯದರ್ಶಿ ಪಿ.ಸಿ.ಮೋಹನ್, ಖಜಾಂಚಿ ರಮೇಶ್ ಪಿಳ್ಳೈ, ಎಸ್.ಜಿ.ಶ್ರೀನಿವಾಸ್, ಕೆ.ಪಿ.ಜಗನ್ನಾಥ್,…
ಲೇಖಕ: admin
ಮಡಿಕೇರಿ ಮಾ.30 NEWS DESK : ಯುವ ಪೀಳಿಗೆಯ ಸೂಕ್ತ ಚಿಂತನೆಯ ರಹದಾರಿಯಲ್ಲಿ ಮುನ್ನಡೆಯಬೇಕು. ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಪೂರಕವಾಗಬೇಕು. ಮತದಾನದಂತಹ ಪ್ರಜಾಪ್ರಭುತ್ವದ ಹಬ್ಬದಲ್ಲಿ ಯುವ ತಲೆಮಾರು ಸಕ್ರಿಯವಾಗಿ ಭಾಗವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಬಲವರ್ಧನೆಗೆ ಸಹಕಾರಿಯಾಗಬೇಕು ಎಂದು ರೋಟರಿ ಮಿಸ್ಟಿ ಹಿಲ್ಸ್ ನ ಅಧ್ಯಕ್ಷರಾದ ಪ್ರಮೋದ್ ರೈ ಹೇಳಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕೊಡಗು ಜಿಲ್ಲಾ ಅಂತರಕಾಲೇಜು ಎನ್ ಎಸ್ ಎಸ್ ಸ್ವಯಂ ಸೇವಕರಿಗಾಗಿ ನಡೆಸಿದ ಯುವ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಪಿಡಿಒ ಅಬ್ದುಲ್ಲಾ ಸ್ಪರ್ಧಾತ್ಮಕ “ಜಗತ್ತು ಮತ್ತು ಯುವ ಜನತೆ : ಶೈಕ್ಷಣಿಕ, ಸಾಮಾಜಿಕ ಸಾಧ್ಯತೆ” ಎಂಬ ವಿಷಯದ ಕುರಿತು ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿರುವ ನಾವು ಶೈಕ್ಷಣಿಕ ಸಾಧ್ಯತೆಯ ಮೂಲಕ ಸರಕಾರಿ ಉದ್ಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ನಮ್ಮ ನಡಾವಳಿಗಳನ್ನು ನಾವೇ ರೂಪಿಸಿಕೊಳ್ಳಬೇಕು. ಆಗಿದ್ದಾಗ ಮಾತ್ರ ಇಡೀ ಜಗತ್ತೆ ನಮ್ಮ…
ಮಡಿಕೇರಿ ಮಾ.30 NEWS DESK (ಬರಹ : ಬೊಳ್ಳಜಿರ ಬಿ.ಅಯ್ಯಪ್ಪ 98807 78047) ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ದ್ವಿಚಕ್ರ ವಾಹನಗಳ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಬೇಡಿಕೆಗೆ ತಕ್ಕಂತೆ ನೂತನ ದ್ವಿಚಕ್ರ ವಾಹನಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಬರುತ್ತಿವೆ. 2020ರಲ್ಲಿ ದೇಶದಲ್ಲಿ 21.2 ಮಿಲಿಯನ್ ದ್ವಿಚಕ್ರ ವಾಹನಗಳು ಮಾರಾಟವಾಗಿದ್ದವು. 2025ರ ವೇಳೆಗೆ ಇವುಗಳ ಸಂಖ್ಯೆ 26.6 ಮಿಲಿಯನ್ ಯುನಿಟ್‍ಗಳನ್ನು ತಲುಪಲಿದೆ ಎಂದು ವರದಿಯೊಂದು ತಿಳಿಸಿದೆ. ದ್ವಿಚಕ್ರ ವಾಹನಗಳ ನೋಂದಣಿಯು ಶೇ.46ರಷ್ಟು ಹೆಚ್ಚಾಗಿರುವುದು ಗಮನಾರ್ಹ. ಭಾರತದಲ್ಲಿ ದ್ವಿಚಕ್ರ ವಾಹನಗಳ ಸಂಖ್ಯೆ ಕ್ಷಿಪ್ರಗತಿಯಲ್ಲಿ ಏರಿಕೆ ಕಾಣುತ್ತಿರುವುದರಿಂದ ಅಪಘಾತ ಪ್ರಕರಣಗಳು ಹೆಚ್ಚಾಗಬಹುದು ಎಂದು 2016ರಲ್ಲಿ ಪ್ರಕಟವಾದ ವಿಶ್ವಸಂಸ್ಥೆಯ ಮೋಟಾರ್ ಸೈಕಲ್ ಅಧ್ಯಯನ ವರದಿಯಲ್ಲಿ ಎಚ್ಚರಿಕೆ ನೀಡಲಾಗಿತ್ತು. ಭಾರತದಲ್ಲಿ ಅಪಘಾತ ಸಂಬಂಧಿತ ಸಾವುಗಳಲ್ಲಿ ದ್ವಿಚಕ್ರ ಮತ್ತು ಪಾದಚಾರಿಗಳ ಪ್ರಮಾಣ ಶೇ.54ರಷ್ಟಿದೆ. ದ್ವಿಚಕ್ರ ವಾಹನ ಅಪಘಾತದಿಂದ ಪ್ರತೀ ಗಂಟೆಗೆ ಸರಾಸರಿ ಆರು ಸಾವುಗಳಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಹೆಲ್ಮೆಟ್ ಧರಿಸದ ಕಾರಣ 2019ರಲ್ಲಿ 44,666 ಮಂದಿ ಸಾವನ್ನಪ್ಪಿದ್ದು, ಇವರಲ್ಲಿ…
