ಸೋಮವಾರಪೇಟೆ ಏ.30 NEWS DESK : ಆಕಸ್ಮಿಕವಾಗಿ ಕಾಫಿತೋಟಕ್ಕೆ ಬೆಂಕಿ ತಗುಲು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕಲ್ಕಂದೂರು ಗ್ರಾಮದಲ್ಲಿ ನಡೆದಿದೆ. ಕಲ್ಕಂದೂರು ಗ್ರಾಮದ ಧನಂಜಯ ಎಂಬುವವರ ಕಾಫಿ ತೋಟಕ್ಕೆ ಬೆಂಕಿ ತಗುಲಿದ್ದು, ಸುಮಾರು ಎರಡು ಏಕರೆ ತೋಟ ಸುಟ್ಟು ಕರಕಲಾಗಿದೆ. ಕಾಫಿ, ಮೆಣಸು ಮತ್ತು ಬಾಳೆ ಗಿಡಗಳು ಸುಟ್ಟುಹೋಗುತ್ತಿರುವುದನ್ನು ಗಮನಿಸಿದ ಪಕ್ಕದ ತೋಟದ ಕಾರ್ಮಿಕರು ತಕ್ಷಣ ಅಗ್ನಿಶಾಮಕ ಠಾಣೆಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಯಶಸ್ವಿಯಾದರು. ತೋಟದ ಮಾಲೀಕರು ನಷ್ಟವಾಗಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.
ಲೇಖಕ: admin
ಸೋಮವಾರಪೇಟೆ ಏ.30 NEWS DESK : ಪಿಕ್‍ಅಪ್ ವಾಹನ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ, ಸ್ಕೂಟರ್ ನಜ್ಜುಗುಜ್ಜಾಗಿದ್ದು, ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಅಲೇಕಟ್ಟೆ ರಸ್ತೆಯಲ್ಲಿ ನಡೆದಿದೆ. ಕಡಬ ಸತ್ತಾರ್ ಎಂಬವರು ಚಾಲಿಸುತ್ತಿದ್ದ ಪಿಕ್‍ಅಪ್ ವಾಹನ ಬಲಭಾಗಕ್ಕೆ ತಿರುವು ತೆಗೆದುಕೊಳ್ಳುತ್ತಿದ್ದ ಸಂದರ್ಭ, ಹಿಂಬದಿಯಿಂದ ಆಗಮಿಸಿದ ಸ್ಕೂಟರ್ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನ ಚಾಲಕ ಹಾನಗಲ್ಲು ಬಾಣೆ ಗ್ರಾಮದ ದಿವಾಕರ ಎಂಬುವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಮಡಿಕೇರಿ ಏ.30 NEWS DESK : ಕನಸು ಕಾಣುವಾಗ ದೊಡ್ಡ ಕನಸನ್ನು ಕಾಣುವ ಮೂಲಕ ಅತ್ಯತ್ತಮ ಹುದ್ದೆಗಳನ್ನು ಅಲಂಕರಿಸುವ ಪ್ರಯತ್ನ ಮಾಡಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ಬಿ.ರಾಘವ ಅಭಿಪ್ರಾಯಪಟ್ಟರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ಪ್ಲೇಸ್ ಮೆಂಟ್ ಮತ್ತು ಸ್ಕಿಲ್ ಡೆವಲಪ್ಮೆಂಟ್ ಕೋಶಗಳ ಸಹ ಯೋಜನೆಯಲ್ಲಿ ವೆರ್ವ್ವೆ ಮ್ಯಾಂಕ್ವೆ ಏವಿಯೇಷನ್ ಅಕಾಡೆಮಿ (Vervve Manque Aviation Academy) ಯು ಆಯೋಜಿಸಿದ ಕೆರಿಯರ್ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಮಾಜದ ಪ್ರತಿಯೊಬ್ಬನ ಆರ್ಥಿಕತೆಯನ್ನು ಸದೃಢಗೊಳಿಸಲು ಉದ್ಯೋಗದ ಅಗತ್ಯವಿದೆ. ಉದ್ಯೋಗವಕಾಶದ ನೆಲೆಯನ್ನು ಪ್ರತಿಯೊಬ್ಬ ವ್ಯಕ್ತಿಯೂ ಶೋಧಿಸಬೇಕಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉದ್ಯೋಗವಕಾಶ, ಉತ್ತಮ ಜೀವನ ನಿರ್ವಹಣೆಯ ಬಗೆಗೆ ಕನಸು ಕಾಣಬೇಕಾಗಿದೆ. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವದ ಜೊತೆಯಲ್ಲಿ ಅತ್ಯುತ್ತಮ ಔದ್ಯೋಗಿಕ ಆಯಾಮದ ಕಡೆಗೆ ಚಲಿಸುವ ಅಗತ್ಯವಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವೆರ್ವ್ವೆ ಮ್ಯಾಂಕ್ವೆ ಏವಿಯೇಷನ್ ಅಕಾಡೆಮಿ (Vervve Manque Aviation Academy) ಯ ಎಕ್ಸಿಕ್ಯುಟಿವ್ ನಿರ್ದೇಶಕರಾದ…
