ಮಡಿಕೇರಿ ಏ.26 NEWS DESK : ಸ್ನಾನಕ್ಕೆಂದು ನದಿಗಿಳಿದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಾಲ್ನೂರಿನಲ್ಲಿ ನಡೆದಿದೆ. ಸುಂಟಿಕೊಪ್ಪ ಮತ್ತಿಕಾಡು ಯುವಕ ನಿಶಾಂತ್ (24) ಮೃತ ದುರ್ದೈವಿ. ಸ್ನೇಹಿತರೊಂದಿಗೆ ಸ್ನಾನಕ್ಕೆಂದು ನದಿಗಿಳಿದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತದೇಹದ ಶೋಧ ಕಾರ್ಯ ಸಂಜೆಯವರೆಗೆ ಮುಂದುವರೆದಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲೇಖಕ: admin
ಮಡಿಕೇರಿ ಏ.26 NEWS DESK : ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೊಡಗು ಜಿಲ್ಲೆಯಲ್ಲಿ ಮತದಾನ ಪ್ರಕ್ರಿಯೆ ಶಾಂತಿ ಹಾಗೂ ಸುವ್ಯವಸ್ಥಿತವಾಗಿ ನಡೆದಿದ್ದು, ಸಂಜೆ 5ರ ವೇಳೆಗೆ ಅಂದಾಜು ಶೇ.74.29ರಷ್ಟು ಮತದಾನವಾಗಿದೆ. ಸುಮಾರು 349743 ಮಂದಿ ಮತದಾನ ಮಾಡಿದ್ದಾರೆ. ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಶಾಂತಿಯುತ ಹಾಗೂ ಸುಗಮವಾಗಿ ಆರಂಭವಾಗುತ್ತಿದ್ದಂತೆ, ಮಹಿಳೆಯರು, ಪುರುಷರು, ಹಿರಿಯ ನಾಗರಿಕರು, ವಿಶೇಷ ಚೇತನರು ಹಾಗೂ ಇದೇ ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ಉತ್ಸಾಹದಿಂದ ಬೆಳಗಿನ ತಂಪಾದ ವಾತಾವರಣದಲ್ಲಿ ಮತಗಟ್ಟೆಗೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದು ವಿಶೇಷ ಎನ್ನಿಸಿತು. ಮತಗಟ್ಟೆಯಲ್ಲಿ ಬಿಸಿಲಿನಿಂದ ರಕ್ಷಣೆಗಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿದ್ದು, ಬಿರು ಬಿಸಿಲಿನಿಂದ ರಕ್ಷಣೆಗಾಗಿ ಶಾಮಿಯಾನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ವ್ಹೀಲ್ ಚೇರ್ ಹಾಗೂ ರ್ಯಾಂಪ್ ಸೌಲಭ್ಯ ಕಲ್ಪಿಸಲಾಗಿತ್ತು. ಮತಗಟ್ಟೆ ಕೇಂದ್ರಗಳಲ್ಲಿ ಮೊಬೈಲ್…
ಮಡಿಕೇರಿ ಏ.26 NEWS DESK : ಮತದಾನ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ಪೊನ್ನಂಪೇಟೆ ತಾಲ್ಲೂಕಿನ ಕೊಂಗಣ ಗ್ರಾಮದ ಪದಾರ್ಥಿ ಮನೋಹರ್(58) ಎಂಬುವವರೇ ಮೃತಪಟ್ಟವರು. ಜಿಲ್ಲೆಯ ಖ್ಯಾತ ಚೆಂಡೆ ವಾದಕರಲ್ಲಿ ಒಬ್ಬರಾಗಿದ್ದ ಮನೋಹರ್, ಮಧ್ಯಾಹ್ನ 11.45ರ ವೇಳೆಗೆ ಬಿ.ಶೆಟ್ಟಿಗೇರಿ ಗ್ರಾಮದ ಮತಗಟ್ಟೆ ಸಂಖ್ಯೆ 179ರಲ್ಲಿ ಮತ ಚಲಾಯಿಸಿ ಹೊರ ಬಂದಿದರು. 11.55ರ ಸುಮಾರಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ವಾಹನದಲ್ಲಿ ಗೋಣಿಕೊಪ್ಪದ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.
ಸೋಮವಾರಪೇಟೆ ಏ.26 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಸೋಮವಾರಪೇಟೆ ತಾಲ್ಲೂಕಿನಲ್ಲಿ ಶಾಂತಿಯುತ ಮತದಾನ ನಡೆಯಿತು. ತಾಲ್ಲೂಕಿನ ಬಹುತೇಕ ಮತಗಟ್ಟೆಗಳಲ್ಲಿ ಮಧ್ಯಾಹ್ನದ ತನಕ ಮತದಾನ ನಿಧಾನಗತಿಯಲ್ಲಿ ಸಾಗಿದರೂ ಮಧ್ಯಾಹ್ನ 3ಗಂಟೆಯ ನಂತರ ಕೂಲಿ ಕಾರ್ಮಿಕರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು. ಬಳಗುಂದ ಮತಗಟ್ಟೆಯಲ್ಲಿ ಶಾಸಕ ಡಾ.ಮಂತರ್‍ಗೌಡ ಮತ್ತು ಪತ್ನಿ ದಿವ್ಯ ರೊಂದಿಗೆ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕನ್ನು ಗೌರವಿಸಿ, ಮತದಾನ ಮಾಡಬೇಕು. ಮತದಾನ ಪವಿತ್ರವಾದುದು. ದೇಶದ ಪ್ರಜಾಪ್ರಭುತ್ವದ ರಕ್ಷಣೆ ನಮ್ಮದಾಗಿದೆ. ಸರ್ವ ಜನಾಂಗದವರನ್ನು ಸಮಾನವಾಗಿ ಕಾಣುವ ಜನಪ್ರತಿನಿಧಿಯನ್ನು ಪ್ರಜ್ಞಾವಂತ ಮತದಾರರು ಆಯ್ಕೆ ಮಾಡಬೇಕು ಎಂದು ಹೇಳಿದರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಕುಂಬೂರು ಬೂತ್‍ನಲ್ಲಿ ಮತಚಲಾಯಿಸಿದರು. ಬಳಗುಂದ ಮತಗಟ್ಟೆಯಲ್ಲಿ ಕರ್ಕಳ್ಳಿ ಗ್ರಾಮದ ಪ್ರಥಮ ಬಿಸಿಎ ವಿದ್ಯಾರ್ಥಿ ಮಾಳವಿಕ ಮೊದಲ ಬಾರಿಗೆ ಮತದಾನ ಮಾಡಿದರು. ನಂತರ ಅವರು ಮತದಾನವನ್ನು ಸಂಭ್ರಮಿಸಿದ್ದೇನೆ. ನನಗೆ ಇಷ್ಟವಾದ ಸೂಕ್ತ ಅಭ್ಯರ್ಥಿಗೆ…
ಮಡಿಕೇರಿ ಏ.26 NEWS DESK : ಲೋಕಸಭಾ ಚುನಾವಣೆಯು ಸುಳ್ಳು ಮತ್ತು ಸತ್ಯಗಳ ನಡುವೆ ನಡೆಯುತ್ತಿರುವ ಸಮರವಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳು ಮತದಾರರಿಗೆ ವರದಾನವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಮತದಾರರ ಒಲವು ಇದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಲೋಕಸಭಾ ಚುನಾವಣೆ ಸಂದರ್ಭ ವಿರಾಜಪೇಟೆ ನಗರದ ಭೂತ್ ಕೇಂದ್ರಗಳಿಗೆ ಭೇಟಿ ನೀಡಿ ಮತದಾನದ ಅವಲೋಕನ ಮಾಡಿ ನಗರದ ಭೂತ್ ಕೇಂದ್ರ 148 ಸೇರಿದಂತೆ ಎಲ್ಲಾ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಜನತೆಯ ಮೇಲೆ ಪ್ರಭಾವ ಬೀರಿದೆ. ಇದರಿಂದ ಪಕ್ಷದ ಅಭ್ಯರ್ಥಿಯು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ನಗರ ಕಾಂಗ್ರೆಸ್ ಅದ್ಯಕ್ಷರಾದ ಮಾದಂಡ ಪಿ.ತಿಮ್ಮಯ್ಯ, ವಿರಾಜಪೇಟೆ ಪುರಸಭಾ ಸದಸ್ಯರಾದ ಡಿ.ಪಿ.ರಾಜೇಶ್,…
ಮಡಿಕೇರಿ ಏ.26 NEWS DESK : ಲೋಕಸಭಾ ಚುನಾವಣೆಗೆ ಮುಂಜಾನೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸಂಜೆ 5 ಗಂಟೆ ವೇಳೆಗೆ 70.58 ರಷ್ಟು ಮತದಾನ ನಡೆದಿದೆ. ಮಡಿಕೇರಿ ಕ್ಷೇತ್ರದಲ್ಲಿ 70.54 ರಷ್ಟು ಮತದಾನ ನಡೆದಿದ್ದು, ವಿರಾಜಪೇಟೆ ಕ್ಷೇತ್ರದಲ್ಲಿ 70.22 ರಷ್ಟು ಮತದಾನ ನಡೆದಿದೆ. ಮತದಾರರು ಮತಗಟ್ಟೆಯಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತದಾನ ಮಾಡಿದರು.
