ಮಡಿಕೇರಿ ಮೇ 5 NEWS DESK : ಮಡಿಕೇರಿ ತಾಲ್ಲೂಕಿನ ಅಪ್ಪಂಗಳ ನಿವಾಸಿ ಶಂಕರನಾರಾಯಣ ಹೆಬ್ಬಾರ್ ಹಾಗೂ ಶ್ಯಾಮಲ ದಂಪತಿಯ ಪುತ್ರಿ ಅಶ್ವಿನಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿ ರವೀಶ್ ಕೇಕುಣ್ಣಾಯ್ಯ ಹಾಗೂ ಕುಸುಮ ದಂಪತಿಯ ಪುತ್ರ ಕೆ.ಆರ್.ಅನ್ವೇಶ್ ಅವರ ವಿವಾಹವು ಮೇ 1 ರಂದು ಪುತ್ತೂರಿನ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಿತು.
ಲೇಖಕ: admin
ಮಡಿಕೇರಿ ಮೇ 4 NEWS DESK : ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಭಾರತ ಚುನಾವಣಾ ಆಯೋಗವು ಮೇ 2 ರಂದು ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಿರುತ್ತದೆ. ಅದರಂತೆ ಮತದಾನ ಪ್ರಕ್ರಿಯೆಯು ಜೂ.3 ರಂದು ಹಾಗೂ ಮತಎಣಿಕೆ ಕಾರ್ಯವು ಜೂ. 6 ರಂದು ನಡೆಯಲಿದೆ. ಈ ಮೂರು ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಈಗಾಗಲೇ 2023ರ ಡಿ.30 ರಂದು ಪ್ರಕಟಿಸಲಾಗಿದ್ದು, ಈವರೆಗೆ ಮತದಾರರ ಪಟ್ಟಿಗಳಿಗೆ ನೋಂದಾಯಿಸಿರುವ ಮತದಾರರ ಸಂಖ್ಯಾ ವಿವರಗಳು ಇಂತಿವೆ. ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿರುವ ‘ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ’ ವ್ಯಾಪ್ತಿಯಲ್ಲಿ ಒಟ್ಟು 18,379 ಮಂದಿ ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ 10,355 ಪುರುಷರು ಮತ್ತು 8,022 ಮಹಿಳೆಯರು ಹಾಗೂ 2 ಇತರೆ ಮತದಾರರು ಇದ್ದಾರೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆಗಳನ್ನು ಒಳಗೊಂಡ…
ಮಡಿಕೇರಿ ಮೇ 4 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಶನಿವಾರದ ಮೊದಲ ಪಂದ್ಯದಲ್ಲಿ ಕೊಡವ ಟ್ರೈಬ್ ತಂಡ 38 ರನ್‍ಗಳ ಅಂತರದಿಂದ ಎದುರಾಳಿ ರಾಯಲ್ ಟೈಗರ್ಸ್ ತಂಡವನ್ನು ಮಣಿಸಿತು. ಟಾಸ್ ಗೆದ್ದ ಮೊದಲು ಬ್ಯಾಟ್ ಮಾಡಲು ಇಳಿದ ಕೊಡವ ಟ್ರೈಬ್ ತಂಡ, ರಾಯಲ್ ಟೈಗರ್ಸ್ ತಂಡದ ಉತ್ತಮ ಬೌಲಿಂಗ್ ದಾಳಿಯ ಎದುರು ರನ್ ಗಳಿಸಲು ಸಾಕಷ್ಟು ಪರಿಶ್ರಮ ಪಡಬೇಕಾಗಿ ಬಂದಿತು. ನಿರಂತರವಾಗಿ ವಿಕೆಟ್‍ಗಳನ್ನು ಕಳೆದುಕೊಳ್ಳುತ್ತಾ ಸಾಗಿದ ಕೊಡವ ಟ್ರೈಬ್ 19.5 ಓವರ್‍ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 165 ರನ್‍ಗಳ ಗೌರವದ ಮೊತ್ತವನ್ನು ಪೇರಿಸಿತು. ಗೆಲುವಿನ ಮೊತ್ತವನ್ನು ಕಲೆಹಾಕುವಲ್ಲಿ ವಿಫಲವಾದ ರಾಯಲ್ ಟೈಗರ್ಸ್ ತಂಡ, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 127 ರನ್‍ಗಳನ್ನಷ್ಟೆ ಮಾಡಲು ಶಕ್ತವಾಗಿ ಸೋಲಿಗೆ ಶರಣಾಯಿತು. ಕೊಡವ ಟ್ರೈಬ್ ತಂಡದ ಗ್ಯಾನ್ ಸೋಮಯ್ಯ ಅವರು…
