ಲೇಖಕ: admin

ನಾಪೋಕ್ಲು ಮೇ 2 NEWS DESK : ಚೇರಂಬಾಣೆ ಗ್ರಾ.ಪಂ ವತಿಯಿಂದ ಬೇಂಗೂರು ಗ್ರಾಮದ ಶ್ರೀ ನಾಡು ಕಡಪಾಲಪ್ಪ ದೇವಾಲಯದ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ದ್ವಾದಶ ನಾಳಿಕೇರ ಗಣಯಾಗ, ನವಗ್ರಹ ಯಾಗ, ರಕ್ಷಾ ಕಲಶ ಪ್ರತಿಷ್ಠೆ, ಬಿಂಬಶುದ್ಧಿ, ಕಡಪಾಲಪ್ಪ ದೇವರ ಪುನರ್ ಪ್ರತಿಷ್ಠೆ, ಜೀವಕುಂಭಾಭಿಷೇಕ, ಮಹಾ ಗಣಪತಿ ದೇವರ ಪ್ರತಿಷ್ಠೆ ,ಶಾಂತಿ ಪೂಜೆ, ಪ್ರಾಯಶ್ಚಿತ ಹೋಮ, ಆಶ್ಲೇಷಬಲಿ, ತತ್ವ ಹೋಮ, ಬ್ರಹ್ಮ ಕಲಶ, ಮಂಡಲ ಪೂಜೆ, ಕಡಪಾಲಪ್ಪ ದೇವರಿಗೆ ಶಾಂತಿ ಪ್ರಾಯಶ್ಚಿತ ಹೋಮಗಳು, ತತ್ವ ಕಲಶಾ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ವಿಶೇಷ ಅಲಂಕಾರ, ಮಹಾಪೂಜೆ ಮಂಗಳಾರತಿ ಬಲಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ನಡೆಯಿತು. ನಂತರ ದೇವರ ಪ್ರದರ್ಶನ, ನೃತ್ಯಬಲಿ ನಡೆಯಿತು. ವಿವಿಧೆಡೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕೊಳಲು ವಾದನ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗ್ರಾಮದ ಜನರ ಮನಸೂರೆಗೊಂಡವು. ಬೇಂಗೂರು ಗ್ರಾಮದ ಶ್ರೀ ದೇವರ ನೂತನ ಶಿಲಾಮಯ…

Read More

ನಾಪೋಕ್ಲು ಮೇ 2 NEWS DESK : ಚೇರಂಬಾಣೆಯ ಅರುಣ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎ.ಟಿ.ಬಾಲಕೃಷ್ಣ ಅವರನ್ನು ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಸನ್ಮಾನಿಸಿ, ಗೌರವ ಪೂರಕವಾಗಿ ಬೀಳ್ಕೊಟ್ಟರು. ವರದಿ : ದುಗ್ಗಳ ಸದಾನಂದ

Read More

ಮಡಿಕೇರಿ ಮೇ 2 NEWS DESK : ಸೋಮವಾರಪೇಟೆ ಲಯನ್ಸ್ ಕ್ಲಬ್  ವತಿಯಿಂದ ಗರಗಂದೂರು ಬಿ ಗ್ರಾಮದ ಕೆ.ಸಿ.ಪೂರ್ವಿಕ ಅವರನ್ನು ಸನ್ಮಾನಿಸಲಾಯಿತು. ಗರಗಂದೂರು ಬಿ ಗ್ರಾಮದ ಚಿದಾನಂದ ಮತ್ತು  ಲತಾ ದಂಪತಿಗಳ ಪುತ್ರಿ ಕೆ.ಸಿ.ಪೂರ್ವಿಕ  ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆಯುವುದರ ಮೂಲಕ ಅಪೂರ್ವ ಸಾಧನೆ  ಮಾಡಿದ್ದಾರೆ. ಇವರ ಈ ಸಾಧನೆಯನ್ನು ಗುರುತಿಸಿ ಸೋಮವಾರಪೇಟೆ ಲಯನ್ಸ್ ಕ್ಲಬ್  ವತಿಯಿಂದ ನಡೆದ ಸಮಾರಂಭದಲ್ಲಿ  ಸನ್ಮಾನಿಸಿ, ಗೌರವಿಸಲಾಯಿತು. ಲಯನ್ಸ್ ಕ್ಲಬ್  ಅಧ್ಯಕ್ಷ  ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಪ್ರಾಂತೀಯ ಅಧ್ಯಕ್ಷ ಅಂಬೆಕಲ್ಲು ನವೀನ್,  ವಲಯ ಅಧ್ಯಕ್ಷ ಚಿಟ್ಟಿಮಾಡ ರೋಹಿತ್, ಬೆಂಗಳೂರು ಲಯನ್ಸ್ ಕ್ಲಬ್  ಅಧ್ಯಕ್ಷ  ಜಯಪ್ರಕಾಶ್, ಕಾರ್ಯದರ್ಶಿ ಜಿತೇಂದ್ರ ಸಿಂಗ್, ಸೋಮವಾರಪೇಟೆ ಲಯನ್ಸ್ ಕ್ಲಬ್ ಕಾರ್ಯದರ್ಶಿ ಶಿವಕುಮಾರ್, ಖಜಾಂಚಿ ವಿರಪ್ಪ ಹಾಜರಿದ್ದರು. ಲಾವಣ್ಯ ಅವರ ಪರಿಚಯವನ್ನು ಶಿಕ್ಷಕಿ ರಾಗಿಣಿ ಮಂಡಿಸಿದರು.

