ಮಡಿಕೇರಿ ಫೆ.21 NEWS DESK : 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಹಾಗೂ ಎಫ್5 ಹೊದ್ದೂರು ಫೀಡರ್‍ನಲ್ಲಿ ಫೆಬ್ರವರಿ, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯ ಪರಂಬು, ಹಳೆ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ. :: ಶನಿವಾರಸಂತೆ :: 66/11 ಕೆ.ವಿ ಶನಿವಾರಸಂತೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನಾಲ್ಕನೆ ತ್ರೈಮಾಸಿಕ ಅವಧೀಯ ನಿರ್ವಾಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಈ ಉಪ ಕೇಂದ್ರದಿಂದ ಹೊರಹೊಮ್ಮುವ ಪೂರಕಗಳಲ್ಲ್ಲಿ ಫೆಬ್ರವರಿ, 22 ರಂದು ಬೆಳಗ್ಗೆ 10 ರಿಂದ ಸಂಜೆ…
ಲೇಖಕ: admin
ಕುಶಾಲನಗರ ಫೆ.21 NEWS DESK : ಸಮಾಜದಲ್ಲಿ ಇಂದು ವಿದ್ಯಾವಂತರಿಂದಲೇ ಹೆಚ್ಚಿನ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವುದರಿಂದ ಇಂದಿನ ಎಳೆಯ ಮಕ್ಕಳಿಗೆ ಸಂಸ್ಕಾರ ತುಂಬಿದ ಶಿಕ್ಷಣ ಅತಿ ಅಗತ್ಯವಿದೆ ಎಂದು ಕುಶಾಲನಗರ ವೃತ್ತ ನಿರೀಕ್ಷಕ ಪ್ರದೀಪ್ ಕುಮಾರ್ ಕರೆ ನೀಡಿದರು. ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಯುಕೆಜಿ ಮಕ್ಕಳ ಗ್ರಾಜುಯೇಷನ್ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದೊಂದಿಗೆ ಇಂದು ಉತ್ತಮ ಸಂಸ್ಕಾರ ನೀಡಿದರೆ ವೃದ್ಧಾಪ್ಯದಲ್ಲಿ ಪ್ರಯೋಜನಕ್ಕೆ ಬರುತ್ತದೆ. ಏಕೆಂದರೆ ಸಮಾಜದಲ್ಲಿ ಇಂದು ನಡೆಯುತ್ತಿರುವ ಎಲ್ಲಾ ದುಷ್ಕ್ರತ್ಯಗಳಿಗೆ, ಅಕ್ರಮ ಅನ್ಯಾಯ ಮೊದಲಾದ ಸಮಾಜ ಬಾಹಿರ ಕೃತ್ಯಗಳು ವಿದ್ಯಾವಂತರಿಂದಲೇ ನಡೆಯುತ್ತಿರುವುದರಿಂದ ಪೋಷಕರು ಇಂದಿನಿಂದಲೇ ಎಚ್ಚೆತ್ತುಕೊಳ್ಳುವ ಮೂಲಕ ಭವಿಷ್ಯದ ಉತ್ತಮ ಸಮಾಜ ನಿರ್ಮಾಣದ ಕುಡಿಗಳನ್ನು ಇಂದಿನಿಂದಲೇ ತಯಾರಿಗೊಳಿಸಬೇಕು. ಅದು ಮನೆಯಂಗಳದಿಂದ ಹಾಗೂ ಶಾಲಾ ತರಗತಿಗಳಿಂದಲೇ ಆರಂಭ ವಾಗಬೇಕಿದೆ ಎಂದು ಪ್ರದೀಪ್ ಕುಮಾರ್ ಆಶಿಸಿದರು. ಹಿಂದೆಲ್ಲಾ ಕನ್ನಡ ಶಾಲೆಗಳಲ್ಲಿ ಕಲಿಯುತ್ತಿದ್ದ ಮಕ್ಕಳು ಮರ ಏರುತ್ತಿದ್ದರು. ಕೆರೆ ತೋಡುಗಳಲ್ಲಿ ಈಜುತ್ತಿದ್ದರು. ಮರ ಹತ್ತಿ…
ಮಡಿಕೇರಿ ಫೆ.21 NEWS DESK : ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸ್ಪೀಕರ್ ಮತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ವನ್ನು ಕೊಡುಗೆ ನೀಡಲಾಯಿತು. ಗ್ರಾಮ ಪಂಚಾಯಿತಿ ಸದಸ್ಯರಾದ ಜಾನ್ಸನ್ ಪಿಂಟೋ ಅವರು ತಮ್ಮ ಸಂಸ್ಥೆಯಾದ ಕೊಡಗು ರಿಯಲ್ ಎಸ್ಟೇಟ್ ಅಂಡ್ ಡೆವಲಪರ್ಸ್ ವತಿಯಿಂದ ನೀಡಿದರು. ಈ ಸಂದರ್ಭ ಶಾಲಾ ಮುಖ್ಯಶಿಕ್ಷಕಿ ಶಾಲಿನಿ ಮತ್ತು ಶಿಕ್ಷಕ ಸುರೇಶ್ ಹಾಗೂ ಅಡುಗೆ ಸಹಾಯಕಿ ನಸ್ಸಿಮ್ಮ ಹಾಜರಿದ್ದರು.