ಮಡಿಕೇರಿ ಮಾ.30 NEWS DESK : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಬೆಳ್ಳಿ ಮಹೋತ್ಸವದ ಪ್ರಯುಕ್ತ ಎರಡನೇ ದಿನ ಸಾಂಸ್ಕೃತಿಕ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು, ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಿ ಶಾಲೆಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತಂದುಕೊಡಬೇಕು ಎಂದು ಕರೆ ನೀಡಿದರು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಗೆ ತನ್ನದೇ ಆದ ಇತಿಹಾಸವಿದೆ, ಇಲ್ಲಿ ವ್ಯಾಸಂಗ ಮಾಡಿದ ಮಕ್ಕಳು ಉನ್ನತ ಸ್ಥಾನಗಳಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಶಾಲೆಯಲ್ಲಿ ಜನರಲ್ ತಿಮ್ಮಯ್ಯ ಅವರ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ವೀರಾಸೇನಾನಿಗೆ ನಿರಂತರ ಗೌರವ ಸೂಚಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಿ ಜೀವನ ನಡೆಸಲು ಶಿಕ್ಷಕರು ಹಾಗೂ ಶಾಲೆಯ ಆಡಳಿತ ಮಂಡಳಿ ಉತ್ತಮ ಮಾರ್ಗದರ್ಶನ ನೀಡುತ್ತಿದ್ದಾರೆ. ಇಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಇಂದು ದೇಶ ವಿದೇಶದಲ್ಲಿ ಉತ್ತಮ ಹುದ್ದೆಗಳನ್ನು ಅಲಂಕರಿಸಿದ್ದಾರೆ. ನಮ್ಮ ದೇಶದ ಉತ್ತಮ ಪ್ರಜೆಗಳಾಗಿ…
ಮಡಿಕೇರಿ ಮಾ.30 NEWS DESK : ನಾಪೋಕ್ಲು ಹಳೇ ತಾಲೂಕು ಮುಖ್ಯ ರಸ್ತೆಯಲ್ಲಿ ಪಿಕ್‍ಅಪ್ ಜೀಪ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ. ಅಯ್ಯಂಗೇರಿ ಗ್ರಾಮದ ನಿವಾಸಿ ಹಕೀಂ(23) ಮೃತ ದುರ್ದೈವಿ. ಮಾ.20ರಂದು ನಾಪೋಕ್ಲು ಹಳೇ ತಾಲೂಕು ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಪಿಕ್‍ಅಪ್ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಗಂಭೀರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ದ್ವಿಚಕ್ರ ವಾಹನ ಚಾಲಕ ಹಕೀಂ ಚಿಕಿತ್ಸೆ ಫಲಿಸದೆ ಹಕೀಂ ಇಂದು ಮೃತಪಟ್ಟರು. ಯುವಕ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ನಾಪೋಕ್ಲು ಠಾಣೆಯ ಮುಂಭಾಗದಲ್ಲಿ ಜಮಾಯಿಸಿದ ಗ್ರಾಮಸ್ಥರು ಪಿಕ್‍ಅಪ್ ವಾಹನದ ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಮಡಿಕೇರಿ ಮಾ.30 NEWS DESK : ಅಯ್ಯಂಗೇರಿ ಶ್ರೀ ಕೃಷ್ಣ ಯುವಕ ಸಂಘದ ವತಿಯಿಂದ ಗೊಲ್ಲ ಜನಾಂಗ ಬಾಂಧವರ ನಡುವೆ 4ನೇ ವರ್ಷದ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಭಾಗಮಂಡಲ ಕಾವೇರಿ ಕಾಲೇಜು ಮೈದಾನ ಮೈದಾನದಲ್ಲಿ ನಡೆದ ಪಂದ್ಯಾವಳಿಯನ್ನು ಆಚೀರ ಭೀಮಯ್ಯ ಉದ್ಘಾಟಿಸಿದರು. ಸುಮಾರು 10 ತಂಡಗಳು ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಿದ್ದು, ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದು, ಅತಿಥೇಯ ಶ್ರೀ ಕೃಷ್ಣ ಯೂತ್ ಕ್ಲಬ್ ಅಯ್ಯಂಗೇರಿ ತಂಡ ಮತ್ತು ಎಲೈಟ್ ಬೆಂಗ್ನಾಡ್ ತಂಡವು ಫೈನಲ್ ಪ್ರವೇಶಿಸಿ ಅಂತಿಮವಾಗಿ ಶ್ರೀ ಕೃಷ್ಣ ಯೂತ್ ಕ್ಲಬ್ ಅಯ್ಯಂಗೇರಿ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಎಲೈಟ್ ಬೆಂಗ್ನಾಡ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಜನಾಂಗದ ಮಕ್ಕಳಿಗೆ ಆಟೋಟ ಸ್ಪರ್ಧೆ, ಮಹಿಳೆಯರಿಗೆ ಮ್ಯಾಜಿಕ್ ಬಾಕ್ಸ್ ಮತ್ತು ಪುರುಷರಿಗೆ ಹಗ್ಗಜಗ್ಗಾಟ ಪಂದ್ಯಾವಳಿ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಆಚೀರ ಶ್ರೀ ಭೀಮಯ್ಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯೊಂದಿಗೆ ಉತ್ತಮ ಗುಣ ಮತ್ತು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ …
ಮಡಿಕೇರಿ ಮಾ.30 NEWS DESK : ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ 24ನೇ ವರ್ಷದ ಕೊಡವ ಕೌಟುಂಬಿಕ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ ಅವರು ಸ್ಟಿಕ್ ಹಿಡಿದು ಆಡುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದರು. ಮೂಲತಃ ರಾಜಸ್ಥಾನ ರಾಜ್ಯದವರಾದ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಅವರು, ಕುಂಡ್ಯೋಳಂಡ ಹಾಕಿ ಪಂದ್ಯಾಟದ ಪ್ರದರ್ಶನ ಪಂದ್ಯದಲ್ಲಿ ‘ಕೂರ್ಗ್ ಇಲವೆನ್’ ತಂಡವನ್ನು ಪ್ರತಿನಿಧಿಸಿ ‘ಫಾರ್ವಡ್’ ಆಟಗಾರರಾಗಿ ತಮ್ಮ ಕ್ರೀಡಾ ಸ್ಪೂರ್ತಿ ಪ್ರದರ್ಶಿಸಿದರು. ಕುಂಡ್ಯೋಳಂಡ ಹಾಕಿ ಪಂದ್ಯಾವಳಿಯ ಪ್ರದರ್ಶನ ಪಂದ್ಯದಲ್ಲಿ ಮೊದಲಾರ್ಧದವರೆಗೂ ಮೈದಾನದಲ್ಲಿ ಉಳಿದಿದ್ದ ಜಿಲ್ಲಾಧಿಕಾರಿ ವೆಂಕಟರಾಜ ಅವರು 3 ಬಾರಿ ಗೋಲ್ ಬಾರಿಸುವ ಪ್ರಯತ್ನವನ್ನೂ ನಡೆಸುವ ಮೂಲಕ ಕ್ರೀಡಾ ಸಾಮರ್ಥ್ಯ ತೋರಿದರು. ಜಿಲ್ಲಾಧಿಕಾರಿಗಳೇ ಖುದ್ದಾಗಿ ಸ್ಟಿಕ್ ಹಿಡಿದು ಮೈದಾನಕ್ಕೆ ಇಳಿದದ್ದು, ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಕಳೆದ 24 ವರ್ಷಗಳಿಂದ ಕೊಡಗಿನ ವಿವಿಧ ಕಡೆಗಳಲ್ಲಿ ಕೊಡವ ಕುಟುಂಬಗಳ ನಡುವೆ ಕೌಟುಂಬಿಕ ಹಾಕಿ ಪಂದ್ಯಾವಳಿಗಳು ನಡೆಯುತ್ತಿದೆ. ಪ್ರತಿ ವರ್ಷವೂ ಒಂದೊಂದು ಕುಟುಂಬಗಳು ಪಂದ್ಯಾವಳಿಗಳನ್ನೂ ಆಯೋಜಿಸುತ್ತವೆ. ಆದರೆ…