Read More

ಸುಂಟಿಕೊಪ್ಪ ಮೇ 1 NEWS DESK : ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 46ನೇ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಏ.29 ರಿಂದ ಆರಂಭಗೊಂಡ ವಾರ್ಷಿಕ ಮಹೋತ್ಸವದಲ್ಲಿ ವಿವಿಧ ಪೂಜಾ ಮತ್ತು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ದೀಪರಾಧನೆ, ಏಳು ಸುತ್ತಿನ ಪ್ರದಕ್ಷಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ನಡೆಯಿತು. ಮಂಗಳವಾರದಂದು ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆಯೊಂದಿಗೆ ಭಕ್ತರ ಹರಕೆ ಮತ್ತು ಬೇಡಿಕೆಗಳು ನಡೆದವು. ರಾತ್ರಿಯಿಂದ ವಿವಿಧ ದೈವಗಳ ಕೋಲ ನಡೆದ ಸಂದರ್ಭ ಆಕರ್ಷಕ ಪಟಾಕಿ ಮತ್ತು ಸಿಡಿಮದ್ದಿನ ಕಾರ್ಯಕ್ರಮ ಬಾನಂಗಳದಲ್ಲಿ ಚೆಲುವಿನ ಚಿತ್ತಾರವನ್ನು ಬಿಡಿಸುವ ಮೂಲಕ ಭಕ್ತರು ವಯಸ್ಕರು ಎನ್ನದೆ ನೇರೆದಿದ್ದ ಜನಸ್ತೋಮದ ಮನಸೂರೆಗೊಂಡಿತು. ಬುಧವಾರ ಪೂರ್ವಾಹ್ನ ಅಜ್ಜಪ್ಪ ಕೋಲ ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲದೊಂದಿಗೆ ಶ್ರೀದೇವಿ ನೇವೈದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಮೂರು ದಿನಗಳ ಕಾಲ ನಡೆದ…

Read More

ವಿರಾಜಪೇಟೆ ಮೇ 2 :  ವಿರಾಜಪೇಟೆ ನಗರದ ಶಕ್ತಿ ದೇವತೆ ರಾಜ ಬೀದಿಯಾಗಿರುವ ತೆಲುಗರ ಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ಮಾರಿಯಮ್ಮ ದೇವಾಲಯದ ವಾರ್ಷಿಕ ಕರಗ ಮಹೋತ್ಸವವು ಮೇ 7 ರಿಂದ 11ರ ಆರಂಭವಾಗಲಿದೆ. ಐದು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಮೇ 7 ರಂದು ದೇವಿಯ ಕರಗವನ್ನು ಮೆರವಣಿಗೆಯೊಂದಿಗೆ ದೇವಾಲಯಕ್ಕೆ ಆಗಮನ,  ರಾತ್ರಿ ದೇವಾಲಯದಲ್ಲಿ ಮಾಹಾಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ. ಮೇ 8 ರಂದು ರಾತ್ರಿ 7 ಗಂಟೆಗೆ  ತಂಬಿಟ್ಟು ಆರತಿ ಸೇವೆ ಮತ್ತು ವಿಶೇಷ ಪೂಜೆ ಪ್ರಸಾದ ವಿನಿಯೋಗ ನಡೆಯಲಿದೆ.  ಮೇ 9 ರಂದು ಮಧ್ಯಾಹ್ನ ಶ್ರೀ ದೇವಿಗೆ ವಿಶೇಷ ಅಲಂಕಾರ ಸೇವೆ, ಹರಿಕೆ ಸೇವೆಗಳು ಮತ್ತು ಮಾಹಾಪೂಜೆ, ಮಾಹಾ ಮಂಗಳಾರತಿ ನಡೆಯಲಿದ್ದು, ಬಳಿಕೆ ವಿಶೇಷ ಮಾಹಾ ಪ್ರಸಾದ ಜರುಗಲಿದೆ. ಮೇ 10 ರಂದು ತೆಲುಗರ ಬೀದಿ, ಜೈನರ ಬೀದಿ, ಎಫ್. ಎಂ.ಸಿ.ರಸ್ತೆ, ಖಾಸಗಿ ಬಸ್ಸು ನಿಲ್ದಾಣ ಜಂಕ್ಷನ್ ವರೆಗೆ ಸಂಚರಿಸಿ…

