ನಾಪೋಕ್ಲು ಜ.10 NEWS DESK : ಹುಣ್ಣಿಮೆ ಅಂಗವಾಗಿ ನಾಪೋಕ್ಲು ಗ್ರಾಮ ಪಂಚಾಯಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಭಾಗಮಂಡಲ ವತಿಯಿಂದ ಸಮೀಪದ ಕೊಟ್ಟಮುಡಿಯಲ್ಲಿ ಕಾವೇರಿ ನದಿಗೆ 181ನೇ ಮಹಾ ಆರತಿ ನಡೆಯಿತು. ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು. ನಾಪೋಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸುಭಾಷ್ ನಗರದ ಒಕ್ಕೂಟದ ಅಧ್ಯಕ್ಷೆ ಮುತ್ತುರಾಣಿ ಪಾಲ್ಗೊಂಡಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಕುಲ್ಲೆಟಿರ ಅರುಣ್ ಬೇಬ, ಬಿ.ಎಮ್ ಪ್ರತಿಪ ಒಕ್ಕೂಟದ ಪ್ರತಿನಿಧಿಗಳು, ನವ ಜೀವನ ಸಮಿತಿ ಸದಸ್ಯರು, ಪಾಲ್ಗೊಂಡಿದ್ದರು. – ವರದಿ : ದುಗ್ಗಳ ಸದಾನಂದ.
ಲೇಖಕ: admin
ಮಡಿಕೇರಿ ಜ.10 NEWS DESK : ಶಬರಿಮಲೆಯ ಶ್ರೀ ಅಯ್ಯಪ್ಪನ ದರ್ಶನಕ್ಕೆ ತೆರಳುವ ವ್ರತಧಾರಿಗಳಿಗೆ ಕಟ್ಟು ತುಂಬುವ ವಿಶೇಷ ಪೂಜಾ ಕಾರ್ಯಕ್ರಮ ನಗರದ ಓಂಕಾರ ಸದನದಲ್ಲಿ ಶ್ರದ್ಧಾ ಭಕ್ತಿಗಳಿಂದ ನೆರವೇರಿತು. ಗುರುಸ್ವಾಮಿ ಕಣ್ಣನ್ ಅವರ ನೇತೃತ್ವದಲ್ಲಿ 55 ಮಂದಿ ಶ್ರೀ ಅಯ್ಯಪ್ಪನ ವ್ರತಧಾರಿಗಳಿಗೆ, ಕೊಬ್ಬರಿಗೆ ತುಪ್ಪ ತುಂಬುವ ಮೂಲಕ ಕಟ್ಟು ಕಟ್ಟುವ ಕಾರ್ಯ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು. ಶ್ರೀ ಅಯ್ಯಪ್ಪನ ಘೋಷಣೆಗಳೊಂದಿಗೆ ಕಟ್ಟು ಪೂಜೆ ನೆರವೇರಿತು. ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣಾ ಕಾರ್ಯ ನೆರವೇರಿತು.
ಮಡಿಕೇರಿ NEWS DESK ಜ.9 : ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿ ನಗರದ ಕಾರ್ಪೋರೇಟರ್ ಸುವರ್ಣ ಅವರು ನೀಡಿದ ದೂರನ್ನೆ ಆಧರಿಸಿ, ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ಬಂಧಿಸಿ, ವಿವಸ್ತ್ರ ಗೊಳಿಸಿ ಹಲ್ಲೆ ಮಾಡಲಾಗಿದೆ. ಪೊಲೀಸರು ಮಹಿಳೆಯ ಮೇಲೆ ದರ್ಪ ಪ್ರದರ್ಶಿಸಿರುವ ಘಟನೆ ರಾಜ್ಯದಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರೆನ್ನುವುದಕ್ಕೆ ಮತ್ತು ರಾಜ್ಯ ಸರಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು. ಮಹಿಳೆಯ ಮೇಲೆ ದರ್ಪ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಸುಳ್ಯ ತಾಲ್ಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ‘ಶ್ರದ್ಧಾಂಜಲಿ’ ಪೋಸ್ಟ್ ಹಾಕಿರುವವರ…
ಮಡಿಕೇರಿ NEWS DESK ಜ.9 : ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಗ್ರಾಮದ ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ 13ನೇ ವರ್ಷದ ನಾಲ್ನಾಡ್ ವ್ಯಾಪ್ತಿಯ ಅಂತರ ಗ್ರಾಮ ಹಾಕಿ ಪಂದ್ಯಾವಳಿ ಮತ್ತು ಹಗ್ಗಜಗ್ಗಾಟ ಸ್ಪರ್ಧೆಯನ್ನು ಗ್ರಾಮದ ನೇತಾಜಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ಮಾ.29ರಿಂದ 5 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಕೂಟದ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪಂದ್ಯಾವಳಿಯಲ್ಲಿ ನಾಲ್ನಾಡ್ ವ್ಯಾಪ್ತಿಯ ಬಲ್ಲಮಾವಟಿ, ನಾಪೋಕ್ಲು, ಕಕ್ಕಬೆ-ಕುಂಜಿಲ, ಎಮ್ಮೆಮಾಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ 14 ಗ್ರಾಮ ತಂಡಗಳು ಭಾಗವಹಿಸಲಿವೆ. ಪುರುಷರಿಗೆ ಹಾಕಿ ಪಂದ್ಯಾವಳಿ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸ್ಪರ್ಧೆ ಆಯೋಜಿಸಲಾಗಿದೆ ಎಂದರು. ಹಾಕಿ ಕ್ರೀಡೆಗೆ ಮತ್ತಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಏ.2ರಿಂದ ಬೇಸಿಗೆ ರಜೆ ಸಂದರ್ಭ ಮಕ್ಕಳಿಗೆ ನುರಿತ ತರಬೇತುದಾರರಿಂದ 20 ದಿನಗಳ ಕಾಲ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಕಳೆದ ಬಾರಿ 70 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ…
ಮಡಿಕೇರಿ NEWS DESK ಜ.9 : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಹಾಗೆಯೇ ಜಿಲ್ಲಾ ಕ್ರೀಡಾಂಗಣದಲ್ಲಿ ಮಿನಿ ಒಳಾಂಗಣ ಸೆಮಿ ಇಂಡೋರ್ ಸಿಂಥಟಿಕ್ ಬಾಸ್ಕೆಟ್ ಬಾಲ್ ಅಂಕಣ ನಿರ್ಮಾಣಕ್ಕೆ ಸರ್ಕಾರದಿಂದ 150 ಲಕ್ಷ ರೂ. ವೆಚ್ಚಕ್ಕೆ ಅನುಮೋದನೆ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕರು ವಿವರಿಸಿದರು. ಸರ್ಕಾರ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಿದ್ದು,…
ಮಡಿಕೇರಿ NEWS DESK ಜ.9 : ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೊಸೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಸಕೋಟೆಯಲ್ಲಿ ನಿವೇಶನ ರಹಿತರಿಗಾಗಿ ಮೀಸಲಿಟ್ಟಿರುವ ಜಾಗದಲ್ಲಿ, ಈಗಾಗಲೇ ಅಲ್ಲಿ ನೆಲೆ ನಿಂತಿರುವ 76 ಕುಟುಂಬಗಳಿಗೆ ಶೀಘ್ರ 50*40 ಅಡಿ ಅಳತೆಯ ನಿವೇಶನ ಮುಂಜೂರು ಮಾಡಬೇಕೆಂದು ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸಿ.ಶೈಲೇಂದ್ರ ಅವರು ನಿವೇಶನಕ್ಕಾಗಿ ಆಗ್ರಹಿಸಿ ಜ.12ರಿಂದ ಅಮ್ಮತ್ತಿ ಹೊಸೂರು ಪಂಚಾಯ್ತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ತಿಳಿಸಿದರು. ಹೊಸೂರು ಪಂಚಾಯ್ತಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕೂಲಿ ಕೆಲಸ ಮಾಡುತ್ತಿರುವ ಲೈನ್ ಮನೆಯ ಬಡ ಕುಟುಂಬಗಳಿಗೆ ನಿವೇಶನ ಮತ್ತು ವಸತಿ ಒದಗಿಸಲು ಹೊಸಕೋಟೆಯಲ್ಲಿ 3.30 ಏಕರೆ ಸರ್ಕಾರಿ ಜಾಗವನ್ನು ಗುರುತಿಸಲಾಗಿತ್ತು. ಅದನ್ನು ಸಮಗ್ರ ಗಿರಿಜನ ಯೋಜನೆ(ಐಟಿಡಿಪಿ) ಇಲಾಖೆಯ ಹೆಸರಿಗೆ ಈಗಾಗಲೇ ವರ್ಗಾಯಿಸಲಾಗಿದೆ. ಸೂಚಿತ ಜಾಗದಲ್ಲಿ ಕನಿಷ್ಟ ಮೂಲ ಸೌಲಭ್ಯಗಳು ಇಲ್ಲದೆ 76 ಕುಟುಂಬಗಳು ಪ್ಲಾಸ್ಟಿಕ್ ಹೊದಿಕೆಯ…
ಮಡಿಕೇರಿ NEWS DESK ಜ.9 : ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ “ಕೂರ್ಗ್ ಚಾಂಪಿಯನ್ ಶಿಪ್ ಕಪ್-2026” ಪಂದ್ಯಾವಳಿಯು ಜ.16, 17 ಹಾಗೂ 18 ರಂದು ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಮಲ್ಲೇಂಗಡ ರಚನ್ ಪೊನ್ನಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯನ್ನು ಜ.16 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಖ್ಯಾತಿ ಉದ್ಯಮಿ ಯಶಿಲಾ ಉತ್ತಯ್ಯ ಚಿಯಕ್ ಪೂವಂಡ ಉದ್ಘಾಟಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ಚಕ್ರವರ್ತಿ, ಕೊಡಗು ವೈದ್ಯಕೀಯ ಕಾಲೇಜ್ ನ ನಿವೃತ್ತ ಮುಖ್ಯ ಆಡಳಿತಾಧಿಕಾರಿ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಹಾಗೂ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್ ಪಾಲ್ಗೊಳ್ಳಲಿದ್ದಾರೆ. ಜ.18 ರಂದು ಸಂಜೆ 5 ಗಂಟೆಗೆ ಪಂದ್ಯಾವಳಿಯ ಸಮಾರೋಪ ಹಾಗೂ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು,…