ಮಡಿಕೇರಿ ಏ.26 NEWS DESK : ಹಝ್ರತ್ ಸೂಫಿ ಶಹೀದ್(ರ) ಮತ್ತು ಸಯ್ಯಿದ್ ಹಸನ್ ಸಖಾಫ್ ಅಲ್ ಹಳ್ರಮಿ(ರ) ಹಾಗೂ ಇತರ ಮಹಾನುಭಾವರ ಹೆಸರಿನಲ್ಲಿ ಎಮ್ಮೆಮಾಡಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಸಮಾರಂಭವು ಮೇ 3ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಏ.27 ರಂದು ಸಯ್ಯಿದ್ ಶಿಹಾಬುದ್ದೀನ್ ಅಲ್ ಅಹ್ದಲ್ (ಮುತ್ತನೂರ್ ತಂಙಳ್) ದ್ಸಿಕ್ರ್ ಹಲ್ಖಾ ಮತ್ತು ಮತ ಪ್ರವಚನ ನೇತೃತ್ವ ವಹಿಸಲಿದ್ದು, ಮುಳ್ಳೂರ್ಕೆರೆ ಮುಹಮ್ಮದ್ ಅಲಿ ಸಖಾಫಿ ಆಧುನಿಗ ಯುಗತ್ತಿಲ್ ಇಸ್ಲಾಮಿಂಡೆ ಪ್ರಶಸ್ವಿ ಎಂಬ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ವೇದಿಕೆಯಲ್ಲಿ ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಸದಸ್ಯ ಹಂಸ ಸಅದಿ, ಮಾಜಿ ಅಧ್ಯಕ್ಷ ಮೂಸ ಹಾಜಿ ಚಕ್ಕೇರ, ಸಯ್ಯದ್ ಆಟಕೋಯ ತಂಙಳ್ ಬಾಣೆಪುರ, ಸಯ್ಯಿದ್ ಪೊಕೊಯ ತಂಙಳ್ ಬಾಣೆಪುರ, ಸಯ್ಯಿದ್ ಫಝಲ್ ಅಲ್ ಹೈದರೂಪಿ, ಎಮ್ಮೆಮಾಡು ಶಹೀದಿಯ ಅನಾಥಾಲಯದ ಕೋಶಾಧಿಕಾರಿ ಉಸ್ಮಾನ್ ನೆರೂಟ್, ಮೇಯಾಣೆ ಮಸೀದಿ ಇಮಾಂ ಹಾರಿಸ್…
ವಿರಾಜಪೇಟೆ ಏ.26 NEWS DESK : ವಿರಾಜಪೇಟೆ ನಗರದ ಚಿಕ್ಕಪೇಟೆ ನಿವಾಸಿ ವಿಶ್ವ ಹಾಕಿ ಕಪ್‌ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಹಾಲಿ ಒಮನ್ ದೇಶದ ಹಾಕಿ ತಂಡದ ಮುಖ್ಯ ತರಬೇತುದಾರರಾಗಿರುವ ಕೂತಂಡ ಕೆ.ಪೂಣಚ್ಚ ಬಿಜೆಪಿಗೆ ಸೇರ್ಪಡೆಯಾದರು. ವಿರಾಜಪೇಟೆ ನಗರದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣ ಚಾಮರಾಜ ಒಡೆಯರ್ ಅವರ ರೋಡ್ ಶೋ ನಡೆದ ಸಂದರ್ಭದಲ್ಲಿ ಪೂಣಚ್ಚ ಅವರು ಬೆಂಬಲಿಗರ ಮತ್ತು ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಹಾಗೂ ಪಕ್ಷ ಪ್ರಮುಖರ ಸಮ್ಮುಖದಲ್ಲಿ ಬಿಜೆಪಿ ಗೆ ಸೇರ್ಪಡೆಯಾದರು. ನಂತರ ಮಾತನಾಡಿದ ಪೂಣಚ್ಚ, ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಅಥವಾ ಮೋದಿ ಅವರು ದೇಶವನ್ನು ವಿಶ್ವದ ಭೂಪಟದಲ್ಲಿ ಭಾರತವನ್ನು ವಿಶ್ವ ಗುರು ಮಾಡುವತ್ತಾ ಶ್ರಮವಹಿಸಿದ್ದಾರೆ. ದೇಶದಲ್ಲಿ ನಡೆದಿರುವ ಅಮೂಲಾಗ್ರ ಬದಲಾವಣೆಯು ಹೊಸ ದಿಕ್ಕು ತೋರುವಂತೆ ಮಾಡಿದೆ. ಉತ್ತಮ ಸೇವೆ ನೀಡುವ ದೇಶ ಸೇವಕ ಮೋದಿ ಅವರು ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯಬೇಕು…
ಮಡಿಕೇರಿ ಏ.26 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಧ್ಯಾಹ್ನ 3 ಗಂಟೆವರೆಗೆ ಜರುಗಿದ ಮತದಾನದಲ್ಲಿ ಶೇ.53.55 ಪ್ರತಿಶತ ಮತದಾನವಾಗಿದೆ.
ಮಡಿಕೇರಿ ಏ.26 NEWS DESK : ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಈವರೆಗೆ ಶೇ. 50.98 ಮತದಾನ ನಡೆದಿದೆ.