ಮಡಿಕೇರಿ ಏ.30 NEWS DESK : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಭಾಗಮಂಡಲ, ಸಂಪಾಜೆ ಮತ್ತು ಮೇಕೇರಿ ಫೀಡರ್‌ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ (ಮಳೆಗಾಲದ ಪೂರ್ವ ನಿರ್ವಹಣೆ) ಕಾಮಗಾರಿ ನಡೆಸಬೇಕಾಗಿರುವುದರಿಂದ ದಿನಾಂಕ 02.05.2024 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಮೇಕೇರಿ, ತಾಳತ್ತಮನೆ, ಸಂಪಾಜೆ, ಚೆಂಬು, ಬೆಟ್ಟಗೇರಿ, ಚೇರಂಬಾಣೆ, ಭಾಗಮಂಡಲ, ಕಡಗದಾಳು, ಹಾಕತ್ತೂರು ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಏ.30 NEWS DESK : ಮೇ 1 ರಂದು ಕುಟ್ಟ ಠಾಣಾ ಸರಹದ್ದಿನ ಕುಟ್ಟ ನಾಥಂಗಾಲದಲ್ಲಿ ಶ್ರೀ ಕಾಳಿ ದೇವರ ಜಾತ್ರೆ ನಡೆಯಲಿದ್ದು, ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಏ.29 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 1 ರ ಸಂಜೆ 6 ಗಂಟೆಯವರೆಗೆ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ಏ.30 NEWS DESK : ಜಿಲ್ಲೆಯಲ್ಲಿರುವ ಎಲ್ಲಾ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ಮದುವೆ ಸಮಾರಂಭಗಳು, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಯಲ್ಲಿದ್ದು, ಬೇಸಿಗೆ ಕಾಲವಾಗಿರುವುದರಿಂದ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲಾರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಈ ಸಾಂಕ್ರಾಮಿಕ ರೋಗಗಳು ಉಲ್ಭಣಗೊಳ್ಳದಂತೆ ಅಗತ್ಯ ಕ್ರಮವಹಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಎಲ್ಲಾ ಇಲಾಖೆಗಳಿಗೆ ಸೂಚಿಸಿದ್ದಾರೆ. ಮದುವೆ ಸಮಾರಂಭಗಳು, ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್‍ಗಳಲ್ಲಿ ಸಾರ್ವಜನಿಕರಿಗೆ ಶುದ್ಧವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಮತ್ತು ಹೋಟೆಲ್‍ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು. ಸಂಬಂಧಪಟ್ಟ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಮೂಲಗಳ…
ಮಡಿಕೇರಿ ಏ.30 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಮೇ 1 ರಂದು ಬೆಳಿಗ್ಗೆ 11 ಗಂಟೆಗೆ ದುಆಃ ಮಜ್ಲಿಸ್ ನಡೆಯಲಿದೆ. ಕಾರ್ಯಕ್ರಮದ ನೇತೃತ್ವವನ್ನು ಸಯ್ಯಿದ್ ಫಝಲ್ ಕೊಯಮ್ಮ ತಂಙಳ್ (ಕೂರ ತಂಙಳ್) ವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಮತಪ್ರವಚನ ಕಾರ್ಯಕ್ರಮ ನಡೆಯಲಿದ್ದು, ನೌಫಲ್ ಸಖಾಫಿ ಕಳಸ ಮುಖ್ಯ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಯ್ಯಿದ್ ಸೈಫುದ್ದೀನ್ ಸಖಾಫಿ ಅಲ್ ಹೈದರೂಸಿ, ಹಾಫಿಳ್ ಫಝಲುರ್ರಹ್ಮಾನ್ ಸಖಾಫಿ, ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಸದಸ್ಯ ಅಬ್ದುಲ್ಲಾ ಪೊಟ್ಟಂಡ, ಕೊಪ್ಪತ್ತಾಣೆ ಮಸೀದಿ ಇಮಾಂ ಅಶ್ರಫ್ ಸಖಾಫಿ ಕನ್ನಡಿಯಂಡ, ಅಯ್ಯಂಗೇರಿ ಖತೀಬರಾದ ಯೂನುಸ್ ಮರ್ಝೂಖಿ ಸಖಾಫಿ, ಎಮ್ಮೆಮಾಡು ರೇಂಜ್ ಅಧ್ಯಕ್ಷ ಅಬ್ದುಲ್ ರಝಾಖ್ ಸಅದಿ ಪಾಲ್ಗೊಳ್ಳಲಿದ್ದಾರೆ.