ಮಡಿಕೇರಿ NEWS DESK ಜ.9 : ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಶತಮಾನೋತ್ಸವ ಸಮಾರಂಭ ಜ.11ರಂದು ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯಲಿದೆ. ಅಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶತಸಂಭ್ರಮ ಭವನ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹೆಚ್.ಎಸ್.ಚೇತನ್ ಅವರು ತಮ್ಮ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 9.30 ಗಂಟೆಗೆ ಗುರು ಸದನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶತಸಂಭ್ರಮ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಉದ್ದೇಶಿತ ಶತಸಂಭ್ರಮ ಕಟ್ಟಡದ ನಕಾಶೆಯನ್ನು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅನಾವರಣಗೊಳಿಸಲಿದ್ದಾರೆ ಎಂದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ…
ಮಡಿಕೇರಿ NEWS DESK ಜ.9 : ಮೈಸೂರಿನಿಂದ-ಮಂಗಳೂರು ಕಡೆಗೆ ಫ್ಲೈ ವುಡ್ ಶೀಟ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬೆಂಕಿ ಅವಘಡದಿಂದ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಕೊಲ್ಲಿ ಬಳಿ ನಡೆದಿದೆ. ಫ್ಲೈ ವುಡ್ ತುಂಬಿದ್ದ ಲಾರಿ ಮೈಸೂರಿನಿಂದ ಮಡಿಕೇರಿ-ಮಾಣಿ ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಬಳಿ ಬೆಳಗಿನ ಜಾವ ಆಗಮಿಸಿದೆ. ಈ ವೇಳೆ ಇಂಜಿನ್ ಭಾಗದಿಂದ ಹೊಗೆ ಕಂಡು ಬಂದಿದ್ದು, ಚಾಲಕ ಕೆಳಕ್ಕಿಳಿದು ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಲಾರಿಯನ್ನು ವ್ಯಾಪಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಬೆಂಕಿ ವ್ಯಾಪಿಸಿದ್ದ ಹಿನ್ನೆಲೆ ಜೆಸಿಬಿ ಯಂತ್ರ ಬಳಸಿ ಲಾರಿಯಿಂದ ಫ್ಲೈ ವುಡ್ ಹೊರ ತೆಗೆದು ಬೆಂಕಿ ನಂದಿಸಿದರು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ NEWS DESK ಜ.9 : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅನಾನುಕೂಲಗಳಾಗುತ್ತಿದೆ ಮತ್ತು ಸಿಬ್ಬಂದಿಗಳು ಸೌಜನ್ಯ ತೋರುತ್ತಿಲ್ಲ ಎನ್ನುವ ಗಂಭೀರ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಶಾಸಕರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಸಂಬಂಧಿಸಿದವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಹಾಗೂ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಬೇಕೆಂದು ವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಂತರ ರೋಗಿಗಳೊಂದಿಗೆ ಸಮಾಲೋಚನೆ ನಡೆಸಿ ಸೌಲಭ್ಯಗಳ ಕುರಿತು ಚರ್ಚಿಸಿದರು. ಆಸ್ಪತ್ರೆಯ ಲೋಪದೋಷಗಳನ್ನು ತಕ್ಷಣ ಸರಿಪಡಿಸಿ ಉತ್ತಮ ರೀತಿಯ ಜನಸ್ನೇಹಿ ವಾತಾವರಣವನ್ನು ಸೃಷ್ಟಿಸುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.