ಸುಂಟಿಕೊಪ್ಪ ಫೆ.21 NEWS DESK : ಆದಮ್ಯವಾದ ಶಕ್ತಿ ರೂಪವೇ ದೇವರು, ಜೀವ ಸಂಕುಲಕ್ಕೆ ಬೆಳಕು, ಮಳೆ, ಗಾಳಿ, ಭೂಮಿಯನ್ನು ನೀಡಿರುವುದೇ ಜನ್ಮ ಸಾರ್ಥಕವಾಗಲು. ಸಂಸ್ಕಾರಯುತ ಜೀವನ ಮುಖ್ಯ. ಸ್ವಾರ್ಥ ಜೀವನದಿಂದ ಬದುಕಿನ ನೆಮ್ಮದಿಯನ್ನು ಕೆಡಿಸಿಕೊಳ್ಳಬಾರದೆಂದು ಅರಸಿಕೆರೆ ಹಾರ್ನಳ್ಳಿ ಶ್ರೀ ಕೋಡಿಮಠದ ಶ್ರೀ ಡಾ.ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು ಆರ್ಶಿವಚನ ನೀಡಿದರು. ಜಂಬೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ 12ನೇ ಪುನಾರ್ ಪ್ರತಿಷ್ಠಾಪನಾದ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು ಮನುಕುಲ ಶ್ರೇಷ್ಠವಾದುದು. ದೇವರ ಸಾಕ್ಷತ್ಕರದಿಂದ ನೆಮ್ಮದಿ, ಸಮೃದ್ಧಿ ಸಿಗಲಿದೆ. ಗಳಿಕೆಯ ಕಡೆ ಹೆಚ್ಚಿನ ಚಿಂತನೆ ನಡೆಸದೆ ಸಂಸ್ಕಾರ ಸಹಿತವಾದ ಸ್ವಾರ್ಥ ರಹಿತ ಬದುಕನ್ನು ಕಟ್ಟಿಕೊಳ್ಳಬೇಕು. ದೇವಾಲಯ ಶ್ರದ್ಧಾಭಕ್ತಿಯ ಕೇಂದ್ರವೆಂದು ಕಂಡುಕೊಳ್ಳಬೇಕು. ಸ್ವಾರ್ಥಕ್ಕಾಗಿ ಜೀವನ ನಡೆಸದೆ ಪರರ ಹಿತಕ್ಕಾಗಿಯೂ ಬದುಕನ್ನು ಮುಡಿಪಾಗಿಡಬೇಕು. ಮಾನವರೆಲ್ಲೇ ದೇವರಿದ್ದಾರೆ ಆದರೆ ದೇಗುಲ, ಮಠ ಮಂದಿರ ಮನಷ್ಯನ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಶನಿವಾರಸಂತೆ ಮುದ್ದಿನಕಟ್ಟೆ ಮಠದ ಶ್ರೀ ಅಧೀನವ ಸಿದ್ಧಲಿಂಗಾ ಶಿವಚಾರ್ಯ ಸ್ವಾಮೀಜಿ ಮಾತನಾಡಿ,…
ಸುಂಟಿಕೊಪ್ಪ ಫೆ.21 NEWS DESK : ಸುಂಟಿಕೊಪ್ಪ ವ್ಯಾಪ್ತಿಯ ವಿವಿಧ ದೇವಾಲಯಗಳ ಸಹಭಾಗಿತ್ವದಲ್ಲಿ ಗ್ರಾಮ ದೇವರ 7ನೇ ವರ್ಷದ ವಾರ್ಷಿಕ ಪೂಜೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದಿನದ ಅಂಗವಾಗಿ ಮುಂಜಾನೆ ಸ್ಥಳ ಶುದ್ಧಿ ಕಲಶ, ಕುಂಕುಮ ಪೂಜೆ, ಅಲಂಕಾರ ಪೂಜೆ, ಮಹಾಮಂಗಳಾರತಿ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿತು. ನಂತರ ಪ್ರಸಾದ ವಿನಿಯೋಗ ನಡೆಯಿತು. ಗ್ರಾಮ ದೇವರಿಗೆ ಹರಕೆ ಸಮರ್ಪಣೆ ಮಾಡಲಾಯಿತು. ಅರ್ಚಕರಾದ ಗಣೇಶ್ ಭಟ್ ಅವರಿಂದ ಪೂಜಾ ವಿಧಿವಿಧಾನಗಳು ನಡೆಯಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜೆ ಪ್ರಾರ್ಥನೆ ಸಲ್ಲಿಸಿದರು. ಸಮಿತಿಯ ಅಧ್ಯಕ್ಷ ಎ.