ಲೇಖಕ: admin

ಮಡಿಕೇರಿ ಮೇ 3 NEWS DESK : ಇತ್ತೀಚಿನ ದಿನಗಳಲ್ಲಿ ದಾಖಲೆಯ ತಾಪಮಾನವನ್ನು ದಾಖಲಿಸಿಕೊಂಡಿದ್ದ ಕೊಡಗು ಜಿಲ್ಲೆಯಾದ್ಯಂತ ಇಂದು ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆಯೂ ನಡೆದಿದೆ. ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ, ನಾಪೋಕ್ಲು, ಕುಶಾಲನಗರ, ಕೊಪ್ಪ ಸೇರಿದಂತೆ ಹಲವೆಡೆ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ರಭಸವಾಗಿ ಗಾಳಿ ಬೀಸಿದ ಪರಿಣಾಮ ಕೆಲವು ಕಡೆ ಹಾನಿ ಸಂಭವಿಸಿದೆ. ಸಿಡಿಲು ಬಡಿದು ಅಸ್ಸಾಂ ಮೂಲದ ತೋಟದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಪ್ರಮಾತ್ ಗರ್ಮಾನಿ(37) ಮೃತ ದುರ್ದೈವಿ. ಬೆಟ್ಟಗೇರಿ ಕಾಫಿ ತೋಟದ  ಲೈನ್ ಮನೆಯಲ್ಲಿ ವಾಸವಾಗಿದ್ದ ಕಾರ್ಮಿಕ ಶುಕ್ರವಾರ ಸಂಜೆ ಮಳೆ ಸುರಿಯುವ ಸಂದರ್ಭ ಮನೆಯಿಂದ ಹೊರ ಬಂದಿದ್ದ ಎನ್ನಲಾಗಿದೆ. ಈ ವೇಳೆ ಸಿಡಿಲು ಬಡಿದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ತಕ್ಷಣವೇ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಅಷ್ಟೊತ್ತಿಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಘಟನೆ ಕುರಿತು…

Read More

ಮಡಿಕೇರಿ ಮೇ 3 NEWS DESK : ಮುಂಬೈನ ಸೋಮಯ್ಯ ವಿದ್ಯಾ ವಿಹಾರ್ ವಿಶ್ವವಿದ್ಯಾಲಯದಲ್ಲಿ ನಡೆದ 43ನೇ ಇಂಡಿಯಾ ಮಾಸ್ಟರ್ ಆಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2024ರಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳು ಉತ್ತಮ ಸಾಧನೆ ತೋರಿದ್ದಾರೆ. ಜಿಲ್ಲೆಯ ಕ್ರೀಡಾಪಟು ಪಾಸುರ ಇಂದಿರಾ ಮುತ್ತಣ್ಣ ಅವರು ಭಾರದ ಗುಂಡು ಎಸೆತ ಮತ್ತು ರಿಲೇಯಲ್ಲಿ ಪ್ರಥಮ, ಡಿಸ್ಕಸ್ ಎಸೆತ ಹಾಗೂ ಜಾವಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಜಿಲ್ಲೆಯ ಇನ್ನೊಬ್ಬರು ಕ್ರೀಡಾಪಟು ಮುಲ್ಲೆರ ಪೊನ್ನಮ್ಮ ಪೂವಣ್ಣ ಅವರು 100 ಮೀ. ಹಾಗೂ 200 ಮೀ. ಓಟ, ಭಾರದ ಗುಂಡು  ಹಾಗೂ ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿ ಕ್ರೀಡಾ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

Read More

ಮಡಿಕೇರಿ ಮೇ 3 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಶುಕ್ರವಾರದ ಎರಡನೇ ಪಂದ್ಯದಲ್ಲಿ ಕೊಡವ ವಾರಿಯರ್ಸ್ ತಂಡದ ವಿರುದ್ಧ ಎಂಟಿಬಿ ರಾಯಲ್ಸ್ ತಂಡಕ್ಕೆ 2 ವಿಕೆಟ್‌ಗಳ ಜಯ ದಾಖಲಿಸಿತು. ಕೊಡವ ವಾರಿಯರ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 19 ಓವರ್ ಗಳಲ್ಲಿ 10 ವಿಕೆಟ್ ನಷ್ಟಕ್ಕೆ 89 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಎಂಟಿಬಿ ರಾಯಲ್ಸ್ ತಂಡ 18 ಓವರ್ ಗಳಲ್ಲಿ 90 ರನ್ ದಾಖಲಿಸಿ ಜಯ ಸಾಧಿಸಿತು. ಸೋಮಣ್ಣ ಸಿ.ಎಂ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