Read More

ಮಡಿಕೇರಿ ಮೇ 1 NEWS DESK : ಕೊಡಗು ಜಿಲ್ಲಾ ಎಐಟಿಯುಸಿ ಕಾರ್ಮಿಕ ಸಂಘಟನೆ ವತಿಯಿಂದ ಬಿಳಿಗೇರಿ ಗ್ರಾಮದಲ್ಲಿ ವಿಶ್ವ ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಎಐಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರ ನೇತೃತ್ವದಲ್ಲಿ ಟಾಟಾ ಸಂಸ್ಥೆಯ ಜಂಬೂರು ತೋಟದ ಕಾರ್ಮಿಕರ ಸಮ್ಮುಖದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭ ಮಾತನಾಡಿದ ಹೆಚ್.ಎಂ.ಸೋಮಪ್ಪ ಅವರು ಕಾರ್ಮಿಕರ ಶ್ರಮದಿಂದ ಇಂದು ದೇಶ ಪ್ರಗತಿಯನ್ನು ಸಾಧಿಸುತ್ತಿದೆ. ಕಾರ್ಮಿಕ ವರ್ಗ ಸದಾ ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕೆಂದು ಕರೆ ನೀಡಿದರು. ನೆರೆದಿದ್ದ ಕಾರ್ಮಿಕರು ಶ್ರಮಿಕ ವರ್ಗದ ಪರ ಘೋಷಣೆಗಳನ್ನು ಕೂಗಿದರು. ಹೋಬಳಿ ಅಧ್ಯಕ್ಷ ಗಣೇಶ, ಕಾರ್ಮಿಕ ನಾಯಕ ಲೋಕೇಶ್, ಸೂರ್ಯ, ಪ್ರೇಮ, ಸಂಜೀವ, ಕೆ.ಎಂ.ನಾರಾಯಣ, ರಮೇಶ್ ಮತ್ತಿತರ ಕಾರ್ಮಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಮೇ 1 NEWS DESK : ಸ್ಕೌಟ್ಸ್, ಗೈಡ್ಸ್  ರಾಜ್ಯ ಸಂಸ್ಥೆಯ ಉಪಾಧ್ಯಕ್ಷರಾದ ಎ.ಎನ್.ಮಹೇಶ್ ಅವರು ಮಡಿಕೇರಿಯ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್, ಗೈಡ್ಸ್ ಭವನಕ್ಕೆ ಭೇಟಿ ನೀಡಿದರು. ಸಂಸ್ಥೆಯ ಶತಮಾನೋತ್ಸವ ಭವನದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗವನ್ನು ಪರಿಶೀಲಿಸಿದರು. ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾಹಿತಿ ನೀಡಿದರು. ಈ ಸಂದರ್ಭ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಮೇ 1 NEWS DESK  : ವಿಶ್ವವ್ಯಾಪಿಯಾಗಿರುವ ಸ್ಕೌಟ್, ಗೈಡ್ಸ್ ಸಂಸ್ಥೆಯ ಚಳುವಳಿ ಒಂದು ಯುವ ಜನಾಂಗದ ಕೂಟ. ಈ ಚಳುವಳಿಯ ಉದ್ದೇಶವು ಯುವ ಪೀಳಿಗೆಯಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ, ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದರೊಂದಿಗೆ ಯುವ ಸಮೂಹದಲ್ಲಿ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆ ವೃದ್ಧಿಗೆ ಸಹಕಾರಿಯಾಗಿದೆ ಎಂದು ಸ್ಕೌಟ್ಸ್, ಗೈಡ್ಸ್ ನ ರಾಜ್ಯ ಸಂಸ್ಥೆಯ ಉಪಾಧ್ಯಕ್ಷ ಎ.ಎನ್.ಮಹೇಶ್ ಹೇಳಿದರು. ಮಡಿಕೇರಿ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಕಚೇರಿಗೆ ಭೇಟಿ ನೀಡಿ ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಕಚೇರು ಆವರಣದಲ್ಲಿ ನಿರ್ಮಿಸಲುದ್ದೇಶಿಸಿರುವ ಶತಮಾನೋತ್ಸವ ಭವನ ನಿರ್ಮಾಣಕ್ಕೆ ರಾಜ್ಯ ಸಂಸ್ಥೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿ ಸೂಕ್ತ ಅನುದಾನ ಪಡೆದು ಸ್ಕೌಟ್ಸ್ ಮತ್ತು ಗೈಡ್ಸ್ ನ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಸಂಸ್ಥೆಯ ವತಿಯಿಂದ ಸಹಕರಿಸಲಾಗುವುದು ಎಂದರು. ಶತಮಾನೋತ್ಸವ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ…