ಶ್ರೀಧರ್ ಕುಮಾರ್, ಕಾರ್ಯದರ್ಶಿ ಸುರೇಶ್ ಗೋಪಿ, ಖಜಾಂಚಿ ದಿನು ದೇವಯ್ಯ, ಉಪಾಧ್ಯಕ್ಷರಾದ ಬಿ.ಡಿ.ರಾಜು ರೈ, ಜೆ.ಎನ್.ಚಂದ್ರಶೇಖರ್, ಸಲಹಾ ಸಮಿತಿಯ ಎ.ಲೋಕೇಶ್ ಕುಮಾರ್, ಶಾಂತರಾಮ್ ಕಾಮತ್,ಬಸವರಾಜು, ಸಂಘಟನಾ ಕಾರ್ಯದರ್ಶಿಗಳಾದ ಧನು ಕಾವೇರಪ್ಪ, ಎಂ.ಎಸ್. ಸುನಿಲ್, ಸಹ ಕಾರ್ಯದರ್ಶಿ ಎ.ಶ್ರೀಧರನ್, ಅಯ್ಯಪ್ಪ, ಪಿ.ಆರ್.ಸುನಿಲ್‍ಕುಮಾರ್, ಪಟ್ಟೆಮನೆ ಕುಟುಂಬಸ್ಥರಾದ ಪಿ.ಪಿ.ಉದಯಕುಮಾರ್, ಪಟ್ಟೆಮನೆ ಸದಾಶಿವ, ಸದಾಶಿವ ರೈ, ಸಂತೋμï, ರವಿ, ಶಿವಕುಮಾರ್, ಸಿ.ಸಿ.ಸುನಿಲ್,…
ಮಡಿಕೇರಿ ಫೆ.21 NEWS DESK : ಇದೇ ಬಜೆಟ್ ಅಧಿವೇಶನ ನಂತರ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 3 ಸಾವಿರ ನಿವೇಶನ ಹಕ್ಕುಪತ್ರ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ನಿವೇಶನ ರಹಿತರಿಗೆ ನಿವೇಶನ ಹಕ್ಕುಪತ್ರ ನೀಡುವ ಬಗ್ಗೆ ವಿವಿಧ ಇಲಾಖೆ ಅಧಿಕಾರಿಗಳ ಜತೆ ಪೊನ್ನಂಪೇಟೆಯ ತಾ.ಪಂ.ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ನವೆಂಬರ್, ಡಿಸೆಂಬರ್ ತಿಂಗಳಲ್ಲಿಯೇ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ನಿವೇಶನ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿತ್ತು, ಆದರೆ ತಾಂತ್ರಿಕ ಕಾರಣಗಳಿಂದ ಈ ಆಗಿರಲಿಲ್ಲ ಎಂದರು. ಸದ್ಯ ಮಾರ್ಚ್ 27 ರ ನಂತರ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ನಿವೇಶನ ಹಕ್ಕುಪತ್ರ ವಿತರಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು. ಸಮಗ್ರ ಗಿರಿಜನ ಕಲ್ಯಾಣ ಇಲಾಖೆಯಿಂದ ಲೈನ್ ಮನೆಗಳಲ್ಲಿ ವಾಸಿಸುವ ಸುಮಾರು 1125 ಕುಟುಂಬಗಳಿಗೆ, ಹಾಗೆಯೇ ಬಸವ ಮತ್ತು ಅಂಬೇಡ್ಕರ್…