ಮಡಿಕೇರಿ ಮೇ 4 NEWS DESK : ಕುತಂತ್ರದಿಂದ ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿ ಹಿರಿಯರಿಗೆ ಗೌರವ ಅರ್ಪಿಸಿದರು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಆದಿಮಸಂಜಾತ ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್‍ಟಿ ಟ್ಯಾಗ್ ಕಲ್ಪಿಸಬೇಕು, ಕೊಡವ ಭೂಮಿ, ಭಾμÉ, ಸಾಂಸ್ಕøತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಖಾತ್ರಿ ಒದಗಿಸಬೇಕು, ಕೊಡವ ಸಾಂಪ್ರದಾಯಿಕ “ಸಂಸ್ಕಾರ ಗನ್” ಹಕ್ಕಿಗೆ ಸಾಂವಿಧಾನಿಕ ಭದ್ರತೆ ನೀಡಬೇಕು, ಟಿಪ್ಪು ಸಂಚಿನಿಂದ ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವರ ನರಮೇಧವನ್ನು ವಿಶ್ವ ರಾಷ್ಟ್ರಸಂಸ್ಥೆ ಯುಎನ್‍ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಒತ್ತಾಯಿಸಿದರು.…
ವಿರಾಜಪೇಟೆ ಮೇ 4 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ಚಿಣ್ಣರ ನಲಿಕಲಿ ಉಚಿತ ಬೇಸಿಗೆ ಶಿಬಿರವು ಸಮಾರೋಪಗೊಂಡಿತು. ಸುಮಾರು 25 ದಿವಸಗಳ ಕಾಲ ನಡೆದ ಶಿಬಿರದಲ್ಲಿ ಮಕ್ಕಳಿಗೆ ಯೋಗ, ಕರಾಟೆ, ಕ್ರೀಡೆ, ಕಂಪ್ಯೂಟರ್ ಕಲಿಕೆ, ಡ್ಯಾನ್ಸ್, ಮ್ಯೂಸಿಕ್, ದೈಹಿಕ ಶಿಕ್ಷಣ, ಮುಂತಾದ ವಿಚಾರಗಳ ಬಗ್ಗೆ ತರಬೇತಿಯನ್ನು ನೀಡಲಾಯಿತು. ಸಮಾರೋಪದ ದಿನದಂದು ಸಮೀಪದ ಹೆಗ್ಗಳ ಗ್ರಾಮದಲ್ಲಿರುವ ವೃದ್ಧಶ್ರಮದ ಹಿರಿಯರನ್ನು ಶಾಲೆಗೆ ಕರೆಯಿಸಿ ಶಾಲಾ ಮಕ್ಕಳಿಂದ ಮನೋರಂಜನಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಮಕ್ಕಳು ತಮ್ಮ ಕಾರ್ಯಕ್ರಮಗಳ ಮೂಲಕ ಹಿರಿಯರನ್ನು ರಂಜಿಸಿದರು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರು ಹಾಗೂ ಸಮಾಜ ಸೇವಕಿ ಪೂಜಾ ರವೀಂದ್ರ ಅವರು ಹಿರಿಯರನ್ನು ಸನ್ಮಾನಿಸಿ ಗೌರವಿಸಿದರು. ಮತ್ತು ಹೆಗ್ಗಳ ವೃದ್ಧಶ್ರಮಕ್ಕೆ ಏರ್ ಕೂಲರ್ ನ್ನು ಕೊಡುಗೆಯಾಗಿ ನೀಡಲಾಯಿತು. ನಂತರ ಶಾಲಾ ಮಕ್ಕಳನ್ನು ಹೆಗ್ಗಳದ ಗೋಲ್ಡನ್ ಬೀನ್ ರೆಸಾರ್ಟ್ ಗೆ ಕ್ಷೇತ್ರ ಭೇಟಿಗಾಗಿ ಕರೆದುಕೊಂಡು ಹೋಗಲಾಯಿತು. ಈ ಸಂದರ್ಭದಲ್ಲಿ ಶಾಲಾ ಕಾರ್ಯದರ್ಶಿ ಪ್ರತಿಮಾ ರಂಜನ್, ಶಿಕ್ಷಕರು,…