Read More

ಮಡಿಕೇರಿ ಮೇ 1  NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಮೇ 2 ರಂದು ಸ್ವಲಾತ್ ಮಜ್ಲಿಸ್ ನಡೆಯಲಿದೆ. ಮಗ್ರಿಬ್ ನಮಾಝಿನ ಬಳಿಕ ಮುದರ್ರಿಸ್ ಎಮ್ಮೆಮಾಡು ಹಂಝ ಸಖಾಫಿ ಮಲಪ್ಪುರಂ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಯ್ಯಿದ್ ಸಮೀಹ್ ಅನ್ವಾರಿ ಅಲ್ ಅಹ್ಸನಿ (ಮುದರ್ರಿಸ್ ಕೀಚೇರಿ) ದುಆಃ ನೆರವೇರಿಸಲಿದ್ದಾರೆ. ಎ.ಎಂ.ನೌಶಾದ್ ಬಾಖವಿ ಕೊಲ್ಲಂ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಯ್ಯಿದ್ ನುಅಮಾನ್ ಸಅದಿ ಅಲ್ ಹೈದರೂಸಿ ಎಮ್ಮೆಮಾಡು, ಸಯ್ಯಿದ್ ಝಕರಿಯಾ ಸಅದಿ ಅಲ್ ಹಾದಿ, ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಸದಸ್ಯ ಹಸೈನಾರ್ ಕನ್ನಡಿಯಂಡ, ಹಳೇ ತಾಲೂಕು ಖತೀಬ್ ಹಾಫಿಳ್ ಶಬೀರ್ ಹಿಮಮಿ, ರಿಯಾಝ್ ಫೈಝಿ ಎಮ್ಮೆಮಾಡು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮೇ 1  NEWS DESK : ಮೂಡಬಿದಿರೆಯಲ್ಲಿ ಮೇ 5 ರಂದು “ಕ್ರಿಯೇಟಿವ್ ಪುಸ್ತಕಮನೆ” ಶುಭಾರಂಭಗೊಳ್ಳಲಿದೆ. ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರು ಹಾಗೂ ಯುವರಾಜ್ ಜೈನ್, ಅಧ್ಯಕ್ಷರು, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳು, ಕಲ್ಲಬೆಟ್ಟು ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ಕಾರ್ಕಳದಲ್ಲಿ ‘ಪುಸ್ತಕ ಮನೆ’ಯು ಪುಸ್ತಕ ಪ್ರೇಮಿಗಳ, ಸಾಹಿತ್ಯಾಸಕ್ತರ ಮನಗೆದ್ದಿದ್ದು ಕರಾವಳಿಯಲ್ಲಿ ಸುಪ್ರಸಿದ್ಧ ಪುಸ್ತಕ ಮಳಿಗೆಯಾಗಿ ಗುರುತಿಸಿಕೊಂಡಿದೆ. ಪುಸ್ತಕ ಪ್ರಕಾಶನವು ಸೇರಿದಂತೆ ‘ಪುಸ್ತಕ ಸಂತೆ’, ಸರಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ಒದಗಿಸುವ ‘ಪುಸ್ತಕ ಪೋಷಕ ಯೋಜನೆ’, ‘ಮೊಬೈಲ್ ಬಿಡಿ ಪುಸ್ತಕ ಹಿಡಿ’ ಇಂತಹ ಹಲವಾರು ಯೋಜನೆಗಳನ್ನು ಕಾರ್ಯಗತ ಮಾಡಿ ಜನಮಾನಸದಲ್ಲಿ ಗುರುತಿಸಿಕೊಂಡಿದೆ. ಇದೀಗ ಪುಸ್ತಕ ಮನೆಯ ಎರಡನೇ ಶಾಖೆಯು ಮೂಡಬಿದಿರೆಯಲ್ಲಿ ಶುಭಾರಂಭಗೊಳ್ಳುತ್ತಿದ್ದು, ಪುಸ್ತಕಗಳು ಹಾಗೂ ಎಲ್ಲಾ ರೀತಿಯ ಉಡುಗೊರೆಗಳ ಮೇಲೆ ವಿಶೇಷ ರಿಯಾಯಿತಿ ಇದ್ದು, ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

Read More