Read More

ಮಡಿಕೇರಿ ಮೇ 3 NEWS DESK : ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು. ಜೀರ್ಣಕ್ರಿಯೆ ಉತ್ತಮಗೊಳಿಸಲು ಶರೀರದ ದಾಹ ನಿವಾರಣೆಗಾಗಿ ಆರೋಗ್ಯಕರ ಆಯುಷ್ ಪಾನಕ ಉತ್ತಮವಾಗಿದೆ. ಚಿಂಚಾ ಪಾನಕ ಮೂಲಕ ಶರೀರದ ದಾಹ ನಿವಾರಣೆ ಸಾಧ್ಯ ಎಂದು ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಶುಭ ರಾಜೇಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆಯಿಂದ ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಚಿಂಚಾ ಪಾನಕ ಸಿದ್ಧಪಡಿಸುವ ಹಾಗೂ ಉಪಯೋಗಿಸುವ ಬಗೆಯನ್ನು ಪರಿಚಯಿಸಿದರು. ಬೇಸಿಗೆಯಲ್ಲಿ ಅಧಿಕ ಉಷ್ಣಾಂಶದಿಂದಾಗಿ ಜನಸಾಮಾನ್ಯರು ಸುಸ್ತಾಗುವ ಸಂಭವ ಅಧಿಕವಾಗಿರುತ್ತದೆ. ದೇಹವನ್ನು ತಂಪು ಮಾಡುವ ಆಹಾರದಿಂದ ತಮ್ಮ ಆರೋಗ್ಯವನ್ನು ತಾವು ಕಾಯ್ದುಕೊಳ್ಳಬೇಕು. ಸರಿಯಾದ ಸಮಯಕ್ಕೆ ದೇಹಕ್ಕೆ ಸರಿಯಾಗಿ ಊಟ ಹಾಗೂ ಪಾನೀಯ ಸೇವನೆ ಮಾಡುವ ಮೂಲಕ ಜೀವನ ಶೈಲಿಯನ್ನು ಉತ್ತಮವಾಗಿಸಿಕೊಳ್ಳಬೇಕು ಎಂದರು. ಆಯುಷ್ ಇಲಾಖೆಯ ಮತ್ತೋರ್ವ ವೈದ್ಯಾಧಿಕಾರಿ ಡಾ.ಪಲ್ಲವಿ…

Read More

ಮಡಿಕೇರಿ ಮೇ 3 NEWS DESK : ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗದಂತೆ ಸ್ಥಳೀಯ ಮಟ್ಟದ ಅಧಿಕಾರಿಗಳು ಸಂದರ್ಭಾನುಸಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಿನ ಪೂರೈಕೆ ಸಮಸ್ಯೆ ಎದುರಾದಲ್ಲಿ ಹತ್ತಿರದ ಶಾಲೆ ಅಥವಾ ಅಂಗನವಾಡಿ ಕೇಂದ್ರಗಳಲ್ಲಿ ಇರುವ ಬೋರ್‍ವೆಲ್‍ಗಳ ನೀರನ್ನು ಬಳಕೆ ಮಾಡಿಕೊಳ್ಳಬೇಕು. ಸಾಧ್ಯವಾಗದಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಮುಂದಾಗುವಂತೆ ತಾಲ್ಲೂಕು ಆಡಳಿತಗಳಿಗೆ ಸೂಚನೆ ನೀಡಿದರು. ತಾಲ್ಲೂಕು ಮಟ್ಟದಲ್ಲಿ ಪ್ರತಿ ಹದಿನೈದು ದಿನಕ್ಕೊಮ್ಮೆ ಟಾಸ್ಕ್‍ಪೋರ್ಸ್ ಸಮಿತಿ ಸಭೆ ಏರ್ಪಡಿಸುವ ಮೂಲಕ ಸಮರ್ಪಕ ನೀರು ಪೂರೈಕೆಯಲ್ಲಿನ ತೊಂದರೆಗಳ ನಿವಾರಣೆಗೆ ಮುಂದಾಗಬೇಕು. ತಾಲ್ಲೂಕು ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಗತಿ ಪರಿಶೀಲನೆಯನ್ನು ಸಂದರ್ಭಾನುಸಾರ ನಡೆಸಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಕುಡಿಯುವ…