ಮಡಿಕೇರಿ ಫೆ.21 NEWSD DESK : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ತಾಲ್ಲೂಕು ಕೇಂದ್ರವಾಗಿರುವ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಮತ್ತು ಬಲ್ಯಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನೂರು ರಸ್ತೆ ಕಾಲೋನಿ, ಮಾಪಿಳ್ಳೆತೋಡು ಸೇತುವೆ, ಕಾವೇರಮ್ಮ ಬಡಾವಣೆ ಮತ್ತು ಇತರ ಬಡಾವಣೆಗಳು ಒಳಗೊಂಡಂತೆ ಸಂಪೂರ್ಣ ಮುಗುಟಗೇರಿ ಗ್ರಾಮವನ್ನು ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ ಮಾಡಲಾಗಿದೆ. ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ವಾರ್ಡ್‍ಗಳನ್ನು 2011ರ ಜನಗಣತಿಯನ್ನು ಆಧರಿಸಿ ಪುನರ್ ವಿಂಗಡಣೆ ಮಾಡಿ, ವಾರ್ಡ್‍ನ ಹೆಸರು ಹಾಗೂ ವಾರ್ಡ್ ವ್ಯಾಪ್ತಿಗೆ ಒಳಪಡುವ ಪ್ರದೇಶದ ವಿವರ ಮತ್ತು ಚೆಕ್ಕುಬಂದಿಗಳನ್ನು ವಿವರವಾಗಿ ನಮೂದಿಸಿ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಈ ಕರಡು ಅಧಿಸೂಚನೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆಯನ್ನು ಅಥವಾ ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು ಅದನ್ನು ಲಿಖಿತ ರೂಪದಲ್ಲಿ ಕಾರಣ ಸಹಿತವಾಗಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಫೆ.21 NEWS DESK : ವಿರಾಜಪೇಟೆ ಪಟ್ಟಣದ ನಿವಾಸಿ ಮೌಂಟನ್ ವ್ಯೂ ಶಾಲೆಯ ಸಂಸ್ಥಾಪಕರಾದ ದಿ.ಸಯ್ಯದ್ ನಜೀರ್ ಅಹಮ್ಮದ್ ಮತ್ತು ಸೈಯದಾ ನಿಖತ್ ಅಸ್ಮ ಅವರ ಪುತ್ರಿ ಸೈಯದಾ ಕಾಶ್ಮೀರ ಸಿಮ್ರಾನ್ ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಸಿವಿಲ್ ಜಡ್ಜ್ ನೇಮಕಾತಿ ಪರೀಕ್ಷೆಯನ್ನು ಎದುರಿಸಿದ ಸೈಯದಾ ಕಾಶ್ಮೀರ ಸಿಮ್ರಾನ್ ಅವರು ಮೊದಲ ಪ್ರಯತ್ನದಲ್ಲಿಯೇ 30ನೇ ರ‍್ಯಾಂಕ್ ಗಳಿಸಿ ನ್ಯಾಯಾಧೀಶರ ಹುದ್ದೆಗೆ ನಿಯುಕ್ತಿಗೊಂಡಿದ್ದಾರೆ. ವಿರಾಜಪೇಟೆ ಮೌಂಟನ್ ವ್ಯೂ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆದ ಸೈಯದಾ ಅವರು, ಮಂಗಳೂರಿನಲ್ಲಿ ಪಿಯುಸಿ ಶಿಕ್ಷಣ, ಮೈಸೂರಿನ ವಿದ್ಯಾ ವಿಕಾಸ ಕಾಲೇಜಿನಲ್ಲಿ ಬಿಬಿಎ ಎಲ್‍ಎಲ್‍ಬಿ ಪದವಿ ಮುಗಿಸಿದರು. 