ಲೇಖಕ: admin

ಮಡಿಕೇರಿ ಮೇ 3 NEWS DESK : ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ದೇಶದ ಪ್ರಧಾನಿ ನರೇಂದ್ರಮೋದಿ ಅವರ ಕುರಿತು ನೀಡಿರುವ ಹೇಳಿಕೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಅವರು ಇಡೀ ವಿಶ್ವವೇ ಮೆಚ್ಚಿಕೊಂಡಿರುವ ನಾಯಕ ನರೇಂದ್ರಮೋದಿ ಅವರ ಬಗ್ಗೆ “ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ” ಎಂದು ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಕೀಳು ಮಟ್ಟದ ಸಂಸ್ಕøತಿಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ. ಜನರ ಆಶೀರ್ವಾದದಿಂದ ಮೋದಿ ಅವರು ದೀರ್ಘಾಯುಷ್ಯ ಹೊಂದುತ್ತಾರೆ ಮತ್ತು ಈ ಬಾರಿಯೂ ದೇಶದ ಪ್ರಧಾನಿಯಾಗಿ ಆಡಳಿತ ನಡೆಸಲಿದ್ದಾರೆ. ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ಸಿಗರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಮೋದಿಜೀ ಅವರು ಯಾಕೆ ಸಾಯಬೇಕು? 370ನೇ ವಿಧಿ ರದ್ದು ಮಾಡಿ ಜಮ್ಮು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿ ಪರಿವರ್ತಿಸಿದ್ದಕ್ಕಾಗಿಯೇ,…

Read More

ಮಡಿಕೇರಿ ಮೇ 3 NEWS DESK : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರದ, ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಚುನಾವಣಾ ಕಾರ್ಯಸೂಚಿಯನ್ನು ಹೊರಡಿಸಿದೆ. ಮೇ 9 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ, ಮೇ 20 ರಂದು ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜೂ.3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6 ರಂದು ಮತ ಎಣಿಕೆ ನಡೆಯಲಿದೆ. ಈ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು 30 ವರ್ಷಗಳಿಗೆ ಕಡಿಮೆ ಇರಕೂಡದು. ಮತ್ತು ಅವರು ಕರ್ನಾಟಕದ ಯಾವುದಾದರು ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ/ ಸಹಾಯಕ…

Read More

ಮಡಿಕೇರಿ ಮೇ 3 NEWS DESK : ಮಡಿಕೇರಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುವ ಭಾಗಮಂಡಲ ಫೀಡರ್‍ನಲ್ಲಿ ಮಳೆಗಾಲದ ಮುಂಜಾಗ್ರತಾ ನಿರ್ವಹಣೆ ನಡೆಸಬೇಕಾಗಿರುವುದರಿಂದ ಮೇ 4 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3.30 ಗಂಟೆಯವರೆಗೆ ಬೆಟ್ಟಗೇರಿ, ಚೇರಂಬಾಣೆ, ಭಾಗಮಂಡಲ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

Read More

ಮಡಿಕೇರಿ ಮೇ 3 NEWS DESK : ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ನಿಡ್ತ ಗ್ರಾಮದ ಶ್ರೀ ಬಸವೇಶ್ವರ ಮತ್ತು ಶ್ರೀ ಕನ್ನಂಬಾಡಿಯಮ್ಮ ದೇವಾಲಯದಲ್ಲಿ ಮೇ 6 ರಂದು  ವಾರ್ಷಿಕ ಪೂಜೋತ್ಸವ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ  ದಯಾನಂದ ಮತ್ತು ಕುಟುಂಬದವರು ಮನವಿ ಮಾಡಿದ್ದಾರೆ.