ಕಡಂಗ ಏ.30 NEWS DESK : ಕಡಂಗ ಬದ್ರಿಯ ಮಸೀದಿಯಲ್ಲಿ ಮೇ 1 ರಂದು ಬದರ್ ಮೌಲಿದ್ ಮಜ್ಲಿಸ್ ವಾರ್ಷಿಕ ಹಾಗೂ ದರ್ಸ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮದ್ಯಾಹ್ನ 2 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಯ್ಯದ್ ಫಝಲ್ ಕೋಯಮ್ಮ ಕೂರತ್ ತಂಙಳ್, ಮುಖ ರಾದ ಇಬ್ರಾಹಿಂ ಫೈಝಿ ಕೇರಳ, ಅಶ್ರಫ್ ಅಹ್ಸನಿ ವಿರಾಜಪೇಟೆ, ಅಬ್ದುಲ್ ಸತ್ತಾರ್ ಅಹ್ಸನಿ ಅಲ್-ಕಾಮಿಲ್ ಸಖಾಫಿ ಮುದರ್ರಿಸ್ ಬದ್ರಿಯ ಕಡ0ಗ ಭಾಗವಹಿಸಲಿದ್ದಾರೆ ಎಂದು ಜಮಹತ್ ಕಾರ್ಯದರ್ಶಿ ರಾಶಿದ್ ತಿಳಿಸಿದ್ದಾರೆ. ವರದಿ : ನೌಫಲ್ ಕಡಂಗ
ಮಡಿಕೇರಿ ಏ.30 NEWS DESK : ರಾಮನಾಥಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಇಂದು ಶ್ರೀ ಸುಬ್ರಹ್ಮಣ್ಯಸ್ವಾಮಿ ಉತ್ಸವಮೂರ್ತಿ ಬೆಳ್ಳಿ ರಥೋತ್ಸವ, ಸರ್ವಸೇವಾ ಉತ್ಸವ, ವೈಮಾಳಿಗೆ ಉತ್ಸವ ವನ್ನು ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ಅಧ್ಯಕ್ಷರು ಎಂ.ಎನ್. ಕುಟುಂಬಸ್ಥರು ನೇರವೇರಿಸಿದರು. ಈ ಸಂದರ್ಭದಲ್ಲಿ ಶರಣ ದೊಡ್ಡಕಾಡನೂರು ಚಂದ್ರಶೇಖರ್, ಹೆಬ್ಬಾಲೆ ಶಿವಪ್ಪ, ಬಸವಪಟ್ಟಣ ಹೇಮಂತ್ ಕುಮಾರ್, ಆರ್.ಕೆ. ಚೇತನಕುಮಾರಸ್ವಾಮಿ, ಕಿರನಲ್ಲಿ ನಿಕೀತ್ ಮುಂತಾದವರು ಸೇವೆಯನ್ನು ಸಲ್ಲಿಸಿದರು.
ಸೋಮವಾರಪೇಟೆ ಏ.30 NEWS DESK : ಶಾಂತಳ್ಳಿ ಹೋಬಳಿಯ ನಗರಳ್ಳಿ ಗ್ರಾಮದ ಐತಿಹಾಸಿಕ ಕೂತಿನಾಡು ಸುಗ್ಗಿ ಉತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಸುಗ್ಗಿ ಉತ್ಸವದ ಕೊನೆ ದಿನವಾದ ಸೋಮವಾರ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ತೆರೆ ಬಿದ್ದಿತು. ಸುಗ್ಗಿ ಕುಣಿತ, ಸುಗ್ಗಿಹಾಡುವುದು, ಬಿಲ್ಲು ತೂಗುವುದು ಸೇರಿದಂತೆ ವಿವಿಧ ಜಾನಪದ ನೃತ್ಯಗಳು ನಡೆದವು. 18 ಗ್ರಾಮಗಳ ನವ ದಂಪತಿಗಳು ಮದುವೆ ಕಾಣಿಕೆಯನ್ನು ಸಲ್ಲಿಸಿದರು. ಹರಕೆ ತಿರಿಸುವುದು ಮತ್ತು ಹರಕೆ ಮಾಡಿಕೊಳ್ಳುವ ಕಾರ್ಯಗಳು ನಡೆದವು. ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ,…