2023ರಲ್ಲಿ ವಿರಾಜಪೇಟೆ ಪಟ್ಟಣದಲ್ಲಿ ಹಿರಿಯ ವಕೀಲ ಐ.ಆರ್.ಪ್ರಮೋದ್ ಅವರ ಮಾರ್ಗದರ್ಶನದಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದರು. ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಸೈಯದಾ ಕಾಶ್ಮೀರ ಸಿಮ್ರಾನ್ ತನ್ನ ತಂದೆ, ತಾಯಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಮಾತ್ರವಲ್ಲ, ಹೆಣ್ಣುಮಕ್ಕಳು ಉನ್ನತ ವಿದ್ಯಾಭ್ಯಾಸ ಪಡೆದು ಸ್ವಾವಲಂಬಿ ಜೀವನ ನಡೆಸಬೇಕು…
ಮಡಿಕೇರಿ NEWS DESK ಫೆ.21 : ಸುತ್ತೂರು ಮಠದ 24 ನೇ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಸೋಮವಾರಪೇಟೆಯ ನಿವಾಸಕ್ಕೆ ಭೇಟಿ ನೀಡಿದರು. ಸ್ವಾಮೀಜಿಗಳ ಪಾದಪೂಜೆ ನೆರವೇರಿಸುವ ಮೂಲಕ ಶಾಸಕರು ಹಾಗೂ ಕುಟುಂಬದ ಸದಸ್ಯರು ಆಶೀರ್ವಾದ ಪಡೆದರು.
ಮಡಿಕೇರಿ NEWS DESK ಫೆ.21 : ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆೆ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು “ಕೊಡವ ಸತ್ಯಾಗ್ರಹ” ನಡೆಸಿತು. ಪ್ರಖ್ಯಾತ ಭಾಷಾ ತಜ್ಞ ಪಂಡಿತ್ ಡಾ. ಸೀತಕಾಂತ್ ಮಹಾಪಾತ್ರ ಆಯೋಗದ ವರದಿಯ ಶಿಫಾರಸ್ಸಿನಂತೆ ಕೊಡವ ತಕ್ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮಂಡಿಸಿದರು. ಕೊಂಕಣಿ ಭಾಷೆಯ ಮಾದರಿಯಲ್ಲಿ ಮತ್ತು ತುಳು ಭಾಷೆಯ ಪ್ರಸ್ತಾವನೆಯಂತೆ, ಸಂವಿಧಾನದ ವಿಧಿ 345 ಮತ್ತು 347 ರ ಅಡಿಯಲ್ಲಿ ಕೊಡವ ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಹಾಗೂ ವಿಧಿ 350 ರ ಅಡಿಯಲ್ಲಿ ಆಡಳಿತ ಮತ್ತು ಶಿಕ್ಷಣದಲ್ಲಿ ಜಾರಿಗೆ ತರಬೇಕು. ಭೌಗೋಳಿಕ ಸ್ವಾಯತ್ತತೆ ಮತ್ತು ಬುಡಕಟ್ಟು ವರ್ಗೀಕರಣ: ಸಂವಿಧಾನದ ವಿಧಿ 244 ಮತ್ತು 371 ರ ಅಡಿಯಲ್ಲಿ ‘ಕೊಡವಲ್ಯಾಂಡ್’ ಭೌಗೋಳಿಕ ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕು. ಅತ್ಯಲ್ಪ ಸಂಖ್ಯೆಯಲ್ಲಿರುವ ಕೊಡವ ಜನಾಂಗಕ್ಕೆ ‘ಪರಿಶಿಷ್ಟ ಪಂಗಡ’…