Read More

ಪುತ್ತೂರು ಮೇ 3  NEWS DESK : ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಿಲ್ಲದೆ ಭವಿಷ್ಯದ ದಿನಗಳಿಲ್ಲ ಎನ್ನುವವರೆಗೆ ಸರ್ವವ್ಯಾಪಿಯಾಗಿದೆ. ಯಾವುದೇ ತಂತ್ರಜ್ಞಾನವಾದರೂ ಅದರ ಬಳಕೆಯ ವಿಧಾನದ ಮೇಲೆ ಒಳಿತು ಕೆಡುಕುಗಳು ನಿರ್ಧರಿತವಾಗುತ್ತವೆ ಎಂದು ಎಂಐಟಿ ಮಣಿಪಾಲದ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಅಸೋಸಿಯೇಟ್ ಪ್ರೋಫೆಸರ್ ಡಾ.ರಾಘವೇಂದ್ರ ಎಸ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2024” ಕ್ಕೆ ಚಾಲನೆ ನೀಡಿ ಅವರು ಮಾತಾಡಿದರು. ಯಾವುದೇ ತಂತ್ರಜ್ಞಾನಕ್ಕೆ ಅದರದ್ದೇ ಆದ ಮಿತಿ ಇರುತ್ತದೆ. ಹಾಗಾಗಿ ಸಂಪೂರ್ಣವಾಗಿ ಅದರ ಮೇಲೆ ಅವಲಂಬಿತವಾಗದೆ ಅದರ ಸಹಾಯವನ್ನು ಪಡೆದುಕೊಳ್ಳಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ…

Read More

ಸೋಮವಾರಪೇಟೆ ಮೇ 3 NEWS DESK : ಹಾನಗಲ್ಲುಬಾಣೆ ಗ್ರಾಮದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಮೂರು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಗಂಗಾಪೂಜೆಯೊಂದಿಗೆ ಆರಂಭಗೊಂಡ ವಾರ್ಷಿಕ ಪೂಜೋತ್ಸವಲ್ಲಿ ಗಣಪತಿ ಹೋಮ, ಅಲಂಕಾರ ಸೇವೆ, ಮಹಾಮಂಗಳಾರತಿ, ಸಾರ್ವಜನಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ದೇವಾಲಯ ಸಮಿತಿ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಗಣೇಶ್ ಸೇರಿದಂತೆ ಸಮಿತಿ ಪದಾಧಿಕಾರಿಗಳು ಪೂಜೋತ್ಸವದ ಉಸ್ತುವಾರಿ ವಹಿಸಿದ್ದರು. ಶಾಸಕ ಡಾ. ಮಂತರ್ ಗೌಡ ಸೇರಿದಂತೆ ಇತರ ಪ್ರಮುಖರು ಇದ್ದರು.

Read More

ಮಡಿಕೇರಿ ಮೇ 3 NEWS DESK : ವಿರಾಜಪೇಟೆ ಶಿವಕೇರಿಯಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಶ್ರೀ ಆದಿ ದಂಡಿನ ಮಾರಿಯಮ್ಮ ಮತ್ತು ಶ್ರೀ ಚಾಮುಂಡಿ (ಚೌಂಡಿ) ದೇವರ ಉತ್ಸವವು ಮೇ 7 ರಿಂದ 10ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಮೇ 7 ರಂದು ಪ್ರಾತಃಕಾಲ 6 ಗಂಟೆಗೆ ಗಣಪತಿ ಹೋಮ, ಬೆಳಿಗ್ಗೆ 8.30 ಗಂಟೆಗೆ ಕಳಸ ಪೂಜೆ, ಮಧ್ಯಾಹ್ನ 12 ಗಂಟೆಗೆ ದೇವಿಗೆ ಹೂವಿನ ಅಲಂಕಾರದೊಂದಿಗೆ ಮಹಾಪೂಜೆ ಮತ್ತು ಮಂಗಳಾರತಿ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಅನ್ನದಾನ ನೆರವೇರಲಿದೆ. ಅಪರಾಹ್ನ 2 ಗಂಟೆಗೆ ದೇವರ ಪಲ್ಲಕ್ಕಿಯನ್ನು ಅಲಂಕೃತ ಮಂಟಪದೊಂದಿಗೆ ವಿರಾಜಪೇಟೆಯ ಮುಖ್ಯಬೀದಿಯಲ್ಲಿ ಮೆರವಣಿಗೆ ನಡೆಯಲಿದ್ದು, ರಾತ್ರಿ 9 ಗಂಟೆಗೆ ತಳಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ 10 ಗಂಟೆಗೆ ಆರತಿ ಪೂಜೆ, ಮಹಾಪೂಜೆ ಹಾಗೂ ಮಂಗಳಾರತಿ ನೆರವೇರಲಿದೆ. ಮೇ 8 ರಂದು ಬೆಳಿಗ್ಗೆ 10 ಗಂಟೆಗೆ ಪೂಜೆ, ಮಧ್ಯಾಹ್ನ…