Read More

ಮಡಿಕೇರಿ ಮೇ 3 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಮೇ  7 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 3 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಶುಕ್ರವಾರದ ಸಂಘರ್ಷಪೂರ್ಣ ಪಂದ್ಯದಲ್ಲಿ ಕೂರ್ಗ್ ಬ್ಲಾಸ್ಟರ್ಸ್ ತಂಡ 5 ರನ್‍ಗಳ ಅಂತರದ ಮಹತ್ವದ ಗೆಲುವನ್ನು ಅಂಜಿಗೇರಿ ನಾಡ್ ತಂಡದ ವಿರುದ್ಧ ದಾಖಲಿಸಿತು. ಮೊದಲು ಬ್ಯಾಟಿಂಗ್‍ಗೆ ಇಳಿದ ಕೂರ್ಗ್ ಬ್ಲಾಸ್ಟರ್ಸ್ ತಂಡ, ಎದುರಾಳಿ ಅಂಜಿಗೇರಿ ನಾಡ್ ತಂಡದ ಬೌಲಿಂಗ್‍ನ್ನು ವಿಶ್ವಾಸದಿಂದ ಎದುರಿಸಿದ್ದಲ್ಲದೆ, ನಿಗದಿತ 20 ಓವರ್‍ಗಳಲ್ಲಿ 7 ವಿಕೆಟ್ ನಷ್ಟಕ್ಕೆ 173 ರನ್‍ಗಳ ಸ್ಪರ್ಧಾತ್ಮಕ ಮೊತ್ತವನ್ನು ಕಲೆ ಹಾಕಿತು. ತಂಡದ ತಿಮ್ಮಯ್ಯ ಅವರು ಕೇವಲ 56 ಬಾಲ್‍ಗಳಿಗೆ 71 ರನ್‍ಗಳನ್ನು ಕಲೆ ಹಾಕಿ ತಂಡದ ಮೊತ್ತವನ್ನು ಹೆಚ್ಚಿಸಲು ಮಹತ್ವದ ಕಾಣಿಕೆ ನೀಡಿದರು. ಗೆಲುವಿನ ಗುರಿ ಬೆನ್ನು ಹತ್ತಿದ ಅಂಜಿಗೇರಿ ನಾಡ್ ತಂಡ, ವಿಶ್ವಾಸಪೂರ್ಣ ಆಟವನ್ನೆ ಪ್ರದರ್ಶಿಸಿತು. ಹೀಗಿದ್ದೂ ಕೊನೆಯ ಓವರ್‍ಗಳಲ್ಲಿ ನಿರೀಕ್ಷಿತ ರನ್‍ಗಳನ್ನು ಕಲೆ ಹಾಕಲು ಸಾಧ್ಯವಾಗದೆ ಅಂತಿಮವಾಗಿ 20…

Read More

ಮಡಿಕೇರಿ ಮೇ 3 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮೇ 5 ರಂದು ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‍ನ 110ನೇ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ. ನಗರದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಕಚೇರಿಯಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೆ.ಆರ್.ನಗರದ ಸಂತ ಅಂತೋಣಿ ಪ್ರೌಢಶಾಲೆಯ ಅಧ್ಯಾಪಕರಾದ ವಿಲ್‍ಫ್ರಡ್ ಕ್ರಾಸ್ತಾ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮ್ ಕುಮಾರ್ ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮೇ 3 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ನಂತರ ರಾಜ್ಯದಲ್ಲಿ ಜಾತ್ಯತೀತ ಜನತಾದಳ ಸಂಪೂರ್ಣವಾಗಿ ಜನರ ವಿಶ್ವಾಸವನ್ನು ಕಳೆದುಕೊಂಡಿದ್ದು, ಈ ಪಕ್ಷವನ್ನು ವಿಸರ್ಜಿಸುವುದು ಸೂಕ್ತವೆಂದು ಕೊಡಗು ಜಿಲ್ಲಾ ಜೆಡಿಎಸ್ ಮಾಜಿ ವಕ್ತಾರ ಸೂದನ ಎಸ್.ಈರಪ್ಪ ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಸದ ಪ್ರಜ್ವಲ್ ಹಾಗೂ ಶಾಸಕ ಹೆಚ್.ಡಿ.ರೇವಣ್ಣ ಅವರ ವಿರುದ್ಧ ಗಂಭೀರವಾದ ಆರೋಪಗಳು ಕೇಳಿ ಬಂದಿದ್ದು, ಇದು ಜೆಡಿಎಸ್ ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಮುಜುಗರವನ್ನುಂಟು ಮಾಡಿದೆ. ಯಾವುದೇ ಕಾರಣಕ್ಕೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸತ್ಯದ ಪರ ನಿಲ್ಲಬೇಕೆ ಹೊರತು ತಮ್ಮ ಕುಟುಂಬದ ಪರ ನಿಲ್ಲಬಾರದು ಎಂದು ಒತ್ತಾಯಿಸಿದ್ದಾರೆ. ರಾಜ್ಯದ ಜನ ಪಕ್ಷದ ಮೇಲಿಟ್ಟಿದ್ದ ಅಭಿಮಾನಕ್ಕೆ ದ್ರೋಹವಾಗಿದೆ. ಅದರಲ್ಲೂ ಮಹಿಳಾ ಸಮೂಹಕ್ಕೆ ಅವಮಾನವಾಗಿದೆ. ಪ್ರಕರಣದ ಉನ್ನತ ಮಟ್ಟದ ತನಿಖೆಯಿಂದಷ್ಟೇ ಸತ್ಯ ಬಯಲಾಗಲಿದೆ. ಜನ ಬೆಂಬಲ ಕಳೆದುಕೊಂಡ ಪಕ್ಷವನ್ನು ತಕ್ಷಣ ವಿಸರ್ಜಿಸಬೇಕೆಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ಸಿಗರು ಈ ಸನ್ನಿವೇಶವನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬದಲು ತಮ್ಮ ಪಕ್ಷದೊಳಗಿನ…

Read More