ಮಡಿಕೇರಿ ಮಾ.30 NEWS DESK : ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 5 ನೇ ಸುತ್ತಿನಲ್ಲಿ ಏ.1 ರಿಂದ 30 ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ತಿಳಿಸಿದ್ದಾರೆ. ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ರೋಗವು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ ಎಂದರು. ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು, ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮಥ್ರ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ ಎಂದು ಮಾಹಿತಿ ನೀಡಿದರು. ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ.…
ಮಡಿಕೇರಿ ಮಾ.30 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಆ ನಿಟ್ಟಿನಲ್ಲಿ ಈಗಾಗಲೇ ರಂಗೋಲಿ ಸ್ಪರ್ಧೆ ಆರಂಭವಾಗಿದ್ದು, ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಪೂರ್ಣಗೊಂಡಿದೆ. ಹಲವು ಯುವಜನರು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಿದ್ದಾರೆ. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗಿದೆ. ಸೋಮವಾರಪೇಟೆ ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ರಂಗೋಲಿ ಸ್ಪರ್ಧೆ ನಡೆದಿದೆ. ಇದೇ ಏ.26 ರಂದು ನಡೆಯುವ ಮತದಾನದಂದು 18 ವರ್ಷ ಪೂರ್ಣಗೊಂಡವರೆಲ್ಲರೂ ಮತಹಕ್ಕು ಚಲಾಯಿಸಬೇಕು. ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಮನೆಯಿಂದ ಮತಗಟ್ಟೆಗೆ ಬನ್ನಿ, ತಮ್ಮ ಹಕ್ಕು ಚಲಾಯಿಸಿ, ತಪ್ಪದೇ ಮತದಾನ ಮಾಡಿ ಎಂಬ ಘೋಷ ವಾಕ್ಯಗಳು ರಂಗೋಲಿ ಸ್ಪರ್ಧೆಯಲ್ಲಿ ಕಂಡುಬಂದವು. ಮಾ.31 ರಂದು ಕಾರು ರ್ಯಾಲಿ: ಕೊಡಗು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರೋಟರಿಯನ್ ಕೆ.ವಿಶ್ವನಾಥ…
ಮಡಿಕೇರಿ ಮಾ.30 NEWS DESK : ಜಿಲ್ಲಾಡಳಿತ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118ನೇ ಜನ್ಮ ದಿನಾಚರಣೆಯು ಮಾ.31 ರಂದು ಬೆಳಗ್ಗೆ 10.30 ಗಂಟೆಗೆ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.