Read More

ಮಡಿಕೇರಿ ಮೇ 3 NEWS DESK : ಚೆಯ್ಯಂಡಾಣೆ ಸಮೀಪದ ಚೇಲಾವರದಲ್ಲಿ ಪಿ.ಜೆ.ಪುತ್ರ, ಜಯನವರ ಮನೆಯಲ್ಲಿ ನೂತನವಾಗಿ ಸ್ಥಾಪನೆ ಗೊಂಡಿರುವ ಶ್ರೀ ಸ್ವಾಮಿ ಕೊರಗಜ್ಜನ ಸನ್ನಿಧಿಯಲ್ಲಿ ಮೇ 4 ಮತ್ತು 5 ರಂದು ದೈವ ಕೋಲಗಳು ನಡೆಯಲಿದೆ. ಮೇ 4 ರಂದು ಬೆಳಿಗ್ಗೆ 6.30 ಗಂಟೆಗೆ ಗಣಪತಿ ಪೂಜೆ, ಅಪರಾಹ್ನ 3 ಗಂಟೆಗೆ ಭಂಡಾರ ತೆಗೆಯುವುದು, ಸಂಜೆ 4 ಗಂಟೆಗೆ ಗುಳಿಗ ದೈವದ ಕೋಲ, ರಾತ್ರಿ 8.30 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9.30 ಗಂಟೆಗೆ ಪಾಷಾಣಮೂರ್ತಿ ದೈವದ ಕೋಲ, ರಾತ್ರಿ 11.30 ಗಂಟೆಗೆ ಮಯೊಂತಿ ದೈವದ ಕೋಲ ನೆರವೇರಲಿದೆ. ಮೇ 5 ರಂದು ಬೆಳಿಗ್ಗೆ 6 ಗಂಟೆಗೆ ಪ್ರಸಾದ ವಿತರಣೆ, ಬೆಳಿಗ್ಗೆ 7 ಗಂಟೆಗೆ ಸ್ವಾಮಿ ಕೊರಗಜ್ಜ ದೈವದ ಕೋಲ, ಮಧ್ಯಾಹ್ನ 12.30 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ  ನಡೆಯಲಿದೆ. ಎರಡು ದಿನಗಳಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ನೇಮೋತ್ಸವ ನಡೆಯಲಿದ್ದು,  ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಕೊರಗಜ್ಜ ದೈವ ಸನ್ನಿಧಿಯ ಆಡಳಿತ ಮಂಡಳಿ ಕೋರಿದೆ. ಅನ್ನದಾನ…