ಮಡಿಕೇರಿ ಮೇ 4 NEWS DESK : ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ಮೇ 5 ರಿಂದ 7ರ ವರೆಗೆ ನಡೆಯಲಿದೆ. ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಮೇ 5 ರಂದು ಸಂಜೆ 6 ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಮೇ 6 ರಂದು ಬೆಳಿಗ್ಗೆ 6 ಗಂಟೆಗೆ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ನಡೆಯಲಿದೆ. ::: ನಾಗದರ್ಶನ ::: ನಾಗ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶದ ಪ್ರಯುಕ್ತ…
ಮಡಿಕೇರಿ ಮೇ 4 NEWS DESK : ಕೊಡಗು ಜಿಲ್ಲೆಯ ಖಾಸಗಿ ಜಮೀನಿನಲ್ಲಿರುವ ಸರಕಾರಿ ಮರಗಳ ಸರ್ವೆ ಕಾರ್ಯವನ್ನು ತಕ್ಷಣ ಸ್ಥಗಿತಗೊಳಿಸದಿದ್ದಲ್ಲಿ ಬೆಳೆಗಾರರ ಬೆಂಬಲದೊಂದಿಗೆ ಅರಣ್ಯ ಇಲಾಖೆ ವಿರುದ್ಧ ಜಿಲ್ಲಾ ವ್ಯಾಪಿ ಬೃಹತ್ ಹೋರಾಟವನ್ನು ರೂಪಿಸಲಾಗುವುದು ಎಂದು ಜಿಲ್ಲಾ ಬಿಜೆಪಿ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಅರಣ್ಯ ಅಧಿಕಾರಿಗಳು ಖಾಸಗಿ ಜಮೀನಿನಲ್ಲಿರುವ ಸರಕಾರಿ ಮರಗಳ ಪಟ್ಟಿ ಮಾಡಿ ಕಂದಾಯ ಇಲಾಖೆಗೆ ವರದಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ತೊಡಗಿದೆ. ಜಿಲ್ಲೆಯ ಬೆಳೆಗಾರರಲ್ಲಿ ಗೊಂದಲ ಸೃಷ್ಟಿಸಿರುವ ಆದೇಶವನ್ನು ಸರಕಾರ ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು. ಜಿಲ್ಲೆಯ ಬೆಳೆಗಾರರು ಪರಿಸರಕ್ಕೆ ಪೂರಕವಾಗಿ ಮರಗಳನ್ನು ಸಂರಕ್ಷಿಸಿಕೊಂಡು ಬಂದಿದ್ದಾರೆ. ಯಾವುದೇ ದುರುದ್ದೇಶಕ್ಕೆ ಮರಗಳ ಹನನ ಮಾಡಿಲ್ಲ. ಕೊಡಗಿನ ಜನರ ಪರಿಸರ ಕಾಳಜಿಯಿಂದ ಅರಣ್ಯ ಪ್ರದೇಶ ಮತ್ತು ದೇವರಕಾಡುಗಳು ಸಂರಕ್ಷಿಸಲ್ಪಟ್ಟಿವೆ. ತೋಟ ಮಾಡುವಾಗಲೂ ಮರಗಳನ್ನು ಕಡಿಯುತ್ತಿಲ್ಲ, ಬದಲಿಗೆ ಹಸಿರನ್ನು ಕಾಪಾಡಿಕೊಂಡು ಬರಲಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸರಕಾರ ಏಕಾಏಕಿ ಖಾಸಗಿ ಜಮೀನಿನಲ್ಲಿರುವ ಮರಗಳ ಸರ್ವೆ…
ಮಡಿಕೇರಿ ಮೇ 4 NEWS DESK : ಚಿಂಚಾ ಪಾನಕಕ್ಕೆ ಇನ್ನೊಂದು ಹೆಸರು ಹುಣಸೆ ಹಣ್ಣಿನ ಪಾನಕ ಎನ್ನಬಹುದು. 100 ಗ್ರಾಂ ಹುಣಸೆ ಹಣ್ಣು, 400 ಮಿಲಿ ಬೆಲ್ಲದ ಪುಡಿ, 10 ಗ್ರಾಂ ಜೀರಿಗೆ ಪುಡಿ, 5 ಗ್ರಾಂ ಕಾಳುಮೆಣಸಿನ ಪುಡಿ, 5 ಗ್ರಾಂ ಸೈಂದವ ಲವಣ ಬಳಕೆ ಮಾಡುವ ಮೂಲಕ ಚಿಂಚಾ ಪಾನಕ ತಯಾರಿಸಬಹುದಾಗಿದೆ. ಚಿಂಚಾ ಪಾನಕವನ್ನು ತಯಾರಿಸುವ ವಿಧಾನ :ಹುಣಸೆ ಹಣ್ಣನ್ನು ಅಗತ್ಯ ಪ್ರಮಾಣದ ನೀರಿನಲ್ಲಿ ಇಡೀ ರಾತ್ರಿ ನೆನೆಸಬೇಕು. ಮರುದಿನ ಬೆಳಗ್ಗೆ ಅದನ್ನು ಶುದ್ಧವಾದ ಕೈಗಳಿಂದ ಚೆನ್ನಾಗಿ ಹಿಸುಕಿ ಸೋಸಿಕೊಳ್ಳಬೇಕು. ಅಗತ್ಯ ಪ್ರಮಾಣದಷ್ಟು ನೀರನ್ನು ಪಾತ್ರೆಯಲ್ಲಿ ಹಾಕಿಕೊಂಡು ಹುಣಸೆ ಹಣ್ಣಿನ ಮಿಶ್ರಣವನ್ನು ನೀರಿನ ಪಾತ್ರೆಗೆ ಬೆರೆಸಬೇಕು. ಬೆಲ್ಲದ ಪುಡಿ ಹಾಗೂ ಜೀರಿಗೆ ಪುಡಿ, ಕಾಳುಮೆಣಸು, ಸೈಂದವ ಲವಣವನ್ನು ಬೆರೆಸುವ ಮೂಲಕ ಚಿಂಚಾ ಪಾನಕ ಸಿದ್ದಪಡಿಸಿಕೊಳ್ಳಬೇಕು. ಪ್ರತೀ ದಿನ ಪ್ರತಿಯೊಬ್ಬರೂ 50 ರಿಂದ 100 ಮಿಲಿ ಚಿಂಚಾ ಪಾನಕ ಸೇವಿಸುವುದರಿಂದ ಜೀರ್ಣ ಕ್ರಿಯೆ ಉತ್ತಮಗೊಳ್ಳುತ್ತದೆ. ಮಲಬದ್ಧತೆ ನಿವಾರಣೆಯಾಗುವುದು. ಶರೀರದ…
ಮಡಿಕೇರಿ ಮೇ 4 NEWS DESK : ಭದ್ರಾವತಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಗೀತಾ ಶಿವರಾಜ್ ಕುಮಾರ್ ಅವರ ಪರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ರೋಡ್ ಶೋ ನಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಸಚಿವ ಚೆಲುವರಾಯಸ್ವಾಮಿ ಮತ್ತು ಪಕ್ಷದ ಮುಖಂಡರು ಹಾಜರಿದ್ದರು.
ಸುಂಟಿಕೊಪ್ಪ ಮೇ 4 NEWS DESK : ಸುಂಟಿಕೊಪ್ಪ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷರಾಗಿ ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ವಿ.ಸುನೀಲ್ ಕುಮಾರ್(ಸ್ವಾಗತ್) ನೇಮಕಗೊಂಡಿದ್ದಾರೆ. ಸುಂಟಿಕೊಪ್ಪ ಮಧುರಮ್ಮ ಬಡಾವಣೆಯ ವೃಕ್ಷೋದ್ಭವ ಗಣಪತಿ ದೇವಸ್ಥಾನದ ಆವರಣದಲ್ಲಿ ರಮೇಶ್ ಶೇಟ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಾರ್ಷಿಕೋತ್ಸವ ಸಮಿತಿಯ ಉಪಾಧ್ಯಕ್ಷರಾಗಿ ಪುಳಂಜನ ಕುಶಾಲಪ್ಪ, ಸಹಕಾರ್ಯದರ್ಶಿಯಾಗಿ ಶಿವರಾಮನ್,ಸಂಘಟನಾ ಕಾರ್ಯದರ್ಶಿಯಾಗಿ ನಿಖಿಲ್ ಹರೀಶ್, ಖಜಾಂಜಿಯಾಗಿ ಬಿ.ಎಸ್.ರಮೇಶ್, ಕಾರ್ಯಕಾರಿ ಸಮಿತಿ ಸದಸ್ಯರುಗಾಳಗಿ ಎ.ಶ್ರೀಧರ್ಕುಮಾರ್, ಮಹೇಶ್ ರೈ, ದಿವಾಕರ್ ಪೂಜಾರಿ, ದಿವಾಕರ್ ರೈ, ಕೆ..ಎನ್.ಪವಿ,ಬಿ.ಎಂ.ಸುರೇಶ್,ಸುರೇಶ್ಗೋಪಿ, ಲೋಕೇಶ್(ಲೋಕಿ), ಮಣಿಕಂಠ (ಮುನಿಯ),ಸುರೇಶ್ ಚಂದು,ಕಿಶೋರ್, ಬಿ.ಆರ್.ಸತೀಶ್, ವಿ.ಕೆ.ರಾಜ ಇವರುಗಳನ್ನು ದೇವಸ್ಥಾನದ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೇಮಕ ಮಾಡಲಾಯಿತು. ಈ ಸಂದರ್ಭ ಟ್ರಸ್ಟಿ ಕೆ.ಸುರೇಶ್ ಕುಮಾರ್, ಬಿ.ಎಸ್.ಸದಾಶಿವ ರೈ, ಮಾಜಿ ಅಧ್ಯಕ್ಷ ರಮೇಶ್ ಶೇಟ್ ಉಪಸ್ಥಿತರಿದ್ದರು. ದೇವಸ್ಥಾನ ಟ್ರಸ್ಟ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ.ಲೋಕೇಶ್ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