Read More

ಮಡಿಕೇರಿ ಮೇ 3 NEWS DESK : ಸೋಮವಾರಪೇಟೆ ಲಯನ್ಸ್ ಕ್ಲಬ್ ಮತ್ತು ಬೆಂಗಳೂರಿನ ಯಲಹಂಕ ಲಯನ್ಸ್ ಕ್ಲಬ್  ವತಿಯಿಂದ  ಗರಗಂದೂರು ಬಿ ಗ್ರಾಮದ ಹೊಸತೋಟದಲ್ಲಿ ರುದ್ರಭೂಮಿ ಶಂಕುಸ್ಥಾಪನ ಸಮಾವೇಶ ನಡೆಯಿತು. ಸೋಮವಾರಪೇಟೆ ಲಯನ್ಸ್ ಅಧ್ಯಕ್ಷ ಎಸ್.ಮಹೇಶ್ ಮಾತನಾಡಿ, ಬಡ ಕುಟುಂಬದ ಪ್ರದೇಶವಾದ ಈ ಭಾಗದಲ್ಲಿ ಸುಸಜ್ಜಿತವಾದ ಸಿಲಿಕಾನ್ ಚೇಂಬರ್ ಒಳಗೊಂಡ ರುದ್ರ ಭೂಮಿ ನಿರ್ಮಾಣ ಮಾಡಲು ಸೋಮವಾರಪೇಟೆ ಲಯನ್ಸ್ ಕ್ಲಬ್ ಮತ್ತು ಬೆಂಗಳೂರಿನ ಯಲಹಂಕ ಲಯನ್ಸ್ ಕ್ಲಬ್  ನಿರ್ಧರಿಸಿದ್ದು,  ಅಂದಾಜು 4.30 ಲಕ್ಷ ರೂಪಾಯಿಗಳನ್ನು ವಿನಯೋಗಿಸುತ್ತಿದೆ ಎಂದರು. ಈ ಸಂದರ್ಭ ಸೋಮವಾರಪೇಟೆ ಲಯನ್ಸ್ ಕ್ಲಬ್ ಕಾರ್ಯದರ್ಶಿ ಚಾವಡಿ ಶಿವಕುಮಾರ್ ಯಲಹಂಕ, ಲಯನ್ಸ್ ಅಧ್ಯಕ್ಷ  ಜಯಪ್ರಕಾಶ್, ಕಾರ್ಯದರ್ಶಿ  ಜಿತೇಂದ್ರ ಸಿಂಗ್,  ಚಿಟ್ಟಿಮಾಡ ರೋಹಿತ್, ನಂಗಾರು ರಾಮಚಂದ್ರ, ಎ.ಪಿ.ಸುಬ್ಬಯ್ಯ, ಮುಖಂಡರಾದ ರಾಜು, ಗ್ರಾಮ ಪಂಚಾಯತಿ ಉಪಾಧ್ಯಕ್ಷ  ಸಲೀಂ ಹಾಜರಿದ್ದರು.

Read More

ಮಡಿಕೇರಿ ಮೇ 3 NEWS DESK : ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ರಚಿಸಿದ ವನ್ಯಜೀವಿ ಕುರಿತ ನಾಲ್ಕು ಪುಸ್ತಕಗಳು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಆಶ್ರಯದಲ್ಲಿ ಮೇ 9 ರಂದು ಬಿಡುಗಡೆಯಾಗಲಿದೆ. ಮೈಸೂರು ಕಲ್ಚರಲ್ ಅಸೋಸಿಯೇಶನ್, ಬೆಂಗಳೂರಿನ ಅಕ್ಷರ ಮಂಟಪ ಪಬ್ಲಿಕೇಷನ್ ಸಹಯೋಗದಲ್ಲಿ  ಬೆಳಗ್ಗೆ 10.30ಕ್ಕೆ ವಿಜ್ಞಾನ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಐತಿಚಂಡ ರಮೇಶ್ ಉತ್ತಪ್ಪ ಅವರ `ಕಾಡು ಹೇಳಿದ ಕಥೆ’, `ಹಾವು, ನಂಬಿಕೆ ಹಾಗೂ ಮನೋವೈಜ್ಞಾನಿಕ ವಿಶ್ಲೇಷಣೆ’, `ಆನೆ, ಬದಲಾದ ವರ್ತನೆ’, `ಅರ್ಜುನ, ನಿನ್ನ ಮರೆಯಲೆಂತು ನಾ’ ಕೃತಿಗಳು ಲೋಕಾರ್ಪಣೆಯಾಗಲಿವೆ. ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ.ಲೋಕನಾಥ್ ಉದ್ಘಾಟಿಸಲಿದ್ದಾರೆ. ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ಶ್ರೀ ವಿಶ್ವೇಶ್ವರ ಭಟ್, ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀ ರವಿಂದ್ರ ಭಟ್, ವಿಜಯ ಕರ್ನಾಟಕ ಪತ್ರಿಕೆ ಸಂಪಾದಕ ಶ್ರೀ ಸುದರ್ಶನ ಚನ್ನಂಗಿಹಳ್ಳಿ, ವಿಜಯವಾಣಿ ಪತ್ರಿಕ ಸಂಪಾದಕ  ಕೆ.ಎನ್.ಚನ್ನೇಗೌಡ, ಕನ್ನಡ ಪ್ರಭಾ ಪತ್ರಿಕೆ ಪ್ರಧಾನ ಸಂಪಾದಕ ಶ್ರೀ…

Read More